Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಯಜ್ಞೋಪವೀತ ಧಾರಣೆ ವಿಪ್ರ ಧಾರ್ಮಿಕ ಪರಂಪರೆಯಲ್ಲಿ ಮಹತ್ವದ್ದಾಗಿದೆ ಎಂದು ಶ್ರೀಚಿದಂಬರ ಸೇವಾ ಸಮಿತಿ ಅಧ್ಯಕ್ಷ ನರೇಂದ್ರ ನಾಡಗೌಡ ಹೇಳಿದರು.ಪಟ್ಟಣದ ವಿಠ್ಠಲಮಂದಿರದಲ್ಲಿ ಗುರುವಾರ ವಿಪ್ರ ಸಮುದಾಯದಿಂದ ಜರುಗಿದ ಯಜ್ಞೋಪವೀತ ಧಾರಣೆಯ ಕಾರ್ಯದಲ್ಲಿ ಪಾಲ್ಗೊಂಡು ಮಾತನಾಡಿದರು.ವಿಪ್ರರು ಯಜ್ಞೋಪವೀತವನ್ನು ಸಾಮಾನ್ಯವಾಗಿ ಜನಿವಾರ ಅಥವಾ ಪವಿತ್ರದಾರ ಎಂದು ಕರೆಯುತ್ತಾರೆ. ಜನಿವಾರ ದೇವಋಣ, ಋಷಿಋಣ ಮತ್ತು ಪಿತೃಋಣಗಳನ್ನು ನೆನಪಿಸುವ ಸಂಕೇತವಾಗಿದೆ ಎಂದರು.ನೇತೃತ್ವ ವಹಿಸಿದ ಅಶೋಕ ಭಟ್ ಮಾತನಾಡಿ, ಜನಿವಾರ ವ್ಯಕ್ತಿಗೆ ಸತ್ಯ, ಶಿಸ್ತು, ಸದಾಚಾರ ಮತ್ತು ಕರ್ತವ್ಯನಿಷ್ಠೆಯನ್ನು ಪಾಲಿಸುವ ಜವಾಬ್ದಾರಿಯನ್ನು ನೆನಪಿಸುತ್ತದೆ. ಯಜ್ಞೋಪವೀತವು ಕೇವಲ ಒಂದು ದಾರವಲ್ಲ; ಆಧ್ಯಾತ್ಮಿಕ ಜ್ಞಾನ, ಕರ್ತವ್ಯ ಮತ್ತು ಶಿಸ್ತಿನ ಸಂಕೇತವಾಗಿದೆ ಎಂದರು.ಶ್ರೀಪಾದಭಟ್ ಜೋಶಿ ನೇತೃತ್ವದಲ್ಲಿ ವಿಪ್ರರು ಯಜ್ಞೋಪವೀತ ಧಾರಣೆ ಮಾಡಿದರು. ನಂತರ ವೇದಾಧ್ಯಯನ, ಗಾಯತ್ರಿಮಂತ್ರ ಜಪ ಮುಂತಾದ ಧಾರ್ಮಿಕ ಆಚರಣೆಗಳು ನಡೆದವು.ವೆಂಕಟೇಶ ಕುಲಕರ್ಣಿ, ಚಿದಂಬರ ಕುಲಕರ್ಣಿ, ಪ್ರಮೋದ ನಾಡಗೌಡ, ಕೃಷ್ಣಾಜೀ ಕುಲಕರ್ಣಿ, ಶರತ ಕುಲಕರ್ಣಿ, ಶ್ರೀಧರ ನಾಡಗೌಡ, ಆನಂದ ಕುಲಕರ್ಣಿ, ಅಶೋಕ ಕುಲಕರ್ಣಿ, ಶ್ರೀನಿವಾಸ ಕುಲಕರ್ಣಿ ಸಮರ್ಥ ಜೋಶಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಪ್ರಾದೇಶಿಕ ಕೃಷಿ ಸಂಶೋಧನಾ ಕೇಂದ್ರದಲ್ಲಿ ನಿರ್ವಹಣೆಯಲ್ಲಿರುವ ಅಖಿಲ ಭಾರತ ಸಮನ್ವಯ ಕೃಷಿ ಹವಾಮಾನಶಾಸ್ತ್ರ ಯೋಜನೆಯ ಗ್ರಾಮೀಣ ಕೃಷಿ ಮೌಸಮ್ ಸೇವಾ (ಉಏಒS) ಯೋಜನೆಯಡಿ ಖಾಲಿ ಇರುವ ತಾಂತ್ರಿಕ ಅಧಿಕಾರಿ ತಾತ್ಕಾಲಿಕ ಹುದ್ದೆಯ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಹಿಟ್ನಳ್ಳಿ ಕೃಷಿ ಸಂಶೋಧನಾ ಕೇಂದ್ರದ ಪ್ರಾದೇಶಿಕ ನಿರ್ದೆಶಕರ ಸಹ ಸಂಶೋಧನಾ ನಿರ್ದೇಶಕರ ಕಚೇರಿಯಲ್ಲಿ ಸೆ. ೯ ರಂದು ಬೆಳಿಗ್ಗೆ ೧೦:೩೦ ಗಂಟೆಗೆ ನೇರ ಸಂದರ್ಶನ ನಡೆಯಲಿದೆ.ಹುದ್ದೆಗೆ ಅಗತ್ಯವಿರುವ ಶೈಕ್ಷಣಿಕ ವಿದ್ಯಾರ್ಹತೆ, ಮಾಸಿಕ ವೇತನ ಶ್ರೇಣಿ ಹಾಗೂ ಇತರೆ ನಿಬಂಧನೆಗಳ ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾಲಯದ ವೆಬ್‌ಸೈಟ್ hಣಣಠಿs://siಣes.googಟe.ಛಿom/ಚಿ/uಚಿsಜ.iಟಿ/ಟಿeತಿs/ಣemಠಿoಡಿಚಿಡಿಥಿ-ಚಿಠಿಠಿoiಟಿಣmeಟಿಣ-ಟಿoಣiಜಿiಛಿಚಿಣioಟಿ-ಛಿiಡಿಛಿuಟಚಿಡಿs ಗೆ ಭೇಟಿ ನೀಡಬಹುದು.ನೇರ ಸಂದರ್ಶನಕ್ಕೆ ಹಾಜರಾಗಲು ಬಯಸುವ ಅಭ್ಯರ್ಥಿಗಳು ತಮ್ಮ ಅಗತ್ಯ ಮೂಲ ದಾಖಲೆಗಳು ಹಾಗೂ ಅರ್ಜಿಗಳೊಂದಿಗೆ ನಿಗದಿತ ಸಮಯಕ್ಕೆ ಹಿಟ್ಟಳ್ಳಿ ಫಾರ್ಮ್ ಕಚೇರಿಯಲ್ಲಿ ಇರಬೇಕು.ಹೆಚ್ಚಿನ ವಿವರಗಳಿಗಾಗಿ ಪ್ರಾದೇಶಿಕ ಕೃಷಿ ಸಂಶೋಧನಾ ಕೇಂದ್ರ, ವಿಜಯಪುರ ಕಚೇರಿಯನ್ನು ನೇರವಾಗಿ ಸಂಪರ್ಕಿಸಬಹುದು ಎಂದು ಪ್ರಾದೇಶಿಕ ಸಂಶೋಧನಾ ಕೇಂದ್ರದ ಕೃಷಿ ಹವಾಮಾನಶಾಸ್ತ್ರದ ಮುಖ್ಯಸ್ಥರ ಪ್ರಕಟಣೆ…

Read More

ಉದಯರಶ್ಮಿ ದಿನಪತ್ರಿಕೆ ​ವಿಜಯಪುರ: ಬಾಯಿ, ಸ್ತನ ಹಾಗೂ ಗರ್ಭಕಂಠ ಕ್ಯಾನ್ಸರ್‌ಗಳ ಕುರಿತು ಪ್ರತಿಯೊಬ್ಬರೂ ಜಾಗೃತರಾಗಿರಬೇಕು. ಇತ್ತೀಚಿನ ದಿನಗಳಲ್ಲಿ ಬದಲಾದ ಜೀವನಶೈಲಿ, ಅನಾರೋಗ್ಯಕರ ಆಹಾರ ಪದ್ಧತಿ, ಪರಿಸರ ಅಂಶಗಳು ಕ್ಯಾನ್ಸರ್ ಪ್ರಕರಣಗಳು ಹೆಚ್ಚಳಕ್ಕೆ ಕಾರಣ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಮಲ್ಲನಗೌಡ ಬಿರಾದಾರ ಅವರು ಹೇಳಿದರು.​ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದ ಆರೋಗ್ಯ ಸೌಧ ಸಭಾ ಭವನದಲ್ಲಿ ಗುರುವಾರ ಸಿಂದಗಿ ತಾಲೂಕಿನ ಆಶಾ ಕಾರ್ಯಕರ್ತೆಯರಿಗಾಗಿ ಆಯೋಜಿಸಲಾಗಿದ್ದ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ನಿಯಮಿತ ವ್ಯಾಯಾಮ, ಆರೋಗ್ಯಕರ ಆಹಾರ, ತಂಬಾಕು ಹಾಗೂ ಮದ್ಯಪಾನ ತ್ಯಜಿಸುವುದರ ಜೊತೆಗೆ ಆರಂಭಿಕ ಹಂತದಲ್ಲೇ ರೋಗ ಪತ್ತೆ ಹಚ್ಚುವುದರಿಂದ ಕ್ಯಾನ್ಸರ್ ಅಪಾಯದಿಂದ ಪಾರಾಗಬಹುದು ಎಂದು ಸಲಹೆ ನೀಡಿದರು. ​ಇಂಡಿಯನ್ ಕ್ಯಾನ್ಸರ್ ಸೊಸೈಟಿಯ ಪ್ರಾದೇಶಿಕ ವ್ಯವಸ್ಥಾಪಕ ಡಾ. ಗುರುರಾಜ ಕುಲಕರ್ಣಿ ಮಾತನಾಡಿ, ಸ್ತನ ಮತ್ತು ಗರ್ಭಕಂಠ ಕ್ಯಾನ್ಸರ್ ಬರಲು ಕಾರಣಗಳು ಹಾಗೂ ಅವುಗಳ ತಪಾಸಣಾ ವಿಧಾನಗಳ ಕುರಿತು ವಿವರಣೆ ನೀಡಿ,…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರಾದೇಶಿಕ ಕೃಷಿ ಸಂಶೋಧನಾ ಕೇಂದ್ರದಲ್ಲಿ ನಿರ್ವಹಣೆಯಲ್ಲಿರುವ ಅಖಿಲ ಭಾರತ ಸಮನ್ವಿತ ಒಣ ಬೇಸಾಯ ಸಂಶೋಧನಾ ಯೋಜನೆಯಡಿ ಆನ್ ಫಾರ್ಮ್ ರಿಸರ್ಚ್ ಪ್ರೋಗ್ರಾಂ ಯೋಜನೆಯಲ್ಲಿ ಖಾಲಿ ಇರುವ ಯಂಗ್ ಪ್ರಫೊಶನಲ್ -೧ ತಾತ್ಕಾಲಿಕ ಹುದ್ದೆಯ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಾತ್ಕಾಲಿಕವಾಗಿ ಹುದ್ದೆ ನೀಡಲಾಗುತ್ತದೆ.ಹಿಟ್ನಳ್ಳಿಯ ಪ್ರಾದೇಶಿಕ ಕೃಷಿ ಸಂಶೋಧನಾ ಕೇಂದ್ರದ ಸಹ ಸಂಶೋಧನಾ ನಿರ್ದೇಶಕರ ಕಚೇರಿಯಲ್ಲಿ ಸೆ. ೯ ರಂದು ಬೆಳಿಗ್ಗೆ ೧೦.೩೦ ಕ್ಕೆಸಂದರ್ಶನ ನಡೆಯಲಿದೆ.