Author: editor.udayarashmi@gmail.com

ವಿಜಯಪುರ: ರಾಷ್ಟ್ರೀಯ ಶರೀರಕ್ರಿಯಾ ಶಾಸ್ತ್ರಜ್ಞರ ಸೊಸಾಯಿಟಿಯ 34ನೇ ರಾಷ್ಟ್ರೀಯ ಸಮ್ಮೇಳನ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ನವೆಂಬರ್ 1 ಬುಧವಾರದಿಂದ ನವೆಂಬರ್ 3ರ ಶುಕ್ರವಾರದ ವರೆಗೆ ನಡೆಯಿತು.ರಾಷ್ಟ್ರೀಯ ಶರೀರಕ್ರಿಯಾ ಶಾಸ್ತ್ರಜ್ಞರ ಸೊಸೈಟಿಯ ಈ ಸಮ್ಮೇಳನವನ್ನು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಹಾಗೂ ಸಂಶೊಧನಾ ಕೇಂದ್ರದ ಶರೀರ ಕ್ರಿಯಾ ಶಾಸ್ತ್ರ ವಿಭಾಗ ಆಯೋಜಿಸಿತ್ತು.ಸಮ್ಮೆಳನದ ಮೊದಲ ದಿನ ನಿರಂತರ ವೈದ್ಯಕೀಯ ಶಿಕ್ಷಣ ಹಾಗೂ ಕಾರ್ಯಾಗಾರವನ್ನು ನಡೆಯಿತು. ಈ ಕಾರ್ಯಾಗಾರದಲ್ಲಿ ಆರೋಗ್ಯ ಮತ್ತು ದು:ಖಸ್ಥಿತಿ ಶಾರೀರಿಕ ಶಾಸ್ತ್ರ- ಇತ್ತಿಚಿನ ಪ್ರವೃತ್ತಿ ಹಾಗೂ ಪ್ರಗತಿಗಳು ಎಂಬುದು ಧ್ಯೇಯ ವಾಕ್ಯದಡಿ ನಡೆದ ಗೋಷ್ಠಿಗಳಲ್ಲಿ ಆರು ಪರಿಣಿತ ವೈದ್ಯರು ಆಯ್ದ ವಿಷಯಗಳ ಮೇಲೆ ತಮ್ಮ ವಿಚಾರಗಳನ್ನು ಮಂಡಿಸಿದರು. ಮಧ್ಯಾಹ್ನ ನುರಿತ ಯೋಗಪಟುಗಳು ಮತ್ತು ನೋಂದಾಯಿತ ಅಭ್ಯರ್ಥಿಗಳಿಂದ ಯೋಗಾಸನದ ನಾನಾ ಭಂಗಿಗಳು ಹಾಗೂ ಧ್ಯಾನದ ಕುರಿತು ಪ್ರಾತ್ಯಕ್ಷಿಕೆ ನಡೆಯಿತು.ಸಮ್ಮೇಳನದ ಎರಡನೇ ಮತ್ತು ಮೂರನೇ ದಿನ ನಡೆದ ಮುಖ್ಯ ಸಮ್ಮೇಳನವನ್ನು ಸಮ್ಮೆಳನದಲ್ಲಿ ಶರೀರಕ್ರಿಯಾಶಾಸ್ತ್ರ: ಪ್ರಯೋಗಶಾಸ್ತ್ರದಿಂದ…

