Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಕಲಕೇರಿಯಲ್ಲಿ ೩೦ನೇ ಧಾರ್ಮಿಕ ವಿಜಯಮಹೋತ್ಸವ | ಸಾಧಕರಿಗೆ ಸನ್ಮಾನ | ತುಲಾಭಾರ ಕಲಕೇರಿ: ಪ್ರತಿಯೊಬ್ಬರು ಧರ್ಮ ಕಾರ್ಯಗಳಲ್ಲಿ ಭಾಗಿಯಾಗಬೇಕು. ಇದರಿಂದ ಪುಣ್ಯ ಪ್ರಾಪ್ತಿಯಾಗುತ್ತದೆ. ಸಾಧಕರನ್ನು ಸಮಾಜಕ್ಕೆ ಪರಿಚಯ ಮಾಡಿಕೊಡುವದರಿಂದ ಅನೇಕ ಪ್ರತಿಭೆಗಳಿಗೆ ಇದು ಪ್ರೇರಣೆಯಾಗುತ್ತದೆ. ಹಲವಾರು ಸಾಧಕರು ಬೆರೆಯವರಿಗೆ ಗೊತ್ತಿಲ್ಲದೆ ತೆರೆಮರೆಯಲ್ಲಿ ಕೆಲಸವನ್ನು ಮಾಡಿಕೊಂಡು ಹೋಗುತ್ತಿದ್ದಾರೆ. ಅಂತವರನ್ನು ಪ್ರೋತ್ಸಾಹಿಸುವ ಕಾರ್ಯ ನಡೆಯಲಿ ಎಂದು ಬಿ.ಜೆ.ಪಿ ಜಿಲ್ಲಾ ಉಪಾಧ್ಯಕ್ಷ ಮಲ್ಲಿಕಾರ್ಜುನ ಜೋಗುರ ಸಲಹೆ ನೀಡಿದರು.ಗ್ರಾಮದ ಶ್ರೀ ಅಂಭಾಭವಾನಿ ದೇವಸ್ಥಾನದಲ್ಲಿ ಬುಧವಾರ ಸಂಜೆ ವಿಜಯದಶಮಿ ನಿಮಿತ್ಯವಾಗಿ ಹಮ್ಮಿಕೊಂಡ ೩೦ ನೇ ವರ್ಷದ ಧಾರ್ಮಿಕ ವಿಜಯಮಹೋತ್ಸವ ಹಾಗೂ ವಿವಿದ ಕ್ಷೇತ್ರಗಳ ಸಾಧಕರಿಗೆ ಸನ್ಮಾನ, ದೇವಿ ಉಪಾಸಕ ಮೋತಿಲಾಲ ಕುಲಕರ್ಣಿ ಅವರ ತುಲಾಭಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಮಾಗಣಗೇರಿಯ ಡಾ.ವಿಶ್ವಾರಾಧ್ಯ ಶಿವಾಚಾರ್ಯರು ಸಾನಿಧ್ಯ ವಹಿಸಿ ಧಾಮಿಕ ವಿಜಯಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು,ಗುಣದಾಳದ ಡಾ.ವಿವೇಕ ದೇವರು, ಕುಮಸಗಿಯ ಅಭಿನವ ವೇಂಕಟೇಶ್ವರ ಶ್ರೀಗಳು, ಗುಂಡಕನಾಳದ ಗುರುಲಿಂಗ ಶ್ರೀಗಳು ಆಶೀರ್ವಚನ ನೀಡಿದರು.ಕಲಕೇರಿಯ ಸಿದ್ದರಾಮ ಶ್ರೀಗಳು, ಹೀರೂರಿನ ಜಯಸಿದ್ದೇಶ್ವರ, ಶ್ರೀಗಳು, ಗದ್ದುಗೆಮಠದ ಶ್ರೀಗುರು ಮಡಿವಾಳೇಶ್ವರ…
ಸಿಂದಗಿ: ನಿಯಮಿತವಾಗಿ ಆಹಾರ ಸೇವನೆ ಮಾಡುವುದರಿಂದ ಆರೋಗ್ಯಕರವಾದ ಜೀವನ ಸಾಗಿಸಬಹುದು ಎಂದು ಸಿವಿಲ್ ಹಿರಿಯ ನ್ಯಾಯಾಧೀಶ ನಾಗೇಶ ಮೊಗೇರ ಹೇಳಿದರು.