Author: editor.udayarashmi@gmail.com

ಇಂಡಿ: ವಿಜಯಪುರ ಮಹಾ ನಗರದ ಡಾ.ಬಿ ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಅಥ್ಲಟಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಿದ ಇಂಡಿ ತಾಲೂಕಿನ ನಾದ ಕೆ ಡಿ ಗ್ರಾಮದ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಕುಮಾರಿ ಮಂಜುಳಾ ಭೀಮರಾಯ ಐರೋಡಗಿ 3000 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆದು ಸತತ ಎರಡನೇ ಬಾರಿಗೆ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿ ಶಾಲೆಯ ಕೀರ್ತಿ ಹೆಚ್ಚಿಸಿದ್ದಾಳೆ ಅದಕ್ಕಾಗಿ ಎಸ್‌ಡಿಎಂಸಿ ಅಧ್ಯಕ್ಷ ಸಿದ್ದರಾಯ ಐರೊಡಗಿ ಶಾಲಾ ಮುಖ್ಯೋಪಾದ್ಯಾಯ ಹಾಗೂ ಸಾಹಿತಿ ಬರಹಗಾರ ಸಿ ಎಂ ಬಂಡಗರ. ದೈಹಿಕ ಶಿಕ್ಷಣ ಶಿಕ್ಷಕ ಹಾಗೂ ಕವಿ ಸಂಗನಗೌಡ ಎಸ್ ಹಚಡದ ಹಾಗೂ ಸರ್ವ ಸಿಬ್ಬಂದಿ ವರ್ಗ ಮತ್ತು ಪಾಲಕರು ಗ್ರಾಮಸ್ಥರು ಅಭಿನಂದಿಸಿದ್ದಾರೆ.

Read More

ಕನ್ನಡ ರಾಜ್ಯೋತ್ಸವ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಡಿಸಿ ಟಿ.ಭೂಬಾಲನ್ ಅಧಿಕಾರಿಗಳಿಗೆ ಸೂಚನೆ ವಿಜಯಪುರ: ಜಿಲ್ಲಾಡಳಿತ ವತಿಯಿಂದ ನವೆಂಬರ್ ೦೧ ರಂದು ನಡೆಯುವ ಕನ್ನಡ ರಾಜ್ಯೋತ್ಸವವನ್ನು ಅಚ್ಚುಕಟ್ಟಾಗಿ ಆಚರಿಸಿ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚಿಸಿದರು.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಕಾರ್ಯಕ್ರಮವು ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ವ್ಯವಸ್ಥಿತವಾಗಿ ಹಮ್ಮಿಕೊಳ್ಳಬೇಕು. ಅಂದು ಬೆಳಿಗ್ಗೆ ೯ ಗಂಟೆಗೆ ಜಿಲ್ಲಾಡಳಿತ ವತಿಯಿಂದ ಧ್ವಜಾರೋಹಣ ನಡೆಯುವುದು. ಕಾರ್ಯಕ್ರಮಕ್ಕೆ ಸಂಬಂಧಿಸಿದ ಅಧಿಕಾರಿಗಳಿಗೆ ವಹಿಸಿದ ಎಲ್ಲಾ ಕಾರ್ಯಗಳನ್ನು ವ್ಯವಸ್ಥಿತವಾಗಿ ಕೈಗೊಳ್ಳಬೇಕು ಎಂದು ಸೂಚಿಸಿದರು.ಅಂದು ಬೆಳಿಗ್ಗೆ ೭:೩೦ಕ್ಕೆ ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಭುವನೇಶ್ವರ ದೇವಿ ಭಾವಚಿತ್ರದ ಭವ್ಯ ಮೆರವಣಿಗೆಯನ್ನು ವಿವಿಧ ಇಲಾಖೆಗಳ ನಿರ್ಮಿಸಿರುವ ಸ್ತಬ್ದಚಿತ್ರಗಳು, ಕಲಾತಂಡಗಳೊಂದಿಗೆ ನಗರದ ವಿವಿಧ ವೃತ್ತಗಳ ಮುಖಾಂತರ ಜಿಲ್ಲಾ ಕ್ರೀಡಾಂಗಣಕ್ಕೆ ಆಗಮಿಸುವುದು.ವೇದಿಕೆ ಸಿದ್ದತೆ, ಶಿಷ್ಠಾಚಾರದಂತೆ ಅತಿಥಿ ಗಣ್ಯರನ್ನು ಆಹ್ವಾನಿಸಬೇಕು. ಆಹ್ವಾನ ಪತ್ರಿಕೆ ಮುದ್ರಣ ಹಾಗೂ ವಿತರಣೆ, ಆಸನದ ವ್ಯವಸ್ಥೆ, ಕುಡಿಯುವ…

