Author: editor.udayarashmi@gmail.com

ವಿಜಯಪುರ: ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ೨೦೨೩-೨೪ನೇ ಸಾಲಿಗೆ ಸಾಮಾನ್ಯ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ಜನರಿಗಾಗಿ ವಿಶೇಷ ಘಟಕ-ಗಿರಿಜನ ಉಪಯೋಜನೆಯಡಿ ೩.೫೦ಲಕ್ಷ ರೂ. ಘಟಕಕ್ಕೆ ಶೆ.೫೦-೯೦ ರಷ್ಟು ಸಹಾಯಧನದಲ್ಲಿ ೨ ವಿದ್ಯುತ್ ಮಗ್ಗ ಮತ್ತು ೪೦೦ ಹುಕ್ಸ್ಗಳ ಜಕಾರ್ಡ್ ೨೪/೪೦ ಕೋಲಿನ ಡಾಬಿ ಖರೀದಿಸಲು ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅರ್ಹರು ಅರ್ಜಿಯನ್ನು ದಿನಾಂಕ : ೧೦-೧೧-೨೦೨೩ರೊಳಗೆ ಸಲ್ಲಿಸಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿ.ಪಂ. ಜಿಲ್ಲಾ ಕೈಗಾರಿಕಾ ಕೇಂದ್ರದ ಕಟ್ಟಡ, ಶಿಕಾರಖಾನಾ, ಸ್ಟೇಶನ್ ಬ್ಯಾಕ್ ರೋಡ, ವಿಜಯಪುರ ಕಚೇರಿ ಮೊ: ೯೯೦೨೫೬೧೪೪೧ ಸಂಖ್ಯೆಗೆ ಸಂಪರ್ಕಿಸುವಂತೆ ಕೈಮಗ್ಗ ಮತ್ತು ಜವಳಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚಿಸಿರುವ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕ ಪತ್ರ ಇಲಾಖೆಯಲ್ಲಿನ ಗ್ರೂಪ್ ಸಿ ಹುದ್ದೆಗಳಿಗೆ ಜಿಲ್ಲೆಯಲ್ಲಿ ನವೆಂಬರ್ ೪ ಮತ್ತು ೫ ರಂದು ಕನ್ನಡ ಭಾಷಾ-ಸ್ಪರ್ಧಾತ್ಮಕ ಪರೀಕ್ಷೆಗಳು ಜರುಗಲಿದ್ದು, ಸುವ್ಯವಸ್ಥಿತ ಪರೀಕ್ಷೆ ನಡೆಸುವ ದೃಷ್ಟಿಯಿಂದ ಮುಂಜಾಗ್ರತವಾಗಿ ಪರೀಕ್ಷಾ ಕೇಂದ್ರದ ೨೦೦ ಮೀ. ವ್ಯಾಪ್ತಿಯಲ್ಲಿ ಕಲಂ ೧೪೪ರನ್ವಯ ಬೆಳಿಗ್ಗೆ ೯ ರಿಂದ ಪರೀಕ್ಷೆ ಮುಕ್ತಾಯವಾಗುವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.ಪರೀಕ್ಷಾ ಕೇಂದ್ರದ ಸಮೀಪದಲ್ಲಿರುವ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್‌ಗಳು, ಇಂಟರ್‌ನೆಟ್, ಸೈಬರ್ ಕೆಫೆಗಳು, ಕೋಚಿಂಗ್ ಕೇಂದ್ರಗಳು ಪರೀಕ್ಷೆ ಅವಧಿಯಲ್ಲಿ ತೆರೆಯದಂತೆ ಆದೇಶಿಸಲಾಗಿದೆ.