ಪಟ್ಟಣದ ಸರ್ಕಾರಿ ಸಾರ್ವಜನಿಕರ ಆಸ್ಪತ್ರೆ ಆವರಣದಲ್ಲಿ ಗುರುವಾರದಂದು ಸಾರ್ವಜನಿಕ ಆಸ್ಪತ್ರೆ ತಾಲೂಕು, ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘ ಇವರ ಸಹಯೋಗದೊಂದಿಗೆ ಹಿರಿಯ ನಾಗರಿಕರ ದಿನಾಚರಣೆ ಹಾಗೂ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೈಹಿಕವಾಗಿ ಸದೃಢವಾಗಿ ಆರೋಗ್ಯಯುತವಾಗಿದ್ದರೂ ಮನಸ್ಸು ದುರ್ಬಲವಾಗಿದ್ದರೆ ನೂರಾರು ಕಾಯಿಲೆಗಳು ಬರುವ ಸಾಧ್ಯತೆಯಿದೆ. ಅವರು ಮಾನಸಿಕ ಆರೋಗ್ಯವೆಂದರೆ ದೈಹಿಕ, ಮಾನಸಿಕ ಹಾಗೂ ಸಾಮಾಜಿಕವಾಗಿ ಪೂರ್ಣವಾಗಿ ಸ್ವಸ್ಥವಾಗಿರುವುದು. ಹಿರಿಯ ನಾಗರಿಕರನ್ನು ಗೌರವಿಸಬೇಕಾದದ್ದು ಪ್ರತಿಯೊಬ್ಬರ ಕರ್ತವ್ಯ. ಮಕ್ಕಳು ತಂದೆ ತಾಯಿಯನ್ನು ಗೌರವಾದರಗಳಿಂದ ಕಾಣಬೇಕು. ಹಿರಿಯ ನಾಗರಿಕರಿಗೆ ಅನ್ಯಾಯವಾದಾಗ, ಅವರಿಗಾಗಿ ಕಾನೂನುಗಳಿವೆ. ಅವುಗಳ ಸದುಪಯೋಗ ಪಡಿಸಿಕೊಳ್ಳಲು ಕರೆ ನೀಡಿದರು.ಈ ವೇಳೆ ಜಿಲ್ಲಾ ಮನೋತಜ್ಞ ವೈದ್ಯ ಡಾ. ಮಂಜುನಾಥ್ ಮಸಳಿ ಮಾತನಾಡಿದರು.ಇದೇ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ಎಸ್.ಬಿ ದೊಡಮನಿ, ಸರಕಾರಿ ವಕೀಲರಾದ ಆನಂದ ರಾಠೋಡ, ಆನಂದ…
ಅ.೨೯ ರಂದು ಕುಂಟೋಜಿ ಗ್ರಾಮದ ಡಾ.ಚನ್ನವೀರ ದೇವರ ಪಟ್ಟಾಧಿಕಾರ ಕಾರ್ಯಕ್ರಮದ ಪೂರ್ವಭಾವಿ ಸಭೆ ಮುದ್ದೇಬಿಹಾಳ: ಅ.೨೯ ರಂದು ತಾಲೂಕಿನ ಕುಂಟೋಜಿ ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಗ್ರಾಮದ ಹಿರೇಮಠದ ಡಾ.ಚನ್ನವೀರ ದೇವರ ಪಟ್ಟಾಧಿಕಾರ ಕಾರ್ಯಕ್ರಮದ ಪೂರ್ವಭಾವಿ ಸಭೆಗೆ ತಾಲೂಕಿನ ಎಲ್ಲ ಸಮಾಜಗಳ ಮುಖಂಡರು, ಗಣ್ಯ ವರ್ತಕರು, ರಾಜಕೀಯ ಮುಖಂಡರು, ಹಿರಿಯರು, ವಕೀಲರು, ಪತ್ರಕರ್ತರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಜಾತ್ಯಾತೀತ ಮತ್ತು ಪಕ್ಷಾತೀತವಾಗಿ ಭಾಗಿಯಾಗಿ ಸಲಹೆ ಸೂಚನೆಗಳನ್ನು ನೀಡುವಂತೆ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ ವಿನಂತಿಸಿದರು.