Subscribe to Updates
Get the latest creative news from FooBar about art, design and business.
Author: editor.udayarashmi@gmail.com
Udayarashmi kannada daily newspaper
ವಿಜಯಪುರ: ಕನ್ನಡ ಭಾಷೆಯದ್ದು ಅವಿಚ್ಛಿನ್ನ ಪರಂಪರೆ. ಇದಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದ್ದು, ಅದ್ಭುತವಾದ ಭವ್ಯ ಪರಂಪರೆ ಹೊಂದಿದೆ. ಕನ್ನಡ ಭಾಷೆಯನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸುವ ಕೆಲಸವನ್ನು ಇಂದಿನ ಮಕ್ಕಳು ರೂಢಿಸಿಕೊಳ್ಳಬೇಕು ಎಂದು ಮುಖ್ಯಶಿಕ್ಷಕ ಸುರೇಶಗೌಡ ಬಿರಾದಾರ ಹೇಳಿದರು.ಅವರು ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ಕನ್ನಡ ರಾಜ್ಯೋತ್ಸವ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಶಿಕ್ಷಕ ಸಂತೋಷ ಬಂಡೆ ಮಾತನಾಡಿದರು.ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಶಂಕರ ಹುಣಶ್ಯಾಳ, ಕನ್ನಡ ಭಾಷೆ, ನಾಡು- ನುಡಿ- ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಕನ್ನಡಿಗರು ಜವಾಬ್ದಾರಿ ಹೊತ್ತುಕೊಳ್ಳಬೇಕು. ಅನೇಕ ಮಹನೀಯರು ಕನ್ನಡದ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಅವುಗಳನ್ನು ಉಳಿಸುವ ಹೊಣೆ ನಮ್ಮೆಲ್ಲರ ಮೇಲಿದೆ ಎಂದು ಹೇಳಿದರು.ಸಂಸ್ಥೆಯ ಕಾರ್ಯದರ್ಶಿ ಸುನಂದಾ ಹುಣಶ್ಯಾಳ,ಶಿಕ್ಷಕರಾದ ರಾಘು ಮೊಗಳ, ಭೀಮಾಶಂಕರ ಕೋರೆ, ಬಸಮ್ಮ ವಡಗೇರಿ, ಜಯಶ್ರೀ ಬಂಗಾರಿ, ಮಧುಮತಿ ನಿಕ್ಕಂ, ಸರೋಜಿನಿ ಕಟ್ಟಿಮನಿ, ರೇಣುಕಾ ಭಜಂತ್ರಿ, ಎಲ್ ಎಂ ಮೇತ್ರಿ ಹಾಗೂ ಸಿಬ್ಬಂದಿಗಳಾದ ವೀರೇಶ ಹುಣಶ್ಯಾಳ,ಸಿದ್ದಣ್ಣ…
ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಠನೆ ಬೆಂಗಳೂರು: ರಾಜ್ಯದಲ್ಲಿ ನೀರಾವರಿ ಪಂಪ್‍ಸೆಟ್‍ಗಳಿಗೆ 7 ಗಂಟೆಗಳ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ನಂತರ ಅವರು ಈ ವಿಷಯ ತಿಳಿಸಿದರು.ರಾಜ್ಯದಲ್ಲಿ ವಿದ್ಯುತ್ ಕೊರತೆಯಿದೆ ಎಂದು ನೀರಾವರಿ ಪಂಪ್‍ಸೆಟ್‍ಗಳಿಗೆ ಏಳು ಗಂಟೆಗಳ ಕಾಲ ನೀರಾವರಿ ಪಂಪ್‍ಸೆಟ್‍ಗಳಿಗೆ ವಿದ್ಯುತ್ ನೀಡಲು ಮೊದಲೇ ಘೋಷಣೆ ಮಾಡಿದ್ದೆವು. ಕೆಲವು ಜನ ಸತತವಾಗಿ ಮೂರು ಫೇಸ್‍ನಲ್ಲಿ 5 ಗಂಟೆ ವಿದ್ಯುತ್ ನೀಡಿದರೆ ಸಾಕು ಎಂದಿದ್ದರು. ಅದಕ್ಕಾಗಿ 5 ಗಂಟೆಗಳ ಕಾಲ 3 ಫೇಸ್‍ನಲ್ಲಿ ವಿದ್ಯುತ್ ನೀಡುವಂತೆ ಸೂಚನೆ ನೀಡಲಾಗಿತ್ತು. ರಾಯಚೂರು, ಕೊಪ್ಪಳ, ಬಳ್ಳಾರಿ, ಯಾದಗಿರಿ ರೈತರು ಭೇಟಿ ಮಾಡಿ ಭತ್ತ ಬೆಳೆಯುವುದರಿಂದ 5 ಗಂಟೆಗಳ ಕಾಲ ವಿದ್ಯುತ್ ನೀಡುವುದು ಸಾಕಾಗುವುದಿಲ್ಲ, 7 ಗಂಟೆಗಳ ಕಾಲ ನೀಡಬೇಕೆಂದು ಎಂದು ಮನವಿ ಮಾಡಿದರು. ವಿದ್ಯುತ್ ಉತ್ಪಾದನೆಯಲ್ಲಿ ಹೆಚ್ಚಳರಾಯಚೂರು, ಬಳ್ಳಾರಿಯಲ್ಲಿ ಥರ್ಮಲ್ ಘಟಕಗಳಿದ್ದು, ರಾಜ್ಯದಲ್ಲಿ ಥರ್ಮಲ್, ಜಲವಿದ್ಯುತ್, ಸೋಲಾರ್ ಮೂಲಕ ವಿದ್ಯುತ್…
ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆ ವಿಚಾರ ರಾಷ್ಟ್ರ ರಾಜಕಾರಣದಲ್ಲೂ ಸದ್ದು ಮಾಡುತ್ತಿದ್ದು, ಸಿದ್ದರಾಮಯ್ಯ ಅವರ ಸಿಎಂ ಸ್ಥಾನ ಎಷ್ಟು ದಿನ ಇರುತ್ತದೆ ಗೊತ್ತಿಲ್ಲ ಎಂದು ಮೋದಿ ವ್ಯಂಗ್ಯವಾಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.ಈ ಕುರಿತು ಮಾತನಾಡಿದ ಸಿದ್ದರಾಮಯ್ಯ, ಈಗಿನ ಮುಖ್ಯಮಂತ್ರಿಗಳು ಎಷ್ಟು ಅವಧಿಗೆ ಮುಖ್ಯಮಂತ್ರಿಗಳಾಗಿ ಉಳಿಯಲಿದ್ದಾರೆ ಎಂಬ ಪ್ರಧಾನಿಯವರ ರಾಜಕೀಯ ಭಾಷಣದಲ್ಲಿನ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ಕೇವಲ ಆರೋಪ ಮಾಡಬೇಕೆಂಬ ಉದ್ದೇಶದಿಂದ ಆರೋಪ ಮಾಡಲಾಗುತ್ತಿದ್ದು, ಇವೆಲ್ಲವೂ ಸುಳ್ಳಿನ ಕಂತೆ ಎಂದರು.ಮಧ್ಯಪ್ರದೇಶದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ಕರ್ನಾಟಕವನ್ನೇ ಗುರಿ ಮಾಡಿ ಮಾತನಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಪ್ರಚಾರ ಮಾಡಿದಲ್ಲೆಲ್ಲಾ ಬಿಜೆಪಿ ಸೋತಿದೆ. ರಾಜ್ಯದಲ್ಲಿ ಇದುವರೆಗೆ ವಿರೋಧಪಕ್ಷದ ನಾಯಕರನ್ನು ಆಯ್ಕೆಮಾಡಿಲ್ಲ. ಇದು ಬಿಜೆಪಿಯು ದಿವಾಳಿಯಾಗಿರುವುದನ್ನು ಸೂಚಿಸುತ್ತದೆ ಎಂದರು.