Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಮುದ್ದೇಬಿಹಾಳ: ಪ್ರಸಕ್ತ ವರ್ಷದಲ್ಲಿ ತಾಲೂಕಿನಲ್ಲಿ ತೀವ್ರ ಬರಗಾಲದಿಂದ ರೈತರು ತೊಂದರೆ ಅನಿಭವಿಸುವಂತಾಗಿದ್ದು, ಸೂಕ್ತವಾದ ಬರ ಪರಿಹಾರ ನೀಡಬೇಕು, ರೈತರ ಖುಷ್ಕಿ ಬೆಳೆಗೆ ಎಕರೆಗೆ ಕನಿಷ್ಠ ೧೦ಸಾವಿರ ಹಾಗೂ ನೀರಾವರಿ ಬೆಳೆಗೆ ಎಕರೆಗೆ ಕನಿಷ್ಟ ೨೫ಸಾವಿರ ರೂ ಪರಿಹಾರ ಘೋಷಿಸಿ ತುರ್ತು ಬಿಡುಗಡೆಗೆ ಕ್ರಮ ವಹಿಸಬೇಕು ಹಾಗೂ ದನಕರುಗಳಿಗೆ ಮೇವಿನ ಅಭಾವ ಇರುವದರಿಂದ ಮೇವು ಬ್ಯಾಂಕ್ ಆರಂಭಿಸಬೇಕು ಮತ್ತು ನರೇಗಾ ಯೋಜನೆಯಡಿ ರೈತರ ಹೊಲಗಳಿಗೆ ಕೃಷಿ ಕಾರ್ಮಿಕರನ್ನು ಒದಗಿಸಬೇಕು, ಹಗಲಿನಲ್ಲಿ ನಿರಂತರವಾಗಿ ೭ತಾಸು ೩ಫೇಸ್ ವಿದ್ಯತ್ ನ್ನು ನೀರಾವರಿಗೆ ಒದಗಿಸಿ ಕೊಡಬೇಕು ಎಂದು ಆಗ್ರಹಿಸಿ ವಿವಿಧ ರೈತಪರ ಸಂಘಟನೆಗಳ ವತಿಯಿಂದ ಸೋಮವಾರ ಪಟ್ಟಣದಲ್ಲಿ ಪ್ರತಿಭಟನಾ ರ‍್ಯಾಲಿ ನಡೆಸಿ, ತಹಶೀಲ್ದಾರ ಗೆ ಮನವಿ ಪತ್ರ ಸಲ್ಲಿಸಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಎಲ್ಲ ರೈತಸಂಘಟನೆಗಳು ಸೇರಿ ಅಲ್ಲಿಂದ ಬಸವೇಶ್ವರ ವೃತ್ತ, ಕಿತ್ತೂರು ಚನ್ನಮ್ಮ ವೃತ್ತ ಮಾರ್ಗವಾಗಿ ತಹಶೀಲ್ದಾರ ಕಚೇರಿಯವರೆಗೂ ಸಾಗಿದರು. ಕಿತ್ತೂರು ರಾಣಿ ಚನ್ನಮ್ಮ ವೃತ್ತದ ಬಳಿ ವಿಜಯಪುರ ರಸ್ತೆಯನ್ನು ಬಂದ್ ಮಾಡಿ ಕೆಲ ಕಾಲ ಪ್ರತಿಭಟಿಸಿದರು.ತಹಶೀಲ್ದಾರ…
ವಿಜಯಪುರ: ಲಚ್ಯಾಣ – ತಡವಾಳ ರೈಲು ನಿಲ್ದಾಣಗಳ ಮದ್ಯ ಕಿ ಮೀ ನಂ ೨೫೭/೭೦೦-೮೦೦ ರಲ್ಲಿ ಭೀಮಾ ನದಿ ರೈಲ್ವೆ ಬ್ರಿಡ್ಜ್ ಅಪ್ ಲೈನ್ ರೈಲು ಹಳೆಯ ಕೆಳಗೆ ಅನಾಮದೇವ್ ಶವ ಪತ್ತೆಯಾಗಿರುವ ಕುರಿತು ವಿಜಯಪುರ ರೇಲ್ವೆ ಪೋಲಿಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ. ಪತ್ತೆಯಾದ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ ಮಾಡಿಕೊಳ್ಳಲಾಗಿದೆ.ಮೃತನು ವ್ಯಕ್ತಿ ಅಂದಾಜು ೪೦ ರಿಂದ ೪೫ ವರ್ಷದವನಾಗಿದ್ದು, ಸಾಧಾರಣ ಮೈಕಟ್ಟಿನವನಾಗಿದ್ದು ೫.