Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಮುದ್ದೇಬಿಹಾಳ: ಭಾರತದ ಪ್ರತಿಯೊಬ್ಬ ಪ್ರಜೆ ಕಾನೂನುಗಳ ಬಗ್ಗೆ ತಿಳಿದುಕೊಳ್ಳಬೇಕು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕಾನೂನಿನ ಅರಿವು ಮೂಡಿಸಿ ದುರ್ಬಲ ವ್ಯಕ್ತಿಗಳಿಗೆ ಪ್ರಾಧಿಕಾರದಿಂದ ದೊರೆಯುವ ಎಲ್ಲ ಸೌಲಭ್ಯಗಳನ್ನು ಒದಗಿಸುವದು ಕಾನೂನು ಸೇವೆಗಳ ಪ್ರಾಧಿಕಾರದ ಮುಖ್ಯ ಉದ್ದೇಶವಾಗಿದೆ ಎಂದು ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶೆ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷೆ ಲಕ್ಷ್ಮೀ ನಿಂಗಪ್ಪ ಗರಗ ಹೇಳಿದರು.ಪಟ್ಟಣದ ನ್ಯಾಯಾಲಯದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ ಹಾಗೂ ಇತರೆ ಎಲ್ಲ ಸರಕಾರಿ ಇಲಾಖೆಗಳ ಸಂಯಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಕುರಿತು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಸಮಾಜದ ಯಾವುದೇ ವ್ಯಕ್ತಿಗೆ ಕಾನೂನಿನ ಅವಶ್ಯಕತೆ ಇದ್ದಲ್ಲಿ ಹತ್ತಿರದ ಕಾನೂನು ಸೇವಾ ಸಮಿತಿಗೆ ಭೇಟಿ ನೀಡಿ ಉಚಿತವಾಗಿ ಕಾನೂನಿನ ನೆರವು ಪಡೆದುಕೊಳ್ಳಲು ಅವಕಾಶಗಳನ್ನು ಕಲ್ಪಿಸಲಾಗಿದೆ. ನ್ಯಾಯಾಲಯದ ಪ್ರಕರಣಗಳಲ್ಲಿಯೂ ಉಚಿತ ನೆರವು ಪಡೆದುಕೊಳ್ಳಬಹುದಾಗಿದೆ ಎಂದರು.ಕಾನೂನು ಸೇವಗಳ ಕುರಿತು ಹಿರಿಯ ನ್ಯಾಯವಾದಿ ಬಿ.ಆರ್.ನಾಡಗೌಡರ ವಿಶೇಶ ಉಪನ್ಯಾಸ ನೀಡಿದರು. ನ್ಯಾಯವಾದಿಗಳ ಸಂಘದ ಅಧ್ಯಕ್ಷ…
ಮುದ್ದೇಬಿಹಾಳ: ಬಸವನ ಬಾಗೇವಾಡಿ ಅಥವಾ ಮುದ್ದೇಬಿಹಾಳ ತಾಲೂಕುಗಳ ಪೈಕಿ ಯಾವುದಾದರೂ ಒಂದನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಬೇಕು ಎಂದು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಗುರು ತಾರನಾಳ ಆಗ್ರಹಿಸಿದ್ದಾರೆ.ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಎರಡೂ ತಾಲೂಕುಗಳು ಶೈಕ್ಷಣಿಕ ಮತ್ತು ಭೌಗೋಳಿಕ ವಾಗಿ ಸಾಕಷ್ಟು ವಿಶಾಲವಾಗಿವೆ. ಮುದ್ದೇಬಿಹಾಳ ತಾಲೂಕು ಐತಿಹಾಸಿಕ ಕುರುಹುಗಳನ್ನು ಹೊಂದಿದೆ. ಬಸವನ ಬಾಗೇವಾಡಿ ಕೂಡಾ ಯಾವುದರಲ್ಲಿಯೂ ಕಮ್ಮಿ ಇಲ್ಲ ಅನ್ನಿಸಿಕೊಂಡಿದೆ. ಈ ಎರಡೂ ತಾಲೂಕುಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗುರ್ತಿಸಿಕೊಂಡಿವೆ. ಎರಡೂ ಕೇಂದ್ರಗಳಲ್ಲಿ ಜಿಲ್ಲೆಗೆ ಅಗತ್ಯವಿರುವ ಎಲ್ಲ ಮೂಲ ಸೌಲಭ್ಯಗಳಿವೆ.