Author: editor.udayarashmi@gmail.com

ವಿಜಯಪುರ: ಸ್ಪೋಟಕ ಪರವಾನಿಗೆ ಪಡೆಯದೆ ಅನಧಿಕೃತವಾಗಿ ಪಟಾಕಿ ಅಂಗಡಿಗಳನ್ನು ತೆರೆದಿರುವವರ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್) ಪಕ್ಷದ ವತಿಯಿಂದ ವಿಜಯಪುರ ಜಿಲ್ಲಾಧಿಕಾರಿಗಳಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ ಮಾತನಾಡಿ, ಪಟಾಕಿ ಮಳಿಗೆಗಳನ್ನು ತೆಗೆಯಲು ಸರ್ಕಾರ ನಿರ್ದಿಷ್ಟವಾದ ಕಾನೂನುಗಳನ್ನು ಜಾರಿಗೆ ತಂದಿದೆ. ಆದರೆ ವಿಜಯಪುರ ಜಿಲ್ಲೆಯಾದ್ಯಂತ ಯಾವುದೇ ರೀತಿಯ ಲೈಸನ್ಸ್ ಪಡೆಯದೆ ಅನಧಿಕೃತವಾಗಿ ಜನಸಂದಣಿ ಹೆಚ್ಚಾಗಿರುವ ಪ್ರದೇಶದಲ್ಲಿ ವ್ಯಾಪಾರ ಮಾಡಲಾಗುತ್ತಿದೆ. ಪಟಾಕಿ ಮಳಿಗೆಗಳು ತೆರೆಯಲು ಜಿಲ್ಲಾಧಿಕಾರಿಗಳಿಂದ ಸ್ಫೋಟಕ ಪರವಾನಿಗೆ, ಅಗ್ನಿಶಾಮಕ ಮತ್ತು ಪೊಲೀಸ್ ಇಲಾಖೆಯಿಂದ ಅನುಮತಿ ಪತ್ರ, ಸ್ಥಳೀಯ ಸಂಸ್ಥೆಗಳ ಜನರಲ್ ಲೈಸೆನ್ಸ್ ಮುಂತಾದ ಅನುಮತಿ ಪತ್ರಗಳನ್ನು ಪಡೆದುಕೊಂಡು ಜನಸಂದಣಿ ಇಲ್ಲದ, ಅಗ್ನಿ ಅವಗಡಗಳು ಸಂಭವಿಸಿದಾಗ ಹೆಚ್ಚು ಹಾನಿಯಾಗದ ಪ್ರದೇಶಗಳಲ್ಲಿ ಸುರಕ್ಷತೆಯಿಂದ ಮಳಿಗೆಗಳನ್ನು ತೆಗೆಯಲು ಮತ್ತು ವ್ಯಾಪಾರ ವಹಿವಾಟುಗಳು ಮಾಡಲು ಅವಕಾಶವಿರುತ್ತದೆ. ಆದರೆ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ. ಪೋಲಿಸ್ ಇಲಾಖೆ ಮತ್ತು ಅಗ್ನಿಶಾಮಕ ಅಧಿಕಾರಿಗಳಿಗೆ ತಿಂಗಳುವಾರು ಹಪ್ತಾ ನೀಡುವುದರ…

