Author: editor.udayarashmi@gmail.com

ವಿಜಯಪುರ: ಅನಾಮಧೇಯ ಅಂದಾಜು ೬೦ ರಿಂದ ೬೫ ವಯಸ್ಸಿನ ವ್ಯಕ್ತಿ ಶವ ಪತ್ತೆಯಾಗಿರುವ ಕುರಿತು ತಿಕೋಟಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅನಾಮಧೇಯ ವ್ಯಕ್ತಿ ವಾರಸುದಾರರ ಪತ್ತೆಗೆ ಸಾರ್ವಜನಿಕರಲ್ಲಿ ಪೋಲಿಸ್ ಠಾಣೆ ಸಬ್‌ಇನ್ಸಪೆಕ್ಟರ್ ಅವರು ಮನವಿ ಮಾಡಿಕೊಂಡಿದ್ದಾರೆ.ಪತ್ತೆಯಾದ ವ್ಯಕ್ತಿಯು ೫.೪ ಫೂಟ್ ಎತ್ತರ, ಸಾಧಾರಣ ಮೈಕಟ್ಟು, ಉದ್ಧ ಮುಖ, ಸಾದ ಗಪ್ಪು ಮೈ ಬಣ್ಣ, ಮೈಮೇಲೆ ಪಿಂಕ್ ಕಲರ್ ಶರ್ಟ ಮತ್ತು ನೀಲಿ ಬಣ್ಣದ ಲುಂಗಿ ಧರಿಸಿದ್ದಾನೆ. ಈ ಚಹರೆಪಟ್ಟಿಯುಳ್ಳ ವ್ಯಕ್ತಿ ವಾರಸುದಾರರು ಪತ್ತೆಯಾದಲ್ಲಿ ಸಾರ್ವಜನಿಕರು ತಿಕೋಟಾ ಪೋಲಿಸ್ ಠಾಣೆ ದೂ:೦೮೩೫೨-೨೩೧೫೩೩, ಮೊ: ೯೪೮೦೮೦೪೨೪೮, ಸಿಪಿಐ ಗ್ರಾಮೀಣ ವೃತ್ತ ದೂ: ೦೮೩೫೨-೨೫೧೨೧೭, ಮೊ: ೯೪೮೦೮೦೪೨೩೧ ಅಥವಾ ಕಂಟ್ರೋಲ್ ರೂಂ. ವಿಜಯಪುರ ದೂ: ೦೮೩೫೨-೨೫೦೮೪೪ ಸಂಖ್ಯೆಗೆ ಮಾಹಿತಿ ಒದಗಿಸುವಂತೆ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

