Author: editor.udayarashmi@gmail.com

ವಿಜಯಪುರ: ಜಿಲ್ಲಾ ಆರೋಗ್ಯ ಮತ್ತು ಕುಟುಂಬನ ಕಲ್ಯಾಣ ಇಲಾಖೆ ವತಿಯಿಂದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಮಂಗಳವಾರ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಹಮ್ಮಿಕೊಂಡ ಜನಜಾಗೃತಿ ಜಾಥಾಕ್ಕೆ ಹಿರಿಯ ಸಿವ್ಹಿಲ್ ನ್ಯಾಯಾಧೀಶ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ ಕುಂದರ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಬಸವರಾಜ ಹುಬ್ಬಳ್ಳಿ ಜಂಟಿಯಾಗಿ ಚಾಲನೆ ನೀಡಿದರು.ಜನಜಾಗೃತಿ ಜಾಥಾವು ವಿವಿಧ ವೃತ್ತಗಳ ಮೂಲಕ ಸಂಚರಿಸಿ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಗಳ ಆವರಣದವರೆಗೆ ಸಂಚರಿಸಿ, ಜಾಗೃತಿ ಮೂಡಿಸಲಾಯಿತು.ಈ ಸಂದರ್ಭದಲ್ಲಿ ಅನುಷ್ಠಾನ ಅಧಿಕಾರಿ ಡಾ.ಸಂಪತ್ ಗುಣಾರಿ, ಡಾ.ಕೆ.ಡಿ.ಗುಂಡಬಾವಡಿ, ಡಾ.ಜೈಬುನ್ನೀಸಾ ಬೀಳಗಿ, ಡಾ.ಕವಿತಾ ದೊಡಮನಿ, ಡಾ.ಪರಶುರಾಮ ಹಿಟ್ನಳ್ಳಿ, ಮನೋರೋಗ ತಜ್ಞ ಡಾ.ನಾಗರಾಜ್ ಎಚ್.,ಜೆ.ಎಂ.ಕೊಲೂರ, ಎನ್.ಆರ್.ಬಾಗವಾನ್, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿಗಳು, ಬಿಎಲ್‌ಡಿಇಎಯ ಶ್ರೀ.ಬಿ.ಎಂ.ಪಾಟೀಲ ಶೂಶ್ರುಷ ಮಹಾವಿದ್ಯಾಲಯ ವಿದ್ಯಾರ್ಥಿಗಳು, ಮಹಿಳಾ ಉಪನ್ಯಾಸಕ ವೃಂದ, ಆರೋಗ್ಯ ಇಲಾಕೆ ಅಧಿಕಾರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.

Read More

ವಿಜಯಪುರ: ಜಿಲ್ಲೆಯ ಹೊನ್ನುಟಗಿಯಲ್ಲಿ ೨೦೦೪-೦೫ನೇ ಸಾಲಿನ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಂದ ಗುರುವಂದನೆ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ಅದ್ಧೂರಿಯಾಗಿ ನೆರವೇರಿತು.ಹೊನ್ನುಟಗಿಯ ಪದವಿಪೂರ್ವ ಕಾಲೇಜ್‌ನಲ್ಲಿ ಅಕ್ಟೋಬರ್ ೮ ರಂದು ಹಮ್ಮಿಕೊಂಡ ಗುರುವಂದನೆ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಎಲ್ಲಾ ಗುರುಗಳಿಗೆ ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ನಾದ ಗುರುಗಳು ತಮ್ಮ ವೃತ್ತಿ ಜೀವನದ ನೆನಪುಗಳನ್ನು ಮೆಲಕು ಹಾಕಿದರು. ಮಿಶನವರ್ ಗುರುಗಳು ಜೀವನದ ಮೌಲ್ಯಗಳನ್ನು ತಿಳಿಸಿದರು.ಕಾರ್ಯಕ್ರಮದಲ್ಲಿ ಕುಲಕರ್ಣಿ ಗುರುಗಳು, ಜೋಶಿ ಗುರುಗಳು, ಪಾಟೀಲ್ ಗುರುಗಳು, ಊಗಿ ಚವಾಣ್ ಗುರುಗಳು, ಬಾಗಲಕೋಟ ಗುರುಗಳು, ನಾಯಕ್ ಗುರುಗಳು, ನಾಯಕ್ ಗುರುಮಾತೆ, ಲಗಳಿ ಗುರುಮಾತೆ, ಬಿಳಗಿ ಗುರುಮಾತೆ, ಸಜ್ಜನ್ ಗುರು ಮಾತೆ, ಎಲ್ಲಾ ಗುರುಗಳು ಭಾಗವಹಿಸುವ ಮೂಲಕ ಕಾರ್ಯಕ್ರಮಕ್ಕೆ ಮೆರುಗು ನೀಡಿದರು.ಶೀಮತಿ ಲಕ್ಷೀ ಮಠ ಹಾಗೂ ಜಗದೇವಿ ಅಗಸರ ಬಾಲ್ಯದ ನೆನಪುಗಳನ್ನು ಮೆಲುಕು ಹಾಕಿದರು.ಕಾರ್ಯಕ್ರಮದ ಸಂಘಟಕ, ಶಿಕ್ಷಕ ಮುತ್ತು ಎನ್.ಕೊಳುರಗಿ ಅವರು ನಿರೂಪಣೆ ಮಾಡಿದರು.