Read More

ಚಿಮ್ಮಡ: ರಾಜ್ಯದ ಪ್ರತಿಷ್ಠಿತ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ (ಎಫ್‌ಕೆಸಿಸಿಐ) ನಿರ್ದೆಶಕರಾಗಿ ಗ್ರಾಮದ ಸಿ.ಎ. ರವೀಂದ್ರ ಎಸ್. ಕೋರೆ ಸತತವಾಗಿ ಮೂರನೇಯ ಬಾರಿಗೆ ಆಯ್ಕೆಯಾಗಿದ್ದು ಗ್ರಾಮಸ್ಥರು ಹರ್ಷ ವಕ್ತಪಡಿಸಿದ್ದಾರೆ.ರವಿಂದ್ರ ಕೋರೆಯವರು ವಾಣಿಜ್ಯ ಮತ್ತು ಕಾನೂನು ಪದವೀಧರರಾಗಿದ್ದು, ಇತ್ತೀಚೆಗೆ ನಡೆದ ಪ್ರತಿಷ್ಠಿತ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ಚುನಾವಣೆಯಲ್ಲಿ ವೃತ್ತಿಪರ ಕ್ಷೇತ್ರದಿಂದ ೨೦೨೩- ೨೪ ರ ಅವಧಿಗೆ ಸತತವಾಗಿ ಮೂರನೇ ಬಾರಿಗೆ ನಿರ್ದೆಶಕರಾಗಿ ಆಯ್ಕೆಯಾಗಿದ್ದಾರೆ.ಉತ್ತರ ಕರ್ನಾಟಕ ಭಾಗದಿಂದ ಪ್ರಪ್ರಥಮ ಬಾರಿಗೆ ವೃತ್ತಿಪರ ಕ್ಷೇತ್ರದಿಂದ ಆಯ್ಕೆಯಾಗಿರುವ ರವೀಂದ್ರ ಕೋರೆ ಪತ್ರಿಕೆಯೊಂದಿಗೆ ಮಾತನಾಡಿ, ಈ ಹಿಂದೆ ಹುಬ್ಬಳ್ಳಿಯಲ್ಲಿ ರಾಜ್ಯದ ಯುವ ಕೈಗಾರಿಕೋದ್ಯಮಿಗಳಿಗೆ ಪ್ರೋತ್ಸಾಹ ಮತ್ತು ತರಬೇತಿ ನೀಡುವ ಮೂಲಕ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ಕಾರ್ಯಕ್ರಮಗಳನ್ನು ಸಂಸ್ಥೆಯ ಮೂಲಕ ಹಮ್ಮಿಕೊಂಡಿದ್ದು ಅದನ್ನು ಎಲ್ಲಾ ಜಿಲ್ಲೆಗಳಿಗೆ ವಿಸ್ತರಿಸುವ ಗುರಿಯನ್ನು ಹೊಂದಿದ್ದು ಶೀಘ್ರದಲ್ಲಿಯೇ ಇದರ ರೂಪುರೆಷೆ ತಯಾರಿಸಲಾಗುವುದು, ವಾಣಿಜ್ಯ ಮತ್ತು ಕೈಗಾರಿಕೆಗಳ ಬೆಳವಣಿಗೆಗೆ ವೃತ್ತಿ ಪರರ ಪಾತ್ರ ಪ್ರಮುಖವಾಗಿದ್ದು ಅದಕ್ಕನುಗುಣವಾಗಿ ಕಾರ್ಯ ನಿರ್ವಹಿಸಲಾಗುವುದು…

Read More

ವಿಜಯಪುರ: ನಗರದಿಂದ ಅಲಿಯಾಬಾದ ಎಲ್.ಟಿ.ನಂ.೧, ಎಲ್.ಟಿ.ನಂ.೨ ಮತ್ತು ಗೋಲ್ಡನ್ ದೊಡ್ಡಿಯವರೆಗೆ ನೂತನವಾಗಿ ಬಸ್ ಚಾಲನೆಯನ್ನು ಶಾಸಕ ವಿಠ್ಠಲ ಕಟಕದೋಂಡ ಚಾಲನೆ ನೀಡಿದರು.ಈ ಸಮಯದಲ್ಲಿ ಮಾತನಾಡಿದ ಅವರು, ಅಲಿಯಾಬಾದ ಎಲ್.ಟಿ.ನಂ.೧, ಎಲ್.ಟಿ.ನಂ.೨ ಮತ್ತು ಗೋಲ್ಡನ್ ದೊಡ್ಡಿಯವರೆಗೆ ಜನರು ತಮ್ಮ ದಿನನಿತ್ಯದ ಕೆಲಸ ಕಾರ್ಯಗಳಿಗೆ ದೂರದ ವಿಜಯಪುರ-ಸೋಲಾಪುರ ಇನ್ನಿತರ ಭಾಗಗಳಿಗೆ ಪ್ರಯಾಣ ಬೆಳೆಸುತ್ತಿದ್ದು ಈ ಬೇಡಿಕೆಯು ಹಲವಾರು ವರ್ಷಗಳಿಂದ ಇದ್ದು, ಇದನ್ನು ನಮ್ಮ ಸರಕಾರದಲ್ಲಿ ಮಾಡಲಾಗಿದೆ. ಇದರ ಸದುಪಯೋಗವನ್ನು ಸದರ ಗ್ರಾಮಗಳ ಜನರು, ವಿದ್ಯಾರ್ಥಿಗಳು, ವೃದ್ದರು, ಮಹಿಳೆಯರು ಪಡೆದುಕೊಂಡು ಶಾಂತರೀತಿಯಿಂದ ಬಸ್ ಪ್ರಯಾಣ ಬೆಳೆಸಬೇಕೆಂದು ತಿಳಿಸಿದರು.ಈ ಸಂದರ್ಭದಲ್ಲಿ ಸಂಜಯ ವಾಲು ಲಮಾಣಿ, ಶಿವನಗೌಡ ಪಾಟೀಲ, ಬಿ.ಎಮ್. ಜಾಧವ, ರಮೇಶ ಲಮಾಣಿ, ಭರತ ನಾಯಕ, ನೀಲು ರಾಠೋಡ, ರಮೇಶ ವಾಲು ಲಮಾಣಿ, ಯಶವಂತ್ರಾಯ ರಾಠೋಡ ಇನ್ನಿತರ ಗ್ರಾಮದ ಗ್ರಾಮಸ್ಥರು ಉಪಸ್ಥಿತರಿದ್ದರು.

