Author: editor.udayarashmi@gmail.com

ಲೇಖನ – ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ಒಮ್ಮೆ ಅಕ್ಬರ್ ಬೀರಬಲ್‌ನನ್ನು ಕರೆದು ಅವನ ಬುದ್ಧಿವಂತಿಕೆಯನ್ನು ಪರೀಕ್ಷಿಸಲು ಕಠಿಣ ಪ್ರಶ್ನೆಗಳನ್ನು ಕೇಳಿದ. ‘ಬೀರಬಲ್, ನನಗೆ ಸತ್ಯವಾಗಿ ಉತ್ತರಿಸು ಜೀವನದಲ್ಲಿ ಅತ್ಯಂತ ಮುಖ್ಯವಾದ ವಿಷಯ ಯಾವುದು? ‘ಬೀರಬಲ್ ಒಂದು ಕ್ಷಣ ಯೋಚಿಸಿ ಹೇಳಿದ.’ಜೀವನದಲ್ಲಿ ಅತ್ಯಂತ ಮುಖ್ಯವಾದ ವಿಷಯವೆಂದರೆ ವರ್ತಮಾನದಲ್ಲಿ ಬದುಕುವುದು. ಭೂತಕಾಲ ಕಳೆದುಹೋಗಿದೆ ಮತ್ತು ಭವಿಷ್ಯವು ಅನಿಶ್ಚಿತವಾಗಿದೆ. ಆದರೆ ವರ್ತಮಾನವು ನಮಗೆ ಕಾರ್ಯನಿರ್ವಹಿಸುವ ಶಕ್ತಿ ಇರುವ ಸ್ಥಳವಾಗಿದೆ. ಅಕ್ಬರ ಚಿಂತನಶೀಲವಾಗಿ ತಲೆಯಾಡಿಸಿ ನಂತರ. ಅತ್ಯಂತ ಮುಖ್ಯವಾದ ಸಮಯ ಯಾವುದು?’ ಎಂದು ಕೇಳಿದ. ಅದಕ್ಕೆ ಬೀರಬಲ್ ಹೇಳಿದ ಉತ್ತರ ವರ್ತಮಾನ ಎಂದಾಗಿತ್ತು. ಅದು ಹೇಗೆ ಎಂದು ಮರುಪ್ರಶ್ನಿಸಿದಾಗ ಬೀರಬಲ್‌ನಿಂದ ಬಂದ ಉತ್ತರ ಬಹಳಷ್ಟು ವಾಸ್ತವಿಕವಾಗಿದೆ: ಏಕೆಂದರೆ ಅದು ನಾವು ನಿಯಂತ್ರಿಸಬಹುದಾದ ಏಕೈಕ ಸಮಯವೆಂದ. ಬೀರಬಲ್ಲನ ಉತ್ತರಗಳಿಂದ ಅಕ್ಬರ್ ಪ್ರಭಾವಿತನಾದ. ಕಳೆದು ಹೋದುದರ ಮೇಲೆ ಮುಂದೆ ಆಗಲಿರುವುದರ ಮೇಲೆ ನಮಗೆ ನಿಯಂತ್ರಣವಿಲ್ಲ. ಆದರೆ ಕೈಯಲ್ಲಿರುವ ಕ್ಷಣದ ಮೇಲೆ ನಿಯಂತ್ರಣವಿದೆ. ಆದ್ದರಿಂದ ನಾವು ಅನಿರೀಕ್ಷಿತ…

Read More

ಕೆಂಭಾವಿ: ಪಟ್ಟಣದ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಹೈ ಮಾಸ್ಟ್ ವಿದ್ಯುತ್ ದೀಪ ಅಳವಡಿಸುವಂತೆ ನಮ್ಮ ಕರ್ನಾಟಕ ಸೇನೆಯ ಕಾರ್ಮಿಕ ಘಟಕದ ಹೋಬಳಿ ಅಧ್ಯಕ್ಷ ಗುರುರಾಜ ಎಸ್ ಅಂಗಡಿ ಒತ್ತಾಯಿಸಿದ್ದಾರೆ.ಈ ಕುರಿತು ಪುರಸಭೆ ಮುಖ್ಯಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಚೆನ್ನಮ್ಮ ವೃತ್ತದಲ್ಲಿ ಜನದಟ್ಟಣೆ ಹಾಗೂ ವಾಹನ ಸಂಚಾರ ಹೆಚ್ಚಾಗಿದ್ದು, ಕೃಷ್ಣಾ ಕಾಲುವೆ ಪಕ್ಕದಲ್ಲಿ ಇರುವ ಕಾರಣ ಪಾದಚಾರಿಗಳು ಸಂಚಾರ ಮಾಡುವಾಗ ಬೆಳಕಿನ ಅಭಾವ ಎದುರಾಗಿ ಅಪಘಾತ ಸಂಭವಿಸುತ್ತವೆ. ಕೂಡಲೇ ಚೆನ್ನಮ್ಮ ವೃತ್ತದಲ್ಲಿ ಹೈ ಮಾಸ್ಟ್ ವಿದ್ಯುತ್ ದೀಪ ಅಳವಡಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಆಗ್ರಹಿಸಿದರು.