ಸಿಎಂ ಮತ್ತು ಡಿಸಿಎಂ ರಾಜ್ಯವನ್ನು ಲೂಟಿ ಮಾಡುತ್ತಿದ್ದಾರೆ ಎಂಬ ಪ್ರಧಾನಮಂತ್ರಿಗಳ ಭಾಷಣದಲ್ಲಿ ಮಾಡಿರುವ ಟೀಕೆಗೆ ಪ್ರತ್ಯುತ್ತರ ನೀಡಿದ ಸಿದ್ದರಾಮಯ್ಯ, 40 ಪರ್ಸೆಂಟ್ ಕಮೀಷನ್ ಸರ್ಕಾರ ಎಂಬ ಆರೋಪ ಬಿಜೆಪಿ ಸರ್ಕಾರದ ಮೇಲಿತ್ತು. ಈ…
ಲೂಟಿಗಾಗಿ ಸಿಎಂ-ಡಿಸಿಎಂ ನಡುವೆ ಪೈಪೋಟಿ | ಅಭಿವೃದ್ಧಿ ಕುಂಠಿತ | ಕರ್ನಾಟಕ ಹಾಳಾಗಿದೆ ಸಂಚಲನ ಮೂಡಿಸಿದ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ಬೆಂಗಳೂರು: ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕ ಹಾಳಾಗಿದ್ದು, ತಾವು ಎಷ್ಟು ದಿನ ರಾಜ್ಯದ ಮುಖ್ಯಮಂತ್ರಿಯಾಗಿರುತ್ತೇನೆ ಎಂಬುದು ಸಿದ್ದರಾಮಯ್ಯ ಅವರಿಗೇ ತಿಳಿಯದಂತಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನೀಡಿರುವ ಹೇಳಿಕೆ ಸಂಚಲನ ಮೂಡಿಸಿದೆ.ಮಧ್ಯಪ್ರದೇಶದ ಖಂಡವಾದಲ್ಲಿ ಭಾನುವಾರ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕೇವಲ ಆರು ತಿಂಗಳ ಹಿಂದೆ ರಚನೆಯಾದ ಕಾಂಗ್ರೆಸ್ ಸರ್ಕಾರವನ್ನು ನೋಡಿದರೆ ಎಲ್ಲವೂ ಗೊತ್ತಾಗುತ್ತದೆ. ಸಿಎಂ ಸಿದ್ದರಾಮಯ್ಯ ಎಷ್ಟು ದಿನ ರಾಜ್ಯಭಾರ ನಡೆಸುತ್ತಾರೋ ಎಂದು ಗೊತ್ತಿಲ್ಲ ಎಂದು ಹೇಳಿದ್ದಾರೆ.ಕರ್ನಾಟಕದಲ್ಲಿ ಮುಖ್ಯಮಂತ್ರಿಯ ಮುಂದುವರಿಕೆ ಬಗ್ಗೆಯೇ ಗೊಂದಲಗಳು ಎದ್ದಿದ್ದು, ಅಭಿವೃದ್ಧಿ ಕುಂಠಿತಗೊಂಡಿದೆ. ಅಧಿಕಾರ ಹಿಡಿದಿರುವ ಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ಭಾಗಿಯಾದ್ದರಿಂದ ಕರ್ನಾಟಕವನ್ನು ಅವರು ಹಾಳು ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.ಕಾಂಗ್ರೆಸ್ ಪಕ್ಷ ಎಡವಟ್ಟಿನಿಂದ ಯಾವಾಗೆಲ್ಲಾ ಸರ್ಕಾರ ರಚನೆ ಮಾಡುತ್ತದೋ, ಆಗೆಲ್ಲಾ ಅಧಿಕಾರಕ್ಕೇರಿ ರಾಜ್ಯವನ್ನು ಲೂಟಿ ಮಾಡಲು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ನಡುವೆ ಪೈಪೋಟಿ ಏರ್ಪಡುತ್ತದೆ.…
