Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಮುದ್ದೇಬಿಹಾಳ: ಅ.೨೯ ರಂದು ಬೆಳಿಗ್ಗೆ ೧೦ಕ್ಕೆ ತಾಲೂಕಿನ ಕುಂಟೋಜಿಯ ಬಸವೇಶ್ವರ ಸಭಾಭವನದಲ್ಲಿ ನನ್ನ ಪಟ್ಟಾಧಿಕಾರದ ಕುರಿತು ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿದ್ದು, ಪೂಜ್ಯರು, ಗಣ್ಯ ಮಾನ್ಯರು, ಸಂಘ ಸಂಸ್ಥೆಯ ಪ್ರತಿನಿಧಿಗಳು, ರಾಜಕಾರಣಿಗಳು, ಶಿಷ್ಯ ಬಳಗದವರು ಪಾಲ್ಗೊಂಡು ಬೆಂಬಲಿಸುವಂತೆ ಕುಂಟೋಜಿ ಸಂಸ್ಥಾನ ಹಿರೇಮಠದ ಡಾ.ಚನ್ನವೀರ ದೇವರು ವಿನಂತಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಹಾನಗಲ್ ಶ್ರೀ ಗುರು ಕುಮಾರೇಶ್ವರ ಕೃಪೆಯಿಂದ, ನಾಡಿನ ಪಂಚಾಚಾರ್ಯ ಜಗದ್ಗುರುಗಳ ಆಶೀರ್ವಾದದೊಂದಿಗೆ, ಜಗದ್ಗುರು ಫಕೀರ ದಿಂಗಾಲೇಶ್ವರ ಶ್ರೀಗಳು, ಅಂಕಲಿಮಠದ ಬ್ರಹ್ಮಶ್ರೀ ವೀರಭದ್ರ ಪೂಜ್ಯರ ಗೌರವ ಅಧ್ಯಕ್ಷತೆಯಲ್ಲಿ ನಾಡಿನ ಹರ ಗುರು ಚರಮೂರ್ತಿಗಳ ನೇತೃತ್ವದಲ್ಲಿ ಕುಂಟೋಜಿ ಗ್ರಾಮದ ದೈವದವರ ನೇತೃತ್ವದಲ್ಲಿ ಈ ಪೂರ್ವಭಾವಿ ಸಭೆಯನ್ನು ಏರ್ಪಡಿಸಿದ್ದು ಎಲ್ಲ ಮಹನೀಯರು ಆಗಮಿಸಿ ಸಲಹೆ ಸೂಚನೆಗಳನ್ನು ನೀಡುವಂತೆ ವಿನಂತಿಸಿದ್ದಾರೆ.
ಪ್ರೌಢಶಾಲೆಗಳ ಮುಖ್ಯ ಶಿಕ್ಷಕರ ಸಭೆಯಲ್ಲಿ-ಜಿಪಂ ಸಿಇಓ ರಾಹುಲ್ ಶಿಂಧೆ ಅಭಿಮತ ವಿಜಯಪುರ: ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ಶಿಂಧೆ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಗರದ ಪಿಡಿಜೆ ಹೈಸ್ಕೂಲ್ ನಲ್ಲಿ ಜಿಲ್ಲೆಯ ಎಲ್ಲ ಸರ್ಕಾರಿ ಮತ್ತು ಅನುದಾನಿತ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರೊಂದಿಗೆ ಸಭೆ ನಡೆಯಿತು.ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ ಯೋಜನೆಯಡಿಯಲ್ಲಿ ದಾಖಲಾದ ಎಲ್ಲ ಮಕ್ಕಳಿಗೆ ಮಧ್ಯಾಹ್ನ ಉಪಹಾರದೊಂದಿಗೆ ಪೂರಕ ಪೌಷ್ಟಿಕ ಆಹಾರಗಳಾದ ಮೊಟ್ಟೆ, ಬಾಳೆ ಹಣ್ಣು ಮತ್ತು ಶೇಂಗಾ ಚಿಕ್ಕಿ ನಿಯಮಾನುಸಾರ ಮಕ್ಕಳಿಗೆ ವಿತರಿಸಿ, ಮಕ್ಕಳಲ್ಲಿ ಪೌಷ್ಟಿಕತೆ ಹೆಚ್ಚಿಸುವುದರ ಜೊತೆಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಬೇಕು ಎಂದರು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಶಾಲಾ ಮುಖ್ಯ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಇಲಾಖೆಯಿಂದ ಪೊರೈಕೆಯಾಗುವ ಆಹಾರ ಧಾನ್ಯ ಅವಶ್ಯಕತೆಗೆ ಅನುಸಾರವಾಗಿ ಬಳಕೆ ಮಾಡಿಕೊಳ್ಳವುದು. ಅಡುಗೆ ಕೊಠಡಿ ಸ್ವಚ್ಛತೆ, ಮಕ್ಕಳ ಸುರಕ್ಷತೆ ಕ್ರಮಗಳನ್ನು ಚಾಚೂ ತಪ್ಪದೇ ಪಾಲಿಸುವುದನ್ನು ಖಚಿತಪಡಿಸಿಕೊಳ್ಳಬೇಕು. ಅಡುಗೆ ಸಿಬ್ಬಂದಿ ಕಡ್ಡಾಯವಾಗಿ ಅಡುಗೆ ಸಮವಸ್ತ್ರ, ಶಿರವಸ್ತ್ರ (ಏಫ್ರಾನ್ ಮತ್ತು ಕ್ಯಾಪ್) ಬಳಸುವಂತೆ…
ವಿಜಯಪುರ: ಕಬ್ಬು ನುರಿಸುವ ಹಂಗಾಮು ಆರಂಭಗೊಳ್ಳುವ ಹಿನ್ನಲೆಯಲ್ಲಿ ಜಿಲ್ಲೆಯ ಬಸವೇಶ್ವರ ಸಕ್ಕರೆ ಕಾರ್ಖಾನೆಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.ಸಕ್ಕರೆ ಕಾರ್ಖಾನೆಗಳು ರೈತರಿಗೆ ಸಕಾಲದಲ್ಲಿ ಕಬ್ಬಿನ ಬಿಲ್ ಪಾವತಿಸಬೇಕು. ಕಾರ್ಖಾನೆಯಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ಕಾರ್ಮಿಕರಿಗೆ ಸುರಕ್ಷತಾ ನಿಯಮಗಳನ್ನು ಪಾಲಿಸಲು ತಿಳಿಸಿ, ನಿಯಮಾನುಸಾರ ಕಾರ್ಮಿಕರಿಗೆ ಸೌಲಭ್ಯಗಳನ್ನು ಒದಗಿಸುವಂತೆ ಅವರು ಸೂಚನೆ ನೀಡಿದರು.ಈ ಸಂದರ್ಭದಲ್ಲಿ ವಿಜಯಪುರ ಉಪವಿಭಾಗಾಧಿಕಾರಿ ಬಸವಣ್ಣೆಪ್ಪ ಕಲಶೆಟ್ಟಿ, ಆಹಾರ ಮತ್ತು ನಾಗರಿಕರ ಸರಬರಾಜು ಇಲಾಖೆ ಉಪನಿರ್ದೇಶಕ ವಿನಯಕುಮಾರ ಪಾಟೀಲ ಉಪಸ್ಥಿತರಿದ್ದರು.
