Author: editor.udayarashmi@gmail.com

ವಿಜಯಪುರ: ವಿದ್ಯುತ್ ತಂತಿ ತುಂಡಾಗಿ ಬಿದ್ದು ಐದು ಎಕರೆ ಕಬ್ಬು ನಾಶವಾಗಿರುವ ಘಟನೆ ಜಿಲ್ಲೆಯ ಕೊಲ್ಹಾರ ತಾಲೂಕಿನ ರೋಣಿಹಾಳ ಗ್ರಾಮದಲ್ಲಿ ನಡೆದಿದೆ.ರೋಣಿಹಾಳ‌ ಗ್ರಾಮದ ರೈತರಾದ ಶಿವಲಿಂಗಪ್ಪ ರುದ್ರಪ್ಪ ನ್ಯಾಮಗೊಂಡ ಹಾಗೂ ಶಿವಲಿಂಗವ್ವ ಭಾವಿ ಇವರಿಗೆ ಸೇರಿದ ಕಬ್ಬು ಬೆಳೆಯು ಸಂಪೂರ್ಣ ಅಗ್ನಿಗೆ ಆಹುತಿಯಾಗಿದೆ.ಗದ್ದೆ ಮೇಲೆ ಹಾದು ಹೋಗಿರುವ ವಿದ್ಯುತ್ ತಂತಿ ತುಂಡಾಗಿ ಬಿದ್ದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಇದರ ಪರಿಣಾಮ, ಕಟಾವಿಗೆ ಬಂದಿದ್ದ ಐದು ಎಕರೆಯಲ್ಲಿನ ಕಬ್ಬಿನ ಬೆಳೆ ಸುಟ್ಟು ನಾಶವಾಗಿದೆ. ತಕ್ಷಣವೇ ಬೆಂಕಿಯನ್ನು ನಂದಿಸಲು ಸ್ಥಳೀಯರೆಲ್ಲ ಸೇರಿ ಪ್ರಯತ್ನಿಸಿದರಾದರೂ ಬೆಳೆ ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ.ಕೈಗೆ ಬಂದ ಕಬ್ಬು ಸುಟ್ಟು ಹೋಗಿದ್ದು, ನಷ್ಟದಿಂದ ರೈತರು ಕಂಗಾಲಾಗಿದ್ದಾರೆ.ಅಗ್ನಿ‌ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಕೊಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸ್ ಇಲಾಖೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.ಈ ಘಟನೆಗೆ ಹೆಸ್ಕಾಂ ಇಲಾಖೆಯ ನಿರ್ಲಕ್ಷವೇ ಕಾರಣ ಎಂದು ರೈತರು ಆರೋಪಿಸಿದ್ದಾರೆ.

Read More

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗಂಭೀರ ಆರೋಪ ಟ್ರಾನ್ಸಫರ್ ಸೇರಿ ಎಲ್ಲದರಲ್ಲೂ ಭ್ರಷ್ಟಾಚಾರ | ಬಹಿರಂಗವಾಗಿಯೇ ಕಮಿಷನ್ ದಂಧೆ | ಲಂಚ ಕೊಟ್ಟವರಿಗೆ ಬಿಲ್ ಬಿಡುಗಡೆ ಬೆಂಗಳೂರು: ರಾಜ್ಯ ಸರ್ಕಾರ ಮತ್ತು ಗುತ್ತಿಗೆದಾರರು ಜೊತೆಯಾಗಿ ಲೂಟಿ ಮಾಡುತ್ತಿದ್ದು, ಕಾಂಟ್ರಾಕ್ಟರ್ ಅಸೋಸಿಯೇಷನ್ ಸರ್ಕಾರದ ಕಮಿಷನ್ ಕಲೆಕ್ಷನ್ ಸೆಂಟರ್ ಆಗಿದೆ. ಅಕ್ರಮ ಹಣ ಪತ್ತೆಯಾಗಿರುವ ಕುರಿತು ಇಡಿ ಹಾಗೂ ಸಿಬಿಐ ಎರಡೂ ತನಿಖೆಯಾಗಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.ಈ ಕುರಿತು ಶನಿವಾರ ಮಾಧ್ಯಮಗಳಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಬಂದಾಗಿನಿಂದ ಟ್ರಾನ್ಸಫರ್ ನಿಂದ ಹಿಡಿದು ಎಲ್ಲದರಲ್ಲೂ ಭ್ರಷ್ಟಾಚಾರ ಇದೆ. ರಾಜ್ಯ ಕಂಡ ಅತ್ಯಂತ ಭ್ರಷ್ಟ ಸರ್ಕಾರ ಇದು. ಗ್ರಾಮದಿಂದ ಹಿಡಿದು ವಿಧಾನಸೌಧದವರೆಗೂ ಭ್ರಷ್ಟಾಚಾರ ಇದೆ. ಬಹಿರಂಗವಾಗಿಯೇ ಕಮಿಷನ್ ದಂಧೆ ನಡೆಯುತ್ತಿದೆ.ಗುತ್ತಿಗೆದಾರರ ಬಾಕಿ ಹಣ ಬಿಡುಗಡೆಯಾದ ತಕ್ಷಣವೇ ಗುತ್ತಿಗೆದಾರನ ಸಂಬಂಧಿಕರ ಮನೆಯಲ್ಲಿ ಇಷ್ಟೊಂದು ದೊಡ್ಡ ಮೊತ್ತದ ಹಣ ಸಿಕ್ಕಿರುವುದು ಇದೇ ಮೊದಲು. ಸರ್ಕಾರ 10% ಕಮಿಷನ್ ಪಡೆದಿರುವುದು ಸಾಬೀತಾಗಿದೆ. ಇನ್ನಷ್ಟು ಗುತ್ರಿಗೆದಾರರ ಮನೆ…

