Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ತಾಲೂಕಾ ಪಂಚಾಯತಿ ಮಾಜಿ ಉಪಾಧ್ಯಕ್ಷ, ಗ್ರಾಮದ ಪ್ರಭು ಮುಧೋಳ ಅವರನ್ನು ಬಾಗಲಕೋಟ ಜಿಲ್ಲಾ ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ (ಓಬಿಸಿ ಮೋರ್ಚಾ) ಜಿಲ್ಲಾ ಉಪಾಧ್ಯಕ್ಷರನ್ನಾಗಿ ನೇಮಕಗೊಳಿಸಿ ಆದೇಶಿಸಲಾಗಿದೆ ಎಂದು ಓಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಸಂಗಮೇಶ ದಳವಾಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೌರಿಂಗ್ ಆಸ್ಪತ್ರೆ ದುರಂತ ಸ್ಥಳಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್ ಪಾಟೀಲ್ ಭೇಟಿ | ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯದ ಬಗ್ಗೆ ತೀವ್ರ ಆಕ್ರೋಶ | ಹಿರಿಯ ಅಧಿಕಾರಿಗಳಿಗೆ ಶಾಕ್? ಬೆಂಗಳೂರು: ನಗರದಲ್ಲಿ ಬುಧವಾರ ಸಂಭವಿಸಿದ ತೀವ್ರ ಗಾಳಿ ಮಳೆಗೆ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಏಳು ಅಮಾಯಕರು ಬಲಿಯಾದ ಪ್ರಕರಣವನ್ನು ಕರ್ನಾಟಕ ಲೋಕಾಯುಕ್ತವು ಅತ್ಯಂತ ಗಂಭೀರವಾಗಿ ತೆಗೆದುಕೊಂಡಿದೆ.ಘಟನಾ ಸ್ಥಳಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್ ಪಾಟೀಲ್, ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಸ್ವಯಂಪ್ರೇರಿತ (Suo Motu Case) ಪ್ರಕರಣ ದಾಖಲಿಸುವುದಾಗಿ ಘೋಷಿಸಿದ್ದಾರೆ.ಗುರುವಾರ ಕಂಪೌಂಡ್ ಕುಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ನ್ಯಾಯಮೂರ್ತಿ ಬಿಎಸ್ ಪಾಟೀಲ್, ಕಾಂಪೌಂಡ್‌ನ ಅಡಿಪಾಯ ಅತ್ಯಂತ ದುರ್ಬಲವಾಗಿದ್ದೇ ಈ ದುರಂತಕ್ಕೆ ಪ್ರಮುಖ ಕಾರಣ. ನಗರದಲ್ಲಿ ಪ್ರತಿ ವರ್ಷ ಮಳೆ ಬರುತ್ತದೆ ಎಂಬುದು ಗೊತ್ತಿದ್ದರೂ, ಇಂತಹ ದುರ್ಬಲ ಗೋಡೆಗಳ ಪಕ್ಕದಲ್ಲಿ ಬೀದಿ…
ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿರುವ ಜಿಲ್ಲಾಡಳಿತ | ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ್ ಆಕ್ರೋಶ | ಆಮ್ ಆದ್ಮಿ ಪಾರ್ಟಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಗಾಂಧಿ ಚೌಕ್‌ನಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮೇ 3 ರಂದು ನಡೆಯಲಿರುವ ನೀಟ್ (NEET) ಪರೀಕ್ಷಾ ಕೇಂದ್ರದಲ್ಲಿ ಮೂಲಭೂತ ಸೌಲಭ್ಯಗಳು ಇಲ್ಲದಿರುವುದು ತೀವ್ರ ಕಳವಳಕ್ಕೆ ಕಾರಣವಾಗಿದೆ ಎಂದು ಆಮ್ ಆದ್ಮಿ ಪಾರ್ಟಿ ವಿಜಯಪುರ ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ್ ಆಕ್ರೋಶ ವ್ಯಕ್ತಪಡಿಸಿದರು.ವಿಜಯಪುರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೊಠಡಿಗಳಲ್ಲಿ ಸಾಕಷ್ಟು ಫ್ಯಾನ್‌ಗಳ ವ್ಯವಸ್ಥೆ ಇಲ್ಲದಿರುವುದು, ನಿರಂತರ ವಿದ್ಯುತ್ ಪೂರೈಕೆಯ ಕೊರತೆ ಇರುವುದು ಮತ್ತು ಬೇಸಿಗೆಯ ತೀವ್ರ ಬಿಸಿಲಿನಲ್ಲಿ (40–42 ಡಿಗ್ರಿ ಸೆಲ್ಸಿಯಸ್) ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಬಹುತೇಕ ಪರೀಕ್ಷಾ ಕೊಠಡಿಗಳಲ್ಲಿ ಫ್ಯಾನ್ ಇದ್ರೆ ವಿದ್ಯುತ್ ಇಲ್ಲ, ವಿದ್ಯುತ್ ಇದ್ರೆ ಫ್ಯಾನ್ ಇಲ್ಲ.. ಕೆಲವೊಂದು ಕೊಠಡಿಗಳಲ್ಲಿ ವಿದ್ಯುತ್ ಹಾಗೂ ಫ್ಯಾನ್ ಪಾಯಿಂಟ್ ಗಳೇ ಇಲ್ಲ.ಇದರಿಂದ ವಿದ್ಯಾರ್ಥಿಗಳ ಆರೋಗ್ಯಕ್ಕೆ ಧಕ್ಕೆ ಉಂಟಾಗುವ…
ವಿಜಯಪುರದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಅಪಘಾತ ತಡೆಗೆ ಜಿಲ್ಲೆಯಲ್ಲಿರುವ ಅಪಘಾತ ವಲಯಗಳನ್ನು ಗುರುತಿಸಿ ರಸ್ತೆ ಅಪಘಾತ ತಡೆಯಲು ಸೂಕ್ತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಸ್ತೆ ಅಪಘಾತ ತಡೆಗೆ ರಾಷ್ಟ್ರೀಯ ಹೆದ್ದಾರಿ, ಜಿಲ್ಲಾ ಲೋಕೋಪಯೋಗಿ ಇಲಾಖಾ ವ್ಯಾಪ್ತಿಯ ಮುಖ್ಯ ರಸ್ತೆ ಸೇರಿದಂತೆ ಅಪಘಾತ ವಲಯಗಳಲ್ಲಿ ಅಪಘಾತ ಪ್ರಮಾಣ ತಗ್ಗಿಸಲು ಸಂಬಂಧಿಸಿದ ಇಲಾಖೆಗಳು ಮಾಹಿತಿ ಫಲಕಗಳನ್ನು ಅಳವಡಿಸಬೇಕು. ಸೂಕ್ತ ಗುರುತು ಫಲಕ, ಅಗತ್ಯವಿದ್ದಲ್ಲಿ ಬ್ಯಾರಿಕೇಡ್ ಸೇರಿದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಿ ಅಪಘಾತಗಳು ನಡೆಯದಂತೆ ನೋಡಿಕೊಳ್ಳುವಂತೆ ಅವರು ಸೂಚನೆ ನೀಡಿದರು.ಜಿಲ್ಲೆಯಲ್ಲಿರುವ ಅಪಘಾತ ವಲಯಗಳಲ್ಲಿ ಅಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡು, ಪರಿಶೀಲಿಸಿ, ಅಪಘಾತ ತಡೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಅಂಬೇಡ್ಕರರವರು ನಮ್ಮ ದೇಶದ ಸಂವಿಧಾನವನ್ನು ಕೇವಲ ಪೆನ್ನಿನಿಂದ ಬರೆದಿದ್ದಲ್ಲ. ಬದಲಾಗಿ ಅವರ ದೇಹದ ರಕ್ತದ ಕಣಕಣದಿಂದ ಬರೆದದ್ದು ಎಂದು ದಲಿತ ಸಾಹಿತಿ ಶಿವಪುತ್ರ ಅಜಮನಿ ಅಭಿಪ್ರಾಯ ಪಟ್ಟರು.