Read More

ವಿಜಯಪುರ: ಜಿಲ್ಲೆಯ ಪಿಂಚಣಿದಾರರ ಅಹವಾಲು ಆಲಿಸಲು ಹಾಗೂ ಅರ್ಹರಿಗೆ ಪಿಂಚಣಿ ಮಂಜೂರಾತಿಗಾಗಿ ಸಾಮಾಜಿಕ ಭದ್ರತಾ ಯೋಜನೆಯಡಿ ಜಿಲ್ಲೆಯ ೧೪ ಗ್ರಾಮಗಳಲ್ಲಿ ನವೆಂಬರ್ ೪ ರಂದು ಬೆಳಿಗ್ಗೆ ೧೧ ಗಂಟೆಗೆ ಪಿಂಚಣಿ ಅದಾಲತ್ ಹಮ್ಮಿಕೊಳ್ಳಲಾಗಿದೆ.ಜಿಲ್ಲೆಯ ಮಖಣಾಪೂರ ಗ್ರಾಮದ ಶ್ರೀ ಸೋಮನಿಂಗೇಶ್ವರ ದೇವಸ್ಥಾನದಲ್ಲಿ ವಿಜಯಪುರ ಉಪ ವಿಭಾಗಾಧಿಕಾರಿಗಳು, ಗುತ್ತರಗಿ ಶ್ರೀ ಕರಿವಿರೇಶ್ವರ ದೇವಸ್ಥಾನದಲ್ಲಿ ಇಂಡಿ ಉಪವಿಭಾಗಾಧಿಕಾರಿಗಳು, ನಾಗಠಾಣ ನಾಡಕಚೇರಿ ಆವರಣದಲ್ಲಿ ವಿಜಯಪುರ ತಹಶೀಲ್ದಾರ ಗ್ರೇಡ್-೨ ಅವರು ಹಾಗೂ ಕೊಡಬಾಗಿ ಶ್ರೀ ಸಂಗಮೇಶ್ವರ ದೇವಸ್ಥಾನದಲ್ಲಿ ಬಬಲೇಶ್ವರ ಗ್ರೇಡ್-೨ ತಹಶೀಲ್ದಾರ ಅವರು ಪಿಂಚಣಿ ಅದಾಲತ್ ನಡೆಸಲಿದ್ದಾರೆ.ಅತಾಲಟ್ಟಿ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ತಿಕೋಟಾ ತಹಶೀಲ್ದಾರ ಗ್ರೇಡ್-೨, ಅರಳಿಚಂಡಿ ಶ್ರೀ ಹಿರೋಡೇಶ್ವರ ದೇವಸ್ಥಾನದಲ್ಲಿ ಬಸವನಬಾಗೇವಾಡಿ ಗ್ರೇಡ್-೨ ತಹಶೀಲ್ದಾರ, ಮಜರೆಕೊಪ್ಪ ಗ್ರಾಮ ದೇವತೆ ದೇವಸ್ಥಾನದಲ್ಲಿ ನಿಡಗುಂದಿ ಗ್ರೇಡ್-೨ ತಹಶೀಲ್ದಾರ, ಬಾಗಾನಗರ ಲಕ್ಷಮ್ಮದೇವಿ ದೇವಸ್ಥಾನದಲ್ಲಿ ಕೊಲ್ಹಾರ ತಹಶೀಲ್ದಾರ, ವಣಕಿಹಾಳ ಗ್ರಾಮದ ಶ್ರೀ ಮಾರುತೇಶ್ವರ ದೇವಾಲಯದಲ್ಲಿ ಮುದ್ದೇಬಿಹಾಳ ಗ್ರೇಡ್-೨ ತಹಶೀಲ್ದಾರ, ಚಬನೂರ ಗ್ರಾಮದ ಶ್ರೀ ಮಾರುತಿ ದೇವಸ್ಥಾನದಲ್ಲಿ ತಾಳಿಕೋಟೆ ತಹಶೀಲ್ದಾರ ಅವರು ಪಿಂಚಣಿ…