ಹುದ್ದೆಗೆ ಅಗತ್ಯವಿರುವ ಶೈಕ್ಷಣಿಕ ವಿದ್ಯಾರ್ಹತೆ, ಮಾಸಿಕ ವೇತನ ಮತ್ತು ಇತರೆ ನಿಯಮಾವಳಿಗಳ ಮಾಹಿತಿಗಾಗಿ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್ hಣಣಠಿs://siಣes.googಟe.ಛಿom/ಚಿ/uಚಿsಜ.iಟಿ/ಟಿeತಿs/ಣemಠಿoಡಿಚಿಡಿಥಿ-ಚಿಠಿಠಿoiಟಿಣmeಟಿಣ-ಟಿoಣiಜಿiಛಿಚಿಣioಟಿ-ಛಿiಡಿಛಿuಟಚಿಡಿs ಗೆ ಭೇಟಿ ನೀಡಬಹುದು.ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ತಮ್ಮ ಅಗತ್ಯ ದಾಖಲೆಗಳೊಂದಿಗೆ ನಿಗದಿತ ಸಮಯಕ್ಕೆ ಸಂದರ್ಶನಕ್ಕೆ ಹಾಜರಾಗಲು ಕೋರಲಾಗಿದೆ.ಹೆಚ್ಚಿನ ವಿವರಗಳಿಗೆ ಪ್ರಾದೇಶಿಕ ಕೃಷಿ ಸಂಶೋಧನಾ ಕೇಂದ್ರ, ವಿಜಯಪುರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಆಚರಿಸುತ್ತಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ೧೫೭ನೇ ಜಯಂತಿ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು. ಸ್ವಾತಂತ್ರ್ಯ ಚಳುವಳಿ. ಸರಳತೆ, ಅಹಿಂಸಾ ಮಾರ್ಗ, ಸಹಬಾಳ್ವೆ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಇತ್ಯಾದಿ ವಿಚಾರಗಳ ಬಗ್ಗೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ-ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ.ವಿವಿಧ ವಿಷಯಗಳ ಕುರಿತು ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಣ ಹಾಗೂ ಪದವಿ-ಸ್ನಾತಕೋತ್ತರ ಪದವಿಗಳ ಹಂತದ ವಿದ್ಯಾರ್ಥಿಗಳಿಗೆ ಒಟ್ಟು ೩ ವಿಭಾಗಗಳಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಆಯೋಜಿಸಲಾಗುತ್ತಿದೆ.