Read More

ವಿಜಯಪುರ: ಕೃಷಿ ಇಲಾಖೆ ವತಿಯಿಂದ ಆತ್ಮ ಯೋಜನೆಯಡಿ ತಾಲೂಕಾ ಮಟ್ಟದಲ್ಲಿ ೫ ಜನ ರೈತರಿಗೆ ಹಾಗೂ ಜಿಲ್ಲಾ ಮಟ್ಟದಲ್ಲಿ ೧೦ ಜನ ರೈತರಿಗೆ ಶ್ರೇಷ್ಠ ಕೃಷಿಕ ಪ್ರಶಸ್ತಿಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಸಾವಯವ-ಸಮಗ್ರ ಕೃಷಿ, ತೋಟಗಾರಿಕೆ, ರೇಷ್ಮೆ ಬೇಸಾಯ, ಪಶು ಸಂಗೋಪನೆ-ಮೀನುಗಾರಿಕೆ, ಸಿರಿಧಾನ್ಯ ಬೇಸಾಯ, ಕೃಷಿ ಅರಣ್ಯ ಕ್ಷೇತ್ರದಲ್ಲಿ ರೈತರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ನಮೂನೆಯನ್ನು ಸಂಬಂಧಪಟ್ಟ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ-ರೈತ ಸಂಪರ್ಕ ಕೇಂದ್ರದಿಂದ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ : ೨೪-೧೧-೨೦೨೩ರೊಳಗೆ ಸಂಬಂಧಪಟ್ಟ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.ತಾಲೂಕಾ ಮಟ್ಟದಲ್ಲಿ ಪ್ರಶಸ್ತಿ ಪಡೆದ ರೈತರು ಜಿಲ್ಲಾ ಮಟ್ಟದ ಪ್ರಶಸ್ತಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಓರ್ವ ರೈತ ಒಂದೇ ಅರ್ಜಿ ಸಲ್ಲಿಸಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಿವಿಧ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ನಿಗಮದಿಮದ ಅಲೆಮಾರಿ ಸಮುದಾಯದವರಿಗೆ ಆರ್ಥಿಕ ಅಭಿವೃದ್ದಿಯನ್ನು ಹೊಂದಲು ಪರಿಶಿಷ್ಟ ಜಾತಿಯವರಿಗೆ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮಶೀಲತಾ ಯೋಜನೆ, ಭೂ ಒಡೆತನ ಯೋಜನೆಯಡಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮಶೀಲತಾ ಯೋಜನೆ, ಭೂ ಒಡೆತನ, ಮೈಕ್ರೋ ಕ್ರೆಡಿಟ್ ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಯಡಿ ಸಾಲ-ಸೌಲಭ್ಯ ಪಡೆಯಲು ಅರ್ಹರಿಂದ ಸೇವಾಸಿಂಧು ಪೋರ್ಟಲ್ ಮೂಲಕ, ಕರ್ನಾಟಕ ಒನ್, ಗ್ರಾಮ ಒನ್‌ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ : ೩೦-೧೧-೨೦೨೩ ಕೊನೆಯ ದಿನಾಂಕವಾಗಿದೆ.ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

Read More

ದೇವರಹಿಪ್ಪರಗಿ: ಕಾಲುವೆಗೆ ನೀರು ಪೂರೈಸುವ ವಿಷಯದಲ್ಲಿ ರೈತಪರ ಧ್ವನಿಯಾಗಿ ನಿಮ್ಮ ಜೊತೆ ಹೋರಾಟಗಳಲ್ಲಿ ಭಾಗಿಯಾಗಲು ನಾನು ಸದಾ ಸಿದ್ದ ಎಂದು ಮಾಜಿ ಶಾಸಕ ಸೋಮನಗೌಡ ಪಾಟೀಲ(ಸಾಸನೂರ) ಹೇಳಿದರು.ಪಟ್ಟಣದ ಹತ್ತಿರದಲ್ಲಿಯ ನಾಗಠಾಣ ಉಪಕಾಲುವೆಗೆ ಸೋಮವಾರ ಭೇಟಿ ನೀಡಿ, ನೀರಿನ ಮಟ್ಟ ವೀಕ್ಷಣೆ ಮಾಡುವುದರ ಮೂಲಕ ರೈತರೊಂದಿಗೆ ಮಾತನಾಡಿದರು.ಮಳೆಯ ಅಭಾವದಿಂದ ಈ ಭಾಗದ ಬೆಳೆ ಹಾನಿಗೊಳಗಾಗಿದ್ದು, ಉಳಿದ ಬೆಳೆಗಾಗಿ ಕಾಲುವೆಗೆ ನೀರು ಹರಿಸಲು ಈಗಾಗಲೇ ನಾನು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಮಾಡಿದ್ದೇನೆ. ಅವರು ಸಹ ಸ್ಪಂದಿಸಿ ನೀರು ಹರಿಯುವಂತೆ ಕ್ರಮ ಕೈಗೊಂಡಿದ್ದಾರೆ. ಈಗ ಸತತ ನಾಲ್ಕು ದಿನಗಳಿಂದ ಹರಿಯುತ್ತಿರುವ ನೀರು ಕೆಲವು ಕಡೆ ಪೋಲಾದ ಕಾರಣ ಕಡ್ಲೇವಾಡ ಪಿಸಿಎಚ್, ಮುಳಸಾವಳಗಿ, ಚಿಕ್ಕರೂಗಿ ಕೆರೆಗಳನ್ನು ತಲುಪುತ್ತಿಲ್ಲ. ಆದ್ದರಿಂದ ನೀರು ಪೋಲಾಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು. ಅದಕ್ಕಾಗಿ ನಾನು ಈಗ ರೈತಪರ ಧ್ವನಿಯಾಗಿ ಮನವಿ ಮಾಡುತ್ತೇನೆ. ಜೊತೆಗೆ ರೈತರು ಸಹ ಕಾಲುವೆ ನೀರನ್ನು ವ್ಯರ್ಥ ಮಾಡದೇ ಸಹಕಾರ ನೀಡಬೇಕು ಎಂದರು.ರೈತರಾದ ಸಂಗಣ್ಣ ಶಿನ್ನೂರ, ಭೀಮಾಶಂಕರ ಹಳ್ಳಿ,…

