Author: editor.udayarashmi@gmail.com

ವಿಜಯಪುರ ಕಸಾಪ ಬಬಲೇಶ್ವರ ಘಟಕದ ವತಿಯಿಂದ ಕಸಾಪ ಸಂಸ್ಥಾಪನಾ ದಿನಾಚರಣೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕನ್ನಡ ಉಳಿಗಾಗಿ ನಾವು ಒಂದಾಗಬೇಕಿದ್ದು, ಬೇರೆ ಬೇರೆ ಭಾಷೆಯಿಂದ ಕನ್ನಡ ಮರೆಯಾಗುತ್ತಿರುವುದು ನೋವಿನ ಸಂಗತಿ. ಆದಕ್ಕಾಗಿ ಪ್ರತಿಯೊಬ್ಬರೂ ಪ್ರತಿಜ್ಞೆ ಮಾಡಿ, ಕನ್ನಡ ಉಳಿವಿಗಾಗಿ ಹೋರಾಟ ಮಾಡಬೇಕು ಎಂದು ರೈತ ಹೋರಾಟಗಾರ್ತಿ ಸಂಗೀತಾ ರಾಠೋಡ ಹೇಳಿದರು.ನಗರದಲ್ಲಿ ಬಬಲೇಶ್ವರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನಡೆದ ೧೧೨ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ಮು ಉದ್ಘಾಟಿಸಿ ಮಾತನಾಡಿದರು.ಅಧ್ಯಕ್ಷತೆ ವಹಿಸಿದ್ದ ಬಬಲೇಶ್ವರ ಕಸಾಪ ತಾಲೂಕು ಅಧ್ಯಕ್ಷ ಹಾಗೂ ಪತ್ರಕರ್ತ ಖಾಜಾಮೈನುದ್ದೀನ್ ಪಟೇಲ್ ಮಾತನಾಡಿ, ಕನ್ನಡ ನಾಡು, ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂರಕ್ಷಣೆಗಾಗಿ ಜನ್ಮತಾಳಿದ ಏಕೈಕ ಪ್ರಾತಿನಿಧಿಕ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ತು. ಸುಮಾರು ಒಂದು ಶತಮಾನಕ್ಕೂ ಅಧಿಕ ಇತಿಹಾಸವಿರುವ ಈ ಸಂಸ್ಥೆಯು ಕೇವಲ ಒಂದು ಕಟ್ಟಡವಲ್ಲ, ಅದು ಏಳು ಕೋಟಿ ಕನ್ನಡಿಗರ ಭಾವನಾತ್ಮಕ ಕೇಂದ್ರವಾಗಿದೆ ಎಂದರು.ಕಸಾಪ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ, ಬಬಲೇಶ್ವರದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು…

Read More

ಸಿಂದಗಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ೧೧೨ನೆಯ ಸಂಸ್ಥಾಪನಾ ದಿನಾಚರಣೆ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕನ್ನಡವೆಂದರೆ ಕೇವಲ ಅದೊಂದು ಭಾಷೆಯಲ್ಲ. ಅದೊಂದು ಸಂಸ್ಕೃತಿಯ ಹಿರಿಮೆ. ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ ಎಂದು ನಿವೃತ್ತ ಪ್ರಾಚಾರ್ಯ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಎಂ.ಎಸ್.ಹೈಯ್ಯಾಳಕರ ಹೇಳಿದರು.ಸಿಂದಗಿ ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡ ಕನ್ನಡ ಸಾಹಿತ್ಯ ಪರಿಷತ್ತಿನ ೧೧೨ನೆಯ ಸಂಸ್ಥಾಪನಾ ದಿನಾಚರಣೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಮುಚ್ಚುತ್ತಿರುವ ಕನ್ನಡ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕನ್ನಡಪರ ಸಂಘಟನೆಗಳು ಕಾರ್ಯಪ್ರವೃತ್ತರಾಗಬೇಕು. ಕನ್ನಡ ಭಾಷೆಯ ಅಸ್ಮಿತೆಗಾಗಿ ನಾವೆಲ್ಲರೂ ಹೋರಾಡಬೇಕು. ಭಾಷಾವಾರು ಹಾಗೂ ವಿಭಾಗವಾರು ತುಲನೆ ಮಾಡಿದಾಗ ಉತ್ತರ ಕರ್ನಾಟಕಕ್ಕೆ ಸದಾ ಅನ್ಯಾಯವಾಗುತ್ತಲೇ ಬಂದಿದೆ. ಇಂತಹ ಅನ್ಯಾಯವನ್ನು ಸರಿದೂಗಿಸುವ ನಿಟ್ಟಿನಲ್ಲಿ ನಮ್ಮ ಜನಪ್ರತಿನಿಧಿಗಳು ಮುತುವರ್ಜಿ ವಹಿಸಬೇಕು. ಎಲ್ಲ ಸರಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆಯಲ್ಲಿ ಪತ್ರ ವ್ಯವಹಾರ ಕಡ್ಡಾಯಗೊಳಿಸಬೇಕು ಎಂದರು.ಈ ವೇಳೆ ಉಪನ್ಯಾಸ ನೀಡಿದ…

