Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ಕೇಂದ್ರ ಸರಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಯೋಜನೆಗಳ ಬಗ್ಗೆ ಸಾರ್ವಜನಿಕರು ಅರಿತುಕೊಂಡು ಅದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ವಿಜಯಪುರ ಸಂಸದ ರಮೇಶ್ ಜಿಗಜಿಣಗಿ ಹೇಳಿದರು.ಭಾರತ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕೇಂದ್ರ ಸಂವಹನ ಇಲಾಖೆ, ವಿಜಯಪುರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ನೆಹರು ಯುವ ಕೇಂದ್ರ, ವಿಜಯಪುರ ಇವರುಗಳ ಸಹಯೋಗದಲ್ಲಿ ನಗರದ ಪಿ ಡಿ ಜೆ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಸ್ವಚ್ಛ ಭಾರತ, ಏಕ ಭಾರತ ಶ್ರೇಷ್ಠ ಭಾರತ, ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ, ಕೇಂದ್ರ ಸರ್ಕಾರದ ಯೋಜನೆಗಳು, ಪ್ರಧಾನಮಂತ್ರಿಯವರ ದೂರದರ್ಶಿತ್ವ-೨೦೪೭, ವೋಕಲ್ ಪಾರ್ ಲೋಕಲ್ ಹಾಗೂ ಇತರೆ ಯೋಜನೆಗಳ ಕುರಿತ ಛಾಯಾಚಿತ್ರ ಪ್ರದರ್ಶನ ಮತ್ತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಕೇಂದ್ರ ಸರಕಾರ ಜನ ಕಲ್ಯಾಣಕ್ಕೆ ಸಾಕಷ್ಟು ಯೋಜನೆಗಳನ್ನು ರೂಪಿಸಿದೆ. ದೇಶ ಅಭಿವೃದ್ದಿಯತ್ತ ಮುನ್ನಡೆಯುತ್ತಿದೆ. ವಿಜಯಪುರ ಜಿಲ್ಲೆ ಉತ್ತಮ ರಸ್ತೆ ಸೇರಿದಂತೆ ಹೆದ್ದಾರಿಗಳನ್ನು…
ವಿಜಯಪುರ: ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ಶಿಂಧೆ ಅವರು ಬುಧವಾರ ತಿಕೋಟಾ ತಾಲೂಕಿನ ತೊರವಿ ಗ್ರಾಮಕ್ಕೆ ಭೇಟಿ ನೀಡಿ ೧೦,೦೦೦ ಮೇಟ್ರಿಕ್ ಟನ್ ಸಾಮರ್ಥ್ಯದ ಕೋಲ್ಡ್ ಸ್ಟೋರೇಜ್ ನಿರ್ಮಾಣ ಸ್ಥಳ ಪರಿಶೀಲನೆ ನಡೆಸಿದರು.ಸರಕಾರದಿಂದ ಮಂಜೂರಾದ ೧೦,೦೦೦ ಮೇಟ್ರಿಕ್ ಟನ್ ಸಾಮರ್ಥ್ಯದ ಕೋಲ್ಡ್ ಸ್ಟೋರೇಜ್ ನಿರ್ಮಾಣ ಸ್ಥಳಕ್ಕೆ ನವೆಂಬರ್ ೮ ರಂದು ಓABCONS ಸಂಸ್ಥೆಯಿಂದ ಎಮ್.ಎಸ್.