Author: editor.udayarashmi@gmail.com

ಬಸವನಬಾಗೇವಾಡಿ: ಪಟ್ಟಣದ ಅಕ್ಕನಾಗಮ್ಮ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಕರುನಾಡು ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ ಹಾಗೂ ತಾಲೂಕು ಘಟಕದ ಸಹಯೋಗದಲ್ಲಿ ಕರ್ನಾಟಕ ನಾಮಕರಣ ಸುವರ್ಣ ಮಹೋತ್ಸವದಂಗವಾಗಿ ನ. ೧ ರಂದು ಮಧ್ಯಾನ್ಹ ೨ ಗಂಟೆಗೆ ರಾಜ್ಯಮಟ್ಟದ ಕರುನಾಡು ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ, ನೂತನ ಪದಾಧಿಕಾರಿಗಳ ಪದಗ್ರಹಣ, ಕವಿಗೋಷ್ಠಿ ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮ ಹಮ್ಮಿಕೊಂಡಿದೆ. ಕಾರ್ಯಕ್ರಮದ ಸಾನಿಧ್ಯವನ್ನು ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ, ಹಿರೇಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ವಹಿಸುವರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಎಂ.ಬಿ.ವಗ್ಗರ ವಹಿಸುವರು.ಹಂಗರಗಿಯ ಚನ್ನಬಸವ ಪ್ರತಿಷ್ಠಾನದ ಅಧ್ಯಕ್ಷ ವಿವೇಕಾನಂದ ಕಲ್ಯಾಣಶೆಟ್ಟಿ ಕಾರ್ಯಕ್ರಮ ಉದ್ಘಾಟಿಸುವರು. ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕಾಧ್ಯಕ್ಷ ಶಿವರುದ್ರಯ್ಯ ಹಿರೇಮಠ ಅವರು ನಾಡದೇವಿಗೆ ಪುಷ್ಪಾರ್ಚನೆ ನೆರವೇರಿಸುವರು. ಶಿಕ್ಷಕ ಸಾಹಿತಿ ಮಶ್ಯಾಕ ಗೌಂಡಿ ಉಪನ್ಯಾಸ ನೀಡುವರು. ಅತಿಥಿಗಳಾಗಿ ಮಹಾಂತೇಶ ಸಂಗಮ, ಆರ್.ಜಿ.ಅಳ್ಳಗಿ, ಈರಣ್ಣ ಮರ್ತುರ, ಗಿರಿಜಾ ಪಾಟೀಲ, ದೇವೇಂದ್ರ ಗೋನಾಳ, ಪ್ರಭಾಕರ ಖೇಡದ, ಎನ್.ಎಸ್.ಹೂಗಾರ, ಶಿವಪುತ್ರ ಅಜಮನಿ ಆಗಮಿಸುವರು ಎಂದು ಕರುನಾಡು ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ…