ತಾಲೂಕಿನ ದೇವೂರ ಗ್ರಾಮದಲ್ಲಿ ನಡೆದ ಡಾ. ಬಾಬಾಸಾಹೇಬ ಅಂಬೇಡ್ಕರರ ೧೩೫ ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.ಈ ದೇಶದ ಶೋಷಿತರಿಗೆ, ನಿರ್ಗತಿಕರಿಗೆ, ದೀನದಲಿತರಿಗೆ, ಸಾಮಾಜಿಕ ನ್ಯಾಯವನ್ನು ಕೊಡಿಸಲು ದೇಶದಲ್ಲಿ ಸರಿ ಸಮಾನತೆ ತರಲು ತಮ್ಮ ನಾಲ್ಕು ಮಕ್ಕಳನ್ನು ಬಲಿ ಕೊಟ್ಟು, ತಮ್ಮ ಮಡದಿಯನ್ನು ಬಲಿ ಕೊಟ್ಟು, ತಮ್ಮ ಹದಗೆಟ್ಟ ಆರೋಗ್ಯವನ್ನೂ ಲೆಕ್ಕಿಸದೆ ಈ ದೇಶಕ್ಕೆ ಬಹು ದೊಡ್ಡ ತ್ಯಾಗವನ್ನು ಮಾಡಿದ್ದಾರೆ. ಭಾರತೀಯರು ಅವರ ತ್ಯಾಗವನ್ನು ಯಾವ ಕಾಲಕ್ಕೂ ಮರೆಯಬಾರದು ಎಂದರು.ನಿವೃತ್ತ ಉಪನ್ಯಾಸಕ ಪಿ.ಎಚ್.ಉಪ್ಪಲದಿನ್ನಿ, ಕಂದಾಯ ನಿರೀಕ್ಷಕ ವೆಂಕಟೇಶ ಅಂಬಿಗೇರ, ಹಿರಿಯ ಪತ್ರಕರ್ತ ಪರಶುರಾಮ ಕೊಣ್ಣೂರ, ಡಿ.ಕೆ.ದ್ಯಾವಪ್ಪ ಮತ್ತೀತರರು ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಸ್ಮರಿಸಿದರು.ಈ ವೇಳೆ ಮುಖಂಡರಾದ ಸಿದ್ಧಾರ್ಥ ರೂಗಿ, ಪ್ರವೀಣ ಕಟ್ಟಿಮನಿ, ಮುತ್ತಣ್ಣ ಕಟ್ಟಿಮನಿ, ಬಸಂತ ಕಟ್ಟಿಮನಿ,…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಇತ್ತಿಚೆಗೆ ನೇಪಾಳದಲ್ಲಿ ಯುಥ್ ಗೇಮ್ಸ್ ಕೌನ್ಸಿಲ್ ಇಂಡಿಯಾ ಸಹಯೋಗದಲ್ಲಿ ಯುಥ್ ಗೇಮ್ಸ್ ಫೌಂಡೇಷನ್ ಹಮ್ಮಿಕೊಂಡಿದ್ದ ೮ನೇ ಸಾಲಿನ್ ಯುಥ್ ಗೇಮ್ಸ್ ಇಂಡೋ-ನೇಪಾಳ ಇಂಟರನ್ಯಾಷನಲ್ ಸೀರೀಸ್-೨೦೨೬ ಕ್ರೀಡಾಕೂಟದಲ್ಲಿ ಪಟ್ಟಣದ ಬಸವ ಇಂಟರ್ ನ್ಯಾಷನಲ್ ಶಾಲೆಯ ವಿದ್ಯಾರ್ಥಿ ಮೊಹ್ಮದ್ ಜೀಶಾನ್ ರಿಸಾಲ್ದಾರ್ ಅಂಡರ್ ೧೦ ವಿಭಾಗದಲ್ಲಿ ೧೦೦ ಮೀಟರ್ ಓಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಈಗ ಮಲೇಷ್ಯಾದಲ್ಲಿ ನಡೆಯುವ ಸೌಥ್ ಏಷಿಯನ್ ಯುಥ್ ಗೇಮ್ಸ್ ಇಂಟರ್ ನ್ಯಾಷನಲ್ ಚಾಂಪಿಯನ್‌ಶಿಪ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾನೆ.ಆರಂಭಮಟ್ಟದಿಂದಲೇ ಅಥ್ಲೇಟಿಕ್ಸ್ ವಿಭಾದಲ್ಲಿ ಕ್ರೀಡಾ ಸಾಧನೆಗೈಯುತ್ತಿರುವ ಜೀಶಾನ ರಿಸಾಲ್ದಾರ್ ಮೊನ್ನೆಯಷ್ಟೆ ಗೋವಾದಲ್ಲಿ ಹಮ್ಮಿಕೊಂಡಿದ್ದ ಯುಥ್ ಗೇಮ್ಸ್ ಕೌನ್ಸಿಲ್ ಇಂಡಿಯಾ ಕ್ರೀಡಾ ಕೂಟದಲ್ಲಿ ಕರ್ನಾಟಕ ಪರವಾಗಿ ಭಾಗವಹಿಸಿ ೧೦೦ ಮೀಟರ್‌ದಲ್ಲಿ ಗೋಲ್ಡ್ ಮೇಡಲ್ ಪಡೆದು ರಾಜ್ಯದ ಹೆಸರನ್ನು ತಂದಿದ್ದ. ಸಧ್ಯ ಇಂಡೋ ನೇಪಾಳ ಇಂಟರ್ ನ್ಯಾಷನಲ್ ಸೀರೀಸ್ ನಲ್ಲಿ ಮತ್ತೆ ೧೦೦ ಮೀಟರ್ ಓಟವನ್ನು ೧೪:೫೬ ಸೆಕೆಂಟ್‌ನಲ್ಲಿ ಪೂರ್ಣಗೊಳಿಸಿ ಪ್ರಥಮ ಸ್ಥಾನವನ್ನು ಪಡೆದು ದೇಶದ ಕೀರ್ತೀಯನ್ನು ಹೆಚ್ಚಿಸಿದ್ದಾನೆ.ತಾಲೂಕಿನ ಸರೂರ ಗ್ರಾಮದ…
