Author: editor.udayarashmi@gmail.com

ವಿಜಯಪುರ: ಭಾರತ ದೇಶ ಕಂಡ ಶ್ರೇಷ್ಠ ಸಂತರು, ನಡೆದಾಡುವ ದೇವರಾಗಿದ್ದ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಆತ್ಯಾತ್ಮೀಕ ಸಾಹಿತ್ಯ ಇಡೀ ದೇಶಕ್ಕೆ ಪರಿಚಯಿಸಲು, ಶ್ರೀಗಳು ರಚಿಸಿದ ಗ್ರಂಥಗಳನ್ನು ಹಿಂದಿ ಸೇರಿದಂತೆ ಇತರೆ ಭಾಷೆಗೆ ಭಾಷಾಂತರಿಸಿ, ಮುದ್ರಣ ಮಾಡಲು ಸಿದ್ದಸಿರಿ ಸೌಹಾರ್ದ ಸಹಕಾರಿ ಸಂಘದಿಂದ ರೂ.10 ಲಕ್ಷ ನೀಡುವುದಾಗಿ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಘೋಷಿಸಿದರು.ವಿಜಯಪುರ ಜ್ಞಾನ ಯೋಗಾಶ್ರಮದಲ್ಲಿ ಶುಕ್ರವಾರ ನಡೆದ ಜ್ಞಾನ ಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳವರ ಗುರು ನಮನ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ತಿಳಿಸಿದರು.ಅಲ್ಲದೆ, ಶ್ರೀ ಸಿದ್ದೇಶ್ವರ ಲೋಕ ಕಲ್ಯಾಣ ಚಾರಿಟೇಬಲ್ ಟ್ರಸ್ಟ್ ಅಡಿ ಶ್ರೀ ಸಿದ್ದೇಶ್ವರ ಶ್ರೀಗಳ ಹೆಸರಿನಲ್ಲಿ ಜನ್ಮ ತಾಳಿರುವ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಜ್ಞಾನ ಯೋಗಾಶ್ರಮದ ಸ್ವಾಮೀಜಿಗಳಿಗೆ ಹಾಗೂ ಸಾಧಕರ ಆರೋಗ್ಯದಲ್ಲಿ ವ್ಯತ್ಯಾಸವಾದರೆ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು. ಅದಕ್ಕಾಗಿ ಆರೋಗ್ಯ ಕಾರ್ಡ್ ಕೊಡಲಾಗುವುದು ಎಂದು ಹೇಳಿದರು.

Read More

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಸೂಚನೆ ವಿಜಯಪುರ: ಜಿಲ್ಲೆಯಲ್ಲಿ ಬಾಲ್ಯ ವಿವಾಹ, ಅನೈತಿಕ ದತ್ತು ಮಾರಾಟ, ಅನೈತಿಕ ಮಕ್ಕಳ ಮಾರಾಟ ಸೇರಿದಂತೆ ಇನ್ನಿತರ ಕೃತ್ಯಗಳು ಜರುಗದಂತೆ ಕಟ್ಟುನಿಟ್ಟಿನ ಕ್ರಮ ವಹಿಸಬೇಕು. ಜಿಲ್ಲೆಯಲ್ಲಿರುವ ಮಕ್ಕಳನ್ನು ರಕ್ಷಿಸುವ ಜವಾಬ್ದಾರಿ ಎಲ್ಲ ಇಲಾಖೆಗಳ ಮೇಲಿದೆ. ಹಾಗಾಗಿ ಮಕ್ಕಳನ್ನು ರಕ್ಷಿಸುವತ್ತ ಗಮನಹರಿಸುವಂತೆ ಕರ್ನಾಟಕ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ವಿವಿಧ ಇಲಾಖೆಗಳು ಮತ್ತು ಸಂಘ ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಂಡ ಮಕ್ಕಳ ರಕ್ಷಣಾ ವ್ಯವಸ್ಥೆ ಕುರಿತ ಸಮಾಲೋಚನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲಾ ಮಟ್ಟದ ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ…