Read More

ಬಿ.ಎಲ್.ಡಿ.ಇ ಸಂಸ್ಥೆಯ ಸಂಸ್ಥಾಪನೆ ದಿನಾಚರಣೆಯಲ್ಲಿ ಪ್ರಭುಚನ್ನಬಸವ ಶ್ರೀ ಅಭಿಮತ ವಿಜಯಪುರ: ಬಸವಾದಿ ಶರಣರ ಆಶಯದಂತೆ ಪ್ರಾರಂಭವಾದ ಬಿ.ಎಲ್.ಡಿ.ಇ ಸಂಸ್ಥೆ ಜಿಲ್ಲೆಯ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಮತ್ತು ಸಾಂಸ್ಕೃತಿಕ ಸೇರಿದಂತೆ ಸರ್ವತೋಮುಖ ಅಭಿವೃದ್ಧಿಗೆ ಕಾರಣವಾಗಿದೆ ಎಂದು ಅಥಣಿಯ ಶ್ರೀ ಮೋಟಗಿಮಠದ ಪ್ರಭುಚನ್ನಬಸವ ಸ್ವಾಮೀಜಿ ಹೇಳಿದ್ದಾರೆ.ಇಂದು ಸೋಮವಾರ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಗ್ರಂಥಾಲಯದಲ್ಲಿ ಎ. ಎಸ್. ಪಾಟೀಲ ವಾಣಿಜ್ಯ ಮಹಾವಿದ್ಯಾಲಯ ಆಯೋಜಿಸಿದ್ದ ಬಿ.ಎಲ್.ಡಿ.ಇ ಸಂಸ್ಥೆಯ ಸಂಸ್ಥಾಪನೆ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.ಬ್ರಿಟೀಷರ ಆಡಳಿತದಲ್ಲಿ ಹಿಂದುಳಿದಿದ್ದ ಅಖಂಡ ವಿಜಯಪುರ ಜಿಲ್ಲೆಯಲ್ಲಿ ಸರ್ವಾಂಗೀಣ ಅಭಿವೃದ್ಧಿಗಾಗಿ 1910ರಲ್ಲಿ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಅವರು ಸ್ಥಾಪಿಸಿದ ಈ ಸಂಸ್ಥೆಯ ಅಭಿವೃದ್ಧಿಗೆ ದಾನಚಿಂತಾಮಣಿ ಶ್ರೀಮತಿ ಬಂಗಾರಮ್ಮ ಸಜ್ಜನ, ಬಂಥನಾಳ ಶ್ರೀ ಸಂಗನಬಸವ ಶಿವಯೋಗಿಗಳು, ಶಿಕ್ಷಣ ಹರಿಕಾರ ದಿ. ಬಿ. ಎಂ. ಪಾಟೀಲರ ಜೊತಗೆ ಅನೇಕ ಜನರು ಶ್ರಮಿಸಿದ್ದಾರೆ. ಈಗ ಹಾಲಿ ಅಧ್ಯಕ್ಷರಾದ ಎಂ. ಬಿ. ಪಾಟೀಲ ಅವರು ಡಾ. ಹಳಕಟ್ಟಿ, ಆದಿಲಶಾಹಿ, ಡಾ.…