Read More

ಇಂಡಿ ತಾಲೂಕಿನಾದ್ಯಂತ ಹದಗೆಟ್ಟ ರಸ್ತೆಗಳು | ಚಿಟ್ಟ ಹಲಗೆ, ತಮಟೆ ಬಾರಿಸುವ ಮೂಲಕ ಪ್ರತಿಭಟನೆ ಇಂಡಿ: ತಾಲೂಕಿನಾದ್ಯಂತ ಗ್ರಾಮೀಣ ಭಾಗದ ಬಹುತೇಕ ರಸ್ತೆಗಳು ಕೆಟ್ಟು ಹೋಗಿವೆ. ಸರಕಾರ ಅದರ ಸುಧಾರಣೆಯತ್ತ ಕೂಡಲೆ ಗಮನ ಹರಿಸಬೇಕು. ಒಂದು ವೇಳೆ ನಿರ್ಲಕ್ಷ್ಯ ವಹಿಸಿದ್ರೆ ಧರಣಿ ಸತ್ಯಾಗ್ರಹ ಮಾಡಲಾಗುತ್ತದೆ ಎಂದು ಜಯ ಕರ್ನಾಟಕ ಕಾರ್ಯಕರ್ತರು ಪ್ರತಿಭಟಿಸಿ ತಾಲೂಕು ದಂಡಾಧಿಕಾರಿ ಬಿ.ಎಸ್ ಕಡಕಬಾವಿ ಅವರ ಮೂಲಕ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.ಮಂಗಳವಾರ ಪಟ್ಟಣದ ಪ್ರವಾಸಿ ಮಂದಿರದಿಂದ ಪ್ರತಿಭಟನಾಕಾರರು ಚಿಟ್ಟ ಹಲಗೆ, ತಮಟೆ ಬಾರಿಸುವ ಮೂಲಕ ಮತ್ತು ಸರಕಾರದ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನೆ ಮಾಡಿದರು.ತದನಂತರ ಹೃದಯ ಭಾಗದ ಬಸವೇಶ್ವರ ವೃತದ ಮೂಲಕ ಹಾದು ತಾಲೂಕು ಆಡಳಿತ ಸೌಧಕ್ಕೆ ಆಗಮಿಸಿ ಪ್ರತಿಭಟನೆ ನಡೆಸಿದರು.ಈ ಸಂದರ್ಭದಲ್ಲಿ ಜಯ ಕರ್ನಾಟಕ ಜಿಲ್ಲಾ ಅಧ್ಯಕ್ಷ ಮಹೇಶ ನಾಯಕ ಮಾತನಾಡಿ, ರಸ್ತೆಗಳು ದೇಶದ ಅಭಿವೃದ್ಧಿ ಪ್ರಕ್ರಿಯೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಮತ್ತು ನಿರ್ದಿಷ್ಟ ಪ್ರದೇಶದ ಆರ್ಥಿಕ ಬೆಳವಣಿಗೆಗೆ ಪರೋಕ್ಷವಾಗಿ ಕಾರಣವಾಗಿವೆ.‌ ಆದರೆ…