ಮುಖ್ಯವಾಗಿ ಈ ಭಾಗದ ಜನ ವಿವಿಧ ಕಾರ್ಯಗಳಿಗೆ ಜಿಲ್ಲೆಗೆ ತೆರಳಬೇಕಾದರೆ ಸಧ್ಯ ೮೦ ಕಿ.ಮೀ ದೂರ ಕ್ರಮಿಸಬೇಕು. ದಿನಂಪ್ರತಿ ಈ ಭಾಗದ ಜನ ಜಿಲ್ಲಾ ಕೇಂದ್ರಕ್ಕೆ ಹೋಗಬೇಕೆಂದರೆ ಅಂದಾಜು ೩ ತಾಸು ಪ್ರಯಾಣ ಬೆಳೆಸಬೇಕು. ಹೋಗಲು ೩ ತಾಸು ಬರಲು ೩ ಹೀಗೆ ಇಡೀ ದಿನ ಬರೀ ಪ್ರಯಾಣಕ್ಕೆ ಕಾಲಹರಣ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಸುತ್ತಮುತ್ತ ದೊಡ್ಡ ಪಟ್ಟಣಗಳನ್ನು, ಕೈಗಾರಿಕಾ…
ವಿಜಯಪುರ: ಭೂತನಾಳ ಮೀನುಗಾರಿಕೆ ಸಂಶೋಧನೆ ಮತ್ತು ಮಾಹಿತಿ ಕೇಂದ್ರದ ವತಿಯಿಂದ ನವೆಂಬರ್ ೧೦ರಂದು ಬೆಳಿಗ್ಗೆ ೧೦ ಗಂಟೆಗೆ ಮೀನುಮರಿಗಳ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ತಲಾ ಒಂದು ರೂಪಾಯಿಗೆ ಒಂದರಂತೆ ಸಾಮಾನ್ಯ ಗೆಂಡೆ (ಗೌರಿ) ಮೀನು ಮರಿಗಳನ್ನು ಮಾರಾಟ ಮಾಡಲಾಗುವುದು. ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೇಂದ್ರದ ಸಹ ಪ್ರಾಧ್ಯಾಪಕ ಮತ್ತು ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ಮರಾಠಾ ಲೈಟ್ ಇನ್‌ಫೆಂಟ್ರಿ ಸೆಂಟರ್ ಬೆಳಗಾವಿಯ ಶಿವಾಜಿ ಸ್ಟೇಡಿಯಂನಲ್ಲಿ ಮಾಜಿ ಸೈನಿಕರು, ವೀರ ನಾರಿಯರು ಹಾಗೂ ಮಾಜಿ ಸೈನಿಕರ ವಿಧವಾ ಪತ್ನಿಯರಿಗಾಗಿ ನವೆಂಬರ್ ೨೬ ರಂದು ಬೆಳಿಗ್ಗೆ ೮ -೩೦ರಿಂದ ಸಂಜೆ ೪ ಗಂಟೆವರೆಗೆ ಮಾಜಿ ಸೈನಿಕರ ರ‍್ಯಾಲಿ ಆಯೋಜಿಸಲಾಗಿದೆ.ಈ ರ‍್ಯಾಲಿಯಲ್ಲಿ ವಿವಿಧ ಅಭಿಲೇಖ ಕಾರ್ಯಾಲಯಗಳಿಮದ ಸಿಬ್ಬಂದಿಗಳು, ಮಾಜಿ ಸೈನಿಕರು ಹಾಗೂ ಅವರ ಅವಲಂಬಿತರ ಪಿಂಚಣಿ, ಕುಟುಂಬ ಪಿಂಚಣಿಗೆ ಸಂಬಂಧಿಸಿದ ಅಭಿಲೇಖ ಕಾರ್ಯಾಲಯಕ್ಕೆ ಹಾಗೂ ಪಿಂಚಣಿ ಬಟವಡೆ ಬ್ಯಾಂಕಿಗೆ ಸಂಬಂಧಿಸಿದ ಹಾಗೂ ಇತರೆ ಹಲವಾರು ಕುಂದು ಕೊರತೆ ನಿವಾರಿಸುವ ಪ್ರಕ್ರಿಯೆ ನಡೆಯಲಿದೆ. ರ‍್ಯಾಲಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವಿಜಯಪುರ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ವಿಜಯಪುರ ಜಿಲ್ಲೆಯ ಸೈನಿಕ್ ಮಂಡಳಿಯನ್ನು ಪುನರ್ ರಚಿಸಲಾಗುತ್ತಿದ್ದು, ಮಂಡಳಿಗೆ ನೇಮಕಾತಿ ಬಯಸುವ ಮಾಜಿ ಸೈನಿಕರು ಹಾಗೂ ಸೇನೆ ನಿವೃತ್ತ ಅಧಿಕಾರಿಗಳು ತಮ್ಮ ಸೇವೆಯ ಸಂಕ್ಷಿಪ್ತ ಹಿನ್ನಲೆ ಮತ್ತು ಪೂರ್ವ ಚರಿತ್ರೆಯನ್ನು ನವೆಂಬರ್ ೧೭ ರೊಳಗೆ ಸೈನಿಕ್ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ವಿಜಯಪುರ ಕಚೇರಿಗೆ ಸಲ್ಲಿಸುವಂತೆ ಕೋರಲಾಗಿದೆ. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ದೂ: ೦೮೩೫೨-೨೫೦೯೧೩ ಸಂಖ್ಯೆಗೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವರಿಗೆ ಪ್ರಾಥಮಿಕ ವರದಿ ಸಲ್ಲಿಸಿದ ಉನ್ನತ ಸಮಿತಿ ಬೆಂಗಳೂರು: ವಿಜಯಪುರ ಜಿಲ್ಲೆಯನ್ನು ಇಂಧನ ಕ್ಷೇತ್ರದ ಸಾಧನಗಳು, ಮಶಿನರಿ ಮತ್ತು ಎಕ್ವಿಪ್ಮೆಂಟ್, ನಾನ್-ಮೆಟಲಿಕ್ ಖನಿಜೋತ್ಪನ್ನಗಳು, ಕೃಷಿ ಮತ್ತು ಕೃಷಿ ಆಧಾರಿತ ಉತ್ಪನ್ನಗಳು, ನ್ಯೂಟ್ರಾಸ್ಯುಟಿಕಲ್ಸ್, ಮೆಡಿಸಿನಲ್ ಮತ್ತು ಬೊಟಾನಿಕಲ್ ಉತ್ಪನ್ನಗಳು ಮತ್ತು ವಿಶೇಷ ಅಲಾಯ್ ಹಾಗೂ ಲೋಹೋತ್ಪನ್ನಗಳ ತಯಾರಿಕೆ ಹೀಗೆ ಒಟ್ಟು ಆರು ಕೈಗಾರಿಕಾ ವಲಯಗಳಲ್ಲಿ ಸಮಗ್ರವಾಗಿ ಅಭಿವೃದ್ಧಿಪಡಿಸಲು ಅತ್ಯುತ್ತಮ ಅವಕಾಶಗಳಿವೆ ಎಂದು ಉನ್ನತ ಮಟ್ಟದ ಸಮಿತಿಯೊಂದು ಹೇಳಿದೆ.ಈ ಸಂಬಂಧದ ಪ್ರಾಥಮಿಕ ವರದಿಯನ್ನು ಅದು ಗುರುವಾರ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರಿಗೆ ಸಲ್ಲಿಸಿದೆ. ಏಕಸ್ ಎಸ್‌ಇಜೆಡ್ ಮತ್ತು ದೆಹಲಿಯ ಸಿಬಿಆರ್ ಇ ಸಂಸ್ಥೆಯ ಪ್ರತಿನಿಧಿಗಳು ಈ ವರದಿಯನ್ನು ಸಿದ್ಧಪಡಿಸಿದ್ದಾರೆ. ಪಾಟೀಲ ಅವರು ನೂತನ ಸರಕಾರದಲ್ಲಿ ಕೈಗಾರಿಕಾ ಇಲಾಖೆಯ ಸಚಿವ ಹುದ್ದೆ ಸ್ವೀಕರಿಸಿದ ಕೆಲದಿನಗಳಲ್ಲೇ ತಮ್ಮ ತವರು ಜಿಲ್ಲೆಯನ್ನು ಕೈಗಾರಿಕಾ ದೃಷ್ಟಿಯಿಂದಲೂ ಮುಂಚೂಣಿಗೆ ತರುವ ಉದ್ದೇಶದಿಂದ ಸಿಬಿಆರ್ ಇ ಸಂಸ್ಥೆಗೆ ವರದಿ ನೀಡುವಂತೆ…
ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ | ಅರೆಕಾಲಿಕ ಸ್ವಯಂಸೇವಕರಿಗೆ ತರಬೇತಿ | ನ್ಯಾ.ಶಿವಾಜಿ ನಲವಡೆ ಆಶಯ ವಿಜಯಪುರ: ಸಮಾಜದ ಕಟ್ಟಕಡೆಯ ವ್ಯಕ್ತಿಗೆ, ಅಸಹಾಯಕರಿಗೆ ಉಚಿತ ಕಾನೂನು ಅರಿವು ಮತ್ತು ನೆರವು ತಲುಪುವಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದ್ದು, ಕಾನೂನಿನ ಸೇವೆಯಲ್ಲಿರುವ ಪ್ರತಿಯೊಬ್ಬ ಅಧಿಕಾರಿ ಜವಾಬ್ದಾರಿಯುತವಾಗಿ, ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪ್ರಧಾನ ಜಿಲ್ಲಾ, ಮತ್ತು ಸತ್ರ ನ್ಯಾಯಾಧೀಶರು ಹಾಗೂ ಅಧ್ಯಕ್ಷ ಶಿವಾಜಿ ಅನಂತ ನಲವಡೆ ಹೇಳಿದರು.ನಗರದ ಜಿಲ್ಲಾ ನ್ಯಾಯಾಲಯ ಆವರಣದ ನ್ಯಾಯಾಂಗ ಅಧಿಕಾರಿಗಳ ಸಭಾ ಭವನದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವಿಜಯಪುರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಪೋಲಿಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ವಕೀಲರ ಸಂಘ ವಿಜಯಪುರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಮತ್ತು ಅರೆಕಾಲಿಕ ಸ್ವಯಂಸೇವಕರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ರಾಷ್ಟ್ರೀಯ ಕಾನೂನು ಸೇವೆಗಳ…
ಬರ ನಿರ್ವಹಣೆ ಹಾಗೂ ಕುಡಿವ ನೀರಿನ ಅನುಷ್ಟಾನ ಕುರಿತ ವೀಡಿಯೋ ಸಂವಾದ ಸಭೆಯಲ್ಲಿ ಡಿಸಿ ಟಿ.ಭೂಬಾಲನ್ ಸೂಚನೆ ವಿಜಯಪುರ: ಜಿಲ್ಲೆಯಲ್ಲಿ ಬರದ ಛಾಯೆ ಇರುವುದರಿಂದ ಕುಡಿಯುವ ನೀರಿನ ತೊಂದರೆಯಾಗದಂತೆ ಎಲ್ಲ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಮನ್ವಯದಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಬೂಬಾಲನ್ ಹೇಳಿದರು.ಗುರುವಾರ ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಬರ ನಿರ್ವಹಣೆ ಹಾಗೂ ಕುಡಿಯುವ ನೀರಿನ ಅನುಷ್ಟಾನ ಕುರಿತ ವಿಡಿಯೋ ಸಂವಾದದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರ ಈಗಾಗಲೇ ಜಿಲ್ಲೆಯನ್ನು ಬರ ಪೀಡಿತ ಜಿಲ್ಲೆಯನ್ನಾಗಿ ಘೋಷಣೆ ಮಾಡಿದ್ದು ಮುಂಬರು ದಿನಗಳಲ್ಲಿ ಜಿಲ್ಲೆಯ ಪ್ರತಿಯೊಂದು ಗ್ರಾಮಗಳಲ್ಲಿ ಕುಡಿಯುವ ನೀರಿನ ತೊಂದರೆಯಾಗದಂತೆ ಈಗಿನಿಂದಲೇ ಕ್ರಮ ವಹಿಸಬೇಕು ಹಾಗೂ ಕುಡಿಯುವ ನೀರಿಗೆ ಪ್ರಥಮ ಆಧ್ಯತೆ ನೀಡಬೇಕು ಎಂದು ಸೂಚಿಸಿದರು.