Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಶ್ವವಿಖ್ಯಾತ ಅಂಬಾವಿಲಾಸ ಅರಮನೆಯ ಅಂಗಳದಲ್ಲಿ 1935 ರ ಸಮಯ, ಅಂದಿನ ರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಒಮ್ಮೆಲೆ ತನಗೆ ಏನಾದರು ಸಿಹಿ ತಿನ್ನಬೇಕು ಎನಿಸುತ್ತಿದೆ ಹೀಗಾಗಿ ಏನಾದರೂ ಹೊಸ ಸಿಹಿ ತಿಂಡಿಯನ್ನು ಮಾಡಿ ಎಂದು ತಮ್ಮ ಅಡುಗೆ ಭಟ್ಟ ಶ್ರೀ ಕಾಕಾಸುರ ಮಾದಪ್ಪನಿಗೆ ಹೇಳಿದರು.ತಕ್ಷಣವೇ ಹೊಸ ಸಿಹಿ ಖಾದ್ಯ ಏನು ಮಾಡಬೇಕು ಎಂಬುದು ಆ ಭಟ್ಟನಿಗೆ ಹೊಳೆಯಲಿಲ್ಲ . ಏನೋ ಒಂದು ಪ್ರಯೋಗ ಮಾಡೋಣ ಎಂದುಕೊಂಡು ಕಡಲೆ ಹಿಟ್ಟು, ತುಪ್ಪ ಮತ್ತು ಸಕ್ಕರೆಯೊಂದಿಗೆ ಮನಸಿಗೆ ತಿಳಿದ ಹಾಗೆ ಖಾದ್ಯವೊಂದನ್ನು ಸಿದ್ಧಪಡಿಸಿ ನೇರವಾಗಿ ತಂದು ನಾಲ್ವಡಿ ಕೃಷ್ಣರಾಜ ಒಡೆಯರಿಗೆ ತಿನ್ನಿಸಿದ. ಅದನ್ನು ತಿಂದ ನಾಲ್ವಡಿ ಕೃಷ್ಣರಾಜ ಒಡೆಯರು ತುಂಬಾ ಸಂತೋಷವನ್ನು ವ್ಯಕ್ತಪಡಿಸಿದರು. “ಎಷ್ಟು ಅದ್ಭುತವಾಗಿದೆ ಈ ಸಿಹಿ. ಇದರ ಹೆಸರೇನು” ಎಂದು ಕೇಳಿದರು. ಅದನ್ನು ತಯಾರಿಸಿದ ಶ್ರೀ ಕಾಕಾಸುರ ಮಾದಪ್ಪನಿಗೂ ಆ ಖಾದ್ಯದ ಹೆಸರೇನೆಂದು ಗೊತ್ತಿರಲಿಲ್ಲ. ಆಗ ಸ್ವತಃ ಕಾಕಾಸುರನು “ಮಹಾರಾಜರೇ ಈ ಖಾದ್ಯದ ಹೆಸರು ನನಗೂ ಗೊತ್ತಿಲ್ಲ. ನೀವೇ ಒಂದು…
ಹಲವು ಮುಖಗಳ ಸಂಕೀರ್ಣದಲ್ಲೊಂದು ಸರಳ ಮಾನವೀಯ ಸ್ಪಂದನೆ ’ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ’ ಗಂಡು ಹೆಣ್ಣು ಹೊರತುಪಡಿಸಿದ ಮತ್ತೊಂದು ದೈಹಿಕ ಮತ್ತು ಮಾನಸಿಕ ಪಂಗಡವೊಂದು ಮನುಷ್ಯ ವರ್ಗದಲ್ಲಿ ಅಸ್ತಿತ್ವದಲ್ಲಿದೆ. ಇದು ಇಡೀ ವಿಶ್ವದ ಒಂದು ಪ್ರಾಕೃತಿಕ ಸೃಷ್ಟಿ ಮತ್ತು ವರ್ಗೀಕರಣ. ಇದರ ಆಗುಹೋಗುಗಳ ಬಗ್ಗೆ ಮಾನವ ಶಾಸ್ತ್ರಜ್ಞರು, ಮನೋವೈದ್ಯಕೀಯ ತಜ್ಞರು, ವೈದ್ಯರು ಮತ್ತು ವಿಜ್ಞಾನಿಗಳು ಅಧಿಕೃತವಾಗಿ ಮಾತನಾಡುವ ಅರ್ಹತೆ ಹೊಂದಿರುತ್ತಾರೆ. ಅದನ್ನು ಹೊರತುಪಡಿಸಿ ವೈಯಕ್ತಿಕ, ಸಾಮಾಜಿಕ ಮತ್ತು ಕಾನೂನಾತ್ಮಕ ಜೊತೆಗೆ ಮಾನವೀಯ ಮೌಲ್ಯಗಳ ಹಿನ್ನೆಲೆಯಲ್ಲಿ ಒಂದು ಅಭಿಪ್ರಾಯ..