ಈ ಕುರಿತು ಕುಂಟೋಜಿ ಗ್ರಾಮದ ಹಿರಿಯರು ಗ್ರಾಮದ ಹಿರೇಮಠದಲ್ಲಿ ಕರೆದಿದ್ದ ಚರ್ಚಾಕೂಟದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಡಾ.ಚನ್ನವೀರ ದೇವರು ಜಾತಿ, ಮತ, ಪಂಥ ಎನ್ನದೇ ಎಲ್ಲ ವರ್ಗದವರಿಗೆ ಬೇಕಾದವರು. ಯಾವುದೇ ಕಾರ್ಯಕ್ರಮಕ್ಕೆ ಆಮಂತ್ರಣ ನೀಡಿದರೂ ಓಡಿ ಬಂದು ಪಾಲ್ಗೊಳ್ಳುತ್ತಾರೆ. ಅವರ ಪಟ್ಟಾಧಿಕಾರ ಕಾರ್ಯಕ್ರಮವನ್ನು ನೆರವೇರಿಸಿ ಕೊಡುವ ಸೌಭಾಗ್ಯ ನಮ್ಮೆಲ್ಲರಿಗೂ ದೊರಕಿದ್ದು ನಮ್ಮ ಭಾಗ್ಯ. ಎಲ್ಲ ಸಮುದಾಯಗಳ ಮುಖಂಡರು ತನು, ಮನ, ಧನದಿಂದ ಭಾಗಿಯಾಗಿ ಹಿಂದೆ…
ಪೌರಕಾರ್ಮಿಕರಲ್ಲಿ ಆರೋಗ್ಯ ಜಾಗೃತಿ ಮೂಡಿಸಿ ವಿಜಯಪುರ: ಜಿಲ್ಲೆಯ ಪೌರಕಾರ್ಮಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಆರೋಗ್ಯ ಶಿಬಿರಗಳನ್ನು ಹಮ್ಮಿಕೊಂಡು ಆರೋಗ್ಯ ಜಾಗೃತಿ ಮೂಡಿಸಬೇಕು. ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಕಾರ್ಮಿಕರಿಗೆ ಕಾಲಕಾಲಕ್ಕೆ ಆರೋಗ್ಯ ತಪಾಸಣೆ ನಡೆಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಮ್ಯಾನ್ಯುವೆಲ್ ಸ್ಕಾö್ಯವೆಂರ‍್ಸ್ ನೇಮಕಾತಿ ನಿಷೇಧ ಮತ್ತು ಪುನರ್ವಸತಿ ಅಧಿನಿನ ೨೦೧೩ರ ೩ನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಸಮಾಜದ ಸ್ವಾಸ್ಥ ಕಾಪಾಡುವ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಕಾರ್ಮಿಕರ ಆರೋಗ್ಯ ತಪಾಸಣೆ ಅತಿ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ವಿವಿಧ ಆರೋಗ್ಯ ಶಿಬಿರಗಳನ್ನು ಹಮ್ಮಿಕೊಳ್ಳುವ ಮೂಲಕ ಕಾರ್ಮಿಕರನ್ನು ತಪಾಸಣೆಗೊಳಪಡಿಸಬೇಕು. ಆರೋಗ್ಯ ಕಾಪಾಡಿಕೊಳ್ಳುವ ಕುರಿತು ಪೌರಕಾರ್ಮಿಕರಲ್ಲಿ ಅಗತ್ಯ ಜಾಗೃತಿ ಮೂಡಿಸುವ ಮೂಲಕ ಅವರ ಆರೋಗ್ಯದ ಬಗ್ಗೆ ತೀವ್ರ ಕಾಳಜಿ ವಹಿಸುವಂತೆ ಅವರು ಸೂಚನೆ ನೀಡಿದರು.ಪೌರಕಾರ್ಮಿಕರು, ಸ್ವಚ್ಛತಾ ಕೆಲಸಗಾರರಿಗೆ ಅತ್ಯುತ್ತಮ ಗುಣಮಟ್ಟದ ಪರಿಕರ ಹಾಗೂ ಸಮವಸ್ತ್ರ ಒದಗಿಸಬೇಕು. ಪೌರಕಾರ್ಮಿಕರಿಗೆ ಸುರಕ್ಷತೆ ಬಗ್ಗೆ ಎಚ್ಚರಿಕೆ ವಹಿಸುವಂತೆ ಸುರಕ್ಷಾ ಕಿಟ್-ಪರಿಕರ…