Read More

ಕಾಮಗಾರಿ ಸ್ಥಳಕ್ಕೆ ರಾಜ್ಯ ಕೈಗಾರಿಕಾ & ಮೂಲಸೌಲಭ್ಯ ಅಭಿವೃದ್ದಿ ನಿಗಮ ಎಂ ಡಿ ಡಾ.ರವಿ ಭೇಟಿ ವಿಜಯಪುರ: ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ದಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಎಂ.ಆರ್.ರವಿ ಶುಕ್ರವಾರ ವಿಜಯಪುರ ವಿಮಾನ ನಿಲ್ದಾಣ ಯೋಜನೆಯ ಕಾಮಗಾರಿಗಳ ವೀಕ್ಷಣೆ ಮಾಡಿ, ಪ್ರಗತಿ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ಶೇ.೯೦ರಷ್ಟು ಪೂರ್ಣಗೊಂಡು ಸಾಕಷ್ಟು ಕಾಮಗಾರಿಗಳು ಕೊನೆಯ ಹಂತ ತಲುಪಿವೆ. ಕಾಮಗಾರಿಗಳಿಗೆ ಸಂಬಂಧಿಸಿದಂತೆ ಉಪಕರಣಗಳ ಅನುಷ್ಠಾನ ಮತ್ತು ಕಾರ್ಯಾಚರಣೆ ಮುಖ್ಯವಾಗಿದ್ದು, ನವೆಂಬರ್ ತಿಂಗಳಲ್ಲಿ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕೆಂಬ ಅಧಿಸೂಚನೆ ಹಿನ್ನಲೆಯಲ್ಲಿ ಕಾಮಗಾರಿಗಳಿಗೆ ತೀವ್ರಗತಿ ನೀಡುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಹೊಸ ಹೊಸ ಉಪಕರಣಗಳ ಸ್ಥಾಪನೆಗೆ ಕಾಲಾವಧಿ ತೆಗೆದುಕೊಳ್ಳಲಾಗಿದೆ. ಟೆಂಡರ್‌ಗಳಿಗೆ ಆದೇಶ ಹೊರಡಿಸಲಾಗಿದ್ದು, ಆದಷ್ಟು ಶೀಘ್ರ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸೂಚಿಸಲಾಗಿದೆ.ಖಾತೆಯ ಸಚಿವರ ತಾಂತ್ರಿಕ ಸಲಹೆಗಾರರಾದ ಪ್ರೊ ಅರವಿಂದ ಗಲಗಲಿ, ಎವಿಯೇಶನ್ ಅಡ್ವೈಸರ್ ಬ್ರಿಗೇಡಿಯರ್ ಡಿ.ಎಂ.ಪೂರ್ವಿಮಠ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಮತ್ತು ಮೂಲ…

Read More

ವಿಜಯಪುರ: ಮುಂಬರುವ ಲೋಕಸಭಾ ಚುನಾವಣೆಗೆ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಗೆ ಜಿಲ್ಲಾ ಅಲ್ಪಸಂಖ್ಯಾತ ಘಟಕ ವತಿಯಿಂದ ಸಹಮತ ಸೂಚಿಸಲಾಗಿದೆ ಎಂದು ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ದಿಲಾವರ್ ಖಾಜಿ ತಿಳಿಸಿದ್ದಾರೆ.ನಗರದ ಜಾತ್ಯಾತೀತ ಜನತಾದಳ ಜಿಲ್ಲಾ ಕಚೇರಿಯಲ್ಲಿ ಕರೆಯಲಾಗಿದ್ದ ಪತ್ರಿಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಮುಂಬರುವ ಲೋಕಸಭಾ ಚುನಾವಣೆಗೆ ಪಕ್ಷದ ಕಾರ್ಯಕರ್ತರು ಹೆಚ್ಚಿನ ಶೀಟ್ ಗೆಲ್ಲಿಸುವಲ್ಲಿ ಶ್ರಮಿಸಬೇಕೆಂದು ತಿಳಿಸಿದರು.ಇದೇ ಸಂದರ್ಭದಲ್ಲಿ ಜಾತ್ಯಾತೀತ ಜನತಾದಳದ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಏಜಾಜ ಅಹ್ಮದ ಮುಕಬೀಲ್, ಮಾತನಾಡಿ, ಉತ್ತರ ಕರ್ನಾಟಕದ ನೀರಾವರಿ  ಯೋಜನೆಗಳಿಗೆ ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿಗಳಾದ ಎಚ್.ಡಿ. ದೇವೇಗೌಡರು ಪ್ರಾಮುಖ್ಯತೆ ನೀಡಿರುವುದನ್ನು ಸ್ಮರಿಸಿದರು. ೧೯೯೪ ರಲ್ಲಿ ಮಾಜಿ ಪ್ರಧಾನಿಗಳಾದ ಎಚ್.ಡಿ. ದೇವೇಗೌಡರು ಮುಖ್ಯಮಂತ್ರಿಗಳಿದ್ದ ಸಮಯದಲ್ಲಿ ಅಲ್ಪಸಂಖ್ಯಾತರಿಗೆ ಶೇ.೪ ರಷ್ಟು ಮೀಸಲಾತಿಯನ್ನು ನೀಡಿ ಅಲ್ಪಸಂಖ್ಯಾತರಿಗೆ ನ್ಯಾಯ ಒದಗಿಸುವಲ್ಲಿ ಶ್ರಮಿಸಿದ ಮಹಾನ ನಾಯಕರು ಎಂದು ಸ್ಮರಿಸಿದರು. ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಅಧೀಕಾರವಾದಿಯಲ್ಲಿ ಜನಪರ ಯೋಜನೆಗಳನ್ನು ತರುವ ಮೂಲಕ ಎಲ್ಲಾ ವರ್ಗದ ಜನರಿಗೆ ಮತ್ತು…

