Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ಮೂರನೇ ಹಾಗೂ ಅಂತಿಮ ಸುತ್ತಿನ ಮಿಷನ್ ಇಂದ್ರಧನುಷ್ ಅಭಿಯಾನ ೫.೦ ಜಿಲ್ಲೆಯಲ್ಲಿ ಅ.೯ರಿಂದ ೧೪ರವರೆಗೆ ನಡೆಯಲಿದ್ದು, ಈ ಮೊದಲು ಎರಡು ಸುತ್ತಿನ ಇಂದ್ರಧನುಷ್ ಕಾರ್ಯಕ್ರಮ ಯಶಸ್ವಿಯಾಗಿದ್ದು, ಅಂತಿಮ ಸುತ್ತಿನ ಕಾರ್ಯಕ್ರಮವನ್ನು ಸಮನ್ವಯದ ಮೂಲಕ ಯಶಸ್ವಿಗೊಳಿಸಲು ವೈದ್ಯಾಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ|| ಬಸವರಾಜ ಹುಬ್ಬಳ್ಳಿ ರವರು ಹೇಳಿದರು.ಜಿಲ್ಲಾ ಮಟ್ಟದ ಪರಿಣಾಮಕಾರಿ ಮಿಷನ್ ಇಂದ್ರಧನುಷ್ ಅಭಿಯಾನ ೫.೦ ಕಾರ್ಯಕ್ರಮ ಕುರಿತು ಜಿಲ್ಲಾಮಟ್ಟದ ವೈದ್ಯಾಧಿಕಾರಿಗಳ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಮೂರನೇ ಸುತ್ತಿನಲ್ಲೂ ತಾಲೂಕು ಮಟ್ಟದ ಹಾಗೂ ಸ್ಥಳೀಯ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಸಮನ್ವಯದಿಂದ ಕರ್ತವ್ಯ ನಿರ್ವಹಿಸಿ ಅಂತಿಮ ಸುತ್ತಿನ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.ಹುಟ್ಟಿದ ಶಿಶುವಿನಿಂದ ೫ ವರ್ಷದೊಳಗಿನ ಮಕ್ಕಳಿಗೆ ನಾನಾ ಕಾಯಿಲೆಗಳಿಂದ ರಕ್ಷಣೆ ನೀಡಲು ಒಟ್ಟು ೧೩ ಲಸಿಕೆ ಹಾಕಿಸಿಕೊಳ್ಳುವುದು ಕಡ್ಡಾಯ. ಆದರೆ ನಿಗದಿತ ಅಂತರದಲ್ಲಿ ನೀಡುವ ೧೩ ಲಸಿಕೆಗಳ ಪೈಕಿ ಕೆಲ ಮಕ್ಕಳು ಒಂದಿಷ್ಟು ಲಸಿಕೆ ಪಡೆದು ಕೊಂಡಿರುವದಿಲ್ಲಾ,…
ಸಿಂದಗಿ: ಆಲಮೇಲ ತಾಲೂಕಿನ ದೇವಣಗಾವ ಗ್ರಾಮದ ಹಿರಿಯ ಜೀವಿ, ಮಾಜಿ ಶಾಸಕ ರಮೇಶ ಭೂಸನೂರ ಅವರ ತಂದೆ ಬಾಳಪ್ಪ ಮಲ್ಲಪ್ಪ ಭೂಸನೂರ (90) ಇವರು ಅ.7ರಂದು ಸಂಜೆ ನಿಧನರಾದರು. ಮೃತರರಿಗೆ ಶಾಸಕ ರಮೇಶ ಭೂಸನೂರ ಸೇರಿದಂತೆ ಈರ್ವರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.