Author: editor.udayarashmi@gmail.com

ಸಂಭ್ರಮದ ಶರಣಬಸವೇಶ್ವರ–ಸಿದ್ಧಲಿಂಗೇಶ್ವರರ ರಥೋತ್ಸವ ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ತಾಲೂಕಿನ ಚಿಕ್ಕಪಡಸಲಗಿ ಗ್ರಾಮದ ಐತಿಹಾಸಿಕ ಕಮರಿಮಠದಲ್ಲಿ ಶರಣಬಸವೇಶ್ವರ ಹಾಗೂ ಸಿದ್ಧಲಿಂಗೇಶ್ವರ ಮಹಾರಾಜರ ವೈಭವಮಯ ರಥೋತ್ಸವ ಶುಕ್ರವಾರ ಸಂಜೆ ಅಪಾರ ಭಕ್ತರ ಸಮ್ಮುಖದಲ್ಲಿ ಭಕ್ತಿಭಾವದಿಂದ ಹಾಗೂ ಸಂಭ್ರಮ ಸಡಗರದ ನಡುವೆ ನೆರವೇರಿತು.ಹಳಿಂಗಳಿಯ ಪೂಜ್ಯ ಶಿವಾನಂದ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯ ಮತ್ತು ನೇತೃತ್ವದಲ್ಲಿ ನಡೆದ ಈ ಮಹೋತ್ಸವ ಗ್ರಾಮದಲ್ಲಿ ಧಾರ್ಮಿಕ ವಾತಾವರಣವನ್ನು ನಿರ್ಮಿಸಿತು.ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಾಗಿದ ರಥೋತ್ಸವದಲ್ಲಿ ಸಾವಿರಾರು ಭಕ್ತರು ಭಾಗವಹಿಸಿ “ಶರಣಬಸವೇಶ್ವರ ಮಹಾರಾಜರಿಗೇ ಜಯ”, “ಸಿದ್ಧಲಿಂಗೇಶ್ವರ ಮಹಾರಾಜರಿಗೇ ಜಯ” ಎಂಬ ಘೋಷಣೆಗಳನ್ನು ಕೂಗಿ ಭಕ್ತಿ ಪರವಶತೆಯನ್ನು ವ್ಯಕ್ತಪಡಿಸಿದರು. ವಿಶೇಷವಾಗಿ ಹೂವುಗಳು, ತೆಂಗಿನಕಾಯಿ, ಬಾಳೆಹಣ್ಣು, ಬಣ್ಣಬಣ್ಣದ ವಿದ್ಯುತ್ ದೀಪಗಳು ಹಾಗೂ ಸಾಂಪ್ರದಾಯಿಕ ಅಲಂಕಾರಗಳಿಂದ ಸಿಂಗರಿಸಲಾದ ರಥ ಭಕ್ತರ ಗಮನ ಸೆಳೆಯಿತು. ರಥದ ಸುತ್ತಲೂ ಅಲಂಕೃತ ದೀಪಾಲಂಕಾರ ಕಂಗೊಳಿಸುತ್ತಿದ್ದು, ಗ್ರಾಮೋತ್ಸವದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿತು.ರಥೋತ್ಸವದ ಸಂದರ್ಭದಲ್ಲಿ ಭಕ್ತರು ಬೆಂಡು, ಬೆತ್ತಾಸು, ಕಾರಿಖ್ ಸೇರಿದಂತೆ ವಿವಿಧ ಪೂಜಾ ಸಾಮಗ್ರಿಗಳನ್ನು ರಥಕ್ಕೆ ಅರ್ಪಿಸಿ ತಮ್ಮ ಭಕ್ತಿಯನ್ನು ವ್ಯಕ್ತಪಡಿಸಿದರು. ಚೀನಿಕೋಲು,…