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ ವಿವೇಕಾನಂದ ಎಚ್.ಕೆ, ಬೆಂಗಳೂರು ಈಗಲೂ ಅಸ್ತಿತ್ವದಲ್ಲಿರುವ ಒಂದು ವೃತ್ತಿ ಅಥವಾ ಹೊಟ್ಟೆ ಪಾಡಿನ ಮಾರ್ಗ..ಸಣ್ಣ ವರ್ಗ ಅಥವಾ ವೃತ್ತಿಯೊಂದು ಅಸ್ತಿತ್ವದಲ್ಲಿದೆ. ಸಾಮಾನ್ಯ ಜನರಿಗೆ ಇದು ಅಷ್ಟು ಪರಿಚಿತವಲ್ಲ. ಎಲ್ಲೋ ಕೆಲವು ವೇಳೆ ಕೇಳಿರಬಹುದು ಅಥವಾ ಓದಿರಬಹುದು. ಆದರೆ ಸಮಾಜದ ಆಂತರ್ಯದಲ್ಲಿ ಈಗಲೂ ಚಲಾವಣೆಯಲ್ಲಿದೆ.ಭಾರತೀಯ ಸಮಾಜದಲ್ಲಿ ಸಾಮಾನ್ಯವಾಗಿ ವೇಶ್ಯಾ ವೃತ್ತಿಯನ್ನು ಅತ್ಯಂತ ಕೆಟ್ಟ ಕೀಳು ವೃತ್ತಿ ಅಥವಾ ದಂಧೆ ಎಂದು ಭಾವಿಸಲಾಗುತ್ತದೆ. ( ವಾಸ್ತವದಲ್ಲಿ ಮತ್ತು ಎಲ್ಲವನ್ನೂ ಪರಿಗಣನೆಗೆ ತೆಗೆದುಕೊಂಡರೆ ಅದು ನಿಜವಲ್ಲ. ಅದು ಬೇರೆ ವಿಷಯ ) ಆದರೆ ಅದಕ್ಕಿಂತಲೂ ಅತ್ಯಂತ ನೀಚ ವೃತ್ತಿಯೊಂದಿದೆ. ಇದು ಮಾನವೀಯ ಸಂಬಂಧಗಳ ಎಲ್ಲಾ ಮಿತಿಯನ್ನು ದಾಟಿ ಲೆಕ್ಕಕ್ಕೆ ಸಿಗುವುದಿಲ್ಲ. ಅಸಹ್ಯ ಎಂದು ಕರೆಯಬಹುದಾದ ವೃತ್ತಿ ಇದು.ಆಳ್ಕಟಿಗಳು ಅಥವಾ ಪಿಂಪಗಳು ಅಥವಾ ತಡೆಹಿಡುಕರು ಅಥವಾ ಮಾಮಾಗಳು ಎಂದು ಲೋಕಾಭಿರಾಮವಾಗಿ ಕರೆಯಲಾಗುವ ಜನರು ಮಾಡುವ ವೃತ್ತಿಯೇ ಇದು.ಮನುಷ್ಯರನ್ನು, ಅವರ ದೇಹವನ್ನು, ಅವರ ಭಾವನೆಗಳನ್ನು, ಅವರ ನಂಬಿಕೆಗಳನ್ನು, ಅವರ ಸಂಬಂಧಗಳನ್ನು, ಸಮಾಜದ ಮೌಲ್ಯಗಳನ್ನು…
ಇಂಡಿ: ಜ್ಞಾನದ ಹಸಿವು ಎಲ್ಲರಲ್ಲಿರಬೇಕು. ಅಧ್ಯಾತ್ಮಿಕ ಸಂಸ್ಕೃತಿಯೊಂದಿಗೆ ವೈಚಾರಿಕತೆಯನ್ನು ಬೆಳೆಸಿಕೊಳ್ಳಬೇಕು. ಎಲ್ಲರೂ ತಮ್ಮ ಮನಸ್ಸನ್ನು ಶುದ್ಧವಾಗಿಟ್ಟುಕೊಳ್ಳಬೇಕು. ನಿತ್ಯ ಯೋಗ, ಧ್ಯಾನ ಮಾಡುತ್ತಾ, ಸಾತ್ವಿಕತೆಯ ಬದುಕನ್ನು ರೂಢಿಸಿಕೊಳ್ಳಬೇಕು ಎಂದು ಅಥರ್ಗಾ ಗುರುದೇವಾಶ್ರಮದ ಈಶಪ್ರಸಾದ ಸ್ವಾಮಿಗಳು ಹೇಳಿದರು.ರವಿವಾರ ಸಂಜೆ ತಾಲೂಕಿನ ಅಥರ್ಗಾ ಗ್ರಾಮದ ಹನುಮಾನ ದೇವಸ್ಥಾನದಲ್ಲಿ ನೂತನವಾಗಿ ಪ್ರತಿಷ್ಠಾಪಿಸಲ್ಪಟ್ಟ ನವಗ್ರಹ ಮೂರ್ತಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.