Read More

ಮುದ್ದೇಬಿಹಾಳ: ಗ್ರಾಮ ಪಂಚಾಯತಿಗಳ ಪರಸ್ಪರ ಕಲಿಕಾ ಕ್ಷೇತ್ರ ಭೇಟಿ ಯೋಜನೆಯಡಿ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಕುಂಕುವ ಗ್ರಾಮ ಪಂಚಾಯತಿ ಸದಸ್ಯರು ಮಂಗಳವಾರ ಆಲೂರ ಗ್ರಾಮ ಪಂಚಾಯತಿಗೆ ಬೇಟಿ ನೀಡಿ ಮಾಹಿತಿ ಪಡೆದರು.ಪಿಡಿಒ ಜಯಣ್ಣ ಮತ್ತು ಸದಸ್ಯರ ತಂಡ ಎರಡು ದಿನಗಳ ಭೇಟಿಯಲ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ವಿವಿಧ ಯೋಜನೆಗಳಡಿ ಅನುಷ್ಟಾನಗೊಂಡ ಕಾಮಗಾರಿಗಳನ್ನು ವೀಕ್ಷಿಸಿದರು. ಹಳ್ಳಿಗಳ ಸ್ವಚ್ಛತೆ, ನೈರ್ಮಲ್ಯಕರಣ, ಶಾಲಾ ಮತ್ತು ಅಂಗನವಾಡಿ, ಗ್ರಂಥಾಲಯಗಳ ಅಭಿವೃದ್ಧಿ ಹಾಗೂ ನರೇಗಾ ಯೋಜನೆಯ ಅನುಷ್ಟಾನ ಕುರಿತು ಆಲೂರ ಗ್ರಾಮ ಪಂಚಾಯತಿ ಪಿಡಿಒ ರಾಜು ನಾರಾಯಣ ಅವರು ಕ್ಷೇತ್ರ ಬೇಟಿ ತಂಡಕ್ಕೆ ಮಾಹಿತಿ ನೀಡಿದರು.ಈ ವೇಳೆ ಕುಂಕುವ ಗ್ರಾಮ ಪಂಚಾಯತಿ ಅಧ್ಯಕ್ಷ ಮಂಜಾಸ, ಪಿಡಿಒ ಜಯಣ್ಣ, ಆಲೂರ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಕಸ್ತೂರಿಬಾಯಿ ಹುನಗುಂದ, ತಾಲೂಕು ಪಂಚಾಯತ ನರೇಗಾ ಐಇಸಿ ಸಂಯೋಜಕ ಪರಮೇಶ ಹೊಸಮನಿ, ತಾ.ಪಂ. ತರಬೇತಿ ಸಂಯೋಜಕ ಚಂದ್ರಶೇಖರ ಕಲಾಲ, ತಾ.ಪಂ. ತರಬೇತಿ ವಿಷಯ ನಿರ್ವಾಹಕ ಬಾಬು ಪೋತೆಗೊಳ್, ತಾಂತ್ರಿಕ ಸಹಾಯಕ ಮಂಜುನಾಥ…

Read More

ವಿಜಯಪುರ: ಮನೋರೋಗಗಳ ಬಗ್ಗೆ ಜಾಗೃತಿ ಮೂಡಿಸಿ ಈ ಕಾಯಿಲೆಯಿಂದ ಬಳಲುವವರಿಗೆ ಸಮಯಕ್ಕೆ ಸರಿಯಾಗಿ ಸೂಕ್ತ ಚಿಕಿತ್ಸೆ ನೀಡಿದರೆ ರೋಗವನ್ನು ಗುಣಪಡಿಸಬಹುದು ಎಂದು ಜಿಲ್ಲಾ ಆರೋಗ್ಯ ಕೇಂದ್ರದ ಮಾನಸಿಕ ಆರೋಗ್ಯ ವಿಭಾಗದ ಡಾ. ಮಂಜುನಾಥ ಮಸಳಿ ಹೇಳಿದ್ದಾರೆ.ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಶುಶ್ರೂಷ ಮಹಾವಿದ್ಯಾಲಯ ಮತ್ತು ಜಿಲ್ಲಾ ಆರೋಗ್ಯ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಮಾನಸಿಕ ಆರೋಗ್ಯ- ಇದು ಪ್ರತಿಯೊಬ್ಬನ ಹಕ್ಕು ವಿಷಯದ ಕುರಿತು ಅವರು ವಿಶೇಷ ಉಪನ್ಯಾಸ ನೀಡಿದರು.ಇಂದಿನ ಅಧುನಿಕ ಜೀವನದಲ್ಲಿ ದೈಹಿಕ ಆರೋಗ್ಯದ ಜೊತೆ ಮಾನಸಿಕ ಆರೋಗ್ಯವು ಮುಖ್ಯವಾಗಿದೆ. ನಮ್ಮ ಸುತ್ತಮುತ್ತಲಿನ ಅನೇಕ ವ್ಯಕ್ತಿಗಳು ಒಂದಿಲ್ಲೊಂದು ಮಾನಸಿಕ ರೋಗದಿಂದ ಬಳಲುತ್ತಿರುತ್ತಾರೆ. ಅದನ್ನು ಹೊರಗಡೆ ಹೇಳಲಾಗದ ನೋವು ಒಂದೆಡೆಯಾದರೆ, ಇದು ಅನಿಷ್ಟ ಎಂಬ ಮನೋವೇದೆನಯಿಂದ ಬಳಲುತ್ತಿರುತ್ತಾರೆ. ಹೀಗಾಗಿ ಮನೋರೋಗಗಳಿಂದ ಗುಣಮುಖರಾಗದೇ ಮಾನಸಿಕವಾಗಿ ಕುಗ್ಗಿ ಹೋಗುತ್ತಾರೆ. ಹೀಗಾಗಿ ಕೆಲವರು ಆತ್ಮಹತ್ಯೆಗೂ ಮುಂದಾಗುತ್ತಾರೆ. ಇಂಥ ವ್ಯಕ್ತಿಗಳನ್ನು ಗುರುತಿಸಿ ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡಿ ಅವರನ್ನು…

Read More

ಹೂವಿನಹಿಪ್ಪರಗಿ: ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ ಕನಿಷ್ಠ ೮ ತಾಸುಗಳವರಗೆ ಪೂರ್ಣ ಪ್ರಮಾಣದ ವಿದ್ಯುತ್ ಪೂರೈಸಬೇಕೆಂದು ಸೋಮವಾರ ಹೂವಿನಹಿಪ್ಪರಗಿ ಗ್ರಾಮದ ಪರಮಾನಂದ ವೃತ್ತದಲ್ಲಿ ಅಖಂಡ ಕರ್ನಾಟಕ ರೈತ ಸಂಘ, ಕರವೇ ಕಾರ್ಯಕರ್ತರು, ಡಿಎಸ್‌ಎಸ್ ಮುಖಂಡರು ಹಾಗೂ ಹೂವಿನಹಿಪ್ಪರಗಿ ಹೋಬಳಿ ವ್ಯಾಪ್ತಿಯ ರೈತರು ಸುಮಾರು ಒಂದು ತಾಸು ರಾಜ್ಯ ಬಿಜ್ಜಳ ರಸ್ತೆ ತಡೆ ನಡಿಸಿ ಟೈಯರ್‌ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ಮಾಡಿದರು.ನಂತರ ಮಾತನಾಡಿದ ಅಖಂಡ ಕರ್ನಾಟಕ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ, ಕರವೇ ತಾಲೂಕಾ ಅಧ್ಯಕ್ಷ ಸಿದ್ದು ಮೇಟಿ ಹಾಗೂ ಡಿಎಸ್‌ಎಸ್ ಮುಖಂಡ ಗುರುರಾಜ ಗುಡಿಮನಿ ಮಾತನಾಡಿ, ಈ ವರ್ಷ ಮುಂಗಾರು ಹಂಗಾಮಿನಲ್ಲಿ ಆಗಬೇಕಾದ ಮಳೆ ಸಂಪೂರ್ಣ ಕೈಕೂಟ್ಟಿದ್ದು ಭೀಕರ ಬರಗಾಲ ಆವರಿಸಿದೆ. ಇದರಿಂದ ರೈತರು ತೀವ್ರ ಆಘಾತಕ್ಕೂಳಗಾಗಿದ್ದಾರೆ. ಬಿತ್ತನೆ ಮಾಡಿದ ಮುಂಗಾರ ಬೆಳೆ ನೀರಿಲ್ಲದೇ ಸಂಪೂರ್ಣ ನೆಲಕಚ್ಚಿದೆ. ಕೆಲವು ರೈತರ ಜಮೀನುಗಳಲ್ಲಿರುವ ಕೊಳವೆಭಾವಿ, ತೆರೆದಭಾವಿಯಿಂದಾಗಲಿ ಬೆಳೆಗಳಿಗೆ ನೀರು ಬಿಡಬೇಕೆಂದರೆ ಕೃಷಿ ಪಂಪ್‌ಲೆಟ್‌ಗಳಿಗೆ ಸರಿಯಾಗಿ ಗುಣಮಟ್ಟದ ವಿದ್ಯುತ್ ಕೂಡಾ ಪೂರೈಸುತ್ತಿಲ್ಲ.…