ಸಲಿಂಗಿಗಳು, ದ್ವಿಲಿಂಗಿಗಳು, ಲಿಂಗತ್ವ ಅಲ್ಪಸಂಖ್ಯಾತರು ಅಥವಾ ಸರಳವಾಗಿ ಹೇಳುವುದಾದರೆ ಗಂಡು ಹೆಣ್ಣು ಎರಡರ ಗುಣಲಕ್ಷಣಗಳನ್ನು ಹೊಂದಿರುವವರ ಬಗ್ಗೆ..ಬಹುಶಃ ಬಹುತೇಕ ಪ್ರಕರಣಗಳಲ್ಲಿ ಇದು ಅವರ ಆಯ್ಕೆಯಾಗಿರದೆ ಅದೊಂದು ಸಹಜ ಬೆಳವಣಿಗೆ. ಅದರಲ್ಲಿ ಅವರ ಪೋಷಕರ ಅಥವಾ ವ್ಯಕ್ತಿಯ ಯಾವುದೇ ಪಾತ್ರವಿರುವುದಿಲ್ಲ. ಆ ಕಾರಣ ಅವರನ್ನು ಸಹ ಎಲ್ಲರಂತೆ ಮಾನವ ಜನಾಂಗದ ಒಂದು ತಳಿ ಎಂದು ಒಪ್ಪಿಕೊಳ್ಳಬೇಕು ಮತ್ತು ಸ್ವೀಕರಿಸಬೇಕು..ಸೃಷ್ಟಿಯ ವಿಶಾಲತೆಯ ದೃಷ್ಟಿಯಲ್ಲಿ ಅದಕ್ಕೆ ವಿಶೇಷ ಮಾನ್ಯತೆಯ…
ರಾಯಚೂರು: ರಾಜ್ಯ ಕಾಂಗ್ರೆಸ್ ನಲ್ಲಿ 135 ಸ್ಥಾನಗಳನ್ನ ಗೆಲ್ಲುವ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅಧಿಕಾರ ನಡೆಸುತ್ತಿದ್ದಾರೆ. ಆದರೆ, ಕಾಂಗ್ರೆಸ್ ಪಾಳಯದಲ್ಲಿ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದ್ದು, ನಾನು ಸಹ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಎಂದು ಬಹಿರಂಗವಾಗಿ ಕೆಲವು ನಾಯಕರು ಹೇಳಿಕೆ ನೀಡುತ್ತಿರುವುದು ಕಾಂಗ್ರೆಸ್ ನಲ್ಲಿ ಮುಜುಗರ ಉಂಟು ಮಾಡಿದೆ.ಹೌದು, ಈ ಕುರಿತು ರಾಯಚೂರಿನಲ್ಲಿ ಶನಿವಾರ ಮಾಧ್ಯಮಗಳ ಜೊತೆಗೆ ಸಚಿವ ಎಂ ಬಿ ಪಾಟೀಲ್ ಮಾತನಾಡಿ, ಎಂ.ಬಿ.ಪಾಟೀಲ್ ಮುಖ್ಯಮಂತ್ರಿ ಆಗಬೇಕು ಅಂದ್ರೆ ಆಗಲ್ಲ, ನಮ್ಮಲ್ಲಿ ಪಕ್ಷದ ವರಿಷ್ಠರು ಸಿಎಂ ಯಾರು ಆಗಬೇಕು ಎಂದು ನಿರ್ಧಾರ ಮಾಡುತ್ತಾರೆ. ನಮ್ಮ ಪಾರ್ಟಿಯಲ್ಲಿ ಏನು ನಿರ್ಧಾರ ಮಾಡಬೇಕು ಅದು ನಮ್ಮ ಪಕ್ಷದ ಹೈಕಮಾಂಡ್ ಅಂತಿಮ ತಿರ್ಮಾನ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.ಯಾರು ಮುಖ್ಯಮಂತ್ರಿಯಾಗಬೇಕು ಎಂಬುದನ್ನ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಎಂ.ಬಿ.ಪಾಟೀಲ್ ಮುಖ್ಯಮಂತ್ರಿ ಆಗಬೇಕು ಅಂದ್ರೆ ಆಗಲ್ಲ, ಜನರು ಬಯಸಬೇಕು, ಪಕ್ಷ ಅಧಿಕಾರಕ್ಕೆ ಬರಬೇಕು, ಈಗ ಪಕ್ಷ ಅಧಿಕಾರಕ್ಕೆ ಬಂದಿದೆ, ಇಂತಹ ವೇಳೆಯಲ್ಲಿ ಯಾರು…