Read More

ಬಸವನಬಾಗೇವಾಡಿ: ಮಹಾಕಾವ್ಯ ರಾಮಾಯಣ ರಚಿಸುವ ಮೂಲಕ ಮಹರ್ಷಿ ವಾಲ್ಮೀಕಿ ಅಜರಾಮರವಾಗಿ ಉಳಿದುಕೊಂಡಿದ್ದಾರೆ. ಇಂತಹ ಮಹಾತ್ಮರ ಜೀವನವನ್ನು ವಿದ್ಯಾರ್ಥಿಗಳು ಅರಿತುಕೊಂಡು ತಮ್ಮ ಉಜ್ವಲ ಭವಿಷ್ಯ ಕಟ್ಟಿಕೊಳ್ಳಬೇಕೆಂದು ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಪ್ರಾಚಾರ್ಯ ಡಾ.ಎ.ವ್ಹಿ.ಸೂರ್ಯವಂಶಿ ಹೇಳಿದರು.ಪಟ್ಟಣದ ಬಿಎಲ್‌ಡಿಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಾಲ್ಮೀಕಿಯು ಸಂಘದೋಷದಿಂದ ತನ್ನ ವ್ಯಕ್ತಿತ್ವನ್ನು ಕಳೆದುಕೊಂಡಿದ್ದ. ಮುಂದೆ ಅವರು ನಾರದರ ಸಂಪರ್ಕದಿಂದ ಮಹಾನ್ ವ್ಯಕ್ತಿಯಾಗಿ ಶಕ್ತಿಯಾಗಿ ಬದಲಾಗಿ ಮಹಾಕಾವ್ಯ ರಾಮಾಯಣ ರಚನೆ ಮಾಡಿದರು. ವ್ಯಕ್ತಿಯ ಜೀವನದಲ್ಲಿ ಸಹ ಜೀವನ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ನಾವು ನಮ್ಮ ಬದುಕಿನಲ್ಲಿ ಉತ್ತಮ ಆಯ್ಕೆಗೆ ಮೊದಲ ಆದ್ಯತೆ ನೀಡಬೇಕು. ವಿದ್ಯಾರ್ಥಿಗಳು ಉತ್ತಮ ಆಯ್ಕೆ ಮಾಡಿಕೊಂಡು ಉಜ್ವಲ ಭವಿಷ್ಯ ನಿರ್ಮಿಸಿಕೊಳ್ಳಬೇಕೆಂದರು.ಈ ಸಂದರ್ಭದಲ್ಲಿ ಅರ್ಥಶಾಸದ ವಿಭಾಗದ ಮುಖ್ಯಸ್ಥ ಡಾ.ರವೀಂದ್ರಗೌಡ ಕೆ., ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ವೈ.ನಾಯಕ, ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ.ಡಿ.ಎಸ್.ಲಗಳಿ, ಡಾ.ಎಸ್.ಬಿ.ಜನಗೊಂಡ, ಎಂ.ಕೆ.ಯಾಧವ, ಎಸ್.ಡಿ.ಹನಮರಡ್ಡಿ, ವ್ಹಿ.ಎನ್.ರಜಪೂತ, ಪಿ.ಎಸ್.ಹೊರಕೇರಿ, ಎಸ್.ಜೆ.ಸೂರ್ಯವಂಶಿ,…

Read More

ಬಸವನಬಾಗೇವಾಡಿ: ವಾಲ್ಮೀಕಿ ಸಮಾಜಕ್ಕೆ ಸೇರಿದ ಮಹನೀಯರು ವಾಲ್ಮೀಕಿ ಜಾತಿಗೆ ಸೀಮಿತವಾಗಿ ಕೆಲಸ ಮಾಡದೇ ಇಡೀ ಸಮುದಾಯದ ಏಳ್ಗೆಗಾಗಿ ಶ್ರಮಿಸಿದ್ದಾರೆ. ಇಂತಹ ಸಮಾಜಕ್ಕೆ ಸೇರಿದ ಮಹರ್ಷಿ ವಾಲ್ಮೀಕಿ ಇಡೀ ಜಗತ್ತಿಗೆ ರಾಮಾಯಣ ಕೃತಿ ನೀಡುವ ಮೂಲಕ ಭಾರತೀಯ ಸಂಸ್ಕ್ರತಿಯನ್ನು ಎತ್ತಿ ಹಿಡಿದ್ದಾರೆ ಎಂದು ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ.ಯಲ್ಲಪ್ಪ ನಾಯಕ ಹೇಳಿದರು.ಪಟ್ಟಣದ ಬಸವ ಭವನದಲ್ಲಿ ತಾಲೂಕಾಡಳಿತ, ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಸಮಾರಂಭದಲ್ಲಿ ಉಪನ್ಯಾಸ ನೀಡಿ ಮಾತನಾಡಿದ ಅವರು, ವಾಲ್ಮೀಕಿ ಸಮಾಜ ಬಾಂಧವರು ಗುರುಭಕ್ತಿ, ದೈವಭಕ್ತಿಯನ್ನು ಹೊಂದಿದ್ದಾರೆ. ವಾಲ್ಮೀಕಿಯವರ ಕುರಿತು ಕೆಲವರು ಅಪಪ್ರಚಾರ ಮಾಡುತ್ತಿರುವದು ವಿಷಾದನೀಯ. ವಾಲ್ಮೀಕಿ ಸಮಾಜದ ಕುರಿತು ಅವಹೇಳನಕಾರಿಯಾಗಿ ಹೇಳಬಾರದು ಎಂದು ಅಲಹಾಬಾದ್ ನ್ಯಾಯಾಲಯ ತೀರ್ಪು ನೀಡಿದೆ ಎಂದ ಅವರು, ದೇಶಕ್ಕೆ ಸಂವಿಧಾನ ನೀಡಿರುವ ಡಾ. ಅಂಬೇಡ್ಕರ ಅವರು ಸಹ ಸಾಕಷ್ಟು ಅಪಮಾನಕ್ಕೆ ಒಳಗಾಗಿರುವದನ್ನು ನೋಡುತ್ತೇವೆ. ಮಹರ್ಷಿ ವಾಲ್ಮೀಕಿ, ಡಾ.ಅಂಬೇಡ್ಕರ ಈ ಮಹನೀಯರನ್ನು ಸಮಕಾಲೀನ ಕಾಲದಲ್ಲಿ ಸ್ಮರಣೆ…

