Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಅರಣ್ಯ ಇಲಾಖೆಯ ಕಾರ್ಮಿಕರಿಗೆ ಭವಿಷ್ಯ ನಿಧಿ, ವೈದ್ಯಕೀಯ ವಿಮೆ ಸೇರಿದಂತೆ ನಾನಾ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ವಲಯ ಅರಣ್ಯಾಧಿಕಾರಿ ಮಹೇಶ ಪಾಟೀಲ ಭರವಸೆ ನೀಡಿದರು.ಆಲಮಟ್ಟಿಯ ಡ್ಯಾಂ ನರ್ಸರಿಯಲ್ಲಿ ಶುಕ್ರವಾರ ನಡೆದ ಕಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.”ನೂರಾರು ಅರಣ್ಯ ದಿನಗೂಲಿ ಕಾರ್ಮಿಕರು ತಮ್ಮ ಜೀವನದ ಬಹುಪಾಲು ಆಲಮಟ್ಟಿಯಲ್ಲಿಯೇ ಕಳೆದಿದ್ದಾರೆ. ಕಾರ್ಖಾನೆ, ಗಣಿ, ವಿದ್ಯುತ್ ಕ್ಷೇತ್ರಗಳಲ್ಲಿ ಕಾರ್ಮಿಕರಿಗೆ ಹೆಚ್ಚಿನ ಅಪಾಯವಿರುತ್ತದೆ. ಆದರೆ ನೀವು ನಿಸರ್ಗದೊಂದಿಗೆ ಕೆಲಸ ಮಾಡುತ್ತಿದ್ದು, ಅಪಾಯ ಕಡಿಮೆ, ಶ್ರಮ ಹೆಚ್ಚು” ಎಂದರು.ಕಾರ್ಮಿಕ ಮುಖಂಡ ಹಾಗೂ ಅರಣ್ಯ ನೌಕರರ ಸಂಘದ ಜಿಲ್ಲಾಧ್ಯಕ್ಷ ವಿರೂಪಾಕ್ಷಿ ಮಾದರ ಮಾತನಾಡಿ, “೧೯೯೫ಕ್ಕಿಂತ ಮುಂಚೆ ಆಲಮಟ್ಟಿಯಲ್ಲಿ ಗಿಡಗಳು, ಹಸಿರು ಅಪರೂಪವಾಗಿತ್ತು. ಈಗ ಸುಮಾರು ೧೫೦ಕ್ಕೂ ಹೆಚ್ಚು ವಿವಿಧ ಜಾತಿಯ ಸಾವಿರಾರು ಗಿಡಗಳನ್ನು ಆಲಮಟ್ಟಿಯಲ್ಲಿ ಕಾಣುತ್ತೇವೆ. ವಿಜಯಪುರ ಜಿಲ್ಲೆಯಾದ್ಯಂತ ಹಸಿರೀಕರಣವಾಗಿದೆ. ಇದಕ್ಕೆಲ್ಲಾ ಕಾರಣ ಕಾರ್ಮಿಕರ ಅವಿರತ ಶ್ರಮ” ಎಂದರು.ಸರ್ಕಾರ ನಿಗದಿಪಡಿಸಿದ ದಿನಕ್ಕೆ ೬೨೬ ರೂ. ವೇತನ ನೀಡಬೇಕು, ವಾರಕ್ಕೊಮ್ಮೆ ವೇತನ ಸಹಿತ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ; ಗ್ರಾಮೀಣ ಜನತೆ ಕಾನೂನಿನ ಜ್ಞಾನ ಹಾಗೂ ಅರಿವು ಹೊಂದುವುದು ಇಂದು ಅಗತ್ಯವಾಗಿದೆ ಎಂದು ಹಿರಿಯ ನ್ಯಾಯಾಧೀಶ ನಾಗೇಶ ಮೋಗೆರ್ ಹೇಳಿದರು.ತಾಲ್ಲೂಕಿನ ಚಿಕ್ಕರೂಗಿ ಗ್ರಾಮದಲ್ಲಿ ಸಿಂದಗಿ ತಾಲ್ಲೂಕು ವಕೀಲರ ಸಂಘದಡಿ ಗುರುವಾರ ಜರುಗಿದ ಕಾನೂನು ಅರಿವು, ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಪ್ರತಿಯೊಬ್ಬರು ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಕೊಡಿಸಬೇಕು. ಅಪರಾಧ ಚಟುವಟಿಕೆಗಳಿಂದ ದೂರವಿರಬೇಕು. ಇಂದು ವರದಕ್ಷಿಣೆ ನೀಡುವುದು ಹಾಗೂ ತೆಗೆದುಕೊಳ್ಳುವುದು ಎರಡು ಅಪರಾಧಗಳೆನ್ನಿಸಿವೆ. ಆದ್ದರಿಂದ ಗ್ರಾಮವನ್ನು ವರದಕ್ಷಿಣೆಮುಕ್ತವಾಗಿಸಲು ತಾವೆಲ್ಲರೂ ಮುಂದಾಗಬೇಕು ಎಂದು ಸಲಹೆ ನೀಡಿದರುನ್ಯಾಯಾಧೀಶೆ ಪಂಕಜಾ ಕೊಣ್ಣೂರ ಮಾತನಾಡಿ, ಚಿಕ್ಕ ಮಕ್ಕಳಿಗೆ ವಾಹನ ಚಾಲನೆ ಮಾಡಲು ಕೊಡಬೇಡಿ. ಒಂದು ವೇಳೆ ನೀಡಿದರೆ ಅದಕ್ಕೆ ನ್ಯಾಯಾಲಯದಿಂದ ದಂಡ ವಿಧಿಸಲಾಗುತ್ತದೆ. ಮತ್ತು ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಬೇಡಿ ಎಂದು ಕಾನೂನಾತ್ಮಕ ವಿಚಾರಗಳನ್ನು ತಿಳಿಸಿದರು.ಸಿಂದಗಿ ವಕೀಲರ ಸಂಘದ ಅಧ್ಯಕ್ಷ ಎಸ್.ಬಿ.ಪಾಟೀಲ ಹಾಗೂ ಸರ್ಕಾರಿ ವಕೀಲ ಬಿ.ಜಿ.ನೆಲ್ಲಗಿ ಮಾತನಾಡಿ, ವರದಕ್ಷಿಣೆ ಮತ್ತು ಭೂಮಿಯ ಸಂರಕ್ಷಣೆ ಬಗ್ಗೆ ವಿಚಾರಗಳನ್ನು ತಿಳಿಹೇಳಿದರು.ವಕೀಲ ಶ್ರೀಶೈಲ ಮುಳಜಿ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಇಲಾಖೆಯಲ್ಲಿ ಸೇವಾತತ್ಪರತೆಯ ಮೂಲಕ ನಿಷ್ಕಳಂಕ ಸೇವೆ ಸಲ್ಲಿಸುವುದು ಇತರರಿಗೆ ಮಾದರಿಯಾಗಿದೆ ಎಂದು ಜಿಲ್ಲಾ ಅಂಚೆ ಅಧಿಕ್ಷಕ ಮಹಾಂತೇಶ ತೊಗರಿ ಹೇಳಿದರು.ಪಟ್ಟಣದ ಅಂಚೆ ಕಚೇರಿಯಲ್ಲಿ ಗುರುವಾರ ಸೇವಾನಿವೃತ್ತರಾದ ಡಾಕ್‌ಸೇವಕ ವೆಂಕಟೇಶ ಕುಲಕರ್ಣಿ ಅವರ ಬೀಳ್ಕೊಡುವ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಪಟ್ಟಣದಲ್ಲಿ ತಮ್ಮ ಸತತ ೩೫ ವರ್ಷಗಳ ಕಾಲ ನಿಷ್ಕಳಂಕ ಸೇವೆಯ ಮೂಲಕ ಮನೆಮಾತಾಗಿರುವ ವೆಂಕಟೇಶ ಕುಲಕರ್ಣಿ ಅವರ ನಿವೃತ್ತಿ ಜೀವನ ಸುಖಮಯವಾಗಿರಲಿ ಎಂದರು.ಸನ್ಮಾನಿತರ ಪರ ಸುಪ್ರೀಯಾ ಕುಲಕರ್ಣಿ ಮಾತನಾಡಿ, ತಂದೆಯ ಸೇವೆಯ ಸಾರ್ಥಕತೆಗೆ ಇಲಾಖೆ ಪರವಾಗಿ ಸಂದ ಗೌರವಕ್ಕೆ ಅಭಿನಂದನೆ ಸಲ್ಲಿಸಿದರು.ಅಂಚೆ ನಿರೀಕ್ಷಕ ಕರಣ ಎಂ.ಜಿ. ಶಾರದಾ ಹೆಡಜೋಳ, ಮನೋಹರ ಪೋಳ, ಅಮರೇಶ ಕಲಶೆಟ್ಟಿ, ಬಸಯ್ಯ ಸ್ಥಾವರಮಠ, ಭಾಗ್ಯ ಪುರವಂತರಮಠ, ಕೀರ್ತಿ ಪಾಟೀಲ, ಸುವರ್ಣ ಕಲಾಲ್, ಸುನಂದಾ ಬಿರಾದಾರ, ಪ್ರವೀಣ ಕುಲಕರ್ಣಿ, ಬಿ.ಟಿ.ಮಾದರ, ರಾಮನಗೌಡ ಬಿರಾದಾರ ಇದ್ದರು.