ವಿಜೇತರಿಗೆ ರಾಜ್ಯಮಟ್ಟದಲ್ಲಿ ಪ್ರಥಮ ಬಹುಮಾನ ೩೧ ಸಾವಿರ ರೂ. ದ್ವಿತೀಯ ಬಹುಮಾನ ೨೧ ಸಾವಿರ ರೂ. ಮತ್ತು ತೃತೀಯ ಬಹುಮಾನ ೧೧ ಸಾವಿರ ರೂ. ಹಾಗೂ ಜಿಲ್ಲಾಮಟ್ಟದಲ್ಲಿ ಪ್ರಥಮ ಬಹುಮಾನ ೩ ಸಾವಿರ ರೂ. ದ್ವಿತೀಯ ಬಹುಮಾನ ೨ ಸಾವಿರ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಬೇಡುವವರ ಕಷ್ಟಗಳಿಗೆ ಸದಾ ಆಶೀರ್ವಾದ ಹಾಗೂ ಭಕ್ತಾದಿಗಳ ಇಷ್ಟಾರ್ಥಗಳನ್ನು ಈಡೇರಿಸುವ ದೇವತಾ ಕಾರ್ಯಗಳಿಂದ ಗ್ರಾಮಗಳು ಸುಭಿಕ್ಷವಾಗುವ ಜತೆಗೆ ಮನಸ್ಸಿಗೆ ನೆಮ್ಮದಿ ಸಿಗಲಿದೆ ಎಂದು ಶಿರಶ್ಯಾಡದ ಮುರುಗೇಂದ್ರ ಶಿವಾಚಾರ್ಯರರು ಹೇಳಿದರು.ನಗರದಲ್ಲಿ ಸಿದ್ದಿ ವಿನಾಯಕ ದೇವಸ್ಥಾನದ ೪ ನೇ ವರ್ಷದ ಜಾತ್ರಾ ಮಹೋತ್ಸವ ಅಂಗವಾಗಿ ರುದ್ರಾಭೊಷೇಕ, ಗಣಹೋಮ ಮತ್ತು ಮುತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಧರ್ಮಸಭೆಯ ಸಾನಿದ್ಯ ವಹಿಸಿ ಮಾತನಾಡಿದರು.ನಾಗಣಸೂರದ ಶ್ರೀಕಂಠ ಶಿವಾಚಾರ್ಯರರು ಮಾತನಾಡಿ ದೇವಾಲಯ ಪ್ರತಿಷ್ಠಾಪನೆ ಆದಾಗಿನಿಂದಲೂ ಜಾತ್ರಾ ಮಹೋತ್ಸವ ಆಚರಿಸುತ್ತಿದ್ದೇವೆ. ಜಾತ್ರಾ ಮಹೋತ್ಸವ ಅಂಗವಾಗಿ ವಿಶೇಷ ಪೂಜೆ ಹವನ ಹೋಮ ಹಾಗೂ ದೀಪಾರಾಧನೆ ವಿವಿಧ ಕಲಾ ತಂಡದಿಂದ ವೀರಗಾಸೆ ಪ್ರದರ್ಶನ ನಡೆಯಿತು.ಅಹಿರಸಂಗದ ಮಲ್ಲಿಕಾರ್ಜುನ ಶಿವಾಚಾರ್ಯರರು, ಅನೀಲಗೌಡ ಬಿರಾದಾರ, ಬಂಗಾರದ ಅಂಗಡಿ ಮಾಲಿಕರ ಸಂಘದ ಅಧ್ಯಕ್ಷ ಸೋಮನಗೌಡ ಬಿರಾದಾರ, ಸುದೀರ ಕರಕಟ್ಟಿ ಮಾತನಾಡಿದರು.ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ನಡೆಯಿತು. ದೇವಸ್ಥಾನ ಸಮಿತಿಯ ಮಹಾಂತೇಶ ಪಾಟೀಲ, ಶ್ರೀಕಾಂತ ಬಡಿಗೇರ, ಸುನೀಲಗೌಡ ಬಿರಾದಾರ ಉಮೇಶ ಪಾಟೀಲ, ರಮೇಶ ಗೋಳಸಾರ ಮತ್ತಿತರಿದ್ದರು.