Read More

ಬಾಲ್ಯವಿವಾಹ ಮುಕ್ತ ಕರ್ನಾಟಕ ಅಭಿಯಾನದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಸಂತೋಷ್ ಕುಂದರ್ ಅಭಿಮತ ವಿಜಯಪುರ: ಬಾಲ್ಯ ವಿವಾಹ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸಬೇಕು. ಬಾಲ್ಯ ವಿವಾಹ ತಡೆಗಟ್ಟುವಲ್ಲಿ ಸಾರ್ವಜನಿಕ ಸಹಕಾರ ಅಗತ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳೂ ಆದ ಸಂತೋಷ್ ಎಸ್. ಕುಂದರ್ ಅವರು ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವಿಜಯಪುರ, ಶಿಶು ಅಭಿವೃದ್ಧಿ ಯೋಜನೆ ವಿಜಯಪುರ ನಗರ ಮತ್ತು ಗ್ರಾಮೀಣ ಇವರ ಸಹಯೋಗದಲ್ಲಿ ಅ.೧೬ರಂದು ವಿಜಯಪುರದ ರುಡ್‌ಸೆಟ್ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ಬಾಲ್ಯ ವಿವಾಹ ಮುಕ್ತ ಕರ್ನಾಟಕ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಕಾನೂನು ತಿಳುವಳಿಕೆ ಮೂಡಿಸಬೇಕು. ಯಾರೂ ಬಾಲ್ಯವಿವಾಹಕ್ಕೆ ಪ್ರೋತ್ಸಾಹ ನೀಡಬಾರದು. ಬಾಲ್ಯವಿವಾಹ ಒಂದು ಸಾಮಾಜಿಕ ಪಿಡುಗಾಗಿದ್ದು ಇದನ್ನು ಹೋಗಲಾಡಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.ಮಕ್ಕಳ ಕಲ್ಯಾಣ ಸಮಿತಿ…

Read More

ವಿಜಯಪುರ: ಜಿಲ್ಲಾಡಳಿತದ ಮೂಲಕ ಅ.೨೮ ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ನಿರ್ಧರಿಸಲಾಯಿತು.ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಮೊದಲನೇ ಮಹಡಿ ಸಭಾಂಗಣದಲ್ಲಿ ಮಂಗಳವಾರ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯ ಕುರಿತು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.ಅ.೨೮ರ ಬೆಳಿಗ್ಗೆ ೯ ಗಂಟೆಗೆ ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದವರೆಗೆ ವಿವಿಧ ಕಲಾತಂಡಗಳೊಂದಿಗೆ ಶ್ರೀ ಮಹರ್ಷಿ ವಾಲ್ಮೀಕಿ ಭಾವಚಿತ್ರದ ಮೆರವಣಿಗೆ, ಬೆಳಿಗ್ಗೆ ೧೦:೩೦ಕ್ಕೆ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು. ಜಯಂತಿ ಕಾರ್ಯಕ್ರಮಕ್ಕೆ ಶಿಷ್ಠಾಚಾರದಂತೆ ಆಮಂತ್ರಣ ಪತ್ರಿಕೆ, ವೇದಿಕೆ ಅಲಂಕಾರ, ಜಯಂತಿ ಕಾರ್ಯಕ್ರಮಕ್ಕೆ ಅತಿಥಿಗಳಿಗೆ ಆಹ್ವಾನ, ಮಹರ್ಷಿ ವಾಲ್ಮೀಕಿ ಅವರ ಜೀವನ ಚರಿತ್ರೆ ಅವರ ವಿಚಾರಧಾರೆಗಳ ಕುರಿತು ಉಪನ್ಯಾಸ, ಎಸ್ ಎಸ್. ಎಲ್. ಸಿ ಹಾಗೂ ಪಿ. ಯು. ಸಿ ಯಲ್ಲಿ ಹೆಚ್ಚು ಅಂಕಗಳಿಸಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸುವುದು…