Read More

ಕೋರವಾರ ಹೆಸ್ಕಾಂ ವ್ಯಾಪ್ತಿಯ ಗ್ರಾಮಗಳ ರೈತರ ಪ್ರತಿಭಟನೆ | ಹಗಲು ಕನಿಷ್ಠ ೬ ಗಂಟೆ ವಿದ್ಯುತ್ ಪೂರೈಕೆಗೆ ಆಗ್ರಹ ದೇವರಹಿಪ್ಪರಗಿ: ಗ್ರಾಮಗಳಿಗೆ ಸರಿಯಾಗಿ ನಿರಂತರ ವಿದ್ಯುತ್ ಪೂರೈಸಬೇಕೆಂದು ಆಗ್ರಹಿಸಿ ರೈತರು ಹೆಸ್ಕಾಂ ಕಚೇರಿಗೆ ಬೀಗ ಹಾಗೂ ಮುತ್ತಿಗೆ ಹಾಕಿ, ಪ್ರತಿಭಟನೆ ಕೈಗೊಂಡರು.ತಾಲ್ಲೂಕಿನ ಕೋರವಾರ ಗ್ರಾಮದ ಹೆಸ್ಕಾಂ ಕಚೇರಿಯ ಮುಂದೆ ಮಂಗಳವಾರ ಸೇರಿದ ನೂರಾರು ರೈತರು ಬೆಳಿಗ್ಗೆ ೧೦ ಗಂಟೆಯಿಂದ ಮಧ್ಯಾನ್ಹ ೩ ಗಂಟೆಯವರೆಗೆ ಧರಣಿ ಕುಳಿತು ಪ್ರತಿಭಟನೆ ನಡೆಸಿದರು.ಕೋರವಾರ ಶಾಖೆಯ ವ್ಯಾಪ್ತಿಯಲ್ಲಿ ಬರುವ ತಾಂಡಾ, ವರ್ಕಾನಹಳ್ಳಿ, ಹಂದಿಗನೂರ, ಬಸ್ತಿಹಾಳ, ಹಾಗೂ ಸುತ್ತಲಿನ ಗ್ರಾಮಗಳಿಗೆ ಕನಿಷ್ಟ ಆರು ಗಂಟೆ ಹಗಲು ವಿದ್ಯುತ್ ಪೂರೈಸಬೇಕೆಂದು ಆಗ್ರಹಿಸಿದರು.ಬಸವರಾಜ ಏವೂರ, ಸೋಮಶೇಖರ ಹಿರೇಮಠ, ಮಲ್ಲು ಛಾಯಾಗೋಳ, ಶ್ರೀಶೈಲ ತಾಳಿಕೋಟಿ, ಬಾಪುಗೌಡ ಬಿರಾದಾರ ಮಾತನಾಡಿ, ವಿದ್ಯುತ್ ಸಮಸ್ಯೆಯಿಂದ ರೈತರು ಕಂಗಾಲಾಗಿದ್ದಾರೆ. ರಾತ್ರಿ ಹೊತ್ತಿನಲ್ಲಿ ವಿದ್ಯುತ್ ನೀಡುವುದರಿಂದ ಸಾಕಷ್ಟು ಅನಾನಕೂಲಗಳಾಗುತ್ತಿವೆ. ರಾತ್ರಿ ಸಮಯದಲ್ಲಿ ವಿದ್ಯುತ್ ಸ್ಥಗಿತಗೊಳ್ಳುವುದರಿಂದ ಕರೆಂಟ್ ಮೋಟಾರುಗಳು ಸುಡುತ್ತಿವೆ. ಅದಕ್ಕಾಗಿ ರಾತ್ರಿ ಸಮಯ ಬಿಟ್ಟು ಹಗಲು ಹೊತ್ತಿನಲ್ಲಿ ವಿದ್ಯುತ್…