ಎಎಪಿ ವಿಜಯಪುರ ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ ಆರೋಪ ವಿಜಯಪುರ: ರಾಜ್ಯದ ಉಪಮುಖ್ಯಮಂತ್ರಿ ಹುದ್ದೆಯಲ್ಲಿರುವ ಡಿ.ಕೆ.ಶಿವಕುಮಾರ್ ಅವರು ಮಾತೆತ್ತಿದರೆ ಬರಿ ಬ್ರ್ಯಾಂಡ್ ಬೆಂಗಳೂರು ಮಾಡುತ್ತೀವಿ, ಕನಕಪುರವನ್ನು ಬೆಂಗಳೂರಿಗೆ ಸೇರಿಸುತ್ತೀವಿ, ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆಯೆಂದು ಹೆಸರು ಬದಲಿಸುತ್ತೀವಿ ಎನ್ನುತ್ತಿದ್ದಾರೆ. ಅವರೇನು ಕೇವಲ ಬೆಂಗಳೂರಿಗಷ್ಟೇ ಡಿಸಿಎಂ ಆಗಿದ್ದಾರೆಯೇ? ಎಂದು ಆಮ್ ಆದ್ಮಿ ಪಕ್ಷದ ವಿಜಯಪುರ ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ್ ಪ್ರಶ್ನಿಸಿದರು.ಈ ಕುರಿತು ಗುರುವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ ಅವರು, ರಾಜ್ಯ ಸರ್ಕಾರವು ಬೆಂಗಳೂರು ಕೇಂದ್ರಿಕೃತ ಆಡಳಿತದ ಮೂಲಕ ಉತ್ತರ ಕರ್ನಾಟಕವನ್ನು ಕಡೆಗಣಿಸುತ್ತಿರುವುದನ್ನು ಆಮ್ ಆದ್ಮಿ ಪಕ್ಷವು ತೀವ್ರವಾಗಿ ಖಂಡಿಸುತ್ತದೆ. ರಾಜ್ಯದ ಎಲ್ಲ ಭಾಗಗಳ ಎಲ್ಲ ಪಕ್ಷಗಳ ರಾಜಕಾರಣಿಗಳು ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ದಂಧೆಯಲ್ಲಿ ತೊಡಗಿಕೊಂಡಿದ್ದಾರೆ. ಇದರ ನೇರ ದುಷ್ಪರಿಣಾಮವೇ ಉತ್ತರ ಕರ್ನಾಟಕ ಹಾಗೂ ಕರ್ನಾಟಕ ರಾಜ್ಯದ ಸಮಗ್ರ ಅಭಿವೃದ್ಧಿಗೆ ಹಿನ್ನಡೆಯಾಗಿದೆ. ರಾಜ್ಯದ 224 ಶಾಸಕರುಗಳು ಬೆಂಗಳೂರಿನ ಚಿನ್ನದ ಬೆಲೆ ಬರುವ ಜಮೀನುಗಳನ್ನು ಕೊಂಡುಕೊಂಡು ರಿಯಲ್ ಎಸ್ಟೇಟ್ ದಂಧೆಗೆ ಇಳಿದಿರುವುದರ ಪರಿಣಾಮವೇ ಕರ್ನಾಟಕ ಸಮಗ್ರ ಅಭಿವೃದ್ಧಿಯಾಗದೆ…