Read More

ಲೇಖನ- ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಇದೇನಿದು! ಮಕ್ಕಳಿಗೆ ಪಾಲಕರು ಹೆದರಬೇಕೇ ಎಂದು ಸೋಜಿಗ ಪಡದಿರಿ. ಸಾಮಾನ್ಯವಾಗಿ ಮಕ್ಕಳು ತಮ್ಮ ಪಾಲಕರಿಗೆ ಹೆದರಬೇಕು ಎಂಬುದು ಲೋಕಾರೂಢಿ, ಆದರೆ ಪಾಲಕರೇ ಮಕ್ಕಳಿಗೆ ಹೆದರಬೇಕು ಎಂಬುದು ಆಧುನಿಕ ಪರಿಭಾಷೆ.ಖಂಡಿತವಾಗಿಯೂ ಪಾಲಕರು ತಮ್ಮ ಮಕ್ಕಳಿಗೆ ಹೆದರಬೇಕು. ಯಾವ ಕಾರಣಕ್ಕಾಗಿ ಎಂಬುದನ್ನು ಹೇಳಿದರೆ ನೀವು ಕೂಡ ಈ ಮಾತುಗಳನ್ನು ಒಪ್ಪಿಕೊಳ್ಳುತ್ತೀರಿ.ಕೆಲವೇ ವರ್ಷಗಳ ಹಿಂದೆ ನಮ್ಮ ತಂದೆ, ಚಿಕ್ಕಪ್ಪ, ದೊಡ್ಡಪ್ಪ ಮಾವ ಹೀಗೆ ದ್ವಿಚಕ್ರ ವಾಹನಗಳನ್ನು ಹೊಂದಿರುವವರು ತಲೆಗೆ ಹೆಲ್ಮೆಟ್ ಧರಿಸಿ ಸಂಚಾರಿ ನಿಯಮಗಳನ್ನು ಪಾಲಿಸುತ್ತಾ ವಾಹನಗಳನ್ನು ಚಲಾಯಿಸುತ್ತಿದ್ದರು ಎಂಬುದು ನಮಗೆ ನೆನಪಿದೆ. ಅಷ್ಟೇನೂ ವಾಹನ ದಟ್ಟಣೆ ಇಲ್ಲದ ಕಾಲದಲ್ಲಿಯೂ ಕೂಡ ಅವರು ಎಲ್ಲ ನಿಯಮಗಳನ್ನು ಪಾಲಿಸುತ್ತಿದ್ದರು. ಆದರೆ ಇಂದಿನ ವಿಪರೀತ ಸಂಚಾರ ದಟ್ಟಣೆಯ ಸಮಯದಲ್ಲಿಯೂ ಕೂಡ ನಾವು ಸಂಚಾರಿ ನಿಯಮಗಳನ್ನು ಅತ್ಯಂತ ಸುಲಭವಾಗಿ ಉಲ್ಲಂಘಿಸಿ ಮುನ್ನಡೆಯುತ್ತೇವೆ. ಸಂಚಾರ ನಿಯಮಗಳನ್ನು ಪಾಲಿಸುವ ಟ್ರಾಫಿಕ್ ಪೊಲೀಸರು ಖಳನಾಯಕರು ಎಂಬಂತೆ ವರ್ತಿಸುತ್ತೇವೆ. ನಮ್ಮದೇ ಅನುಕೂಲಕ್ಕಾಗಿ ಮಾಡಿರುವ ಸಂಚಾರಿ…