Read More

ಮುದ್ದೇಬಿಹಾಳ: ಪಟ್ಟಣದ ವಾಲ್ಮೀಕಿ ವೃತ್ತದ ಬಳಿ ಇರುವ ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯದಲ್ಲಿ ಅ.೧೧ ರಂದು ಬೆಳಿಗ್ಗೆ ೧೦ಕ್ಕೆ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಹಾಗೂ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕುರಿತು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಇತರೆ ಎಲ್ಲ ಸರಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿರುವ ಈ ಕಾರ್ಯಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷೆ ಲಕ್ಷ್ಮಿ ನಿಂಗಪ್ಪ ಗರಗ ಉದ್ಘಾಟಿಸಲಿದ್ದು, ಸಿವಿಲ್ ನ್ಯಾಯಾಧೀಶ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ಸಂಪತ್ತಕುಮಾರ ಬಳೂಲಗಿಡದ ಉಪಸ್ಥಿತರಿರಲಿದ್ದಾರೆ. ಅಧ್ಯಕ್ಷತೆಯನ್ನು ನ್ಯಾಯವಾದಿಗಳ ಸಂಘದ ಅಧ್ಯಕ್ಷ ಶಶಿಕಾಂತ ಮಾಲಗತ್ತಿ ವಹಿಸಲಿದ್ದು ಅತಿಥಿಗಳಾಗಿ ಸರ್ಕಾರಿ ಅಭಿಯೋಜಕ ಬಸವರಾಜ ಆಹೇರಿ, ಅಪರ ಸರ್ಕಾರಿ ವಕೀಲ ಎಂ.ಆರ್.ಪಾಟೀಲ, ತಹಶೀಲ್ದಾರ ಬಲರಾಮ ಕಟ್ಟಿಮನಿ, ತಾ.ಪಂ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿ ಯುವರಾಜ ಹನಗಂಡಿ, ರಾಜಶೇಖರ ಮ್ಯಾಗೇರಿ, ಸಿಪಿಐ ಮಲ್ಲಿಕಾರ್ಜುನ…