ಎಲ್ ಪ್ರಭಾಕರ, ವ್ಯವಸ್ಥಾಪಕ ನಿರ್ದೇಶಕರು, SONNE Infrastructure ಹಾಗೂ ವಿ. ಭರತ, ಯೋಜನಾ ಸಲಹೆಗಾರರು, ಓABCONS ಮತ್ತು ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್, ಬೆಂಗಳೂರು ಮತ್ತು ವಿಜಯಪುರದ ತೋಟಗಾರಿಕೆ ಉಪ ನಿರ್ದೇಶಕರು ಅವರನ್ನೊಳಗೊಂಡ ತಂಡ ಸ್ಥಳ ಪರಿಶೀಲನೆ ನಡೆಸಿತು.ರಾಹುಲ್ ಶಿಂಧೆ ಅವರು ಯೋಜನೆ ರೂಪುರೇಷಗಳನ್ನು ತಯಾರಿಸುವ ಸಂದರ್ಭದಲ್ಲಿ ಆಧುನಿಕ ತಂತ್ರಜ್ಞಾನ ಹೊಂದಿರುವ ಯಂತ್ರೋಪಕರಣಗಳನ್ನು ಅಳವಡಿಸಿಕೊಳ್ಳುವುದರ ಜೊತೆಗೆ ಆರ್ಥಿಕ ಕಾರ್ಯ ಸಾಧ್ಯತೆ ಹಾಗೂ ನಿರ್ವಹಣಾ ವೆಚ್ಚದ ಸಾಧ್ಯತೆಯ ಬಗ್ಗೆ ಅಧ್ಯಯನ ಮಾಡಿ ರೈತರಿಗೆ ಕಡಿಮೆ ವೆಚ್ಚದಲ್ಲಿ ಅಧಿಕ ಪ್ರಯೋಜನೆಗಳನ್ನು ಪಡೆಯಲು ಅನುಕೂಲವಾಗುವಂತೆ…
ವಿಜಯಪುರ: ವಿಜಯಪುರ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂದ ನವೆಂಬರ್ ೯ ರಂದು ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಾ ಕೇಂದ್ರದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಯಲಿದೆ.ಅಂದು ಅಪರಾಹ್ನ ೩:೦೦ ಗಂಟೆಯಿಂದ ಪೋಲಿಸ್ ಅಧೀಕ್ಷಕರು (ಮೊ:೯೩೬೪೦೬೨೫೨೮), ಪೊಲೀಸ್ ಉಪಾಧೀಕ್ಷಕರು (ಮೊ:೯೩೬೪೦೬೨೫೫೭), ಪೊಲೀಸ್ ಇನ್ಸಪೆಕ್ಟರ್-೧ (ಮೊ:೯೩೬೪೦೬೨೬೪೦), ಪೊಲೀಸ್ ಇನ್ಸಪೆಕ್ಟರ್-೨(ಮೊ:೯೩೬೪೦೬೨೬೩೯) ದೇವರ ಹಿಪ್ಪರಗಿಯ ಜಗದ್ಗುರು ಪಂಚಾಚಾರ್ಯ ಕಲ್ಯಾಣ ಮಂಟಪದಲ್ಲಿ ಲೋಕಾಯುಕ್ತ ಕಾಯ್ದೆ ಮತ್ತು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿಯಲ್ಲಿ ಸಾರ್ವಜನಿಕರಿಂದ ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡಿವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ.ಸರ್ಕಾರಿ ಕಚೇರಿಗಳಲ್ಲಿ ಅಧಿಕೃತವಾಗಿ ಕೆಲಸಗಳನ್ನು ಮಾಡಿಕೊಡುವಲ್ಲಿ ವಿಳಂಬ ಹಾಗೂ ಲಂಚದ ಬೇಡಿಕೆ, ಇನ್ನಿತರೆ ತೊಂದರೆ ನೀಡುತ್ತಿರುವ ಅಧಿಕಾರಿ-ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದ್ದು, ಸ್ಥಳದಲ್ಲಿ ಪರಿಹಾರ ಕಂಡುಕೊಳ್ಳಬಹುದಾದ ದೂರುಗಳನ್ನು ಸ್ಥಳೀಯ ಅಧಿಕಾರಿಗಳ ಸಹಕಾರದೊಂದಿಗೆ ಇತ್ಯರ್ಥಪಡಿಸಲು ಪ್ರಯತ್ನಿಸಲಾಗುವುದು. ಸರ್ಕಾರಿ ಅಧಿಕಾರಿಗಳ ಅಕ್ರಮ ಆಸ್ತಿ ಸಂಪಾದನೆ ಸರಕಾರಿ ಹಣದ ದುರುಪಯೋಗ, ಕಳಪೆ ಕಾಮಗಾರಿ ಹಾಗೂ ಇತರೆ ಯಾವುದೇ ರೀತಿಯ ಭ್ರಷ್ಟಾಚಾರ ದೂರುಗಳಿದ್ದಲ್ಲಿ ಹೆಚ್ಚಿನ ಮಾಹಿತಿಗಾಗಿ ಲೋಕಾಯುಕ್ತ ಕಚೇರಿ ದೂರವಾಣಿ…
ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ಕಂದಗಲ್ ಶ್ರೀ ಹನಮಂತರಾಯ ರಂಗಮಂದಿರದಲ್ಲಿ ಒನಕೆ ಓಬವ್ವ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ ೯:೩೦ ಗಂಟೆಗೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ನಗರದ ಕಂದಗಲ್ ಶ್ರೀ ಹನಮಂತರಾಯ ರಂಗಮAದಿರವರೆಗೆ ಭಾವಚಿತ್ರ ಮೆರವಣಿಗೆ ಜರುಗಲಿದೆ.ಬೆಳಿಗ್ಗೆ ೧೦:೩೦ ಗಂಟೆಗೆ ನಗರದ ಕಂದಗಲ್ ಶ್ರೀ ಹನಮಂತರಾಯ ರಂಗಮಂದಿರದಲ್ಲಿ ಜರುಗುವ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಉದ್ಘಾಟನೆ ನೆರವೇರಿಸಲಿದ್ದಾರೆ.ನಗರ ಶಾಸಕರಾದ ಬಸನಗೌಡ ಆರ್.ಪಾಟೀಲ(ಯತ್ನಾಳ) ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜವಳಿ ಕಬ್ಬು, ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್.ಪಾಟೀಲ, ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ-೨ ಪ್ರಕಾಶ ಹುಕ್ಕೇರಿ, ಸಂಸದ ರಮೇಶ ಜಿಗಜಿಣಗಿ, ಶಾಸಕರಾದ ಯಶವಂತರಾಯಗೌಡ ಪಾಟೀಲ, ಹಣಮಂತ ಆರ್.ನಿರಾಣಿ, ಪ್ರಕಾಶ ರಾಠೋಡ, ಸುನೀಲಗೌಡ ಪಾಟೀಲ, ಪಿ.ಎಚ್.ಪೂಜಾರ, ಅಪ್ಪಾಜಿ ಸಿ.ಎಸ್.ನಾಡಗೌಡ, ವಿಠ್ಠಲ…
ವೀರಯೋಧ ಕಾಶೀರಾಯ ಸ್ಮರಣಾರ್ಥ ಸರ್ವಧರ್ಮ ಸಮ್ಮೇಳನದಲ್ಲಿ ಮಾಜಿ ಸಚಿವ ಗೋವಿಂದ ಕಾರಜೋಳ ಕರೆ ವಿಜಯಪುರ: ಈ ದೇಶದಲ್ಲಿ ವಾಸಿಸುವ ಪ್ರತಿಯೊಬ್ಬರು ದೇಶಪ್ರೇಮ ಮೆರೆಯಬೇಕು. ಪ್ರತಿಯೊಬ್ಬ ಭಾರತೀಯನು ಯಾವುದೇ ಜಾತಿ-ಮತ ಪಂಥಗಳನ್ನು ಮೀರಿ ರಾಷ್ಟ್ರಪ್ರೇಮ ಬೆಳೆಸಿಕೊಂಡು, ಒಗ್ಗಟ್ಟಾಗಿ ಸುಭದ್ರ ದೇಶ ನಿರ್ಮಾಣಕ್ಕೆ ಕೈ ಜೋಡಿಸಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಕರೆ ನೀಡಿದರು.