ಮೃತರ ಅಂತ್ಯಸಂಸ್ಕಾರ ಅ.8ರಂದು ಮಧ್ಯಾಹ್ನ 3 ಗಂಟೆಗೆ ದೇವಣಗಾವ ಗ್ರಾಮದ ತೋಟದಲ್ಲಿ ನೆರವೇರಲಿದೆ ಎಂದು ಕುಟುಂಬದ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಸಂತಾಪ: ಸಂಸದ ರಮೇಶ ಜಿಗಜಿಣಗಿ, ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕೂಚಬಾಳ, ಲಿಂಬೆ ಅಭಿವೃದ್ಧಿ ನಿಗಮ ಮಂಡಳಿ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪುರ, ಮಾಜಿ ವಿಪ ಸದಸ್ಯ ಅರುಣ ಶಹಾಪುರ, ಡಾ.ಗೌತಮ್ ಆರ್. ಚೌಧರಿ, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಉಪಾಧ್ಯಕ್ಷ ಇಂದುಶೇಖರ ಮಣೂರ, ಬಿಜೆಪಿ ಮಂಡಲ ಅಧ್ಯಕ್ಷ ಈರಣ್ಣ ರಾವೂರ, ಗುರು ತಳವಾರ, ಯಶವಂತರಾಯಗೌಡ ರೂಗಿ, ಖಾಜು ಬಂಕಲಗಿ, ರವಿ ನಾಯ್ಕೋಡಿ, ಮಲ್ಲು ಸಾವಳಸಂಗ, ಸಾಯಬಣ್ಣ ದೇವರಮನಿ, ಸಂತೋಷ ಪಾಟೀಲ ಡಂಬಳ ಸೇರಿದಂತೆ…
ವಿಜಯಪುರ: ವಿಜಯಪುರ ಜಿಲ್ಲೆಯ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಮೂಲಸೌಕರ್ಯ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷದ ವತಿಯಿಂದ ಸಚಿವರು, ಗಣಿ ಮತ್ತು ಭೂವಿಜ್ಞಾನ ಇಲಾಖೆ. ಹಾಗೂ ಪ್ರಧಾನ ಕಾರ್ಯದರ್ಶಿಗಳು, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಬೆಂಗಳೂರು ಇವರಿಗೆ ಅಪರ ಜಿಲ್ಲಾಧಿಕಾರಿಗಳು, ವಿಜಯಪುರ ಇವರ ಮುಖಾಂತರ ಮನವಿ ಸಲ್ಲಿಸಲಾಯಿತು.ವಿಜಯಪುರ ಜಿಲ್ಲೆಯಲ್ಲಿ ವ್ಯಾಪಕವಾಗಿ ಅಕ್ರಮ ಮರಳುಗಾರಿಕೆ ಗಣಿಗಾರಿಕೆ ನಡೆಯುತ್ತಿದ್ದು. ವಿಜಯಪುರ ಜಿಲ್ಲೆ ೧೩ ತಾಲೂಕುಗಳಲ್ಲಿ ದೊಡ್ಡ ಜಿಲ್ಲೆಯಾಗಿದ್ದು ಜಿಲ್ಲೆಯಲ್ಲಿ ನಾಮಕಾವಸ್ಥೆ ಇಲಾಖೆಯಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಇರುತ್ತದೆ. ಇಲಾಖೆಗೆ ಕಚೇರಿ ಸೇರಿದಂತೆ ಸಿಬ್ಬಂದಿಗಳ ಕೊರತೆ ವಾಹನಗಳ ಕೊರತೆ ವ್ಯಾಪಕ ಭ್ರಷ್ಟಾಚಾರದಿಂದ ಕೂಡಿದ ಇಲಾಖೆಯಾಗಿ ಪರಿವರ್ತನೆ ಆಗುತ್ತಿರುವುದು ಖೇದಕರ ಸಂಗತಿಯಾಗಿದೆ. ಜಿಲ್ಲೆಯಲ್ಲಿ ಅತಿಯಾದ ಮರಳುಗಾರಿಕೆ ಜಲ್ಲಿಗಾರಿಕೆ ಗಣಿಗಾರಿಕೆ ವ್ಯಾಪಕವಾಗಿ ನಡೆದು ಸರ್ಕಾರದ ಬೊಕ್ಕಸಕ್ಕೆ ಅಪಾರ ಪ್ರಮಾಣದ ನಷ್ಟವನ್ನು ಉಂಟಾಗುತ್ತಿದೆ ಹೀಗಾಗಿ ಮಾನ್ಯರು ತಕ್ಷಣಕ್ಕೆ ಕ್ರಮ ಕೈಗೊಂಡು ಸಿಬ್ಬಂದಿಗಳ ನೇಮಕಾತಿ ಮಾಡಿ ಸೂಕ್ತ ವಾಹನಗಳನ್ನು ಒದಗಿಸಿ ಭ್ರಷ್ಟಾಚಾರ ಮುಕ್ತ ಸೇವೆಯನ್ನು…
ಬಸವನಬಾಗೇವಾಡಿ: ನಮ್ಮ ದೇಶದಲ್ಲಿ ಗತಕಾಲದಿಂದಲೂ ಅನೇಕ ಧರ್ಮ, ಜಾತಿ, ಬೇರೆ ಬೇರೆ ಸಂಸ್ಕಾರ, ಸಂಸ್ಕ್ರತಿಯನ್ನು ಇರುವದನ್ನು ಕಾಣುತ್ತೇವೆ. ದೇಶ ಮಾನವೀಯತೆಗೆ, ಧಾರ್ಮಿಕತೆಗೆ ಸ್ಥಾನ ನೀಡಿದೆ ಎಂದು ಸಕ್ಕರೆ, ಜವಳಿ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.ಪಟ್ಟಣದ ಯಾತ್ರಿ ನಿವಾಸದ ಮುಂಭಾಗ ಹಿಂದು ಮಹಾಗಣಪತಿ ಮಹಾಮಂಡಳವು ಶುಕ್ರವಾರ ಸಂಜೆ ಹಮ್ಮಿಕೊಂಡಿದ್ದ ಜನಜಾಗೃತಿ ಸಭೆ ಹಾಗೂ ಬಹಿರಂಗ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಪೂರ್ವಕಾಲದಿಂದಲೂ ಭಾರತ ದೇಶವು ಅನೇಕ ಧರ್ಮ, ಜಾತಿಗಳನ್ನು ಒಳಗೊಂಡ ಏಕೈಕ ದೇಶ ನಮ್ಮದು. ವಿವಿಧೆತೆಯಲ್ಲಿ ಏಕತೆಯ ಸಂದೇಶವನ್ನು ಇಡೀ ಜಗತ್ತಿಗೆ ಸಾರಿದೆ ಎಂದರು.ಸಂದಿಗ್ಧ ಪರಿಸ್ಥಿತಿಯಲ್ಲಿ ಸಾರ್ವಜನಿಕರನ್ನು ಒಂದುಗೂಡಿಸುವ ಉದ್ದೇಶದಿಂದ ಬಾಲಗಂಗಾಧರ ತಿಲಕರು ಗಣೇಶ ಉತ್ಸವವನ್ನು ಸಾರ್ವಜನಿಕ ಉತ್ಸವವನ್ನು ಜಾರಿಗೆ ತಂದರು. ಈ ಉತ್ಸವದ ಮೂಲಕ ಜನರನ್ನು ಒಗ್ಗೂಡಿಸಿ ಸ್ವಾತಂತ್ರ್ಯ ತಂದುಕೊಟ್ಟ ಶ್ರೇಯಸ್ಸು ಸಲ್ಲುತ್ತದೆ ಎಂದ ಅವರು, ಭಗವಂತನು ನಮಗೆ ನೀರು, ಗಾಳಿ, ಪ್ರಕೃತಿ ನೀಡಿದ್ದಾನೆ. ಇದನ್ನು ಎಲ್ಲರೂ ಸಾರ್ಥಕತೆಯಿಂದ ಸದುಪಯೋಗ ಪಡಿಸಿಕೊಂಡು ಉತ್ತಮ ಬದುಕು ಸಾಗಿಸಬೇಕೆಂದರು.ಸಾನಿಧ್ಯ ವಹಿಸಿದ್ದ…