Read More

ಸಿಂದಗಿಯಲ್ಲಿ ಡಾ.ಚನ್ನಪ್ಪ ಕಟ್ಟಿ ಅಭಿನಂದನ ಸಮಾರಂಭ | ನೆಲೆ ಅಭಿನಂದನಾ ಗ್ರಂಥ ಬಿಡುಗಡೆ | ವಿಚಾರ ಸಂಕಿರಣ | ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅಭಿಮತ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಆಂಗ್ಲ ಪ್ರಾಧ್ಯಾಪಕರರಾಗಿ ಕನ್ನಡ ಸಾಹಿತ್ಯ ಲೋಕಕ್ಕೆ ಡಾ.ಚನ್ನಪ್ಪ ಕಟ್ಟಿ ಅವರ ಕೊಡುಗೆ ಅನನ್ಯ. ಕಥೆ, ಕಾವ್ಯ, ಸಂಶೋಧನೆ, ಜೀವನ ಚರಿತ್ರೆ ಮತ್ತು ಅನುವಾದದ ಮೂಲಕ ಸಾಹಿತ್ಯದ ಕೃಷಿಯನ್ನು ಮಾಡಿ ಅಮೋಘ ಸಾಧನೆ ಮಾಡಿದ್ದಾರೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಹೇಳಿದರು.ನಗರದ ವಿಜಯಪುರ ರಸ್ತೆಯಲ್ಲಿರುವ ಮಾಂಗಲ್ಯ ಭವನದಲ್ಲಿ ಸಿಂದಗಿಯ ಡಾ.ಚನ್ನಪ್ಪ ಕಟ್ಟಿ ಅಭಿನಂದನ ಸಮಿತಿ ಹಮ್ಮಿಕೊಂಡ ಅಭಿನಂದನ ಸಮಾರಂಭ ನೆಲೆ ಅಭಿನಂದನಾ ಗ್ರಂಥ ಬಿಡುಗಡೆ ಹಾಗೂ ವಿಚಾರ ಸಂಕಿರಣ ಕಾರ್ಯಕ್ರಮದ ಮುಖ್ಯ ಅತಿಥಿ ಸ್ಥಾನ ವಹಿಸಿ ಅವರು ಮಾತನಾಡಿದರು.ಡಾ.ಚನ್ನಪ್ಪ ಕಟ್ಟಿ ಅವರ ಅವಿರತ ಪರಿಶ್ರಮದಿಂದಲೇ ಇಂದು ಅವರಿಗೆ ಕುವೆಂಪು ಭಾಷಾಭಾರತಿ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಒದಗಿ ಬಂದಿದ್ದು ಸಿಂದಗಿ ನೆಲೆಗೆ ಹೆಮ್ಮೆಯ ಗರಿ. ಒಟ್ಟಿನಲ್ಲಿ ಡಾ.ಚನ್ನಪ್ಪ ಕಟ್ಟಿ ಅವರ ಬದುಕು, ಬರಹ ಮತ್ತು…