ಶಿಕ್ಷಕ ಸಂತೋಷ ಬಂಡೆ ಮಾತನಾಡಿ, ಇಂದಿನ ಮಕ್ಕಳು ಸಂಸ್ಕಾರ, ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ಅಧ್ಯಾತ್ಮಿಕ ಪ್ರವಚನಗಳನ್ನು ಆಲಿಸಬೇಕು. ಗುರು ಹಿರಿಯರನ್ನು ಗೌರವಿಸುತ್ತಾ, ಪ್ರೀತಿ, ವಿಶ್ವಾಸ, ಸಹಕಾರದಿಂದಲೇ ಸಮಾಜದ ಒಳಿತಿಗೆ ದುಡಿಯಬೇಕು ಎಂದು ಹೇಳುತ್ತಾ ನವಗ್ರಹ ಪೂಜೆಯ ಮಹತ್ವವನ್ನು ತಿಳಿಸಿದರು.ನಿವೃತ್ತ ಶಿಕ್ಷಕ ಆರ್ ವ್ಹಿ ಪುರೋಹಿತ ಮಾತನಾಡಿ,ಯುವಕರೇ ಸಮಾಜದ ನಿಜವಾದ ಸಂಪತ್ತು. ಯುವ ಸಮೂಹಕ್ಕೆ ಸಾಂಸ್ಕೃತಿಕ, ಧಾರ್ಮಿಕ ಚಿಂತನೆಗಳ ಮೌಲ್ಯಗಳು ಅಗತ್ಯ. ಅಧ್ಯಾತ್ಮಿಕ ಶಿಕ್ಷಣವನ್ನು ಜೀವನದಲ್ಲಿ ರೂಢಿಸಿಕೊಳ್ಳಬೇಕು. ಆಗಲೇ ಮನುಷ್ಯ ಮನುಷ್ಯನಾಗಿ ಬಾಳಲು ಸಾಧ್ಯ ಎಂದು ಹೇಳಿದರು.ಅಧ್ಯಕ್ಷತೆ ವಹಿಸಿದ್ದ ದೇವಸ್ಥಾನ ಸಮಿತಿ ಅಧ್ಯಕ್ಷ ಶಿವು ನಿಂಬಾಳ ಮಾತನಾಡಿದರು.ಶಿಕ್ಷಕ ಸಿ ಎಸ್…
ಆಲಮಟ್ಟಿ: ರೈಲಿನಡಿ ಬಿದ್ದು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಆಲಮಟ್ಟಿ ರೈಲು ನಿಲ್ದಾಣದ ಸಮೀಪ ಭಾನುವಾರ ರಾತ್ರಿ ಸಂಭವಿಸಿದೆ.ಮೃತ ಯುವಕ ವಿಜಯಪುರ ಬಳಿಯ ಮಖಣಾಪುರ ಗ್ರಾಮದ ನಾಗೇಶ ರಾಮು ತಳೇಕಡೆ (30) ಎಂದು ತಿಳಿದುಬಂದಿದೆ.ಆಲಮಟ್ಟಿ ರೈಲು ನಿಲ್ದಾಣದ ಸಮೀಪ ರಾತ್ರಿ ಈ ಘಟನೆ ನಡೆದಿದೆ. ವಿಜಯಪುರದ ರೈಲ್ವೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿಜಯಪುರ: ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರಾದ ಶರಣಬಸಪ್ಪ ದರ್ಶನಾಪೂರ ಅವರು ನವೆಂಬರ್ ೭ರ ಮಧ್ಯಾಹ್ನ ೧೨ ಗಂಟೆಗೆ ಪರಸನಹಳ್ಳಿದಿಂದ ತಾಳಿಕೋಟಿ, ಮುದ್ದೇಬಿಹಾಳ ಮಾರ್ಗವಾಗಿ ಹೊರಟು, ಮಧ್ಯಾಹ್ನ ೩ ಗಂಟೆಗೆ ಆಲಮಟ್ಟಿ ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತದ ಸಭಾಂಗಣದಲ್ಲಿ ನಡೆಯುವ ಕೃಷ್ಣಾ ಮೇಲ್ದಂಡೆ ಯೋಜನೆಯ ೨೦೨೩-೨೪ನೇ ಸಾಲಿನ ಹಿಂಗಾರು ಹಂಗಾಮಿನ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಭಾಗವಹಿಸುವರು.ಸಂಜೆ ೫:೩೦ ಗಂಟೆಗೆ ಆಲಮಟ್ಟಿಯಿಂದ ರಸ್ತೆ ಮೂಲಕ ಕಲಬುರಗಿಗೆ ಪ್ರಯಾಣ ಬೆಳೆಸುವರು ಎಂದು ಪ್ರಕಟಣೆ ತಿಳಿಸಿದೆ.