ಬ್ಕಹ್ಮದೇವನಮಡು: ವಿಜಯಪುರ ಜಿಲ್ಲೆಗೆ ಅಂಟಿದ್ದ ಬರದ ನಾಡು ಹಣೆಪಟ್ಟಿಯನ್ನು ಅಳಿಸಿ ಹಾಕಿದ ಕೀತಿ೯ ಸಚಿವ ಡಾ.ಎಂ.ಬಿ.ಪಾಟೀಲರಿಗೆ ಸಲ್ಲುತ್ತದೆ ಎಂದು ಕಾಂಗ್ರೆಸ್ ಯುವ ಮುಖಂಡ ಚಂದ್ರಶೇಖರ ಕೆಂಭಾವಿ ಹೇಳಿದರು. ಆಧುನಿಕ ಭಗೀರಥ ಬೃಹತ್ ಮತ್ತು ಮಧ್ಶಮ ಕೈಗಾರಿಕೆ ಹಾಗೂ ಮೂಲಭೂತ ಸೌಕಯ೯ ಅಭಿವೃದ್ದಿ ಇಲಾಖೆ ಸಚಿವ ಡಾ.ಎಂ.ಬಿ.ಪಾಟೀಲರ ೫೯ನೇ ಜನ್ಮದಿನದ ಅಂಗವಾಗಿ ಸಿಂದಗಿ ತಾಲೂಕು ಬ್ರಹ್ಮದೇವನಮಡು ಗ್ರಾಮದ ಸಕಾ೯ರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಿಸಿ ಮಾತನಾಡಿದರು.ರಾಜ್ಶದ ಅಭಿವೃದ್ದಿಗೆ ಅಪಾರ ಕೊಡುಗೆ ನೀಡಿದ್ದಾರೆ.ನೀರಾವರಿ ಕ್ಷೇತ್ರದಲ್ಲಿನ ಅವರ ಸೇವೆ ಶಾಶ್ವತವಾಗಿ ಉಳಿಯುವಂತಾಗಿದೆ ಎಂದರು.ಯುವ ಮುಖಂಡ ಮಲ್ಲಿಕಾಜು೯ನ ಕೆಂಭಾವಿ ಮಾತನಾಡಿ, ಈ ಶತಮಾನದ ಸಂತ, ಜ್ಞಾನಯೋಗಿ ಸಿದ್ದೇಶ್ವರ ಮಹಾಸ್ವಾಮಿಗಳು ಎಂ.ಬಿ.ಪಾಟೀಲ ಎಂದರೆ ನೀರು,ನೀರು ಎಂದರೆ ಎಂ.ಬಿ.ಪಾಟೀಲ.ಎಲ್ಲಿಯವರೆಗೆ ನೀರು ಇರುತ್ತದೆಯೋ ಅಲ್ಲಿಯವರೆಗೆ ಎಂ.ಬಿ.ಪಾಟೀಲರ ಹೆಸರು ಶಾಶ್ವತವಾಗಿರುತ್ತದೆ ಎಂದು ಶ್ರೀಗಳು ಪಾಟೀಲರನ್ನು ಹೊಗಳಿರುವುದು ಅವರಿಗೆ ನೊಬಲ್ ಬಹುಮಾನಕ್ಕಿಂತ ದೊಡ್ಡದಾಗಿದೆ ಎಂದರು.ಈ ಸಂದಭ೯ದಲ್ಲಿ ಸದು ಶ್ರೀಗಿರಿ, ಮಸ್ತಾಫ್ ಸೀತನೂರ ಸೇರಿದಂತೆ ಶಿಕ್ಷಕರು, ಶಾಲೆ ಮಕ್ಕಳು ಇದ್ದರು.
ಇಂಡಿ: ಅ.೧೦ ರಂದು ಶಾಸಕ ಯಶವಂತರಾಯಗೌಡ.ವಿ.ಪಾಟೀಲ ಇವರ ೫೬ ನೇ ಹುಟ್ಟು ಹಬ್ಬವನ್ನು ಈ ವರ್ಷ ಭೀಕರ ಬರಗಾಲ ಇರುವದರಿಂದ ಅಭಿಮಾನಿ ಬಳಗ, ಕಾರ್ಯಕರ್ತರು ಜನ್ಮ ದಿನಾಚರಣೆಯನ್ನು ಆಚರಿಸಬಾರದೆಂದು ಶಾಸಕರು ಮನವಿ ಮಾಡಿದ ಪ್ರಯುಕ್ತ ತಾಲೂಕಿನಾದ್ಯಂತ ಕಾರ್ಯಕರ್ತರು ಶಾಸಕರ ಜನ್ಮ ದಿನಾಚರಣೆಯನ್ನು ಆಚರಿಸಬಾರದೆಂದು, ಶಾಸಕರ ಜನಸಂಪರ್ಕ ಕಾರ್ಯಾಲಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ತಾಳಿಕೋಟೆ: ತಾಲೂಕನ್ನು ಸರ್ವಾಂಗೀಣ ಅಭಿವೃದ್ಧಿ ಹೊಂದಿದ ತಾಲೂಕಾಗಿ ಮಾರ್ಪಾಡು ಮಾಡಲು ಎಲ್ಲಾ ಇಲಾಖೆ ಅಧಿಕಾರಿಗಳು ಒಂದುಗೂಡಿ ಸರ್ಕಾರದಿಂದ ರೈತರಿಗೆ ಹಾಗೂ ಜನಸಾಮಾನ್ಯರಿಗೆ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ಜೊತೆಗೆ ಸದುಪಯೋಗ ಪಡೆದುಕೊಂಡು ಆರ್ಥಿಕವಾಗಿ ಸದೃಢ ತಾಲೂಕಾಗಿ ಮಾರ್ಪಾಡು ಮಾಡೋಣ. ಮುಂದಿನ ಎರಡು ವರ್ಷಗಳಲ್ಲಿ ಮುಂದುವರೆದ ತಾಲೂಕಾಗಿ ಮಾಡಿ ತೋರಿಸೋಣ ಎಂದು ಬಿ ಆರ್ ಬಿರಾದಾರ ತಾ ಪಂ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದರು.ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಸಂಕಲ್ಪ ಸಪ್ತಾಹದ ಕೃಷಿ ಮಹೋತ್ಸವ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಎಸ ಡಿ ಬಾವಿಕಟ್ಟಿ ಸಹಾಯಕ ನಿರ್ದೇಶಕರು ಕೃಷಿ ಇಲಾಖೆ ಮಾತನಾಡಿ ರೈತರು ತಮ್ಮ ಭೂಮಿಯ ಮಣ್ಣನ್ನು ಪರೀಕ್ಷೆಗೆ ಒಳಪಡಿಸಿ ಭೂಮಿಗೆ ಅನುಗುಣವಾಗಿ ರಸ ಗೊಬ್ಬರಗಳನ್ನು ಸಿಂಪಡಿಸುವುದರಿಂದ ಫಲವತ್ತಾದ ಬೆಳೆಗಳನ್ನು ಬೆಳೆಯಲು ಅನುಕೂಲಕರವಾಗುವದು. ಪ್ರಧಾನ ಮಂತ್ರಿ ಕೃಷಿ ಸಮ್ಮಾನ ಯೋಜನೆಯಲ್ಲಿ ಕೇಂದ್ರ ಸರ್ಕಾರ ರೈತರಿಗೆ 6000 ನೀಡುತ್ತದೆ. ಈ ಯೋಜನೆಯಲ್ಲಿ 14 ಪಂಚಾಯಿತಿಗಳ ಮೂರು ಸಾವಿರ ರೈತರು ಬ್ಯಾಂಕಿಗೆ ಹೋಗಿ ಈ ಕೆವೈಸಿ…
ಇಂಡಿ: ತಾಲೂಕಿನ ಸುಕ್ಷೇತ್ರ ಲಚ್ಯಾಣದಲ್ಲಿ ಲಿಂಗೈಕ್ಯ ಶ್ರೀ ಸಿದ್ದಲಿಂಗ ಮಹಾರಾಜರ ೯೬ನೇ ಪುಣ್ಯಾರಾಧನೆ ಅಂಗವಾಗಿ ಶುಕ್ರವಾರ ರಾತ್ರಿ ನಾಡಿನ ನಾನಾ ಭಾಗದ ಭಜನಾ ಕಲಾತಂಡದವರು ಸೇರಿದಂತೆ ಒಟ್ಟು ಹದಿನೈದು ಭಜನಾ ತಂಡಗಳು ಬಿಡಿ ಬಿಡಿ ಯಾಗಿ ಏಕಕಾಲಕ್ಕೆ ಭಜನಾ ಕಲೆ ಪ್ರದರ್ಶಿಸಿ ಇಡೀ ರಾತ್ರಿ ಜಾಗರಣೆ ನಡೆಸಿ ಉತ್ತಮ ಮಳೆ, ಬೆಳೆಗಾಗಿ ಪ್ರಾರ್ಥನೆ ಸಲ್ಲಿಸಿದರು.