ಕೊಲ್ಹಾರ: ಸ್ಥಳೀಯ ಪಟ್ಟಣ ಪಂಚಾಯತಿಯ ೭ನೇ ವಾರ್ಡಿನ ಸದಸ್ಯ ವಿಜಯಮಹಾಂತೇಶ ಕಲ್ಲಪ್ಪ ಗಿಡ್ಡಪ್ಪಗೋಳ ಇವರನ್ನು ಕರ್ನಾಟಕ ರಕ್ಷಣಾ ವೇದಿಕೆಯ (ನಾರಾಯಣಗೌಡ ಬಣ) ಕೊಲ್ಹಾರ ತಾಲೂಕಾ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಯುವ ಜಿಲ್ಲಾಧ್ಯಕ್ಷ ಅಶೋಕ ಹಾರಿವಾಳ ಆದೇಶ ಮಾಡಿದ್ದಾರೆ.ಕರ್ನಾಟಕ ರಾಜ್ಯದ ಪ್ರತಿಯೊಂದು ಪ್ರದೇಶದಲ್ಲಿ ಕನ್ನಡ ನೆಲ, ಜಲ, ಭಾಷೆಯ ಉಳಿವಿಗಾಗಿ ಪದಾದಿಕಾರಿಗಳು ಶ್ರಮಿಸಬೇಕು ಎಂದು ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.ಜಿಲ್ಲಾಧ್ಯಕ್ಷ ಎಮ್.ಸಿ.ಮುಲ್ಲಾ , ರಾಜ್ಯ ಸಂಚಾಲಕ ಸಂತೋಷಗೌಡ ಪಾಟೀಲ, ಅವರ ಮನವಿ ಮೇರೆಗೆ ರಾಜ್ಯಧ್ಯಕ್ಷರಾದ ನಾರಾಯಣಗೌಡ ಅವರು ವಿಜಯಮಹಾಂತೇಶ ಅವರನ್ನು ನೇಮಕ ಮಾಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುದ್ದೇಬಿಹಾಳ: ಅ.೨೯ ರಂದು ಸಂಜೆ ೫:೪೫ ಕ್ಕೆ ಪಟ್ಟಣದ ವಿಬಿಸಿ ಹೈಸ್ಕೂಲ್ ನ ಸಿದ್ದೇಶ್ವರ ವೇದಿಕೆಯಲ್ಲಿ ಎಳೆಯರು ನಾವು ಗೆಳೆಯರು ಸಂಘದಿಂದ ಗುರು-ಶಿಷ್ಯರ ಸಮ್ಮಿಲನ, ಗುರುವಂದನಾ ಸಮಾರಂಭ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಹಿರಿಯರು, ವರ್ತಕರು, ರಾಜಕೀಯ ಮುಖಂಡರು, ನ್ಯಾಯವಾದಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸೇರಿದಂತೆ ಎಲ್ಲ ಕ್ಷೇತ್ರಗಳ ಪ್ರಮುಖರು ಭಾಗಿಯಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಆಯೋಜಕರು ಮನವಿ ಮಾಡಿಕೊಂಡರು.ಈ ಕುರಿತು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪ್ರಮುಖರಾದ ಕಾಮರಾಜ ಬಿರಾದಾರ, ಟಿ.ಡಿ.ಲಮಾಣಿ, ಪ್ರಕಾಶ ಸರಾಫ್, ಆಸೀಫ್ ಅವಟಿ, ಹಣಮಂತ ನಲವಡೆ, ಜಗದೀಶ ಲಕ್ಷಟ್ರ ಸನ್ ೧೯೯೩ ರಲ್ಲಿ ಪಟ್ಟಣದ ಪ್ರಮುಖ ಶಾಲೆಗಳಲ್ಲಿ ಎಸ್‌ಎಸ್‌ಎಲ್‌ಸಿ ವ್ಯಾಸಾಂಗ ಮಾಡಿದ ಎಲ್ಲ ವಿದ್ಯಾರ್ಥಿ ವಿದ್ಯಾರ್ಥಿನಿಯರು ಕೂಡಿಕೊಂಡು ದೊಡ್ಡ ಪ್ರಮಾಣದಲ್ಲಿ ಎಲ್ಲ ಶಿಕ್ಷಕರುಗಳಿಗೆ ಗುರುವಂದನೆಯನ್ನು ಸಲ್ಲಿಸಬೇಕು ಎಂದು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ.ಅಂದು ಮುಂಜಾನೆ ೮:೩೦ ಕ್ಕೆ ಪಟ್ಟಣದ ಹುಡ್ಕೋದಲ್ಲಿರುವ ಟಾಪ್ ಇನ್ ಟೌನ್ ಹಾಲ್ ನಲ್ಲಿ ಎಲ್ಲ ಸ್ನೇಹಿತರೂ ಸೇರಿ ಗುರುಗಳೆಲ್ಲರ ಆಶೀರ್ವಾದ ಪಡೆದು ಅವರ ಜೊತೆ…