ಜಿಲ್ಲೆಯಲ್ಲಿ ಪ್ರತಿಯೊಂದು ಗ್ರಾಮಗಳಲ್ಲಿಯೂ ಕುಡಿಯುವ ನೀರು ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ ಕರ್ತವ್ಯ ನಿರ್ವಹಿಸಬೇಕು. ಬಹು ಹಳ್ಳಿ ಕುಡಿಯುವ ನೀರಿನ ಯೋಜನೆಯ ಎಲ್ಲ ಕೆರೆಗಳಿಗೆ ನೀರು ಹರಿಸಿ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ…
ಹೂವಿನಹಿಪ್ಪರಗಿ: ಸಮೀಪದ ಗೂಗಿ ಅಗಸಬಾಳ ಗ್ರಾಮದ ಅಂಜುಮನ್ ಇಸ್ಲಾಂ ಕಮೀಟಿ ರಚನೆ ಮಾಡುವ ಸಲುವಾಗಿ ನ.೧೦ ಶುಕ್ರವಾರ ಸಾಯಂಕಾಲ ೬ ಘಂಟೆಗೆ ಗ್ರಾಮದ ಅಂಜುಮನ್ ಮಜಿದ್ ನಲ್ಲಿ ಮುಸ್ಲಿಂ ಸಮಾಜದ ಸಭೆ ಕರೆಯಲಾಗಿದ್ದು ಗ್ರಾಮದ ಎಲ್ಲಾ ಮುಸ್ಲಿಂ ಭಾಂದವರು ಸಭೆಗೆ ಹಾಜರಾಗಬೇಕೆಂದು ಸಮಾಜದ ಮುಖಂಡ ನಯುಮ ಹಳಕೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೂವಿನಹಿಪ್ಪರಗಿ: ಮುಂಗಾರು ಹಾಗೂ ಹಿಂಗಾರು ಮಳೆ ನಿರೀಕ್ಷಿತ ಮಟ್ಟದಲ್ಲಿ ಬಾರದ ಕಾರಣ ಬೆಳೆಗಳು ಒಣಗಿಹೋಗಿದ್ದು ರೈತರು ಕಂಗಾಲಾಗಿದ್ದಾರೆ ಎಂದು ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಹೇಳಿದರು ಹೂವಿನಹಿಪ್ಪರಗಿಯಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಮಂಗಳವಾರ ನಡೆದ ಆಲಮಟ್ಟಿ ಕೃಷ್ಣಾ ಭಾಗ್ಯ ಜಲನಿಗಮದ ವ್ಯವಸ್ಥಾಪಕ ನಿರ್ದೇಶಕರ ಕಚೆರಿಯಲ್ಲಿ ನೀರಾವರಿ ಸಲಹಾ ಸಮಿತಿ ಸಭೆಗೆ ಜಿಲ್ಲೆಯ ೮ ಶಾಸಕರ ಪೈಕಿ ನಾಲ್ಕು ಜನ ಶಾಸಕರು ಮಾತ್ರ ಭಾಗವಹಿಸಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಜಿಲ್ಲೆಯ ಉಸ್ತುವಾರಿ ಸಚಿವರು, ಬಸವನಬಾಗೇವಾಡಿ ಶಾಸಕರು ಹಾಗೂ ಜವಳಿ ಕಬ್ಬು ಅಭಿವೃದ್ಧಿ ಸಚಿವರು, ದೇವರ ಹಿಪ್ಪರಗಿಯ ಶಾಸಕ ರಾಜುಗೌಡ ಪಾಟೀಲರು ನೀರಾವರಿ ಸಲಹಾ ಸಮಿತಿ ಸಭೆಗೆ ಗೈರಾಗಿದ್ದು ತಮಗೆ ಶೋಭೆ ತರುವಂತದಲ್ಲ, ಇದನ್ನು ರೈತ ಸಂಘ ಖಂಡಿಸುತ್ತದೆ. ಆಯ್.ಸಿ.ಸಿ ಸಭೆ ಮಹತ್ವದ ಸಭೆಯಾಗಿರುವುದರಿಂದ ಕಡ್ಡಾಯವಾಗಿ ಜಿಲ್ಲೆಯ ಎಲ್ಲಾ ಶಾಸಕರುಗಳು ಹಾಜರಿರಬೇಕು. ರೈತರ ಬೇಡಿಕೆಯಂತೆ ಅವರಿಗೆ ಅನಕೂಲವಾಗುವ ರೀತಿ ನಿರ್ಣಯ ಕೈಗೊಳ್ಳದಿದ್ದರೆ ಅದನ್ನು ಪ್ರಶ್ನಿಸಲು ಕಡ್ಡಾಯವಾಗಿ…