೬” ಅಡಿ ಎತ್ತರ. ಕೋಲು ಮುಖ ಸಾದಗಪ್ಪ ಮೈಬಣ್ಣ. ನೆಟ್ಟನೆಯ ಮೂಗು. ತಲೆಯಲ್ಲಿ ಕಪ್ಪು. ಬಿಳಿ ಕೂದಲು ಇದ್ದು. ಒಂದು ತಿಳಿ ಗುಲಾಬಿ ಬಣ್ಣದ ತುಂಬು ತೋಳಿನ ಅಂಗಿ ಬೂದು ಬಣ್ಣದ ಪ್ಯಾಂಟ್ ಧರಿಸಿದ್ದಾನೆ. ಈ ಚಹರೆಪಟ್ಟಿಯುಳ್ಳ ವ್ಯಕ್ತಿಯ ವಾರಸುದಾರರು ಯಾರಾದರು ಇದ್ದಲ್ಲಿ, ಅಥವಾ ವಾರಸುದಾರರು ಪತ್ತೆಯಾದಲ್ಲಿ ಆರಕ್ಷಕ ಉಪನಿರೀಕ್ಷಕರು ರೈಲ್ವೆ ಪೊಲೀಸ್ ಠಾಣೆ ೦೮೩೫೨-೨೫೦೮೮೩ ರೈಲ್ವೆ ಪೊಲೀಸ್ ಕಂಟ್ರೋಲ್ ರೂಂ ವಿಜಯಪುರ ೦೮೦-೨೨೮೭೧೨೯೧ ಗೆ ಸಂಪರ್ಕಿಸುವಂತೆ ರೇಲ್ವೆ ಪೋಲಿಸ್ ಅಧಿಕಾರಿಗಳು ಪ್ರಕಟಣೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.
ವಿಜಯಪುರ: ಪದವಿ ಮಹಾವಿದ್ಯಾಲಯಗಳಿಗೆ ಮಾತ್ರ ಸೀಮಿತವಾದ ಘಟಿಕೋತ್ಸಗಳು ಐಟಿಐದಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಐಟಿಐ ಪದವಿಧರರೆಂದು ಪರಿಗಣಿಸಿ ಘಟಿಕೋತ್ಸವ ಮೂಲಕ ಪ್ರಮಾಣ ಪತ್ರ ವಿತರಿಸಲು ಭಾರತ ಸರ್ಕಾರ ನಿರ್ದೇಶಿಸಿದ್ದು, ಐಟಿಐ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಕೀಳರಿಮೆಯನ್ನು ಬಿಟ್ಟು ತಾವೂ ಕೂಡ ಪದವೀಧರರೆಂಬ ಮನೋಭಾವನೆ ಬೆಳಿಸಿಕೊಂಡು, ಪಡೆದಿರುವ ಕೌಶಲ್ಯದ ಸದ್ಭಳಕೆ ಮಾಡಿಕೊಂಡು ಉದ್ಯೋಗಿಗಳಾಗುವಂತೆ ಸರ್ಕಾರಿ ಕೈಗಾರಿಕೆ ತರಬೇತಿ ಸಂಸ್ಥೆ ಪ್ರಾಚಾರ್ಯ ರಮೇಶ ದೇಸಾಯಿ ಕರೆ ನೀಡಿದರು.ಇತ್ತೀಚೆಗೆ ವಿಜಯಪುರ ಸರ್ಕಾರಿ ಕೈಗಾರಿಕೆ ತರಬೇತಿ ಸಂಸ್ಥೆಯಲ್ಲಿ ನಡೆದ ಐಟಿಐ ಪದವಿದರರ ಘಟಿಕೋತ್ಸವ ಕಾರ್ಯಕ್ರಮದಲ್ಲಿ ೨೦೨೩ನೇ ಶೈಕ್ಷಣಿಕ ಸಾಲಿನಲ್ಲಿ ಐಟಿಐ ತರಬೇತಿ ಪಡೆದು ಅಖಿಲ ಭಾರತ ವೃತ್ತಿ ಪರೀಕ್ಷೆಯಲ್ಲಿ ಉತ್ತೀರ್ಣರದ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ವೃತ್ತಿ ಪ್ರಮಾಣ ಪತ್ರ ಹಾಗೂ ಬಹುಮಾನಗಳನ್ನು ವಿತರಿಸಿ ಅವರು ಮಾತನಾಡಿದರು.ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ರುಡಸೆಟ್ ಸಂಸ್ಥೆ ನಿರ್ದೇಶಕ ಮುತ್ತಣ್ಣ ಧನಗರ ಅವರು ಭಾಗವಹಿಸಿ ಮಾತನಾಡಿದರು. ಉಪ ಪ್ರಾಚಾರ್ಯ ಪಿ.ಎಚ್.ಮಸೂತಿ, ಕಚೇರಿ ಅಧೀಕ್ಷಕರಾದ ಶ್ರೀಮತಿ ಶಶಿಕಲಾ ನಾಯ್ಕೋಡಿ, ಸಂಪನ್ಮೂಲ ವ್ಯಕ್ತಿಗಳು, ಐಟಿಐ ಪದವೀಧರರು ಮತ್ತು ಪಾಲಕರು…
