Author: editor.udayarashmi@gmail.com

ಬಿಸಿಲಿನ ತಾಪಮಾನ ಭಾರಿ ಹೆಚ್ಚಳ | ಕೋಳಿಗಳ ಆರೋಗ್ಯ, ಉತ್ಪಾದನೆ ಹಾಗೂ ಸಾಕಾಣಿಕಾರರ ಆರ್ಥಿಕ ಸ್ಥಿತಿಗೆ ಗಂಭೀರ ಹೊಡೆತ ಉದಯರಶ್ಮಿ ದಿನಪತ್ರಿಕೆ ವರದಿ: ಸಿದ್ರಾಮ್ ಎಮ್ ಇಟ್ಟಿಜಮಖಂಡಿ: ರಾಜ್ಯದ ವಿವಿಧ ಭಾಗಗಳಂತೆ ಜಮಖಂಡಿ ತಾಲೂಕು ಕೂಡ ಈ ಬಾರಿ ಭಾರೀ ಬಿಸಿಲಿನ ತಾಪಮಾನಕ್ಕೆ ಒಳಗಾಗಿದ್ದು, ಇದರ ಪರಿಣಾಮ ಕುಕ್ಕುಟೋದ್ಯಮದ ಮೇಲೆ ತೀವ್ರವಾಗಿ ಬೀಳುತ್ತಿದೆ. ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶವು ಕೋಳಿಗಳ ಆರೋಗ್ಯ, ಉತ್ಪಾದನೆ ಹಾಗೂ ಸಾಕಾಣಿಕಾರರ ಆರ್ಥಿಕ ಸ್ಥಿತಿಗೆ ಗಂಭೀರ ಹೊಡೆತ ನೀಡುತ್ತಿದೆ.ಸ್ಥಳೀಯ ಕುಕ್ಕುಟ ಸಾಕಾಣಿಕಾರರ ಮಾಹಿತಿಯಂತೆ, ಸಾಮಾನ್ಯವಾಗಿ 25ರಿಂದ 30 ಡಿಗ್ರಿ ಸೆಲ್ಸಿಯಸ್ ನಡುವೆ ಕೋಳಿಗಳು ಉತ್ತಮವಾಗಿ ಬೆಳೆಯುತ್ತವೆ. ಆದರೆ ಇತ್ತೀಚಿನ ದಿನಗಳಲ್ಲಿ ತಾಪಮಾನ 38ರಿಂದ 42 ಡಿಗ್ರಿ ಸೆಲ್ಸಿಯಸ್ ವರೆಗೆ ಏರಿಕೆಯಾಗಿರುವುದರಿಂದ ಕೋಳಿಗಳು ತೀವ್ರ ಉಷ್ಣ ಒತ್ತಡಕ್ಕೆ ಒಳಗಾಗುತ್ತಿವೆ. ಇದರ ಪರಿಣಾಮವಾಗಿ ಅವುಗಳ ಆಹಾರ ಸೇವನೆ ಗಣನೀಯವಾಗಿ ಕುಸಿಯುತ್ತಿದೆ. ಆಹಾರ ಸೇವನೆ ಕಡಿಮೆಯಾದಂತೆ ದೇಹದ ತೂಕವೂ ಕಡಿಮೆಯಾಗುತ್ತಿದ್ದು, ಬೆಳವಣಿಗೆ ವಿಳಂಬವಾಗುತ್ತಿದೆ.ಈ ಪರಿಸ್ಥಿತಿಯನ್ನು ಎದುರಿಸಲು ಸಾಕಾಣಿಕಾರರು ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು…

Read More

ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳು ಆಯೋಗದ ಅಧ್ಯಕ್ಷ ಡಾ.ಮೂರ್ತಿ ಎಲ್. ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಾನೂನಿನಡಿ ಬರುವ ಕೆಲಸವನ್ನು ನಿಗದಿತ ಅವಧಿಯಲ್ಲಿ ನಿರ್ವಹಿಸಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮ ವಹಿಸಬೇಕು ಎಂದು ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳು ಆಯೋಗದ ಅಧ್ಯಕ್ಷರಾದ ಡಾ. ಮೂರ್ತಿ ಎಲ್. ಅವರು ಹೇಳಿದರು.ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಬಗರ ಹುಂಕುಂ ಅರ್ಜಿ ವಿಲೇವಾರಿ ಮಾಡಬೇಕು. ‌ಗೋಮಾಳ ಜಮೀನು ಅರ್ಜಿ ಹಾಕಿಕೊಂಡಿದ್ದಾರೆ. ಆ ಅರ್ಜಿಗಳನ್ನು ವಿಲೇವಾರಿ ಮಾಡಬೇಕು ಎಂದರು.ಸ್ಮಶಾನ‌ ಭೂಮಿ ಎಲ್ಲೆಲ್ಲಿ ಅವಶ್ಯಕತೆ ಇದೆ ಎಂಬುದಾಗಿ ಜಾಗೆ ಗುರುತಿಸಬೇಕು. ತಹಶೀಲ್ದಾರ್‌, ಎಸಿ ಮೂಲಕ ಡಿಸಿ‌ ಗಮನಕ್ಕೆ ತಂದು ಲೋಪ ದೋಷಗಳಾಗದಂತೆ ಆದ್ಯತೆಯ ಮೇಲೆ ಕ್ರಮ ಕೈಗೊಳ್ಳಬೇಕು ಎಂದರು.ಗೋಮಾಳ ಜಮೀನಿಗೆ ಸಂಬಂಧಿಸಿದ ಸರ್ಕಾರದ ಅಗತ್ಯತೆ ಅನುಸಾರ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಖಾಸಗಿ ಜಮೀನು ಮಂಜೂರು ಮಾಡುವ…

Read More

6 ತಿಂಗಳು ಚೀಟಿ ಅಮಾನತ್ತು | ಬಾಗಲಕೋಟೆ ಜಿಲ್ಲಾಡಳಿತ ಎಚ್ಚರಿಕೆ ಉದಯರಶ್ಮಿ ದಿನಪತ್ರಿಕೆ ಬಾಗಲಕೋಟೆ: ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ (ಪಿಡಿಎಸ್) ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿದಾರರಿಗೆ ಎನ್‌ಎಫ್‌ಎಸ್‌ಎ ಹಾಗೂ ಅನ್ನಭಾಗ್ಯ ಯೋಜನೆಗಳಡಿ ಉಚಿತ ಆಹಾರಧಾನ್ಯ ವಿತರಣೆ ನಡೆಯುತ್ತಿದೆ. ಆದರೆ, ಕೆಲವರು ತಮ್ಮ ಪಾಲಿನ ಪಡಿತರವನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವ ಬಗ್ಗೆ ವರದಿಗಳು ಕೇಳಿಬರುತ್ತಿರುವ ಹಿನ್ನೆಲೆ ಜಿಲ್ಲಾಡಳಿತ ಕಠಿಣ ಎಚ್ಚರಿಕೆ ನೀಡಿದೆ.ಯಾವುದೇ ಪಡಿತರ ಚೀಟಿದಾರ ಅಥವಾ ಅದರ ಸದಸ್ಯರು ತಮಗೆ ಹಂಚಿಕೆಯಾದ ಆಹಾರಧಾನ್ಯವನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವುದು ಪತ್ತೆಯಾದರೆ, ಅಂತಹವರ ಪಡಿತರ ಚೀಟಿಯನ್ನು 6 ತಿಂಗಳ ಅವಧಿಗೆ ಅಮಾನತ್ತು ಪಡಿಸಲಾಗುವುದು. ಇದಲ್ಲದೆ, ಅವರು ಮಾರಾಟ ಮಾಡಿದ ಆಹಾರಧಾನ್ಯದ ಪ್ರಮಾಣಕ್ಕೆ ಅನುಗುಣವಾಗಿ ಮುಕ್ತ ಮಾರುಕಟ್ಟೆ ದರದಂತೆ ದಂಡ ವಿಧಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಜಂಟಿ ನಿರ್ದೇಶಕರು ಶ್ರೀಶೈಲ ಕಂಕಣವಾಡಿ ಅವರು, ಪಡಿತರವು ಬಡ ಮತ್ತು ಅರ್ಹ ಫಲಾನುಭವಿಗಳಿಗೆ ಸರ್ಕಾರದಿಂದ…

Read More

ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಸಮೀಪದ ವಂದಾಲ ಗ್ರಾಮದ ಶಾಕಂಬರಿ ಪ್ರೌಢಶಾಲೆಯ ವಿದ್ಯಾರ್ಥಿಯೊಬ್ಬನ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಅಂಕ ತಪ್ಪಾಗಿ ನಮೂದಾಗಿದ್ದು, ವಿದ್ಯಾರ್ಥಿಗೆ ಅನ್ಯಾಯವಾಗಿದೆ.ಗ್ರಾಮದ ವಿದ್ಯಾರ್ಥಿ ಸಂತೋಷ ರಾಘವೇಂದ್ರ ಖೇಡದ ೨೦೨೫-೨೬ನೇ ಸಾಲಿನ ಪರೀಕ್ಷೆಯಲ್ಲಿ ವಿಜ್ಞಾನ ವಿಷಯದಲ್ಲಿ ೮೦ಕ್ಕೆ ೬೬ ಅಂಕ ಪಡೆದಿದ್ದಾನೆ. ಇದು ಉತ್ತರ ಪತ್ರಿಕೆಯ ಝೆರಾಕ್ಸ್ ಪ್ರತಿ ಪಡೆದಾಗ ತಿಳಿದುಬಂದಿದೆ.ಆದರೆ ಏಪ್ರಿಲ್ ೨೩ರಂದು ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟವಾದ ಅಂಕಪಟ್ಟಿಯಲ್ಲಿ ಸಂತೋಷಗೆ ವಿಜ್ಞಾನ ವಿಷಯದಲ್ಲಿ ಕೇವಲ ೨೫ ಅಂಕ ಮಾತ್ರ ನಮೂದಾಗಿದೆ.ಇದರಿಂದ ನೊಂದ ವಿದ್ಯಾರ್ಥಿ, ಉತ್ತರ ಪತ್ರಿಕೆಯ ಪ್ರತಿ ಕೋರಿ ಪರೀಕ್ಷಾ ಮಂಡಳಿಗೆ ಅರ್ಜಿ ಸಲ್ಲಿಸಿದ್ದ. ಪ್ರತಿ ಕೈಸೇರಿದಾಗ ಅಸಲಿ ಎಡವಟ್ಟು ಬಯಲಾಗಿದೆ.”ಉತ್ತರ ಪತ್ರಿಕೆಯ ಮುಖಪುಟದಲ್ಲಿ ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ ಎಂದು ಮೂರು ವಿಭಾಗಗಳಿಗೆ ಪ್ರತ್ಯೇಕ ಅಂಕ ನಮೂದಿಸಿ ಒಟ್ಟು ಮೊತ್ತ ಹಾಕಬೇಕು. ಇಲ್ಲಿ ಮೌಲ್ಯಮಾಪಕರು ಅಕ್ಷರದಲ್ಲಿ ೬೬ ಅಂಕ ಎಂದು ಬರೆದಿದ್ದಾರೆ. ಆದರೆ ಗಣಕಯಂತ್ರದಲ್ಲಿ ದಾಖಲಿಸುವಾಗ ಜೀವಶಾಸ್ತ್ರ ವಿಭಾಗದ ೨೫ ಅಂಕವನ್ನು ಮಾತ್ರ ನಮೂದಿಸಿದ್ದಾರೆ” ಎಂದು ಶಾಲೆಯ ಮುಖ್ಯ ಶಿಕ್ಷಕ ಆನಂದ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಪಶು ಸಂಗೋಪನಾ ಇಲಾಖೆ ಅಡಿಯಲ್ಲಿ ಜಾನುವಾರುಗಳಿಗೆ ಕಾಲು ಬಾಯಿ ಬೇನೆ ನಿಯಂತ್ರಣಕ್ಕೆ ನಗರ ಸೇರಿದಂತೆ ತಾಲೂಕಿನಲ್ಲಿ ೯ ನೇ ಸುತ್ತಿನ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ ಎಂದು ಹಿರಿಯ ಪಶು ವೈದ್ಯಾಧಿಕಾರಿ ಡಾ. ರಾಜಕುಮಾರ ಅಡಕಿ ತಿಳಿಸಿದ್ದಾರೆ.