Author: editor.udayarashmi@gmail.com

ವಿಜಯಪುರ: ಜಿಲ್ಲೆಯ ಎರಡು ನಮ್ಮ ಕ್ಲಿನಿಕ್‌ಗಳನ್ನು ಸಂಜೆ ವೇಳೆ ಆರಂಬಿಸಲಾಗುತ್ತಿದ್ದು, ನಗರ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳ ಕಾರ್ಯನಿರ್ವಹಣೆ ಸಮಯ ಬದಲಾವಣೆ ಮಾಡಲಾಗಿದ್ದು, ವಿಜಯಪುರ ನಗರದ ಅಡಕಿಗಲ್ಲಿ (ಜೋರಾಪುರ ಪೇಟೆ) ಆಯುಷ ಆಸ್ಪತ್ರೆ ಆವರಣ ಮತ್ತು ಬಸವನಬಾಗೇವಾಡಿಯ ಬಸವ ನಗರದ ನಮ್ಮ ಕ್ಲಿನಿಕ್‌ಗಳ ವೇಳಾಪಟ್ಟಿ ಬದಲಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಬಸವರಾಜ ಹುಬ್ಬಳ್ಳಿ ತಿಳಿಸಿದ್ದಾರೆ.ಪ್ರಸ್ತುತ ಬೆಳಿಗ್ಗೆ ೯ ರಿಂದ ಸಂಜೆ ೪-೩೦ರವರೆಗೆ ಕಾರ್ಯನಿರ್ವಹಿಸುತ್ತಿರುವ ಈ ಕ್ಲಿನಿಕ್‌ಗಳು ಇನ್ನೂ ಮುಂದೆ ಬೆಳಿಗ್ಗೆ ೮ ರಿಂದ ಮಧ್ಯಾಹ್ನ ೧೨ ಹಾಗೂ ಸಂಜೆ ೪ ರಿಂದ ರಾತ್ರಿ ೮ ಗಂಟೆವರೆಗೆ ಕಾರ್ಯನಿರ್ವಹಿಸಲಿವೆ. ರಾಜ್ಯದ ೪೧೫ ನಮ್ಮ ಕ್ಲಿನಿಕ್‌ಗಳ ಪೈಕಿ ಆಯ್ದ ೫೨ ನಮ್ಮ ಕ್ಲಿನಿಕ್‌ಗಳಲ್ಲಿ ಪ್ರಾಯೋಗಿಕವಾಗಿ ವೇಳೆ ಬದಲಾವಣೆ ಮಾಡಲಾಗಿದ್ದು, ನಗರ ಪ್ರದೇಶದಲ್ಲಿ ವಾಸಿಸುವ ಬಡ, ದುರ್ಬಲ, ಕೂಲಿಕಾರ್ಮಿಕರು ಮತ್ತು ದುಡಿಯುವ ವರ್ಗದ ಜನರು ಈ ಕ್ಲಿನಿಕ್‌ಗಳಲ್ಲಿ ದೊರೆಯುವ ಆರೋಗ್ಯ ಸೇವೆಯನ್ನು ಬಳಕೆ ಮಾಡಿಕೊಳ್ಳುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ಅಸೋಸಿಯೇಶನ್ ಆಫ್ ಸ್ಟೇಟ್ ರೋಡ್ ಟ್ರಾನ್ಸ್ಪೋರ್ಟ್ ಅಂಡರ್ ಟೆಕ್ಕಿಂಗ್ ವತಿಯಿಂದ ಸೆ.೨೧ ರಿಂದ ೨೩ರವರೆಗೆ ಗುಜರಾತಿನ ಅಹಮದಾಬಾದ್‌ನಲ್ಲಿ ಹಮ್ಮಿಕೊಳ್ಳಲಾದ ಅಂತರ ನಿಗಮದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ತೃತೀಯ ಸ್ಥಾನ ಪಡೆದುಕೊಂಡಿದೆ.ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ತಾಳಿಕೋಟೆ ಘಟಕದ ಅಮರೇಶ ಎಸ್.ಮೇಟಿ, ಬಸವನಬಾಗೇವಾಡಿ ಘಟಕದ ಎಸ್.ಆರ್.ಶೇಖ ಹಾಗೂ ಆಯ್.ಆಯ್.ಐರೊಡಗಿ ಅವರ ಸಾಧನೆಯನ್ನು ಮೆಚ್ಚಿ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ಮೊಹ್ಮದ ಫೈಜ್ ಹಾಗೂ ಅಧಿಕಾರಿ ಸಿಬ್ಬಂದಿಗಳು ಕ್ರೀಡಾಪಟುಗಳನ್ನು ಸನ್ಮಾನಿಸಿ ಗೌರವಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read More