Read More

ಉದಯರಶ್ಮಿ ದಿನಪತ್ರಿಕೆ ರೇವತಗಾಂವ: ಗ್ರಾಮದ ಶ್ರೀಶೈಲ ಮಾಳಿ ಶಿಕ್ಷಕರು ಚಡಚಣ ತಾಲೂಕು ಮಟ್ಟದ ಶಿಕ್ಷಕರ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಗಳಲ್ಲಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಮಂಗಳವಾರದಂದು ಚಡಚಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ಈ ಸಾಧನೆ ಮಾಡಿದ್ದಾರೆ. ಪ್ರಸ್ತುತ ದೇವರ ನಿಂಬರಗಿಯ ಸರ್ಕಾರಿ ಕಿರಿಯ ಪ್ರಾಥಮಿಕ ಮಣಿಯಾರ ವಸ್ತಿ ಶಾಲೆಯಲ್ಲಿ ಶಹ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಶಿಕ್ಷಕ ಸಂಯೋಜಕ ಸುರೇಶ ನಾಯಕ, ಬಿಆರ್‌ಪಿ ಶ್ರೀಮತಿ ರಾಜೇಶ್ವರಿ ಕಾಮಗೊಂಡ, ಎಸ್.ಎಸ್.ಪಾಟೀಲ, ಗುರು ಜೇವೂರ, ಸುನೀಲ ಯಳಮೇಲಿ, ಸುನೀಲ ಶಾಹ, ಜಗದೀಶ ಚಲವಾದಿಯವರುಗಳು ಸೇರಿದಂತೆ ಇತರು ಉಪಸ್ಥಿತರಿದ್ದರು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ೨೦೨೫-೨೬ನೇ ಸಾಲಿನ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ನೀಡಲಾಗುವ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಆದರ್ಶವಾಗಿ ಸೇವೆ ಸಲ್ಲಿಸುತ್ತಿರುವ ವ್ಯಕ್ತಿ ಹಾಗೂ ಸಂಸ್ಥೆಗಳು ಮತ್ತು ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡುತ್ತಿರುವ ಮಹಿಳೆಯರೂ ಸೇರಿದಂತೆ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೈರ್ಯದಿಂದ ಹೋರಾಡಿದಂತಹ ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದೆ.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ನಮೂನೆ ಪಡೆದು,ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ ೩೦ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: ೦೮೩೫೨-೨೯೫೩೫೩ ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಧಿಕಾರಿಗಳಾದ ಡಾ.ಆನಂದ.