Read More

ನ.೫ರಂದು ನೆಲೆ ಪ್ರಕಾಶನ ಸಂಸ್ಥೆ, ಡಾ.ಎಂ.ಎಂ ಪಡಶೆಟ್ಟಿ ಸಾಂಸ್ಕೃತಿಕ ಪ್ರತಿಷ್ಠಾನದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಸಿಂದಗಿ: ಪಟ್ಟಣದ ನೆಲೆ ಪ್ರಕಾಶನ ಸಂಸ್ಥೆಯ ಹಾಗೂ ಡಾ.ಎಂ.ಎಂ ಪಡಶೆಟ್ಟಿ ಸಾಂಸ್ಕೃತಿಕ ಪ್ರತಿಷ್ಠಾನವು ಪ್ರತಿ ವರ್ಷ ಜಾನಪದ ವಿದ್ವಾಂಸರಿಗೆ ನೀಡುವ ದೇಸಿ ಸಮ್ಮಾನವನ್ನು ನೀಡುತ್ತಿದೆ. ಈ ಬಾರಿ ದೇಸಿ ಸಮ್ಮಾನ ಪ್ರಶಸ್ತಿಗೆ ಹೊನ್ನಾವರದ ಹಿರಿಯ ಜಾನಪದ ವಿದ್ವಾಂಸರಾದ ಶಾಂತಿ ನಾಯಕ ಅವರು ಆಯ್ಕೆಯಾಗಿದ್ದಾರೆ ಎಂದು ಸಂಚಾಲಕ ಡಾ.ಚನ್ನಪ್ಪ ಕಟ್ಟಿ ತಿಳಿಸಿದ್ದಾರೆ.ಇವರು ಶಿಕ್ಷಕ ವೃತ್ತಿಯ ಜೊತೆಗೆ ಸಾಹಿತ್ಯ ವಲಯದಲ್ಲಿ ಸಾಕಷ್ಟು ಕೃಷಿ ಮಾಡಿದ್ದಾರೆ. ಶಾಂತಿ ನಾಯಕ ಅವರು ಇದುವರೆಗೆ ೪೦ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ಜಾನಪದ ಲೋಕಕ್ಕೆ ಇವರು ನೀಡರುವ ಕೊಡುಗೆಯನ್ನು ಪರಿಗಣಿಸಿ ೨೦೨೩ನೇ ಸಾಲಿನ ದೇಸಿ ಸಮ್ಮಾನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.ಪ್ರಶಸ್ತಿ ಆಯ್ಕೆ ಸಮಿತಿ ಸದಸ್ಯರಾಗಿ ಡಾ.ರಾಮಕೃಷ್ಣ ಮರಾಠ, ಡಾ.ವಿಜಯಕುಮಾರ್ ಕಟಗಿಹಳ್ಳಿಮಠ, ಡಾ.ಎಫ್.ಟಿ ಹಳ್ಳಿಕೇರಿ ಇದ್ದಾರೆ.ಇದೇ ನ.೫ರಂದು ಸಿಂದಗಿ ಪಟ್ಟಣದಲ್ಲಿ ಜರುಗಲಿರುವ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ೧೧ ಸಾವಿರ ರೂಪಾಯಿ, ಪ್ರಶಸ್ತಿ ಫಲಕ…

Read More

ಸಿಂದಗಿ: ಶಿಕ್ಷಕ ಸಾಹಿತಿಗಳ ರಾಜ್ಯ ಮಟ್ಟದ ಸಮ್ಮೇಳನದ ಅಧ್ಯಕ್ಷರನ್ನಾಗಿ ಸಿಂದಗಿಯ ಮಕ್ಕಳ ಸಾಹಿತ್ಯ ಸಂಗಮದ ಗೌರವಾಧ್ಯಕ್ಷ ಹಾಗೂ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಹಾಗೂ ಮಕ್ಕಳ ಸಾಹಿತಿ ಹ.ಮ. ಪೂಜಾರ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಿ ಗೌರವ ಆಮಂತ್ರಣ ನೀಡಲಾಯಿತು.ಈ ಸಮ್ಮೇಳನದಲ್ಲಿ ರಾಷ್ಟçಮಟ್ಟದ ಶಿಕ್ಷಣ ತಜ್ಞ ಸಂಪನ್ಮೂಲ ವ್ಯಕ್ತಿಗಳು ಪಾಲ್ಗೊಳ್ಳುವರು ಎಂದು ಬಾಗಲಕೋಟ ಜಿಲ್ಲಾ ಕ.ಸಾ.ಪ. ಅಧ್ಯಕ್ಷ ಶಿವಾನಂದ ಕೆಲ್ಲಿಕೇರಿ ಹೇಳಿದರು.ಪಟ್ಟಣದ ಮಕ್ಕಳ ಸಾಹಿತಿ ಹ.ಮ.ಪೂಜಾರ ಅವರ ಮನೆಯಲ್ಲಿ ನಡೆದ ಗೌರವ ಆಮಂತ್ರಣ ಹಾಗೂ ಗೌರವಾರ್ಪಣೆ ಸಭೆಯಲ್ಲಿ ಮಾತನಾಡಿದ ಅವರು, ಅ.೧೨ರಂದು ಬಾಗಲಕೋಟೆಯ ನವನಗರದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಶಿಕ್ಷಕ ಸಾಹಿತಿಗಳ ಪ್ರಥಮ ಸಮ್ಮೇಳನ ಜರುಗಲಿದೆ ಎಂದು ತಿಳಿಸಿದರು.ಅಧ್ಯಕ್ಷತೆ ವಹಿಸಿದ ಜಾನಪದ ವಿದ್ವಾಂಸ ಡಾ.ಎಂ.ಎಂ.ಪಡಶೆಟ್ಟಿ ಮಾತನಾಡಿದರು.ಈ ವೇಳೆ ಜಿಲ್ಲಾ ಮಕ್ಕಳ ಸಾಹಿತ್ಯ ಸಂಗಮದ ಅಧ್ಯಕ್ಷ ಪ್ರಾ.ಎ.ಆರ್ ಹೆಗ್ಗಿನದೊಡ್ಡಿ, ಬಾಗಲಕೋಟ ತಾಲೂಕು ಕ.ಸಾ.ಪ. ಅಧ್ಯಕ್ಷ ಪಾಂಡುರಂಗ ಸಣ್ಣಪ್ಪನವರ ಮಾತನಾಡಿದರು.     ಇದೇ ಸಂದರ್ಭದಲ್ಲಿ ಬಾಗಲಕೋಟ ಜಿಲ್ಲಾ ಕ.ಸಾ.ಪ. ಅಧ್ಯಕ್ಷರು ಸಮಾರಂಭದ ಆಮಂತ್ರಣ ಪತ್ರಿಕೆ, ವಾಲ್…