ಮಂಗಳವಾರ ಜಿಲ್ಲೆಯ ಉಕ್ಕಲಿ ಗ್ರಾಮದ ಬಿಎಲ್‌ಡಿಇ ಸಂಸ್ಥೆಯ ನ್ಯೂ ಇಂಗ್ಲೀಷ್ ಹೈಸ್ಕೂಲ್ ಆವರಣದಲ್ಲಿ ಪುಲ್ವಾಮಾ ದಾಳಿಯಲ್ಲಿ ಹುತ್ಮಾತ್ಮರಾದ ವೀರಯೋಧ ಶೌರ್ಯಚಕ್ರ ಪ್ರಶಸ್ತಿ ಪುರಸ್ಕೃತ ಹವಲ್ದಾರ ಕಾಶೀರಾಯ ಬಮ್ಮನಳ್ಳಿ ಅವರ ಕಂಚಿನ ಪುತ್ಥಳಿ ಅನಾವರಣ ಹಾಗೂ ಸರ್ವಧರ್ಮ ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.ಜಿಲ್ಲೆಯ ವೀರಯೋಧ ಕಾಶೀರಾಯನ ತ್ಯಾಗಕ್ಕೆ ಬೆಲೆ ಕಟ್ಟಲಾಗಲ್ಲ. ಇಂತಹ ವೀರನಿಗೆ ಜನ್ಮ ನೀಡಿದ ತಂದೆ-ತಾಯಿಗೆ ಎಷ್ಟು ಕೊಂಡಾಡಿದರೂ ಕಡಿಮೆ. ಪುಲ್ವಾಮಾ ದಾಳಿ ಸಂದರ್ಭದಲ್ಲಿ ಶತ್ರುವನ್ನು ಸದೆಬಡೆದು, ವೀರ ಮರಣ ಹೊಂದಿದ ಕಾಶೀರಾಯ ಸೂರ್ಯಚಂದ್ರ ಇರುವರೆಗೂ ಅಜರಾಮರಾಗಿ ಉಳಿಯಲಿದ್ದಾರೆ. ಅವರ ತ್ಯಾಗದ ಕುರಿತು ಮುಂದಿನ…
ವಿಜಯಪುರ: ಇತ್ತಿಚಿಗೆ ತುಮಕೂರಿನಲ್ಲಿ ನಡೆದ 2022-23 ನೇ ಸಾಲಿನ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ವಿಜಯಪುರ ಜಿಲ್ಲೆಯಿಂದ ಹಾಕಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಅತ್ಯುತ್ತಮ ಪ್ರದರ್ಶನ ನೀಡಿ ರಾಷ್ಟ್ರ ಮಟ್ಟದ ಹಾಕಿ ಪಂದ್ಯಾವಳಿ ಆಡಲು ಓಡಿಸ್ಸಾ ರಾಜ್ಯದ ಭುವನೇಶ್ವರ ನಗರಕ್ಕೆ ತೆರಳುತ್ತಿರುವ ಜಿಲ್ಲಾ ನೌಕರರ ಸಂಘದ ಖಜಾಂಚಿ ಸೈಯದ್ ಜುಬೇರ ಕೆರೂರ ಅವರಿಗೆ ಮಂಗಳವಾರ ಸಂಜೆ ನೌಕರರ ಭವನದಲ್ಲಿ ಆತ್ಮಿಯವಾಗಿ ಸನ್ಮಾನಿಸಲಾಯಿತು.ಜಿಲ್ಲಾ ನೌಕರ ಸಂಘದ ಅಧ್ಯಕ್ಷ ಸುರೇಶ ಶಡಶ್ಯಾಳ ಮಾತನಾಡಿ ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿಯಲ್ಲಿ ಉತ್ತಮ ಆಟದಿಂದ ಗೆಲುವು ಸಾಧಿಸಿ ರಾಷ್ಟ್ರಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿ ನಮ್ಮ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ರಾಷ್ಟ್ರ ಮಟ್ಟದ ಕ್ರೀಡೆಯಲ್ಲೂ ಸಹ ಜುಬೇರ ಕೆರೂರ ಹಾಗೂ ಎ.ಎ.ಜಹಾಗೀರದಾರ ಹಾಕಿ ಕ್ರೀಡಾಪಟುಗಳು ಜಯಶಾಲಿಯಾಗಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಲೆಂದು ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಬಸಿರ್ ನದಾಪ್, ಎಸ್.ಎನ್.ತಡಲಗಿ, ಪಿ.ಎಸ್.ಗದ್ಯಾಳ ಇದ್ದರು.