ವಿಜಯಪುರದಲ್ಲಿ ಬೆಳಗಾವಿ ವಿಭಾಗ ಮಟ್ಟದ ಬಾಸ್ಕೇಟ್ ಬಾಲ್ ಕ್ರೀಡಾಕೂಟ ವಿಜಯಪುರ: ಶಿಕ್ಷಣಕ್ಕೆ ನೀಡುವ ಮಹತ್ವವನ್ನು ಕ್ರೀಡೆಗೂ ನೀಡಬೇಕು. ಕ್ರೀಡಾಭ್ಯಾಸ ಶಿಕ್ಷಣದ ಒಂದು ಅವಿಭಾಜ್ಯ ಅಂಗ ಎರಡರಲ್ಲೂ ಉತ್ತಮ ಸಾಧನೆ ಮಾಡಬೇಕು ಎಂದು ವಿಜಯಪುರ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎ.ಪಿ.ಠಾಕೋರ ಹೇಳಿದರು.ಬಿಜಾಪುರ ಜಿಲ್ಲಾ ಬಂಜಾರಾ ವಿದ್ಯಾವರ್ಧಕ ಸಂಘದ ಬಂಜಾರಾ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಹಾಗೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರು(ಆಡಳಿತ) ಕಾರ್ಯಾಲಯ ವಿಜಯಪುರ ಇವರುಗಳ ಸಂಯುಕ್ತಾಶ್ರಯದಲ್ಲಿ ಶನಿವಾರದಂದು ಡಾ. ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ‘ಬೆಳಗಾವಿ ವಿಭಾಗ ಮಟ್ಟದ ‘ಬಾಸ್ಕೇಟ್ ಬಾಲ್’ ಕ್ರೀಡಾಕೂಟವನ್ನು ಸಸಿಗೆ ನೀರನ್ನು ಹಾಕುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು. ವಿದ್ಯಾರ್ಥಿಗಳಲ್ಲಿ ಮಾನಸಿಕ ಮತ್ತು ದೈಹಿಕ, ಸಮತೋಲನ ಬೆಳವಣಿಗೆಗೆ ಅತ್ಯವಶ್ಯ. ಸೋಲು ಗೆಲುವನ್ನು ಸಮಾವಾಗಿ ಸ್ವೀಕರಿಸಬೇಕು. ಕಠಿಣ ಪರಿಶ್ರಮದಿಂದ ಗುರಿ ಸಾಧಿಸಬಹುದಾಗಿದೆ. ವಿದ್ಯಾರ್ಥಿಗಳ ಕೌಶಲ್ಯ ಗುರುತಿಸಿ, ಕ್ರೀಡಾಭ್ಯಾಸದಲ್ಲಿ ತೊಡಗಲು ಪೋಷಕರು, ಶಿಕ್ಷಕರು ಪ್ರೇರಣೆ ನೀಡಬೇಕು ಎಂದು ಹೇಳಿದರು.ಈ ವೇಳೆಯಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು…
