Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಚಡಚಣ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಗ್ರಾಮೀಣ ಭಾಗದ ಬಡವರು ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ವಿವಿಧ ರೀತಿಯಲ್ಲಿ ಆಧಾರವಾಗಿದ್ದು, ಸಮುದಾಯದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡುತ್ತಿದೆ ಎಂದು ಯೋಜನಾಧಿಕಾರಿ ನಟರಾಜ್ ಎಲ್.ಎಂ. ಹೇಳಿದರು.ಹಲಸಂಗಿ ಹಾಗೂ ಲೋಣಿ ಬಿ.ಕೆ. ವಲಯದ ಪದಾಧಿಕಾರಿಗಳಿಗಾಗಿ ಝಳಕಿ ಪಟ್ಟಣದ ಬೀರಲಿಂಗೇಶ್ವರ ಮಂಗಲ ಕಾರ್ಯಾಲಯದಲ್ಲಿ ಆಯೋಜಿಸಿದ್ದ ತರಬೇತಿ ಕಾರ್ಯಾಗಾರವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಅನುದಾನ, ಸುಜ್ಞಾನ ನಿಧಿ ವಿದ್ಯಾರ್ಥಿವೇತನ, ಮಾಶಾಸನ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲಾಗುತ್ತಿದೆ. ಸಂಘಗಳ ಮೂಲಕ ಗ್ರಾಮೀಣ ಜನರಲ್ಲಿ ಉಳಿತಾಯ ಹಾಗೂ ಸ್ವಾವಲಂಬನೆಯ ಮನೋಭಾವ ಬೆಳೆಸುವುದರ ಜೊತೆಗೆ ಒಕ್ಕೂಟದ ಪರಿಕಲ್ಪನೆಯ ಮೂಲಕ ಸಂಘಟನೆಗೆ ಬಲ ನೀಡಲಾಗುತ್ತಿದೆ ಎಂದರು.ವಿಜಯಪುರ ಜಿಲ್ಲಾ ವಿಚಕ್ಷಣಾಧಿಕಾರಿ ಶ್ರೀಕಾಂತ್ ಅವರು ಪ್ರಾತ್ಯಕ್ಷಿಕೆಯ ಮೂಲಕ ಮಾಹಿತಿ ನೀಡಿದರು.ವಿಜಯಪುರ ಜಿಲ್ಲಾ ಬಿ.ಸಿ. ವಿಭಾಗದ ಪ್ರಬಂಧಕ ಸಂತೋಷಕುಮಾರ್ ವಿವಿಧ ಸೌಲಭ್ಯಗಳ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಕರಡು ಮತದಾರರ ಪಟ್ಟಿಯನ್ನು ಪರಿಶೀಲಿಸಿ ಯಾವುದೇ ಆಕ್ಷೇಪಣೆ, ಸಲಹೆಗಳಿದ್ದಲ್ಲಿ ನಿಗದಿತ ಅವಧಿಯೊಳಗೆ ಸಲ್ಲಿಸಬೇಕು ಎಂದು ತಹಶೀಲ್ದಾರ ನಿಂಗಣ್ಣ ಬಿರಾದಾರ ಹೇಳಿದರು.ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಮಂಗಳವಾರ ಜರುಗಿದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿಧಾನಸಭಾ ಮತಕ್ಷೇತ್ರದ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು ಇದರಲ್ಲಿ ೧,೦೨೮೦೫ ಪುರುಷರು, ೯೭೩೯೮ ಮಹಿಳಾ, ೨೬ ತೃತಿಯ ಲಿಂಗಿ ಸಹಿತ ಒಟ್ಟು ೨,೦೦೨೨೯ ಮತದಾರರಿದ್ದಾರೆ. ಕ್ಷೇತ್ರದಲ್ಲಿನ ೨೫೨ ಮತಗಟ್ಟೆಗಳಿಗೆ ಹೊಸದಾಗಿ ೦೪ ಮತಗಟ್ಟೆಗಳನ್ನು ಸೃಜಿಸಿ ಒಟ್ಟು ೨೫೬ ಮತಗಟ್ಟೆಗಳು ರಚಿಸಲಾಗಿದೆ.ಪರಿಷ್ಕರಣೆಯ ನಂತರ ಮತದಾರರ ಪಟ್ಟಿಯಿಂದ ೩೦,೫೫೧ ಮತದಾರರು ಹೊರಗುಳಿದಿದ್ದಾರೆ. ಇನ್ನೂ ೭೯೫೫ ಮತದಾರರು ಮರಣ ಹೊಂದಿದ್ದರೆ, ೩೦೧೭ ಜನ ಡಬಲ್ ಇದ್ದು, ೧೮,೬೭೨ ಮತದಾರರು ಶಾಶ್ವತ ವಲಸೆ ಹೋಗಿದ್ದಾರೆ. ೮೪೦ ಜನ ಗೈರಾಗಿದ್ದಾರೆ.ಹೆಸರು ತಿದ್ದುಪಡೆ, ಆಕ್ಷೇಪಣೆಗಳಿಗೆ ನಮೂನೆ ೬,೭,೮ ರ ಮೂಲಕ ಸೆಪ್ಟೆಂಬರ್ ೨೩, ೨೦೨೬ರ ಸಂಜೆ ೫.೩೦ ಗಂಟೆಗಳ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಆಕ್ಷೇಪಣೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ ಗ್ರಾಮೀಣ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ನೇಮಕ ಹಾಗೂ ಸನ್ಮಾನ ಸಮಾರಂಭವು ಆ.22ರಂದು ನಗರದ ಹೋಟೆಲ್ ಮಧುವನ್ ಫಂಕ್ಷನ್ ಹಾಲ್‌ನಲ್ಲಿ ವಿಜೃಂಭಣೆಯಿಂದ ಜರುಗಿತು.ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷೆ ಶ್ರೀಮತಿ ಸುಮತಿ ಜೆ, ಕಾರ್ಯಾಧ್ಯಕ್ಷ ನಾಗನಗೌಡ, ಗೌರವಾಧ್ಯಕ್ಷ ಸುರೇಶ ಶೇಡಶ್ಯಾಳ, ಪ್ರಧಾನ ಕಾರ್ಯದರ್ಶಿ ಸಂತೋಷ ಸಲಗರ ಹಾಗೂ ಜಿಲ್ಲಾ ಘಟಕದ ಎಲ್ಲ ಪದಾಧಿಕಾರಿಗಳು ಮತ್ತು ನಿರ್ದೇಶಕರು ಉಪಸ್ಥಿತರಿದ್ದು, ನೂತನ ಪದಾಧಿಕಾರಿಗಳನ್ನು ಅಭಿನಂದಿಸಿ ಸನ್ಮಾನಿಸಿದರು.ವಿಜಯಪುರ ಗ್ರಾಮೀಣ ಘಟಕದ ನೂತನ ಪದಾಧಿಕಾರಿಗಳಾಗಿ ಆರ್.ಎನ್. ಅಂಗಡಿ ಗೌರವಾಧ್ಯಕ್ಷರು, ಎನ್.