ವಿಜಯಪುರ: ಮೈಸೂರು ರಾಜ್ಯಕ್ಕೆ ಕರ್ನಾಟಕ ನಾಮಕರಣವಾಗಿ ೫೦ ವರ್ಷಗಳು ಪೂರ್ಣಗೊಂಡಿರುವ ಹಿನ್ನಲೆಯಲ್ಲಿ ವಿವಿಧ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಈ ವರ್ಷದ ಕನ್ನಡ ರಾಜ್ಯೋತ್ಸವ ಆಚರಣೆಗೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮದ ರೂಪರೇಷೆ ಸಿದ್ಧಪಡಿಸಲಾಗಿದ್ದು, ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾಡಳಿತದ ವತಿಯಿಂದ ಅನುಷ್ಠಾನಗೊಳಿಸಲು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಸೂಚನೆ ನೀಡಿದ್ದಾರೆ.ಜಿಲ್ಲೆಯ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳ ಸಹಯೋಗ ಪಡೆದು ನವೆಂಬರ್ ೧ ರಂದು ಜಿಲ್ಲೆಯಾದ್ಯಂತ ಮನೆಗಳ ಮುಂದೆ ಕೆಂಪು ಮತ್ತು ಹಳದಿ ಬಣ್ಣದ ರಂಗೋಲಿಗಳನ್ನು ಬಿಡಿಸಿ ಕರ್ನಾಟಕ ಸಂಭ್ರಮ-೫೦ “ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ಎಂಬ ಘೋಷ ವಾಕ್ಯವನ್ನು ಬರೆಯುವಂತೆ ಸಾರ್ವಜನಿಕರಲ್ಲಿ ಮನವಿ ಮಾಡುವುದು, ನವೆಂಬರ್ ೦೧ರ ಬೆಳಿಗ್ಗೆ ೯ ಗಂಟೆಗೆ ಎಲ್ಲಾ ಆಕಾಶವಾಣಿ ಕೇಂದ್ರಗಳಲ್ಲಿ ನಾಡಗೀತೆಯನ್ನು ಪ್ರಸಾರ ಮಾಡಲಾಗುವುದು ಆ ಸಮಯದಲ್ಲಿ ಕನ್ನಡ ನಾಡಿನ ಸಮಸ್ತ ನಾಗರಿಕರು ಎದ್ದು ನಿಂತು ಗೌರವ ಸಲ್ಲಿಸಲು ಮನವಿ ಮಾಡುವುದು, ಅಂದು ಸಂಜೆ ೫ ಗಂಟೆಗೆ ಜಿಲ್ಲೆಯ ಎಲ್ಲಾ ಮೈದಾನಗಳಲ್ಲಿ ಕೆಂಪು ಹಳದಿ…
ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸಭೆ ವಿಜಯಪುರ: ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅರ್ಹತಾ ದಿನಾಂಕ : ೦೧-೦೧-೨೦೨೪ಕ್ಕೆ ಸಂಬಧಿಸಿದಂತೆ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಮತದಾರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತೆಗೆದುಹಾಕುವುದು, ತಿದ್ದುಪಡಿ ಸೇರಿದಂತೆ ಹಕ್ಕು ಮತ್ತು ಆಕ್ಷೇಪಣೆಗಳ ಸಲ್ಲಿಕೆಗೆ ದಿ.೨೭-೧೦-೨೦೨೩ ರಿಂದ ೦೯-೧೨-೨೦೨೩ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದರು.ಶುಕ್ರವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಅವರು, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಿನಾಂಕ : ೨೫-೦೯-೨೦೨೩ರನ್ವಯ ಮತದಾರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅರ್ಹತಾ ದಿನಾಂಕ : ೦೧-೦೧-೨೦೨೪ಕ್ಕೆ ಸಂಬಧಿಸಿದಂತೆ ಮತದಾರರ ಪಟ್ಟಿಯನ್ನು ಪರಿಷ್ಕರಿಸುವ ಕುರಿತು ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿದೆ. ದಿನಾಂಕ : ೨೭-೧೦-೨೦೨೩ ರಿಂದ ೦೯-೧೨-೨೦೨೩ರವರೆಗೆ ಹಕ್ಕು ಮತ್ತು ಆಕ್ಷೇಪಣೆಗೆ ಅವಕಾಶ, ನಂತರ ವಿಶೇಷ ಕ್ಯಾಂಪೇನ್‌ಗಳ ಮೂಲಕ ಮತದಾರ ಪಟ್ಟಿ ಪರಿಷ್ಕರಣೆ ಮಾಡಲಾಗುತ್ತಿದೆ. ಜಿಲ್ಲೆಯ ಅಂತಿಮ ಮತದಾರರ ಪಟ್ಟಿ ಪ್ರಕಟಿಸಲು ಅನುಕೂಲವಾಗುವಂತಗೆ ಮತದಾರ…
ಇಂಡಿ: ಪಟ್ಟಣದ ಸೇರಿದಂತೆ ತಾಲೂಕಿನ ಆರಾಧ್ಯದೇವಿ ಅಂಬಾ ಭವಾನಿ ತುಳಜಾಪುರದಲ್ಲಿ ಸಹಸ್ರ ಸಹಸ್ರ ಭಕ್ತ ಸಾಗರದ ಪಾದಯಾತ್ರೆಯ ಮೂಲಕ ತೆರಳುತ್ತಿದ್ದು ರಸ್ತೆಯ ಮೇಲೆ ಎಲ್ಲಿ ನೋಡಿದರೂ ಭಕ್ತರ ಜನಸಾಗರ ಕಾಣುತ್ತೇವೆ. ಸೀಗೆ ಹುಣ್ಣಿಮೆ ಬಂದರೆ ಸಾಕು ಅಂಬಾ ಭವಾನಿ ಭಕ್ತರಿಗೆ ಸಂಭ್ರಮಮೋ ಸಂಭ್ರಮ. ವರದಾನಿ ಅಂಬಾ ಭವಾನಿ ದರ್ಶನಕ್ಕೆ ತಂಡೋಪ ತಂಡವಾಗಿ ಭಕ್ತರು ತುಳಜಾಪುರದತ್ತ ಪಾದಯಾತ್ರೆ ಮೂಲಕ ಹೆಜ್ಜೆ ಹಾಕುತ್ತಾರೆ.ಇಂಡಿ ಪಟ್ಟಣದ ಸೇರಿದಂತೆ ತಾಲೂಕಿನ ತಾಂಬಾ, ಹೋರ್ತಿ, ಝಳಕಿ, ಸೇರಿದಂತೆ ವಿಜಯಪುರ ಪಟ್ಟಣ ಮತ್ತು ತಾಲೂಕಿನ, ಸಿಂದಗಿ, ಆಲಮೇಲ ಹಾಗೂ ದೇವರ ಹಿಪ್ಪರಗಿ ತಾಲೂಕಿನ ಎಲ್ಲ ಗ್ರಾಮಗಳಿಂದ ಇಂಡಿ ತಾಲೂಕಿನ ಮೂಲಕ ಅಂದಾಜು ಒಂದು ಲಕ್ಷಕ್ಕೂ ಹೆಚ್ಚು ಜನ ಪಾದಯಾತ್ರೆಯ ಮೂಲಕ ತೆರಳುತ್ತಿದ್ದಾರೆ.ಝಳಕಿಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಹೋಗಲು ಎರಡು ಬರಲು ನಾಲ್ಕು ರಸ್ತೆಗಳಿದ್ದು ಅದರಲ್ಲಿ ಒಂದು ಕಡೆಯ ಎರಡು ರಸ್ತೆ ಬಂದ್ ಮಾಡಿ ಪಾದಯಾತ್ರೆಗಳಿಗೆ ತೊಂದರೆಯಾಗದಂತೆ ಸರಕಾರ ಸಹಕರಿಸುತ್ತದೆ.ಮಾಜಿ ಶಾಸಕ ದೇವಾನಂದ ಚವ್ಹಾಣ, ಮಾಜಿ ಶಾಸಕ ಅಪ್ಪು ಪಟ್ಟಣಶೆಟ್ಟಿ ಸೇರಿದಂತೆ…
ಜಿಲ್ಲೆಯ ಎಂಟು ವಿಧಾನಸಭಾ ಮತಕ್ಷೇತ್ರಗಳಲ್ಲಿ ೧೮,೯೯,೨೪೮ ಮತದಾರರು ವಿಜಯಪುರ: ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅರ್ಹತಾ ದಿನಾಂಕ : ೦೧-೦೧-೨೦೨೪ಕ್ಕೆ ಸಂಬಂಧಿಸಿದಂತೆ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಜಿಲ್ಲೆಯ ೮ ವಿಧಾನಸಭಾ ಮತಕ್ಷೇತ್ರಗಳ ವ್ಯಾಪ್ತಿಯಲ್ಲಿ ೯,೬೮,೧೩೩ ಪುರುಷ ಮತದಾರರು, ೯,೩೦,೮೯೮ ಮಹಿಳಾ ಮತದಾರರು ಹಾಗೂ ೨೧೭ ಇತರೆ ಮತದಾರರು ಸೇರಿದಂತೆ ಒಟ್ಟು ೧೮,೯೯,೨೪೮ ಮತದಾರರಿದ್ದು, ದಿನಾಂಕ : ೦೫-೦೧-೨೦೨೪ ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಚುರಪಡಿಸಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ.ಶುಕ್ರವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿ ಮಾಧ್ಯಮಗೋಷ್ಠಿ ನಡೆಸಿದ ಅವರು, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಿನಾಂಕ : ೨೫-೦೯-೨೦೨೩ರನ್ವಯ ಮತದಾರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅರ್ಹತಾ ದಿನಾಂಕ : ೦೧-೦೧-೨೦೨೪ಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿಯನ್ನು ಪರಿಷ್ಕರಿಸುವ ಕುರಿತು ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿದೆ. ವೇಳಾಪಟ್ಟಿಯಂತೆ ದಿನಾಂಕ : ೨೭-೧೦-೨೦೨೩ ರಂದು ಕರಡು…
ಬಸವನಬಾಗೇವಾಡಿ: ಮಳೆಗಾಲದಲ್ಲಿ ಮಳೆ ನೀರು ಹಳ್ಳಕೊಳ್ಳದ ಮುಖಾಂತರ ವ್ಯರ್ಥ ಹರಿದು ಹೋಗುವದನ್ನು ತಡೆಯಲು ಈ ಮೂಲಕ ರೈತ ಬಾಂಧವರಿಗೆ, ಜಾನುವಾರುಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರವು ಬಾಂದಾರಗಳನ್ನು ನಿರ್ಮಾಣ ಮಾಡುತ್ತದೆ. ನಿರ್ಮಾಣವಾದ ಬಾಂದಾರ ಸಂರಕ್ಷಣೆ ಮಾಡುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಕೈಮಗ್ಗ ಮತ್ತು ಜವಳಿ, ಸಕ್ಕರೆ ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.ತಾಲೂಕಿನ ಮುತ್ತಗಿ ಗ್ರಾಮದ ಹಳ್ಳಕ್ಕೆ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ೨೦೨೨-೨೩ ನೇ ಸಾಲಿನ ನಬಾರ್ಡ್ ಲೆಕ್ಕ ಶೀರ್ಷಿಕೆ ಅಡಿಯಲ್ಲಿ ಅಂದಾಜು ರೂ.೧ ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡುವ ಬಾಂದಾರ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಬಾಂದಾರ ನಿರ್ಮಾಣದಿಂದ ಜಲಸಂಪನ್ಮೂಲ ಹೆಚ್ಚಿಸಬಹುದು. ಇದರಿಂದಾಗಿ ಅಂತರ್ಜಲ ಮಟ್ಟವೂ ಹೆಚ್ಚಾಗುತ್ತದೆ. ಈಚೆಗೆ ಮಳೆ ಪ್ರಮಾಣವು ಕಡಿಮೆಯಾಗುತ್ತಿದೆ. ಇದರಿಂದಾಗಿ ಜಲ ಸಂಪನ್ಮೂಲವನ್ನು ಕಾಪಾಡುವುದು ತುಂಬಾ ಅಗತ್ಯವಿದೆ. ಜಲವಿದ್ದರೆ ಮಾತ್ರ ಎಲ್ಲ ಜೀವಿಗಳು ಜೀವಿಸಲು ಸಾಧ್ಯ ಎಂಬುವದನ್ನು ನಾವೆಲ್ಲರೂ ಅರಿತುಕೊಂಡು ಜಲ ಸಂಪನ್ಮೂಲದ ಸಂರಕ್ಷಣೆ ಮಾಡುವ…