Read More

ವಿಜಯಪುರ: ಜಿಲ್ಲಾಡಳಿತದ ವತಿಯಿಂದ ಇದೇ ನವೆಂಬರ್ ೧೧ ರಂದು ಒನಕೆ ಓಬವ್ವ ಜಯಂತಿ ಕಾರ್ಯಕ್ರಮ ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು.ಶುಕ್ರವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಪೂರ್ವಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಂಡು, ಅಂದು ಬೆಳಿಗ್ಗೆ ೯ ಗಂಟೆಗೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಭಾವಚಿತ್ರ ಮೆರವಣಿಗೆಗೆ ಚಾಲನೆ, ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಜಯಂತಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಿ, ವೇದಿಕೆ ಕಾರ್ಯಕ್ರಮಕ್ಕೆ ಶಿಷ್ಠಾಚಾರದಂತೆ ಜನಪ್ರತಿನಿಧಿಗಳು, ಗಣ್ಯರಿಗೆ ಆಹ್ವಾನ, ಆಮಂತ್ರಣ ಪತ್ರಿಕೆ, ವೇದಿಕೆ ಅಲಂಕಾರ, ಸ್ವಚ್ಛತೆ, ಆಸನ ವ್ಯವಸ್ಥೆ ಸೇರಿದಂತೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.ಜಯಂತಿ ಕಾರ್ಯಕ್ರಮದಲ್ಲಿ ವಿವಿಧ ಸಂಘ-ಸಂಸ್ಥೆಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವಂತೆ ನೋಡಿಕೊಂಡು ಅರ್ಥಪೂರ್ಣ ಆಚರಣೆಗೆ ನಿರ್ಧರಿಸಲಾಯಿತು.ಸಭೆಯಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಸಿ.ಬಿ.ದೇವರಮನಿ, ಮುಖಂಡರಾದ ಅಭಿಷೇಕ ಚಕ್ರವರ್ತಿ, ರಾಜಶೇಖರ ಕುದರಿ, ಭೀಮರಾಯ ಜಿಗಜಿಣಗಿ, ವಾಯ್.ಎಚ್.ವಿಜಯಕರ, ವಿದ್ಯಾವತಿ ಅಂಕಲಗಿ, ಸೋಮನಗೌಡ…

Read More

ವಿಜಯಪುರ: ಜಿಲ್ಲೆಯಲ್ಲಿ ಬರಗಾಲ ಇರುವುದರಿಂದ ಗ್ರಾಮೀಣರಿಗೆ ಅನುಕೂಲ ಕಲ್ಪಿಸಿ ಕೊಡುವ ನಿಟ್ಟಿನಲ್ಲಿ ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತಿಗಳನ್ನು ಮಾದರಿ ಗ್ರಾಮ ಪಂಚಾಯತಿಗಳನ್ನಾಗಿಸಲು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ರಾಹುಲ ಶಿಂಧೆ ಅವರು ಎಲ್ಲ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.ಇತ್ತೀಚಿಗೆ ಬರಗಾಲ ನಿರ್ವಹಣೆ ಕುರಿತು ನಡೆದ ವಿಡಿಯೋ ಸಂವಾದ ಸಭೆಯಲ್ಲಿ ಅವರು ಮಾತನಾಡಿದರು.ಜಿಲ್ಲೆಯ ಬಹುತೇಕ ಗ್ರಾಮ ಪಂಚಾಯತಿಗಳಲ್ಲಿ ಜನರ ಹಿತದೃಷ್ಟಿಯಿಂದ ಕಾರ್ಯ ನಿರ್ವಹಿಸಲಾಗುತ್ತಿದೆ. ಉದ್ಭವಿಸುವ ಸಮಸ್ಯೆಗಳ ಪರಿಹರಿಸಿ ತಮ್ಮ ಗ್ರಾಮದ ಜನರ ಒಳಿತಿಗಾಗಿ ಕಾರ್ಯ ನಿರ್ವಹಿಸಬೇಕು. ಬರ ಇರುವ ಸಂಕಷ್ಟ ಸ್ಥಿತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಗ್ರಾಮೀಣರಿಗೆ ಅತ್ಯುತ್ತಮ ಯೋಜನೆಯಾಗಿದೆ. ನರೇಗಾ ಯೋಜನೆಯಡಿ ಕೆಲಸ ಕೋರಿ ಸಲ್ಲಿಸುವ ಅರ್ಜಿಗಳಿಗೆ ಆದ್ಯತೆ ನೀಡಿ, ಸಕಾರಾತ್ಮಕವಾಗಿ ಸ್ಪಂದಿಸಬೇಕು. ಅರ್ಜಿ ನೀಡಿದ ತಕ್ಷಣವೇ ಅವರಿಗೆ ಕೆಲಸ ಒದಗಿಸಿ ಅವರಿಗೆ ಸಹಾಯ ಮಾಡಿ ಎಂದು ಎಲ್ಲ ಗ್ರಾಮ ಪಂಚಾಯತಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ನರೇಗಾ ಯೋಜನೆಯನ್ನು ಅನುಷ್ಠಾನ ಮಾಡುವ ಎಲ್ಲ ಇಲಾಖೆಯ ಅಧಿಕಾರಿಗಳು ಗ್ರಾಮ…