Read More

ವಿಜಯಪುರದಲ್ಲಿ ಕೃಷಿ ಇಲಾಖೆ ಜಂಟಿ‌ ನಿರ್ದೇಶಕ ಶಿವನಗೌಡ ಪಾಟೀಲ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಒಕ್ಕಲುತನದ ಬಗ್ಗೆ ಹಸಿವು ಬೇಕು. ಹಸಿವು ಇದ್ದಾಗ ಒಕ್ಕಲುತನದಲ್ಲಿ‌ ಪ್ರಗತಿ ಸಾಧ್ಯ ಎಂದು ಕೃಷಿ‌‌ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ಕೃಷಿ ವಿಶ್ವವಿದ್ಯಾಲಯ ಹಾಗೂ ಜಿಲ್ಲಾ ಕೃಷಿಕ ಸಮಾಜದ‌ ಸಹಯೋಗದಲ್ಲಿ ​ಗುರುವಾರ ​ಕೃಷಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ನಡೆದ ಪ್ರತಿ ಎಕರೆಗೆ 100 ಟನ್ ಕಬ್ಬು ಬೆಳೆಯುವುದು ಹೇಗೆ? ಎಂಬ ವಿಚಾರ ಸಂಕಿರಣವನ್ನು ಉದ್ದೇಶಿಸಿ ಅವರು ಮಾತನಾಡಿದರು.ಮಣ್ಣು ರೈತನ ಕಣ್ಣು ಹಾಗಾಗಿ ರೈತರು ಮಣ್ಣಿನ ಫಲವತ್ತತೆ ಕಾಯ್ದುಕೊಳ್ಳಬೇಕು ಎಂದ ಅವರು, ಮಣ್ಣಿನ ಪೋಷಕಾಂಶಗಳ ಹೇರಳವಾಗಿರುವಂತೆ ನೋಡಿಕೊಳ್ಳಬೇಕು ಎಂದರು.ಕಬ್ಬಿನ ಹೆಚ್ಚಿನ ಇಳುವರಿಗಾಗಿನಮ್ಮದು ಕಬ್ಬು ಬೆಳೆಯಲು ನಮ್ಮಲ್ಲಿನ ಮಣ್ಣು ಬಹು ಸೂಕ್ತವಾಗಿದೆ. ಮಣ್ಣಿನ ಸತ್ವ ನೋಡಿಕೊಂಡು ಕಬ್ಬಿನ ಸಾಲಿನಿಂದ ಸಾಲಿಗೆ ಇರುವ ಅಗಲ ಖಚಿತಗೊಳಿಸಿಕೊಳ್ಳಬೇಕು ಎಂದರು.ಕಬ್ಬಿಗೆ ಅವಶ್ಯಕತೆ ಇರುವಷ್ಟು ನೀರು ನೀಡಬೇಕು. ಕಬ್ಬಿನ‌ ಇಳುವರಿಯಲ್ಲಿ ನೀರಿನ ಪಾತ್ರ ಬಹು ಮುಖ್ಯವಾಗಿದೆ. ಹನಿ ನೀರಾವರಿ…

Read More

ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಉದಯರಶ್ಮಿ ದಿನಪತ್ರಿಕೆ ಸಂಪಾದಕ ಇಂದುಶೇಖರ ಮಣೂರ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮೂಢನಂಬಿಕೆಯಿಂದ ವೈಚಾರಿಕತೆಯೆಡೆಗೆ ಹಾಗೂ ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದು ಎಂದು ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಉದಯರಶ್ಮಿ ದಿನಪತ್ರಿಕೆ ಸಂಪಾದಕ ಇಂದುಶೇಖರ ಮಣೂರ ಹೇಳಿದರು.ನಗರದಲ್ಲಿ ಗುರುವಾರ ಸಂಜೆ ಆಶ್ರಮ ರಸ್ತೆಯ ರಾಮಕೃಷ್ಣ ನಗರದಲ್ಲಿ ಗಜಾನನ ಮಿತ್ರ ಮಂಡಳಿ ಆಯೋಜಿಸಿದ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.ಸಮಾರಂಭದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.ಅನುಭವ ಮಂಟಪ ಸ್ಥಾಪಿಸಿ ವಿಶ್ವದಲ್ಲೇ ಮೊಟ್ಟಮೊದಲು ಪ್ರಜಾಪ್ರಭುತ್ವದ ಚಿಂತನೆಗಳನ್ನು ನೀಡಿದವರು ಬಸವಣ್ಣನವರು. ವರ್ಗ ಬೇಧ ಮತ್ತು ವರ್ಣ ಶ್ರೇಷ್ಠತೆಯನ್ನು ತೆಗೆದುಹಾಕಿದ ಏಕೈಕ ಧರ್ಮ ಬಸವ ಧರ್ಮವಾಗಿದ್ದು. ನಾವೆಲ್ಲ ಸಂಕುಚಿತ ಭಾವ ತೊರೆದು ಬಸವ ಧರ್ಮ ಪಾಲಿಸಬೇಕು ಎಂದು ಇಂದುಶೇಖರ ಮಣೂರ ಕರೆ ನೀಡಿದರು.ಬಸವನ ಬಾಗೇವಾಡಿಯ ಕಾಂಗ್ರೆಸ್ ಪಕ್ಷದ ಮುಖಂಡ ಜಟ್ಟಿಂಗರಾಯ ಮಾಲಗಾರ ಮಾತನಾಡಿ,…

