Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಆರು ತಿಂಗಳಲ್ಲಿ ಬಬಲೇಶ್ವರ ಮತಕ್ಷೇತ್ರದ ಎಲ್ಲ ಸರಕಾರಿ ಶಾಲೆಗಳಿಗೆ ಸಿ.ಎಸ್.ಆರ್ ಅನುದಾನದಡಿ ಕ್ರೀಡಾ ಸಲಕರಣೆ ಸೌಲಭ್ಯ ಸಿಗಲಿವೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.ಅವರು ರವಿವಾರ ಮುಸ್ಸಂಜೆ ಬಬಲೇಶ್ವರ ತಾಲೂಕಿನ ಮದಗುಣಕಿ ಬಳಿ ಲೋಕೋಪಯೋಗಿ ಇಲಾಖೆಯ ವತಿಯಿಂದ ರೂ. 150 ಲಕ್ಷ ವೆಚ್ಚದ ಶಿವಣ್ಣವರ ವಸ್ತಿಯಿಂದ ಕೊಡಬಾಗಿವರೆಗಿನ ರಸ್ತೆ ಕಾಮಗಾರಿ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ರೂ. 50 ಲಕ್ಷ ವೆಚ್ಷದ ಸಿಸಿ ರಸ್ತೆಗೆ ಭೂಮಿಪೂಜೆ ಹಾಗೈ ಕೆ.ಎಸ್.ಐ.ಐ.ಡಿ.ಸಿ ಸಿ.ಎಸ್.ಆರ್ ಅನುದಾನದಲ್ಲಿ ಅಂದಾಜು ರೂ. 60 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಶಾಲಾ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.ಬಬಲೇಶ್ವರ ಮತಕ್ಷೇತ್ರದಲ್ಲಿ ಸಿಎಸ್ಆರ್ ಅನುದಾನದಡಿ ಈಗಾಗಲೇ 100 ಸರಕಾರಿ ಶಾಲೆಗಳಿಗೆ ಕ್ರೀಡಾ ಸಲಕರಣೆ ನೀಡಲಾಗಿದೆ. ಬಾಕಿ 100 ಸರಕಾರಿ ಶಾಲೆಗಳಿಗೆ ಆರು ತಿಂಗಳೊಳಗೆ ಕ್ರೀಡಾ ಸಲಕರಣೆ ಒದಗಿಸಲಾಗುವುದು. ಅಷ್ಟೇ ಅಲ್ಲ,…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಮೇ 8ರಂದು ವಿಜಯಪುರದಲ್ಲಿ ನಡೆಯಲಿರುವ ರಾಜ್ಯಮಟ್ಟದ 4ನೇ ಬೃಹತ್ ರೈತ ಜಾಗೃತಿ ಸಮಾವೇಶಕ್ಕೆ ಕೊಲ್ಹಾರ ತಾಲೂಕಿನಿಂದ ಸಾವಿರಾರು ಸಂಖ್ಯೆಯಲ್ಲಿ ರೈತರು, ಯುವಕರು ಹಾಗೂ ಮಹಿಳೆಯರು ಭಾಗವಹಿಸಬೇಕೆಂದು ರಾಜ್ಯಾಧ್ಯಕ್ಷ ಚೂನಪ್ಪ ಪೂಜೇರಿ ಕರೆ ನೀಡಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಬಹುದಿನಗಳ ಬೇಡಿಕೆಯಾದ ಆಲಮಟ್ಟಿ ಜಲಾಶಯದ ಎತ್ತರವನ್ನು 524.256 ಮೀಟರ್‌ಗೆ ಏರಿಸುವ ಕುರಿತು ಹಲವು ವರ್ಷಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರ ಇದುವರೆಗೆ ಯಾವುದೇ ಕಾರ್ಯರೂಪಕ್ಕೆ ತಂದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.