ಆಸ್ಪತ್ರೆಯ ಆವರಣದಲ್ಲಿ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ೪೭೪೪೩ ಜಾನುವಾರುಗಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ . ಇಂಡಿ ತಾಲೂಕಿನಲ್ಲಿ ಜಾನುವಾರುಗಳ ಆರೋಗ್ಯದ ದೃಷ್ಟಿಯಿಂದ ಏ. ೨೩ ರಿಂದಲೇ ಲಸಿಕೆ ನೀಡವ ಕಾರ್ಯ ಆರಂಭವಾಗಿದ್ದು ಮೇ ೨೨ ರ ವರೆಗೆ ನಡೆಯಲಿದೆ ಎಂದರು.ಲಸಿಕೆ ನೀಡಲು ಇಂಡಿ ತಾಲೂಕಿನಲ್ಲಿ ಒಟ್ಟು ೧೨ ಸುಪರವಾಯಿಜರ ಮತ್ತು ೪೮ ಲಸಿಕೆದಾರರು ಕಾರ್ಯನಿರ್ವಹಿಸುವರು.ಲಸಿಕೆದಾರರು ಗ್ರಾಮೀಣ ಭಾಗದಲ್ಲಿ ಮನೆ ಮನೆ ತೆರಳಿ ತೋಟ ಮತ್ತು ಹೊಲ ಗದ್ದೆ ರೈತರ ವಸತಿ ಕೇಂದ್ರಕ್ಕೆ ಸಂಪರ್ಕಿಸಿ ಲಸಿಕೆ ನೀಡಿ ಅಭಿಯಾನ ಯಶಸ್ವಿಗೊಳಿಸುವರು. ಸಿಬ್ಬಂದಿಗೆ ಲಸಿಕೆ ನೀಡುವ ಕುರಿತು ತರಬೇತಿ ನೀಡಲಾಗಿದ್ದು ನೂರಕ್ಕೆ ನೂರರಷ್ಟು ಗುರಿ ಹೊಂದಲಾಗಿದೆ ಎಂದರು.…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಹಳ್ಳಿಗಳು ಅಭಿವೃದ್ಧಿಯಾದಾಗ ಮಾತ್ರ ದೇಶದ ನಿಜವಾದ ಅಭಿವೃದ್ಧಿ ಸಾಧ್ಯ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಸಿಂದಗಿ ತಾಲೂಕಿನ ಬಂದಾಳ ಗ್ರಾಮದಲ್ಲಿ ಹಳ್ಳದ ಬ್ರಿಡ್ಜ್ ನಿರ್ಮಾಣಕ್ಕೆ ಸಣ್ಣ ನೀರಾವರಿ ಇಲಾಖೆಯಿಂದ ಮಂಜೂರಾದ ೧.೮೧ ಕೋಟಿ ಮೊತ್ತದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಹಳ್ಳಿಗಳಲ್ಲಿ ಉತ್ತಮ ಪರಿಸರ, ಮೂಲಭೂತ ಸೌಕರ್ಯ ಹಾಗೂ ಆರೋಗ್ಯ, ಶಿಕ್ಷಣ ಮುಖ್ಯವಾಗಿ ಬೇಕು.ನಮ್ಮ ಕ್ಷೇತ್ರದ ರಸ್ತೆಗಳ ಅಭಿವೃದ್ಧಿಯ ಜೊತೆಗೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರದಿಂದ ಅನುದಾನ ತರಲಾಗಿದ್ದು, ಗುತ್ತಿಗೆದಾರರು ಉತ್ತಮ ಗುಣಮಟ್ಟದ ಕಾಮಗಾರಿ ಮಾಡಬೇಕು. ಸಾರ್ವಜನಿಕರು ಕಳಪೆ ಕಾಮಗಾರಿಯ ಬಗ್ಗೆ ನಿಗಾವಹಿಸಬೇಕು. ಮುಂದಿನ ದಿನಮಾನಗಳಲ್ಲಿ ಇನ್ನೂ ಹೆಚ್ಚಿನ ಮೂಲಸೌಕರ್ಯಗಳನ್ನು ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಐದು ಗ್ಯಾರಂಟಿಗಳ ಮಧ್ಯ ರಾಜ್ಯ ಸರ್ಕಾರ ಸಿಂದಗಿ ಮತಕ್ಷೇತ್ರಕ್ಕೆ ನೂರಾರು ಕೋಟಿ ಅನುದಾನವನ್ನ ನೀಡುತ್ತಲ್ಲಿದೆ. ನನಗೆ ನೀಡಿದ ಪ್ರತಿಯೊಂದು ಮತವು ಅದು ಅಭಿವೃದ್ಧಿಗಾಗಿ ಮೀಸಲಿಡುತ್ತೇನೆ ಎಂದರು.