Read More

ಮುದ್ದೇಬಿಹಾಳ: ಸಾಮೂಹಿಕ ವಿಹಾಹಗಳಿಂದ ಸಾಕಷ್ಟು ಬಡ ಜನತೆಗೆ ಅನುಕೂಲಗಳಾಗುತ್ತವೆ. ಈ ಬಾರಿ ಬರದ ಛಾಯೆ ಎಲ್ಲೆಡೆ ಆವರಿಸಿದ್ದು ಮಠದ ಸದ್ಭಕ್ತರಿಗೆ ಅನುಕೂಲಕರವಾಗಲೆಂದು ವಿಶೇಷ ಪೂಜೆ ಮತ್ತು ಸಾಮೂಹಿಕ ವಿವಾಹಗಳನ್ನು ನಡೆಸುತ್ತಿರುವದಾಗಿ ತಾಲೂಕಿನ ಯರಝರಿಯ ಯಲ್ಲಾಲಿಂಗ ಮಠದ ಸಾಮೂಹಿಕ ವಿಹಾಹಗಳಿಂದ ಸಾಕಷ್ಟು ಬಡ ಜನತೆಗೆ ಅನುಕೂಲಗಳಾಗುತ್ತವೆ ಎಂದು ಮಲ್ಲಾರಲಿಂಗ ಪ್ರಭುಗಳು ಹೇಳಿದರು.ತಾಲೂಕಿನ ಯರಝರಿ ಗ್ರಾಮದ ಶ್ರೀ ಮಠದಲ್ಲಿ ನವರಾತ್ರೋತ್ಸವದ ಅಂಗವಾಗಿ ಏರ್ಪಡಿಸಲಾಗಿದ್ದ ಸಾಮೂಹಿಕ ವಿವಾಹ ಹಾಗೂ ಧರ್ಮಸಭೆ ಕಾರ್ಯಕ್ರಮದಲ್ಲಿ ದಿವ್ಯಸಾನಿಧ್ಯ ವಹಿಸಿ ಅವರು ಮಾತನಾಡಿದರು.ಮನುಷ್ಯರಿಗೆ ದೈವದ ಮೇಲೆ ನಂಬಿಕೆ ಕಡಿಮೆಯಾಗಿದೆ. ಮೊಬೈಲ್‌ನಲ್ಲಿ ಬರುವ ಹಾಳು ಮೂಳುಗಳನ್ನು ನೋಡಿಕೊಂಡು ಕೆಲವರು ದೇವರಿಗೆ ಕೈ ಮುಗಿವುದನ್ನೇ ಬಿಟ್ಟು ಬಿಟ್ಟಿದ್ದಾರೆ. ಮಹಿಳೆಯರು ದೇವರ ಸ್ವರೂಪ. ಅವರನ್ನು ಹಿಂಸಿಸಬಾರದು. ಮನೆ ಬೆಳಗಲು ಬರುವ ದೇವತೆಯರನ್ನು ವರದಕ್ಷಿಣೆ ರೂಪದಲ್ಲಿ ಕಿರುಕುಳ ಕೊಡುತ್ತಿರುವದರಿಂದ ಮಳೆ ಬಾರದೆ ಬೆಳೆ ಇಲ್ಲದೇ ಪರದಾಡುವಂತಾಗಿದೆ. ನಾಡಿನ ಪ್ರತಿಯೊಬ್ಬರೂ ಶಕ್ತಿ ದೇವತೆಯ ಆರಾಧನೆ ಮಾಡಿ ಮಳೆಗಾಗಿ ಪ್ರಾರ್ಥಿಸುವಂತೆ ತಿಳಿಸಿದರು.ಸಮಾಜದಲ್ಲಿ ಮಠ ಮಾನ್ಯಗಳ ಪಾತ್ರ ಬಹಳ ಮುಖ್ಯವಾದದ್ದು. ಮಠಗಳು…