Read More

ಸಂಸದ ರಮೇಶ ಜಿಗಜಿಣಗಿ ಅವರಿಂದ ನೈಋತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕರಿಗೆ ಪತ್ರ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಗದಗದಿಂದ ಮುಂಬಯಿಗೆ ಸಂಚರಿಸುವ ರೈಲ್ವೆಗೆ ಇಂಡಿ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ ಸೌಲಭ್ಯ ಕಲ್ಪಿಸಬೇಕು ಎಂದು ಸಂಸದರಾದ ರಮೇಶ ಜಿಗಜಿಣಗಿ ಒತ್ತಾಯಿಸಿದ್ದಾರೆ.‌ನಿಂಬೆ ಬೆಳೆಯ ಜಾಗತಿಕ ಟ್ಯಾಗ್ ಪಡೆದಿರುವ ದೇಶದ ಎಲ್ಲ ಕಡೆ ನಿಂಬೆ ಹಣ್ಣು ಸರಬರಾಜು ಮಾಡುವ ಕರ್ನಾಟಕ ಮಹಾರಾಷ್ಟ್ರದ ಗಡಿ ಭಾಗವಾಗಿರುವ‌ ಇಂಡಿ ಸಾಕಷ್ಟು ವ್ಯಾಪಾರ ವಹಿವಾಟಿನಲ್ಲಿ ಮುಂಚೂಣಿಯಲ್ಲಿದೆ. ಜೊತೆಗೆ ಅತ್ಯುತ್ತಮ ಗುಣಮಟ್ಟದ ದ್ರಾಕ್ಷಿ, ದಾಳಿಂಬೆ ಹಾಗೂ ಇತರೆ ವಾಣಿಜ್ಯ ಬೆಳೆಗಳನ್ನು ಹೆಚ್ಚಿನ ಪ್ರಮಾಣದಲ್ಲಿ ರಫ್ತು ಮಾಡುತ್ತಿದ್ದು, ಜವಳಿ ವ್ಯಾಪಾರದ ಕೇಂದ್ರವಾಗಿರುವ ಇಂಡಿ ತಾಲೂಕು, ಪ್ರಸ್ತುತ ಪುರಸಭೆಯಿಂದ ನಗರಸಭೆ ಉನ್ನತೀಕರಣಗೊಂಡಿದೆ. ಇದರಿಂದಾಗಿ ಹೆಚ್ಚಿನ ಪ್ರಮಾಣದಲ್ಲಿ ರೆವೆನ್ಯೂ ಸಂಗ್ರಹಿಸುತ್ತಿರುವ ತಾಲೂಕಾಗಿದೆ ಎಂದವರು ನೈಋತ್ಯ ರೈಲ್ವೆ ವಲಯದ ಪ್ರಧಾನ ವ್ಯವಸ್ಥಾಪಕರಿಗೆ ಪತ್ರ ಬರೆದಿದ್ದಾರೆ.ವಿಜಯಪುರ ಜಿಲ್ಲೆಯಲ್ಲಿಯೇ ಅತೀ ಹೆಚ್ಚಿನ ಜನಸಂಖ್ಯೆ ಹೊಂದಿರುವ ತಾಲೂಕಾಗಿರುವ ಇಂಡಿ ನಗರದಿಂದ ಕಡಿಮೆ ದೂರದಲ್ಲಿ ಭೀಮಾನದಿಯಿದೆ.‌ ಹೆಚ್ಚಿನ ರೈತರು ಕಬ್ಬು ಬೆಳೆಯುತ್ತಿದ್ದಾರೆ. ಈ ಎಲ್ಲ…