ವಿಜಯಪುರ: ಜಿಲ್ಲೆಯ ಬಬಲೇಶ್ವರ, ಮಮದಾಪುರ, ಹೂವಿನಹಿಪ್ಪರಗಿ, ಬಳ್ಳೊಳ್ಳಿ ಹಾಗೂ ದೇವರಹಿಪ್ಪರಗಿ ಕೃಷಿ ಯಂತ್ರಧಾರೆ ಕೇಂದ್ರಗಳಲ್ಲಿ ಲಭ್ಯವಿರುವ ಕೃಷಿ ಯಂತ್ರೋಪಕರಣಗಳನ್ನು ಆಸಕ್ತ ಎಫ್‌ಪಿಓ- ಸಂಸ್ಥೆಗಳಿಗೆ ಹಸ್ತಾಂತರಿಸಲು ಅರ್ಹ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.ಕೃಷಿ ಯಂತ್ರಧಾರೆ ಕೇಂದ್ರದಲ್ಲಿರುವ ಯಂತ್ರೋಪಕರಣಗಳನ್ನು ಹಸ್ತಾಂತರಿಸಿಕೊಂಡ ಸಂಸ್ಥೆಗಳು ಇಲಾಖೆ ನಿಗದಿಪಡಿಸಿದ ದರದಲ್ಲಿ ರೈತರಿಗೆ ಬಾಡಿಗೆ ಆಧಾರದ ಮೇಲೆ ನೀಡಬೇಕಾಗುತ್ತದೆ. ಆಸಕ್ತ ಅರ್ಹ ಸಂಸ್ಥೆಗಳು ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರು, ವಿಭಾಗೀಯ ಉಪ ಕೃಷಿ ನಿರ್ದೇಶಕರು ಹಾಗೂ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ವಿಜಯಪುರ: ವಿಕಲಚೇತನರ ಜಿಲ್ಲಾ ಮಟ್ಟದ ಕುಂದು ಕೊರತೆ ಸಭೆಯನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಅಕ್ಟೋಬರ್ ೧೯ ರಂದು ಸಂಜೆ ೪ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.ಸಭೆಗೆ ಜಿಲ್ಲೆಯಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಮುಖ್ಯಸ್ಥರು, ವಿಕಲಚೇತನರು ಭಾಗವಹಿಸುವಂತೆ ಮನವಿ ಮಾಡಿಕೊಳ್ಳಲಾಗಿದೆ. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಚೇರಿ ದೂ: ೦೮೩೫೨-೭೯೬೦೬೦ ಸಂಖ್ಯೆಗೆ ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬರ ಪರಿಸ್ಥಿತಿ ಕುರಿತ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಮಾಹಿತಿ ಕುಡಿವ ನೀರಿನ ಸಮಸ್ಯೆಯಾಗದಂತೆಕ್ರೀಯಾಯೋಜನೆ | ೫೪,೬೩೪ ಲಕ್ಷ ರೂ. ಎನ್.ಡಿ.ಆರ್.ಎಫ್ ಸಹಾಯಕ್ಕಾಗಿ ಮನವಿ ವಿಜಯಪುರ: ಜನರ ಆಶೋತ್ತರಗಳಿಗೆ ಹಾಗೂ ಅವರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾಯೋನ್ಮುಖರಾಗಬೇಕೆಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಬಿಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.