Read More

ಇಂದು (ಮೇ.೦೧ ಶುಕ್ರವಾರ) “ಅಂತರಾಷ್ಟ್ರೀಯ ಕಾರ್ಮಿಕರ ದಿನಾಚರಣೆ” ಪ್ರಯುಕ್ತ ಈ ವಿಶೇಷ ಲೇಖನ ಲೇಖನ- ಮಲ್ಲಪ್ಪ. ಸಿ. ಖೊದ್ನಾಪೂರ (ತಿಕೋಟಾ)ವಿಜಯಪುರ ಉದಯರಶ್ಮಿ ದಿನಪತ್ರಿಕೆ ಮಾರ್ಟಿನ್ ಲೂಥರ್ ಕಿಂಗ್ ಅವರು, “ಮಾನವೀಯತೆಯನ್ನು ಹೆಚ್ಚಿಸುವ ಎಲ್ಲ ಕೆಲಸ-ಕಾರ್ಯಗಳು ಘನತೆ ಮತ್ತು ಪ್ರಾಮುಖ್ಯತೆಯನ್ನು ಹೊಂದಿವೆ ಮತ್ತು ಅದನ್ನು ನಾವು ಶ್ರೇಷ್ಠವೆಂದೇ ಪರಿಗಣಿಸಬೇಕು” ಎಂದು ಹೇಳಿದ್ದಾರೆ.ಕೆಲಸದಲ್ಲಿ ಸಣ್ಣದು ದೊಡ್ಡದು ಎಂಬುದಿಲ್ಲ. ಪ್ರತಿಯೊಂದು ಕೆಲಸವನ್ನು ಪ್ರೀತಿಸಿ, ಗೌರವಿಸಿ. ಕಾರಣ ನಮ್ಮ ಜೀವನ ಆರಂಭವಾಗುವುದು ಕೆಳಗಿನಿಂದಲೇ ಪ್ರಾರಂಭವಾಗುತ್ತದೆಯೇ ಹೊರತು, ಮೇಲಿನಿಂದಲ್ಲ. ಆದ್ದರಿಂದ ಎಲ್ಲ ಕೆಲಸವು ತನ್ನದೇ ಆದ ಪ್ರಾಮುಖ್ಯತೆಯನ್ನು ಹೊಂದಿರುತ್ತದೆ ಎಂಬುದನ್ನು ನಾವೆಲ್ಲರೂ ಮನಗಾಣಬೇಕು. ಕಾರ್ಮಿಕ ವರ್ಗ ಪ್ರತಿಯೊಂದು ದೇಶದ ಅಭಿವೃದ್ಧಿಗೆ ಬೇರುಗಳಿದ್ದಂತೆ. ಅದಕ್ಕಂತಲೇ ಕಾರ್ಮಿಕರನ್ನು ಮತ್ತು ಕಾರ್ಮಿಕ ವರ್ಗವನ್ನು ದೇಶದ ಪ್ರಬಲ ಶಕ್ತಿ ಎಂದು ಪರಿಗಣಿಸಲಾಗುತ್ತದೆ. ವಿಶ್ವದಾದ್ಯಂತ ಶ್ರಮಿಕ ವರ್ಗದ ಮಹತ್ವ, ಅಗತ್ಯತೆ ಮತ್ತು ದೇಶದ ಅಭಿವೃದ್ಧಿಯಲ್ಲಿ ಅವರ ಪಾತ್ರದ ಕುರಿತು ಇಡೀ ಸಮಾಜಕ್ಕೆ ತಿಳಿಸಲು ಮತ್ತು ಅವರಿಗೂ ಸಾಮಾಜಿಕ ಗೌರವ ಸಲ್ಲಿಸುವ ಉದ್ದೇಶದಿಂದ ಪ್ರತಿ ವರ್ಷ ಮೇ…