ಇದಲ್ಲದೆ ಈರುಳ್ಳಿ, ಕಬ್ಬು ಸೇರಿದಂತೆ ವಿವಿಧ ಬೆಳೆಗಾರರ ಸಮಸ್ಯೆಗಳು, ರೈತ ಮಕ್ಕಳ ನಿರುದ್ಯೋಗ ಸಮಸ್ಯೆಗಳನ್ನು ಸಮಾವೇಶದಲ್ಲಿ ಚರ್ಚಿಸಲಾಗುವುದು ಎಂದು ಹೇಳಿದರು. ಕೊಲ್ಹಾರ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬೆಳೆದರೂ ರೈತರಿಗೆ ಸೂಕ್ತ ಬೆಲೆ ಸಿಗುತ್ತಿಲ್ಲ. ಎಕರೆಗೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆದರೂ, ಮಾರುಕಟ್ಟೆಯಲ್ಲಿ ಕಡಿಮೆ ದರಕ್ಕೆ ಮಾರಾಟವಾಗುತ್ತಿರುವುದು ರೈತರ ಸಂಕಷ್ಟಕ್ಕೆ ಕಾರಣವಾಗಿದೆ.…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಪಟ್ಟಣದಲ್ಲಿ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ, ದೇವಸ್ಥಾನದ ಮುಂಭಾಗದಲ್ಲಿ ಬೃಹತ್ ಕೃಷಿ ಮೇಳವನ್ನು ಎಂ.ಎಸ್. ಬೆಳ್ಳುಬ್ಬಿ ಅವರ ನೇತೃತ್ವದಲ್ಲಿ ಆಯೋಜಿಸಲಾಗಿದೆ.ಈ ಸಂದರ್ಭದಲ್ಲಿ ಮಂಗಳವಾರ ಬೆಳಗ್ಗೆ 11 ಗಂಟೆಗೆ ಮಹಾಲಿಂಗಪುರದ ರೋಹಿಣಿ ಬಯೋಟೆಕ್ ಸಮೂಹ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷರಾದ ಡಾ.ಮಲ್ಲಪ್ಪ ಕಟ್ಟಿ ಅವರು ಕಬ್ಬಿನಲ್ಲಿ ಪ್ರತಿ ಎಕರೆಗೆ 100 ಟನ್ ಇಳುವರಿ ಪಡೆಯುವುದು ಹೇಗೆ ಎಂಬ ವಿಷಯದ ಕುರಿತು ತಾಂತ್ರಿಕ ಕಾರ್ಯಗಾರ ಹಾಗೂ ವಿಚಾರ ಸಂಕಿರಣ ನಡೆಸಲಿದ್ದಾರೆ.ಕಾರ್ಯಕ್ರಮದಲ್ಲಿ ರೈತರಿಗೆ ಆಧುನಿಕ ಕೃಷಿ ತಂತ್ರಜ್ಞಾನ, ಸುಧಾರಿತ ಬೀಜ, ಗೊಬ್ಬರ ನಿರ್ವಹಣೆ ಹಾಗೂ ಉತ್ಪಾದನೆ ಹೆಚ್ಚಿಸುವ ವಿಧಾನಗಳ ಬಗ್ಗೆ ಮಾಹಿತಿ ನೀಡಲಾಗುವುದು. ಆದ್ದರಿಂದ ರೈತ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನ ಪಡೆಯುವಂತೆ ಸಮಿತಿಯವರು ಮನವಿ ಮಾಡಿದ್ದಾರೆ.
ಗುಬ್ಬೇವಾಡ ಗ್ರಾಮದಲ್ಲಿ ನೂತನ ವಿದ್ಯುತ್ ವಿತರಣಾ ಕೇಂದ್ರಕ್ಕೆ ಚಾಲನೆ ನೀಡಿದ ಶಾಸಕ ಅಶೋಕ ಮನಗೂಳಿ ಆಶಯ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಮೂಲ ಸೌಕರ್ಯದಿಂದ ವಂಚಿತವಾದ ಗುಬ್ಬೇವಾಡ ಗ್ರಾಮ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸತತ ಎರಡು ವರ್ಷಗಳ ಪ್ರಯತ್ನದಿಂದ ನೂತನ ವಿದ್ಯುತ್ ಕೇಂದ್ರ ನಿರ್ಮಾಣ ಮಾಡಿದ್ದು ಸಂತಸ ತಂದಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಸಿಂದಗಿ ತಾಲೂಕಿನ ಗುಬ್ಬೇವಾಡ ಗ್ರಾಮದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ವತಿಯಿಂದ ಗುಬ್ಬೇವಾಡ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾದ ೧*೧೦ ಎಂ.ವ್ಹಿ.