Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಭಾರತ – ಆಸ್ಟ್ರೇಲಿಯಾ ವಿಶ್ವಕಪ್ ಕ್ರಿಕೆಟ್ ಫೈನಲ್ ಇಂದು ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ- ವಿವೇಕಾನಂದ ಎಚ್ ಕೆ, ಬೆಂಗಳೂರು ಕ್ರಿಕೆಟ್ ಒಂದು ಜೂಜಾಟವಲ್ಲ,ಮೋಜಿನಾಟವೂ ಅಲ್ಲ,ಮನರಂಜನೆಯೂ ಅಲ್ಲ,ವ್ಯಾಪಾರವು ಅಲ್ಲ,ದೇಶದ ಸ್ವಾಭಿಮಾನದ ಪ್ರಶ್ನೆಯೂ ಅಲ್ಲ, ಅದೊಂದು ಕ್ರೀಡೆ, ಕೇವಲ ಕ್ರೀಡೆ ಮಾತ್ರ..2023 ರ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ನಡೆಸುವ ಒಂದು ದಿನದ 50/50 ಓವರುಗಳ ವಿಶ್ವಕಪ್ ಸ್ಪರ್ಧೆಯಲ್ಲಿ ಅಂತಿಮವಾಗಿ ಭಾರತ ಮತ್ತು ಆಸ್ಟ್ರೇಲಿಯಾ ಫೈನಲ್ ತಲುಪಿದೆ. ಭಾನುವಾರ ಪ್ರಶಸ್ತಿಗಾಗಿ ಸ್ಪರ್ಧೆ ನಡೆದು ವಿಶ್ವಕಪ್ ವಿಜೇತರು ನಿರ್ಧರವಾಗುತ್ತಾರೆ..ಬಹುತೇಕ ಸಮ ಬಲದ ತಂಡಗಳ ನಡುವಿನ ಹೋರಾಟ ಕುತೂಹಲಕಾರಿಯಾಗಿದೆ. ಆದರೂ ಭಾರತ ಗೆಲ್ಲಲಿ ಎಂದು ಆಶಿಸುತ್ತಾ..ಭಾರತದ ಒಟ್ಟು ಜನಸಂಖ್ಯೆಯಲ್ಲಿ ಕನಿಷ್ಠ ಶೇಕಡಾ 30/40% ಜನರಿಗೆ ಕ್ರಿಕೆಟ್ ಬಗ್ಗೆ ಮಾಹಿತಿ ಇದೆ. ಆ ಕಾರಣದಿಂದಲೇ ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿ ವಿಶ್ವದ ಶ್ರೀಮಂತ ಕ್ರೀಡಾ ಸಂಸ್ಥೆ ಎಂದು ಹೆಸರು ಗಳಿಸಿದೆ..ಕ್ರಿಕೆಟ್ ನೆರಳಲ್ಲಿ ಭಾರತದ ಇತರ ಕ್ರೀಡೆಗಳು ಸೊರಗಿವೆ ಎಂಬ ಆರೋಪವೂ ಇದೆ. ಅಷ್ಟು ವ್ಯಾಪಕವಾಗಿ ಕ್ರಿಕೆಟ್ ಆವರಿಸಿದೆ.ದುರಾದೃಷ್ಟವಶಾತ್ ಭಾರತದಲ್ಲಿ…
ಕೂಡಲಸಂಗಮ ಲಿಂಗಾಯಿತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಆರೋಪ ವಿಜಯಪುರ: ಬಿಜೆಪಿ ರಾಜ್ಯಾಧ್ಯ್ಕಕ್ಷ ಮತ್ತು ಪ್ರತಿಪಕ್ಷದ ನಾಯಕನ ಆಯ್ಕೆಯಲ್ಲಿ ಉತ್ತರ ಕರ್ನಾಟಕ, ಲಿಂಗಾಯಿತ ಹಾಗೂ ಪಂಚಮಸಾಲಿ ಲಿಂಗಾಯಿತ ಸಮಾಜಕ್ಕೆ ಅನ್ಯಾಯ ಮಾಡಲಾಗಿದೆ ಎಂದು ಕೂಡಲ ಸಂಗಮ ಲಿಂಗಾಯಿತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಆರೋಪಿಸಿದ್ದಾರೆ.ಶನಿವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯಧ್ಯಕ್ಷರಾಗಿ ಬಿ. ವೈ. ವಿಜಯೇಂದ್ರ ಮತ್ತು ಪ್ರತಿಪಕ್ಷದ ನಾಯಕನಾಗಿ ಆರ್. ಅಶೋಕ ನೇಮಕಕ್ಕೆ ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿದರು.ಬಿಜೆಪಿ ಪಕ್ಷದ ವರಿಷ್ಠರು ಏನು ತೀರ್ಮಾನ ಮಾಡಿದ್ದಾರೆ ಅದರ ಬಗ್ಗೆ ಮಾತನಾಡುವುದಿಲ್ಲ. ಆದರೆ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಯತ್ನಾಳ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅದೇ ರೀತಿ ಲಿಂಗಾಯತ ನಾಯಕತ್ವಕ್ಕೂ ಅನ್ಯಾಯವಾಗಿದೆ. ಪಂಚಮಸಾಲಿ ಸಮುದಾಯಕ್ಕೂ ಅನ್ಯಾಯವಾಗಿದೆ. ಉತ್ತರ ಕರ್ನಾಟಕದಲ್ಲಿ ಪಕ್ಷಕ್ಕೆ ದುಡಿದ ಅನೇಕ ನಾಯಕರಿದ್ದರು. ಅವರೆಲ್ಲರನ್ನು ಕಡೆಗಣಿಸಿ ಉತ್ತರ ಕರ್ನಾಟಕದ ನಾಯಕತ್ವಕ್ಕೆ ಅನ್ಯಾಯ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಕೆಲವರು ಕುತಂತ್ರವನ್ನು ಮಾಡುತ್ತಿದ್ದಾರೆ ಎಂಬ ಅನುಮಾನ…
Udayarashmi kannada daily newspaper
ಮೋರಟಗಿ: ತಾಲೂಕಿನ ಮೋರಟಗಿ ಗ್ರಾಮದ ಆರಾದ್ಯ ದೇವರುಗಳಾದ ಶ್ರೀ ಸಿದ್ದರಾಮೇಶ್ವರ ಹಾಗೂ ಶ್ರೀ ಗುರು ರೇವಣಾಸಿದ್ದೇಶ್ವರ ಜಾತ್ರಾ ನಿಮಿತ್ಯವಾಗಿ ನ.೧೮ರಂದು ರಾತ್ರಿ ೮ಘಂಟೆಗೆ ಉಭಯ ಮಹಾತ್ಮರ ಮಹಾಪುರಾಣ ಕಾರ್ಯಕ್ರಮ ಪ್ರಾರಂಭವಾಗಲಿದೆ.ಜೇರಟಗಿ ವಿರಕ್ತಮಠದ ಶ್ರೀ ಮಹಾಂತ ಸ್ವಾಮಿಗಳು ಸಾನಿದ್ಯ ವಹಿಸಲಿದ್ದಾರೆ. ಹೂವಿನಹಳ್ಳಿಯ ಗುರುಲಿಂಗಯ್ಯ ಸ್ವಾಮಿಗಳು ಪುರಾಣ ಪ್ರವಚನ ನೀಡಲಿದ್ದಾರೆ. ಸಿದ್ರಾಮಯ್ಯ ಮಠಪತಿ ಬಸವಣ್ಣನ ಸ್ಥಾನ ವಹಿಸಲಿದ್ದು, ಗಾಯಕರಾಗಿ ಗುರುನಾಥ ವಿಶ್ವಕರ್ಮ, ತಬಲಾ ವಾದಕರಾಗಿ ರವಿ ವಿಭೂತಿ ಸೇರಿದಂತೆ ಅನೇಕ ಕಲಾವಿದರು ಭಾಗವಹಿಸಲಿದ್ದಾರೆ.ಕಾರಣ ಮೋರಟಗಿ ಸೇರಿದಂತೆ ಗ್ರಾಮದ ಸುತ್ತಮುತ್ತಲಿನ ಶ್ರೀ ಸಿದ್ದರಾಮೇಶ್ವರ ಹಾಗೂ ಗುರು ರೇವಣಾಸಿದ್ದೇಶ್ವರ ಸದ್ಭಕ್ತಾದಿಗಳು ಪುರಾಣ ಪ್ರವಚನವನ್ನು ಕೇಳಿ ಪಾವನರಾಗಬೇಕು ಎಂದು ಶ್ರೀ ಸಿದ್ದರಾಮೇಶ್ವ ಸಮೀತಿಯ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಪಕ್ಷದ ಹೀನಾಯ ಸೋಲು ಕಂಡಿರುವುದರಿಂದ ಬೂತ್ ಮಟ್ಟದಿಂದ ಪಕ್ಷವನ್ನು ಕಟ್ಟಬೇಕಿದೆ. ಅಸಮಾಧಾನಗೊಂಡಿರುವ ಹಿರಿಯ ಶಾಸಕರ ಮನವೊಲಿಸಬೇಕಿದೆ. ಲೋಕಸಭೆ ಚುನಾವಣೆ ಬಿಜೆಪಿಗೆ ದೊಡ್ಡ ಸವಾಲಾಗಿದ್ದು ಕಳೆದ ಬಾರಿ 28 ಕ್ಷೇತ್ರಗಳ ಪೈಕಿ 25 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ಆದರೆ ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವುದರಿಂದ ಅಷ್ಟೇ ಸ್ಥಾನಗಳನ್ನು ಉಳಿಸಿಕೊಳ್ಳುವುದು ದೊಡ್ಡ ಸವಾಲಾಗಿದೆ.