ವಿಜಯಪುರ: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ ಕೋಸಂಬೆ ಅವರು ಅಕ್ಟೋಬರ್ ೫ ಹಾಗೂ ೬ ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಅಕ್ಟೋಬರ್ ೫ ರಂದು ಜಿಲ್ಲೆಯಲ್ಲಿರುವ ಅಂಗನವಾಗಿ ಕೇಂದ್ರ, ಮಕ್ಕಳ ಪಾಲನಾ ಸಂಸ್ಥೆ, ದತ್ತು ಕೇಂದ್ರ, ವಸತಿ ನಿಲಯ ಹಾಗೂ ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಲಿದ್ದಾರೆ. ಅಕ್ಟೊಬರ್ ೬ ರಂದು ಮಕ್ಕಳ ರಕ್ಷಣಾ ವ್ಯವಸ್ಥೆಗಳ ಕುರಿತು ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಲಿದ್ದಾರೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಎಲ್ಲ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಅಕ್ಟೋಬರ್ ೦೧ ರಂದು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ ೧೦-೩೦ಕ್ಕೆ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಉದ್ಘಾಟಿಸಲಿದ್ದಾರೆ. ನಗರ ಶಾಸಕರಾದ ಬಸನಗೌಡ ಆರ್.ಪಾಟೀಲ ಯತ್ನಾಳ ಅಧ್ಯಕ್ಷತೆ ವಹಿಸಲಿದ್ದಾರೆ.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜವಳಿ ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್.ಪಾಟೀಲ, ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ-೨ ಪ್ರಕಾಶ ಹುಕ್ಕೇರಿ, ಸಂಸದ ರಮೇಶ ಜಿಗಜಿಣಗಿ, ಶಾಸಕರುಗಳಾದ ಯಶವಂತರಾಯಗೌಡ ಪಾಟೀಲ, ಹಣಮಂತ ನಿರಾಣಿ, ಪ್ರಕಾಶ ರಾಠೋಡ, ಸುನೀಲಗೌಡ ಬಿ.ಪಾಟೀಲ, ಪಿ.ಎಚ್.ಪೂಜಾರ, ಅಪ್ಪಾಜಿ…

Read More

ವಿಜಯಪುರ: ವಿಜಯಪುರ ಐತಿಹಾಸಿಕ ನಗರವಾಗಿದ್ದು, ದೇಶ ವಿದೇಶದ ಪ್ರವಾಸಿಗರು ಭೇಟಿ ನೀಡುವ ಪ್ರವಾಸಿ ತಾಣವೂ ಆಗಿರುವುದರಿಂದ ಸ್ವಚ್ಛತೆಗೆ ಪ್ರಥಮ ಆದ್ಯತೆ ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚಿಸಿದರು. ಅವರು ವಿಜಯಪುರ ನಗರದ ಸ್ವಚ್ಛತೆ ಕುರಿತು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ನಗರದಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುತ್ತಿದ್ದು, ಕೂಡಲೇ ತಡೆಗಟ್ಟುವ ನಿಟ್ಟಿನಲ್ಲಿ ಮನೆ-ಮನೆಗೆ ತೆರಳಿ ಹಸಿ ಮತ್ತು ಒಣ ಕಸ ಬೇರ್ಪಡಿಸಿ ಮಹಾನಗರ ಪಾಲಿಕೆಯ ಕಸ ಸಂಗ್ರಹಿಸುವ ವಾಹನಕ್ಕೆ ಕಸ ಹಾಕಬೇಕು. ನಗರದ ಪ್ರತಿ ವಾರ್ಡಗಳಲ್ಲಿರುವ ವಾಣಿಜ್ಯ ಹಾಗೂ ವಸತಿ ಸಮುಚ್ಛಯಗಳ ಕಟ್ಟಡಗಳ ಪ್ರತಿ ಮನೆಗೆ ತೆರಳಿ ಹಸಿ ಮತ್ತು ಒಣ ಕಸ ಪ್ರತ್ಯೇಕಿಸಿ ತ್ಯಾಜ್ಯ ವಿಲೇವಾರಿ ಮಾಡುವಂತೆ ಹಾಗೂ ಪ್ರತಿ ವಾರ್ಡಗಳಲ್ಲಿಯೂ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಜನರಲ್ಲಿ ಜಾಗೃತಿ ಮೂಡುಸಬೇಕು.ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ಮಾರಾಟ ಮಾಡುತ್ತಿರುವ ಅಂಗಡಿ ಹಾಗೂ ಸಂಗ್ರಹಿಸಿಟ್ಟಿರುವ ಗೋದಾಮುಗಳ ಮೇಲೆ ದಾಳಿ ಮಾಡಿ ನಿಷೇಧಿತ ಪ್ಲಾಸ್ಟಿಕ್ ವಶಕ್ಕೆ ಪಡೆದು…