ಕೆ ಅವರು ಮಂಗಳವಾರ ಬಬಲೇಶ್ವರ ತಾಲೂಕಿನ ವಿವಿಧ ತಾಲೂಕು ಕಚೇರಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ತಾಲೂಕಾಡಳಿತ ಸೌಧಕ್ಕೆ ತೆರಳಿ, ತಾಲೂಕ ಖಜಾನೆ ಹಾಗೂ ತಹಶೀಲದಾರ ಕಾರ್ಯಾಲಯದ ಇ-ಪೌತಿ, ಭೂಮಿ, ಆಧಾರ ಸಿಡಿಂಗ್ ಹಾಗೂ ಮತದಾರ ಪಟ್ಟಿ ಮ್ಯಾಪಿಂಗ್ ಪ್ರಗತಿ ಪರಿಶೀಲಿಸಿದರು. ಬಬಲೇಶ್ವರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಬಿಸಿ ಊಟದ ಅಡುಗೆ ಕೊಠಡಿ ಹಾಗೂ ಮಕ್ಕಳಿಗೆ ವಿತರಿಸುವ ಆಹಾರದ ಕುರಿತ ಪರಿಸೀಲಿಸಿ ಅಡುಗೆ ಸಹಾಯಕರೊಂದಿಗೆ ಚರ್ಚಿಸಿ, ಅವರ ಕುಂದು-ಕೊರತೆ ಸಮಾಲೋಚನೆ ನಡೆಸಿದರು.೭ನೇ ತರಗತಿ ಮಕ್ಕಳೊಂದಿಗೆ ಕನ್ನಡ ಇಂಗ್ಲೀಷ್ ವಿಷಯದ ಕುರಿತು ಮಕ್ಕಳೊಂದಿಗೆ ಸಂವಾದ ನಡೆಸಿದ ಜಿಲ್ಲಾಧಿಕಾರಿಗಳು, ಸತತ ಅಧ್ಯಯನ ಶೀಲತೆ ರೂಢಿಸಿಕೊಳ್ಳಬೇಕು. ಪ್ರತಿದಿನ ಪಾಠ ಮನನ ಮಾಡಿಕೊಂಡು ಅರ್ಥೈಸಿಕೊಳ್ಳಬೇಕು. ಸಮಸ್ಯೆಗಳು ಉದ್ಭವಿಸಿದರೆ ಯಾವುದೇ ಸಂಕೋಚ ಪಡದೇ ತರಗತಿ ಶಿಕ್ಷಕರಿಂದ ಪರಿಹಾರ ಕಂಡುಕೊಳ್ಳಬೇಕು. ಶಿಕ್ಷಕರು ಮಕ್ಕಳ ಕಲಿಕಾ ಗುಣಮಟ್ಟ ಹೆಚ್ಚಿಸಲು ಕಲಿಕಾ ಬೋಧನಾ ಕ್ರಮಗಳನ್ನು ಅಳವಡಿಸಿಕೊಂಡು ಪಾಠ ಬೋಧನೆ ಮಾಡಿ, ಮಕ್ಕಳ ಬೌದ್ಧಿಕ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶಾಲಾ ಶಿಕ್ಷಣ ಇಲಾಖೆ ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ “ಮಗಳನ್ನು ರಕ್ಷಿಸಿ ಮಗಳನ್ನು ಓದಿಸಿ” ಯೋಜನೆಯಡಿ “ಒಂದು ದಿನದ ಸಾಮರ್ಥ ಬಲವರ್ಧನೆ” ಕಾರ್ಯಾಗಾರವನ್ನು ರುಡ್ ಸೆಟ್ ತರಭೇತಿ ಸಂಸ್ಥೆ ವಿಜಯಪುರದಲ್ಲಿ ಹಮ್ಮಿಕೊಳ್ಳಲಾಯಿತು.ಸದರಿ ಕಾರ್ಯಕ್ರಮದಲ್ಲಿ ಮೊದಲಿಗೆ “ಮಗಳನ್ನು ರಕ್ಷಿಸಿ ಮಗಳನ್ನು ಓದಿಸಿ” ಯೋಜನೆಯಡಿ ಕೆ.ಕೆ.ಚವ್ಹಾಣ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಜಯಪುರ ಇವರು ಕಾರ್ಯಕ್ರಮದ ಆಹ್ವಾನಿತ ಎಲ್ಲ ಗಣ್ಯ ಮಾನ್ಯರನ್ನು ಸ್ವಾಗತಿಸಿ, ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯ ಕುರಿತು ಪ್ರಸ್ತಾವಿಕ ನುಡಿಗಳನ್ನು ಹೇಳಿದರು.