ದೇವರಹಿಪ್ಪರಗಿ: ಪಟ್ಟಣದ ದೇಶಪಾಂಡೆ ಕುಟುಂಬಕ್ಕೆ ಸೇರಿದ ಕಬ್ಬು ವಿದ್ಯುತ್ ಅವಘಡದಿಂದ ಬೆಂಕಿಗೆ ಆಹುತಿಯಾಗಿದ್ದು ಸುಮಾರು ೦೩ ಎಕರೆ ಕಬ್ಬು ಸುಟ್ಟು ಭಸ್ಮವಾದ ಘಟನೆ ಮಂಗಳವಾರ ಜರುಗಿದೆ.ದೇವರಹಿಪ್ಪರಗಿಯ ಪಾಂಡುರಂಗ ದೇಶಪಾಂಡೆ ಇವರ ಆಸ್ತಿ ಸಂಖ್ಯೆ ೮/೧ ರಲ್ಲಿ ಮಂಗಳವಾರ ಬೆಳಿಗ್ಗೆ ಕಬ್ಬು ಬೆಳೆ ವಿದ್ಯುತ್ ಅವಘಡದಿಂದ ಬೆಂಕಿ ತಗುಲಿ ಹಾನಿಗೀಡಾಗಿದೆ. ಸ್ಥಳಕ್ಕೆ ಆಗಮಿಸಿದ ೨ ಅಗ್ನಿಶಾಮಕ ತಂಡಗಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವುದರಲ್ಲಿ ೫ ಎಕರೆ ಕಬ್ಬು ಬೆಳೆಯಲ್ಲಿ ೩ ಎಕರೆ ಕಬ್ಬು ಬಹುತೇಕ ಸುಟ್ಟು ಕರಕಲಾಗಿತ್ತು. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು ಪ್ರಯತ್ನ ಪೂರ್ಣವಾಗಿ ಫಲಿಸಲಿಲ್ಲ.ಕಬ್ಬು ಕಟಾವಿಗೆ ಬಂದು ಕಾರ್ಖಾನೆಗೆ ಸಾಗಿಸಬೇಕು ಎನ್ನುವಷ್ಟರಲ್ಲಿ ಈ ಘಟನೆ ಸಂಭವಿಸಿದೆ. ಈ ವರ್ಷ ಮಳೆಯಾಗದ ಕಾರಣ ಉತ್ತಮ ಫಸಲು ಬರುತ್ತಿಲ್ಲ ಎಂದು ರೈತರು ಚಿಂತಿತರಾಗಿದ್ದಾರೆ. ಇಂತಹದರಲ್ಲಿ ವಿದ್ಯುತ್ ಅವಘಡದಿಂದ ಬೆಳೆದ ಕಬ್ಬು ಸುಟ್ಟು ಕರಕಲಾಗಿದೆ. ಹೀಗಾಗಿ ವರ್ಷದ ರೈತರ ಆದಾಯಕ್ಕೆ ಕೊಳ್ಳಿ ಇಟ್ಟಂತಾಗಿದೆ.ತಾಲ್ಲೂಕಿನಾದ್ಯಂತ ಹಲವಾರು ತಿಂಗಳಿನಿಂದ ವಿದ್ಯುತ್ ಅವಘಡದಿಂದ ಕಬ್ಬುಬೆಳೆ ಸುಟ್ಟು…
ಇಂಡಿ : ಮುಂಗಾರು, ಹಿಂಗಾರು ಎರಡೂ ಮಳೆ ಬಾರದೆ ಇರುವುದರಿಂದ ಸರಕಾರ ಬರಗಾಲ ಘೋಷಿಸಿದೆ. ಆದರೆ ಇದು ಬರೀ ಬರಗಾಲವಲ್ಲ, ಬೀಕರ ಬರಗಾಲವಾಗಿದ್ದರಿಂದ ಮುನ್ನೆಚ್ಚರಿಕೆವಾಗಿ ತಾಲ್ಲೂಕಿನ ಯಾವುದೇ ಗ್ರಾಮಗಳಿಗೂ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮವಹಿಸಬೇಕು ಎಂದು ಕಂದಾಯ ಉಪವಿಭಾಗ ಅಧಿಕಾರಿ ಆಬೀದ್ ಗದ್ಯಾಳ ಹೇಳಿದರು.