Read More

ವಿಜಯಪುರ: ಪ್ರವಾಸಿ ಟ್ಯಾಕ್ಸಿ ಯೋಜನೆಯಡಿ ಆಯ್ಕೆಯಾದ ಹಿಂಬಾಕಿ ಉಳಿದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವರ್ಗದ ಅಂತಿಮ ಆಯ್ಕೆ ಪಟ್ಟಿಯನ್ನು ವಿಜಯಪುರ ನಗರದ ಇಂಡಿ ರಸ್ತೆಯಲ್ಲಿರುವ ಜಿಲ್ಲಾ ಕ್ರೀಡಾಂಗಣದ ಎದುರಿಗಿರುವ ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕರ ಕಚೇರಿಯಲ್ಲಿ ಅಕ್ಟೋಬರ್ ೦೩ ರಂದು ಪ್ರಕಟಿಸಲಾಗುವುದು ಎಂದು ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.ಎರಡು ಲಕ್ಷ ರೂ.ಗಳ ಸಹಾಯಧನದೊಂದಿಗೆ ಪ್ರವಾಸಿ ಟ್ಯಾಕ್ಸಿ ವಿತರಿಸುವ ಯೋಜನೆಯಡಿ ಪರಿಶಿಷ್ಟ ಜಾತಿಯ ೧೨, ಪರಿಶಿಷ್ಟ ಪಂಗಡದ ೦೫, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವರ್ಗದ ೧೨ ಫಲಾನುಭವಿಗಳ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ಮುದ್ದೇಬಿಹಾಳ ಶಿಶು ಅಬಿವೃದ್ದಿ ಯೋಜನೆ ವ್ಯಾಪ್ತಿಯಲ್ಲಿ ಖಾಲಿ ಇರುವ ಇಂಗಳಗಿ ಅಂಗನವಾಡಿ ಕೇಂದ್ರದ ಸಹಾಯಕಿ ಹುದ್ದೆಗೆ ತಾತ್ಕಾಲಿಕವಾಗಿ ಆಯ್ಕೆಯಾದ ಆಯ್ಕೆ ಪಟ್ಟಿಯನ್ನು ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿದ್ದು, ಪ್ರಕಟಿತ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.ತಾತ್ಕಾಲಿಕವಾಗಿ ಆಯ್ಕೆಯಾದ ಆಯ್ಕೆಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ದಿನಾಂಕ : ೧೦-೧೦-೨೦೨೩ರೊಳಗೆ ಆಕ್ಷೇಪಣೆಗಳನ್ನು ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ, ಮಾರುತಿ ನಗರ, ಎಂ.ಜಿ.ಎಂ.ಕೆ. ಮೈದಾನದ ಹತ್ತಿರ, ಮುದ್ದೇಬಿಹಾಳ ಕಚೇರಿಗೆ ಸಲ್ಲಿಸಬಹುದಾಗಿದೆ ಎಂದು ಮುದ್ದೇಬಿಹಾಳ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ೨೦೨೩ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳ ಸಾಧಕರ ಹೆಸರುಗಳನ್ನು ಸಾರ್ವಜನಿಕರು ಸೇವಾ ಸಿಂಧು ಪೋರ್ಟ್ಲ್‌ನಲ್ಲಿ ನಾಮನಿರ್ದೇಶನ ಮಾಡಬಹುದಾಗಿದ್ದು, ನಾಮನಿರ್ದೇಶನ ಸೇವಾ ಸಿಂಧು ಪೋರ್ಟ್ಲ್ ನಲ್ಲಿ ಅಕ್ಟೊಬರ್ ೦೧ ರಿಂದ ೧೫ರವರೆಗೆ ಸಲ್ಲಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಕಟಣೆ ತಿಳಿಸಿದೆ.

