Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರದ ಡಿಸಿ ಕಚೇರಿಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಿರ್ದಿಷ್ಟ ಗುರಿ ಇಟ್ಟುಕೊಂಡು ಆ ದಿಶೆಯಲ್ಲಿ ಅಧ್ಯಯನಶೀಲರಾದರೆ ಖಂಡಿತಾ ಹೆಚ್ಚಿನ ಅಂಕ ಪಡೆದು ಉನ್ನತ ಹುದ್ದೆ ಅಲಂಕರಿಸಲು ಸಾಧ್ಯವಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಹೇಳಿದರು.ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉನ್ನತ ಸಾಧನೆ ಮಾಡಿದ ಜಿಲ್ಲೆಯ ವಿದ್ಯಾರ್ಥಿಗಳಿಗೆ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭವನ್ನು ಉದ್ದೇಶಿಸಿ ಅವರು ಮಾತನಾಡಿದರು. ನಿತ್ಯ ಅಭ್ಯಾಸದೊಟ್ಟಿಗೆ ಮಾನಸಿಕ ಹಾಗೂ ದೈಹಿಕ ಸಮತೋಲನ ಕಾಯ್ದುಕೊಂಡರೆ ಮುಖಬರುವ ದಿನಗಳಲ್ಲಿ ಉನ್ನತ ಸಾಧನೆ ಮಾಡಬಹುದಾಗಿದೆ ಎಂದ ಅವರು, ಇದೇ ವೇಳೆ ಸಾಧನೆ ಮಾಡಿದ ಸಾಧಕರು ಹಾಗೂ ಪೋಷಕರನ್ನು ಅಭಿನಂದಿಸಿದರು.ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಣಾಧಿಕಾರಿಗಳಾದ ರಿಷಿ ಆನಂದ ಮಾತನಾಡಿ, ಕಳೆದ ವರ್ಷಕ್ಕಿಂತ ಪ್ರಸ್ತುತ ವರ್ಷದ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಿಸಿದ್ದು ಸಂತಸದ ವಿಷಯ. ಈ ಒಂದು ಕಾರ್ಯದಲ್ಲಿ ಶ್ರಮಿಸಿದ ಇಲಾಖೆಯ ಎಲ್ಲಾ ಅಧಿಕಾರಿಗಳನ್ನು ವಿದ್ಯಾರ್ಥಿಗಳನ್ನು, ಪಾಲಕರನ್ನು ಅಭಿನಂದಿಸಿದರು.ಪ್ರಸ್ತುತ ವರ್ಷ…
ವಿಜಯಪುರದಲ್ಲಿ ನಡೆದ ಡಾ.ರಾಜ್ ಕುಮಾರ ಜನ್ಮದಿನೋತ್ಸವ ಹಾಗೂ ಅವರ ಗೀತೆಗಳ ಗಾಯನ ಸಮಾರಂಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಟನೆಯ ಮೂಲಕ ಜೀವನ ಮೌಲ್ಯಗಳನ್ನು ಬೋಧಿಸಿದ ವರನಟ ಡಾ.ರಾಜಕುಮಾರ್ ಕನ್ನಡದ ಶ್ರೇಷ್ಠ ರತ್ನ ಎಂದು ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಹೇಳಿದರು.ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಡೆದ ಡಾ.ರಾಜ್ ಕುಮಾರ ಜನ್ಮದಿನೋತ್ಸವ ಹಾಗೂ ಅವರ ಗೀತೆಗಳ ಗಾಯನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಡಾ.ರಾಜಕುಮಾರ್ ಅವರು ತಮ್ಮ ಚಿತ್ರದ ಮೂಲಕ ಸಾಮಾಜಿಕ ಜಾಗೃತಿ ಸಂದೇಶ ಸಾರಿದರು, ಡಾ.ರಾಜಕುಮಾರ್ ಅವರ ಸರಳತೆ, ಶ್ರೇಷ್ಠತೆ ಎಲ್ಲರಿಗೂ ಸ್ಪೂರ್ತಿ ಎಂದರು.ಉಪನ್ಯಾಸ ಮಂಡಿಸಿದ ಕಾರ್ಯ ನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಅಶೋಕ ಯಡಹಳ್ಳಿ ಮಾತನಾಡಿ, ಹಿಂದಿ ಸೇರಿದಂತೆ ಅನೇಕ ಭಾಷೆಗಳಲ್ಲಿ ನಟಿಸುವ ಅವಕಾಶ ಬಂದು ಬಹುಭಾಷಾ ನಟರಾಗಿ ಮಿಂಚುವ ಅವಕಾಶ ಬಂದರೂ ಸಹ ಅದನ್ನು ನಿರಾಕರಿಸಿ…