Read More

ಬಸವನಬಾಗೇವಾಡಿ: ತಾಲೂಕಿನ ಕಣಕಾಲ ಗ್ರಾಮದ ಸಮೀಪದ ಆಲಕೊಪ್ಪರ ಗ್ರಾಮದ ಕೆರೆಯಿಂದ ಕಣಕಾಲ ಗ್ರಾಮದ ರೈತ ರಾಮಣ್ಣ ಬಸಪ್ಪ ಯರಝರಿ ಅವರ ಜಮೀನದಲ್ಲಿ ಶುಕ್ರವಾರ ಮೊಸಳೆಯೊಂದು ಕಾಣಿಸಿಕೊಂಡಿದ್ದರಿಂದ ರೈತರಲ್ಲಿ ಆತಂಕವುಂಟು ಮಾಡಿತ್ತು.ತಾಲೂಕಿನಾದ್ಯಂತ ಬರಗಾಲದ ಛಾಯೆ ಅವರಿಸಿದ್ದರಿಂದ ಕೃಷ್ಣಾ ನದಿಯಿಂದ ಆಲಮಟ್ಟಿ ಡ್ಯಾಂ ನಿಂದ ಕಾಲುವೆಗಳ ಮುಖಾಂತರ ಕೆರೆಗೆ ನೀರು ಬಿಟ್ಟಿದರ ಹಿನ್ನೆಲೆಯಲ್ಲಿ ಕಾಲುವೆ ಮೂಲಕ ಮೊಸಳೆ ಕೆರೆ ಸೇರಿ ಶುಕ್ರವಾರ ಜಮೀನಿನಲ್ಲಿ ಸೇರಿತ್ತು. ಇದನ್ನು ನೋಡಿದ ರೈತರು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ಮೊಸಳೆ ಹಿಡಿಯಲು ಬಿದಿರು, ಹಗ್ಗದ ಸಹಾಯದ ಮೂಲಕ ಸೆರೆ ಹಿಡಿದು ಟಂಟಂ ಮೂಲಕ ಆಲಮಟ್ಟಿ ಡ್ಯಾಂ ಗೆ ಕಳುಹಿಸಿಕೊಡಲಾಗಿದೆ ಎಂದು ಗ್ರಾಮ ಪಂಚಾಯತಿ ಸದಸ್ಯ ರಾಜಶೇಖರ ಹುಲ್ಲೂರ ತಿಳಿಸಿದರು.