Read More

ಸಿಂದಗಿ: ರೈತರ ಹೊಲಗಳಲ್ಲಿ ಮಣ್ಣಿನ ಪರೀಕ್ಷೆ, ಕೀಟನಾಶಕ, ರಸಗೊಬ್ಬರ ಪ್ರಮಾಣದ ಬಗ್ಗೆ ನೇರವಾಗಿ ರೈತರಿಗೆ ಜಮೀನುಗಳಿಗೆ ಬಂದು ಪರೀಕ್ಷೆ ಮಾಡುತ್ತದೆ. ಜಮೀನುಗಳಲ್ಲಿ ಉತ್ಪಾದನೆ ಮತ್ತು ಉತ್ಪಾದಕತೆ ಸವೆತ, ಅತಿಯಾದ ಬೇಳೆ ಬೆಳವಣಿಗೆ, ಕೀಟ ಹಾಗೂ ರೋಗದಂತಹ ನೈಸರ್ಗಿಕ ವಿಪತ್ತುಗಳಿಗೆ ಪರಿಹಾರ ಒದಗಿಸುತ್ತದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಆವರಣದಲ್ಲಿ ಕೃಷಿ ಸಂಜೀವಿನಿ ವಾಹನಕ್ಕೆ ಚಾಲನೆ ನೀಡಿ, ಯಾಂತ್ರಿಕರಣ ಯೋಜನೆಯಡಿಯ ಪಲಾನುಭವಿಗಳಿಗೆ ವಿವಿಧ ಕೃಷಿ ಪರಿಕರಗಳನ್ನು ವಿತರಣೆ ಮಾಡಿ ಮಾತನಾಡಿದ ಅವರು, ಸ್ಥಳೀಯ ಮಟ್ಟದಲ್ಲಿ ರೈತರು ಖರೀದಿ ಮಾಡಿದ ರಸಗೊಬ್ಬರಗಳಲ್ಲಿ ಮಿಶ್ರಣವಾಗಿರುವ ಸಾಂದ್ರತೆ ಪರಿಶೀಲನೆ ಮಾಡಲಾಗುತ್ತದೆ. ಒಟ್ಟಿನಲ್ಲಿ ರೈತನಿಗೆ ಕೃಷಿ ಸಂಜೀವಿನಿ ಯೋಜನೆ ಬಹಳ ಉಪಕಾರಿಯಾಗಿದ್ದು, ರೈತರಿಗೆ ಈ ಯೋಜನೆ ಬಗ್ಗೆ ಅರಿವು ಮೂಡಿಸಲು ಕೃಷಿ ಇಲಾಖೆ ಯೋಜನೆಯನ್ನು ರೂಪಿಸಿಕೊಂಡಿದೆ. ಆದ್ದರಿಂದ ರೈತರು ಕೃಷಿ ಸಂಜೀವಿನಿ ಯೋಜನೆಯ ಸದುಪಯೋಗಿಸಿಕೊಳ್ಳಿ ಎಂದು ಸಲಹೆ ನೀಡಿದರು.ಈ ಸಹಾಯಕ ಕೃಷಿ ನಿರ್ದೇಶಕರು, ಕ್ಷೇತ್ರದ ರೈತ ಪಲಾನುಭವಿಗಳು, ವಿವಿಧ ಅಧಿಕಾರಗಳು, ಸೇರಿದಂತೆ…