Read More

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬರ ಅಧ್ಯಯನಕ್ಕೆ ಹಾಸನಕ್ಕೆ ತೆರಳಿರುವುರಲ್ಲಿ ನಮ್ಮ ತಕರಾರು ಇಲ್ಲ. ಕೇಂದ್ರ ಸರ್ಕಾರದ ಬಳಿ ಕೇಳಿ ನಮಗೆ ಪರಿಹಾರ ಕೊಡಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಈ ಕುರಿತು ಮಂಗಳವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬರ ಅಧ್ಯಯನವನ್ನು ಕೇಂದ್ರದ ತಂಡ ನಡೆಸಿ ಹೋಗಿದ್ದಾರೆ. ಕೇಂದ್ರ ಸರ್ಕಾರಕ್ಕೆಅವರಿನ್ನೂ ವರದಿ ನೀಡಿಲ್ಲ. ಬಿಜೆಪಿ ಯವರು ರಾಜಕಾರಣ ಮಾಡಲು ಅಧ್ಯಯನ ಮಾಡುತ್ತೇವೆ ಎನ್ನುತ್ತಿದ್ದಾರೆ. ಕೇಂದ್ರ ಸರ್ಕಾರದ ಬಳಿ ಕೇಳಿ ನಮಗೆ ಪರಿಹಾರ ಕೊಡಿಸಲಿ. ಅದನ್ನು ಬಿಟ್ಟು ಅಧ್ಯಯನ ಮಾಡುತ್ತೇವೆ ಎನ್ನುತ್ತಾರೆ. ಮಾಡಲಿ, ನಮ್ಮ ತಕರಾರು ಇಲ್ಲ ಎಂದು ಹೇಳಿದರು.ಕೇಂದ್ರ ಸರ್ಕಾರಕ್ಕೆ 17900 ಕೋಟಿ ರೂ ಗಳ ಪರಿಹಾರ ಕೊರಲಾಗಿದೆ. ರಾಜ್ಯದಲ್ಲಿ ಸುಮಾರು 33, 700 ಕೋಟಿ ನಷ್ಟವಾಗಿದೆ. ರೈತರು ಹಾಗೂ ಕರ್ನಾಟಕದ ಬಗ್ಗೆ ಕಾಳಜಿ ಇದ್ದರೆ ಬಿಜೆಪಿ ಪರಿಹಾರ ಕೊಡಿಸಲಿ ಎಂದರು. 25 ಬಿಜೆಪಿ ಸಂಸದರು ಪರಿಹಾರ ಕೊಡಿಸುವುದನ್ನು ಮೊದಲು ಮಾಡಲಿ. ನಮ್ಮ ಮಂತ್ರಿಗಳಿಗೆ ಸಂಬಂಧ ಪಟ್ಟ ಸಚಿವರು ಬಿಜೆಪಿಗೆ…

Read More

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ ವಿವೇಕಾನಂದ ಎಚ್ ಕೆ, ಬೆಂಗಳೂರು ಹುಲಿ ಉಗುರು, ಆನೆ ದಂತ, ನವಿಲು ಗರಿ, ಜಿಂಕೆ – ಹುಲಿಯ ಚರ್ಮ, ಮೀನಿನ ವಾಸ್ತು, ಹಾವಿನ ವಿಷ, ಸಾರಂಗದ ಕೊಂಬು, ಆನೆ – ಕರಡಿಯ ಕೂದಲು ಹೀಗೆ ಕೆಲವು ಸಂರಕ್ಷಿತ ಪ್ರಾಣಿಗಳ ವಸ್ತುಗಳನ್ನು ಉಪಯೋಗಿಸುವ ಖಯಾಲಿ..ಪ್ರಕೃತಿಯ ಮಡಿಲಿನ ರಾಷ್ಟ್ರಕವಿ ಕುವೆಂಪು ಒಂದು ಕಡೆ ಹೇಳುತ್ತಾರೆ ” ಹೂವು ಬಳ್ಳಿಗೆ ಅಲಂಕಾರವೇ ಹೊರತು ವಿಗ್ರಹಕ್ಕಲ್ಲ”. ಹಾಗೆಯೇ ವಚನಕಾರ ಅಂಬಿಗರ ಚೌಡಯ್ಯ ಒಂದು ವಚನದಲ್ಲಿ ಹೇಳುವ ಸಾರಾಂಶ ಹೀಗಿದೆ..”ಆರೈಕೆಗೆ ಬಿತ್ತಿದ ಗಿಡದ ಹೂವನ್ನು ಕೊಯ್ದು, ಊರಿನವರು ಬಾಯಾರಿಕೆಗಾಗಿ ಕಟ್ಟಿಸಿದ ಕೆರೆಯ ನೀರನ್ನು ತಂದು, ನಾಡಿನ ಜನರೆಲ್ಲ ನೋಡಲಿ ಎಂದು ಆಡಂಬರಕ್ಕಾಗಿ, ಬಹಿರಂಗವಾಗಿ ಪೂಜೆ ಮಾಡುವುದು ತಪ್ಪು. ಹಾಗೆ ಪೂಜೆ ಮಾಡುವುದರಿಂದ ಅದರ ಪುಣ್ಯ ಹೂವಿಗೋ, ನೀರಿಗೋ ಅಥವಾ ಪೂಜಿಸಿದ ಮನುಷ್ಯನಿಗೋ ನನಗಂತೂ ಗೊತ್ತಿಲ್ಲ. ನಿನಗಾದರೂ ಗೊತ್ತಿದ್ದರೆ ಹೇಳು ಎಂದು ಅಂಬಿಗರ ಚೌಡಯ್ಯ ತನ್ನ ಇಷ್ಟ ದೈವವನ್ನು ಕೇಳುತ್ತಾರೆ “ಆದರೆ ಈ ಮೂರ್ಖ…

