Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದಲ್ಲಿ ಸೋಮವಾರ ನಾನಾ ಅಭಿವೃದ್ದಿ ಕಾಮಗಾರಿಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ.ಪಾಟೀಲ ಅವರು ಚಾಲನೆ ನೀಡಿದರು.ಬೆಳಿಗ್ಗೆ ೧೦ ಗಂಟೆಗೆ ಗೋಲ್ ಗುಂಬಜ್ ನಿಂದ ಹಕೀಮ್ ಚೌಕ್ ವರೆಗೆ ೨ ಕೋಟಿ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು.ಬಳಿಕ ವಾರ್ಡ್ ನಂ.೧೮ ರಲ್ಲಿ ೨ ಕೋಟಿ ರೂ. ವೆಚ್ಚದಲ್ಲಿ ಪರಿಶಿಷ್ಟ ವರ್ಗಗಳ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯ ಹಾಗೂ ಹರಣಶಿಖಾರಿ ಓಣಿಯಲ್ಲಿ ರಸ್ತೆ ಸುಧಾರಣೆ ಕಾಮಗಾರಿಗೆ ಚಾಲನೆ ನೀಡಿದರು.ಅಲ್ಲಿಂದ ನೇರವಾಗಿ ಕಾಸಗೇರಿ ಖಾದಿ ಗ್ರಾಮೋದ್ಯೋಗ ಮಾರ್ಗವಾಗಿ ಮುಬೀನ್ ಸರ್ಕಲ್ ಅಥಣಿ ಗಲ್ಲಿ ಮುಖಾಂತರ ಕೇಂದ್ರ ಬಸ್ ನಿಲ್ದಾಣವರೆಗೆ ಒಳಚರಂಡಿ, ಮಳೆ ನೀರು ಚರಂಡಿ, ಅಲಂಕಾರಿಕ ಬೀದಿ ದೀಪ ಅಳವಡಿಸಿ ರಸ್ತೆ ಅಭಿವೃದ್ಧಿಪಡಿಸುವ ಕಾಮಗಾರಿಗೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಗಂಗಾಧರ ಸಂಬಣ್ಣಿ ಮಹಾಪೌರ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಹತ್ತು ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ಎನ್ ಸಿವಿಟಿ ಸಂಯೋಜಿತ ವೃತ್ತಿಗಳಿಗೆ ೨೦೨೬ರ ಆಗಸ್ಟ್ ಸಾಲಿನ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.೧೦ನೇ ತರಗತಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳೂ ಅಭ್ಯರ್ಥಿಗಳು¹LnE Karnataka Portal (www.cite.karnataka.gov.in�) ಮೂಲಕ ಏ.೨೭ ರಿಂದ ಮೇ.೮ರ ವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.ಜಿಲ್ಲಾ ನೋಡಲ್ ಸರಕಾರಿ ಐಟಿಐ ತರಬೇತಿ ಸಂಸ್ಥೆ, ೮ ಸಾಂಪ್ರದಾಯಿಕ ಹಾಗೂ ೦೬ Iಟಿಜusಣಡಿಥಿ-೪.