ಬುಧವಾರ ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ಏರ್ಪಡಿಸಿರುವ ಕುಡಿಯುವ ನೀರಿನ ಮುಂಜಾಗ್ರತಾ ಕ್ರಮದ ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷತೆ ವಹಿಸಿ ಮಾತಾನಾಡಿದರು.ಈಗಾಗಲೇ ನಿನ್ನೆಯ ದಿನ ಗ್ರೌಂಡ್ ಲೆವಲ್ಲಲ್ಲಿ ಕೆಲಸವಾಗುತ್ತಿಲ್ಲೆಂದು ಶಾಸಕ ಯಶವಂತರಾಯಗೌಡ ಪಾಟೀಲ್ & ಜಿಲ್ಲಾ ಅಧಿಕಾರಿಗಳು ಬೇಸರ ವ್ಯಕ್ತಪಡಿಸಿದ್ದು, ಈ ಕೂಡಲೇ ಕುಡಿಯುವ ನೀರಿನ ಬಗ್ಗೆ ಚುರುಕು ಕೆಲಸ ನಡೆಯಬೇಕು ಎಂದು ಜಿಲ್ಲಾ ಅಧಿಕಾರಿಗಳು ಸೂಚಿಸಿದ್ದಾರೆ ಎಂದು ಹೇಳಿದರು.ಸೆ- 9 ರಂದು ತಾಲೂಕು ಮಟ್ಟದ ಅಧಿಕಾರಿಗಳನ್ನು ಪಂಚಾಯತ್ ನೋಡಲ್ ಅಧಿಕಾರಿಗಳಾಗಿ ನೇಮಕ ಮಾಡಿ ಆದೇಶಿಸಿಲಾಗಿದೆ. ಆದರೆ ಇಲ್ಲಿಯವರೆಗೆ ಯಾರೊಬ್ಬರೂ ಪಂಚಾಯತ್ ಗೆ ತೆರಳಿ ಮುಂಜಾಗ್ರತೆಗೆ ಸಭೆ ನಡೆಸಿ ಸಮಸ್ಯೆ ಕಂಡುಕೊಳ್ಳುವ ಮತ್ತು ಪರಿಹಾರ ಮಾರ್ಗಗಳ…
ಯಡ್ರಾಮಿ: ತಾಲೂಕು ಕಾಂಗ್ರೆಸ್ ಮುಖಂಡ, ಜೇವರ್ಗಿ ಮತ್ತು ಯಡ್ರಾಮಿ ತಾಲೂಕು ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ರಾಜಶೇಖರ ಸಾಹು ಸೀರಿ ಅವರನ್ನು ರಾಜ್ಯ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನೇಮಿಸುವಂತೆ ಕಾಂಗ್ರೆಸ್ ಹಿರಿಯ ಮುಖಂಡ ಬಾಬುಗೌಡ ಪಾಟೀಲ ಕುಳಗೇರಿ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.ರಾಜಶೇಖರ ಸಾಹು ಸೀರಿ ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಶಾಸಕ ಡಾ|ಅಜಯ್ ಸಿಂಗ್ ಅವರ ಗೆಲುವಿಗಾಗಿ ನಿರಂತರವಾಗಿ ಶ್ರಮಿಸಿದ್ದಾರೆ. ಅಲ್ಲದೇ, ಈ ಹಿಂದೆ ಮಾಜಿ ಮುಖ್ಯಮಂತ್ರಿ ದಿ. ಎನ್.