ಢವಳಗಿ: ಸಮೀಪದ ಗುಂಡಕರ್ಜಗಿ ಗ್ರಾಮದ ಮಹಿಬೂಬಸುಬಾನಿ ಜಾತ್ರಾ ಮಹೋತ್ಸವ ಅ.26 ಗುರುವಾರದಿಂದ ಅ.28 ಶನಿವಾರದ ವರೆಗೆ ಅದ್ದೂರಿಯಾಗಿ ನಡೆಯಲಿದೆ.26 ಗುರುವಾರದಂದು ಗಂಧ ಏರುವುದು, ಮದ್ದು ಸುಡುವುದು, ಅಂದೆ ರಾತ್ರಿ 10 ಗಂಟೆಗೆ ಸುತ್ತಮುತ್ತಲಿನ ಗ್ರಾಮಸ್ಥರಿಂದ ಶಿವಭಜನೆ ನಡೆಯುವುದು. 27 ಶುಕ್ರವಾರದಂದು ಬೆಳಿಗ್ಗೆ 6 ಗಂಟೆಗೆ ಶ್ರೀ ಕಾಶಿಲಿಂಗೇಶ್ವರನಿಗೆ ಅಭಿಷೇಕ ನಂತರ ಕೋಲಾಟ, ವಾದ್ಯ ವೈಭವದೊಂದಿಗೆ ಶರಣರನ್ನು ದರ್ಗಾದವರೆಗೆ ಮೆರವಣಿಗೆಯ ಮುಖಾಂತರ ಕರೆತರುವುದು, ನಂತರ 11ಗಂಟೆಯಿಂದ ಎತ್ತಿನಗಾಡಿ ರೇಸ್ ಜರುಗುವುದು. ಪ್ರಥಮ ಬಹುಮಾನ 15001, ದ್ವೀತಿಯ 10001, ತೃತೀಯ7501, ಚತುರ್ಥಿ 5001 ರೂ ಬಹುಮಾನವನ್ನು ಆಯೋಜಿಸಲಾಗಿದೆ. 28 ಶನಿವಾರದಂದು ಮುಂಜಾನೆ11 ಗಂಟೆಗೆ ರಾಜ್ಯ ಮಟ್ಟದ ತೇರಬಂಡಿ ಸ್ಪರ್ಧೆ ಏರ್ಪಡಿಸಲಾಗಿದೆ.ಪ್ರಥಮ ಬಹುಮಾನ 25001 ರೂ, ದ್ವೀತಿಯ 15001, ತೃತೀಯ 10001, ಚತುರ್ಥಿ 7501, ಪಂಚಮಿ 5001 ಇರುವುದು. ಮತ್ತು ಅಂದೇ ರಾತ್ರಿ 10 ಗಂಟೆಗೆ ಶ್ರೀ ರೇಣುಕಾ ಯಲ್ಲಮ್ಮ ದೇವಿ ಮಹಾತ್ಮೆ ಎಂಬ ಭಕ್ತಿ ಪ್ರಧಾನ ನಾಟಕ ಇರುವುದು.ಹೆಚ್ಚಿನ ಮಾಹಿತಿಗಾಗಿ ಈ ಸಂಖ್ಯೆಗೆ 8105859118,988010976…
ಢವಳಗಿ: ಸಮೀಪದ ರೂಡಗಿ ಗ್ರಾಮದ ತಾಂಡಾದ ಆರಾಧ್ಯ ದೇವ ದುರ್ಗಾದೇವಿ ಹಾಗೂ ಶ್ರೀ ಸಂತ ಸೇವಾಲಾಲ ಮಹಾರಾಜರ ಜಾತ್ರಾ ಮಹೋತ್ಸವದ ಅಂಗವಾಗಿ ಅಕ್ಟೋಬರ್ 27 ಶುಕ್ರವಾರದಂದು ಸಾಯಂಕಾಲ 4 ಗಂಟೆಗೆ ರಾಜ್ಯ ಮಟ್ಟದ ಹೊನಲು ಬೆಳಕಿನ ಕಬ್ಬಡ್ಡಿ ಪಂದ್ಯಾವಳಿ ಆಯೋಜಿಸಲಾಗಿದೆ.ಪ್ರಥಮ ಬಹುಮಾನ 15001 ರೂ ಟ್ರೋಫಿ, ದ್ವೀತಿಯ 10001ರೂ, ತೃತೀಯ 7501ರೂ.,ಚತುರ್ಥಿ 5001 ರೂ ಮತ್ತು ತಲಾ ಒಂದು ಟ್ರೋಫಿಹೆಚ್ಚಿನ ಮಾಹಿತಿಗಾಗಿ 9535408632, 7349351045 ಈ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಜಾತ್ರಾ ಕಮಿಟಿ ಪ್ರಕಟಣೆಯಲ್ಲಿ ತಿಳಿಸಿದೆ.