Read More

ವಿಜಯಪುರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಸರ್ಕಾರದ ವಿವಿಧ ಯೋಜನೆಗಳ ಮಾಹಿತಿ ಜನರಿಗೆ ತಲುಪಿಸುವ ಬೀದಿನಾಟಕ ಮತ್ತು ಜಾನಪದ ಕಲಾ ತಂಡಗಳ ಪ್ರಾಯೋಗಿಕ ಪ್ರದರ್ಶನ ಜರುಗಿತು.ನಗರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡ ಪ್ರಾಯೋಗಿಕ ಪ್ರದರ್ಶನದಲ್ಲಿ ಪ್ರೇರಣಾ ಗ್ರಾಮೀಣಾಭಿವೃದ್ದಿ ಸಂಸ್ಥೆ, ವಿಶ್ವ ಚೇತನ ಕಲಾ ಸಂಸ್ಥೆ ಹಾಗೂ ಗುರುಪ್ರಸಾದ ಜಾನಪದ ಕಲಾ ತಂಡಗಳು ಭಾಗವಹಿಸಿ ಸರ್ಕಾರದ ಜನಪರ ಯೋಜನೆಗಳ ಮಾಹಿತಿಯ ಬೀದಿನಾಟಕ ಹಾಗೂ ಜಾನಪದ ಪ್ರದರ್ಶನ ಜರುಗಿತು. ಈ ಕಲಾ ತಂಡಗಳು ಅಕ್ಟೋಬರ್ ಮಾಹೆಯಿಂದ ಜಿಲ್ಲೆಯ ವಿವಿಧ ಗ್ರಾಮಗಳಿಗೆ ತೆರಳಿ ಸರ್ಕಾರದ ಯೋಜನೆಗಳ ಮಾಹಿತಿಯನ್ನು ಪ್ರದರ್ಶನಗಳ ಮೂಲಕ ತಲುಪಿಸಲಿವೆ.ಈ ಸಂದರ್ಭದಲ್ಲಿ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಎ.ಇನಾಂದಾರ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಿ.ಎಂ.ಕೋಲೂರ, ಸಮಾಜ ಕಲ್ಯಾಣ ಇಲಾಖೆ ಅರವಿಂದ ಲಂಬು, ಕ್ರೀಡಾ ಇಲಾಖೆ ನಿವೃತ್ತ ಅಧಿಕಾರಿ ಚಿಂಚಲಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ ಉಪಸ್ಥಿತರಿದ್ದರು.