Read More

ವಿಜಯಪುರ ಜಿಲ್ಲಾ ಮಟ್ಟದ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಷ್ಟ್ರೀಯ ಆರೋಗ್ಯ ಅಭಿಯಾನ ಮತ್ತು ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನ ಯೋಜನೆಯನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಗರ್ಭಿಣಿಯರ ಆರೈಕೆ ಮತ್ತು ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗರ್ಭಿಣಿಯರ ಆರೋಗ್ಯ ತಪಾಸಣೆಯನ್ನು ೧೨ ರಿಂದ ೧೪ ಬಾರಿ ನಿಯಮಿತವಾಗಿ ಕೈಗೊಳ್ಳಬೇಕು. ಅನಿಮಿಯಾ, ಅಧಿಕ ರಕ್ತದೊತ್ತಡ, ಮಾನಸಿಕ ಆರೋಗ್ಯ ಮತ್ತು ವಿವಿಧ ಆರೋಗ್ಯ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲಿ ಗುರುತಿಸಿ ಉಚಿತ ಆರೋಗ್ಯ ಚಿಕಿತ್ಸೆಯನ್ನು ಒದಗಿಸಬೇಕು ಎಂದರು. ಜಿಲ್ಲೆಯಲ್ಲಿ ತಾಯಿ-ಮಕ್ಕಳ ಆರೋಗ್ಯ ರಕ್ಷಣೆಯಲ್ಲಿ ಆರ್.ಸಿ.ಹೆಚ್ ತಂತ್ರಾಂಶದಲ್ಲಿ ಗರ್ಭಿಣಿಯರಿಗೆ ಕಾಲ-ಕಾಲಕ್ಕೆ ಆರೋಗ್ಯದ ಕುರಿತು ತಿಳಿವಳಿಕೆ ನೀಡುವಂತೆ ಸೂಚನೆ ನೀಡಿದರು.ಹೆರಿಗೆಯ ನಂತರ ಮಗುವಿಗೆ ಒಂದು…

Read More

ವಿಜಯಪುರದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಪಂ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಗ್ರಾಮೀಣ ಬಡಜನರಿಗೆ ಉದ್ಯೋಗ ಭದ್ರತೆ ಒದಗಿಸುವ ಮಹಾತ್ಮಾ ಗಾಂಧಿ ನರೇಗಾ ಮಹತ್ವದ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಬೇಕು ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು (ಗ್ರಾ.ಉ) ತಾಂತ್ರಿಕ ಸಂಯೋಜಕರು, ತಾಲೂಕು ಎಮ್.ಐ.ಎಸ್ ಸಂಯೋಜಕರು, ಐ.ಇ.ಸಿ ಸಂಯೋಜಕರು, ಆಡಳಿತ ಸಹಾಯಕರು ಹಾಗೂ ತಾಂತ್ರಿಕ ಸಹಾಯಕರೊಂದಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ವಿವಿಧ ವಿಷಯಗಳ ಕುರಿತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಕೆಲಸದ ಬೇಡಿಕೆ ಸಲ್ಲಿಸಿದ ಪ್ರತಿಯೊಬ್ಬ ಅರ್ಹ ಕುಟುಂಬಗಳಿಗೆ ಕಾಲಮಿತಿಯೊಳಗೆ ಉದ್ಯೋಗ ಒದಗಿಸಬೇಕು ಹಾಗೂ ಕಾಮಗಾರಿಗಳನ್ನು ನಿಗದಿತ ಸಮಯದೊಳಗಾಗಿ ಪೂರ್ಣಗೊಳಿಸುವತ್ತ ವಿಶೇಷ ಗಮನ ಹರಿಸಬೇಕು ಎಂದು ಸೂಚಿಸಿದರು. ಉದ್ಯೋಗ ಮಾಡಿದ ಕೂಲಿಕಾರರ ವೇತನ ಪಾವತಿಯಲ್ಲಿ ಯಾವುದೇ…