ಗ್ರಾಮ ಅಭಿವೃದ್ದಿ ಸಲಹಾ ಸಮಿತಿ ಸಭೆಯಲ್ಲಿ ಡಿಸಿ ಟಿ.ಭೂಬಾಲನ್ ಸೂಚನೆ ವಿಜಯಪುರ: ತೆರಿಗೆಯಿಂದ ಬಂದ ಹಣದಲ್ಲಿ ಮಸೂತಿ, ಕೂಡಗಿ, ತೆಲಗಿ ಮುತ್ತಗಿ & ಗೊಳಸಂಗಿಯಲ್ಲಿ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳುವಂತೆ ಜವಳಿ, ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರೂ ಆದ ಬಸವನಬಾಗೇವಾಡಿ ಮತಕ್ಷೇತ್ರದ ಶಾಸಕ ಶಿವಾನಂದ ಪಾಟೀಲ ಸೂಚಿಸಿದರು.ಸೋಮವಾರ ಕೂಡಗಿ ಎನ್‌ಟಿಪಿಸಿ ಸಭಾಭವನದಲ್ಲಿ ನಡೆದ ೧೧ನೇ ಗ್ರಾಮ ಅಭಿವೃದ್ದಿ ಸಲಹಾ ಸಮಿತಿ ಸಭೆಯಲ್ಲಿ ಭಾಗವಹಿಸಿದ್ದ ಅವರು, ಇನ್ನೂ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ತೀವ್ರವಾಗಿ ಪೂರ್ಣಗೊಳಿಸಬೇಕು ಹಾಗೂ ಬಾಕಿ ಪ್ರಾರಂಭಿಸದೇ ಇರುವ ಕಾಮಗಾರಿಗಳ ಬಗ್ಗೆ ಒಂದು ವಾರದಲ್ಲಿ ಕ್ರಮ ವಹಿಸಿ ಬಳಕೆ ಪ್ರಮಾಣ ಪತ್ರ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.ಎನ್‌ಟಿಪಿಸಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳೀಯರನ್ನು ನೇಮಕಾತಿ ಮಾಡಿಕೊಳ್ಳಬೇಕು. ಸವಳು ಜವಳು ಕುರಿತು ಹೈದರಾಬಾದ್ ತಂತ್ರಜ್ಞರ ವರದಿ ಅಂಶ ಪರಿಶೀಲಿಸಿ ಕ್ರಮ ವಹಿಸಬೇಕು. ಬಾಧಿತ ಗ್ರಾಮದ ಗ್ರಾಮಸ್ಥರ ಸಮಸ್ಯೆಗಳ ಪರಿಹಾರಕ್ಕೆ ಸಾರ್ವಜನಿಕ ಸಂಪರ್ಕ ಅಧಿಕಾರಿಗಳನ್ನು ನೇಮಿಸಬೇಕು. ಪುನರವಸತಿ ಮತ್ತು ಪುನರ್ ನಿರ್ಮಾಣದ ಅನುದಾನದಲ್ಲಿ…