ಇದೇ ಸಂದರ್ಭದಲ್ಲಿ ಮುಖಂಡರಾದ ಬಸಯ್ಯ ಹಿರೇಮಠ, ವಿ.ಬಿ.ಕುರಡೆ, ಮುತ್ತು ಮುಂಡೇವಾಡಗಿ, ನಾರಾಯಣ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಶೀಘ್ರವೇ ಸ್ಥಾಪಿಸಲು ಒತ್ತಾಯಿಸಿ ಹಾಗೂ ಸರಕಾರಿ ಆಸ್ಪತ್ರೆಗಳ ಪರವಾಗಿ ಮಂಗಳೂರಿನಲ್ಲಿ ಶಾಂತಿಯುತವಾಗಿ ಡಿವೈಎಫ್‌ಐ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಯುವ ಜನರು ಹಾಗೂ ಸಮಾನ ಮನಸ್ಕ ಸಂಘಟನೆಯ ಮುಖಂಡರು ಹಾಗೂ ಕಾರ್ಯಕರ್ತರನ್ನು ರಾಜ್ಯ ಸರಕಾರ ಪೋಲಿಸರ ಮೂಲಕ ಬಂಧಿಸಿರುವುದನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ ತಾಲೂಕ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ ಎಂದು ತಾಲೂಕಾಧ್ಯಕ್ಷ ರಮೇಶ ಸಾಸಾಬಾಳ ತಿಳಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕ ನೀಡಿರುವ ಅವರು, ಸರಕಾರಿ ಆಸ್ಪತ್ರೆಗಳನ್ನು ಖಾಸಗೀ ಆಸ್ಪತ್ರೆಗೆ ವಹಿಸಿಕೊಟ್ಟಿರುವ ಕರಾರು ಒಪ್ಪಂದ ರದ್ದುಗೊಳಿಸಲು, ವೆನ್ಲಾಕನ್ನು ಪ್ರಾದೇಶಿಕ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಿ, ಖಾಸಗೀಕರಣದ ಪಿಪಿಪಿ ಮಾದರಿ ಕೈಬಿಡಲು, ಜಯದೇವ-ಕಿದ್ವಾಯಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲು ಸ್ಥಾಪಿಸಲು, ಜನಸಂಖ್ಯೆಗೆ ಅನುಗುಣವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ಪ್ರತೀ ತಾಲೂಕಿಗೂ ಸಾರ್ವಜನಿಕ ತಾಲೂಕು ಆಸ್ಪತ್ರೆ ಸ್ಥಾಪಿಸುವಂತೆ ಪ್ರಜಾಸತ್ತಾತ್ಮಕ ನೆಲೆಯಲ್ಲಿ ಆಗ್ರಹಿಸಿ ಉಸ್ತುವಾರಿ ಮಂತ್ರಿಗಳ ಕಛೇರಿ…

Read More

ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಗ್ರಾಮದ ಪೀಸ್ ಇಂಟರ್‌ನ್ಯಾಶನಲ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ೨೦೨೬ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.೧೦೦ ರಷ್ಟು ಫಲಿತಾಂಶದೊಂದಿಗೆ ಉತ್ತಮ ಸಾಧನೆ ಮಾಡಿದ್ದಾರೆ.