ಸಿಂದಗಿ: ನಗರದ ಸಿಂದಗಿ ಪುರಸಭೆ ಬಳಿ ಅಪರಿಚಿತ ವ್ಯಕ್ತಿಯೊರ್ವ ಗಬಸಾವಳಗಿ ಗ್ರಾಮದ ನಿಂಗನಗೌಡ ಬಿರಾದಾರ (85) ಎಂಬಾತನನ್ನು ಚೂರಿಯಿಂದ ಇರಿದ ಘಟನೆ ನಡೆದಿದೆ.ಶನಿವಾರದಂದು ಅಪರಿಚಿತ ವ್ಯಕ್ತಿಯು ನಿಂಗನಗೌಡ ಬಿರಾದಾರ (85) ಎಂಬಾತನನ್ನು ಚೂರಿಯಿಂದ ಇರಿದು ಪರಾರಿಯಾಗಿದ್ದಾನೆ. ಕೃತ್ಯಕ್ಕೆ ಕಾರಣ ತಿಳಿದು ಬಂದಿಲ್ಲ. ಸ್ಥಳೀಯರು ನೀಡಿದ ಮಾಹಿತಿಯಂತೆ ಘಟನಾ ಸ್ಥಳಕ್ಕೆ ಸಿಪಿಐ ಡಿ. ಹುಲುಗಪ್ಪ ಮತ್ತು ಪಿಎಸ್ಐ ಭೀಮಪ್ಪ ರಬಕವಿ ಭೇಟಿ ನೀಡಿ ಆರೋಪಿ ಪತ್ತೆಗೆ ಕಾರ್ಯಪ್ರವೃತ್ತರಾಗಿದ್ದಾರೆ. ಆ ವೃದ್ಧನನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೃದ್ಧ ಪ್ರಾಣಪಾಯದಿಂದ ಪಾರಾಗಿದ್ದಾನೆ.
ವಿಜಯಪುರ: ವಿಕಲಚೇತನರಲ್ಲಿರುವ ಕೌಶಲ್ಯಾಭಿವೃದ್ದಿಯನ್ನು ಗುರುತಿಸಿ, ಅವರ ಕೌಶಲ್ಯಕ್ಕೆ ತಕ್ಕಂತೆ ಸೂಕ್ತ ತರಬೇತಿ ಒದಗಿಸುವ ಮೂಲಕ ವಿಕಲಚೇತನರು ಸ್ವಾವಲಂಬಿ ಜೀವನ ನಡೆಸುವಂತೆ ಅನುಕೂಲ ಕಲ್ಪಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚಿಸಿದರು.ಅವರು, ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ವಿಕಲಚೇತನರ ಕುಂದು ಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಎಲ್ಲಾ ತಾಲೂಕಾ ಮಟ್ಟದಲ್ಲಿ ವಿಕಲಚೇತನರ ಕುಂದುಕೊರತೆ ಸಭೆಗಳನ್ನು ಆಯೋಜಿಸಿ ಪರಿಹಾರ ಒದಗಿಸಲು ಪ್ರಯತ್ನಿಸಬೇಕು. ವಿಕಲಚೇತನರಿಗೆ ಅನುಕೂಲ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಸರ್ಕಾರಿ ಕಚೇರಿ ,ಆಸ್ಪತ್ರೆ, ಶಾಲಾ ಕಾಲೇಜುಗಳಲ್ಲಿ ಬ್ಯಾಂಕ್‌ಗಳಲ್ಲಿ ರ‍್ಯಾಂಪ್ಸ್ ಮತ್ತು ರೇಲಿಂಗ್ಸ್ ಅಳವಡಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿ, ಉಪ ನಿರ್ದೇಶಕರು ಜಿಲ್ಲಾ ಶಾಲಾ ಶಿಕ್ಷಣ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿಕಲಚೇತನರಿಗೆ ಬ್ಯಾಟರಿ ಚಾಲಿತ ವ್ಹೀಲ್ ಚೇರ್ ಒದಗಿಸುವಂತೆ ಮಹಾನಗರ ಪಾಲಿಕೆ ಆಯುಕ್ತರಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.ಎನ್.ಆರ್.ಎಚ್.ಎಂ ಯೋಜನೆಯಡಿ ಬೆನ್ನುಹುರಿ ಅಫಘಾತಕ್ಕೆ ಒಳಗಾದ ವಿಕಲಚೇತನರಿಗೆ ಮೆಡಿಕಲ್ ಕಿಟ್ ವಿತರಿಸಲು ಅವಕಾಶವಿದ್ದು, ಮೆಡಿಕಲ್ ಕಿಟ್ ಅವಶ್ಯಕತೆಯನುಸಾರ ಒದಗಿಸಬೇಕು. ಎಲ್ಲಾ ಶಾಲೆಗಳಲ್ಲಿ ಸ್ಪೀಚ್ ಥೆರಪಿಸ್ಟ್ ನೇಮಕ…