ಎ, ೧೧೦/೧೧ ಕೆವ್ಹಿ ವಿದ್ಯುತ್ ವಿತರಣಾ ಕೇಂದ್ರಕ್ಕೆ ಚಾಲನೆ ಹಾಗೂ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಭಾಗದ ರೈತರ ಹೋರಾಟದ ಫಲವಾಗಿ ಇಂದು ಈ ನೂತನ ವಿದ್ಯುತ್ ಕೇಂದ್ರ ತಲೆ ಎತ್ತಿ ನಿಂತಿದೆ. ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆಯನ್ನು ಹೊಂದಿದ್ದೇನೆ. ೫ ಗ್ಯಾರಂಟಿ ಯೋಜನೆಗಳನ್ನು ದಲ್ಲಾಳಿಗಳು ಇಲ್ಲದೇ ಜನರಿಗೆ ಸರಕಾರ ತಲುಪಿಸುತ್ತಿದೆ. ಸಮಸ್ಯೆಗೆ ಮೂಲ ಪರಿಹಾರಕ್ಕೆ ತಾಳ್ಮೆ ಮುಖ್ಯ. ಈ ವರ್ಷ…
ಕರ್ನಾಟಕ ಮಾಹಿತಿ ಹಕ್ಕು ಆಯೋಗದ ಆಯುಕ್ತ ರುದ್ರಣ್ಣ ಹರ್ತಿಕೋಟೆ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಾಹಿತಿ ಹಕ್ಕು ಕಾಯ್ದೆ ಸರ್ಕಾರದ ಆಡಳಿತ ವ್ಯವಸ್ಥೆಯಲ್ಲಿ ಜನಪರ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಭದ್ರ ಬುನಾದಿಯಾಗಿದ್ದು, ಇಂತಹ ಜನಪರವಾಗಿರುವ ಈ ಕಾಯ್ದೆಯನ್ನು ಪ್ರತಿಯೊಬ್ಬ ಅಧಿಕಾರಿಗಳು ಅಧ್ಯಯನ ಮಾಡಿಕೊಂಡು ಸರಾಗ ಆಡಳಿತಕ್ಕೆ ಕೈಜೋಡಿಸಬೇಕು ಎಂದು ಕರ್ನಾಟಕ ಮಾಹಿತಿ ಹಕ್ಕು ಆಯೋಗದ ಆಯುಕ್ತ ರುದ್ರಣ್ಣ ಹರ್ತಿಕೋಟೆ ಹೇಳಿದರು.ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಮಾಹಿತಿ ಹಕ್ಕು ಕಾಯ್ದೆ ಕುರಿತು ಅರಿವು ಮೂಡಿಸುವ ವಿಶೇಷ ತರಬೇತಿ ಕಾರ್ಯಾಗಾರ ಮತ್ತು ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.ಮಾಹಿತಿ ಹಕ್ಕಿನಡಿ ಅರ್ಜಿದಾರ ಮಾಹಿತಿ ಕೋರಿ ಅರ್ಜಿ ಸಲ್ಲಿಸಿದರೆ, ೩೦ ದಿನಗಳೊಳಗಾಗಿ ಉತ್ತರ ಕೊಡಬೇಕು. ಅರ್ಜಿದಾರ ಕೋರಿದ ಮಾಹಿತಿ ನೀಡಲು ಯಾವುದೇ ಕಾರಣಕ್ಕೂ ಹಿಂಜರಿಯಬೇಡಿ. ಒಂದು ವೇಳೆ ನೀವು ಮಾಹಿತಿ ನೀಡಲು ಹಿಂಜರಿದರೆ ಅದು ಅಪಾರ್ಥಕ್ಕೆ ಕಾರಣವಾಗಲಿದೆ. ಹಾಗಾಗಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದೇಶದಲ್ಲಿ ದ್ವಿದಳ ಧಾನ್ಯಗಳಲ್ಲಿ ಮೌಲ್ಯವರ್ಧನೆ ಉತ್ತೇಜಿಸಲು ಹಾಗೂ ರೈತರ ಆದಾಯ ಹೆಚ್ಚಿಸಲು ಸಂಸ್ಕರಣಾ ಘಟಕವನ್ನು ಅನುಷ್ಠಾನಗೊಳಿಸಲು ಅರ್ಹರಿಂದ ಕೃಷಿ ಇಲಾಖೆ ಅರ್ಜಿ ಆಹ್ವಾನಿಸಿದೆ.ರೈತ ಉತ್ಪಾದಕ ಸಂಸ್ಥೆಗಳು. ಕ್ಲಸ್ಟರ್ ಮಟ್ಟದ ಒಕ್ಕೂಟಗಳು ಪ್ರಾಥಮಿಕ ಕೃಷಿ ಪತ್ತಿನ ಸಂಘಗಳು (PಂಅS) ಯಾವುದೇ ನೋಂದಾಯಿತ ಸಂಸ್ಥೆಗಳು ಹಾಗೂ ವೈಯಕ್ತಿಕ ಫಲಾನುಭವಿಗಳು ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.