ವಿಜಯಪುರ: ಪೂಜ್ಯ ಶಿವಯ್ಯ ಮಹಾಸ್ವಾಮೀಜಿ ಆಶೀರ್ವಾದದ ನೆರಳಲ್ಲಿ ಭಕ್ತರೆಲ್ಲರೂ ಸೇರಿ ಪ್ರಾರಂಭ ಮಾಡಿರುವ ಶ್ರೀ ಗುರು ಚಕ್ರವರ್ತಿ ಸದಾಶಿವ ಶಿವಯೋಗೀಶ್ವರ ಸೌಹಾರ್ದ ಸಹಕಾರಿ ಸಂಸ್ಥೆಯು ಶ್ರೀಮಠದ ಭಕ್ತರ ಪಾಲಿನ ಭಾಗ್ಯನಿಧಿ ಆಗಲಿ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಬ್ರಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತ ಸೌಕರ್ಯ ಸಚಿವ ಎಂ.ಬಿ.ಪಾಟೀಲ ಹೇಳಿದರು. ಗುರುವಾರ ನಗರದ ಸ್ಟೇಷನ್ ರಸ್ತೆಯಲ್ಲಿ ನೂತನವಾಗಿ ಪ್ರಾರಂಭವಾಗಿರುವ ಸದಾಶಿವ ಶಿವಯೋಗೀಶ್ವರ ಸೌಹಾರ್ದ ಪತ್ತಿನ ಸಹಕಾರಿ ಸಂಸ್ಥೆಯ ವಿಜಯಪುರ ಶಾಖೆಯ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.ಸಾನಿಧ್ಯ ವಹಿಸಿದ್ದ ಶಿವಯ್ಯ ಮಹಾಸ್ವಾಮೀಜಿ ಮಾತನಾಡಿ, ಹಣವನ್ನು ಉಳಿಸುವ, ಬಳಸುವ, ಅದನ್ನು ಬಳಸಿ ಬೆಳೆಸುವ ಜವಾಬ್ದಾರಿ ತಮ್ಮೆಲ್ಲರ ಮೇಲಿದೆ. ಸದಾಶಿವನ ಆಶೀರ್ವಾದದ ನೆರಳಲ್ಲಿ ಈ ಸಂಸ್ಥೆ ಭಕ್ತರ ಕಾಮಧೇನು ಆಗಲಿ ಎಂದು ಹಾರೈಸಿದರು.ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಸುನೀಲಗೌಡ ಪಾಟೀಲ, ಶಾಸಕ ವಿಠಲ ಕಟಕದೋಂಡ, ಮಾಜಿ ಶಾಸಕ ರಾಜು ಆಲಗೂರ, ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಕುಮಾರ ದೇಸಾಯಿ, ಕೆಪಿಸಿಸಿ…
ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಆಮಂತ್ರಣ ನವದೆಹಲಿ: ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮಂದಿರದಲ್ಲಿ ಜ.22 ರಂದು ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯಾಗಲಿದೆ. ಪ್ರತಿಷ್ಠಾಪನೆಯಲ್ಲಿ ಭಾಗವಹಿಸಲು ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಪ್ರಧಾನಿ ನರೇಂದ್ರ ಮೋದಿಗೆ ಇಂದು ಆಮಂತ್ರಣ ನೀಡಿತು.