ನಂತರ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಆಗಮಿಸಿದ ಶ್ರೀ ಅರವಿಂದ ಎಸ್ ಹಾಗರಗಿ, ಮಾನ್ಯ ಹಿರಿಯ ಸಿವ್ಹಿಲ್ ನ್ಯಾಯಾಧೀಶರು, ಹಾಗೂ ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವಿಜಯಪುರ ರವರು ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮವನ್ನು…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಟ್ಟಣದ ನೂತನ ಕೈಗಾರಿಕಾ ತರಬೇತಿ ಕೇಂದ್ರ(ಐಟಿಐ) ಕಟ್ಟಡವನ್ನು ಸರ್ಕಾರದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಇಂಜನೀಯರ್ ನೀಲಕಂಠಯ್ಯ ಹಾಗೂ ತಂಡ ಪರಿವೀಕ್ಷಣೆ ನಡೆಸಿದರು.ತಾಲ್ಲೂಕಿನ ಇಂಗಳಗಿಕ್ರಾಸ್ ನಲ್ಲಿ ನೂತನವಾಗಿ ನಿರ್ಮಾಣಗೊಂಡ ಕೈಗಾರಿಕಾ ತರಬೇತಿ ಕೇಂದ್ರದ ಕಟ್ಟಡಕ್ಕೆ ಮಂಗಳವಾರ ಸಿಬ್ಬಂದಿ ಹಾಗೂ ಗುತ್ತಿಗೆದಾರರೊಂದಿಗೆ ಆಗಮಿಸಿದ ಪರಿವೀಕ್ಷಣೆ ತಂಡ ೧೦೭೦ ಚ.ಮೀ ವಿಸ್ತಿರ್ಣ ಹೊಂದಿರುವ ೨.೩೦ಕೋಟಿ ಅಂದಾಜು ಮೊತ್ತದ ಕಟ್ಟಡದ ತಳಪಾಯ, ಪ್ರತಿಕೋಣೆ, ಶೌಚಾಲಯ ಸಹಿತ ನಿರ್ಮಾಣದಲ್ಲಿ ಉಪಯೋಗಿಸಿದ ಇಟ್ಟಿಗೆಗಳ ಕುರಿತು ಸಂಪೂರ್ಣ ಮಾಹಿತಿ ಪಡೆದು ಎಲ್ಲ ಕೋಠಡಿಗಳ ಸಹಿತ ಕಟ್ಟಡವನ್ನು ವಿಕ್ಷೀಸಿ ಗುಣಮಟ್ಟದ ಕುರಿತು ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದರು.ಕಿಟಕಿಗಳಿಗೆ ಅಳವಡಿಸಬೇಕಾದ ಮೆಶ್, ಮೇಲಿನ ಪ್ಯಾರಾಪೂಟ್, ಕಾಲಂಗಳಿಗೆ ಕಾಂಕ್ರೀಟ್ ತುಂಬುವುದು, ಹೆಡ್‌ರೂಮ್ ಮತ್ತು ಸುತ್ತಲಿನ ಕಂಪೌಂಡ್, ಗೇಟ್ ಅಳವಡಿಕೆಗಳು ಬಾಕಿ ಇದ್ದು ಅವುಗಳ ಅಗತ್ಯತೆಗಳಿಗೆ ಹೆಚ್ಚುವರಿ ಅನುದಾನ ಅವಶ್ಯಕತೆಯ ಬಗ್ಗೆ ಸಿಬ್ಬಂದಿಯಿಂದ ಮಾಹಿತಿ ಪಡೆದರು.ಗುತ್ತಿಗೆದಾರ ಸೋಮನಗೌಡ ಕರೇಕಲ್, ಪ್ರಾಚಾರ್ಯೆ ಶಗುಪ್ತಾ ಪರ್ವಿನ್ ಮಲ್ಲಾಡಕರ, ಎಂ.ಎಂ.ಚಟ್ಟೇರ, ಮಲ್ಲಿಕಾರ್ಜುನ ದೇವೂರ, ಬಸವರಾಜ ಹುಣಶ್ಯಾಳ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಹುಣಶ್ಯಾಳ ಗ್ರಾಮದಿಂದ ಕಲಕೇರಿ ಕ್ರಾಸ್‌ವರೆಗೆ ಸಂಪೂರ್ಣ ಹಾಳಾದ ರಸ್ತೆಯನ್ನು ಗ್ರಾಮಸ್ಥರೇ ಹಣ ಸಂಗ್ರಹಿಸುವುದರ ಮೂಲಕ ತಾವೇ ರಸ್ತೆ ನಿರ್ಮಿಸಲು ಮುಂದಾಗಿದ್ದಾರೆ.