ಅವರು ಜಿಲ್ಲೆಯ ಬರ ಪರಿಸ್ಥಿತಿ ನಿರ್ವಹಣೆ, ಕುಡಿಯುವ ನೀರಿನ ಪೂರೈಕೆ ಕುರಿತು ಸೋಮವಾರ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯ ೧೨ ತಾಲೂಕುಗಳನ್ನು ತೀವ್ರ ಬರ ಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದ್ದು, ತಿಕೋಟಾ ತಾಲೂಕನ್ನು ಬರ ಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಎನ್.ಡಿ ಆರ್.ಎಫ್ ಮಾನದಂಡದಿಂದಾಗಿ ಬರ ಎಂದು ಘೋಷಣೆ ಆಗದೇ ಇರುವುದರಿಂದ ಇತರ ಮಾನದಂಡಗಳನ್ನು ಪರಿಗಣಿಸಿ ತಿಕೋಟಾ ತಾಲೂಕನ್ನು ಬರ ಘೋಷಣೆ ಮಾಡಬೇಕೆಂದು ಸರ್ಕಾರಕ್ಕೆ ಪ್ರಸ್ತಾವನೆ…
ವಿಜಯಪುರ: ನಗರದದ ಕೆ.ಎಚ್.ಬಿ ಕಾಲೋನಿಯ ಯೋಗ ಗಾರ್ಡನ್ ನಲ್ಲಿ ಶ್ರೀತುಳಸಿಗಿರೀಶ ಫೌಂಡೇಶನ್ ವತಿಯಿಂದ, ಸಾರ್ವಜನಿಕರನ್ನು ಭೇಟಿ ಮಾಡಿ ಮೋದಿಜೀ ಅವರ ನವವರ್ಷಗಳ ಸಾಧನೆಗಳನ್ನು ವಿವರಿಸಿ. ಮೋದಿ ಅವರನ್ನು ಬೆಂಬಲಿಸಲು ಕೋರಲಾಯಿತು.ಈ ನವರಾತ್ರಿಯ ಶುಭ ಸಂದರ್ಭದಲ್ಲಿ ಮೋದಿಜೀ ಅವರ ನವವರುಷಗಳ ಸಾಧನೆಯನ್ನು ಮನೆ ಮನೆಗಳಿಗೆ, ಮನ ಮನಗಳಿಗೆ ಮುಟ್ಟಿಸುವ ಕಾರ್ಯವನ್ನು ಶ್ರೀತುಳಸಿಗಿರೀಶ ಫೌಂಡೇಶನ್ ಮಾಡಲಿದೆ.ಬಸವರಾಜ ಬೈಚಬಾಳ, ರೋಹನ್ ಆಪ್ಟೆ, ಪ್ರೇಮ ಕೆ, ಗಿರಿಧರ ಎಚ್ ಮತ್ತಿತರರು ಉಪಸ್ಥಿತರಿದ್ದರು.
ವರ್ಗಾವಣೆ ದಂಧೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ವಿದ್ಯುತ್ ಕಡಿತ ಹಾಗೂ ಸರ್ಕಾರದ ಜನವಿರೋಧಿ ನೀತಿಗೆ ಖಂಡನೆ ವಿಜಯಪುರ: ರಾಜ್ಯದಲ್ಲಿ ವರ್ಗಾವಣೆ ದಂಧೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ವಿದ್ಯುತ್ ಕಡಿತ ಹಾಗೂ ಜನವಿರೋಧಿ ನೀತಿ ವಿರೋಧಿಸಿ ಭಾರತೀಯ ಜನತಾ ಪಕ್ಷದ ಬಿಜೆಪಿ ಕಾರ್ಯಕರ್ತರು ರಾಜ್ಯ ಕಾಂಗ್ರೆಸ್ ಸರ್ಕಾರ ವಿರುದ್ಧ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಿದರು.ವಿಜಯಪುರದ ಡಾ.ಬಿ.