Read More

ವಿಜಯಪುರ: ಅ.೦೭ ರಂದು ಸಾಯಂಕಾಲ ೫ ಗಂಟೆಗೆ ವಿಜಯಪುರ ನಗರದ ಕಂದಗಲ್ ಹಣಮಂತ್ರಾಯ ರಂಗಮಂದಿರದಲ್ಲಿ ಜಿಲ್ಲಾ ಯುವ ಪರಿಷತ್ತು ಮತ್ತು ಸನ್ ಲೈಟ್ಸ್ ಮೆಲೋಡಿಸ್ ಇವರ ಪ್ರಾಯೋಜಕತ್ವದಲ್ಲಿ ಸ್ವರ ಸಂಭ್ರಮ ಕಾರ್ಯಕ್ರಮ ಆಯೋಜಿಸಲಾಗಿದೆ.ಈ ಸ್ವರ ಸಂಭ್ರಮ ಕಾರ್ಯಕ್ರಮದಲ್ಲಿ ನಾಡಿನ ಖ್ಯಾತ ಚಲನಚಿತ್ರ ಹಿನ್ನೆಲೆ ಗಾಯಕಿ ಮಾನಸಾ ಹೊಳ್ಳ ಮತ್ತು ಮಜಾ ಟಾಕೀಸ ಖ್ಯಾತಿಯ ರೆಮೋ ಹಾಗು ಸರಿಗಮಪ ದ ಜ್ಯೂರಿ ಮೆಂಬರ ಗಾಯಕಿ ಲಕ್ಷ್ಮಿ ವಿಜಯಕುಮಾರ ಕರ್ನಾಟಕದ ಮೊದಲ ಮಹಿಳಾ ವಾದ್ಯಗೋಷ್ಠಿ ತಂಡದಿಂದ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದ್ದು, ಸಂಗೀತ ಪ್ರೀಯರು ಈ ಕಾರ್ಯಕ್ರಮದ ಸವಿಯನ್ನು ಸವಿಯಬೇಕೆಂದು ಜಿಲ್ಲಾ ಯುವ ಪರಿಷತ್ತಿನ ಅಧ್ಯಕ್ಷ ಶರಣು ಸಬರದ ಪ್ರಕಟಣೆಯಲ್ಲಿ ಕೋರಿದ್ದಾರೆ