ಉದಯರಶ್ಮಿ ದಿನಪತ್ರಿಕೆ ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಈ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಮೇ 4ರಂದು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ನಡೆಯಲಿದ್ದು, ಹಿನ್ನಲೆಯಲ್ಲಿ ಮತ ಎಣಿಕೆ ಸಿಬ್ಬಂದಿಗೆ ತರಬೇತಿ ಕಾರ್ಯಕ್ರಮ ಜರುಗಿತು.ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಹಮ್ಮಿಕೊಂಡ ತರಬೇತಿಯನ್ನು ಉದ್ದೇಶಿಸಿ ಜಿಲ್ಲಾಧಿಕಾರಿ ಸಂಗಪ್ಪ ಮಾತನಾಡಿ, ಮತ ಏಣಿಕೆ ಕಾರ್ಯಕ್ಕೆ ನೇಮಕಗೊಂಡ ಅಧಿಕಾರಿ ಹಾಗೂ ಸಿಬ್ಬಂದಿ ತಮ್ಮ ಕಾರ್ಯವನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು. ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಮತ ಎಣಿಕೆ ಕಾರ್ಯ ನಡೆಸಲಾಗುತ್ತಿದೆ. ಈಗಾಗಲೇ ಮತ ಎಣಿಕೆ ಕೇಂದ್ರ ಸಂಪೂರ್ಣ ಸಜ್ಜಾಗಿದ್ದು, ಚುನಾವಣಾ ಆಯೋಗದ ನಿರ್ದೇಶನಗಳನ್ವಯ ಕಾರ್ಯವನ್ನು ಯಶಸ್ವಿಯಾಗಿ ನಡೆಸಲು ತಿಳಿಸಿದರು. ಎಣಿಕೆಮತ ಎಣಿಕೆಗೆ ಒಟ್ಟು 14 ಟೇಬಲ್‌ಗಳನ್ನು ಇರಿಸಲಾಗಿದ್ದು, ಪ್ರತಿ ಟೇಬಲ್‌ಗೆ ತಲಾ ಒಬ್ಬರಂತೆ ಮತ ಎಣಿಕಾ ಮೇಲ್ವಿಚಾರಕ, ಸಹಾಯಕ ಮತ್ತು ಮೈಕ್ರೋ ವೀಕ್ಷಕರು ಸೇರಿದಂತೆ ಒಟ್ಟು 62 ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ. ಅಂಚೆ ಮತಪತ್ರ ಎಣಿಕೆಗೆ ಪ್ರತ್ಯೇಕ ಕೊಠಡಿ ಇದ್ದು, 2 ಟೇಬಲ್ ಇರಿಸಲಾಗಿದೆ. ಸ್ಯಾನಿಂಗ್ ಮಾಡಲು ಟೇಬಲ್ ಸಹ ಇರಿಸಲಾಗಿದೆ ಎಂದು ತಿಳಿಸಿದರು.ಮಾಸ್ಟರ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸರ್ಕಾರದ ವಿವಿಧ ಯೋಜನೆಗಳಡಿ ಹಂಚಲ್ಪಡುವ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದುದನ್ನು ಪತ್ತೆ ಮಾಡಿರುವ ಸಿಂದಗಿ ತಹಸೀಲ್ದಾರರು ಹಾಗೂ ಆಹಾರ ಇಲಾಖೆ ಅಧಿಕಾರಿಗಳು ಜಂಟಿ ದಾಳಿ ನಡೆಸಿ, ಅಕ್ರಮವಾಗಿ ಸಾಗಿಸುತ್ತಿದ್ದ ಅಕ್ಕಿ ಹಾಗೂ ಟಾಟಾ ಏಸ್ ವಾಹನ ವಶಪಡಿಸಿಕೊಂಡಿದ್ದಾರೆ.