೦ ವೃತ್ತಿಗಳಲ್ಲಿ ಒಟ್ಟು ೫೧೮ ಸೀಟುಗಳು ಲಭ್ಯವಿದ್ದು. Weಟಜeಡಿ ವೃತ್ತಿಗೆ ೮ನೇ ಪಾಸ್, ೧೦ನೇ ಪಾಸ್ ಹಾಗೂ ಫೇಲ್ ಅಭ್ಯರ್ಥಿಗಳೂ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ೯೦೩೫೪೩೪೩೮೧, ೯೮೮೬೪೩೭೫೧೭, ೯೯೭೨೬೮೨೧೮೪, ೯೪೪೮೯೮೬೩೮೧,೦೮೩೫೨-೨೮೦೩೬೦, ಸಂಪರ್ಕಿಸಬಹುದಾಗಿದೆ ಎಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೫-೨೬ ನೇ ಸಾಲಿನಲ್ಲಿ ಹೊಸದಾಗಿ ಸಫಾಯಿ ಕರ್ಮಚಾರಿಗಳ ನಿಯೋಜನೆ ನಿಷೇಧ ಹಾಗೂ ಪುನರ್ವಸತಿ ಕಾಯ್ದೆ ೨೦೧೩ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ರಚಿಸಲು, ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಂದ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅರ್ಜಿ ಆಹ್ವಾನಿಸಿದೆ.ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತಿ ಸಮಿತಿ ಸದಸ್ಯರಾಗಲು ಬಯಸುವವರು ಸಫಾಯಿ ಕರ್ಮಚಾರಿಗಳ ಪುನರ್ವಸತಿಗಾಗಿ ಕೆಲಸ ಮಾಡುತ್ತಿರುವ ಸಂಘಟನೆಗಳಿಗೆ ಸೇರಿದ ಅಥವಾ ಜಿಲ್ಲಾ ಮಟ್ಟದಲ್ಲಿ ವಾಸಿಸುವ ಸಮುದಾಯವನ್ನು ಪ್ರತಿನಿಧಿಸುತ್ತಿರುವ ೦೪ ಜನ ಮೀರದಂತೆ ಸಾಮಾಜಿಕ ಕಾರ್ಯಕರ್ತರು, ಅವರಲ್ಲಿ ಇಬ್ಬರು ಮಹಿಳೆಯರು ಇರತಕ್ಕದ್ದು. ಒಟ್ಟು ೦೪ ಜನ ಅಧಿಕಾರೇತರ ಸದಸ್ಯರನ್ನು ನಾಮನಿರ್ದೇಶನ ಮಾಡಲಾಗುವುದು ಎಂದು ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ತಿಳಿಸಿದ್ದಾರೆ.ಈ ಸಮಿತಿಗೆ ಸದಸ್ಯರಾಗ ಬಯಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಮೇ ೧೦ರ ಮಧ್ಯಾಹ್ನ ೧:೩೦ ಗಂಟೆಯ ಒಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ವಿಜಯಪುರ ಅವರ…
ವಿಜಯಪುರ: ನಗರದಲ್ಲಿ ತಂಗಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ದಿ ಸಚಿವರಾದ ಎಂ.ಬಿ.ಪಾಟೀಲ ಅವರ ನಿವಾಸಕ್ಕೆ ಭೇಟಿ ನೀಡಿದ ಜನಗಣತಿ ಅಧಿಕಾರಿಗಳು ಭಾರತ ಜನಗಣತಿ ೨೦೨೭ರ ಮಾಹಿತಿ ವಿವರಿಸಿದರು.ಈ ಸಂದರ್ಭದಲ್ಲಿ ಪಾಲಿಕೆ ಆಯುಕ್ತರಾದ ವಿಜಯ ಮೆಕ್ಕಳಕಿ, ವಲಯ ಆಯುಕ್ತರಾದ ಎಚ್.