Read More

ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ್ ಸಭೆ ವಿಜಯಪುರ: ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅರ್ಹತಾ ನ. ೦೧ಕ್ಕೆ ಸಂಬಂಧಿಸಿದಂತೆ ಕರಡು ಮತದಾರರ ಪಟ್ಟಿಯನ್ನು ಈಗಾಗಲೇ ಪ್ರಕಟಿಸಲಾಗಿದ್ದು, ಜಿಲ್ಲೆಯಲ್ಲಿ ೫ ಮತಗಟ್ಟೆಗಳನ್ನು ವಿಲೀನಗೊಳಿಸಲಾಗಿದ್ದು, ೧೮ ಹೊಸ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಸಮನ್ವಯತೆ ಸಾಧಿಸಲು ಬಿಎಲ್‌ಎಗಳ ನೇಮಕ ಮಾಡಿಕೊಂಡು ಶುದ್ಧ ಅಂತಿಮ ಮತದಾರರ ಪಟ್ಟಿಗೆ ಸಹಕರಿಸುವಂತೆ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಸರ್ಕಾರದ ಕಾರ್ಯದರ್ಶಿಗಳಾದ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ, ಮತದಾರರ ಪಟ್ಟಿಯ ವೀಕ್ಷಕರಾದ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ್ ಹೇಳಿದರು.ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಅವರು, ಈಗಾಗಲೇ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಪಕ್ಷದ ಬಿಎಲ್‌ಎಗಳನ್ನು ನೇಮಕ ಮಾಡಿಕೊಂಡು ಮುತುವರ್ಜಿ ವಹಿಸಿ ಮತಗಟ್ಟೆ ಮಟ್ಟದಲ್ಲಿ ಮತದಾರ ಪಟ್ಟಿ ಪರಿಷ್ಕರಣೆಗೆ ಸಹಕರಿಸಬೇಕು. ಮತದಾರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತೆಗೆದುಹಾಕುವುದು, ತಿದ್ದುಪಡಿ ಸೇರಿದಂತೆ ಹಕ್ಕು ಮತ್ತು ಆಕ್ಷೇಪಣೆಗಳ ಸಲ್ಲಿಕೆಗೆ ಅವಕಾಶವಿರುವುದರಿಂದ ಮತದಾರರ…