Read More

ವಿಜಯಪುರ: ಕಾರ್ಮಿಕ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ಮೊಹ್ಮದ ಮೊಹಸಿನ್ ಅವರು ಅಕ್ಟೋಬರ್ ೩ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಅಕ್ಟೋಬರ್ ೩ರಂದು ಬೆಳಿಗ್ಗೆ ೭ ಗಂಟೆಗೆ ವಿಜಯಪುರಕ್ಕೆ ಆಗಮಿಸಲಿದ್ದಾರೆ. ಬೆಳಿಗ್ಗೆ ೯-೩೦ ರಿಂದ ೧೦-೩೦ರವರೆಗೆ ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. ಬೆಳಿಗ್ಗೆ ೧೧-೩೦ರಿಂದ ಮಧ್ಯಾಹ್ನ ೧೨-೩೦ರವರೆಗೆ ಕಾರ್ಮಿಕ ಸಂಘಟನೆಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ ೧೨-೩೦ರಿಂದ ೧-೩೦ರವರೆಗೆ ಮಾಲೀಕ ವರ್ಗದ ಸಂಘಟನೆಗಳ, ಆಡಳಿತ ವರ್ಗದವರ ಸಭೆಯಲ್ಲಿ ಭಾಗವಹಿಸಿ, ಮಧ್ಯಾಹ್ನ ೨ ಗಂಟೆಗೆ ವಿಜಯಪುರದಿಂದ ಬಾಗಲಕೋಟೆ ಜಿಲ್ಲೆಗೆ ಪ್ರಯಾಣ ಬೆಳೆಸಲಿದ್ದಾರೆ.

Read More

ವಿಜಯಪುರ: ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಜಿಲ್ಲಾ ಮಟ್ಟದಲ್ಲಿ ಪ್ರೌಢಶಾಲೆ, ಪದವಿ ಪೂರ್ವ ಮತ್ತು ಪದವಿ/ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾದ “ಬಾಪೂಜಿ ಪ್ರಬಂಧ ಸ್ಪರ್ಧೆ”ಯಲ್ಲಿ ವಿವಿಧ ವಿಭಾಗಗಳಲ್ಲಿ ತಲಾ ೩ ವಿದ್ಯಾರ್ಥಿಗಳನ್ನು ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ.”ಬಾಪೂಜಿ ಪ್ರಬಂಧ ಸ್ಪರ್ಧೆ”ಯ ಪ್ರೌಢಶಾಲಾ ವಿಭಾಗದಲ್ಲಿ ಟಕ್ಕಳಕಿ ಗ್ರಾಮ ಜಿ.ಎಚ್.ಎಸ್. ಶಾಲೆಯ ವಿದ್ಯಾರ್ಥಿನಿ ಬಸಮ್ಮಾ ರು.ಬಿರಾದಾರ ಪ್ರಥಮ, ವಿಜಯಪುರ ನಗರದ ಕೆ.ಪಿ.ಎಸ್. ಶಾಲೆಯ ವಿದ್ಯಾರ್ಥಿನಿ ರುಕ್ಮಿಣಿ ಮ.ಬಿಸನಾಳ ದ್ವೀತಿಯ ಹಾಗೂ ಮುದ್ದೇಬಿಹಾಳ ತಾಲೂಕಿನ ಆಲೂರ ಗ್ರಾಮದ ಪಿ.ಎಸ್.ಪಾಟೀಲ ಸರಕಾರಿ ಪ್ರೌಢಶಾಲೆಯ ಲಕ್ಷ್ಮಿ ಸಿ.ಕೊಪ್ಪದ ಮತ್ತು ವಿಜಯಪುರ ನಗರದ ಜಲನಗರದ ಜಿ.ಎಚ್.ಎಸ್. ಶಾಲೆಯ ವಿದ್ಯಾರ್ಥಿನಿ ಸಾಕ್ಷಿ ಮೂರಮಾನ ತೃತೀಯ ಸ್ಥಾನ ಪಡೆದಿದ್ದಾರೆ.ಪದವಿಪೂರ್ವ ವಿಭಾಗದಲ್ಲಿ ಬಬಲೇಶ್ವರ ತಾಲೂಕಿನ ಅರ್ಜುಣಗಿ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪಲ್ಲವಿ ಕುಲ್ಹಳ್ಳಿ ಪ್ರಥಮ, ವಿಜಯಪುರ ನಗರದ ಸಿಕ್ಯಾಬ ಬಾಲಕರ ಪದವಿಪೂರ್ವ ಕಾಲೇಜ್ ವಿದ್ಯಾರ್ಥಿನಿ ಸಾನಿಯಾ ರ.ಜಮಾದಾರ ದ್ವೀತಿಯ ಹಾಗೂ ವಿಜಯಪುರದ ಸೆಂಟ್ ಜೋಸೆಫ್…

Read More