Read More

ಸಿಂದಗಿ ಸರ್ಕಾರಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಬಸವರಾಜ ಹುಬ್ಬಳ್ಳಿ ದಿಢೀರ್ ಭೇಟಿ ಸಿಂದಗಿ: ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಸರಿಯಾಗಿ ಕಾರ್ಯ ನಿರ್ವಹಿಸದೇ ಇರುವವರಿಗೆ ನೋಟಿಸ್ ಜಾರಿ ಮಾಡಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಬಸವರಾಜ ಹುಬ್ಬಳ್ಳಿ ಹೇಳಿದರು.ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಸೋಮವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ಮಾಡಿದ ಅವರು, ಆಸ್ಪತ್ರೆಯ ಎಲ್ಲಾ ವಾರ್ಡ್ಗಳು, ಔಷಧಿ ವಿತರಣಾ ಕೆuಟಿಜeಜಿiಟಿeಜಠಡಿ, ಅಪರೇಷನ್ ಕೆuಟಿಜeಜಿiಟಿeಜಠಡಿ ಸೇರಿದಂತೆ ಎಲ್ಲಾ ವಿಭಾಗಳಿಗೂ ಸಂಚರಿಸಿ ಅಸ್ಪತ್ರೆಯ ಬಗ್ಗೆ ಮಾಹಿತಿ ಪಡೆದರು.      ಈ ವೇಳೆ ತಾಲೂಕು ಆರೋಗ್ಯಾಧಿಕಾರಿ, ವೈದ್ಯರು, ಸಿಬ್ಬಂದಿಗಳು ಹಾಜರಿಲ್ಲದ ಕಾರಣ ಅವರ ವಿರುದ್ಧ ಕೆಂಡ ಮಂಡಲವಾಗಿ, ಶೌಚಾಲಯ ದುಸ್ಥಿತಿ ಸರಿಯಾಗಿ ಕಾಪಡದೆ ಇರುವುದು ಸೇರಿದಂತೆ ಸಿಬ್ಬಂದಿಗಳ ಗೈರು ಹಾಜರಿಯ ಬಗ್ಗೆ ವೈದ್ಯರಿಗೆ ನಾಳೆಯೇ ನೋಟಿಸ್ ಜಾರಿಯಾಗುತ್ತೆ. ನೋಟಿಸ್ ಅಷ್ಟೇ ಅಲ್ಲ, ಇದ್ರೆ ಕೆಲಸ ಮಾಡಬಹುದು ಇಲ್ಲ ಅಂದ್ರೆ ಬಿಟ್ಟು ಹೋಗಬಹುದು ಎಂದು ಖಡಕ್ಕಾಗಿ ಹೇಳಿದರು.ಪತ್ರಿಕಾ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಿಡೀರ್ ಭೇಟಿ ನೀಡುವುದರಿಂದಲೇ ಇಲ್ಲಿನ ನೈಜ…