Read More

ಕೇಂದ್ರ ಬರ ಅಧ್ಯಯನ ತಂಡಕ್ಕೆ ಸಚಿವ ಎಂ.ಬಿ.ಪಾಟೀಲ ಮನವಿ ವಿಜಯಪುರ: ತೀವ್ರ ಬರ ಪೀಡಿತ ವಿಜಯಪುರ ಜಿಲ್ಲೆಗೆ ಹೆಚ್ಚಿನ ಅನುದಾನ ಒದಗಿಸುವ ನಿಟ್ಟಿನಲ್ಲಿ ಕೇಂದ್ರಕ್ಕೆ ವರದಿ ಸಲ್ಲಿಸುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಕೇಂದ್ರ ಬರ ಅಧ್ಯಯನ ತಂಡಕ್ಕೆ ಮನವಿ ಮಾಡಿದ್ದಾರೆ.ಸಚಿವರು ಸಧ್ಯಕ್ಕೆ ವಿದೇಶ ಪ್ರವಾಸದಲ್ಲಿದ್ದು, ಅವರ ಸೂಚನೆಯಂತೆ ಸಚಿವರ ಸಾರ್ವಜನಿಕ‌ ಸಂಪರ್ಕಾಧಿಕಾರಿ ಡಾ. ಮಹಾಂತೇಶ ಬಿರಾದಾರ, ಸಚಿವರ ಕಚೇರಿಯ ಅಧಿಕಾರಿಗಳಾದ ಎಂ. ಎನ್. ಚೋರಗಸ್ತಿ ಮತ್ತು ದಶರಥ ಭೋಸಲೆ ಅವರು ಕೇಂದ್ರ ಬರ ಅಧ್ಯಯನ ತಂಡಕ್ಕೆ ಸಚಿವರ ಪರವಾಗಿ ಅರ್ಜುಣಗಿ‌ ಗ್ರಾಮದಲ್ಲಿ ಮನವಿ ಪತ್ರ ಸಲ್ಲಿಸಿದರು.ಮಳೆಯ ಕೊರತೆಯಿಂದಾಗಿ ತೀವ್ರ ಕೊಳವೆ ಬಾವಿ, ತೆರೆದ ಬಾವಿಗಳು ಬತ್ತಿ ಹೋಗಿವೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಪರದಾಡುವ ಸ್ಥಿತಿ ಉಂಟಾಗಬಹುದಾಗಿದೆ. ಮಳೆಯ ಅಭಾವದಿಂದ ರೈತರು ಜಮೀನಿನಲ್ಲಿ ಹಾಕಿರುವ ದುಡಿಮೆ ಹಾಗೂ ಬಂಡವಾಳ ಸಹ ಕೈಗೆ ಬರದೇ…

Read More

ಕಲಕೇರಿ: ಮಕ್ಕಳ ಉತ್ತಮ ಬೆಳವಣಿಗೆಗಾಗಿ ಗರ್ಭಿಣಿಯರು ಹಾಗೂ ಬಾಣಂತಿಯರು ಪೋಷಕತ್ವವುಳ್ಳ ಪೌಷ್ಠಿಕ ಆಹಾರ ಸೇವನೆ, ಅಗತ್ಯ ಪ್ರಮಾಣದ ನಿದ್ದೆ, ನೀರು, ಸೇವನೆ ಮಾಡಬೇಕು ಎಂದು ಸಹಾಯಕ ಸಿಡಿಪಿಓ ಎಸ್ ಎನ್ ಕೋರವಾರ ಹೇಳಿದರು.ಕಲಕೇರಿ ಗ್ರಾಮದ ೯ ಅಂಗನವಾಡಿ ಕೇಂದ್ರಗಳಲ್ಲಿ ಹಮ್ಮಿಕೊಂಡ ಸಂಕಲ್ಪ ಸಪ್ತಾಹ, ಸುಪೋಷಿತ ಪರಿವಾರ ಪೋಷಣಾ ಮೇಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಗರ್ಭಿಣಿ ತಾಯಂದಿರು ಇಲಾಖೆಯಿಂದ ದೊರೆಯುವ ಸೌಲಭ್ಯಗಳ ಲಾಭ ಪಡೆದುಕೊಂಡು ಆರೋಗ್ಯಪೂರ್ಣ ಸ್ವಸ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ಅವರು ಹೇಳಿದರು.ಈ ವೇಳೆ ಕಲಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಎಲ್ಲ ೯ ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿ ಸ್ತ್ರೀಯರಿಗೆ ಸೀಮಂತ ಕಾರ್ಯ ಮಾಡಲಾಯಿತು.ಕಾರ್ಯಕ್ರಮದಲ್ಲಿ ಪೌಷ್ಠಿಕ ಆಹಾರಗಳನ್ನು ಪ್ರದರ್ಶನಕ್ಕೆ ಇಡಲಾಗಿತ್ತು.ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್‌ನ ಸದಸ್ಯರು, ನೊಡಲ್ ಅಧಿಕಾರಿ ಸಿದ್ರಾಮಪ್ಪ ಬಳ್ಳುರಗಿ, ಅಂಗನವಾಡಿ ಮೇಲ್ವಿಚಾರಕಿ ಎ ಎಂ ಸಜ್ಜನ್, ಗ್ರಾಮ ಪಂಚಾಯತ್ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಸೇರಿದಂತೆ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.