Read More

ಮುದ್ದೇಬಿಹಾಳ: ಪಟ್ಟಣದಲ್ಲಿ ಕೆಲವು ದ್ವಿಚಕ್ರ ವಾಹನಗಳ ಸವಾರರು ತಮ್ಮ ವಾಹನಗಳ ಸೈಲೆನ್ಸ್ರ್ ನ್ನು ಬದಲಾಯಿಸಿ ವಿಚಿತ್ರವಾಗಿ ಶಬ್ಧಮಾಡುವ ಸೈಲೆನ್ಸ್ರ್ ನ್ನು ಅಳವಡಿಸಿ ಸಾರ್ವಜನಿಕರಿಗೆ ಉಪದ್ರವ ನೀಡುತ್ತಿದ್ದು ಈ ಕೂಡಲೇ ತಮ್ಮ ಚಾಳಿಯನ್ನು ಬಿಟ್ಟು ವಾಹನಗಳ ಕಂಪನಿ ಜೊತೆಗೆ ಬರುವ ಸೈಲೆನ್ಸ್ರ್ ನ್ನು ಅಳವಡಿಸಿಕೊಳ್ಳಬೇಕು. ಇಲ್ಲವಾದಲ್ಲಿ ಮುಲಾಜಿಲ್ಲದೇ ಎಫ್‌ಐಆರ್ ದಾಖಲಿಸುತ್ತೇನೆ ಎಂದು ಪಿಎಸ್‌ಐ ಸಂಜೀವ ತಿಪರೆಡ್ಡಿ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.ಮಂಗಳವಾರ ವಿಚಿತ್ರವಾಗಿ ಶಬ್ಧಮಾಡುವ ಕೆಲ ವಾಹನಗಳನ್ನು ಸೀಜ್ ಮಾಡಿ ಸೈಲೆನ್ಸ್ರ್ ಗಳನ್ನು ಬಿಚ್ಚಿಸಿ ನಂತರ ಸಂಯುಕ್ತ ಕರ್ನಾಟಕದೊಂದಿಗೆ ಮಾತನಾಡಿದ ಅವರು, ಈಗಾಗಲೇ ಈ ಬಗ್ಗೆ ಹಲವಾರು ದೂರುಗಳು ಬಂದಿವೆ. ಕೆಲ ಯುವಕರು ಇದನ್ನು ಫ್ಯಾಶನ್ ಅನ್ಕೊಂಡಿದ್ದಾರೆ. ಆದರೆ ಇದು ಕಾನೂನು ಬಾಹಿರವಾಗಿದ್ದು ಇದರಿಂದ ಸಾರ್ವಜನಿಕರಿಗೆ ಉಪದ್ರವವಾಗುತ್ತದೆ. ಇದಕ್ಕೆ ಕಾನೂನಿನಲ್ಲಿ ಕಠಿಣ ಶಿಕ್ಷೆ ಇದೆ. ಇಂತಹ ವಾಹನಗಳನ್ನು ಹೊಂದಿದವರು ಈ ಕೂಡಲೇ ಶಬ್ಧಮಾಲಿನ್ಯ ಮಾಡುವ ಸೈಲೆನ್ಸ್ರ್ ಗಳನ್ನು ಬದಲಾಯಿಸಿಕೊಳ್ಳಬೇಕು. ಇನ್ನು ಮುಂದೆ ಎಲ್ಲಿಯಾದರೂ ಇಂತಹ ವಾಹನಗಳು ಕಂಡಲ್ಲಿ ಯಾರೇ ಆದರೂ ನಿರ್ದಾಕ್ಷಣ್ಯವಾಗಿ ಕ್ರಮ ಕೈಗೊಳ್ಳುವದಾಗಿ…