ಎಸ್. ಚಿತ್ತರಗಿ ಗಣತಿದಾರರಾದ ನೀಲಮ್ಮ ಸಜ್ಜನ ಹಾಗೂ ಮೇಲ್ವಿಚಾರಕರಾದ ಸಿದ್ದಪ್ಪ ದಾನಿ ಹಾಗೂ ಕಂದಾಯ ನಿರೀಕ್ಷಕರಾದ ಕುಮಾರ ಚವಾಣ್ ಉಪಸ್ಥಿತರಿದ್ದರು ಎಂದು ಪ್ರಕಟಣೆಗೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ಆಲಮೇಲ: ವಿಜಯಪುರ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಅಧ್ಯಾಪಕಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಆಲಮೇಲ ತಾಲ್ಲೂಕಿನ ದೇವರನಾವದಗಿ ಗ್ರಾಮದ ವನಜಾಕ್ಷಿ ಮಹೇಂದ್ರ ಗುಗ್ಗರಿ ಅವರು ಮಂಡಿಸಿದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಮತ್ತು ಪಿ.ಲಂಕೇಶ ಅವರ ಕಥನ ಸಾಹಿತ್ಯದಲ್ಲಿ ಮಹಿಳೆ : ವಿಭಿನ್ನ ಆಯಾಮಗಳು” ಎಂಬ ವಿಷಯದ ಮೇಲಿನ ಅವರ ಪಿ.ಎಚ್.ಡಿ. ಮಹಾಪ್ರಬಂಧಕ್ಕೆ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯವು ಡಾಕ್ಟರೇಟ ಪದವಿ ನೀಡಿ ಗೌರವಿಸಿದೆ. ಇವರಿಗೆ ಮಹಿಳಾ ವಿವಿಯ ಕನ್ನಡ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಪ್ರೊ. ನಾರಾಯಣ ಬಿ. ಪವಾರ ಅವರು ಮಾರ್ಗದರ್ಶಕರಾಗಿದ್ದರು. ಇವರ ಈ ಸಾಧನೆಗೆ ದೇವರನಾವದಗಿಯ ಶ್ರೀ ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ, ಶ್ರೀ ವಾಸುದೇವ ಬಲವಂತ ಫಡಕೆ ವಿವಿಧೋದ್ದೇಶ ಸಂಘ ಹಾಗೂ ಶ್ರೀ ಅಮೋಘಸಿದ್ಧ ಭಕ್ತ ಮಂಡಳಿಯವರು ಅಪಾರ ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಇಂಡಿ: ನಗರದ ರೈಲು ನಿಲ್ದಾಣದಲ್ಲಿ ನಿನ್ನೆ ಮಧ್ಯಾನ್ಹ ೨ ಗಂಟೆಗೆ ಸಂಬವಿಸಿದ ವಿದ್ಯುತ್ ಅವಘಡದಿಂದ ಎರಡು ಅಂಗಡಿಗಳು ಸಂಪೂರ್ಣ ಸುಟ್ಟು ಕರಕಲಾಗಿವೆ.ನಜೀರ ಕುಮಸಗಿ ಅವರಿಗೆ ಸೇರಿದ ಮೊಬೈಲ್ ಅಂಗಡಿ ಹಾಗೂ ಕಟ್ಟಿಮನಿ ಅವರಿಗೆ ಸೇರಿದ ಚಪ್ಪಲ್ ಅಂಗಡಿ ಬೆಂಕಿಗೆ ಅಹುತಿಯಾಗಿವೆ.ನೊಬೈಲ್ ಅಂಗಡಿಯಲ್ಲಿ ಸುಮಾರು ಒಂದು ಲಕ್ಷ ರೂ ಮೌಲ್ಯದ ಫೋನುಗಳು ಹಾಗೂ ಇತರೆ ಸಾಮಾನುಗಳು ಸುಟ್ಟು ಹೋಗಿವೆ. ಎಂದು ತಿಳಿದು ಬಂದಿದೆ.ಇದೇ ವೇಳೆ ಚಪ್ಪಲ್ ಅಂಗಡಿಯಲ್ಲಿ ಸುಮಾರು ಎರಡು ಲಕ್ಷದ ಮೌಲ್ಯದ ಚಪ್ಪಲಗಳು ಹಾಗೂ ಇತರೆ ವಸ್ತುಗಳು ಬೆಂಕಿಗೆ ಅಹುತಿಯಾಗಿವೆ ಎನ್ನಲಾಗಿದೆ.ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಇಂಡಿ ಗ್ರಾಮೀಣ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.