Read More

ಮುದ್ದೇಬಿಹಾಳ: ವಿಜಯಪುರದಲ್ಲಿ ನಡೆದ ವಿಭಾಗಮಟ್ಟದ ಸ್ಪರ್ಧೆಯಲ್ಲಿ ಸರ್ಕಾರಿ ಆದರ್ಶ ವಿದ್ಯಾಲಯ ಬಿದರಕುಂದಿ ಶಾಲೆಯ ೧೦ನೇ ತರಗತಿಯ ವಿದ್ಯಾರ್ಥಿ ಪ್ರಜ್ವಲ್ ಲಮಾಣಿ ೧೦೦ ಮೀ ಓಟದ ಸ್ಪರ್ಧೆಯಲ್ಲಿ ಹಾಗೂ ಶಾರ್ಟ್ ಪುಟ್ ಸ್ಪರ್ಧೆಯಲ್ಲಿ ವಿಜೇತನಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.ಗುಂಡು ಎಸೆತದಲ್ಲಿ -ಪ್ರಥಮ, ೧೦೦ಮೀ ಓಟದಲ್ಲಿ- ದ್ವಿತೀಯ, ಲಾಂಗ್ ಜಂಪ್ – ದ್ವಿತೀಯ ಸ್ಥಾನಗಳನ್ನು ಗಿಟ್ಟಿಸಿಕೊಂಡು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದು, ಶಾಲೆಯ ದೈಹಿಕ ಶಿಕ್ಷಕ ಬಿ.ಕೆ.ಲಮಾಣಿ ಹಾಗೂ ಎನ್.ಎಸ್.ಬಿರಾದಾರ್, ಮುಖ್ಯ ಗುರುಮಾತೆ ಎನ್.ಬಿ.ತೆಗ್ಗಿನಮಠ ಸೇರಿದಂತೆ ಎಲ್ಲ ಶಿಕ್ಷಕರು ಹಾಗೂ ಎಸ್‌ಡಿಎಂಸಿ ಅಧ್ಯಕ್ಷ ಗುಂಡಪ್ಪ ಕೊಟಗಿ, ರಾಜ್ಯದಲ್ಲಿಯೂ ಪ್ರಜ್ವಲ್ ಮಿಂಚುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