Read More

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಂಗಳವಾರ ಸಿಎಂ ಸಿದ್ದರಾಮಯ್ಯ ಅವರ ಕಟ್ಟಾ ಬೆಂಬಲಿಗರಾಗಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದು, ಗೌಪ್ಯ ಸಭೆ ನಡೆಸಿದ್ದಾರೆ.ಕ್ರೆಸೆಂಟ್ ರಸ್ತೆಯಲ್ಲಿರುವ ಸತೀಶ್ ಜಾರಕಿಹೊಳಿ ಅವರ ಸರ್ಕಾರಿ ನಿವಾಸದಲ್ಲಿ ನಡೆದಿರುವ ಈ ಸಭೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದು, ವಿಶೇಷವಾಗಿ ಕಾಂಗ್ರೆಸ್‌ನಲ್ಲಿ ಊಹಾಪೋಹಗಳನ್ನು ಹುಟ್ಟುಹಾಕಿದೆ.ಸಭೆ ಮುಗಿದ ಕೂಡಲೇ ಶಿವಕುಮಾರ್ ನವದೆಹಲಿಗೆ ತೆರಳಿದ್ದಾರೆ. ಈ ಹಿಂದೆ ಜಾರಕಿಹೊಳಿ ತಮ್ಮ ತವರು ಜಿಲ್ಲೆ ಬೆಳಗಾವಿಯಲ್ಲಿ ಶಿವಕುಮಾರ್ ಹಸ್ತಕ್ಷೇಪದ ಬಗ್ಗೆ ತಮ್ಮ ಆಕ್ಷೇಪವನ್ನು ವ್ಯಕ್ತಪಡಿಸಿದ್ದರು. ಜಿಲ್ಲೆಯಲ್ಲಿ ಜಾರಕಿಹೊಳಿ ಕುಟುಂಬದ ಪ್ರಾಬಲ್ಯಕ್ಕೆ ಸವಾಲು ಹಾಕಿ ಲಿಂಗಾಯತ ನಾಯಕಿಯಾಗಿ ಹೊರಹೊಮ್ಮುತ್ತಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಶಿವಕುಮಾರ್ ನೀಡಿದ ಪ್ರಾಮುಖ್ಯತೆ ಮತ್ತು ಬೆಂಬಲದಿಂದ ಪಿಡಬ್ಲ್ಯೂಡಿ ಸಚಿವರು ಅಸಮಾಧಾನಗೊಂಡಿದ್ದರು.ಇತ್ತೀಚೆಗೆ ಶಿವಕುಮಾರ್ ಬೆಳಗಾವಿಗೆ ಆಗಮಿಸಿದಾಗ ಅವರಿಗೆ ಸ್ವಾಗತ ಕೋರುವ ಕಾರ್ಯಕ್ರಮದಿಂದಲೂ ಸತೀಶ್ ಜಾರಕಿಹೊಳಿ ಹೊರಗುಳಿದಿದ್ದರು. ಅಲ್ಲದೇ, ಶಿವಕುಮಾರ್ ಅವರನ್ನು ಹೊರಗಿಟ್ಟು ಸಿಎಂ ಸಿದ್ದರಾಮಯ್ಯ ಅವರು ಭಾಗವಹಿಸಿದ್ದ ಡಿನ್ನರ್ ಮೀಟ್‌ನಲ್ಲಿ ಹಾಜರಾಗಿದ್ದರು.…

Read More

ಸಿಂದಗಿ: ಹೃದಯಕ್ಕೆ ರಕ್ತದ ಹರಿವು ಕಡಿಮೆಯಾದಾಗ ಅಥವಾ ಕೊನೆಗೊಂಡಾಗ ಹೃದಯಾಘಾತ ಸಂಭವಿಸುತ್ತದೆ ಎಂದು ಹೃದಯ ರೋಗ ತಜ್ಞ ಡಾ.ಗೌತಮ ವಗ್ಗರ ಹೇಳಿದರು.ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಮಹಾ ಶಿವಯೋಗಿಗಳ 83 ನೇ ಪುಣ್ಯಸ್ಮರಣೋತ್ಸವದ ಹಾಗೂ ಜಾತ್ರಾ ಮಹೋತ್ಸವದ ನಿಮಿತ್ಯ ಎಮ್ಮಿಗನೂರು ಜಡೆಸಿದ್ದೇಶ್ವರ ಮಹಾ ಶಿವಯೋಗಿಗಳ ಪ್ರವಚನದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.ಹೃದಯಕ್ಕೆ ಆಮ್ಲಜನಕ-ಸಮೃದ್ಧ ರಕ್ತದ ಕೊರತೆಯು ಪೀಡಿತ ಪ್ರದೇಶಕ್ಕೆ ಹಾನಿಯನ್ನು ಉಂಟುಮಾಡಬಹುದು. ಪರಿಣಾಮವಾಗಿ, ಹೃದಯ ಸ್ನಾಯು ಕ್ಷೀಣಿಸಲು ಪ್ರಾರಂಭಿಸುತ್ತದೆ.ನಿಮ್ಮ ಹೃದಯವು ಸರಿಯಾಗಿ ಕಾರ್ಯನಿರ್ವಹಿಸಲು ಅಗತ್ಯವಿರುವ ರಕ್ತ ಮತ್ತು ಆಮ್ಲಜನಕವನ್ನು ಪಡೆಯದಿದ್ದರೆ, ನೀವು ಹೃದಯ ವೈಫಲ್ಯ ಮತ್ತು ಇತರ ಹಾನಿಕಾರಕ ಪರಿಣಾಮಗಳನ್ನು ಪಡೆಯುವ ಸಾಧ್ಯತೆ ಹೆಚ್ಚು.ಹೃದಯಾಘಾತವು ನಿಮ್ಮ ಜೀವಕ್ಕೆ ಅಪಾಯವನ್ನುಂಟುಮಾಡುವ ತೀವ್ರವಾದ ವೈದ್ಯಕೀಯ ತುರ್ತುಸ್ಥಿತಿಯಾಗಿದೆ. ನಿಮ್ಮ ಹೃದಯದ ರಕ್ತದ ಹರಿವನ್ನು ಸಹಜ ಸ್ಥಿತಿಗೆ ತರಲು ನೀವು ಎಷ್ಟು ಬೇಗನೆ ಚಿಕಿತ್ಸೆಯನ್ನು ಪಡೆಯುವ, ಯಶಸ್ವಿ ಶಸ್ತ್ರಚಿಕಿತ್ಸೆ ಹೊಂದುವ ಸಾಧ್ಯತೆಗಳು ಉತ್ತಮವಾಗಿರುತ್ತದೆ. ಯುವ ಜನತೆ ದುಶ್ಚಟಗಳಿಂದ ದೂರವಿದ್ದು ಆರೋಗ್ಯವಂತರಾಗಿ ಬಾಳಬೇಕು ಎಂದು…