Read More

ಆಲಮಟ್ಟಿ ಸಿಇ ಕಚೇರಿಗೆ ರೈತರ ಮುತ್ತಿಗೆ | ಕ್ಲೋಸರ್ ಕಾಮಗಾರಿ ವಿಳಂಬಕ್ಕೆ ಆಕ್ರೋಶ ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಈ ಬೇಸಿಗೆಯಲ್ಲಿ ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ಜಿಲ್ಲೆಯ ಎಲ್ಲ ಕೆರೆಗಳನ್ನು ಪೂರ್ಣ ಪ್ರಮಾಣದಲ್ಲಿ ಭರ್ತಿ ಮಾಡಲು ಕೂಡಲೇ ಎಲ್ಲ ಕಾಲುವೆಗಳಿಗೆ ನೀರು ಹರಿಸಬೇಕು ಹಾಗೂ ಕ್ಲೋಸರ್ ಕಾಮಗಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಆಗ್ರಹಿಸಿ ಮಂಗಳವಾರ ಅಖಂಡ ಕರ್ನಾಟಕ ರೈತ ಸಂಘ ಮತ್ತು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಂಟಿಯಾಗಿ ಬೃಹತ್ ಪ್ರತಿಭಟನೆ ನಡೆಸಿದವು.ಆಲಮಟ್ಟಿಯ ರಾಮಲಿಂಗೇಶ್ವರ ದೇವಸ್ಥಾನದಿಂದ ನೂರಾರು ರೈತರು ಪ್ರತಿಭಟನಾ ಮೆರವಣಿಗೆ ನಡೆಸಿ ಸಿಇ ಕಚೇರಿಗೆ ತೆರಳಿ ಮುಖ್ಯ ಅಭಿಯಂತರ ಡಿ. ಬಸವರಾಜ ಅವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ತಾಲ್ಲೂಕಾಧ್ಯಕ್ಷ ಸೀತಪ್ಪ ಗಣಿ, “ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದ ವ್ಯಾಪ್ತಿಗೆ ಬರುವ ಮುಳವಾಡ ಮತ್ತು…

Read More

ವಿಜಯಪುರದ ಬಿ.ಎಲ್.ಡಿ.ಇ ಸ್ವಾಯತ್ತ ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ.ವಾಯ್.ಎಂ.ಜಯರಾಜ ಅಭಿಮತ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಇಂದಿನ ಮಕ್ಕಳ ಸ್ಥಿತಿ ಏನಾಗಿದೆ ಎಂದರೆ ಮನೆಗೆ ಬಂದ ಅತಿಥಿಗಳಿಗಿಂತ, ಪಾಲಕರಿಗಿಂತ ಮೋಬೈಲ್ ಮೇಲೆಯೇ ಹೆಚ್ಚು ಪ್ರೀತಿ. ಇದರಿಂದ ರಕ್ತ ಸಂಬಂಧಗಳು ನಶಿಸಿ ಹೋಗುತ್ತಿವೆ ಎಂದು ವಿಜಯಪುರದ ಬಿ.ಎಲ್.ಡಿ.ಇ ಸ್ವಾಯತ್ತ ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ.ವಾಯ್.ಎಂ.ಜಯರಾಜ ವಿಷಾದ ವ್ಯಕ್ತಪಡಿಸಿದರು.ಸಿಂದಗಿ ನಗರದ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆ, ಸಾರಂಗಮಠದ ಜಿ.ಪಿ.ಪೋರವಾಲ ಕಲಾ ವಾಣಿಜ್ಯ ಮತ್ತು ವ್ಹಿ.ವ್ಹಿ.ಸಾಲಿಮಠ ವಿಜ್ಞಾನ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಯಾವುದೇ ಕ್ಷೇತ್ರವಿರಲಿ ಅಲ್ಲಿ ಶ್ರದ್ದೆ ಮತ್ತು ಗಣನೀಯವಾಗಿ ಸೇವೆ ಮಾಡಿ ಸಾಧನೆ ಮಾಡಬೇಕು. ಇಂದು ಹೃದಯವಂತಿಕೆ ಮಾತುಗಳಿಗಿಂತ ಒಣ ಮಾತುಗಳೇ ಹೆಚ್ಚಾಗುತ್ತಿವೆ. ಇದರ ಬಗ್ಗೆ ವಿದ್ಯಾರ್ಥಿಗಳು ತೆಲೆಕೆಡಿಸಿಕೊಳ್ಳದೆ ಮುನ್ನುಗ್ಗಬೇಕು ಎಂದರು.ಈ ವೇಳೆ ಸ್ಥಳೀಯ ಸಾರಂಗಮಠದ ಪೀಠಾಧಿಪತಿ, ಸಂಸ್ಥೆಯ ಅಧ್ಯಕ್ಷರಾದ ಪೂಜ್ಯಶ್ರೀ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಸಾನಿಧ್ಯ ವಹಿಸಿ ಮಾತನಾಡಿ, ಇಂದಿನ ಯುವ ಜನಾಂಗ ಎಷ್ಟೇ ಓದಿದರು ದೊಡ್ಡ ಸ್ಥಾನಕ್ಕೆ ಏರಿದರು ವಿದ್ಯೆಯ…