ಈ ಬಗ್ಗೆ ಸ್ವತಃ ಪ್ರಧಾನಿಗಳು ಟ್ವೀಟ್ ಮಾಡಿದ್ದು, ತಮ್ಮ ಜೀವಮಾನದಲ್ಲಿ ಐತಿಹಾಸಿಕ ಘಟನೆಗೆ ಸಾಕ್ಷಿಯಾಗಲಿರುವುದಕ್ಕೆ ಧನ್ಯನಾಗಿದ್ದೇನೆ ಎಂದು ಹೇಳಿದ್ದಾರೆ.ತಮಗೆ ಆಮಂತ್ರಣ ನೀಡಿದ್ದನ್ನು ಉಲ್ಲೇಖಿಸಿರುವ ಪ್ರಧಾನಿ ನರೇಂದ್ರ ಮೋದಿ, ಜೈ ಶ್ರೀರಾಮ್! ಇಂದು ಅತ್ಯಂತ ಭಾವನಾತ್ಮಕ ದಿನವಾಗಿದೆ ಎಂದು ಹೇಳಿದ್ದಾರೆ.ಪ್ರಧಾನಿಗೆ ಆಮಂತ್ರಣ ನೀಡಿದ ತೀರ್ಥ ಕ್ಷೇತ್ರ ಟ್ರಸ್ಟ್ ನ ಭಾಗವಾಗಿ ರಾಜ್ಯದ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮಿಗಳು ಭಾಗಿಯಾಗಿದ್ದರು. ಜ.22 ರಂದು ಅಯೋಧ್ಯೆಯ ಮಂದಿರದಲ್ಲಿ ರಾಮನ ಮೂರ್ತಿ ಪ್ರತಿಷ್ಠಾಪನೆಯಾಗಲಿದೆ ಎಂದು ಅ.25 ರಂದು ಆರ್ ಎಸ್ ಎಸ್ ಮುಖಂಡ ಮೋಹನ್ ಭಾಗ್ವತ್ ಹೇಳಿದ್ದರು
ವಿಪಕ್ಷ ನಾಯಕ ಆಯ್ಕೆ ಮಾಡದ ಶೋಚನಿಯ ಸ್ಥಿತಿಯಲ್ಲಿ ಬಿಜೆಪಿ ಹುಬ್ಬಳ್ಳಿ: ವಿಪಕ್ಷ ನಾಯಕರನ್ನು ಆಯ್ಕೆ ಮಾಡದ ಶೋಚನಿಯ ಪರಿಸ್ಥಿತಿ ಬಿಜೆಪಿಗೆ ಬಂದಿದೆ. ಇದನ್ನು ಜನ ಅರ್ಥ ಮಾಡಿಕೊಳ್ಳಬೇಕು. ಒಂದು ರಾಷ್ಟ್ರೀಯ ಪಕ್ಷದ ವೈಫಲ್ಯಕ್ಕೆ ರಾಜ್ಯ ಬಿಜೆಪಿ ಸ್ಪಷ್ಟ ಉದಾಹರಣೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಹೇಳಿದ್ದಾರೆ.ಈ ಕುರಿತು ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬರೀ ಹೆಸರು ಕೇಳಿ ಬರುತ್ತಿದ್ದು, ಯಾರು ಅಧ್ಯಕ್ಷರು ಎನ್ನುವುದು ಬಹಿರಂಗವಾಗಿ ಹೇಳುತ್ತಿಲ್ಲ. ದೆಹಲಿ ವರಿಷ್ಠರು ಒಂದು ಹೆಸರು ತೇಲಿಬಿಟ್ಟರು, ಅದರ ಪ್ರತಿಕ್ರಿಯೆಗಳನ್ನು ನೋಡಿ ಅದು ಫೇಲ್ ಆಯಿತು. ಹಾಗಾಗಿ ಈಗ ಮತ್ತೆ ಬೇರೆ ಹೆಸರಿನ ಪ್ರಯೋಗ ಮಾಡುತ್ತಿದ್ದಾರೆ. ಆದರೆ ಈ ಬಗ್ಗೆ ಶೋಭಾ ಕರಂದ್ಲಾಜೆ ಊಹಾಪೋಹ ಅಂತ ಹೇಳಿದ್ದಾರೆ. ರಾಜ್ಯಧ್ಯಕ್ಷರನ್ನು, ವಿಪಕ್ಷ ನಾಯಕರನ್ನು ಆಯ್ಕೆ ಮಾಡದ ಶೋಚನಿಯ ಪರಿಸ್ಥಿತಿ ಬಿಜೆಪಿಗೆ ಬಂದಿದೆ. ಇದನ್ನು ಜನ ಅರ್ಥ ಮಾಡಿಕೊಳ್ಳಬೇಕು” ಎಂದರು.ಡಿಕೆಶಿ-ಹೆಚ್‌ಡಿಕೆ ನಡುವಿನ ಕಿತ್ತಾಟದ ಕುರಿತು ಪ್ರತಿಕ್ರಿಯಿಸಿದ ಶೆಟ್ಟರ್, ”ಬೆಂಗಳೂರು…