Read More

ವಿಜಯಪುರ: ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ಝಳಕಿ ಗ್ರಾಮದ ೨೭ ವಯಸ್ಸಿನ ಅಭಿನಂದನ ತಂದೆ ದಿಲೀಪಕುಮಾರ ಕಾಸರ ಎಂಬ ವ್ಯಕ್ತಿ ಕಾಣೆಯಾಗಿದ್ದು, ವಿಜಯಪುರ ಆದರ್ಶ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ ಎಂದು ಆದರ್ಶ ನಗರ ಪೊಲೀಸ್ ಠಾಣೆಯ ಠಾಣಾಧಿಕಾರಿ ಅವರು ತಿಳಿಸಿದ್ದಾರೆ.ಕಾಣೆಯಾದ ವ್ಯಕ್ತಿ ಅಂದಾಜು ೨೭ ವರ್ಷ ವಯಸ್ಸು ಇದ್ದು, ಎತ್ತರ ೫.೫ ಅಡಿ, ಸಾಧಗೆಂಪು ಮೈಬಣ್ಣ, ಕಪ್ಪು ಕೂದಲು, ನೀಲಿ ಬಣ್ಣದ ಪ್ಯಾಂಟ್ ಕಾಲರಿನ ಟೀ ಶರ್ಟ್ ಧರಿಸಿದ್ದು, ಕನ್ನಡ, ಇಂಗ್ಲೀಷ ಮತ್ತು ಹಿಂದಿ ಭಾಷೆ ಮಾತನಾಡುವ ಈ ವ್ಯಕ್ತಿ ಕಂಡುಬಂದಲ್ಲಿ ಸಂಬಂಧಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ದೂ. ೦೮೩೫೨-೨೫೦೧೫೨, ಸಿಪಿಐ ಗೋಲಗುಂಬಜ್ ವೃತ್ತ ದೂ. ೦೮೩೫೨-೨೫೦೨೫೨ ಮತ್ತು ಆದರ್ಶ ನಗರ ಪೋಲಿಸ್ ಠಾಣೆ ದೂ.೦೮೩೫೨-೨೬೩೩೩೩ ಮೊ.೯೪೮೦೮೦೪೨೫೦ ಸಂಖ್ಯೆಗೆ ಸಂಪರ್ಕಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ಕೃಷಿ ಮಹಾವಿದ್ಯಾಲಯ ಖಾಲಿ ಇರುವ ಎರಡು ಗ್ರಂಥಾಲಯ ಸಹಾಯಕರ ಹುದ್ದೆಗಳ ತಾತ್ಕಾಲಿಕ ನೇಮಕಾತಿಗಾಗಿ ಅ.೩೧ ರಂದು ಮದ್ಯಾಹ್ನ ೨:೩೦ ಗಂಟೆಗೆ ಕೃಷಿ ಮಹಾವಿದ್ಯಾಲಯ ಡೀನ್ ಕೊಠಡಿಯಲ್ಲಿ ಸದರ್ಶನ ಏರ್ಪಡಿಸಲಾಗಿದೆ.ಸಂದರ್ಶನಕ್ಕೆ ಹಾಜರಾಗುವ ಆಸಕ್ತ ಅಭ್ಯರ್ಥಿಗಳು ಬ್ಯಾಚುಲರ್ ಆಫ್ ಲೈಬ್ರರಿ ಸೈನ್ಸ್ ಅಥವಾ ಬಿ.ಲಿಬ್.ಐ.ಎಸ್‌ಸಿ, ಮಾಸ್ಟರ್ ಆಫ್ ಲೈಬ್ರರಿ ಸೈನ್ಸ್ ಅಥವಾ ಎಮ್.ಲಿಬ್.ಐ.