Read More

ಹಿರಿಯ ಪತ್ರಕರ್ತ ಪರಶುರಾಮ ಶಿವಶರಣ ಅವರಿಗೆ ಧಮ್ಕಿ ಹಾಕಿರುವ ಅಕ್ಕಿ ಕಳ್ಳರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿ ಕಾರ್ಯನಿರತ ಪತ್ರಕರ್ತರ ಸಂಘ ಮನವಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹಿರಿಯ ಪತ್ರಕರ್ತ ಪರಶುರಾಮ ಶಿವಶರಣ ಅವರ ಮನೆಗೆ ತೆರಳಿ ಧಮ್ಕಿ ಹಾಕಿರುವ ಅಕ್ಕಿ ಕಳ್ಳರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ವಿಜಯಪುರ ಜಿಲ್ಲಾಧಿಕಾರಿ ಡಾ.ಆನಂದ ಕೆ ಅವರಿಗೆ ಕಾನಿಪ ಜಿಲ್ಲಾ ಘಟಕ, ಆಮ್ ಆದ್ಮಿ ಪಕ್ಷ ಹಾಗೂ ಅಖಂಡ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.ಈ ವೇಳೆ ಕಾನಿಪ ಸಂಘದ ಜಿಲ್ಲಾಧ್ಯಕ್ಷ ಅಶೋಕ ಯಡಹಳ್ಳಿ ಮಾತನಾಡಿ, ಪತ್ರಕರ್ತರನ್ನು ಪ್ರಜಾಪ್ರಭುತ್ವದ ನಾಲ್ಕನೆ ಅಂಗ ಎಂದು ಕರೆಯಲಾಗುತ್ತಿದೆ ಆದರೆ ವಿಜಯಪುರದಲ್ಲಿ ಆ ಅಂಗವನ್ನು ಕುಸಿಯುವಂತಹ ವಾತಾವರಣ ನಿರ್ಮಾಣವಾಗಿದೆ. ಪತ್ರಕರ್ತರು ನಿರ್ಭೀತಿಯಿಂದ ಕಾರ್ಯ ನಿರ್ವಹಿಸಲು ಸಾಧ್ಯವಾಗದಂತಹ ಪರಿಸ್ಥಿತಿ ಸೃಷ್ಠಿಯಾಗಿದೆ. ಹಿರಿಯ ಪತ್ರಕರ್ತ ಪರಶುರಾಮ ಶಿವಶರಣ ಅವರು ಅಕ್ಕಿ ಕಳ್ಳತನದ ಕುರಿತು ಬರೆದ ವರದಿ ತಪ್ಪಾಗಿದ್ದರೆ ಪ್ರಕರಣ ದಾಖಲಿಸಲಿ ನಾವು ಅದನ್ನು ಸ್ವೀಕರಿಸಿ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ನಗರದ ಹಳೆಯ ಬಜಾರದ ಕುಲಕರ್ಣಿ ಬಟ್ಟೆ ಅಂಗಡಿ ಸಮೀಪ ನಿಲ್ಲಿಸಲಾಗಿದ್ದ ರೇನಾಲ್ಟ್ ಡಸ್ಟರ್ (ಕೆಎ-೨೮-ಎಮ್‌ಬಿ-೩೭೬೫) ಕಾರಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟುಹೋಗಿರುವ ಘಟನೆ ನಡೆದಿದೆ.ದೇವರ ಹಿಪ್ಪರಗಿ ತಾಲೂಕಿನ ಮಾರ್ಕಪನಹಳ್ಳಿ ಗ್ರಾಮದ ಆನಂದ ಬಸವರಾಜ ಇಜೇರಿ (೩೨) ಅವರಿಗೆ ಸೇರಿದ ಕಾರನ್ನು ಸಾರವಾಡ ಗ್ರಾಮದ ನಿವಾಸಿ, ಚಾಲಕ ಚಂದ್ರಕಾಂತ ಮಹಾಲಿಂಗಪ್ಪ ವಾಲಿ ಅವರು ಸಿಂದಗಿ ಹಳೆಯ ಬಜಾರದ ಕುಲಕರ್ಣಿ ಬಟ್ಟೆ ಅಂಗಡಿ ಬಳಿ ನಿಲ್ಲಿಸಿ ತೆರಳಿದ್ದರು ಎನ್ನಲಾಗಿದೆ. ಕೆಲ ಸಮಯದ ಬಳಿಕ ಕಾರಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿಯ ತೀವ್ರತೆಗೆ ವಾಹನ ಸಂಪೂರ್ಣವಾಗಿ ಸುಟ್ಟುಹೋಗಿದೆ.ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಂಕಿಗೆ ನಿಖರ ಕಾರಣವೇನು ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ.ಘಟನೆ ಕುರಿತು ಸಂಬಂಧಿಸಿದ ಸಿಂದಗಿ ಪೊಲೀಸ್ ಠಾಣೆಯ ಪಿಎಸ್ಐ ಶ್ರೀಕಾಂತ ಕಾಂಬಳೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಕಾರಿಗೆ ಬೆಂಕಿ ಹೊತ್ತಿಕೊಂಡಿರುವ ನಿಖರ ಕಾರಣದ ಕುರಿತು ತನಿಖೆ ತಿಳಿದು ಬರಬೇಕಿದೆ.