Read More

ಮುದ್ದೇಬಿಹಾಳ: ತಾಲೂಕಿನ ಯರಝರಿ ಗ್ರಾಮದ ಯಲ್ಲಾಲಿಂಗೇಶ್ವರ ಮಠದಲ್ಲಿ ನವರಾತ್ರೋತ್ಸವದ ಅಂಗವಾಗಿ ಅ.೧೫ ರಿಂದ ಅ.೨೭ ರವರೆಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.ಪ್ರತಿದಿನ ದೇವಿಯ ಮಹಾಪೂಜೆ, ಕುಂಕುಮಾರ್ಚನೆ ಹಾಗೂ ದೇವಿಯ ಪಾರಾಯಣ ಅತ್ಯಂತ ವೈಭವದಿಂದ ನಡೆಯುವದು. ಅ೨೬ ರಂದು ನಸುಕಿನ ಜಾವ ೩ಗಂಟೆಗೆ ಮಠದಿಂದ ಪರಮಾನಂದರ ಉತ್ಸವದೊಂದಿಗೆ ಖಾದರಲಿಂಗ ದರ್ಗಾಕ್ಕೆ ಗಂಧ ಹೊರವದು. ನಂತರ ಖಾದರಲಿಂಗರ ಉರುಸು ನಡೆಯುವದು. ಅದೇ ದಿನ ಹೊನಲು ಬೆಳಕಿನ ಕಬಡ್ಡಿ ಟೂರ್ನಾಮೆಂಟ್ ಮತ್ತು ರಾತ್ರಿ ೧೦ಕ್ಕೆ ಗ್ರಾಮದ ಯಲ್ಲಾಲಿಂಗ ನಗರದ ರಾಜರಾಜೇಶ್ವರಿ ತರುಣ ನಾಟ್ಯ ಸಂಘದಿಂದ ’ರೈತನ ರಾಜ್ಯದಲ್ಲಿ ರೌಡಿಗಳ ದರ್ಬಾರ’ ನಾಟಕ ಪ್ರದರ್ಶಿಸಲಿದ್ದಾರೆ. ೨೭ರಂದು ಬೆ.೧೧ ಕ್ಕೆ ಸಾಮೂಹಿಕ ವಿವಾಹ ಹಾಗೂ ಮಲ್ಲಾರಲಿಂಗ ಪ್ರಭುಗಳ ಗುರುವಂದನಾ ಕಾರ್ಯಕ್ರಮ ಜರುಗಲಿದೆ. ಸದ್ಭಕ್ತರು ಆಗಮಿಸಿ ದೇವಿಯ ಹಾಗೂ ಪೂಜ್ಯರ ಆಶೀರ್ವಾದ ಪಡೆದುಕೊಲ್ಳುವಂತೆ ಪ್ರಕಟಣೆ ತಿಳಿಸಿದೆ. ಹೊನಲು ಬೆಳಕಿನ ಕಬಡ್ಡಿ ಟೂರ್ನಾಮೆಂಟ್ ನ ಪ್ರವೇಶ ಫೀ ೩೦೧ ರೂ. ನಿಗದಿಪಡಿಸಿದ್ದು, ಪ್ರಥಮ ಬಹುಮಾನ ೧೦.೦೦೧/-, ದ್ವಿತೀಯ ೭,೦೦೧/-, ತೃತೀಯ ೫,೦೦೧/- ಹಾಗೂ…

Read More

ಮುದ್ದೇಬಿಹಾಳ: ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿನ ಬನ್ನಿ ಮಹಾಂಕಾಳಿ ದೇವಸ್ಥಾನದಲ್ಲಿ ನವರಾತ್ರೋತ್ಸವದ ಅಂಗವಾಗಿ ಅ.೧೫ ರಿಂದ ೨೩ ರವರ ವರೆಗೆ ಶ್ರೀ ದೇವಿ ಮಹಾತ್ಮೆ ಪುರಾಣವನ್ನು ಹಮ್ಮಿಕೊಳ್ಳಲಾಗಿದೆ.ಪ್ರವಚನಕಾರ, ಆಧ್ಯಾತ್ಮಿಕ ಚಿಂತಕ ಪ್ರೊ.ಆಯ್.ಬಿ.ಹಿರೇಮಠ ಪುರಾಣವನ್ನು ನಡೆಸಿಕೊಡಲಿದ್ದು, ಗವಾಯಿ ಸಂಗಮೇಶ ಶಿವಣಗಿ ಸಂಗೀತ, ತಮ್ಮಣ್ಣ ಗಜೇಂದ್ರಗಡ ತಬಲಾಸಾಥ ನೀಡಲಿದ್ದಾರೆ. ಪ್ರತಿ ದಿನ ಸಂಜೆ ೫:೩೦ ಕ್ಕೆ ಪ್ರಾರಂಭಗೊಂಡು ೭:೩೦ ಕ್ಕೆ ಮಂಗಲಗೀತೆಯೊಂದಿಗೆ ಮುಕ್ತಾಯಗೊಳ್ಳಲಿರುವ ಪ್ರವಚನವನ್ನು ಶ್ರೀ ದೇವಿಯ ಸದ್ಭಕ್ತರು ಆಲಿಸಿ ಪುನೀತರಾಗುವಂತೆ ಪ್ರಕಟಣೆ ತಿಳಿಸಿದೆ.