Read More

ಬೆಂಗಳೂರಿನ ಯೂತ್ ಫೋಟೋಗ್ರಫಿ ಸೋಸೈಟಿ ಆಯೋಜಿಸಿದ ಅಂತರರಾಷ್ಟ್ರೀಯ ಛಾಯಾಚಿತ್ರ ಸ್ಪರ್ಧೆ ವಿಜಯಪುರ: ನಗರದ ಯುವ ಛಾಯಾಗ್ರಾಹಕ ವಿಜಯಪುರ ಜಿಲ್ಲಾ ನೂತನ ಛಾಯಾಗ್ರಾಹಕರ ಸಂಘದ ಕಾರ್ಯದರ್ಶಿ ಸತೀಶ ಕಲಾಲ ಅವರಿಗೆ ಬೆಂಗಳೂರಿನ ಯೂತ್ ಫೋಟೋಗ್ರಫಿ ಸೋಸೈಟಿಯು ಆಯೋಜಿಸಿದ ಅಂತರರಾಷ್ಟ್ರೀಯ ಛಾಯಾಚಿತ್ರ ಸ್ಪರ್ಧೆಯಲ್ಲಿ ಕಪ್ಪು ಬಿಳುಪು ವಿಭಾಗದ ಸ್ಪರ್ಧೆಯಲ್ಲಿ ಚಿನ್ನದ ಪದಕದ ಬಹುಮಾನಕ್ಕೆ ಭಾಜನರಾಗಿ ನಮ್ಮ ಜಿಲ್ಲೆಗೆ ಮತ್ತು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ ಎಂದು ಜಿಲ್ಲಾ ನೂತನ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ರಮೇಶ ಚವ್ಹಾಣ ಹರ್ಷ ವ್ಯಕ್ತಪಡಿಸಿದ್ದಾರೆ.ಈಗಾಗಲೆ ಹಲವಾರು ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ಪ್ರಶಸ್ತಿಗಳನ್ನು ಪಡೆದ ಸತೀಶ ಕಲಾಲ ಅವರು, ಈ ಬಾರಿ ಅಂತರರಾಷ್ಟ್ರೀಯ ಪ್ರಶಸ್ತಿ ಪಡೆದವರಾಗಿದ್ದು ಇವರು ಕ್ಲಿಕ್ಕಿಸಿದ ಗ್ರಾಮಿಣ ಭಾಗದಲ್ಲಿ ಅಣ್ಣ ತಂಗಿಯರು ಸಂತೋಷದಿಂದ ಆಟವಾಡುತಿದ್ದ ಛಾಯಾಚಿತ್ರವನ್ನು ದೃಶ್ಯ ಸಂಯೋಜನೆ, ನೆರಳು ಬೆಳಕಿನ ಸಂಯೋಜನೆಯ ಕೌಶಲಗಳನ್ನು ಹೊಂದಿದ ಚಿತ್ರಕ್ಕೆ ಚಿನ್ನದ ಪದಕ ದೊರೆತಿದೆ.ಇಟಲಿ, ಟರ್ಕಿ, ಸೌದಿ, ಜರ್ಮನಿ ಸಹಿತ ಭಾರತದ ಶ್ರೇಷ್ಠ ಛಾಯಾಗ್ರಾಹಕರು ಈ ಸ್ಪರ್ಧೆಯ ನಿರ್ಣಾಯಕರಾಗಿದ್ದರು. ಸತೀಶ ಕಲಾಲ…