ಎಸ್‌ಸಿ, ಹಾಗೂ ವರ್ಗೀಕರಣ ಮತ್ತು ಕ್ಯಾಟಲಾಗ್ ಪುಸ್ತಕಗಳಲ್ಲಿ ಅನುಭವ ಮತ್ತು ಗ್ರಂಥಾಲಯ,ಕಾಲೇಜು,ಸಂಶೋಧನಾ ಸಂಸ್ಥೆಯಲ್ಲಿ ಅರ್ಹತೆ ಪಡೆದಿರುವ ವಿದ್ಯಾರ್ಹತೆಗೆ ಸಂಬಂಧಿಸಿದ ಎಲ್ಲ ಮೂಲ ದಾಖಲೆಗಳ ಎರಡು ಝರಾಕ್ಸ್ ಪ್ರತಿ ಮತ್ತು ಭಾವಚಿತ್ರ ಅರ್ಜಿ ನಮೂನೆಗೆ ಲಗತ್ತಿಸಿ ಸಂದರ್ಶನದ ಸಮಯದಲ್ಲಿ ಹಾಜರಿರಬೇಕು ಅರ್ಜಿ ಮುಂಚಿತವಾಗಿ ಕಳುಹಿಸಲು ಅವಕಾಶವಿರುವುದಿಲ್ಲ ಎಂದು ಡೀನ್ ಕೃಷಿ ಮಹಾವಿದ್ಯಾಲಯ ವಿಜಯಪುರ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ವೀರರಾಣಿ ಕಿತ್ತೂರು ಚೆನ್ನಮ್ಮ ಅವರ ಹೋರಾಟ ನಮ್ಮೆಲ್ಲರಿಗೂ ಸ್ಪೂರ್ತಿಯಾಗಿದೆ. ಕಿತ್ತೂರು ಚನ್ನಮ್ಮ ಅವರು ಬ್ರಿಟಿಷ್ರ ವಿರುದ್ಧ ಹೋರಾಟ ನಡೆಸಿದರು. ಅವರ ಹೋರಾಟ,ತ್ಯಾಗ-ಬಲಿದಾನ ಹಾಗೂ ಅವರ ದೇಶ ಭಕ್ತಿ ಸ್ಮರಿಸಿಕೊಳ್ಳುವ ಮೂಲಕ ಗೌರವ ಸಲ್ಲಿಸೋಣ ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರು ಹೇಳಿದರು.ನಗರದ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಭಾನುವಾರ ಕಿತ್ತೂರು ಚನ್ನಮ್ಮ ಅವರ ವಿಜಯ ವೀರಜ್ಯೋತಿ ಯಾತ್ರೆಯ ರಥಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿ ಮಾತನಾಡಿದರು. ಐತಿಹಾಸಿಕ ಕಿತ್ತೂರು ಉತ್ಸವವು ಇದೇ ಅಕ್ಟೋಬರ್ ೨೩ ರಿಂದ ೨೫ ವರೆಗೆ ಕಿತ್ತೂರಿನಲ್ಲಿ ನಡೆಯುವುದು. ಕಿತ್ತೂರು ಉತ್ಸವದ ಅಂಗವಾಗಿ ಅಕ್ಟೋಬರ್ ೧೩ ರಂದು ಕಿತ್ತೂರು ಚನ್ನಮ್ಮಾಜಿಯವರ ವಿಜಯ ವೀರಜ್ಯೋತಿ ಯಾತ್ರೆಯು ಬೆಂಗಳೂರಿನಿಂದ ಪ್ರಾರಂಭವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಿತ್ತೂರು ಚನ್ನಮ್ಮಾಜೀಯವರ ವಿಜಯ ವೀರಜ್ಯೋತಿ ಯಾತ್ರೆಗೆ ಚಾಲನೆ ನೀಡಿದ್ದಾರೆ ಎಂದು ಹೇಳಿದರು.ಈ ಸಂದರ್ಭದಲ್ಲಿ ವಿಜಯಪುರದ ಉಪ ವಿಭಾಗಾಧಿಕಾರಿ ಬಸಣೆಪ್ಪ ಕಲಶೆಟ್ಟಿ, ವಿಜಯಪುರ ತಹಶೀಲ್ದಾರ ಶ್ರೀಮತಿ ಕವಿತಾ, ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಅಮರೇಶ…