Read More

ವಿಜಯಪುರ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರ ಸತತ ಪ್ರಯತ್ನದಿಂದಾಗಿ ತಿಕೋಟಾ ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರಿಸಲಾಗಿದೆ. ಆದರೆ, ತಮ್ಮ ಪಕ್ಷದಲ್ಲಿನ ಭಿನ್ನಮತವನ್ನು ಮರೆಮಾಡಲು ಬಿಜೆಪಿ ರಾಜ್ಯಾಧ್ಯಕ್ಷರು ತಂಡ ಕಟ್ಟಿಕೊಂಡು ಬರ ಅಧ್ಯಯನ ನಡೆಸುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ವಿಧಾನ ಪರಿಷತ ಸದಸ್ಯ ಸುನೀಲಗೌಡ ಪಾಟೀಲ ತಿಳಿಸಿದ್ದಾರೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಕೇಂದ್ರದ ಅವೈಜ್ಞಾನಿಕ ಮಾರ್ಗಸೂಚಿಯ ಹಿನ್ನೆಲೆಯಲ್ಲಿ ತಿಕೋಟಾ ತಾಲೂಕನ್ನು ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಕೈಬಿಡಲಾಗಿತ್ತು. ಕೇವಲ ಒಂದು ತಿಂಗಳಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿರುವುದನ್ನು ಪರಿಗಣಿಸಿ ಪಟ್ಟಿಯಿಂದ ಕೈಬಿಡಲಾಗಿತ್ತು. ಆದರೆ, ಈ ಕುರಿತು ಕಂದಾಯ ಸಚಿವರು ಮತ್ತು ಮುಖ್ಯಮಂತ್ರಿಗಳೊಂದಿಗೆ ಸತತ ಸಂಪರ್ಕದಲ್ಲಿದ್ದ ಎಂ. ಬಿ. ಪಾಟೀಲ ಅವರು, ಬರ ಘೋಷಣಗೆ ಮಾರ್ಗಸೂಚಿಯಂತೆ ಅಗತ್ಯವಾಗಿರುವ ಎಲ್ಲ ದಾಖಲೆಗಳನ್ನು ಒದಗಿಸುವ ಮೂಲಕ ತಿಕೋಟಾ ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರಿಸಲು ಕಾರಣರಾಗಿದ್ದಾರೆ. ಈ ಮೂಲಕ ರೈತರ ಸಮಸ್ಯೆಗಳಿಗೆ ಸ್ಪಂದಿಸಿದ್ದು ಅನ್ನದಾತರಲ್ಲಿ ಸಂತಸ…