Read More

ದೇವರಹಿಪ್ಪರಗಿ: ತಾಲೂಕಿನ ಚಟ್ನಳ್ಳಿ ಗ್ರಾಮದಲ್ಲಿ ಅನಧಿಕೃತ ಮದ್ಯ ಮಾರಾಟ ಮಾಡುವುದನ್ನು ತಡೆಯಲು ಆಗ್ರಹಿಸಿ ಗ್ರಾಮದ ಸರಸ್ವತಿ ಮಹಿಳಾ ಸ್ವಸಹಾಯ ಸಂಘ, ಕರ್ನಾಟಕ ಅಂಬೇಡ್ಕರ್ ಸೇನೆಯ ಪದಾಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯೆ ಸೇರಿ ಶಿರಸ್ತೇದಾರ ಸುರೇಶ ಮ್ಯಾಗೇರಿ ಅವರಿಗೆ ಮನವಿ ಸಲ್ಲಿಸಿದರು.ತಾಲ್ಲೂಕಿನ ಚಟ್ನಳ್ಳಿ ಗ್ರಾಮದ ಮಹಿಳೆಯರು, ಕರ್ನಾಟಕ ಅಂಬೇಡ್ಕರ್ ಸೇನೆಯ ಪದಾಧಿಕಾರಿಗಳು ಶುಕ್ರವಾರ ತಹಶೀಲ್ದಾರ ಕಚೇರಿಗೆ ಆಗಮಿಸಿ ತಮಗೆ ನ್ಯಾಯ ದೊರಕಿಸಿಕೊಡಲು ಆಗ್ರಹಿಸಿದರು.ಈ ಸಂದರ್ಭದಲ್ಲಿ ಗ್ರಾಮದ ೮ನೇ ವಾರ್ಡಿನ ಸದಸ್ಯೆ ತನುಶ್ರೀ ಶರಣಗೌಡ ಪಾಟೀಲ, ಸರಸ್ವತಿ ಮಹಿಳಾ ಸ್ವಸಹಾಯ ಸಂಘದ ಅಧ್ಯಕ್ಷೆ ಮರೆವ್ವ ಹರಿಜನ ಹಾಗೂ ದಲಿತ ಸಂಘರ್ಷ ಸಮೀತಿಯ ಬೆಳಗಾವಿ ವಿಭಾಗೀಯ ಸಂಚಾಲಕ ರಾವುತ ತಳಕೇರಿ ಮಾತನಾಡಿ, ಗ್ರಾಮದಲ್ಲಿ ಕಳೆದ ಹಲವು ದಿನಗಳಿಂದ ಕಿರಾಣಿ, ಚಹಾ, ಪಾನ್ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಸುಮಾರು ೩ ಸಾವಿರ ಜನಸಂಖ್ಯೆ ಹೊಂದಿರುವ ಗ್ರಾಮದಲ್ಲಿ ಕೃಷಿ ಅವಲಂಬಿತ ಕುಟುಂಬಗಳೇ ಹೆಚ್ಚಾಗಿವೆ. ಇವರ ದಿನದ ಆದಾಯ ಎರಡು ನೂರುಗಳಾಗಿದ್ದು, ಈಗ ಕುಟುಂಬದ ಪುರುಷರು…

Read More

ಜಯ್ ನುಡಿ ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ ಉಪನ್ಯಾಸಕರು, ಬೆಳಗಾವಿ ನಾವೆಲ್ಲ ಕನ್ನಡಮ್ಮನ ಸತ್ಪುತ್ರರು ಎಂದು ಬೀಗುವುದಕ್ಕೆ ಒಂದೇ ಎರಡೇ ಹಲವಾರು ಕಾರಣಗಳುಂಟು. ಸುಮಾರು ೨೦೦೦ ಕ್ಕಿಂತಲೂ ಹೆಚ್ಚಿನ ಇತಿಹಾಸ ಹೊಂದಿದ ನಮ್ಮ ಕನ್ನಡ ಭಾಷೆ ತುಂಬಾ ಪ್ರಾಚೀನವಾದುದು ಎನ್ನುವುದಕ್ಕೆ ೨ ನೇ ಶತಮಾನದಲ್ಲಿ ರಚಿಸಿದ ಗ್ರೀಕ್ ಗ್ರಂಥವೊಂದರಲ್ಲಿ ಉಲ್ಲೇಖವಿದೆ. ಪ್ರಪಂಚದ ಸಾವಿರಾರು ಭಾಷೆಗಳ ಪಟ್ಟಿಯಲ್ಲಿ ನಮ್ಮ ಭಾಷೆ ಏಳನೇ ಸುಪ್ರಸಿದ್ಧ ಭಾಷೆ ಎಂದು ದಾಖಲಾಗಿದೆ. ಇದಕ್ಕೆ ಕಿರೀಟವಿಟ್ಟಂತೆ ಶಾಸ್ತ್ರೀಯ ಭಾಷೆಯ ಗರಿ ಬೇರೆ. ಕನ್ನಡಿಗರು ಪ್ರತಿಭಾವಂತರು ಅದರಲ್ಲೂ ಸಾಹಿತ್ಯ ರಚನೆಯಲ್ಲಿ ನಿಸ್ಸೀಮರು. ಅದಕ್ಕೆ ಸಾಕ್ಷಿ ನಮ್ಮ ಗಟ್ಟಿ ಸಾಹಿತ್ಯಕ್ಕೆ ದೊರೆತ ಜ್ಞಾನ ಪೀಠ ಪ್ರಶಸ್ತಿಗಳು. ‘ಕುರಿತೋದದೆಯಂ ಕಾವ್ಯ ಪ್ರಯೋಗ ಪರಿಣಿತಿ ಮತಿಗಳ್’ಎಂಬ ನೃಪತುಂಗ ಮಾರ್ಗದಲ್ಲಿನ ಉಲ್ಲೇಖ ನಮ್ಮ ಅಮೋಘ ಕಾವ್ಯ ಶಕ್ತಿಗೆ ಹಿಡಿದ ಕೈಗನ್ನಡಿ. ಕನ್ನಡಿಗರ ಸಾಹಿತ್ಯಾಭಿಮಾನ ಎಂದಿಗೂ ಕುಂದಲು ಸಾಧ್ಯವಿಲ್ಲ. ಇಲ್ಲಿ ಆಳಿದ ಅರಸರು ಸಾಹಿತ್ಯದ ಆರಾಧಕರಾಗಿದ್ದರು. ಕನ್ನಡ ಸಾಹಿತ್ಯವನ್ನು ಪೋಷಿಸಿ ಬೆಳೆಸಿದರು ಎಂಬುದಕ್ಕೆ ರನ್ನ ಪೊನ್ನ ಜನ್ನರಂಥ ಹೆಸರು ಸಾಕಲ್ಲವೇ?…