ಆರ್. ಅಂಬೇಡ್ಕರ ವೃತ್ತದಿಂದ ಆರಂಭಗೊಂಡಡ ರ‍್ಯಾಲಿ ವಿವಿಧ ಮಾರ್ಗಗಳಲ್ಲಿ ಸಂಚರಿಸಿ ಜಿಲ್ಲಾಧಿಕಾರಿಗಳ ಕಚೇರಿ ತಲುಪಿತು. ಈ ವೇಳೆ ಯಾವೊಬ್ಬ ಅಧಿಕಾರಿಯೂ ಸ್ಥಳದಲ್ಲಿ ಇರದ ಕಾರಣ ಪ್ರತಿಭಟನೆ ನೇತೃತ್ವ ವಹಿಸಿದ್ದ ಸಂಸದ ರಮೇಶ ಜಿಗಜಿಣಗಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ಕೆಲ ಹೊತ್ತು ಧರಣಿ ನಡೆಸಿ ಅಸಮಾಧಾನ ಹೊರಹಾಕಿದರು.ಮನವಿ ಸ್ವೀಕರಿಸಲು ಓರ್ವ ಅಧಿಕಾರಿಯೂ ಇಲ್ಲ ಎಂದಾದರೆ ಹೇಗೆ? ಇದು ಯಾವ ವ್ಯವಸ್ಥೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಮುಂದುವರೆದು ಮಾತನಾಡಿದ ಅವರು, ಬೆಂಗಳೂರಿನ ಅಂಬಿಕಾಪತಿ ಅವರ ಮನೆಯಲ್ಲಿ ಕೋಟಿ ಕೋಟಿ ರೂ. ಹಣ ಪತ್ತೆಯಾಗಿದೆ, ಇದು ಕೇವಲ ಒಂದು ಉದಾಹರಣೆ ಅಷ್ಟೇ, ಗುತ್ತಿಗೆದಾರರಿಗೆ…
ಇಂಡಿ: ರಾಜ್ಯ ಸರಕಾರ ಜನ ವಿರೋಧಿ ಅನುಸರಿಸುತ್ತಿದೆ ಎಂದು ಆರೋಪಿಸಿ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.ಬಸವೇಶ್ವರ ವೃತ್ತದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಕಾಸುಗೌಡ ಬಿರಾದಾರ, ತಾಲೂಕಿನ ರೈತರು ಬೆಳೆಗೆ ನೀರು ಪೂರೈಸಲು ಸರಿಯಾಗಿ ವಿದ್ಯುತ್ ನೀಡುತ್ತಿಲ್ಲ. ರಾಜ್ಯದಲ್ಲಿ ಜನರ ಹಣವನ್ನು ಲೂಟಿ ಮಾಡಿ ಪಂಚರಾಜ್ಯಗಳ ಚುನಾವಣೆಗೆ ಅದನ್ನು ಕಳುಹಿಸುತ್ತಿದ್ದಾರೆ. ಬೇರೆ ರಾಜ್ಯಗಳ ಚುನಾವಣೆಗೆ ಕಾಂಗ್ರೆಸ್ ಎಟಿಎಂ ಆಗಿದೆ. ರಸ್ತೆಗಳು ಹಾಳಾಗಿವೆ ಎಂದರು.ಇಂಡಿ ಬಿಜೆಪಿ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಿವಡೆ ಮಾತನಾಡಿ, ಐಟಿ ದಾಳಿ ಮಾಡಿದಾಗ ಗುತ್ತಿಗೆದಾರರ ಮನೆಯಲ್ಲಿ ೪೦ ಕೋಟಿ ಹಣ ಸಿಕ್ಕಿದೆ. ಕಾಂಗ್ರೆಸಕ್ಕೂ ಇದಕ್ಕೂ ಸಂಬಂಧವಿದೆ ಎಂದರು.ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಇವರ ಪ್ರತಿಕೃತಿ ದಹನ ಮಾಡಿದರು.ಮುಖಂಡರಾದ ರಾಜ್ಯ ಒಬಿಸಿ ಮೋರ್ಚಾದ ಶೀಲವಂತ ಉಮರಾಣಿ, ಪುರಸಭೆ ಸದಸ್ಯರಾದ ಅನೀಲಗೌಡ ಬಿರಾದಾರ, ದೇವೆಂದ್ರ ಕುಂಬಾರ, ಸಿದ್ದಲಿಂಗ ಹಂಜಗಿ, ಬಾಳು ಮುಳಜಿ, ಅನೀಲ ಜಮಾದಾರ, ಸೋಮು ನಿಂಬರಗಿಮಠ,…
ವಿಜಯಪುರ: ನಗರದ ಸಮೀಪದ ಕವಲಗಿಯಲ್ಲಿರುವ ಸಂಗನಬಸವ ಅಂತಾರಾಷ್ಟ್ರೀಯ ವಸತಿ ಶಾಲೆಯ ಶಿಕ್ಷಕಿಯರು ನವರಾತ್ರಿಯ ಎರಡನೆಯ ದಿನದಂದು ಬಿಳಿ ಸೀರೆಯಲ್ಲಿ ಮಿಂಚಿದ್ದು ಹೀಗೆ..