ಉದಯರಶ್ಮಿ ದಿನಪತ್ರಿಕೆ ಇಂಡಿ: ನಗರದ ಮಿನಿ ವಿಧಾನಸೌಧದಲ್ಲಿರುವ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ ಎಂಬ ಗಂಭೀರ ಆರೋಪಗಳು ಕೇಳಿ ಬರುತ್ತಲಿವೆ. ಸಾರ್ವಜನಿಕರು ಉಪನೋಂದಣಾಧಿಕಾರಿಗಳ ಕಾರ್ಯಾಲಯದಲ್ಲಿ ನೇರವಾಗಿ ಹೋಗಿ ಕಾರ್ಯ ಮಾಡಿಕೊಳ್ಳಬೇಕೆಂದರೆ ಸಾಧ್ಯವಾಗದ ದುಸ್ಥಿತಿ ನಿರ್ಮಾಣವಾಗಿದ್ದು ಏಜೆಂಟರ ಮೂಲಕವೇ ಹೋಗಿ ಕೆಲಸ ಮಾಡಿಕೊಳ್ಳಬೇಕಾಗಿದೆ.ನೇರವಾಗಿ ಹೋದರೆ ನೀರಾವರಿ ವ್ಯಾಲ್ಯೂವೇಶನ್ ಹಾಕಿ ಹೆಚ್ಚಿನ ಚಲನ್ ಕಟ್ಟಲು ತಿಳಿಸುತ್ತಾರೆ. ಅದೇ ಏಜೆಂಟರ ಮುಖಾಂತರ ಹೋದರೆ ಒಣ ಬೇಸಾಯದ ವ್ಯಾಲ್ಯೂವೇಶನ್ ಮಾಡಿ ಚಲನ್ ತೆಗೆಸುತ್ತಾರೆ.ಸರಕಾರಕ್ಕೆ ಕಡಿಮೆ ಹಣ:ನೀರಾವರಿ ಜಮೀನನ್ನು ಒಣ ಬೇಸಾಯದ ವ್ಯಾಲ್ಯೂವೇಶನ್‌ನಲ್ಲಿ ಖರೀದಿ ಮಾಡಿಕೊಟ್ಟರೆ ಪ್ರತಿಶತ ೫೦ ರಷ್ಟು ಹಣ ಕಡಿಮೆಯಾಗುತ್ತದೆ. ಉದಾಹರಣೆಗೆ ನೀರಾವರಿಗೆ ೬೦ ಸಾವಿರ ರೂಪಾಯಿ ವ್ಯಾಲ್ಯೂವೇಶನ್ ಆದರೆ ಒಣಬೇಸಾಯಕ್ಕೆ ೩೦ ಸಾವರಿ ವ್ಯಾಲ್ಯೂವೇಶನ್ ಆಗುತ್ತದೆ. ಇದರಿಂದಾಗಿ ಸರಕಾರದ ಖಜಾನೆಗೆ ಅರ್ಧದಷ್ಟೇ ಹಣ ಜಮಾ ಮಾಡಲಾಗುತ್ತದೆ. ರೈತರಿಂದ ಅಥವಾ ಸಾರ್ವಜನಿಕರಿಂದ ಪಡೆದ ಹೆಚ್ಚಿನ ಹಣ ನೇರವಾಗಿ ಉಪನೋಂದಣಾಧಿಕಾರಿಗಳ ಖಜಾನೆಗೆ ಸೇರುತ್ತದೆ.ಇದಕ್ಕೆ ಪುಷ್ಠಿ ಎಂಬಂತೆ ಪಡನೂರ ಗ್ರಾಮದ ಸರ್ವೇ ನಂಬರ ೧೭೧೧ ೩-೦೦ ಎಕರೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪಶ್ಚಿಮ ಬಂಗಾಳ, ಆಸ್ಸಾಂ, ಪಾಂಡೇಚೇರಿಯಲ್ಲಿ ಭಾರತೀಯ ಜನತಾ ಪಕ್ಷ ಭರ್ಜರಿ ಗೆಲುವಿನ ನಗೆ ಬೀರಿರುವ ಹಿನ್ನೆಲೆಯಲ್ಲಿ ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.ವಿಜಯಪುರ ಗಾಂಧಿವೃತ್ತದ ಎದುರು ಜಮಾಯಿಸಿದ ನೂರಾರು ಕಾರ್ಯಕರ್ತರು ಪಟಾಕಿ ಸಿಡಿಸಿ ಪರಸ್ಪರ ಸಿಹಿ ತಿನಿಸಿ ಬಿಜೆಪಿ ಪಕ್ಷದ ಪರವಾಗಿ ಜಯ ಘೋಷಗಳನ್ನು ಮೊಳಗಿಸಿ ಸಂಭ್ರಮಿಸಿದರು.