Read More

ಸಿಂದಗಿ: ನಗರದ ಪ್ರಶಾಂತ ಚಿತ್ರಮಂದಿರದಲ್ಲಿ ಇಂದು ರಾಜ್ಯಾದ್ಯಂತ ತೆರೆಕಂಡ ಸೈಕಲ್ ಸವಾರಿ ಚಿತ್ರಕ್ಕೆ ರಿಬನ್ ಕಟ್ ಮಾಡುವ ಮೂಲಕ ಮಾಜಿ ಶಾಸಕ ಶರಣಪ್ಪ ಸುಣಗಾರ ಚಾಲನೆ ನೀಡಿದರುಚಿತ್ರಕ್ಕೆ ಚಾಲನೆ ನೀಡಿದ ನಂತರ ಮಾತನಾಡಿದ ಅವರು, ಉತ್ತರ ಕರ್ನಾಟಕದ ಹೊಸ ಪ್ರತಿಭೆಗಳನ್ನು ಹೊಂದಿರುವ ಈ ಚಿತ್ರವು ಯಶಸ್ವಿಯಾಗಿ ಪ್ರದರ್ಶನಗೊಳ್ಳಲಿ, ಹಾಗೂ ಹೊಸ ಪ್ರತಿಭೆಗಳನ್ನು ಪ್ರೋತ್ಸಾಹಿಸೋಣ ಎಂದು ಹೇಳಿದರು.ಈ ಸಂದರ್ಭದಲ್ಲಿ ಚಿತ್ರದ ನಟ ಶಿವಾಜಿ ಮೆಟಗಾರ, ಉದ್ದಿಮೆದಾರ ಸಂತೋಷ ದೊಡಮನಿ, ಜಿಲ್ಲಾ DSS ಸಂಚಾಲಕ ವಾಯ್.ಸಿ.ಮಯೂರ, ಹೋರಾಟಗಾರರಾದ ಡಾ.ದಸ್ತಗೀರ.ಇಂಗಳಗಿ, ಮಡಿವಾಳ ನಾಯ್ಕೋಡಿ, ಡಾ.ರಾಜಶೇಖರ ನರಗೋದಿ, ಶಂಕರಲಿಂಗ ಬೂದಿಹಾಳ, ಪೀರು ಕೇರೂರ, ದೊಡ್ಡಪ್ಪ ಮುದನೂರ, ನೀಲಕಂಠ ಚಲವಾದಿ ಸೇರಿದಂತೆ‌ ಅನೇಕ ಪ್ರೇಕ್ಷಕರಿದ್ದರು.

Read More