Read More

ಬಸವನಬಾಗೇವಾಡಿ: ಪಟ್ಟಣದ ಬಸವ ಭವನದಲ್ಲಿ ಅ.೮ ರಂದು ಮಧ್ಯಾಹ್ನ ೨.೩೦ ಗಂಟೆಗೆ ಬಸವನಾಡಿನ ಹೆಮ್ಮೆಯ ಸಂಗೀತ ವಿದ್ವಾನರಾಗಿದ್ದ ದಿ.ಶ್ರೀಮಂತ ಅವಟಿ ಅವರ ಪ್ರಥಮ ಪುಣ್ಯಸ್ಮರಣೆ ಕಾರ್ಯಕ್ರಮ, ಶ್ರೀಮಂತ ಅವಟಿ ಲಲಿತಕಲಾ ಪ್ರತಿಷ್ಠಾನದಿಂದ ಯುವ ಸಂಗೀತ ಪ್ರತಿಭಾಶಾಲಿಗಳಿಗೆ ದಿ.ಶ್ರೀಮಂತ ಅವಟಿ ಸಂಗೀತ ಯುವ ಪುರಸ್ಕಾರ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಸಮಾರಂಭದ ಸಾನಿಧ್ಯವನ್ನು ಸ್ಥಳೀಯ ಹಿರೇಮಠದ ಶ್ರೀಗಳು, ವಿರಕ್ತಮಠದಶ್ರೀಗಳು ವಹಿಸುವರು. ಸಮಾರಂಭಕ್ಕೆ ಖ್ಯಾತ ಸುಗಮ ಸಂಗೀತ ಕಲಾವಿದರಾದ ರಾಘವೇಂದ್ರ ಬಿಜಾಡೆ ಸೇರಿದಂತೆ ಇತರರು ಆಗಮಿಸುತ್ತಾರೆ. ಸಮಾರಂಭದಲ್ಲಿ ದಿ.ಶ್ರೀಮಂತ ಅವಟಿಯವರ ಶಿಷ್ಯ ಬಳಗವು ಸಂಗೀತ ಕಾರ್ಯಕ್ರಮ ನಡೆಸಿಕೊಡಲಿದೆ. ಉತ್ತರ ಕರ್ನಾಟಕದ ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವ ಯುವ ಪ್ರತಿಭೆಯನ್ನು ಗುರುತಿಸಿ ಪುರಸ್ಕಾರ ಸಮಿತಿ ಸದಸ್ಯರಾದ ಡಾ.ಹರೀಶ ಹೆಗಡೆ, ವಿರೇಶ ವಾಲಿ, ಶ್ರೀಪಾದ ಅಟ್ಲೆ, ಅಶೋಕ ಹಂಚಲಿ ಆಯ್ಕೆ ಮಾಡಲಿದ್ದಾರೆ ಎಂದು ದಿ.ಶ್ರೀಮಂತ ಅವಟಿ ಲಲಿತಕಲಾ ಪ್ರತಿಷ್ಠಾನ ಅಧ್ಯಕ್ಷ ಶಂಕರ ಅವಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬಸವನಬಾಗೇವಾಡಿ: ಹಂಡೆವಜೀರ ಸಮಾಜದ ಮಕ್ಕಳ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನಮ್ಮ ಸಂಘದ ಜಿಲ್ಲಾ, ತಾಲೂಕು ಘಟಕ ಹಾಗೂ ಕಲಬುರಗಿಯ ಚಾಲುಕ್ಯ ಸಂಸ್ಕೃತಿ ಅಧ್ಯಯನ ಪೀಠದ ಸಹಯೋಗದಲ್ಲಿ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ, ಗ್ರಂಥ ಬಿಡುಗಡೆ ಹಾಗೂ ಸಮಾಜದ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸುವ ಸಮಾರಂಭವನ್ನು ಅ.8 ರಂದು ಬೆಳಗ್ಗೆ 11 ಗಂಟೆಗೆ ಇಂಡಿ ಪಟ್ಟಣದ ಶಾಂತೇಶ್ವರ ಮಂಗಲ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಕರ್ನಾಟಕ ವೀರಶೈವ ಲಿಂಗಾಯತ ಹಂಡೆವಜೀರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಘಟಕದ ಅಧ್ಯಕ್ಷ ಡಾ.ಎಸ್.ಎಸ್.ಪಾಟೀಲ ಹೇಳಿದರು.ಪಟ್ಟಣದ ಸಿದ್ಧರಾಮೇಶ್ವರ ಪತ್ತಿನ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ಶುಕ್ರವಾರ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸಮಾಜ ಬಾಂಧವರು ಸಂಘಟಿತರಾಗಿ 2004 ರಿಂದ ಹತ್ತು ವರ್ಷಕೊಮ್ಮೆ ರಾಜ್ಯ ಮಟ್ಟದ ಸಮ್ಮೇಳನ, ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನಿಸುವ ಕಾರ್ಯಕ್ರಮ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸಮಾಜದ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ನಿರಂತರವಾಗಿ ಮಾಡಲಾಗುತ್ತಿದೆ ಎಂದು ಹೇಳಿದರು.ಹಂಡೆವಜೀರ…