Read More

ಶೃಂಗೇರಿ ಕ್ಷೇತ್ರದ ಮರು ಎಣಿಕೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯ | ತನಿಖೆಯಿಂದ ಸತ್ಯ ಹೊರಬರಬೇಕೆಂದು ಆಗ್ರಹ ಬೆಂಗಳೂರು: ಶೃಂಗೇರಿಯಲ್ಲಿ ನಡೆದ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿಯವರು ಕ್ರಿಮಿನಲ್‌ ಪಿತೂರಿ ಮಾಡಿ ವೋಟ್‌ ಚೋರಿ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಂಭೀರ ಆರೋಪ ಮಾಡಿದರು.ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ‘ಇದು ಓಟ್ ಚೋರಿ ಅಲ್ಲ. ಓಟ್ ಡಕಾಯಿತಿ’ ಎಂದು ಆರೋಪಿಸಿದರು. ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಟಿ.ಡಿ. ರಾಜೇಗೌಡ ಅವರಿಗೆ ಬಂದಿದ್ದ ಮತಗಳು ಅಮಾನ್ಯ ಆಗಿವೆ. ಇಡೀ ದೇಶದಲ್ಲೇ ಇಂತಹ ಕ್ರಿಮಿನಲ್ ಚಟುವಟಿಕೆ ಎಲ್ಲೂ ನಡೆದಿಲ್ಲ.‌ ಈ ಬಗ್ಗೆ ತನಿಖೆ ನಡೆದು ಸತ್ಯ ಹೊರಬರಬೇಕು’ ಎಂದು ಅವರು ಆಗ್ರಹಿಸಿದರು.ಅಂಚೆ ಮತಗಳನ್ನು ಅಮಾನ್ಯ ಮಾಡುವಂತೆ ಜಿಲ್ಲಾಧಿಕಾರಿ, ಚುನಾವಣಾಧಿಕಾರಿಯ ಮೇಲೆ ಕೇಂದ್ರದಿಂದ ಒತ್ತಡ ಇರಬಹುದು. ಯಾರೇ ಅಧಿಕಾರಿಗಳು ಇರಲಿ, ತಪ್ಪು ಮಾಡಿದ್ದರೆ ಶಿಕ್ಷೆ ಆಗಬೇಕು ಎಂದರು.ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ನ್ಯಾಯಾಲಯದ ಆದೇಶದಂತೆ ನಡೆದಿದೆ. ಕಳೆದ…