Read More

ಸ್ಥಳ ಪರಿಶೀಲಿಸಿ ಅಂತಿಮ ತೀರ್ಮಾನ ಕೈಗೊಳ್ಳಲು ಜಿಲ್ಲಾಧಿಕಾರಿ ಡಾ. ಆನಂದ.ಕೆ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ​ವಿಜಯಪುರ: ನಗರ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಅಗತ್ಯಕ್ಕೆ ತಕ್ಕಂತೆ ಗಣೇಶ ಮೂರ್ತಿಗಳ ವಿಸರ್ಜನೆಗಾಗಿ ಶಾಶ್ವತ ಹೊಂಡ ನಿರ್ಮಿಸಲು ಸೂಕ್ತ ಜಾಗ ಗುರುತಿಸಿ, ಸ್ಥಳ ವೀಕ್ಷಣೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.ಮಹಾನಗರ ಪಾಲಿಕೆಯ ಕೇಂದ್ರ ಕಚೇರಿಯಲ್ಲಿ ೨೦೨೬-೨೭ನೇ ಸಾಲಿನ ಗಣೇಶೋತ್ಸವದ ಹಿನ್ನೆಲೆಯಲ್ಲಿ ಬುಧವಾರ ಆಯೋಜಿಸಲಾಗಿದ್ದ ನಗರದ ವಿವಿಧ ಗಜಾನನ ಮಹಾಮಂಡಳಿಗಳು, ಜನಪ್ರತಿನಿಧಿಗಳು ಹಾಗೂ ಸಂಘ-ಸಂಸ್ಥೆಗಳ ಪದಾಧಿಕಾರಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ವಿಜಯಪುರ ನಗರದ ಐತಿಹಾಸಿಕ ಸ್ಮಾರಕವಾದ ತಾಸಬಾವಡಿಯನ್ನು ಪ್ರಸ್ತುತ ಟಾಟಾ ಕನ್ಸಲ್ಟನ್ಸಿ ಸರ್ವಿಸಸ್ ಸಂಸ್ಥೆಯು ಪುನರುಜ್ಜೀವನಗೊಳಿಸುತ್ತಿದೆ. ಈ ಹಿನ್ನೆಲೆಯಲ್ಲಿ ತಾಸಬಾವಡಿಯಲ್ಲಿ ವಿಸರ್ಜನಾ ಹೊಂಡ ನಿರ್ಮಿಸಿದರೆ ಸ್ಥಳಾವಕಾಶ ಕಡಿಮೆಯಾಗುವ ಸಾಧ್ಯತೆ ಇರುವುದರಿಂದ, ನಗರದ ಬೇರೆ ಬೇರೆ ಸೂಕ್ತ ಸ್ಥಳಗಳಲ್ಲಿ ಶಾಶ್ವತ ಹೊಂಡ ನಿರ್ಮಿಸುವ ಕುರಿತು ಸಭೆಯಲ್ಲಿ ವಿಸ್ತೃತವಾಗಿ ಚರ್ಚಿಸಲಾಯಿತು.ಗಜಾನನ ಮಹಾಮಂಡಳದ…

Read More