ಎಂ. ಮೇಲಿನಕೇರಿ ಅಧ್ಯಕ್ಷರು, ಆನಂದ ಮೂಲಿಮನಿ ಹಾಗೂ ರೇಣುಕಾ ಪೂಜಾರಿ ಉಪಾಧ್ಯಕ್ಷರು, ರವಿ ರಾಠೋಡ ಕೋಶಾಧ್ಯಕ್ಷರು, ವಸೀಮ ಚಟ್ಟರಕಿ ಪ್ರಧಾನ ಕಾರ್ಯದರ್ಶಿ, ನಾರಾಯಣ ತಲಗಡೆ ಹಾಗೂ ಕೆ.ಎಂ. ಹೂಗಾರ ಸಂಘಟನಾ ಕಾರ್ಯದರ್ಶಿಗಳು, ಶರಣಗೌಡ ಬಿರಾದಾರ ಸಹ ಕಾರ್ಯದರ್ಶಿ ಹಾಗೂ ಜಿ.ಎಂ. ಪಾಟೀಲ, ಎಂ.ಬಿ. ನಾರಾಯಣಪೂರ, ವೈ.ಡಿ. ಕೋರಿ, ಶ್ರೀನಿವಾಸ ಬೊಮ್ಮನಹಳ್ಳಿ ಮತ್ತು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವಿಜಯಪುರ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.ಸಂಘದ ಜಿಲ್ಲಾ ಘಟಕದ ಗೌರವ ಸಲಹೆಗಾರರಾಗಿ ಬಸಯ್ಯ ಹಿರೇಮಠ, ಗೌರವಾಧ್ಯಕ್ಷರಾಗಿ ಎಂ.ಎಸ್. ಭೂಸಗೊಂಡ, ಕಾರ್ಯಾಧ್ಯಕ್ಷರಾಗಿ ಆರ್.ಎಂ. ರಜಪೂತ, ಅಧ್ಯಕ್ಷರಾಗಿ ಜಗದೀಶ ಬೋಳಸೂರ, ಉಪಾಧ್ಯಕ್ಷರಾಗಿ ರಾಯಪ್ಪ ಇವಣಗಿ ಹಾಗೂ ಮಹಿಳಾ ಉಪಾಧ್ಯಕ್ಷರಾಗಿ ಶ್ರೀಮತಿ ಎಸ್.ಎಂ. ಬಾಟಿ ಅವರನ್ನು ನೇಮಕ ಮಾಡಲಾಗಿದೆ.ಕೋಶಾಧ್ಯಕ್ಷರಾಗಿ ಎನ್.ಆರ್. ಪಾಟೀಲ, ಪ್ರಧಾನ ಕಾರ್ಯದರ್ಶಿಯಾಗಿ ರವೀಂದ್ರ ಉಗಾರ, ಮಹಿಳಾ ಸಂಘಟನಾ ಕಾರ್ಯದರ್ಶಿಯಾಗಿ ಶ್ರೀಮತಿ ಶೈಲಶ್ರ್ರಿ ಯಡ್ರಾಮಿ, ಸಂಘಟನಾ ಕಾರ್ಯದರ್ಶಿಯಾಗಿ ಝಡ್.ಆಯ್ ಇಂಡಿಕರ್, ಮಹಿಳಾ ಸಹಕಾರ್ಯದರ್ಶಿಯಾಗಿ ಶ್ರೀಮತಿ ಅಂಬಿಕಾ ಗೋಗಿ ಹಾಗೂ ಸಹಕಾರ್ಯದರ್ಶಿಯಾಗಿ ವಿ.ಎಲ್. ಆಗಸರ್ ಅವರನ್ನು ನೇಮಕ ಮಾಡಲಾಗಿದೆ.ನೂತನ ಪದಾಧಿಕಾರಿಗಳು ಜಿಲ್ಲೆಯ ಪ್ರಾಥಮಿಕ ಶಾಲಾ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವುದು, ಶಿಕ್ಷಕರ ಹಕ್ಕು ಹಿತಾಸಕ್ತಿಗಳ ರಕ್ಷಣೆಗೆ ಶ್ರಮಿಸುವುದು ಹಾಗೂ ಸಂಘದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುವದು. ಸಂಘದ ಚಟುವಟಿಕೆಗಳಲ್ಲಿ ಎಲ್ಲ ಪದಾಧಿಕಾರಿಗಳು ಸಕ್ರಿಯವಾಗಿ ಪಾಲ್ಗೊಂಡು ಸಂಘದ ಉದ್ದೇಶಗಳನ್ನು ಯಶಸ್ವಿಗೊಳಿಸುವಂತೆ…