ಶಿವಮೊಗ್ಗದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾ ಸ್ವಾಮೀಜಿ, ಬಂಥನಾಳದ ಶ್ರೀ ಡಾ. ವೃಷಭಲಿಂಗೇಶ್ವರ ಮಹಾ ಶಿವಯೋಗಿಗಳು, ಹಳ್ಳಿಂಗಳಿಯ ಶ್ರೀ ಶಿವಾನಂದ ಮಹಾಸ್ವಾಮೀಜಿ, ಗೋಳಸಾರದ ಶ್ರೀ ಅಭಿನವ ಪುಂಡಲಿಂಗ ಮಹಾ ಸ್ವಾಮೀಜಿ, ಜಕನೂರಿನ ಶ್ರೀ ಸಿದ್ದಲಿಂಗ ದೇವರು, ಹೂವಿನ ಹಿಪ್ಪರಗಿಯ ದ್ರಾಕ್ಷಾಯಣಿ ಅಮ್ಮನವರು, ತುಂಗಳದ ಅನಸೂಯಾದೇವಿಯವರ ಸಾನಿಧ್ಯದಲ್ಲಿ ನಡೆದ ಈ ಕಾರ್ಯಕ್ರಮ ಸ್ಥಳೀಯ ಕಲಾವಿದರ ಮಡಿಭಜನೆಯೊಂದಿಗೆ ಪ್ರಾರಂಭವಾಯಿತು.ಬಳಿಕ ಇಲ್ಲಿನ ಕಮರಿಮಠದ ಒಳ ಹಾಗೂ ಹೊರ ಆವರಣದಲ್ಲಿ ನೆರೆಯ ಮಹಾರಾಷ್ಟ್ರ ರಾಜ್ಯದ ಚಣಿಗಾವ್, ಮೊಸಲಗಿ, ಕೂಡಲ, ನೆರೆಯ ಕಲಬುರ್ಗಿ ಜಿಲ್ಲೆಯ ಗೌರ, ಇಂಡಿ ತಾಲೂಕಿನ ಲೋಣಿ ಕೆ.ಡಿ, ತಡವಲಗಾ, ಲೋಣಿ…
ವಿಜಯಪುರ: ಎರಡು ತಿಂಗಳಲ್ಲಿ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಿ, ಫಲಾನುಭವಿಗಳು ವಾಸಿಸಲು ಅನುಕೂಲ ಮಾಡಿಕೊಡಬೇಕು ಎಂದು ನಗರ ಶಾಸಕರಾದ ಬಸನಗೌಡ ರಾ.ಪಾಟೀಲ ಯತ್ನಾಳ ಅವರು ಗಡುವು ನೀಡಿದರು.ನಗರ ಮತಕ್ಷೇತ್ರ ವ್ಯಾಪ್ತಿಯ ನಮೋ ನಗರದಲ್ಲಿ ನಿರ್ಮಾಣ ಆಗುತ್ತಿರುವ ಆಶ್ರಯ ಮನೆಗಳ ಕಾಮಗಾರಿಯನ್ನು ಶನಿವಾರ ವೀಕ್ಷಣೆ ಮಾಡಿದ ಶಾಸಕರು, ತ್ವರಿತಗತಿಯಲ್ಲಿ ಬಾಕಿ ಕಾಮಗಾರಿ ಮುಗಿಸುವ ಜೊತೆಗೆ ಗುಣಮಟ್ಟತೆ ಕಾಯ್ದುಕೊಳ್ಳಬೇಕು. ಎರಡು ದಿನಕ್ಕೊಮ್ಮೆ ಭೇಟಿ ನೀಡಿ, ಪರಿಶೀಲಿಸಲು ಪಾಲಿಕೆ ಆಯುಕ್ತರಿಗೆ ತಿಳಿಸಿದರು.ಮೊದಲ ಹಂತದಲ್ಲಿ ೧೪೯೩ ಮನೆಗಳು ನಿರ್ಮಾಣ ಆಗುತ್ತಿದ್ದು, ಇವು ಮುಗಿದ ಬಳಿಕ ಎರಡನೇ ಹಂತದಲ್ಲಿ ಇನ್ನೂ ೨೨೫೦ ಮನೆಗಳು ನಿರ್ಮಾಣವಾಗಲಿವೆ. ಹೀಗಾಗಿ ಬೇಗ ಬೇಗ ಕಾಮಗಾರಿ ಮುಗಿಸಬೇಕು. ಈ ಪ್ರದೇಶದಲ್ಲಿ ವಾಸಿಸುವ ಜನರಿಗೆ ಯಾವುದೇ ತೊಂದರೆ ಆಗದಂತೆ ಒಳ ಚರಂಡಿ, ಕುಡಿಯುವ ನೀರಿನ ಸಂಪರ್ಕ, ರಸ್ತೆ ಅಭಿವೃದ್ಧಿ ಪಡಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದ ಅವರು, ಶಾಲೆ, ಉದ್ಯಾನ, ಆರೋಗ್ಯ ಕೇಂದ್ರ, ಗ್ರಂಥಾಲಯ ವ್ಯವಸ್ಥೆ ಸಹ ಇಲ್ಲಿ ಕಲ್ಪಿಸಲಾಗುವುದು ಎಂದು ಹೇಳಿದರು.ಜಿಲ್ಲಾಧಿಕಾರಿ ಟಿ.ಭೂಬಾಲನ್, ಮಹಾನಗರ ಪಾಲಿಕೆ…
ದೇವರಹಿಪ್ಪರಗಿ: ಕುಡಿಯುವ ನೀರಿನ ಅನುಕೂಲಕ್ಕಾಗಿ ಚಿಮ್ಮಲಗಿ ಮುಖ್ಯಕಾಲುವೆಯ ನಾಗಠಾಣ ಉಪಕಾಲುವೆಗೆ ನೀರು ಹರಿಸಿ ರೈತ ಸಮುದಾಯದ ನೆರವಿಗೆ ಧಾವಿಸುವಂತೆ ಆಗ್ರಹಿಸಿ ಮುಳಸಾವಳಗಿ, ಕಡ್ಲೇವಾಡ ಪಿಸಿಎಚ್, ಚಿಕ್ಕರೂಗಿ ಸೇರಿದಂತೆ ವಿವಿಧ ಗ್ರಾಮಗಳ ರೈತರು ಕಾಲುವೆಯಲ್ಲಿ ಧರಣಿ ಕುಳಿತು ವಿನೂತನ ಪ್ರತಿಭಟನೆ ಕೈಗೊಂಡರು.ಮತಕ್ಷೇತ್ರದ ಇಂಗಳಗಿ, ನಿವಾಳಖೇಡ, ಮುಳಸಾವಳಗಿ ಕಡ್ಲೇವಾಡ ಪಿಸಿಎಚ್, ಚಿಕ್ಕರೂಗಿ, ಗ್ರಾಮಗಳು ರೈತರು ಇಂಡಿ ರಸ್ತೆಯಲ್ಲಿನ ನಾಗಠಾಣ ಉಪಕಾಲುವೆಗೆ ತೆರಳಿ ಸುಡು ಬಿಸಿಲಿನಲ್ಲಿ ಧರಣಿ ಕುಳಿತರು.ಈ ಸಂದರ್ಭದಲ್ಲಿ ಬಸನಗೌಡ ಬಿರಾದಾರ(ಭೈರೋಡಗಿ), ಬಸವರಾಜ ಕಲ್ಲೂರ(ಮುಳಸಾವಳಗಿ), ಶಿವಶಂಕರ ರೂಗಿ(ಚಿಕ್ಕರೂಗಿ), ರಮೇಶ ದೇಸಾಯಿ(ನಿವಾಳಖೇಡ) ಮಾತನಾಡಿ, ಚಿಮ್ಮಲಗಿ ಕಾಲುವೆಯ ಎನ್‌ಬಿಸಿ, ಕೆಬಿಸಿ ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ಕಳೆದ ಎರಡು ತಿಂಗಳುಗಳಿಂದ ರೈತರು ನಿರಂತರ ಹೋರಾಟ ಮಾಡುತ್ತಿದ್ದರೂ ಕಾಲುವೆಯಲ್ಲಿ ನೀರು ಹರಿಯುತ್ತಿಲ್ಲ. ಇದರಿಂದ ಈ ಕಾಲುವೆಯ ನೀರಿನ ಮೇಲೆ ಅವಲಂಬಿತವಾದ ಕೃಷಿಕರು ಜಾನುವಾರ ರಕ್ಷಣೆ ಹಾಗೂ ಕುಡಿಯುವ ನೀರಿಗಾಗಿ ಪರಿತಪ್ಪಿಸುವಂತಾಗಿದೆ.ಜಿಲ್ಲೆಯ ಮುಳವಾಡ, ಗುತ್ತಿ ಬಸವಣ್ಣ ಕಾಲುವೆ ಸೇರಿದಂತೆ ಎಲ್ಲ ಕಾಲುವೆಗಳಲ್ಲಿ ನಿರಂತರ ನೀರು ಹರಿಸಲಾಗಿದೆ ಆದರೆ ಚಿಮ್ಮಲಗಿ ಕಾಲುವೆಯನ್ನು…