ತಾಲ್ಲೂಕಿನ ಹುಣಶ್ಯಾಳ ಗ್ರಾಮದ ಗ್ರಾಮಸ್ಥರು ಹಲವು ಬಾರಿ ಪತ್ರಿಕೆಯ ಮೂಲಕ ಗ್ರಾಮದ ರಸ್ತೆ ನಿರ್ಮಾಣದ ಕುರಿತು ಶಾಸಕರಿಗೆ ಮನವಿ ಮಾಡಿದ್ದರೂ ಶಾಸಕರು ಸ್ಪಂದಿಸದ ಕಾರಣ ಸ್ವತಃ ತಾವೇ ಪ್ರತಿ ಮನೆಗೆ ೫೦೦ ರೂಗಳ ಹಣ ಸಂಗ್ರಹಿಸುವುದರ ಮೂಲಕ ಗ್ರಾಮದಿಂದ ಕಲಕೇರಿ ಕ್ರಾಸ್‌ವರೆಗಿನ ಅರ್ಧ ಕಿ.ಮೀ ರಸ್ತೆ ನಿರ್ಮಾಣದಲ್ಲಿ ತೊಡಗಿದ್ದಾರೆ. ಈ ಬಗ್ಗೆ ಶಾಂತಗೌಡ ಕೋಟಿಖಾನಿ ಮಾತನಾಡಿ, ರಸ್ತೆ ಅಭಿವೃದ್ಧಿ ಕುರಿತು ಶಾಸಕರಲ್ಲಿ ಮೊಬೈಲ್ ಮೂಲಕ ವಿನಂತಿಸಿದರೂ ಯಾವುದೇ ಪ್ರಯೋಜನ ಆಗಿಲ್ಲ. ಶಾಸಕರ ನಡೆ ನಮಗೆ ಬೇಸರ ತಂದಿದೆ. ಅವರ ಬೇಜವಾಬ್ದಾರಿ ಹೇಳಿಕೆಯಿಂದ ಬೇಸತ್ತು ಕೊನೆಗೆ ಗ್ರಾಮಸ್ಥರ ನೆರವು ಹಾಗೂ ಸಹಕಾರದೊಂದಿಗೆ ರಸ್ತೆ ನಿರ್ಮಿಸಲಾಗುತ್ತಿದೆ. ಈ ಕಾರ್ಯದಲ್ಲಿ ಕಲಕೇರಿ ಗ್ರಾಮದ ಶಿವರಾಯ ಮೋಪಗಾರ ಡಂಪರ್ ನೀಡಿ ಸಹಕಾರ ನೀಡಿದ್ದಾರೆ. ಎಂದರು.ಈ ರಸ್ತೆಯ ಹೊರತಾಗಿ ಗ್ರಾಮದಿಂದ ಕಾಲುವೆಯವರೆಗಿನ ರಸ್ತೆಯು ಸಹ…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ಹಲವು ವರ್ಷಗಳಿಂದ ಪಟ್ಟಣದಲ್ಲಿ ಸಾರ್ವಜನಿಕರಿಗೆ ಸೇವೆ ನೀಡುತ್ತಿರುವ ಸಿದ್ಧಸಿರಿ ಬಹುರಾಜ್ಯ ಬಹುಉದ್ದೇಶ ಸಹಕಾರಿ ಸೊಸೈಟಿ ನಿ, ಇದೀಗ ನೂತನ ಮತ್ತು ವಿಶಾಲ ಕಟ್ಟಡಕ್ಕೆ ಸ್ಥಳಾಂತರಗೊಂಡಿದೆ. ಸೋಮವಾರ ನಡೆದ ಭವ್ಯ ಉದ್ಘಾಟನಾ ಸಮಾರಂಭದಲ್ಲಿ ವ್ಯಾಪಾರಸ್ಥರು, ರೈತರು ಹಾಗೂ ಸ್ಥಳೀಯ ನಾಗರಿಕರು ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಂಡರು.ಹೊಸ ಕಟ್ಟಡದ ಉದ್ಘಾಟನೆನಿರ್ದೇಶಕರಾದ ಜಗದೀಶ್ ಕ್ಷತ್ರಿನೆರವೇರಿಸಿದರು. ಅವರು ಮಾತನಾಡಿ, “ಸಿದ್ಧಸಿರಿ ಬ್ಯಾಂಕ್ ಹಲವು ವರ್ಷಗಳಿಂದ ಚಡಚಣದ ಆರ್ಥಿಕ ಬೆಳವಣಿಗೆಗೆ ದೊಡ್ಡ ಬೆಂಬಲವಾಗಿದೆ. ಈಗ ಹೊಸ ಕಟ್ಟಡದ ಮೂಲಕ ಗ್ರಾಹಕರಿಗೆ ಇನ್ನಷ್ಟು ಉತ್ತಮ, ಸುಗಮ ಮತ್ತು ಆಧುನಿಕ ಬ್ಯಾಂಕಿಂಗ್ ಸೇವೆಗಳು ದೊರೆಯಲಿವೆ,” ಎಂದು ಹೇಳಿದರು.