Read More

ಬೆಂಗಳೂರು: ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದ ಮೇಲೆ ವಿಪಕ್ಷಗಳ ಮುಖಂಡರು, ಕಾರ್ಯಕರ್ತರ ಮೇಲೆ ದೌರ್ಜನ್ಯ ಮಿತಿಮೀರಿದೆ. ಗೃಹ ಇಲಾಖೆ, ಪೊಲೀಸ್ ವ್ಯವಸ್ಥೆ ಆಡಳಿತ ಪಕ್ಷದ ತಾಳಕ್ಕೆ ತಕ್ಕಂತೆ ಕುಣಿಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.ಈ ಕುರಿತು ಶನಿವಾರ ಟ್ವೀಟ್‌ ಮೂಲಕ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದು, ಚಿಂತಾಮಣಿ ವಿಧಾನಸಭೆ ಕ್ಷೇತ್ರದ ಜೆಡಿಎಸ್‌ ಪಕ್ಷದ ಮುಖಂಡರು, ನಗರಸಭೆ ಸದಸ್ಯರಾದ ಅಗ್ರಹಾರ ಮುರಳಿ ಅವರ ಮೇಲೆ ದುಷ್ಕರ್ಮಿಗಳು ಮಚ್ಚು ಲಾಂಗ್ ಗಳಿಂದ ಪೈಶಾಚಿಕ ದಾಳಿ ನಡೆಸಿರುವ ಘಟನೆ ಖಂಡನೀಯ. ಈ ಕೃತ್ಯ ಎಸಗಿದ ದುರುಳರನ್ನು ಕೂಡಲೇ ಪತ್ತೆ ಹಚ್ಚಿ ಬಂಧಿಸಬೇಕು ಹಾಗೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.ಅಧಿಕಾರಿಗಳು ಆಡಳಿತ ಪಕ್ಷ ನಾಯಕರ ಕೈಗೊಂಬೆಗಳು ಆಗಿರುವ ಪರಿಣಾಮವೇ ಇಂಥ ಘಟನೆಗಳಿಗೆ ದಾರಿ ಆಗುತ್ತಿದೆ. ರಾಜ್ಯದಲ್ಲಿ ಕಳೆದ ಮೂರು ನಾಲ್ಕು ತಿಂಗಳಿನಿಂದ ಈ ರೀತಿಯ ಘಟನೆಗಳು ನಡೆಯುತ್ತಿದ್ದು, ಕಾನೂನು ಸುವ್ಯವಸ್ಥೆ ಪೂರ್ಣವಾಗಿ ಕುಸಿದು ಬಿದ್ದಿದೆ. ಮೊದಲು ಇಂಥ ಪ್ರಕರಣಗಳು ನಡೆಯುತ್ತಿರಲಿಲ್ಲ…