Read More

ವಿಜಯಪುರ: ಕೇಂದ್ರ ಸರ್ಕಾರವು ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ದತ್ತಾಂಶ ಕ್ರೋಢಿಕರಿಸುವ ಉದ್ಧೇಶದಿಂದ ೩೭೯ ವರ್ಗಗಳ ಎಲ್ಲ ಅಸಂಘಟಿತ ಕಾರ್ಮಿಕರನ್ನು ಇ-ಶ್ರಮ ಪೊರ್ಟಲ್ ಮೂಲಕ ನೊಂದಾಯಿಸಲಾಗುತ್ತಿದ್ದು, ದಿ.೩೧-೦೩-೨೦೨೨ರವರೆಗೆ ನೊಂದಣಿಯಾಗಿ ಅಪಘಾತೊಂಡ ಫಲಾನುಭವಿಗಳಿಗೆ ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆಯಡಿ ೨ ಲಕ್ಷ ರೂ. ಅಪಘಾತ ಪರಿಹಾರ ಒದಗಿಸುತ್ತಿದೆ.ಫಲಾನುಭವಿ ಆಧಾರ ಸಂಖ್ಯೆ, ಯುಎಎನ್ ಕಾರ್ಡ, ಮರಣ ಪ್ರಮಾಣ ಪತ್ರ, ಮರಣಕ್ಕೆ ಕಾರಣದ ವೈದ್ಯಕೀಯ ಪ್ರಮಾಣ ಪತ್ರ, ಎಫ್‌ಐಆರ್-ಪಂಚನಾಮೆಯೊಂದಿಗೆ ನೊಂದಾಯಿಸಿಕೊಂಡು ಪರಿಹಾರ ಪಡೆದುಕೊಳ್ಳಬಹುದಾಗಿದ್ದು, ಆಸಕ್ತರು ಸೂಕ್ತ ದಾಖಲೆಗಳೊಂದಿಗೆ ಕಾರ್ಮಿಕರ ಅಧಿಕಾರಿಗಳ ಕಚೇರಿ, ವಿಜಯಪುರ ಉಪ ವಿಭಾಗ, ಕಾರ್ಮಿಕ ಕಲ್ಯಾಣ ಸಮುದಾಯ ಭವನ, ಸಿಂದಗಿ ನಾಕಾ, ಅಲ್ಲಾಪೂರ ಓಣಿ, ವಿಜಯಪುರ ಇವರಿಗೆ ಅರ್ಜಿ ಸಲ್ಲಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಕಾರ್ಮಿಕ ಅಧಿಕಾರಿ ಎಸ್.ಜಿ.ಖೈನೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಇಂದು ವಿವಿಧ ನಿಗಮ ಮಂಡಳಿಗಳ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ ಜರುಗಿತು. ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಶನಿವಾರ ನಗರದ ಪಿಡಿಜೆ ಕಾಲೇಜ್ ನಲ್ಲಿ ನಡೆದಿರುವ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳನ್ನು ಅತ್ಯಂತ ಕಟ್ಟು ನಿಟ್ಟಾಗಿ ನಿರ್ವಹಿಸಬೇಕು. ಪರೀಕ್ಷಾ ಸಂದರ್ಭದಲ್ಲಿ ಯಾವುದೇ ಸಮಸ್ಯೆಗಳು ಉದ್ಭವಿಸದಂತೆ ಎಚ್ಚರಿಕೆ ವಹಿಸಬೇಕೆಂದು ಹೇಳಿದರು. ಯಾವುದೇ ಪರೀಕ್ಷಾ ಕೇಂದ್ರದಿಂದ ದೂರಿಗೆ ಆಸ್ಪದ ನೀಡದೇ ಪರೀಕ್ಷಾ ನಿಯಮಗಳನ್ನುನುಸರಿಸಿ,ವಹಿಸಿಕೊಟ್ಟ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದು ಹೇಳಿದರು.ಈ ಸಂದರ್ಭದಲ್ಲಿ ಪರೀಕ್ಷಾ ಕೇಂದ್ರದ ವೀಕ್ಷಕರಾದ ಎಸ್.ಎ ಮುಜಾವರ್,ಉಪ ಮುಖ್ಯ ಪರೀಕ್ಷಾ ಅಧೀಕ್ಷಕರಾದ ಎ.ಎಸ್.ಮೋಟಗಿ, ಎಸ್.ಎನ್ ಗೌಡರ್ ಸೇರಿದಂತೆ ವಿಚಕ್ಷಣಾ ದಳ ಅಧಿಕಾರಿ,ಸಿಬ್ಬಂದಿ ಉಪಸ್ಥಿತರಿದ್ದರು.