Read More

ಅಧಿಕಾರಿಗಳ ಅಸಮರ್ಪಕ ನಿರ್ವಹಣೆಗೆ ಬೇಸತ್ತ ಶಾಸಕ ಯಶವಂತರಾಯಗೌಡ ಎಚ್ಚರಿಕೆ! ವಿಜಯಪುರ: ಇಂಡಿ ಮತಕ್ಷೇತ್ರದ ಕೆರೆ ಮತ್ತು ಕಾಲುವೆಗಳಿಗೆ ನೀರು ಹರಿಸದಿದ್ದರೆ ರಾಜೀನಾಮೆ ನೀಡುವುದಾಗಿ ಇಂಡಿ ಆಡಳಿತಾರೂಢ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ವಿ. ಪಾಟೀಲ ಎಚ್ಚರಿಕೆ ನೀಡಿದ್ದಾರೆ.ಮಂಗಳವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀರಾವರಿ ಯೋಜನೆಗಳಡಿ ಇಂಡಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಭೌತಿಕವಾಗಿ ಕಾಮಗಾರಿಗಳು ಮುಗಿದಿವೆ.  ಆದರೆ, ಈ ಯೋಜನೆಗಳು ಪೂರ್ಣಗೊಂಡು 22 ವರ್ಷಗಳು ಕಳೆದರೂ ಈವರೆಗೂ ಕಾಲುವೆಯ ಟೇಲ್ ಎಂಡ್(ಕೊನೆಯ ತುದಿ) ವರೆಗೂ ನೀರು ಹರಿಯುತ್ತಿಲ್ಲ. ಈಗ ಭೀಕರ ಬರ ಎದುರಾಗಿರುವ ಹಿನ್ನಲೆಯಲ್ಲಿ ರೈತರು, ಜನ, ಜಾನುವಾರುಗಳು ಸಂಕಷ್ಟದಲ್ಲಿದ್ದಾರೆ. ಅಧಿಕಾರಿಗಳ ವೈಫಲ್ಯದಿಂದಾಗಿ ನೀರು ಬರುತ್ತಿಲ್ಲ.  ಕೂಡಲೇ ನೀರು ಹರಿಸದಿದ್ದರೆ ಅಧಿಕಾರದಲ್ಲಿದ್ದರೂ ಪ್ರಯೋಜನವಿಲ್ಲ. ಹೀಗಾಗಿ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.ಜನಪ್ರತಿನಿಧಿಗಳು ಜನರಿಗೆ ಉತ್ತರದಾಯಿ ಆಗಿರಬೇಕು. ಜನರ ಆಶಯಗಳನ್ನು ಈಡೇರಿಸಲು ಆಗದಿದ್ದರೆ ರಾಜಕೀಯ ನಿವೃತ್ತಿಯಾಗಬೇಕು ಅಥವಾ ರಾಜಿನಾಮೆ‌ ನೀಡಬೇಕು. ಇಂಡಿ ಮತಕ್ಷೇತ್ರದ ಕಟ್ಟ ಕಡೆಯ ರೈತರಿಗೆ ನೀರು ಸಿಗುತ್ತಿಲ್ಲ. ಜನರಿಗೆ ನೀರು…