ಈ ವೇಳೆ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಮಾತನಾಡಿ, ಪಶ್ಚಿಮ ಬಂಗಾಳ, ಪುದಚೇರಿ, ಆಸ್ಸಾಂನಲ್ಲಿ ಭರ್ಜರಿ ಗೆಲುವನ್ನು ಬಿಜೆಪಿ ದಾಖಲಿಸಿದೆ, ಜನತೆ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅಪಾರ ಒಲವು ಹೊಂದಿದ್ದಾರೆ ಎಂಬುದಕ್ಕೆ ಸಾಕ್ಷಿ, ಅನೇಕ ವರುಷಗಳಿಂದ ಅಧಿಕಾರದಲ್ಲಿದ್ದ ತೃಣಮೂಲ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅರಳಿದೆ, ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಹಾಗೂ ಮಮತಾ ಬ್ಯಾನರ್ಜಿ ಅವರ ಕಾರ್ಯವೈಖರಿಯಿಂದ ಬೇಸತ್ತಿದ್ದ ಬಂಗಾಳದ ಜನತೆ ನಿರೀಕ್ಷೆಯಂತೆ ಬಿಜೆಪಿಗೆ ಬೆಂಬಲಿಸಿದ್ದಾರೆ, ಈಗ ಅಲ್ಲಿ ಅಭಿವೃದ್ಧಿ ಪರ್ವ ಆರಂಭಾಗಲಿದೆ ಎಂದರು.ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಮಾತನಾಡಿ, ಮಮತಾ ಬ್ಯಾನರ್ಜಿ ಅಕ್ರಮ…
ದಾವಣಗೆರೆ ದಕ್ಷಿಣದಲ್ಲಿ ಸಮರ್ಥ್ ಶಾಮನೂರ ಹಾಗೂ ಬಾಗಲಕೋಟೆಯಲ್ಲಿ ಉಮೇಶ್ ಮೇಟಿ ಗೆ ವಿಜಯಮಾಲೆ | ಬಿಜೆಪಿಗೆ ಮುಖಭಂಗ ಉದಯರಶ್ಮಿ ದಿನಪತ್ರಿಕೆ ದಾವಣಗೆರೆ: ಐದು ರಾಜ್ಯಗಳ ಚುನಾವಣೆ ಫಲಿತಾಂಶದೊಂದಿಗೆ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಆಡಳಿತರೂಢ ಕಾಂಗ್ರೆಸ್ ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದೆ.ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ, ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಶಾಮನೂರು ಕೊನೆಗೂ ಪ್ರಯಾಸದ ಗೆಲುವು ದಾಖಲಿಸಿದ್ದಾರೆ.ತೀವ್ರ ಕುತೂಹಲ ಕೆರಳಿಸಿದ್ದ ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಅವರ ವಿರುದ್ಧ 5708 ಮತಗಳ ಅಂತರದಿಂದ ಗೆದ್ದಿದ್ದು, 20ನೇ ಸುತ್ತಿನ ಎಣಿಕೆ ಬಳಿಕ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಬೆಂಬಲಿಗರು ವಿಜಯೋತ್ಸವ ಆಚರಿಸಿದರು.ಬಾಗಲಕೋಟೆಯಲ್ಲಿ ಹೆಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ…