Read More

ಆತಂಕಕೊಳಗಾದ ವಿದ್ಯಾರ್ಥಿನಿಯನ್ನು ಸಮಾಧಾನಪಡಿಸಿದ ಶಿಕ್ಷಕರು ಉದಯರಶ್ಮಿ ದಿನಪತ್ರಿಕೆ ತಿಕೋಟಾ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಇಂಗ್ಲೀಷ್ ವಿಷಯದಲ್ಲಿ ಕೇವಲ 06 ಅಂಕ ಪಡೆದು ಅನುತ್ತೀರ್ಣಳಾಗಿದ್ದ ತಾಲ್ಲೂಕಿನ ಬಿಜ್ಜರಗಿ ಗ್ರಾಮದ ಮಾಣಿಕೇಶ್ವರಿ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿ ಶ್ರೇಯಾ ಮಾದೇವ ಚೌಧರಿ ಉತ್ತರ ಪತ್ರಿಕೆಯ ಫೋಟೊ ಪ್ರತಿ ಪಡೆದಾಗ 64 ಅಂಕ ಪಡೆದಿರುವುದು ಬೆಳಕಿಗೆ ಬಂದಿದೆ.ಫಲಿತಾಂಶದ ನಂತರ ಅನುತ್ತಿರ್ಣಗೊಂಡ ಶ್ರೇಯಾ ಅಳುತ್ತಾ, ಊಟ, ನಿದ್ದೆ ಬಿಟ್ಟು ಚಿಂತೆಗೆ ಒಳಗಾಗಿದ್ದಳು. ಸಂಸ್ಥೆಯ ಅಧ್ಯಕ್ಷ ಚಿದಾನಂದ ಅವಟಿ ಹಾಗೂ ಸಹ ಶಿಕ್ಷಕರು ವಿಧ್ಯಾರ್ಥಿನಿ ಮನೆಗೆ ಭೇಟಿ ನೀಡಿ ದೈರ್ಯ ತುಂಬಿ ಉಳಿದ ಎಲ್ಲ ವಿಷಯಗಳ ಅಂಕಗಳನ್ನು ಫಲಿತಾಂಶದಲ್ಲಿ ವೀಕ್ಷಿಸಿದರು. ಪ್ರತಿಭಾನ್ವಿತ ವಿಧ್ಯಾರ್ಥಿನಿಯಾದ ಇವಳ ಉಳಿದೆಲ್ಲ ವಿಷಯಗಳ ಅಂಕಗಳು ಹೆಚ್ಚಿಗೆ ಬಂದಿರುವದನ್ನು ಗಮನಿಸಿದ ಅವಟಿಯವರು ಇಂಗ್ಲೀಷ್ ವಿಷಯದಲ್ಲಿ ಅನುತ್ತಿರ್ಣಗೊಳ್ಳಲು ಸಾಧ್ಯವೇ ಇಲ್ಲ ಎಂಬ ನಂಬಿಕೆಯಿಂದ ಉತ್ತರ ಪತ್ರಿಕೆಯ ಫೊಟೊ ಪ್ರತಿಗಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಗೆ(ಕೆಎಸ್‌ಇಎಬಿ) ಅರ್ಜಿ ಸಲ್ಲಿಸಿದರು.ಉತ್ತರ ಪತ್ರಿಕೆ ವಿದ್ಯಾರ್ಥಿಯ ಕೈಸೇರಿದಾಗ…

Read More

ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರಗತಿಯಲ್ಲಿರುವ ನೀರಾವರಿ ಯೋಜನೆಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.ಅವರು ಶುಕ್ರವಾರ ಬಬಲೇಶ್ವರ ತಾಲೂಕಿನ ತಿಗಣಿ ಬಿದರಿಯಲ್ಲಿ ಸಣ್ಣ ನೀರಾವರಿ ಮತ್ತು ಅಂತರ್ಜಲ‌ ಅಭಿವೃದ್ಧಿ ಇಲಾಖೆ ವತಿಯಿಂದ ಕಾಖಂಡಕಿ- ಮಮದಾಪುರ, ಬಬಲೇಶ್ವರ- ಯಕ್ಕುಂಡಿ, ಕಾಖಂಡಕಿ- ತೊನಶ್ಯಾಳ ಹಾಗೂ ತಿಗಣಿ ಬಿದರಿ ಹಳ್ಳಗಳಿಗೆ ಅಡ್ಡಲಾಗಿ ಸರಣಿ ಚೆಕ್ ಡ್ಯಾಂ ಮತ್ತು ರಿಚಾರ್ಜ್ ಶಾಫ್ಟ್ ಗಳ ನಿರ್ಮಾಣ ಮಾಡುವ ಮೂಲಕ ಅಂತರ್ಜಲ‌ ಅಭಿವೃದ್ಧಿ ಪಡಿಸುವ ಅಂದಾಜು ರೂ. 984 ಲಕ್ಷ ಮೌಲ್ಯದ ಕಾಮಗಾರಿಗೆ ಭೂಮಿ‌ ಪೂಜೆ ನೆರವೇರಿಸಿ ಅವರು ಮಾತನಾಡಿದರು.ನೀರು ಬಳಕೆದಾರರ ಸಂಘ ರಚಿಸುವ ಮೂಲಕ ನೀರು ಬಳಕೆಯಲ್ಲಿ ಶಿಸ್ತು ತರಲು ಕ್ರಮ ಕೈಗೊಳ್ಳಲಾಗುವುದು. ಇದರಿಂದ ಕಾಲುವೆಯ ಕೊನೆಯ ಭಾಗದವರೆಗೂ ನೀರು ತಲುಪಲು ಅನುಕೂಲವಾಗಲಿದೆ. ಇದರ ಜೊತೆಗೆ ಈಗ ಕೈಗೆತ್ತಿಕೊಳ್ಳಲಾಗಿರುವ…