Read More

ವಿಜಯಪುರ: ಭಾರತ ಸರ್ಕಾರ, ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕೇಂದ್ರ ಸಂವಹನ ಇಲಾಖೆ, ವಿಜಯಪುರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ನೆಹರು ಯುವ ಕೇಂದ್ರ, ವಿಜಯಪುರ ಇವರುಗಳ ಸಹಯೋಗದಲ್ಲಿ ನಗರದ ಪಿ ಡಿ ಜೆ ಪದವಿ ವೂರ್ವ ಮಹಾವಿದ್ಯಾಲಯದಲ್ಲಿ ನವೆಂಬರ್ ೦೮ ರಿಂದ ೧೦ರವರೆಗೆ ಸ್ವಚ್ಛ ಭಾರತ, ಏಕ ಭಾರತ ಶ್ರೇಷ್ಠ ಭಾರತ, ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ, ಕೇಂದ್ರ ಸರ್ಕಾರದ ಯೋಜನೆಗಳು, ಪ್ರಧಾನಮಂತ್ರಿಯವರ ದೂರದರ್ಶಿತ್ವ-೨೦೪೭, ವೋಕಲ್ ಪಾರ್ ಲೋಕಲ್ ಹಾಗೂ ಇತರೆ ಯೋಜನೆಗಳ ಕುರಿತ ಛಾಯಾಚಿತ್ರ ಪ್ರದರ್ಶನ ಮತ್ತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಉದ್ಘಾಟನಾ ಕಾರ‍್ಯಕ್ರಮವನ್ನು ನವೆಂಬರ್ ೮ರಂದು ಬೆಳಗ್ಗೆ ೧೦:೩೦ಕ್ಕೆ ಏರ್ಪಡಿಸಲಾಗಿದೆ. ವಿಜಯಪುರ ಸಂಸದರಾದ ರಮೇಶ್ ಜಿಗಜಿಣಗಿ ಅವರು ಕರ‍್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಭಾಗವಹಿಸಲಿದ್ದು, ವಿವಿಧ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read More

ವಿಜಯಪುರ: ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂದ ನವೆಂಬರ್ ೯ ರಂದು ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಾ ಕೇಂದ್ರದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಯಲಿದೆ.ಅಂದು ಬೆಳಿಗ್ಗೆ ೧೦-೩೦ ಗಂಟೆಯಿಂದ ಪೋಲಿಸ್ ಅಧೀಕ್ಷಕರು (ಮೊ:೯೩೬೪೦೬೨೫೨೮), ಪೊಲೀಸ್ ಉಪಾಧೀಕ್ಷಕರು (ಮೊ:೯೩೬೪೦೬೨೫೫೭), ಪೊಲೀಸ್ ಇನ್ಸಪೆಕ್ಟರ್-೧ (ಮೊ:೯೩೬೪೦೬೨೬೪೦), ಪೊಲೀಸ್ ಇನ್ಸಪೆಕ್ಟರ್-೨(ಮೊ:೯೩೬೪೦೬೨೬೩೯) ದೇವರ ಹಿಪ್ಪರಗಿಯ ಶ್ರೀ ಶ್ರೀ ಶ್ರೀ ೧೦೦೮ ಜಗದ್ಗುರು ಪಂಚಾಚಾರ್ಯ ಕಲ್ಯಾಣ ಮಂಟಪದಲ್ಲಿ ಲೋಕಾಯುಕ್ತ ಕಾಯ್ದೆ ಮತ್ತು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿಯಲ್ಲಿ ಸಾರ್ವಜನಿಕರಿಂದ ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡಿವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ.ಸರ್ಕಾರಿ ಕಚೇರಿಗಳಲ್ಲಿ ಅಧಿಕೃತವಾಗಿ ಕೆಲಸಗಳನ್ನು ಮಾಡಿಕೊಡುವಲ್ಲಿ ವಿಳಂಬ ಹಾಗೂ ಲಂಚದ ಬೇಡಿಕೆ, ಇನ್ನಿತರೆ ತೊಂದರೆ ನೀಡುತ್ತಿರುವ ಅಧಿಕಾರಿ-ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದ್ದು, ಸ್ಥಳದಲ್ಲಿ ಪರಿಹಾರ ಕಂಡುಕೊಳ್ಳಬಹುದಾದ ದೂರುಗಳನ್ನು ಸ್ಥಳೀಯ ಅಧಿಕಾರಿಗಳ ಸಹಕಾರದೊಂದಿಗೆ ಇತ್ಯರ್ಥಪಡಿಸಲು ಪ್ರಯತ್ನಿಸಲಾಗುವುದು. ಸರ್ಕಾರಿ ಅಧಿಕಾರಿಗಳ ಅಕ್ರಮ ಆಸ್ತಿ ಸಂಪಾದನೆ ಸರಕಾರಿ ಹಣದ ದುರುಪಯೋಗ, ಕಳಪೆ ಕಾಮಗಾರಿ ಹಾಗೂ ಇತರೆ ಯಾವುದೇ ರೀತಿಯ ಭ್ರಷ್ಟಾಚಾರ ದೂರುಗಳಿದ್ದಲ್ಲಿ ಹೆಚ್ಚಿನ ಮಾಹಿತಿಗಾಗಿ ಲೋಕಾಯುಕ್ತ…