Read More

ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದದಿಂದ ಸಿಎಂ ಗೆ ಮನವಿ ಉದಯರಶ್ಮಿ ದಿನಪತ್ರಿಕೆ ತಿಕೋಟಾ: ವಿಜಯಪುರ ಜಿಲ್ಲೆಯನ್ನು 371ಜೆ ಮೀಸಲಾತಿ ಅಡಿ ಸೇರಿಸಲು ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಕಳಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದದಿಂದ ತಹಶೀಲ್ದಾರ ಅವರ ಮೂಲಕ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರಿಗೆ ಮನವಿ ಸಲ್ಲಿಸಿದ್ದಾರೆ.ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಕಲ್ಲಯ್ಯ ಸಾಲಿಮಠ ಅವರು ಮಾತನಾಡಿ, ಅಖಂಡ ಹೈದ್ರಾಬಾದ್ ಪ್ರಾಂತದ ಭಾಗವಾಗಿದ್ದ ವಿಜಯಪುರ ಜಿಲ್ಲೆಯನ್ನು 371(ಜೆ) ಮೀಸಲಾತಿಯಿಂದ ಕೈಬಿಟ್ಟದ್ದಕ್ಕೆ ಜಿಲ್ಲೆಯ ಜನರಿಗೆ ಅನ್ಯಾಯವಾಗಿದೆ .ಕೂಡಲೇ ಜಿಲ್ಲೆಯ ಶಾಸಕರು ಸಚಿವರು, ಸಂಸದರು, ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರಿ 371(ಜೆ ) ಮೀಸಲಾತಿಗೆ ಸೇರಿಸಲು ಕೇಂದ್ರಕ್ಕೆ ಪ್ರಸ್ತಾವನೆ ಕಳಿಸಬೇಕೆಂದು ಆಗ್ರಹಿಸಿದರು.ಜಿಲ್ಲೆಯ ಸಾರಿಗೆ ವ್ಯವಸ್ಥೆ, ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಅಡಿ ಇದೆ,ನ್ಯಾಯಾಂಗ ವ್ಯವಸ್ಥೆ ಕೂಡಾ ಕಲ್ಬುರ್ಗಿ ಉಚ್ಛ ನ್ಯಾಯಾಲಯದಡಿ, ಪುರಾತತ್ವ ಪ್ರಾಚ್ಯವಸ್ತು ಸಂಗ್ರಹಾಲಯ, ನೀರಾವರಿ ಕೃಷ್ಣಾ ಕಾಡಾ ಸೇರಿ ಹಲವು ಇಲಾಖೆಗಳು ಕಲಬುರಗಿ ವಿಭಾಗದಲ್ಲಿವೆ ಒಂದೇ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೬-೨೭ನೇ ಸಾಲಿನಲ್ಲಿ ಪಿಎಚ್ ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ಫೆಲೋಶಿಪ್ಗಾಗಿ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗೆ ಮೂರು ವರ್ಷಗಳ ಅವಧಿಗೆ ಜೆಆರ್ ಎಫ್ ಮಾದರಿಯಲ್ಲಿ ಫೆಲೋಶಿಪ್ ನೀಡಲಾಗುವುದು. ಅಭ್ಯರ್ಥಿಗಳು ಕರ್ನಾಟಕದ ನಿವಾಸಿಗಳಾಗಿದ್ದು, ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಪೂರ್ಣಕಾಲಿಕ ಪಿಎಚ್ಡಿ ಗೆ ಪ್ರವೇಶ ಪಡೆದಿರಬೇಕು. ಕುಟುಂಬದ ವಾರ್ಷಿಕ ಆದಾಯ ೮ ಲಕ್ಷ ಮೀರಬಾರದು ಹಾಗೂ ಗರಿಷ್ಠ ವಯೋಮಿತಿ ೩೫ ವರ್ಷವಾಗಿರಬೇಕು.ಅರ್ಹ ವಿದ್ಯಾರ್ಥಿಗಳು ಅ.೩೧, ೨೦೨೬ರೊಳಗಾಗಿ ಸೇವಾ ಸಿಂಧು hಣಣಠಿs://sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಅರ್ಜಿ ಸಲ್ಲಿಸಿ, ಅಗತ್ಯ ದಾಖಲೆಗಳ ದೃಢೀಕೃತ ಪ್ರತಿಗಳನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಇವರ ಕಚೇರಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ೦೮೩೫೨-೨೯೫೫೨೩ ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಧಿಕಾರಿಗಳು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಇವರ ಪ್ರಕಟಣೆ ತಿಳಿಸಿದೆ.

Read More

ವಿಜಯಪುರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ೧೨ ದಿನಗಳ ಸೇನಾ ನೇಮಕಾತಿ ಪ್ರಕ್ರಿಯೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಂಗಳೂರು ಸೇನಾ ನೇಮಕಾತಿ ಕಚೇರಿ ಹಾಗೂ ವಿಜಯಪುರ ಜಿಲ್ಲಾಡಳಿತದ ಸಹಯೋಗದಲ್ಲಿ ಸೆ. ೧೦ ರಿಂದ ೨೨ರವರೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಬೃಹತ್ ಅಗ್ನಿವೀರ ನೇಮಕಾತಿ ರ್‍ಯಾಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಹಾಗೂ ಮಂಗಳೂರಿನ ಸೇನಾ ನೇಮಕಾತಿ ಅಧಿಕಾರಿ ಕರ್ನಲ್ ಸೋಮು ಅವರು ತಿಳಿಸಿದ್ದಾರೆ. ಜೂ.೧ರಿಂದ ೧೨ರವರೆಗೆ ನಡೆದ ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಶಾರ್ಟ್ಲಿಸ್ಟ್ ಆಗಿರುವ ಅಭ್ಯರ್ಥಿಗಳು ಈ ನೇಮಕಾತಿ ರ‍್ಯಾಲಿಯಲ್ಲಿ ಭಾಗವಹಿಸಲು ಅರ್ಹರಾಗಿದ್ದಾರೆ. ಕರ್ನಾಟಕದ ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಾವಣಗೆರೆ, ಗದಗ, ಹಾವೇರಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಭ್ಯರ್ಥಿಗಳಿಗೆ ರ‍್ಯಾಲಿಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.ಅಗ್ನಿವೀರ ಜನರಲ್ ಡ್ಯೂಟಿ, ಟೆಕ್ನಿಕಲ್, ಕ್ಲರ್ಕ್, ಸ್ಟೋರ್ ಕೀಪರ್ ಟೆಕ್ನಿಕಲ್, ಟ್ರೇಡ್ಸ್ಮನ್ (೧೦ನೇ ತರಗತಿ) ಹಾಗೂ ಟ್ರೇಡ್ಸ್ಮನ್ (೮ನೇ ತರಗತಿ) ವಿಭಾಗಗಳ ಹುದ್ದೆಗಳಿಗೆ…