Read More

ಲೋಕಸಭೆ ಚುನಾವಣೆ ಮೇಲೆ ಗಮನ ಹರಿಸಿ: ಸಚಿವರಿಗೆ ಸಿಎಂ, ಡಿಸಿಎಂ ಕಿವಿಮಾತು ಬೆಂಗಳೂರು: ಬಹಿರಂಗವಾಗಿ ಸಿಎಂ ಗಾದಿ ಬದಲಾವಣೆ ಕುರಿತು ಚರ್ಚೆ ನಡೆಸುತ್ತಿರುವ ಶಾಸಕ ಮತ್ತು ಸಚಿವರಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಕ್ಲಾಸ್ ತೆಗೆದುಕೊಂಡಿದ್ದು, ಲೋಕಸಭಾ ಚುನಾವಣೆ ಮೇಲೆ ಗಮನ ಕೇಂದ್ರೀಕರಿಸುವಂತೆ ಸೂಚಿಸಿದ್ದಾರೆ.ಸರ್ಕಾರ ರಚನೆಯಾಗಿ ಆರು ತಿಂಗಳು ಸಮೀಪಿಸುತ್ತಿರುವ ಹೊತ್ತಿನಲ್ಲಿ ಉಂಟಾದ ಗೊಂದಲಗಳಿಗೆ ತೆರೆ ಎಳೆಯುವುದು ಹಾಗೂ ಸಚಿವರನ್ನು ವಿಶ್ವಾಸಕ್ಕೆ ಪಡೆಯುವ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ತಮ್ಮ ನಿವಾಸದಲ್ಲಿ ಬ್ರೇಕ್‌ ಫಾಸ್ಟ್‌ ಮೀಟಿಂಗ್‌ ಅನ್ನು ಏರ್ಪಡಿಸಿದ್ದರು. ಈ ವೇಳೆ ಸಚಿವರಿಗೆ ಕ್ಲಾಸ್‌ ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ.ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಸಚಿವರ ವರ್ತನೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಲ್ಲದೆ, ಹೇಳಿಕೆಗಳಿಂದ ಪಕ್ಷದ ವರ್ಚಸ್ಸು ಹಾಗೂ ಲೋಕಸಭಾ ಚುನಾವಣೆ ಮೇಲೆ ಬೀರುವ ಪರಿಣಾಮದ ಬಗ್ಗೆ ತಿಳಿಹೇಳಿದ್ದಾರೆ ಎಂದು ತಿಳಿದು ಬಂದಿದೆ. ತಮ್ಮ ಪ್ರತಿಯೊಂದು ನಡೆಯೂ ರಾಜ್ಯ ರಾಜಕೀಯದಲ್ಲಿ ಯಾವ ರೀತಿ ಪರಿಣಾಮ ಬೀರಲಿದೆ ಎಂದು ಮನದಟ್ಟು…

Read More

ಮಾಜಿ ಸಿಎಂ ಹೆಚ್ಡಿಕೆ ಓಪನ್ ಆಫರ್​ ಟೆಂಪ್ರವರಿ ಸಿಎಂ & ಡೂಪ್ಲಿಕೇಟ್ ಸಿಎಂ ಕಾಂಗ್ರೆಸ್ ಸರ್ಕಾರ | ಎಚ್ಡಿಕೆ ವ್ಯಂಗ್ಯ ಬೆಂಗಳೂರು: ಡಿ.ಕೆ ಶಿವಕುಮಾರ್​ ನಾಳೆಯೇ ಸಿಎಂ ಆಗುವುದಾದರೆ ಜೆಡಿಎಸ್​ ಬೆಂಬಲ ನೀಡುತ್ತದೆ ಎಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದಾರೆ.ಜೆಡಿಎಸ್ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಕುಮಾರಸ್ವಾಮಿ, ಡಿ.ಕೆ ಶಿವಕುಮಾರ್ ನಾಳೆ ಬೆಳಗ್ಗೆ ಸಿಎಂ ಆದರೆ ಜೆಡಿಎಸ್ ಪಕ್ಷದ 19 ಶಾಸಕರು ಬೆಂಬಲ ನೀಡುತ್ತಾರೆ ಎಂದು ಓಪನ್ ಆಫರ್​ ನೀಡಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಪರಿಸ್ಥಿತಿ ನೋಡಿದರೆ ಎಲ್ಲರೂ ತಾವು ಸಿಎಂ ಆಕಾಂಕ್ಷಿ ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದರು.ಹೀಗಾಗಿ ರಾಜ್ಯ ಕಾಂಗ್ರೆಸ್ ಅನ್ನು ಟಿಸಿಎಂ, ಡಿಸಿಎಂ ಸರ್ಕಾರ ಎಂದು ಕರೆಯಬಹುದು. ಟಿಸಿಎಂ ಅಂದರೆ ಟೆಂಪ್ರವರಿ ಸಿಎಂ, ಡಿಸಿಎಂ ಅಂದ್ರೆ ಡೂಪ್ಲಿಕೇಟ್ ಸಿಎಂ ಎಂದು ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.ವಿದೇಶ ಪ್ರವಾಸ ಮುಗಿಸಿ ರಾಜ್ಯಕ್ಕೆ ಮರಳಿರುವ ಎಚ್ ಡಿ ಕುಮಾರಸ್ವಾಮಿ ಅವರು ಮತ್ತೆ ರಾಜಕೀಯದಲ್ಲಿ ಸಕ್ರಿಯರಾಗಿದ್ದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Read More