ವೈಯಕ್ತಿಕ ಫಲಾನುಭವಿಯು ಅರ್ಹ ಫಲಾನುಭವಿಯಾಗಲು ಕನಿಷ್ಠ ೨೧ ವರ್ಷದವರಾಗಿರಬೇಕು. ಪ್ರತಿ ಕುಟುಂಬದಿಂದ (ಪತಿ/ಪತ್ನಿ ಹಾಗೂ ಅವಿವಾಹಿತ ಮಕ್ಕಳು) ಒಂದು ಅರ್ಹ ಫಲಾನುಭವಿಗೆ ಮಾತ್ರ ಸಹಾಯಧನ ಪಡೆಯಲು ಅವಕಾಶವಿದೆ. ಯೋಜನಾ ವೆಚ್ಚದ ಶೇ ೧೫ ರಷ್ಟು ಸ್ವಂತ ಬಂಡವಾಳ ಹೂಡಿಕೆ ಮಾಡುವ ಸಾಮರ್ಥ್ಯ ಹೊಂದಿರಬೇಕು.ಗುಂಪು ಫಲಾನುಭವಿಗಳು ಅರ್ಹರಾಗಲು ಸಂಸ್ಥೆಗಳು ಕಡ್ಡಾಯವಾಗಿ ನೋಂದಣಿಯಾಗಿ,ಕನಿಷ್ಠ ೨ ವರ್ಷಕಾರ್ಯ ನಿರ್ವಹಿಸಿರಬೇಕು. ಯೋಜನಾ ವೆಚ್ಚದ ಶೇ ೧೫ ರಷ್ಟು ಸ್ವಂತ ಬಂಡವಾಳ ಹೂಡಿಕೆ ಮಾಡುವ ಸಾಮರ್ಥ್ಯ ಹೊಂದಿರಬೇಕು. ಪರಿಶಿಷ್ಟ ಜಾತಿ, ಪಂಗಡ, ಮಹಿಳಾ ಫಲಾನುಭವಿಗಳಿಗೆ ಆಧ್ಯತೆ ನೀಡಲಾಗುವದು. ದ್ವಿದಳ ಧಾನ್ಯಗಳಲ್ಲಿ ಆತ್ಮನಿರ್ಭರತಾ…
ಬಿಎಎಸ್ ಇಂಟರ್ ನ್ಯಾಷನಲ್ ಶಾಲೆಯ ಆಡಳಿತಾಧಿಕಾರಿ ಪ್ರಭುಗೌಡ ಬಿರಾದಾರ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಉದ್ಯೋಗಕ್ಕಾಗಿ ಕಾಯುತ್ತಿರುವ ಯುವಕ ಯುವತಿಯರಿಗೆ ಸುವರ್ಣಾವಕಾಶ ಒದಗಿ ಬಂದಿದ್ದು, ಮೇ ೩ ರಂದು ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿಎಎಸ್ ಇಂಟರ್ ನ್ಯಾಷನಲ್ ಶಾಲಾ ಆವರಣದಲ್ಲಿ, ಬೃಹತ್ ಉದ್ಯೋಗ ಮೇಳವನ್ನು ಏರ್ಪಡಿಸಲಾಗಿದೆ. ಆಸಕ್ತರು ಈ ಅವಕಾಶದ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಲೆಯ ಆಡಳಿತಾಧಿಕಾರಿ ಪ್ರಭುಗೌಡ ಬಿರಾದಾರ ಹೇಳಿದರು.ಈ ಕುರಿತು ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಿಎಎಸ್ ಸ್ಟಾಫಿಂಗ್ ಸೊಲ್ಯೂಶನ್ಸ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ನಡೆಯುತ್ತಿರುವ ಈ ಉದ್ಯೋಗ ಮೇಳದಲ್ಲಿ ಪುರುಷರು ಹಾಗೂ ಮಹಿಳೆಯರಿಗೆ ಸಮಾನ ಅವಕಾಶ ನೀಡಲಾಗುತ್ತಿದೆ. ಅಸೆಂಬ್ಲಿ ವರ್ಕರ್ಸ್, ಪಿಕರ್ಸ್ & ಪ್ಯಾಕರ್ಸ್, ಹೆಲ್ಪರ್ಸ್ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಮತ್ತು ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಭಾಗವಹಿಸಬಹುದು.ಬೆಂಗಳೂರು, ಕೋಲಾರ ಮತ್ತು ದೊಡ್ಡಬಳ್ಳಾಪುರ ಪ್ರದೇಶಗಳಲ್ಲಿ ಉದ್ಯೋಗ ಅವಕಾಶಗಳು ಲಭ್ಯವಿದ್ದು, ಆಯ್ಕೆಯಾದವರಿಗೆ ತಕ್ಷಣವೇ ನೇಮಕಾತಿ ಮಾಡಿಕೊಂಡು, ಪ್ರತಿ ತಿಂಗಳು ₹೧೬,೫೦೦…