Read More

ವಿಜಯಪುರದಲ್ಲಿ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜನನದ ನಂತರದ ಮೊದಲ ೧೦ ದಿನಗಳಲ್ಲಿ ತಾಯಿ ನೀಡುವ ಎದೆಹಾಲು ಮಗುವಿಗೆ ಅಗತ್ಯವಾದ ಪೋಷಕಾಂಶ ಒದಗಿಸುವುದರ ಜೊತೆಗೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಕಾರಿಯಾಗಿದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಹೇಳಿದರು.ನಗರದ ಜಿಲ್ಲಾಸ್ಪತ್ರೆಯ ಆವರಣದಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ, ಆಸ್ಪತ್ರೆಗೆ ಚಿಕಿತ್ಸೆಗಾಗಿ ಆಗಮಿಸಿದ್ದ ತಾಯಂದಿರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಅವರು ಮಾತನಾಡಿದರು.ಈ ಸಂದರ್ಭದಲ್ಲಿ ಗರ್ಭಿಣಿ ಮಹಿಳೆಯರು ಸರ್ಕಾರದ ಮಾತೃವಂದನಾ ಯೋಜನೆಗೆ ನೋಂದಣಿ ಮಾಡಿಕೊಳ್ಳುವಂತೆ ಸಲಹೆ ನೀಡಿದರು.ಮಗುವಿನ ಆರೈಕೆ ಹಾಗೂ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಯಾವುದೇ ಲೋಪವಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಸ್ಪತ್ರೆಯ ಅಧಿಕಾರಿಗಳು ಹಾಗೂ ವೈದ್ಯಕೀಯ ಸಿಬ್ಬಂದಿಗೆ ಸೂಚಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಲ್ಲನಗೌಡ ಬಿರಾದಾರ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೊಳಿ, ಮಹಿಳಾ ಮತ್ತು ಮಕ್ಕಳ…

Read More

ಮಹಿಳಾ ಸ್ಪಂದನಾ ಮತ್ತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪಾಶ್ ಕಾಯ್ದೆ ಇಡೀ ದೇಶದಲ್ಲಿ ಮೊದಲನೇ ಸ್ಥಾನದಲ್ಲಿದ್ದೇವೆ. ಈ ಕಾಯ್ದೆಯ ಉದ್ದೇಶ ಸಫಲಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ಇಲಾಖೆಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮಿ ಚೌಧರಿ ಅವರು ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕರ್ನಾಟಕ ರಾಜ್ಯ ಮಹಿಳಾ ಆಯೋಗ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ನಗರದ ಜಿಲ್ಲಾ ಪಂಚಾಯತಿಯಲ್ಲಿ ಮಂಗಳವಾರ ನಡೆದ ಮಹಿಳಾ ಸ್ಪಂದನಾ ಮತ್ತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹೊಟೇಲ್, ರೆಸಾರ್ಟ್ ಮತ್ತಿತರ ಕಡೆಗಳಲ್ಲಿ ಮಹಿಳೆಯರು ಕೆಲಸ ಮಾಡುವ ಸ್ಥಳಗಳಲ್ಲಿ ಪಾಶ್ ಕಾರ್ಯ ನಿರ್ವಹಿಸುವಂತಾಗಲಿ. ತನ್ಮೂಲಕ ಮಹಿಳೆಯರಿಗೆ ಸುರಕ್ಷತಾ ಭಾವ ಮೂಡಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.ಆಗಾಗ ಪಾಶ್ ತರಬೇತಿ ಆಯೋಜಿಸಲು ಸಲಹೆ ಮಾಡಿದ ಅವರು, ಪ್ರತಿ…

Read More