ವಿಜಯಪುರ ಜಿಲ್ಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ್ ತಂಡದಿಂದ ಬರ ಅಧ್ಯಯನ ವಿಜಯಪುರ: ತಿಕೋಟಾ ತಾಲೂಕಿನ ಜಾಲಗೇರಿ ಸೇರಿದಂತೆ ವಿವಿಧ ಗ್ರಾಮಗಳಿಗೆ ಶನಿವಾರ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ್ ನೇತೃತ್ವದ ತಂಡ ಬರ ಅಧ್ಯಯನ ನಡೆಸಿ ಪರಿಸ್ಥಿತಿ ಅವಲೋಕಿಸಿತು. ತೊಂದರೆ ಎದುರಿಸುತ್ತಿರುವ ರೈತರ ಅಹವಾಲು ಆಲಿಸಿತು. ಅನೇಕ ರೈತರು ತಾವು ಎದುರಿಸುತ್ತಿರುವ ನೋವನ್ನು ತಂಡದ ಸದಸ್ಯರ ಎದುರು ತೋಡಿಕೊಂಡರು.ಜಿಲ್ಲೆಯ ತಿಕೋಟಾ ಹೊರತುಪಡಿಸಿ ಉಳಿದೆಲ್ಲ ತಾಲೂಕುಗಳು ಬರಪೀಡಿತ ಎಂದು ಘೋಷಣೆಯಾಗಿವೆ, ತಿಕೋಟಾ ತಾಲೂಕಿನಲ್ಲಿಯೂ ಸಹ ಬರ ಭೀಕರವಾಗಿದೆ ಎಂದು ಕಟೀಲ್ ಮೊದಲಾದ ತಂಡದ ಸದಸ್ಯರು ತಿಕೋಟಾ ತಾಲೂಕನ್ನೇ ಆಯ್ಕೆ ಮಾಡಿ ಬರ ಅಧ್ಯಯನ ನಡೆಸಿದರು.ಜಾಲಗೇರಿಯಲ್ಲಿ ಮೆಕ್ಕೆಜೋಳ ಬೆಳೆ ಸಂಪೂರ್ಣವಾಗಿ ಬಾಡಿ ಹೋಗಿರುವುದನ್ನು ಗಮನಿಸಿದರು. ಈ ವೇಳೆ ಅಳಲು ತೋಡಿಕೊಂಡ ಅನೀಲ್ ಲಮಾಣಿ, ಸಿದ್ಧು ಒಡೆಯರ ಮೊದಲಾದ ರೈತರು `ನಮಗೆ ಆಗುತ್ತಿರುವ ತೊಂದರೆ ಅಷ್ಟಿಷ್ಟಲ್ಲ, ಯಾವ ರೀತಿಯ ಸ್ಪಂದನೆಯೂ ಸಹ ನಮಗೆ ದೊರಕದಂತಾಗಿದೆ, ನಮ್ಮ ಸಂಕಷ್ಟ ಯಾರಿಗೂ ಬರಬಾರದು, ಸಾಲ ಸೋಲ ಮಾಡಿದ…

Read More