Read More

ಹಾವಿನಾಳ ಇಂಡಿಯನ್ ಶುಗರ್ಸ್ ಕಾರ್ಖಾನೆ ಮಾಲೀಕರ ವಿರುದ್ಧ ಆರೋಪ ಚಡಚಣ: ಸಮೀಪದ ಹಾವಿನಾಳ ಇಂಡಿಯನ್ ಶುಗರ್ಸ್ ಕಾರ್ಖಾನೆಯ ಮಾಲಿಕರು ಕಾರ್ಮಿಕ ಕಾಯ್ದೆಯನ್ನು ದುರುಪಯೋಗಪಡಿಸಿಕೊಂಡಿರುವ ಕಾರಣ ಅವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಕೆಆರೆಸ್ ಪಾರ್ಟಿ ಆಗ್ರಹಿಸಿದೆ.ಕಾರ್ಮಿಕರು ಅಗತ್ಯತೆ ಮತ್ತು ಬಾಕಿ ವೇತನ ಸೇರಿದಂತೆ ಇತರ ಸಮಸ್ಯೆಗಳಿಗೆ ಆಗರವಾಗಿರುವ ಈ ಕಾರ್ಖಾನೆಯಿಂದ ಕಾರ್ಮಿಕರ ಹೋರಾಟ ಹತ್ತಿಕ್ಕುವ ಹುನ್ನಾರ ನಡೆಯುತ್ತಿದೆ. ಕಾರ್ಮಿಕರು ತಮ್ಮ ಮುಷ್ಕರ ಹಿಂದಕ್ಕೆ ಪಡೆಯದಿದ್ದರೆ ನೀರು, ವಸತಿ, ವಿದ್ಯುತ್ ಮುಂತಾದ ಸೌಲಭ್ಯವನ್ನು ಕಡಿತಗೊಳಿಸುವ ಬೆದರಿಕೆ ಒಡ್ಡಿ ಮುಷ್ಕರವನ್ನು ಕೈ ಬಿಡುವಂತೆ ಒತ್ತಾಯ ಮಾಡಿರುವ ಮತ್ತು ಕಾರ್ಮಿಕ ಕಾಯ್ದೆಯನ್ನು ದುರುಪಯೋಗ ಪಡಿಸಿಕೊಂಡಿರುವ ಈ ಕಾರ್ಖಾನೆಯ ಮಾಲೀಕರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಮತ್ತು ಕಾರ್ಮಿಕರಿಗೆ ನ್ಯಾಯವನ್ನು ಒದಗಿಸಲು ಆಗ್ರಹಿಸಿ ಕೆ.ಆರ್.ಎಸ್ ಪಕ್ಷದಿಂದ ಚಡಚಣ ತಹಶಿಲ್ದಾರರಿಗೆ ಭೇಟಿಯಾಗಿ ಮನವಿ ಪತ್ರವನ್ನು ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಕರ್ನಾಟಕ ರಾಷ್ಟ್ರ ಸಮೀತಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ, ರಾಕೇಶ್ ಇಂಗಳಗಿ, ಹಮೀದ ಇಮಾನ್ದಾರ, ವಿಕ್ರಮ ವಾಗ್ಮೋರೆ ಸೇರಿದಂತೆ…

Read More

ಓದಿನ ತಿಳುವಳಿಕೆಯ ಅಗಾಧತೆ ಮತ್ತು ಮಿತಿ ಓದು ನಮ್ಮ ಜ್ಞಾನವನ್ನು ವೃದ್ದಿಸುತ್ತದೆ. ನಿಜ, ಹಾಗೆಯೇ ಅದೇ ಓದು ನಮ್ಮ ಮನಸ್ಸುಗಳನ್ನು ಕುಗ್ಗಿಸುತ್ತದೆಯೇ?ಈ ರೀತಿಯ ಅನುಮಾನ ಬಲವಾಗುತ್ತಿದೆ. ಮೂಲ ಆಶಯದಲ್ಲಿ ಓದು ನಮ್ಮ ಅರಿವನ್ನು ಹೆಚ್ಚಿಸಿ ನಮ್ಮಲ್ಲಿ ವಿನಯವನ್ನು ಬೆಳೆಸುತ್ತದೆ. ತುಂಬಿದ ಕೊಡ ತುಳುಕಲು ಸಾಧ್ಯವಿಲ್ಲ ಮತ್ತು ಅವಕಾಶವೂ ಇಲ್ಲ. ಅದು ನಮ್ಮಲ್ಲಿ ಜೀವಪರ ನಿಲುವನ್ನೂ, ವಿನಯವನ್ನು, ಪ್ರಬುದ್ದತೆಯನ್ನು, ತಾಳ್ಮೆಯನ್ನು ಮತ್ತು ಒಟ್ಟಾರೆ ಸಮಷ್ಟಿ ಪ್ರಜ್ಞೆಯನ್ನು ಬೆಳೆಸುತ್ತದೆ.ಆದರೆ, ಅದೇ ಓದು ಬಹಳಷ್ಟು ಜನರಲ್ಲಿ ಅಹಂಕಾರವನ್ನು, ಸಣ್ಣ ಮನಸ್ಸನ್ನು, ಅಸೂಯಾಪರ ಗುಣವನ್ನು, ಕ್ಷುಲ್ಲುಕ ವ್ಯಕ್ತಿತ್ವವನ್ನು ರೂಪಿಸುವ ಸಾಧ್ಯತೆ ಇದೆ.ನಾನು ಎಲ್ಲರಿಗಿಂತ ಹೆಚ್ಚು ಓದಿದ್ದೇನೆ‌‌. ಎಲ್ಲಾ ಶ್ಲೋಕಗಳು, ಅಧ್ಯಾಯಗಳು, ಮಂತ್ರಗಳು, ಕಾಲಂಗಳು ನನಗೆ ನೆನಪಿದೆ, ನಾನು ಅದನ್ನು ಅತ್ಯಂತ ಸಮರ್ಥವಾಗಿ ನೆನಪಿಟ್ಟು ವಾದಿಸಬಲ್ಲೆ, ನನ್ನ ಸಹವರ್ತಿಗಳಿಗೆ ಆ ಮಟ್ಟದ ನೆನಪು ಮತ್ತು ಜ್ಞಾನ ಇಲ್ಲ , ಅವರ ವಾದಕ್ಕೆ ಹೆಚ್ಚಿನ ಪ್ರಾಮುಖ್ಯತೆ ಇಲ್ಲ ಎಂದು ಸಹಜ ಸಾಮಾನ್ಯ ಜನರನ್ನು ಕೀಳಾಗಿ ಕಾಣುವ ಮನೋಭಾವ ಕಂಡುಬರುತ್ತಿದೆ.ಪ್ರಾರಂಭದ ದಿನಗಳಲ್ಲಿ…