Read More

ದೇವರಹಿಪ್ಪರಗಿ: ಪಟ್ಟಣಕ್ಕೆ ಅ.೧೦ ಮಂಗಳವಾರದಂದು ಆಗಮಿಸುವ ಶೌರ್ಯ ಜಾಗರಣ ರಥಯಾತ್ರೆಗೆ ಸಾಂಪ್ರದಾಯಿಕ ಸ್ವಾಗತ ಕೋರಿ ನಂತರ ಬಿಳ್ಕೋಡಲಾಗುತ್ತದೆ ಎಂದು ವಿಶ್ವ ಹಿಂದೂ ಪರಿಷದ್ ವಿಭಾಗ ಸತ್ಸಂಗ ಪ್ರಮುಖ ಶ್ರೀಮಂತ ದುದ್ದಗಿ ಹೇಳಿದರು.ಪಟ್ಟಣದ ಕಲ್ಮೇಶ್ವರ ದೇವಸ್ಥಾನದ ಆವರಣದಲ್ಲಿ ಗುರುವಾರ ಜರುಗಿದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ವಿಶ್ವ ಹಿಂದೂ ಪರಿಷದ್ ೬೦ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಶುಭ ಸಂದರ್ಭದಲ್ಲಿ ರಾಷ್ಟಾçದ್ಯಂತ ಆಯೋಜಿಸಿರುವ ಶೌರ್ಯ ಜಾಗರಣ ರಥಯಾತ್ರೆ ಸೆಪ್ಟೆಂಬರ್ ೩೦ರಂದು ಆರಂಭಗೊಂಡು ಅಕ್ಟೋಬರ್ ೧೬ಕ್ಕೆ ಕೊನೆಗೊಳ್ಳಲಿದೆ. ಈ ರಥಯಾತ್ರೆ ಪಟ್ಟಣಕ್ಕೆ ಆಗಮಿಸುವ ಸಂದರ್ಭದಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಭವ್ಯ ಸ್ವಾಗತ ಕೋರುವುದರ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಬೇಕು.ವಿಶ್ವ ಹಿಂದೂ ಪರಿಷದ್ ಧರ್ಮೋ ರಕ್ಷತಿ ರಕ್ಷಿತಃ ಎಂಬ ಧ್ಯೆಯಮಂತ್ರದೊಂದಿಗೆ ರಾಷ್ಟ್ರ ರಕ್ಷಣೆಯ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಸಂಘಟನೆಯಾಗಿದೆ. ಪಟ್ಟಣದ ತಾವೆಲ್ಲ ಯುವಕರು ತಮ್ಮ ತನು, ಮನದೊಂದಿಗೆ ಆಗಮಿಸಿ ರಥಯಾತ್ರೆಯ ಸಂದೇಶವನ್ನು ಅರಿತು ಜನತೆಗೆ ಸಾದರಪಡಿಸಬೇಕು ಎಂದರು.ತಾಲ್ಲೂಕು ಅಧ್ಯಕ್ಷ ಶ್ರೀಧರ ನಾಡಗೌಡ, ಸೋಮಶೇಖರ ಹಿರೇಮಠ, ಚಿದಾನಂದ ಕುಂಬಾರ, ಶ್ರೀಶೈಲ…

Read More