Read More

ಉದಯರಶ್ಮಿ ದಿನಪತ್ರಿಕೆ ಹೆಚ್ ಡಿ ಕೋಟೆ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದೊಂದಿಗೆ ಶೈಕ್ಷಣಿಕ ಒಪ್ಪಂದ ಮಾಡಿಕೊಂಡಿದೆ ಎಂದು ಪ್ರಾಂಶುಪಾಲರಾದ ಡಾ. ಎಂ ಅರುಣ್ ಕುಮಾರ್ ಹೇಳಿದರು.ಪಟ್ಟಣದ ಕಾಲೇಜು ವನಸಿರಿಯ ಬಯಲು ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ವನಸಿರಿ ನಾಡಿನ ಜನಪದ ಕಲರವ ಮತ್ತು ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಎಂ ಅರುಣ್ ಕುಮಾರ್, ಕೆಎಸ್ಒಯು ಜೊತೆ ಶೈಕ್ಷಣಿಕ ಒಪ್ಪಂದ ಮಾಡಿಕೊಂಡಿರುವುದು ತುಂಬಾ ಸಂತೋಷವಾಗುತ್ತದೆ. ಇದು ಉನ್ನತ ಶಿಕ್ಷಣದ ಗುಣಮಟ್ಟ, ನಾವೀನ್ಯತೆ ಮತ್ತು ಅಂತರರಾಷ್ಟ್ರೀಯ ಸಹಕಾರವನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ. ಜೊತೆಗೆ ಜಾಗತೀಕರಣದ ಯುಗದಲ್ಲಿ ಜ್ಞಾನ ಹಂಚಿಕೆ, ಹೊಸ ತಂತ್ರಜ್ಞಾನಗಳ ಅಳವಡಿಕೆ ಮತ್ತು ಶೈಕ್ಷಣಿಕ ಗುಣಮಟ್ಟವನ್ನು ಸುಧಾರಿಸುವುದು ಇದರ ಮುಖ್ಯ ಗುರಿಯಾಗಿದೆ ಎಂದು ಹೇಳಿದರು.ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ ಇತಿಹಾಸ ಅಧ್ಯಯನ ಮತ್ತು ಸಂಶೋಧನ ವಿಭಾಗದ ಮುಖ್ಯಸ್ಥ ಡಾ. ರಾಮೇಗೌಡ ಮಾತನಾಡಿ,ಗ್ರಾಮೀಣ ಭಾಗದ ಸೊಗಡು ಎಷ್ಟೇ ಹಣ ಕೊಟ್ಟರು ಬೇರೆಡೆ ಎಲ್ಲೂ ಸಿಗುವುದಿಲ್ಲ. ನಮ್ಮ ಪೂರ್ವಿಕರು ಬೆಳೆದ ಬೆಳೆಯನ್ನು…