Read More

ವಿಜಯನಗರ: ಎರಡು ಟಿಪ್ಪರ್ ಮತ್ತು ಕ್ರೂಸರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 7 ಜನ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಹೊಸಪೇಟೆ ಹೊರವಲಯದಲ್ಲಿ ನಡೆದಿದೆ.ಮೃತರನ್ನು ಭೀಮಲಿಂಗ, ಕೆಂಚವ್ವ, ಉಮಾ, ಭಾಗ್ಯ, ಗೋಣಿಬಸಪ್ಪ, ಅನಿಲ್ ಮತ್ತು ಯುವರಾಜ ಎಂದು ಗುರುತಿಸಲಾಗಿದೆ. ಮೃತರೆಲ್ಲರೂ ಹೊಸಪೇಟೆಯ ಉಕ್ಕಡಕೇರಿಯವರು ಎಂದು ಪೊಲೀಸರು ತಿಳಿಸಿದ್ದಾರೆ.ಟಿಪ್ಪರ್ ಆಕ್ಸಲ್ ಕಟ್ ಆಗಿ ಭೀಕರ ದುರಂತ ಸಂಭವಿಸಿದೆ. ಇನ್ನು ಅಪಘಾತದಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.ಹೊಸಪೇಟೆ ನಗರದ ಹೊರವಲಯದ ಸುರಂಗದ ಬಳಿ ಎರಡು ಮೈನಿಂಗ್‌ ಟಿಪ್ಪರ್ ಲಾರಿಗಳು ಹಾಗೂ ಕ್ರೂಸರ್‌ ನಡುವೆ ಭೀಕರ ಅಪಘಾತ ಸಂಭವಿಸಿದೆ. ಭೀಕರ ಅಪಘಾತದಲ್ಲಿ ಕ್ರೂಸರ್ ಸಂಪೂರ್ಣ ನಜ್ಜುಗುಜ್ಜಾಗಿದ್ದು ಮೃತದೇಹಗಳನ್ನು ಹೊರತೆಗೆಯಲು ಹರಸಾಹಸ ಪಡೆಯಬೇಕಾಯಿತು. ಅಪಘಾತದಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕೂಲಹಳ್ಳಿ ಗೋಣಿಬಸವೇಶ್ವರ ದೇವಸ್ಥಾನಕ್ಕೆ ಹೋಗಿ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು…

Read More

ಕೇಂದ್ರ ಬರ ಅಧ್ಯಯನ ತಂಡಕ್ಕೆ ವಸ್ತುಸ್ಥಿತಿ ಮನವರಿಕೆ | ಹತ್ತು ದಿನಗಳಲ್ಲಿ ವರದಿ ಸಲ್ಲಿಕೆ | ಕೇಂದ್ರ ಸರಕಾರಕ್ಕೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಆಗ್ರಹ ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ಕುರಿತು ಅಧ್ಯಯನ ನಡೆಸಿರುವ ಕೇಂದ್ರ ಸರ್ಕಾರದ ಅಧಿಕಾರಿಗಳ ತಂಡವು ಹತ್ತು ದಿನಗಳೊಳಗೆ ವರದಿ ಸಲ್ಲಿಸಲಿದೆ. ಆ ಬಳಿಕ ಪರಿಹಾರದ ಮೊತ್ತ ಖಚಿತವಾಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಕೃಷ್ಣ ಬೈರೇಗೌಡರ, ಬರ ಪರಿಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ತಂಡ ಇತ್ತೀಚೆಗೆ ರಾಜ್ಯಕ್ಕೆ ಭೇಟಿ ನೀಡಿತ್ತು. ರಾಜ್ಯದಲ್ಲಿ ತೀವ್ರ ಬರಗಾಲ ಇರುವುದು ಕೇಂದ್ರದ ಅಧಿಕಾರಿಗಳ ತಂಡಗಳಿಗೆ ಮನವರಿಕೆ ಆಗಿದೆ. ಸಣ್ಣ ರೈತರ ಸಂಖ್ಯೆ ಸೇರಿದಂತೆ ಕೆಲವು ಅಂಕಿ-ಅಂಶಗಳನ್ನು ಕೇಂದ್ರ ತಂಡಗಳು ಕೇಳಿವೆ. ಶೀಘ್ರದಲ್ಲಿ ಒದಗಿಸಲಾಗುವುದು’ ಎಂದರು.ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೇಂದ್ರ ಸರ್ಕಾರವು 475 ಕೋಟಿಯಷ್ಟು ಕೂಲಿ ಹಣವನ್ನು ಬಾಕಿ ಇರಿಸಿಕೊಂಡಿದೆ. ಅದನ್ನು ತ್ವರಿತವಾಗಿ ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿದೆ ಎಂದರು.ಸಂಕಷ್ಟದ ವರ್ಷದಲ್ಲಿ…