ವಿರೋಧ ಪಕ್ಷದ ನಾಯಕರ ಆಯ್ಕೆಗೆ ಸಭೆ ನಡೆಯುತ್ತಿರುವಾಗ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟೀ ಕುಡಿಯುವುದಾಗಿ ಹೇಳಿ ಸಭೆಯಿಂದ ಹೊರನಡೆದಿದ್ದರು. ಇನ್ನು ವಿಜಯೇಂದ್ರ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿದ್ದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಶಾಸಕರು, ಯಡಿಯೂರಪ್ಪ ಮತ್ತು ಅವರ ಕುಟುಂಬವನ್ನು ಉಲ್ಲೇಖಿಸಿ ಬಿಜೆಪಿ ಒಂದೇ ಕುಟುಂಬದ ಪಕ್ಷವಾಗಬಾರದು ಎಂದು ಹೇಳಿದರು.ಕಳೆದ ವಾರ ಬಿಜೆಪಿ ಹೈಕಮಾಂಡ್ ಕರ್ನಾಟಕದ ರಾಜ್ಯಾಧ್ಯಕ್ಷರನ್ನಾಗಿ ಶಿಕಾರಿಪುರದ ಶಾಸಕ ಬಿ ವೈ ವಿಜಯೇಂದ್ರ ಅವರನ್ನು ನೇಮಕ ಮಾಡಿತು. ವಿಜಯೇಂದ್ರ ಬಿಜೆಪಿಯಲ್ಲಿ ಪ್ರಮುಖ ನಾಯಕನಾಗಿರುವ ಬಿ ಎಸ್ ಯಡಿಯೂರಪ್ಪ ಅವರ ಮಗ,…
ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಘೋಷಣೆ | ಬೆಂಬಲಿಗರಿಂದ ಸಂಭ್ರಮಾಚರಣೆ | ಹಲ ನಾಯಕರ ಅಸಮಾಧಾನ ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಆರ್ ಅಶೋಕ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಬೆಂಗಳೂರಿನಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು.ಕರ್ನಾಟಕ ವಿಧಾನಸಭೆ ನಡೆದ 6 ತಿಂಗಳ ಬಳಿಕ ಬಿಜೆಪಿ ಕೊನೆಗೂ ವಿಪಕ್ಷ ನಾಯಕನ ಹೆಸರು ಘೋಷಣೆ ಮಾಡಿದೆ. ಬಿವೈ ವಿಜಯೇಂದ್ರ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಆಯ್ಕೆಯಾದ ಎರಡನೇ ದಿನದಲ್ಲೇ ಬಿಜೆಪಿ ವಿಪಕ್ಷ ನಾಯಕನ ಹೆಸರನ್ನೂ ಘೋಷಣೆ ಮಾಡಿದೆ.ಆರ್. ಅಶೋಕ್ ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದ ಶಾಸಕರಾಗಿದ್ದಾರೆ. ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕನಾಗಿರುವ ಅಶೋಕ ಅವರು ರಾಜ್ಯದ ಉಪ ಮುಖ್ಯಮಂತ್ರಿಯಾಗಿಯೂ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಕಂದಾಯ ಸಚಿವರಾಗಿ ಕೆಲಸ ಮಾಡಿದ್ದಾರೆ.ಲಿಂಗಾಯತ ಸಮುದಾಯದ ನಾಯಕ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರನ್ನು ರಾಜ್ಯ ಬಿಜೆಪಿ ಅಧ್ಯಕ್ಷರನ್ನಾಗಿ…