Read More

ವಿಜಯಪುರ ಜಿಲ್ಲೆಯ ವಾರ್ಷಿಕ ಸಾಲ ಯೋಜನೆ ಕೈಪಿಡಿ ಬಿಡುಗಡೆ | ೧೬೩೬೭.೮೩ ಕೋಟಿ ರೂ. ವಾರ್ಷಿಕ ಸಾಲ ಯೋಜನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಆರ್ಥಿಕ ಪ್ರಗತಿಗೆ ಪೂರಕವಾಗಿರುವ ೨೦೨೬-೨೦೨೭ನೇ ಹಣಕಾಸು ವರ್ಷದ ಜಿಲ್ಲಾ ವಾರ್ಷಿಕ ಸಾಲ ಯೋಜನೆಯನ್ನು ಬುಧವಾರ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ಬಿಡುಗಡೆ ಮಾಡಲಾಯಿತು.ಜಿಲ್ಲೆಯ ಅಗ್ರಣೀಯ ಬ್ಯಾಂಕ್ ಆಗಿರುವ ಕೆನರಾ ಬ್ಯಾಂಕ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಈ ಸಾಲಿನ ವಾರ್ಷಿಕ ಸಾಲ ಯೋಜನೆ ಕೈಪಿಡಿ ಬಿಡುಗಡೆಗೊಳಿಸಿದರು.ಪ್ರಸಕ್ತ ವರ್ಷದ ಸಾಲ ಯೋಜನೆಯ ೧೬೩೬೭.೮೩ ಕೋಟಿ ರೂ. ವಿತರಣೆಯ ಗುರಿಯನ್ನು ಹೊಂದಿದೆ. ಇದು ಕಳೆದ ವರ್ಷದ ವಾರ್ಷಿಕ ಸಾಲ ಯೋಜನೆಯ ಶೇಕಡಾ ೧೦.೯೦ ಪಟ್ಟು ಹೆಚ್ಚಿನ ಗುರಿಯಾಗಿದೆ. ಆದ್ಯತಾ ವಲಯಕ್ಕೆ: ಒಟ್ಟು ಯೋಜನೆ ಶೇ:೬೯.೫೯ ರಷ್ಟು ಅಂದರೆ ರೂ೧೧೩೮೯.೯೬ ಕೋಟಿ ಮೀಸಲಿಡಲಾಗಿದೆ. ಕೃಷಿ ವಲಯಕ್ಕೆ: ಒಟ್ಟು ಯೋಜನೆ ಶೇ: ೫೧.೪೬ ರಷ್ಟು ಅಂದರೆ ೮೪೨೨.೭೧ ಕೋಟಿ ರೂಪಾಯಿ ಮೀಸಲಿಡಲಾಗಿದೆ. ಉದ್ಯಮಿ ವಲಯಕ್ಕೆ:…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಮಾಜದಲ್ಲಿ ಉನ್ನತ ಶ್ರೇಣಿಗೆ ಮಕ್ಕಳು ತಲುಪಬೇಕಾದರೆ ಆವಮಾನ, ಅನುಮಾನ ನಂತರ ಸನ್ಮಾನ ದೊರೆಯುತ್ತವೆ. ಹಾಗಾಗಿ ಶ್ರಮ ವಹಿಸಿ ಕಾರ್ಯ ನಿರ್ವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೆಶಕ ಹೇಳಿದರು.ಜಿಲ್ಲಾ ಬಾಲ ಭವನದಲ್ಲಿ ನಡೆದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಮಕ್ಕಳಲ್ಲಿ ಕ್ರೀಯಾಶೀಲ ವ್ಯಕ್ತಿತ್ವ ವಿಕಸನಕ್ಕಾಗಿ ಚಟುವಟಿಕೆಯ ಮೂಲಕ ಮಕ್ಕಳಿಗೆ ತಿಳುವಳಿಕೆ ನೀಡಿದರು. ಮಕ್ಕಳು ಪಾಲಕರು ಮಾಡುವ ಕೆಲಸಗಳನ್ನು ಅನುಸರಿಸುತ್ತಾರೆ. ಹಾಗಾಗಿ ಮಕ್ಕಳ ಮುಂದೆ ಪಾಲಕರು ಮೊಬೈಲ್ ಬಳಕೆಯನ್ನು ನಿಯಮಿತವಾಗಿ ಮಾಡುವುದಾಗಿ ಹಾಗೂ ಮಕ್ಕಳಲ್ಲಿ ಸ್ಮಜನಾತ್ಮಕ ಕಲಿಕೆಗೆ ಹೆಚ್ಚಿನ ಅವಕಾಶವನ್ನು ಮಾಡಿಕೊಡಬೇಕು ಎಂದರು. ಕರ್ನಾಟಕ ನಾಡ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಸುರೇಶ ಜತ್ತಿ ಮಾತನಾಡಿ, ಮಕ್ಕಳನ್ನು ಸಮಾಜದಲ್ಲಿ ಉತ್ತಮ ಪ್ರಜೆಯನ್ನಾಗಿ ಮಾಡಲು ಕ್ರೀಡೆ, ಯೋಗ, ಸಂಗೀತ, ಕರಾಟೆ, ಚಿತ್ರಕಲೆ, ಕರಕುಶಲ ವಸ್ತುಗಳ ತಯಾರಿಕೆ ಇತ್ಯಾದಿ ಚಟುವಟಿಕೆಗಳ ತರಬೇತಿ ಪಡೆಯುವುದು ಅಗತ್ಯವಾಗಿದೆ ಎಂದರು.ಇಂತಹ ಚಟುವಟಿಕೆಗಳು ಬೇಸಿಗೆ ಶಿಬಿರದಲ್ಲಿರುತ್ತವೆ. ಅದರಲ್ಲಿ ಭಾಗವಹಿಸಿ ಸಸುಪಯೋಗ ಪಡೆದುಕೊಳ್ಳಬೇಕು…