Read More

ನೀತಿ ಆಯೋಗ ಯೋಜನೆಯ ಸಂಕಲ್ಪ ಸಪ್ತಾಹ ಸಮಾರೋಪದಲ್ಲಿ ಶಾಸಕ ನಾಡಗೌಡ ಕರೆ ವಿಜಯಪುರ: ಕೇಂದ್ರ ಸರ್ಕಾರದ ನೀತಿ ಆಯೋಗದಂತೆ ಪ್ರತಿ ವಲಯದಲ್ಲೂ ಎಲ್ಲರ ಸಹಯೋಗದೊಂದಿಗೆ ಪ್ರಗತಿ ಸಾಧಿಸಬೇಕು. ಮುಂದಿನ ಎರಡು ವರ್ಷದ ಅವಧಿಯಲ್ಲಿ ವಿನೂತನ ಕಾರ್ಯಕ್ರಮಗಳನ್ನು ರೂಪಿಸಿ ಸಮುದಾಯ ವಲಯವನ್ನು ಸಂಘಟಿಸಿ ಅಭಿವೃದ್ಧಿ ಕಾರ್ಯ ಹಮ್ಮಿಕೊಳ್ಳುವ ಮೂಲಕ ಹಿಂದುಳಿದ ತಾಲೂಕು ಎಂಬ ಹಣೆಪಟ್ಟಿ ತೊಡೆದು ಹಾಕಿ, ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಉನ್ನತ ಸ್ಥಾನ ಹೊಂದಲು ಎಲ್ಲಾ ಅಧಿಕಾರಿ ವರ್ಗದವರು ಶ್ರಮಿಸಬೇಕು ಎಂದು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಕರೆ ನೀಡಿದರು.ನಗರದ ಶ್ರೀ ಸಂಗಮೇಶ್ವರ ಸಭಾ ಭವನದಲ್ಲಿ ಸೋಮವಾರ ನಡೆದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ವಿಜಯಪುರ, ತಾಲೂಕಾಡಳಿತ, ತಾಲೂಕು ಪಂಚಾಯತಿ ತಾಳಿಕೋಟಿ ಇವರ ಸಹಯೋಗದಲ್ಲಿ ನೀತಿ ಆಯೋಗ ತಾಲೂಕು ಮಹತ್ವಾಕಾಂಕ್ಷೆ ಯೋಜನೆಯ ಸಂಕಲ್ಪ ಸಪ್ತಾಹ ಸಮಾರೋಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಆರೋಗ್ಯ ಸ್ವಚ್ಛತೆ ಹಾಗೂ ಶಿಕ್ಷಣಕ್ಕೆ ಗ್ರಾಮ ಪಂಚಾಯತಿಗಳು ಆದ್ಯತೆ ನೀಡಿದರೆ ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಮುಂದೆ ಬರಲು ಸಾಧ್ಯವಾಗುತ್ತದೆ. ಆಶ್ರಯ, ಆರಾಧನೆ…

Read More