Read More

ಕಾರ್ಯಕ್ರಮದ ವ್ಯವಸ್ಥಿತ ನಿರ್ವಹಣೆಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ವಿಜಯಪುರ: ಸಾರ್ವಜನಿಕರ ವಿವಿಧ ಸಮಸ್ಯೆ-ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪ್ರತಿ ತಿಂಗಳು ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳುವ ಸರ್ಕಾರದ ನಿರ್ದೇಶನದಂತೆ ನವೆಂಬರ್ ೨ ರಂದು ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಂಡ ಜನತಾ ದರ್ಶನ ಕಾರ್ಯಕ್ರಮ ವ್ಯವಸ್ಥಿತವಾಗಿ ನಿರ್ವಹಣೆ ಮಾಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಕಳೆದ ಬಾರಿ ನಡೆದ ಜನತಾ ದರ್ಶನದಲ್ಲಿ ಸಾರ್ವಜನಿಕರಿಂದ ಸಲ್ಲಿಕೆಯಾದ ಒಟ್ಟು ೭೦೯ ಅರ್ಜಿಗಳಲ್ಲಿ ಈವರೆಗೆ ೫೪೨ ಅರ್ಜಿಗಳನ್ನು ವಿಲೇವಾರಿಗೊಳಿಸಿದ್ದು, ಬಾಕಿ ಇರುವ ೧೬೭ ಅರ್ಜಿಗಳನ್ನು ಕೂಡಲೇ ಬಾಕಿ ಉಳಿಸಿಕೊಳ್ಳದೇ ಇತ್ಯರ್ಥಪಡಿಸಲು ಕ್ರಮ ವಹಿಸುವಂತೆ ಸೂಚನೆ ನೀಡಿದರು.ಜನತಾ ದರ್ಶನ ಕಾರ್ಯಕ್ರಮದ ಕುರಿತು ಸಾರ್ವಜನಿಕರಲ್ಲಿ ಮಾಹಿತಿ ಒದಗಿಸಲು ವ್ಯಾಪಕ ಪ್ರಚಾರ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ನಗರ ಮತ್ತು…

Read More

ಡಿ.೨೪ರಂದು ವೃಕ್ಷೋತ್ಥಾನ ಹೆರಿಟೇಜ್ ರನ್ ಯಶಸ್ವಿಗೊಳಿಸಲು ಡಿಸಿ ಟಿ.ಭೂಬಾಲನ್ ಮನವಿ ವಿಜಯಪುರ: ಜಿಲ್ಲೆಯ ಐತಿಹಾಸಿಕ ಸ್ಮಾರಕಗಳ ರಕ್ಷಣೆಯೊಂದಿಗೆ ಪರಿಸರ ರಕ್ಷಣೆ ಕುರಿತು ಜಾಗೃತಿ ಮೂಡಿಸಲು ಇದೇ ಡಿ.೨೪ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ವೃಕ್ಷೋತ್ಥಾನ್ ಹೆರಿಟೇಜ್ ರನ್-೨೦೨೩ ಆಯೋಜಿಸಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ನೊಂದಾಯಿಸಿಕೊಳ್ಳುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮನವಿ ಮಾಡಿಕೊಂಡಿದ್ದಾರೆ.ಶುಕ್ರವಾರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರ ಅಧ್ಯಕ್ಷತೆಯಲ್ಲಿ ವೃಕ್ಷೋತ್ಥಾನ ಹೆರಿಟೇಜ್ ರನ್-೨೦೨೩ರ ಅಂಗವಾಗಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಈ ಓಟದಲ್ಲಿ ೩,೫,೧೦ ಮತ್ತು ೨೧ ಕಿ.ಮೀಗಳ ಓಟ ಇದ್ದು, ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಿಂದ ಆರಂಭಗೊಂಡು, ನಗರದ ವಿವಿಧ ಸ್ಮಾರಕಗಳ ಮುಂದೆ ಈ ಓಟ ನಡೆಯಲಿದೆ. ಹೊರಜಿಲ್ಲೆ, ರಾಜ್ಯಗಳಿಂದ ಹೆರಿಟೇಜ್‍ ರನ್ ಕಾರ್ಯಕ್ರಮದಲ್ಲಿ ಓಟಗಾರರು ಭಾಗವಹಿಸುವ ನಿರೀಕ್ಷೆ ಇದ್ದು, ಜಿಲ್ಲೆಯ ಶಾಲಾ ಕಾಲೇಜಿನ ಹಾಗೂ ವಸತಿ ನಿಲಯದ ವಿದ್ಯಾರ್ಥಿಗಳು, ಮಾಜಿ ಸೈನಿಕರು, ಪೊಲೀಸ್ ಇಲಾಖೆ, ಅಗ್ನಿ ಶಾಮಕ, ಬ್ಯಾಂಕು ಸೇರಿದಂತೆ ಎಲ್ಲಾ ಅಧಿಕಾರಿ, ಸಿಬ್ಬಂದಿ ಹಾಗೂ ಸಾರ್ವಜನಿಕರು ಹೆಚ್ಚಿನ…