Read More

ಉದಯರಶ್ಮಿ ದಿನಾಚರಣೆ ವಿಜಯಪುರ: ಸಾಂಕ್ರಾಮಿಕ ರೋಗಗಳ ಹರಡುವಿಕೆ, ನಿಯಂತ್ರಣ ಮತ್ತು ಚಿಕಿತ್ಸೆ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಯೊಂದಿಗೆ ಸಾರ್ವಜನಿಕರ ಸಹಕಾರ ಮುಖ್ಯವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಡಾ.ಚನ್ನಪ್ಪ ಕಟ್ಟಿ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಲೇರಿಯಾ ದಿನದ ಅಂಗವಾಗಿ ಇತ್ತಿಚಿಗೆ ಹಮ್ಮಿಕೊಂಡಿದ್ದ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಕರ್ನಾಟಕ ರಾಜ್ಯದಲ್ಲಿ ೨೦೨೭ರ ವೇಳೆಗೆ ಮಲೇರಿಯಾ ನಿವಾರಣಾ ಗುರಿ ಹೊಂದಲಾಗಿದೆ. ಮಲೇರಿಯಾ ರೋಗವು ಪ್ಲಾಸ್ಮೋಡಿಯಾ ಎಂಬ ಪರಾವಲಂಬಿ ಜೀವಿಯಿಂದ ಬರುತ್ತದೆ. ಅನಾಫಿಲೀಸ್ ಎಂಬ ಹೆಣ್ಣು ಸೊಳ್ಳೆ ಕಡಿತದಿಂದ ಈ ರೋಗ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಈ ರೋಗ ಸಾಮಾನ್ಯವಾಗಿ ವರ್ಷದ ಎಲ್ಲ ಕಾಲದಲ್ಲೂ ಕಂಡು ಬಂದರೂ ಜೂನ್ ನಿಂದ ಅಕ್ಟೋಬರ್ ಅಂತ್ಯದವರೆಗಿನ ಮಳೆಗಾಲದಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಈ ಸಮಯದಲ್ಲಿ ಕೆರೆ, ಕುಂಬೆ, ಬಾವಿ, ಸಣ್ಣಪುಟ್ಟ ತಗ್ಗು ಪ್ರದೇಶದಲ್ಲಿ ಮಳೆ ನೀರು ನಿಂತು ಸೊಳ್ಳೆಗಳ ವಂಶಾಭಿವೃದ್ದಿಗೆ ಅನುಕೂಲವಾಗಿ…

Read More