Read More

ಉದಯರಶ್ಮಿ ದಿನಪತ್ರಿಕೆ ಅಥಣಿ: ಹಾವೇರಿಯ ಹುಕ್ಕೇರಿ ಮಠದ ಲಿಂ.ಶಿವಬಸವ ಮಹಾ ಶಿವಯೋಗಿಗಳ ಜನ್ಮಸ್ಥಳ ಸಪ್ತಸಾಗರದಲ್ಲಿ ಶ್ರೀ ಶಿವಬಸವ ಗುರು ಮಂದಿರದ ಪ್ರಥಮ ವರ್ಷಾಚರಣೆ ಸಮಾರಂಭ ಜರುಗಿತು.ತಾಲೂಕಿನ ಸಪ್ತಸಾಗರ ಶಾರದಾ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಯ, ಸಪ್ತಸಾಗರ ಪ್ರೌಢಶಾಲೆಯ ಎಸ್.ಎಸ್.ಎಲ್ .ಸಿ ಪರೀಕ್ಷಾ ಫಲಿತಾಂಶದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಸನ್ಮಾನಿಸಲಾಯಿತು.ಶೇಗುಣಸಿ ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರಕ್ಕೆ ಪ್ರಜ್ವಲ ರಾವಸಾಬ ಬಮ್ಮಣ್ಣವರ 98.88% ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗೆ ಹಾಗೂ ವರ್ಷಿತಾ ಭರಮಗೌಡ ಪಾಟೀಲ 97.92% ಅಂಕಗಳನ್ನು ಪಡೆದು ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಮತ್ತು ಅಶ್ವಥ ಮಲ್ಲಪ್ಪ ತೇಲಿ 96.16% ಅಂಕಗಳನ್ನು ಪಡೆದು ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಹಾವೇರಿಯ ಶ್ರೀ.ಮ.ನಿ.ಪ್ರ. ಸದಾಶಿವ ಮಹಾಸ್ವಾಮಿಗಳು ಹಾಗೂ ಹಲ್ಯಾಳದ ಶ್ರೀ.ಮ.ನಿ.ಪ್ರ. ಗುರುಸಿದ್ಧ ಮಹಾಸ್ವಾಮಿಗಳು ಹಾಗೂ ಗಣ್ಯ-ಮಾನ್ಯರು ಸೇರಿ ಸತ್ಕಾರ ಮಾಡಿದರು.ಡಿಸ್ಟಿಂಕ್ಷನ್ ದಲ್ಲಿ 14 ಮಕ್ಕಳು, ಪ್ರಥಮ ಶ್ರೇಣಿಯಲ್ಲಿ 16 ಮಕ್ಕಳು ಉತ್ತೀರ್ಣ ಹೊಂದಿ, ಸಪ್ತಸಾಗರ ಗ್ರಾಮಕ್ಕೆ ಹಾಗೂ ಪ್ರೌಢಶಾಲೆಗೆ…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ರಾಜಕೀಯ ಜೀವನದಲ್ಲಿ 50 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವ ಹಿನ್ನಲೆಯಲ್ಲಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರ ಗೌರವಾರ್ಥವಾಗಿ ಮೇ 9 ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ವಿಜಯಪುರ ಜಿಲ್ಲೆ ಹಾಗೂ ಬಸವನಬಾಗೇವಾಡಿ ಮಂಡಲದಿಂದ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಕಾರ್ಯಕರ್ತರು ಅಭಿಮಾನಿಗಳು ಪಕ್ಷಾತೀತವಾಗಿ ಪಾಲ್ಗೊಳ್ಳುವಂತೆ ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಮನವಿ ಮಾಡಿದ್ದಾರೆ.ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರ ದೀರ್ಘ ರಾಜಕೀಯ ಪಯಣ ರಾಜ್ಯ ರಾಜಕೀಯದಲ್ಲಿ ಮಹತ್ವದ ಮೈಲುಗಲ್ಲಾಗಿದ್ದು, ರೈತರು, ಬಡವರು ಹಾಗೂ ಹಿಂದುಳಿದ ವರ್ಗಗಳ ಪರವಾಗಿ ಅವರು ನೀಡಿದ ಕೊಡುಗೆ ಅಪಾರವಾಗಿದೆ.ರೈತಪರ ನೀತಿಗಳು, ಗ್ರಾಮೀಣಾಭಿವೃದ್ಧಿಗೆ ನೀಡಿದ ಕೊಡುಗೆಗಳು ಹಾಗೂ ಸಾಮಾನ್ಯ ಜನರೊಂದಿಗೆ ಹೊಂದಿರುವ ನಂಟು ಯಡಿಯೂರಪ್ಪರನ್ನು ಜನಪ್ರಿಯ ನಾಯಕರನ್ನಾಗಿ ಮಾಡಿವೆ ಎಂದು ಹೇಳಿದರು.ವಿಜಯಪುರ ಜಿಲ್ಲೆ ಹಾಗೂ ಬಸವನಬಾಗೇವಾಡಿ ಮತಕ್ಷೇತ್ರಕ್ಕೆ ಅವರು ಅಪಾರವಾದ ಕೊಡುಗೆಯನ್ನು ನೀಡಿದ್ದಾರೆ. ಇಂತಹ ಮಹತ್ವದ ಕ್ಷಣವನ್ನು ಆಚರಿಸುವ ಅಭಿಮಾನೋತ್ಸವಕ್ಕೆ ವಿಜಯಪುರ ಜಿಲ್ಲೆ ಹಾಗೂ ಬಸವನಬಾಗೇವಾಡಿ ಮತಕ್ಷೇತ್ರದ ಪ್ರತಿ ಗ್ರಾಮದಿಂದ ಕಾರ್ಯಕರ್ತರು,…

Read More