Read More

ಸಿಂದಗಿಯಲ್ಲಿ ವಿವಿಧೆಡೆ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಸಿಂದಗಿ: ನಾವೆಲ್ಲರೂ ಕಾರ್ಯದೆಡೆಗೆ ಹೆಚ್ಚಿನ ಗಮನ ಹರಿಸಿದಾಗ ಮಾತ್ರ ಬದಲಾವಣೆಯಾಗಲು ಸಾಧ್ಯ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು. ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ತಾಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ತಾಲೂಕು ಆಡಳಿತ ಸಹಯೋಗದೊಂದಿಗೆ ಶನಿವಾರ ಹಮ್ಮಿಕೊಂಡ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ಅವರು, ನಾವು ಕೇವಲ ಭಾಷಣ ಮಾಡುವವರಾಗುತ್ತಿದ್ದೇವೆ. ಕೆಲಸಗಳಲ್ಲಿ ಕಾರ್ಯ ಪ್ರವೃತ್ತರಾಗುತ್ತಿಲ್ಲ. ಮಹಾನ್ ನಾಯಕರು ನೀಡಿದ ಸಂದೇಶಗಳು ನಾವು ಜಾರಿಗೆ ಬರುವಂತೆ ಮಾಡಬೇಕು. ಮತ್ತು ವಾಲ್ಮೀಕಿಸಮಾಜದ ಬಹು ಬೇಡಿಕೆಯಾದ ಸಮುದಾಯ ಭವನ ನನ್ನ ಮುಂದಿನ ೨ ವರ್ಷದ ಅವಧಿಯಲ್ಲಿ ಮಾಡಿಸಿಕೊಡುವೆ. ಹಾಗೂ ವೃತ್ತಕ್ಕೆ ಕೆಲವು ಕಾನೂನು ಅಡತಡೆಗಳಿವೆ. ಅದನ್ನು ಕುಳಿತು ಮಾತನಾಡಿ ಬಗೆಹರಿಸುವ ಕೆಲಸ ಮಾಡೋಣ ಎಂದು ಭರವಸೆ ನೀಡಿದರು. ಈ ವೇಳೆ ಮಹರ್ಷಿ ವಾಲ್ಮೀಕಿ ಕುರಿತು ಉಪನ್ಯಾಸ ನೀಡಿದ ವಾಯ್ ಸಿ ಮಯೂರ ಮಾತನಾಡಿ, ರಾಮ, ಲಕ್ಮಣ, ಸೀತಾ, ರಾವಣರನ್ನು ಜಗತ್ತಿಗೆ ಪರಿಚಯಿಸಿದ್ದು ಆದಿಕವಿ…

Read More