ವಿಜಯಪುರದಲ್ಲಿ ಪೊಲೀಸ್ ಹುತಾತ್ಮ ದಿನ ಆಚರಣೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿಕೆ ವಿಜಯಪುರ: ದಕ್ಷತೆ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಮಾಡುತ್ತಾ ಸಮಾಜದ ಭದ್ರತೆ ಹಾಗೂ ಸುರಕ್ಷತೆಗಾಗಿ ಪ್ರಾಣ ಮುಡುಪಾಗಿಟ್ಟ ಪೊಲೀಸ್ ಅವರನ್ನು ಸ್ಮರಣೆ ಮಾಡುವುದು ನಮ್ಮ ಕರ್ತವ್ಯವಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಹೇಳಿದರು.ಜಿಲ್ಲಾ ಪೊಲೀಸ್ ವತಿಯಿಂದ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಶನಿವಾರ ಆಯೋಜಿಸಿದ್ದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಹುತಾತ್ಮರಿಗೆ ಪೊಲೀಸ್ ಸ್ಮಾರಕಕ್ಕೆ ಪುಷ್ಪಗುಚ್ಛವಿರಿಸಿ, ಗೌರವ ನಮನ ಸಲ್ಲಿಸಿ, ಮಾತನಾಡಿದ ಅವರು, ನಮ್ಮ ರಕ್ಷಣೆ ಮಾಡುವ ಸಂದರ್ಭ ಹೋರಾಡಿ ತಮ್ಮ ಜೀವನ ತ್ಯಾಗ ಮಾಡಿದ ಪೊಲೀಸರಿಗೆ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಈ ದಿನ ಗೌರವ ನಮನ ಸಲ್ಲಿಸಲಾಗುತ್ತಿದೆ. ೧೯೫೯ರಲ್ಲಿ ಚೀನಿ ಪಡೆಗಳೊಂದಿಗೆ ನಡೆದ ಹೋರಾಟದಲ್ಲಿ ತಮ್ಮ ಜೀವನ ತ್ಯಾಗ ಮಾಡಿದ ಪೊಲೀಸ್‌ರನ್ನು ಸ್ಮರಿಸುವ ಈ ದಿನ ಹುತಾತ್ಮರ ದಿನವಾಗಿ ಆಚರಿಸಲಾಗುತ್ತಿದೆ. ಸೈನಿಕರು ಗಡಿಯಲ್ಲಿ ದೇಶ ರಕ್ಷಣೆ ಮಾಡುತ್ತಾರೆ. ಸಾರ್ವಜನಿಕರು ಜನರ ಆಸ್ತಿ-ಪಾಸ್ತಿ ರಕ್ಷಣೆಗಾಗಿ ತಮ್ಮ ಜೀವನ ತ್ಯಾಗ ಮಾಡಿರುವ ಹಾಗೂ ನೆಮ್ಮದಿಯಾಗಿ…