Read More

ಢವಳಗಿ: ಸಮೀಪದ ಮಡಿಕೇಶ್ವರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅ.14 ಶನಿವಾರದಂದು ರಾಷ್ಟ್ರೀಯ ರೋಗವಾಹಕ ಮತ್ತು ರೋಗಿಗಳ ನಿರ್ಮೂಲನೆಯ ಅಂಗವಾಗಿ ಮಲೇರಿಯಾ, ಡೆಂಗಿ ಕಾಯಿಲೆಗಳ ಬಗ್ಗೆ ಅರಿವು ಮೂಡಿಸುವ ಡೆಂಗಿ ಜಾಗೃತಿ ರಥ ಅಭಿಯಾನಕ್ಕೆ ಚಾಲನೆ ನೀಡಲಾಯಿತು.ಈ ಸಂದರ್ಭ ಡಾ.ಈರಣ್ಣ ಬಾಡಗಿಂಡಿ ಮಾತನಾಡಿ, ಸಾಮಾನ್ಯವಾಗಿ ಸಪ್ಟೆಂಬರ್, ಅಕ್ಟೋಬರ್ ತಿಂಗಳಲ್ಲಿ ಅತಿ ಹೆಚ್ಚಾಗಿ ಸಾರ್ವಜನಿಕರಲ್ಲಿ ಭಯ ಹುಟ್ಟಿಸುವ ಸಾಂಕ್ರಾಮಿಕ ರೋಗಗಳಾದ ಮಲೇರಿಯಾ, ಚಿಕನ್ ಗುನ್ಯಾ, ಮೆದುಳುಜ್ವರದಂತಹ ಅನೇಕ ರೋಗಗಳು ಕಾಣಿಸಿಕೊಳ್ಳುತ್ತವೆ. ಯಾಕೆಂದರೆ ಈ ಸಾಂಕ್ರಾಮಿಕ ರೋಗಗಳು ಕೊಳಚೆ ಪ್ರದೇಶದಲ್ಲಿರುವ ಗಲೀಜು ನೀರಿನಿಂದ ಉತ್ಪತ್ತಿಯಾದ ಸೊಳ್ಳೆಗಳಿಂದ ಮತ್ತು ಮನೆಯಲ್ಲಿ ವಾರಗಟ್ಟಲೆ ಸಂಗ್ರಹಿಸಿದ ನೀರಿನಲ್ಲಿ ಉತ್ಪತ್ತಿಯಾಗುವ ಬ್ಯಾಕ್ಟೀರಿಯಾಯಿಂದ ಇಂತಹ ರೋಗಗಳು ಬರುವುದು ಸಹಜ. ಅದಕ್ಕಾಗಿ ಸಾರ್ವಜನಿಕರು ತಮ್ಮ ತಮ್ಮ ಮನೆಯ ಸುತ್ತ ಮುತ್ತ ಇದ್ದಂತಹ ಗಲಿಜು, ಕೊಳಚೆಯನ್ನು ಸ್ವಚ್ಛ ಮಾಡಿಕೊಳ್ಳಬೇಕು. ಮತ್ತು ನಿಮ್ಮ ಮನೆಯಲ್ಲಿ ನೀರನ್ನು ವಾರಗಟ್ಟಲೆ ಸಂಗ್ರಹಿಸಿಡಬಾರದೆಂದು ತಿಳಿಸಿದರು.ತಾಲೂಕು ಆರೋಗ್ಯ ಅಧಿಕಾರಿಗಳ ಕಛೇರಿಯ ಸಿಬ್ಬಂದಿ ರುದ್ರವಾಡಿ, ನಿರೀಕ್ಷಣಾಧಿಕಾರಿ ಯಲ್ಲಪ್ಪ ಚಲವಾದಿ ಮತ್ತು ದಶವಂತ ಸಾವಳ್ಕಾರ,…