ವಲಯ ಅಧಿಕಾರಿ ಚಂದ್ರಕಾಂತ ಗಿಣ್ಣಿ ಅವರು ಮಾತನಾಡಿ, “ಹಳೆಯ ಕಟ್ಟಡದಲ್ಲಿ ಜಾಗದ ಅಭಾವ ಮತ್ತು ಹೆಚ್ಚುತ್ತಿರುವ ಗ್ರಾಹಕರ ಬೇಡಿಕೆಯನ್ನು ಮನಗಂಡು ನಾವು ಈ ನೂತನ ಕಟ್ಟಡಕ್ಕೆ ಸ್ಥಳಾಂತರಿಸಿದ್ದೇವೆ. ಇಲ್ಲಿ ಡಿಜಿಟಲ್ ಬ್ಯಾಂಕಿಂಗ್, ಗೋಲ್ಡ್ ಲೋನ್ ಸೌಲಭ್ಯ, ಹೆಚ್ಚಿನ ಕೌಂಟರ್‌ಗಳು ಹಾಗೂ ಸುಧಾರಿತ ಗ್ರಾಹಕ ಸೇವಾ ವ್ಯವಸ್ಥೆಗಳನ್ನು ನಿರ್ಮಿಸಲಾಗಿದೆ,” ಎಂದು ವಿವರಿಸಿದರು.ಸ್ಥಳೀಯ ವ್ಯಾಪಾರಸ್ಥರು…

Read More

ವಿಧಾನಮಂಡಲದ ಅಧಿವೇಶನದಲ್ಲಿ ಮತ್ತೊಮ್ಮೆ ಧ್ವನಿ ಏತ್ತಿದ ಎಂಎಲ್ಸಿ ಸುನೀಲಗೌಡ ಪಾಟೀಲ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸ್ಥಳೀಯ ಸಂಸ್ಥೆಗಳಾದ ನಗರಸಭೆ ಪುರಸಭೆ ಮತ್ತು ಪಟ್ಟಣ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಗೌರವಧನ ಹೆಚ್ಚಿಸುವಂತೆ ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಮತ್ತೊಮ್ಮೆ ವಿಧಾನಮಂಡಲದ ಅಧಿವೇಶನದಲ್ಲಿ ಧ್ವನಿ ಏತ್ತಿದ್ದಾರೆ.ಮಂಗಳವಾರ ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನ ಪರಿಷತ ಕಲಾಪದಲ್ಲಿ ಶಾಸಕರು ಈ ಕುರಿತು ಪ್ರಶ್ನೆ ಕೇಳಿದರು. ಇದಕ್ಕೆ ಉತ್ತರಿಸಿದ ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ, ಗೌರವಧನ ಹೆಚ್ಚಳ ಕುರಿತು ಇತರ ರಾಜ್ಯಗಳ ಚುನಾಯಿತ ಪ್ರತಿನಿಧಿಗಳ ಗೌರವಧನ ದಾಖಲೆಗಳನ್ನು ನಿಯಮಾನುಸಾರ ಪರಿಶೀಲಿಸಲಾಗುತ್ತಿದೆ. ಅಲ್ಲದೇ, ಗೌರವಧನ ಹೆಚ್ಚಳ ಮಾಡುವ ಕುರಿತು ಇಲಾಖೆಯ ನಿರ್ದೇಶಕರು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಈ ವಿಚಾರ ಪರಿಶೀಲನೆಯಲ್ಲಿದ್ದು, ಆರ್ಥಿಕ ಇಲಾಖೆಯ ಸಹಮತಿ ದೊರೆತ ನಂತರ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಲಿಖಿತ ಉತ್ತರ ನೀಡಿದ್ದರು.ಈ ಕುರಿತು ಮತ್ತೆ ಪ್ರಸ್ತಾಪಿಸಿದ ಸುನೀಲಗೌಡ ಪಾಟೀಲ ಅವರು, ಕಳೆದ ಎರಡು ಅಧಿವೇಶನಗಳಲ್ಲಿ ಈ ವಿಚಾರವನ್ನು…

Read More