ದೇವರಹಿಪ್ಪರಗಿಯಲ್ಲಿ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡ ಮತ್ತು ಪಟ್ಟಣ ಪಂಚಾಯತಿ ನೂತನ ಕಟ್ಟಡ ಲೋಕಾರ್ಪಣೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಳೆದ ಮೂರು ವರ್ಷಗಳಲ್ಲಿ ಮುಖ್ಯಮಂತ್ರಿ ಸಿದ್ರಾಮಯ್ಯ ಅವರ ನೇತೃತ್ವದ ನಮ್ಮ ಸರ್ಕಾರ ಎಲ್ಲ ವರ್ಗದ ಜನರ ಉಜ್ವಲ ಭವಿತವ್ಯದ ಆಶಾದೀಪ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಜನಸಾಮಾನ್ಯರ ಬದುಕಿಗೆ ನೆರವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಣಕಾಸು ತಜ್ಞರಾಗಿದ್ದಾರೆ. ಎಲ್ಲ ವರ್ಗದವರ ಅಭಿವೃದ್ಧಿಗಾಗಿ ಯೋಜನೆಗಳನ್ನು ರೂಪಿಸಿದೆ. ಆರೋಗ್ಯ, ಶಿಕ್ಷಣ ಸೇರಿದಂತೆ ವಿವಿಧ ಎಲ್ಲ ಆಯಾಮಗಳಲ್ಲೂ ನಮ್ಮ ಸರ್ಕಾರ ಅಭಿವೃದ್ಧಿಗೆ ಬದ್ಧವಾಗಿದೆ ಎಂದು ಬೃಹತ್ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಬಿ. ಪಾಟೀಲ ಅವರು ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ನಗರಾಭಿವೃದ್ಧಿಕೋಶ, ಇಂಜನೀಯರಿಂಗ್ ಘಟಕ ಬೆಂಗಳೂರು ಹಾಗೂ ಪೌರಾಡಳಿತ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ಶನಿವಾರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೂವತ್ತು ಹಾಸಿಗೆಗಳ ಸಮುದಾಯ ಆರೋಗ್ಯ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನೀಟ್ ಪರೀಕ್ಷೆಯು ಮೇ.೦೩ರಂದು ವಿಜಯಪುರ ನಗರದ ಒಟ್ಟು ೧೭ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲಿನ ೨೦೦ ಮೀ.ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಆದೇಶ ಹೊರಡಿಸಿದ್ದಾರೆ.ಪರೀಕ್ಷಾ ಕೇಂದ್ರಗಳ ೨೦೦ ಮೀ ವ್ಯಾಪ್ತಿಯಯಲ್ಲಿನ ಪರೀಕ್ಷಾ ಕೇಂದ್ರದ ಸಮೀಪದಲ್ಲಿರುವ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್ ಗಳು, ಇಂಟರನೆಟ್, ಸೈಬರ್ ಕೆಫೆಗಳು ಮತ್ತು ಕೋಚಿಂಗ್ ಕೇಂದ್ರಗಳು ಬೆಳಿಗ್ಗೆ ೯:೩೦ ಗಂಟೆಯಿಂದ ಪರೀಕ್ಷೆ ಮುಕ್ತಾಯವಾಗುವವರೆಗೆ ತೆರೆಯದಂತೆ ಆದೇಶಿಸಲಾಗಿದೆ.ಪರೀಕ್ಷೆಯಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿಗಳು ಮತ್ತು ಇತರರರು ಮೊಬೈಲ್ ತರುವುದನ್ನು ಹಾಗೂ ಬಳಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.