ಸಿಂದಗಿ ಪಟ್ಟಣದ ಸೋಂಪುರ ರಸ್ತೆಯಲ್ಲಿ ಟಾಟಾ ಏಸ್ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಅಕ್ಕಿ ಸಾಗಾಟ ಮಾಡುತ್ತಿರುವ ಸಂದರ್ಭದಲ್ಲಿ ಆಹಾರ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಸುಮಾರು ೧೨೮೦ ಕೆಜಿ ಅಕ್ಕಿ ಹಾಗೂ ವಾಹನ ವಶಪಡಿಸಿಕೊಂಡು ವಾಹನ ಮಾಲೀಕರ ವಿರುದ್ಧ ಸಿಂದಗಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ದಾಳಿಯಲ್ಲಿ ಸಿಂದಗಿ ತಹಸೀಲ್ದಾರ್ ಕರೆಪ್ಪ ಎಸ್. ಬೆಳ್ಳಿ, ಆಹಾರ ನಿರೀಕ್ಷಕರಾದ ವಿದ್ಯಾ ಹಿಪ್ಪರಗಿ, ಪ್ರಭುಗೌಡ ಬಿರಾದಾರ ಪಾಲ್ಗೊಂಡಿದ್ದರು ಎಂದು ಆಹಾರ ಇಲಾಖೆಯ ಉಪ ನಿರ್ದೇಶಕ ವಿನಯಕುಮಾರ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಬಲೇಶ್ವದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ)ಯಲ್ಲಿ ೨೦೨೬ನೇ ಸಾಲಿನ ಶೈಕ್ಷಣಿಕ ಸಾಲಿಗೆ ಮೆರಿಟ್ ಕಮ್ ರಿಸರ್ವೇಷನ್ ಆಧಾರಿತ ಪ್ರವೇಶಕ್ಕೆ ಆನ್ ಲೈನ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಲಭ್ಯವಿರುವ ಎರಡು ವರ್ಷದ ವೃತ್ತಿಗಳಾದ ಎಲೆಕ್ಟ್ರೀಶಿಯನ್, ಎಲೆಕ್ಟ್ರಾನಿಕ್, ಮೆಕ್ಯಾನಿಕ್, ಫಿಟ್ಟರ್, ಅಡ್ವಾನ್ಸ್ಡ್ ಸಿಎನ್ ಸಿ ಮೆಕ್ಯಾನಿಂಗ್ ಟೆಕ್ನಿಶಿಯನ್, ಮೆಕ್ಯಾನಿಕ್ ಎಲೆಕ್ಟ್ರಿಕ್ ವೆಹಿಕಲ್, ಬೇಸಿಕ್ ಡಿಸೈನರ್ ಮತ್ತು ವರ್ಚುವಲ್ ವೆರಿಫೈಯರ್, ಒಂದು ವರ್ಷದ ವೃತ್ತಿಗಳಾದ ವೆಲ್ಡರ್, ಇಂಡಸ್ಟ್ರಿಯಲ್ ರೋಬೋಟಿಕ್ಸ್, ಮತ್ತ ಡಿಜಿಟಲ್ ಮ್ಯಾನ್ಯುಫ್ಯಾಕ್ಚರಿಂಗ್ ಟೆಕ್ನಿಶಿಯನ್, ಮ್ಯಾನ್ಯುಫ್ಯಾಕ್ಚರಿಂಗ್ ಪ್ರೊಸೆಸ್ ಕಂಟ್ರೋಲ್ ಮತ್ತು ಆಟೋಮೇಶನ್, ಆರ್ಟಿಸನ್ ಯೂಸಿಂಗ್ ಅಡ್ವಾನ್ಸ್ಡ್ ಟೂಲ್ಸ್ ಗಳಲ್ಲಿ ೧೦ನೇ ತರಗತಿ ಉತ್ತೀರ್ಣರಾದ ಗ್ರಾಮೀಣ ಪ್ರದೇಶದ ಮಕ್ಕಳು ಪ್ರವೇಶ ಪಡೆಯಬಹುದಾಗಿದೆ.ಆಸಕ್ತ ಅಭ್ಯರ್ಥಿಗಳು ತಿತಿತಿ.ಛಿiಣe.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಖಾಸಗಿ ನೆಟ್ ಸೆಂಟರ್ ಅಥವಾ ಹತ್ತಿರದ ಸರ್ಕಾರಿ ಸಂಸ್ಥೆಗಳಲ್ಲಿ ತೆರಳಿ ಮೇ ೮ ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಬಬಲೇಶ್ವರ ಮೊ ಸಂಖ್ಯೆ: ೯೮೪೪೭೯೩೯೭೦, ೯೮೮೬೫೯೧೭೦೦,…