ಆಂಗ್ಲ ಮಾಧ್ಯಮದ ಕುಮಾರಿ ಉಮ್ಮೆ ಐಮನ ಉಸ್ತಾದ ೫೮೧ (೯೩%) ಮತ್ತು ಕುಮಾರಿ ಫರಹನಾಜ ಕೋಬಾಳ ೫೮೧(೯೩%) ಅಂಕಗಳೊAದಿಗೆ ಪ್ರಥಮ ಸ್ಥಾನ ಪಡೆದಿದ್ದು, ಕುಮಾರಿ ಅರೂಶಾ ಮಂದೇವಾಲ ೫೭೮ (೯೨.೪೮%) ದ್ವಿತೀಯ ಸ್ಥಾನ ಹಾಗೂ ಕುಮಾರಿ ಸೌಬಿಯಾ ಮೋಮಿನ ೫೫೦(೮೮%) ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.ಪರೀಕ್ಷೆಗೆ ಹಾಜರಾದ ಎಲ್ಲ ವಿದ್ಯಾರ್ಥಿಗಳು ಪಾಸಾಗಿದ್ದು, ಶಾಲೆಯ ಒಟ್ಟು ಪಲಿತಾಂಶ ಶೇ.೧೦೦ ರಷ್ಟಾಗಿದೆ. ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿಯ ಸರ್ವ ಸದಸ್ಯರು, ಮುಖ್ಯಗುರುಗಳಾದ ಚಾಂದಪಾಶಾ ಹವಾಲ್ದಾರ ಸೇರಿದಂತೆ ಶಾಲೆಯ ಎಲ್ಲ ಸಿಬ್ಬಂದಿ ವರ್ಗ ಮೆಚ್ಚುಗೆ ವ್ಯಕ್ತಪಡಿಸಿ ವಿದ್ಯಾರ್ಥಿಗಳಿಗೆ ಶುಭಕೋರಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಶ್ರೀ ರವೀಂದ್ರನಾಥ ಟ್ಯಾಗೋರ್ ಶಿಕ್ಷಣ ಸಂಸ್ಥೆಯ ಶ್ರೀ ಗುರುದೇವ ಪಬ್ಲಿಕ್ ಅಂತರಾಷ್ಟ್ರೀಯ ವಸತಿ ಶಾಲೆಯ ೨೦೨೫-೨೬ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಉತ್ತಮ ರೀತಿಯಲ್ಲಿ ಬಂದಿದೆ.ಈ ಸಲದ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾದವರು ೮೨, ಡಿಸ್ಟಿಂಕ್ಷನ-೧೩, ಫಸ್ಟಕ್ಲಾಸ್-೪೦, ಸೆಕೆಂಡಕ್ಲಾಸ-೧೪, ಪಾಸಕ್ಲಾಸ-೯ ಫಲಿತಾಂಶ ಪಡೆದುಕೊಂಡಿದ್ದಾರೆ. ಅದರಲ್ಲಿ ಕುಮಾರಿ ದಿವ್ಯಾ ಮರೋಳ ೬೦೯ ಅಂಕಗಳನ್ನು ಪಡೆಯುವ ಮೂಲಕ ಪ್ರಥಮ ಸ್ಥಾನ ಗಳಿಸಿದ್ದಾಳೆ. ಹಾಗೆಯೇ ಶಿವಲಿಂಗ ಕಿಣಗಿ ೫೮೦ ಅಂಕಗಳನ್ನು ಪಡೆದು ದ್ವಿತೀಯ ಸ್ಥಾನ ಪಡೆದರೆ ಮೊಹಮ್ಮದ ಮುಜಾಹಿದ್ ಕಾಚೂರ೫೭೭ ಅಂಕಗಳನ್ನು ಪಡೆಯುವ ಮೂಲಕ ತೃತಿಯ ಸ್ಥಾನ ಗಳಿಸಿದ್ದಾನೆ. ಉತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷ ಡಾ|| ರವೀಂದ್ರ ಭೋಸಲೆ, ಶ್ರೀಮತಿ ಡಾ|| ಉಮಾ ಭೋಸಲೆ, ಸಂಸ್ಥಾಪಕರ ಕಾರ್ಯದರ್ಶಿ ರಾಮಚಂದ್ರ ಭೋಸಲೆ, ಸುಧೀರ ಭೋಸಲೆ ಮುಖ್ಯ ಗುರುಗಳು ಹಾಗೂ ಎಲ್ಲಾ ಸಿಬ್ಬಂಧಿ ಹರ್ಷ ವ್ಯಕ್ತ ಪಡಿಸಿದ್ದಾರೆ.