Read More

ವಿಜಯಪುರ: ರೇಷ್ಮೆ ಇಲಾಖೆ ವತಿಯಿಂದ ೨೦೨೨-೨೩ನೇ ಸಾಲಿನ ರೇಷ್ಮೆ ಕೃಷಿ ಪ್ರಶಸ್ತಿಗಾಗಿ ಜಿಲ್ಲೆಯ ರೇಷ್ಮೆ ಬೆಳೆಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ರೇಷ್ಮೆ ಬೆಳೆಗಾರರು ಕನಿಷ್ಠ ೧ ಎಕರೆ ಹಿಪ್ಪುನೇರಳೆ ತೋಟ ಹಾಗೂ ಪ್ರತ್ಯೇಕ ಹುಳು ಸಾಕಾಣಿಕಾ ಮನೆ ಹೊಂದಿರಬೇಕು. ೧೦೦ ಮೊಟ್ಟೆಗೆ ಸರಾಸರಿ ರೇಷ್ಮೆ ಗೂಡಿನ ಇಳುವರಿ ೬೫ ಕೆ.ಜಿ. ಹಾಗೂ ಒಂದು ಎಕರೆಗೆ ರೇಷ್ಮೆ ಗೂಡಿನ ಉತ್ಪಾದನೆ ೫೦೦ ಕೆ.ಜಿ.ಗಿಂತ ಕಡಿಮೆ ಇರಬಾರದು.ರೇಷ್ಮೆ ಪಾಸ್ ಬುಕ್, ರೇಷ್ಮೆ ಮೊಟ್ಟೆ/ಚಾಕಿ ಖರೀದಿಸಿರುವ ಬಗ್ಗೆ ಹಾಗೂ ರೇಷ್ಮೆ ಗೂಡು ಮಾರಾಟ ಮಾಡಿರುವ ಬಗ್ಗೆ ದಾಖಲಾತಿಗಳನ್ನು ಹೊಂದಿರಬೇಕು.ಆಸಕ್ತ ಅರ್ಹ ರೇಷ್ಮೆ ಬೆಳೆಗಾರರು ಸ್ಥಳೀಯ ರೇಷ್ಮೆ ವಿಸ್ತರಣಾಧಿಕಾರಿಗಳು ಅಥವಾ ತಾಲೂಕಾ ರೇಷ್ಮೆ ಪ್ರಬಾರಾಧಿಕಾರಿಗಳಿಂದ ಅರ್ಜಿ ಪಡೆದು, ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ದಿನಾಂಕ : ೨೫-೧೦-೨೦೨೩ರೊಳಗೆ ಅರ್ಜಿ ಸಲ್ಲಿಸುವಂತೆ ರೇಷ್ಮೆ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಅಧಿಕಾರಿಗಳಿಗೆ ಜಿ.ಪಂ.ಸಿಇಓ ರಾಹುಲ ಶಿಂಧೆ ಕಿವಿಮಾತು ವಿಜಯಪುರ: ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕಟ್ಟುನಿಟ್ಟಾಗಿ ನಿಯಮ ಪಾಲಿಸುವುದರೊಂದಿಗೆ ಮಾನವೀಯ ನೆಲೆಯಲ್ಲಿ ಗ್ರಾಮೀಣ ಭಾಗದ ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಹೇಳಿದರು.ಮಂಗಳವಾರ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಿಷಯಗಳ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಈಗಾಗಲೇ ಜಿಲ್ಲೆಯಲ್ಲಿ ಮನರೇಗಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಪ್ರಸ್ತುತ ಜಿಲ್ಲೆಯ ೧೨ ತಾಲೂಕುಗಳಲ್ಲಿ ಬರ ಘೋಷಣೆಯಾಗಿದೆ. ಗ್ರಾಮೀಣ ಜನರು ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಎಲ್ಲ ಅಧಿಕಾರಿಗಳು ಗ್ರಾಮೀಣ ಕೂಲಿಕಾರರಿಗೆ ಯೋಜನೆಯ ಲಾಭ ದೊರಕಿಸಲು ಕ್ರಮ ವಹಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಪ್ರತಿ ನಿತ್ಯ ಪ್ರತಿ ಗ್ರಾಮ ಪಂಚಾಯತಿಯಲ್ಲಿ ಕನಿಷ್ಠ ೩೦೦ ಜನ ಕೂಲಿಕಾರ್ಮಿಕರು ನರೇಗಾ ಯೋಜನೆಯಡಿ ಕೆಲಸ ದೊರಕುವಂತೆ ನೋಡಿಕೊಳ್ಳಬೇಕು. ಕೆಲಸದ ಬೇಡಿಕೆ ಸಲ್ಲಿಸುವ…

Read More