ವಿಜಯಪುರ: ಇಂಡಿ ತಾಲೂಕಿನ ತಾಂಬಾ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಿನಾಂಕ : ೨೫-೧೦-೨೦೨೩ ರಂದು ಡಾ.ನವೀನಕುಮಾರ ಇವರನ್ನು ವೈದ್ಯಾಧಿಕಾರಿಗಳ ಹುದ್ದೆಗೆ ನೇಮಕ ಮಾಡಲಾಗಿದ್ದು, ತಾಂಬಾ ಗ್ರಾಮದ ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಗ್ರಾಮದ ಗ್ರಾಮಸ್ಥರು ತಾಂಬಾ ಸರ್ಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ಸೇವೆಯನ್ನು ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಬಸವರಾಜ ಹುಬ್ಬಳ್ಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ ಪಿಎಂ ವಿಶ್ವಕರ್ಮ ಯೋಜನೆಯಡಿ ಸಾಲ ಹಾಗೂ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.ಪಿಎಂ ವಿಶ್ವಕರ್ಮ ಯೋಜನೆಯಡಿ ಕುಶಲಕರ್ಮಿಗಳಿಗೆ ೩ಲಕ್ಷ ರೂ.ದವರೆಗೆ ಆಧಾರರಹಿತ ಸಾಲ, ೧೫ ಸಾವಿರ ರೂ.ಗಳ ಟೂಲ್ ಕಿಟ್, ಕೌಶಲ್ಯಾಭಿವೃದ್ದಿ ತರಬೇತಿ ಮತ್ತು ದೈನಂದಿನ ೫೦೦ ರೂ. ಸಂಭಾವನೆ ಹಾಗೂ ಸಂಪೂರ್ಣ ತಯಾರಾದ ಕ್ವಾಲಿಟಿ ಸರ್ಟಿಫಿಕೇಶನ್, ಬ್ರಾಂಡಿಂಗ್, ಮತ್ತು ಜಾಹೀರಾತು ಮಾದರಿಯಲ್ಲಿ ಮಾರ್ಕೆಟಿಂಗ್ ನೆರವು ನೀಡಲಾಗುವುದು.ಕೈ ಮತ್ತು ಉಪಕರಣಗಳೊಂದಿಗೆ ಕೆಲಸ ಮಾಡುವ ಸಾಂಪ್ರದಾಯಿಕ ಬಡಿಗತನ ವೃತ್ತ, ದೋಣಿ ತಯಾರಿಸುವುದು, ಶಸ್ತ್ರ ತಯಾರಕರು, ಕಮ್ಮಾರ ವೃತ್ತ, ಸುತ್ತಿಗೆ ಮತ್ತು ಉಪಕರಣ ತಯಾರಿಕೆ, ಬೀಗ ತಯಾರಕರು, ಪತ್ತಾರಿಕೆ ವೃತ್ತ, ಕುಂಬಾರ ವೃತ್ತ, ಮೂರ್ತಿ ಮತ್ತು ಕಲ್ಲಿನ ಕೆತ್ತನೆ, ಚಮ್ಮಾರ ವೃತ್ತಿ, ಕಲ್ಲು ಕುಟಿಕ, ಬುಟ್ಟಿ-ಚಾಪೆ-ಪೊರಕೆ ತಯಾರಕರು, ಗೊಂಬೆ ಮತ್ತು ಆಟಿಕೆ, ಕ್ಷೌರಿಕ ವೃತ್ತಿ, ಹೂ ಮಾಲೆ ತಯಾರಿಕೆ, ಅಗಸರು, ದೋಭಿ, ಶಿಂಪಿಗ, ಟೇಲರ್, ಮೀನು ಬಲೆ ತಯಾರಿಕೆಯಲ್ಲಿ ತೊಡಗಿಕೊಂಡಿರುವವರು ಈ ಯೋಜನೆಯಡಿ ಅರ್ಜಿ ಸಲ್ಲಿಸಬಹುದಾಗಿದ್ದು, ಈ ಕುರಿತಂತೆ…
ವಿಜಯಪುರ ನ.