Read More

ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್. ಎಸ್. ಬೋಸರಾಜು ಹೇಳಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ ಜಿಲ್ಲೆಯ ಹಳ್ಳಗಳಿಗೆ ನೀರು ತುಂಬಿಸುವ ಯೋಜನೆ ಸಣ್ಣ ನೀರಾವರಿ ಕ್ಷೇತ್ರದಲ್ಲಿ ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್. ಎಸ್. ಬೋಸರಾಜು ಹೇಳಿದ್ದಾರೆ.ಶುಕ್ರವಾರ ತಿಕೋಟಾ ತಾಲೂಕಿನ ಬರಟಗಿ ಗ್ರಾಮದಲ್ಲಿ ತೊರವಿ, ಭೂತನಾಳ, ಇಟ್ಟಂಗಿಹಾಳ, ವಿಠ್ಠಲವಾಡಿ, ಯತ್ನಾಳ, ಅರಕೇರಿ, ಸಿದ್ದಾಪೂರ, ಅರಕೇರಿ, ಜಾಲಗೇರಿ ಹಳ್ಳಗಳಿಗೆ ಅಡ್ಡಲಾಗಿ ಚೆಕ್ ಡ್ಯಾಂ ಮತ್ತು ರಿಚಾರ್ಜ್ ಶಾಫ್ಟ್ ಗಳನ್ನು ನಿರ್ಮಾಣ ಮಾಡುವ ಮೂಲಕ ಅಂತರ್ಜಲ ಅಭಿವೃದ್ಧಿ ಪಡಿಸುವ ಅಂದಾಜು ರೂ. 734.63 ಲಕ್ಷ ವೆಚ್ಚದ ಕಾಮಗಾರಿಗೆ ಭೂಮಿಪೂಜೆ ಹಾಗೂ 2025-26ನೇ ವರ್ಷದ ಬರಟಗಿ ತಾಂಡಾ-3(ಜಾಧವ ನಗರ)ದಲ್ಲಿ ರೂ.50 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಭೂಮಿಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಶಾಸಕರಾಗಿದ್ದಾಗ ಕೆರೆಗೆ ನೀರು ತುಂಬಿಸುವ ಯೋಜನೆ ರೂಪಿಸಿ ನೀರಾವರಿ ಸಚಿವರಾಗಿ ಆ ಯೋಜನೆಯನ್ನು ಸಮರ್ಪಕವಾಗಿ‌ ಜಾರಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯ: ಐ.ಸಿ.ಎಸ್.ಇ 10ನೇ ತರಗತಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದಲ್ಲಿ ಮೊದಲ ಮೂರು ರ‌್ಯಾಂಕ್ ಗಳಿಸುವ ಮೂಲಕ ಕೀರ್ತಿ ತಂದಿದ್ದಾರೆ.ಗುರುವಾರ ಫಲಿತಾಂಶ ಪ್ರಕಟವಾಗಿದ್ದು, ಶಾಲೆಯು ಶೇ.100 ರಷ್ಟು ಫಲಿತಾಂಶ ದಾಖಲಿಸಿದೆ.ಶಾಲೆಯ ವಿದ್ಯಾರ್ಥಿಗಳಾದ ಗೌರಿ ಪಾಟೀಲ ಮತ್ತು ಸೂಫಿಯಾನ್ ಕಂದಗಲ ತಲಾ ಶೇ. 93.20 ಅಂಕ ಗಳಿಸಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಆದೇ ರೀತಿ ‌ಪ್ರೇಕ್ಷಾ ಪಾಟೀಲ ಶೇ. 90.60 ಅಂಕ ಗಳಿಸಿ ದ್ವಿತೀಯ ಮತ್ತು ಮಲ್ಲಿಕಾರ್ಜುನ ಬಿರಾದಾರ ಶೇ. 89.80 ಅಂಕ ಗಳಿಸಿ ಜಿಲ್ಲೆಗೆ ತೃತೀಯ ಸ್ಥಾನ ಗಳಿಸಿದ್ದಾರೆ.ವಿದ್ಯಾರ್ಥಿಗಳ ಸಾಧನೆಗೆ ಬಿ‌.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಮತ್ತು ಸಚಿವ ಎಂ. ಬಿ. ಪಾಟೀಲ, ವಿಧಾನ ಪರಿಷತ ಶಾಸಕ ಮತ್ತು ಪ್ರಧಾನ ಕಾರ್ಯದರ್ಶಿ ಸುನೀಲಗೌಡ ಪಾಟೀಲ, ಶಾಲೆಯ ಕೋ- ಆರ್ಡಿನೇಟರ್ ಜಯಾ ಗಲಗಲಿ ಸಂತಸ ವ್ಯಕ್ತಪಡಿಸಿದ್ದು, ಅಭಿನಂದನೆ ಸಲ್ಲಿಸಿದ್ದಾರೆ.