ವಿಜಯಪುರ: ಜಿಲ್ಲೆಯಲ್ಲಿ ಬರುವ ಸಣ್ಣ ನೀರಾವರಿ ಮತ್ತು ಜಿಲ್ಲಾ ಪಂಚಾಯತ್ ಕೆರೆಗಳನ್ನು ಜನ-ಜಾನುವಾರುಗಳ ಕುಡಿಯುವ ನೀರಿನ ಸಲುವಾಗಿ ತುಂಬಿಸುತ್ತಿದ್ದು, ಕಾಲುವೆ ಕೊನೆಯವರೆಗೆ ನಿಗದಿತ ಪ್ರಮಾಣದಲ್ಲಿ ನೀರನ್ನು ಒದಗಿಸಲು ಅನುಕೂಲವಾಗುವ ದೃಷ್ಟಿಯಿಂದ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಯಾವುದೇ ಅಹಿತಕರ ಘಟನೆ ಜರುಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಕಾಲುವೆ ಜಾಲದ ವ್ಯಾಪ್ತಿಯ ದಡದ ೧೦೦ ಅಡಿ ಪ್ರದೇಶವನ್ನು ೧೪೪ ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಆದೇಶ ಹೊರಡಿಸಿದ್ದಾರೆ.ಮುಳವಾಡ ಏತ ನೀರಾವರಿ ಹಂತ-೨ರ ಪೂರ್ವ ಕಾಲುವೆ, ಪಶ್ಚಿಮ ಕಾಲುವೆಗಳ ಜಾಲದ ಅಡಿಯಲ್ಲಿ ಬರುವ ಬಿಜಾಪುರ ಮುಖ್ಯ ಕಾಲುವೆ, ಬಸವನಬಾಗೇವಾಡಿ ಶಾಖಾ ಕಾಲುವೆ ತಿಡಗುಂದಿ ಶಾಖಾ ಕಾಲುವೆ, ಹೂವಿನಹಿಪ್ಪರಗಿ ಶಾಖಾ ಕಾಲುವೆ, ಸಾಲವಾಡಗಿ ಶಾಖಾ ಕಾಲುವೆ, ಟಕ್ಕಳಕಿ ಶಾಖಾ ಕಾಲುವೆ, ದಿಂಡವಾರ ಶಾಖಾ ಕಾಲುವೆ ಹಾಗೂ ಅದರಡಿಯಲ್ಲಿ ಬರುವ ಉಪ ಕಾಲುವೆಗಳ ಮೂಲಕ ಜಿಲ್ಲೆಯಲ್ಲಿ ಬರುವ ಸಣ್ಣ ನೀರಾವರಿ ಮತ್ತು ಜಿಲ್ಲಾ ಪಂಚಾಯತ್ ಕೆರೆಗಳನ್ನು ಕಾಲುವೆ ಜಾಲಗಳ ಕೊನೆಯ ಭಾಗದವರೆಗೆ ನೀರು…
೧೦ ಹೆಚ್‌ಪಿವರೆಗಿನ ಮಗ್ಗ ಮತ್ತು ಮಗ್ಗ ಪೂರ್ವ ಘಟಕಗಳಿಗೆ ಉಚಿತ ವಿದ್ಯುತ್ ವಿಜಯಪುರ: ಬಜೆಟ್‌ನಲ್ಲಿ ಘೋಷಿಸಿದಂತೆ ನೇಕಾರರಿಗೆ ೧೦ ಹೆಚ್‌ಪಿ ವರೆಗಿನ ಉಚಿತ ವಿದ್ಯುತ್ ಒದಗಿಸುವುದನ್ನು ಸರ್ಕಾರ ಆದೇಶ ಹೊರಡಿಸುವ ಮೂಲಕ ನೇಕಾರರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿಸಲು ಕ್ರಮ ವಹಿಸಲಾಗಿದೆ ಎಂದು ಜವಳಿ, ಕಬ್ಬು ಅಭಿವೃದ್ದಿ ಹಾಗೂ ಸಕ್ಕರೆ, ಮತ್ತು ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಅವರು ತಿಳಿಸಿದರು.ವಿಜಯಪುರ ಕೇಂದ್ರ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಉಚಿತ ಒದಗಿಸುವುದರಿಂದ ರಾಜ್ಯದ ಶೇ.