Read More

ವಿಜಯಪುರ: ಕೈಗಾರಿಕೆ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ರವರು ಸೋಮವಾರ ಮತ್ತು ಮಂಗಳವಾರ 16 ಮತ್ತು 17ರಂದು ವಿಜಯಪುರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.ಈ 16 ಸೋಮವಾರ 11 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯ ಬರ ಪರಿಸ್ಥಿತಿ ಕುರಿತು ಸಭೆ ನಡೆಸಲಿದ್ದಾರೆ.ನಂತರ ಜಿಲ್ಲೆಯಲ್ಲಿರುವ ವಿದ್ಯುತ್ ಲೋಡ್ ಸೆಡ್ಡಿಂಗ್ ಸಮಸ್ಯೆ,ಮುಂದಿನ ಜನತಾದರ್ಶನ ನಿಗದಿ ಮಾಡುವುದು, ಹಾಗೂ ಕೋಟಿ ವೃಕ್ಷ ಅಭಿಯಾನ ಅಂಗವಾಗಿ ಹಮ್ಮಿಕೊಂಡಿರುವ ಮೆರತನ್ ಸಿದ್ಧತೆಗಳು ಹಾಗೂ ಇತರೆ ವಿಷಯಗಳನ್ನು ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಲಿದ್ದಾರೆ.ಸಂಜೆ 6 ಗಂಟೆಗೆಜ್ಞಾನಯೋಗಶ್ರಮಕ್ಕೆ ಭೇಟಿ ನೀಡಿ ಅಧ್ಯಕ್ಷರುಗಳು ಹಾಗೂ ಇತರ ಸ್ವಾಮೀಜಿಯವರೊಂದಿಗೆ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳವರ ಗುರುನಮನ ಕಾರ್ಯಕ್ರಮದ ಕುರಿತು ಚರ್ಚಿಸಲಿದ್ದಾರೆ.ಈ 17 ಮಂಗಳವಾರ ಬೆಳಿಗ್ಗೆ 10 ರಿಂದ 1 ಗಂಟೆವರೆಗೆ ತಮ್ಮ ನಿವಾಸದಲ್ಲಿ ಸಾರ್ವಜನಿಕರ ಭೇಟಿ ಮಾಡುವರು.ನಂತರ ಬಬಲೇಶ್ವರ ವಿಧಾನಸಭಾ ಕ್ಷೇತ್ರದ ಶಿರಬೂರ ಗ್ರಾಮಕ್ಕೆ ಭೇಟಿ ನೀಡಿ ಇತ್ತೀಚಿಗೆ ನಿಧನರಾದ ಬಸನಗೌಡ ಪಾಟೀಲ್ ಅವರ ಕುಟುಂಬದವರಿಗೆ ಸಾಂತ್ವನ ಹೇಳಲಿದ್ದಾರೆ.ಅಲ್ಲಿಂದ ಸಂಜೆ ಬೆಳಗಾವಿ ಮೂಲಕ ಬೆಂಗಳೂರಿಗೆ…

Read More