Read More

ಲೆಕ್ಕ ಪರಿಶೋಧಕ ಶಾಂತವೀರ ಮಣೂರ ಅವರಿಂದ ಆದಾಯ ತೆರಿಗೆ ಮತ್ತು ಜಿ.ಎಸ್.ಟಿ. ಕುರಿತು ಉಪನ್ಯಾಸ ವಿಜಯಪುರ: ಜಿಲ್ಲಾ ನೂತನ ಛಾಯಾಗ್ರಾಹಕರ ಸಂಘ ಮತ್ತು ಯುವ ಭಾರತ ಸಮಿತಿ, ವಿಜಯಪುರ ಇವರ ಸಹಯೋಗದಲ್ಲಿ ಅ.೧೯ ಗುರುವಾರ ಬೆಳಿಗ್ಗೆ ೧೦-೩೦ಕ್ಕೆ ನಗರದ ಅಂಬೇಡ್ಕರ್ ಸರ್ಕಲ್ ಹತ್ತಿರವಿರುವ ಪ್ರವಾಸೋದ್ಯಮ ಇಲಾಖೆಯ ಸರಕಾರಿ ಆರ್ಟ ಗ್ಯಾಲರಿಯಲ್ಲಿ ಛಾಯಾಗ್ರಾಹಕರಿಗಾಗಿ ಆದಾಯ ತೆರಿಗೆ ಮತ್ತು ಜಿ.ಎಸ್.ಟಿ. ಕುರಿತು ವಿಶೇಷ ಕಾರ್ಯಾಗಾರ, ಉಪನ್ಯಾಸ ಮತ್ತು ಚರ್ಚಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮದ ಉದ್ಘಾಟಕರಾಗಿ ಯುವ ಭಾರತ ಸಮಿತಿ ಅಧ್ಯಕ್ಷ ಉಮೇಶ್ ಕಾರಜೋಳ ಆಗಮಿಸಲಿದ್ದಾರೆ. ಮುಖ್ಯ ಅತಿಥಿಗಳು ಮತ್ತು ಸಂಪನ್ಮೂಲ ವ್ಯಕ್ತಿಗಳಾಗಿ ವಿಜಯಪುರದ ಜಾರಿ ಸರಕುಗಳು ಮತ್ತು ಸೇವಾ ತೆರಿಗೆ ಇಲಾಖೆಯ ಸಿ.ಟಿ.ಓ. ಸುರೇಶ. ಎಂ. ಗೊಳಸಂಗಿ, ಲೆಕ್ಕ ಪರಿಶೋಧಕ ಶಾಂತವಿರೇಶ ಮಣೂರ ಮತ್ತು ಜಿಎಸ್‌ಟಿಪಿ ಸರಕುಗಳು ಮತ್ತು ಸೇವಾ ತೆರಿಗೆ ಸಲಹೆಗಾರ ಸಿದ್ದನಗೌಡ ಬಿರಾದಾರ ಆಗಮಿಸಲಿದ್ದಾರೆ.ಕಾರ್ಯಕ್ರಮದಲ್ಲಿ ವಿಜಯಪುರ ಜಿಲ್ಲಾ ನೂತನ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ರಮೇಶ ಚವ್ಹಾಣ ಉಪಸ್ಥಿತರಿರಲಿದ್ದಾರೆ.ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲ ಛಾಯಾಗ್ರಾಹಕರು,…

Read More