೮೦ ರಷ್ಟು ಸಣ್ಣ ಪ್ರಮಾಣದ ನೇಕಾರರಿಗೆ ಅನುಕೂಲವಾಗಲಿದೆ. ೧೦ ಹೆಚ್‌ಪಿವರೆಗೆ ವಿದ್ಯುತ್ ಸಂಪರ್ಕ ಹೊಂದಿರುವ, ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವ ಘಟಕಗಳಿಗೆ ಇಂಧನ ವೆಚ್ಚ, ಫಿಕ್ಸ್ ಚಾರ್ಜ್, ಎಫ್‌ಎಸಿ, ಸೇರಿದಂತೆ ಸಂಪೂರ್ಣ ಬಿಲ್ ಮೊತ್ತ ಪಾವತಿಸುವುದು ರಿಯಾಯಿತಿ ನೀಡಿ ಸರ್ಕಾರದಿಂದ ಭರಿಸುವ ಮೂಲಕ ನೇಕಾರರಿಗೆ ಆರ್ಥಿಕ ಅಭಿವೃದ್ದಿಗೆ ಕ್ರಮ ವಹಿಸಲಾಗಿದೆ ಎಂದು ಹೇಳಿದರು.ರಾಜ್ಯದಲ್ಲಿ ೧೦.೦೧ ರಿಂದ ೨೦ ಹೆಚ್‌ಪಿವರೆಗೆ ವಿದ್ಯುತ್ ಸಂಪರ್ಕ ಹೊಂದಿರುವ ಅತಿ ಕಡಿಮೆ…
ಮುದ್ದೇಬಿಹಾಳ: ಪ್ರತೀ ವರ್ಷದಂತೆ ಈ ವರ್ಷವೂ ಕೂಡ ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಮುದ್ದೇಬಿಹಾಳ ಪ್ರೀಮಿಯರ್ ಲೀಗ್-೬ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಅ೨೨ ರಂದು ಸಂಜೆ ೫:೩೦ ಕ್ಕೆ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದ್ದು ಕ್ರೀಡಾಭಿಮಾನಿಗಳು ಭಾಗಿಯಾಗಿ ಪಂದ್ಯಾವಳಿಗಳನ್ನು ಯಶಸ್ವಿಗೊಳಿಸುವಂತೆ ಸಲಹಾ ಸಮಿತಿಯ ಸದಸ್ಯ ಮಹೆಬೂಬ ಗೊಳಸಂಗಿ ಹೇಳಿದರು.ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಉದ್ಘಾಟನಾ ಸಮಾರಂಭದ ಸಾನಿಧ್ಯವನ್ನು ಕುಂಟೋಜಿ ಸಂಸ್ಥಾನ ಹಿರೇಮಠದ ಡಾ.ಚನ್ನವೀರ ದೇವರು, ಮೌಲಾನಾ ಅಲ್ಲಾಭಕ್ಷ ಖಾಜಿ ವಹಿಸಲಿದ್ದು, ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅಧ್ಯಕ್ಷತೆ ವಹಿಸಲಿದ್ದಾರೆ. ಅಸ್ಕಿ ಫೌಂಡೇಶನ ಅಧ್ಯಕ್ಷ ಸಿ.ಬಿ.ಅಸ್ಕಿ ಉದ್ಘಾಟನೆಗೊಳಿಸಲಿದ್ದು, ಯಾಸೀನ ಸೋಠೆ ಜ್ಯೋತಿ ಬೆಳಗಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷ ವಿ.ಎಂ.ನಾಗಠಾಣ, ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜೀವ ತಿಪರೆಡ್ಡಿ, ಮಲ್ಲಿಕಾರ್ಜುನ ಮದರಿ, ಜಾವೇದ ಇನಾಮದಾರ, ಅಫ್ತಾಬ ಮನಿಯಾರ, ರಾಜು ಕರಡ್ಡಿ, ಪ್ರಭುರಾಜ ಕಲ್ಬುರ್ಗಿ, ಎಸ್.ಎಸ್.ಹುಲ್ಲೂರ, ಶಾಂತಗೌಡ ಪಾಟೀಲ ನಡಹಳ್ಳಿ, ಪ್ರತಿಭಾ ಅಂಗಡಗೇರಿ, ಬ್ಲಾಕ್ ಕಾಂಗ್ರೇಸ್…