ಧರ್ಮಸಿಂಗ್ ಅವರ ನಿಕಟವರ್ತಿಯಾಗಿ ಪಕ್ಷದಲ್ಲಿ ಕೆಲಸ ಮಾಡಿದ್ದಾರೆ. ಜೇವರ್ಗಿ, ಯಡ್ರಾಮಿ ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷದ ಬೆಳವಣಿಗೆಗಾಗಿ ಸೀರಿ ಅವರು ಪ್ರಾಮಾಣಿಕತೆಯಿಂದ ಕಾರ್ಯ ನಿರ್ವಹಿಸುತ್ತಿರುವುದರಿಂದ ಅವರನ್ನು ಯಾವುದಾದರೊಂದು ರಾಜ್ಯ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡುವಂತೆ ಒತ್ತಾಯಿಸಿದ್ದಾರೆ.
ತಿಕೋಟಾ: ಶಿಕ್ಷಣ ಎಂದರೆ ಕೇವಲ ಓದು ಬರಹ ಅಲ್ಲ, ಮಕ್ಕಳಲ್ಲಿ ಅಡಗಿರುವ ಯಾವುದೇ ವಿಶೇಷ ಪ್ರತಿಭೆಯನ್ನು ಗುರ್ತಿಸಿ ಹೊರ ಹಾಕಿ ಸಮಾಜಕ್ಕೆ ಉತ್ತಮ ಕೊಡುಗೆಯನ್ನು ನೀಡುವಂತ ಸಂಸ್ಕಾರ ಹಾಗೂ ಸಂಸ್ಕೃತಿ ಬೆಳೆಸಿ ಮಕ್ಕಳನ್ನು ತಯಾರಿಸವುದಾಗಿದೆ ಎಂದು ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ ಹೇಳಿದರು.ವಿಜಯಪುರ ತಾಲ್ಲೂಕಿನ ಕಗ್ಗೋಡ ಗ್ರಾಮದ ಪ್ರಕೃತಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯ ಗ್ರಾಮೀಣವಲಯದ ವತಿಯಿಂದ ಬುಧವಾರ ನಡೆದ 2022-23 ನೇ ಸಾಲಿನ ತಾಲ್ಲೂಕ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಶಿಕ್ಷಕರು ತಮ್ಮ ಪೂರ್ಣ ಜೀವನವನ್ನು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಒದಗಿಸಿರುತ್ತಿರಿ. ತಂದೆ ತಾಯಿಗಿಂತ ಹೆಚ್ಚು ಮಗು ಶಿಕ್ಷಕರ ಜೊತೆ ಇರುತ್ತದೆ. ಅವರು ನೀಡಿದ ಶಿಕ್ಷಣ ಜೀವನ ಪರ್ಯಂತ ಯಾರು ಮರೆಯುವದಿಲ್ಲ. ಶಾಸಕ, ಮಂತ್ರಿ, ಉದ್ಯಮಿಯಾದರೂ ಪ್ರಾಥಮಿಕ ಶಿಕ್ಷಕರು ನೀಡಿದ ಶಿಕ್ಷಣ ಮರೆಯಲಾರರು ಎಂದರು.ಸಾನಿಧ್ಯ ವಹಿಸಿ ಮಾತನಾಡಿದ ಬುರಣಾಪುರ ಸಿದ್ದಾರೂಢ…