Read More

ನೀರು ಪೋಲು ಮಾಡದೆ ಕೆಬಿಜೆಎನ್ನೆಲ್ ಅಧಿಕಾರಿಗಳೊಂದಿಗೆ ಸಹಕರಿಸಲು ಮನವಿ ವಿಜಯಪುರ: ನೀರಾವರಿ ಬಳಕೆಗಾಗಿ ಲಭ್ಯವಾಗಬಹುದಾದ ನೀರಿನ ಪ್ರಮಾಣ ಕೇವಲ ೫ ಟಿ.ಎಂ.ಸಿ. ಮಾತ್ರ ಇದ್ದು, ಲಭ್ಯವಾಗುವ ನೀರಿನ ಪ್ರಮಾಣವು ಸಹ ಭಾಷ್ಪಿಕರಣಗೊಳ್ಳುವ ಸಂಭವನೀಯತೆ ಇರುವುದರಿಂದ ಅಗತ್ಯವಿರುವ ೭೫ ಟಿಎಂಸಿ ನೀರು ಲಭ್ಯವಿಲ್ಲದೇ ಇರುವುದರಿಂದ ೨೦೨೩-೨೪ನೇ ಸಾಲಿನ ಹಿಂಗಾರು ಹಂಗಾಮಿಗೆ ಕಾಲುವೆ ಜಾಲಕ್ಕೆ ನೀರು ಪೂರೈಸಲು ಸಾಧ್ಯವಾಗುವುದಿಲ್ಲವೆಂದು ತೀರ್ಮಾನಿಸಲಾಯಿತು.ಮಂಗಳವಾರ ಆಲಮಟ್ಟಿಯಲ್ಲಿ ಅಬಕಾರಿ ಖಾತೆ ಸಚಿವರೂ ಆದ ಕೃಷ್ಣಾ ಮೇಲ್ದಂಡೆ ಯೋಜನೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರಾದ ಆರ್.ಬಿ.ತಿಮ್ಮಾಪುರ ಅವರ ಅಧ್ಯಕ್ಷತೆಯಲ್ಲಿ ಜರುಗಿದ ೨೦೨೩-೨೪ನೇ ಸಾಲಿನ ಹಿಂಗಾರು ಹಂಗಾಮಿನ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.ಸಧ್ಯ ಚಾಲ್ತಿಯಲ್ಲಿರುವ ವೇಳಾಪಟ್ಟಿಯಂತೆ ದಿನಾಂಕ : ೧೮-೧೧-೨೦೨೩ರ ವರೆಗೆ ಕಾಲುವೆ ಜಾಲಕ್ಕೆ ನೀರು ಪೂರೈಸುವುದನ್ನು ಚಾಲ್ತಿಯಲ್ಲಿಡಲಾಗುವುದು. ತದನಂತರ, ದಿನಾಂಕ : ೧೯-೧೧-೨೦೨೩ ರಿಂದ ೨೬-೧೧-೨೦೨೩ರವರೆಗೆ ೮ ದಿನ ಕಾಲುವೆ ಜಾಲಕ್ಕೆ ನೀರು ಪೂರೈಸುವುದನ್ನು ಸ್ಥಗಿತಗೊಳಿಸಲಾಗುವುದು. ತದನಂತರ, ದಿನಾಂಕ : ೨೭-೧೧-೨೦೨೩ ರಿಂದ ೦೪-೧೨-೨೦೨೩ರವರೆಗೆ ೮ ದಿನಗಳಿಗೆ…

Read More