Read More

ಮೇ.೦೧ ಸಾಹಿತಿ ಡಾ.ಡಾ.ಚನ್ನಪ್ಪ ಕಟ್ಟಿ ಜನ್ಮದಿನ‌ ಈ ಸಂದರ್ಭದಲ್ಲಿ ಅವರ ಶಿಷ್ಯ ಬಳಗ ಮತ್ತು ಅಭಿಮಾನಿಗಳು ಸೇರಿ ಸಿಂದಗಿಯಲ್ಲಿ ಇದೇ ಮೇ .೦೧ ಶುಕ್ರವಾರ ದಂದು “ನೆಲೆ” ಎನ್ನುವ ಅಭಿನಂದನಾ ಗ್ರಂಥ ಅರ್ಪಿಸುವ ಮೂಲಕ ಅವರ ೭೦ ನೇ ವರ್ಷದ ಜನ್ಮದಿನ ಅರ್ಥಪೂರ್ಣವಾಗಿಸಲಿದ್ದಾರೆ. ಆ ಪ್ರಯುಕ್ತ ಈ ವಿಶೇಷ ಲೇಖನ ಲೇಖನ- ಮನು ಪತ್ತಾರ, ಕಲಕೇರಿವಿಜಯಪುರ ಉದಯರಶ್ಮಿ ದಿನಪತ್ರಿಕೆ ಸೃಜನಶೀಲತೆಯೇ ಜೀವಾಳವಾಗಿಸಿಕೊಂಡ ಕನ್ನಡದ ಅಪರೂಪದ ಲೇಖಕರಲ್ಲಿ ಡಾ. ಚನ್ನಪ್ಪ ಕಟ್ಟಿ ಅವರು ಕೂಡಾ ಒಬ್ಬರು.ಸಿಂದಗಿ ಎಂಬ ‘ಅರೆ ನಗರಿ’ ಯಲ್ಲಿ ನೆಲೆ ನಿಂತು, ಕಾವ್ಯದ ಮೂಲಕ ಸಾಹಿತ್ಯದ ಯಾನವನ್ನು ಪ್ರಾರಂಭಿಸಿ ಕಥೆ, ವಿಮರ್ಶೆ, ಸಂಶೋಧನೆ, ಜೀವನ ಚರಿತ್ರೆ, ಸಂಪಾದನೆ, ಅನುವಾದ ಹೀಗೆ ಸಾಹಿತ್ಯದ ಹಲವು ಪ್ರಕಾರಗಳಲ್ಲಿ ಅನೂಹ್ಯವಾದ ಕಾರ್ಯ ಮಾಡಿ ಮೌನ ಸಾಧಕರಾದ ಡಾ. ಚನ್ನಪ್ಪ ಕಟ್ಟಿ ಅವರು ಅಪ್ಪಟ ಗ್ರಾಮೀಣ ಪ್ರತಿಭೆ. ತಮ್ಮ ಗ್ರಾಮ ಬದುಕಿನ ಸಶಕ್ತ ಅನುಭವಗಳಿಗೆ ಸಾಹಿತ್ಯದ ಆಧುನಿಕ ಚಿಂತನಾ ದಾರಿಯನ್ನು ತಂದು ಜೋಡಿಸುವ ಮೂಲಕ ಬರಹಕ್ಕೆ…

Read More