೧೭ (ಕರ್ನಾಟಕ ವಾರ್ತೆ): ಕ್ರೀಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ಸಂಘ-ಸಂಸ್ಥೆಗಳಿಗೆ ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಪ್ರೋತ್ಸಾಹ ಧನ ನೀಡಲು sevasindhu.karnataka.gov.in ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಸಂಘ-ಸಂಸ್ಥೆಗಳು ಸೇವಾ ಸಿಂಧು ಪೋರ್ಟ್ಲ್ ಮೂಲಕ ದಿನಾಂಕ : ೧೪-೧೧-೨೦೨೩ ರಿಂದ ೧೩-೧೨-೨೦೨೩ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಮಾರ್ಗಸೂಚಿಯನ್ನು ಸೇವಾ ಸಿಂಧು ಪೋರ್ಟಲ್ ಹಾಗೂ ಇಲಾಖೆಯ ವೆಬ್‌ಸೈಟ್ www.kannadasiri.karnataka.gov.in ನಲ್ಲಿ ಅಳವಡಿಸಲಾಗಿದೆ. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ದೂ:೦೮೦-೨೨೨೭೯೯೫೪, ಮೊ: ೯೯೮೬೮೩೭೦೩೭, ೮೭೯೨೬೬೨೮೧೪, ೮೭೯೨೬೬೨೮೧೬, ಜಿಲ್ಲಾ ಯೋಜನಾ ವ್ಯವಸ್ಥಾಪಕರು ಸೇವಾಸಿಂಧು ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ಜಿಲ್ಲೆಯಾದ್ಯಂತ ವಿಕಲಚೇತನರ ತಾಲೂಕಾ ಮಟ್ಟದ ಕ್ರೀಡಾಕೂಟವನ್ನು ಇದೇ ನವೆಂಬರ್ ೨೧ ರಂದು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಹಮ್ಮಿಕೊಳ್ಳಲಾಗಿದೆ.ವಿಜಯಪುರ ತಾಲೂಕಿನ ಕ್ರೀಡಾಕೂಟವನ್ನು ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ, ಇಂಡಿ ತಾಲೂಕಿನ ಕ್ರೀಡಾಕೂಟವನ್ನು ಇಂಡಿ ತಾಲೂಕಾ ಕ್ರೀಡಾಂಗಣದಲ್ಲಿ, ಸಿಂದಗಿ ತಾಲೂಕಾ ಕ್ರೀಡಾಕೂಟ ಸಿಂದಗಿ ತಾಲೂಕಾ ಕ್ರಿಡಾಂಗಣದಲ್ಲಿ, ಬಸವನಬಾಗೇವಾಡಿ ತಾಲೂಕಿನ ಕ್ರೀಡಾಕೂಟ ಬಾಗೇವಾಡಿಯ ಬಸವೇಶ್ವರ ಕಾಲೇಜ್ ಮೈದಾನದಲ್ಲಿ ಹಾಗೂ ಮುದ್ದೇಬಿಹಾಳ ತಾಲೂಕಿನ ಕ್ರೀಡಾಕೂಟವನ್ನು ಮುದ್ದೇಬಿಹಾಳದ ವ್ಹಿ.ಬಿ.ಸಿ. ಮೈದಾನದಲ್ಲಿ ಆಯೋಜಿಸಲಾಗಿದೆ.ವಿಜಯಪುರ ತಾಲೂಕಿಗೆ ಸಂಬಂಧಿಸಿದಂತೆ ರಾಜು ಚವ್ಹಾಣ ಮೊ:೭೦೧೯೧೬೭೨೪೩, ಇಂಡಿ ತಾಲೂಕಿಗೆ ಎ.ಎಸ್.ಲಾಳಶೇರಿ ಮೊ: ೯೧೪೮೮೬೯೧೦೦, ಇಂಡಿ ತಾಲೂಕಿಗೆ ಆರ್.ಆರ್.ರಾಠೋಡ ಮೊ: ೮೩೧೦೭೪೩೧೭೫, ಬಸವನಬಾಗೇವಾಡಿ ತಾಲೂಕಿಗೆ ಎಸ್.ಎಸ್.ಅವಟಿ ಮೊ: ೯೬೬೩೨೯೭೬೫೪ ಹಾಗೂ ಮುದ್ದೇಬಿಹಾಳ ತಾಲೂಕಿಗೆ ಸಂಬಂಧಿಸಿದಂತೆ ಬಿ.ವಾಯ್.ಕವಡಿ ಮೊ: ೭೦೨೬೩೬೯೮೦೫ ಅಧಿಕಾರಿಗಳನ್ನು ನೇಮಿಸಲಾಗಿದೆ.ಕ್ರೀಡಾಕೂಟದಲ್ಲಿ ೧೮ ವರ್ಷ ವಯೋಮಿತಿ ಒಳಗಿನ/ಮೇಲ್ಪಟ್ಟ ಪುರುಷ, ಮಹಿಳೆಯರಿಗೆ ರನ್ನಿಂಗ್ (ಸಿಂಗಲ್ ಲೆಗ್, ಬಗಲು ಬಡಿಗೆ, ವ್ಹಿಲ್ ಚೇರ್), ಗುಂಡು ಎಸೆತ, ಚಕ್ರ ಎಸೆತ, ಜಾವಲಿನ ಥ್ರೋ, ಕೇರಂ ಚೆಸ್ ಸ್ಪರ್ಧೆಗಳನ್ನು ಆಯೋಜಿಸಲಾಗುವುದು ಆಯಾ ತಾಲೂಕಿನ…