Read More

ಉತ್ತರ ಕರ್ನಾಟಕದ ಜೀವನಾಡಿ ಕೃಷ್ಣೆಗೆ ಸಂಕಷ್ಟ | ನೀರಿನ ಮಟ್ಟ ಗಣನೀಯ ಕುಸಿತ ವರದಿ: ಸಿದ್ರಾಮ್ ಎಮ್ ಇಟ್ಟಿಜಮಖಂಡಿ: ಉತ್ತರ ಕರ್ನಾಟಕದ ಜೀವನಾಡಿ ಎಂದೇ ಕರೆಯಲ್ಪಡುವ ಕೃಷ್ಣಾ ನದಿ ಈ ಬಾರಿ ಬೇಸಿಗೆ ಆರಂಭದಲ್ಲೇ ಬರಿದಾಗುತ್ತಿರುವುದು ಆತಂಕಕಾರಿಯಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಹಾಯ್ದು ಹೋಗುವ ಈ ಪ್ರಮುಖ ನದಿ, ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳ ಸೇರಿದಂತೆ ಸುಮಾರು 111 ಗ್ರಾಮಗಳಿಗೆ ಜೀವನಾಡಿಯಾಗಿ ಕಾರ್ಯನಿರ್ವಹಿಸುತ್ತಿದೆ. ಆದರೆ ಈಗ ನೀರಿನ ಕೊರತೆಯಿಂದ ಜನಜೀವನ ಹಾಗೂ ಕೃಷಿ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಮಹಾರಾಷ್ಟ್ರದಲ್ಲಿ ಉಗಮಗೊಂಡು ಬಾಗಲಕೋಟೆ ಭಾಗದಲ್ಲಿ ಸಂಗಮವಾಗುವ ಕೃಷ್ಣಾ ನದಿ, ಈ ಭಾಗದ ಕೃಷಿ ಚಟುವಟಿಕೆಗಳಿಗೆ ಪ್ರಮುಖ ಆಧಾರವಾಗಿದೆ. ಹಿಪ್ಪರಗಿ ಗ್ರಾಮದಲ್ಲಿ ನದಿಗೆ ಅಡ್ಡವಾಗಿ ನಿರ್ಮಿಸಲಾದ ಹಿಪ್ಪರಗಿ ಬ್ಯಾರೇಜ್‌ನಲ್ಲಿ ಈ ಬಾರಿ ನೀರಿನ ಮಟ್ಟ ಗಣನೀಯವಾಗಿ ಕುಸಿದಿದೆ.ಜಮಖಂಡಿ ತಾಲೂಕಿನ ಕೃಷ್ಣೆ ನದಿ ತೀರದ ಸುತ್ತಮುತ್ತ ಗ್ರಾಮಗಳಾದ ಶಿರುಗುಪ್ಪಿ, ಮೈಗೂರು, ಆಲಬಾಳ, ಮುತ್ತೂರು, ಕಂಕನವಾಡಿ, ಕಡಕೋಳ ಶೂರಪಾಲಿ, ಜಂಬಗಿ,ಸನಾಳ , ಕುಂಬಾರಹಳ್ಳ, ಆಲಗೂರು, ಚಿಕ್ಕಪಡಸಲಗಿ, ಹಿರೇಪಡಸಲಗಿ, ಟಕ್ಕೋಡ,…

Read More