ಮಹಿಳಾ ವಿವಿಯಲ್ಲಿ ಬಸವ ಅಧ್ಯಯನ ಪೀಠ ಪೂರ್ಣ ಪ್ರಮಾಣದಲ್ಲಿ ಸ್ಥಾಪನೆಯಾಗಬೇಕು | ಶುಭ್ರ ವಸ್ತ್ರಧಾರಿಣಿ ಅಕ್ಕಮಹಾದೇವಿ ಪುತ್ಹಳಿ ನಿಲ್ಲಿಸಬೇಕು | ಬಸವ ತಿಳಿವಳಿಕೆ ಕೇಂದ್ರದ ಅಧ್ಯಕ್ಷ ಡಾ.ಶಶಿಕಾಂತ ಪಟ್ಟಣ & ಪದಾಧಿಕಾರಿಗಳಿಂದ ಜಿಲ್ಲಾಧಿಕಾರಿಗೆ ಮನವಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಲಿಂಗಾಯತ ಧರ್ಮಕ್ಕೆ ಮಾನ್ಯತೆ ಹಾಗೂ ಅಲ್ಪಸಂಖ್ಯಾತ ಸ್ಥಾನಮಾನ ನೀಡುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಸವ ತಿಳಿವಳಿಕೆ ಮತ್ತು ಸಂಶೋಧನಾ ಕೇಂದ್ರದ ಅಧ್ಯಕ್ಷ ಡಾ.ಶಶಿಕಾಂತ ಪಟ್ಟಣ ನೇತೃತ್ವದಲ್ಲಿ ಪದಾಧಿಕಾರಿಗಳು, ಸದಸ್ಯರು ಶುಕ್ರವಾರ ಜಿಲ್ಲಾಧಿಕಾರಿ ಡಾ.ಆನಂದ್ ಕೆ. ಅವರಿಗೆ ಮನವಿ ಸಲ್ಲಿಸಿದರು.ಈ ವೇಳೆ ಮಾತನಾಡಿದ ಪುಣೆಯ ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರದ ಅಧ್ಯಕ್ಷ ಡಾ.ಶಶಿಕಾಂತ ಪಟ್ಟಣ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ್ಯಾಯಮೂರ್ತಿ ನಾಗಮೋಹನದಾಸ ವರದಿಯಾಧಾರಿತ ತಮ್ಮ ಹಿಂದಿನ ಸರಕಾರದ ಶಿಫಾರಸನ್ನು ಸದೃಡಗೊಳಿಸಿ ಲಿಂಗಾಯತ ಧರ್ಮೀಯರನ್ನು ಅಲ್ಪಸಂಖ್ಯಾತ ಎಂದು ಪರಿಗಣಿಸಲು ಮತ್ತೆ ಕೇಂದ್ರ ಸರ್ಕಾರಕ್ಕೆ ಮರು ಮೇಲ್ಮನವಿ ಸಲ್ಲಿಸಿ ಬಸವಣ್ಣನವರಿಗೆ, ಲಿಂಗಾಯತರಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದರು.ನಗರದಲ್ಲಿರುವ ನಾಡಿನ ಏಕಮೇವ ಮಹಿಳಾ…
ವಿಜಯಪುರ ನಗರದಲ್ಲಿ ಹಲವಾರು ಕಳ್ಳತನ ಪ್ರಕರಣಗಳ ಭೇದನೆ | ವಿಜಯಪುರ ಜಿಲ್ಲಾ ಪೋಲಿಸ್ ಅಧಿಕ್ಷಕ ಲಕ್ಷ್ಮಣ ನಿಂಬರಗಿ ವಿವರಣೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ ನಗರದ ಉಪ-ವಿಭಾಗದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣಗಳನ್ನು ಭೇದಿಸುವಲ್ಲಿ ವಿಜಯಪುರ ಪೊಲೀಸರು ಮಹತ್ವದ ಯಶಸ್ಸು ಸಾಧಿಸಿದ್ದಾರೆ ಎಂದು ವಿಜಯಪುರ ಜಿಲ್ಲೆಯ ಪೋಲಿಸ್ ಅಧಿಕ್ಷಕರಾದ ಲಕ್ಷ್ಮಣ ನಿಂಬರಗಿ ತಿಳಿಸಿದರು.ಶುಕ್ರವಾರ ಪೋಲಿಸ್ ಸಮುದಾಯ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮನಗೌಡ ಹಟ್ಟಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಹಾಗೂ ಡಿಎಸ್ಪಿ ನಾಗರಾಜ್ ಜಿ ಅವರ ಮಾರ್ಗದರ್ಶನದಲ್ಲಿ.ಗೋಲಗುಂಬಜ್ ವೃತ್ತದ ಸಿಪಿಐ ಎಸ್.ಎಸ್. ಬಳಿಗಾರ ಹಾಗೂ ಗಾಂಧಿಚೌಕ ಠಾಣೆಯ ಪಿಐ ಪ್ರದೀಪ ತಳಕೇರಿ ಅವರ ನೇತೃತ್ವದಲ್ಲಿ ಗಾಂಧಿಚೌಕ, ಗೋಲಗುಂಬಜ್, ಎಪಿಎಮ್ಸಿ, ಆದರ್ಶನಗರ ಮತ್ತು ಜಲನಗರ ಠಾಣೆಗಳ ಪಿಎಸ್‌ಐ ಹಾಗೂ ಸಿಬ್ಬಂದಿಗಳನ್ನೊಳಗೊಂಡ ವಿಶೇಷ ತನಿಖಾ ತಂಡಗಳನ್ನು ರಚಿಸಲಾಗಿತ್ತು. ತಂಡಗಳು ತ್ವರಿತ ಕಾರ್ಯಾಚರಣೆ ನಡೆಸಿ ಹಲವಾರು ಆರೋಪಿಗಳನ್ನು ಬಂಧಿಸಿ, ಕಳ್ಳತನವಾದ ವಸ್ತುಗಳನ್ನು ವಶಪಡಿಸಿಕೊಂಡಿವೆ ಎಂದರು.ಗಾಂಧಿಚೌಕ ಠಾಣೆ:2026ರಲ್ಲಿ ದಾಖಲಾಗಿದ್ದ 7 ಪ್ರಕರಣಗಳಲ್ಲಿ 6…
ತನಿಖಾ ತಂಡದ ಅಧಿಕಾರಿಗಳ ಕಾರ್ಯಕ್ಷಮತೆ ಶ್ಲಾಘಿಸಿದ ಜಿಲ್ಲಾ ಪೋಲಿಸ್ ಅಧಿಕ್ಷಕ ಲಕ್ಷ್ಮಣ ನಿಂಬರಗಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರ ಸಮೀಪದ ಅಲಿಯಾಬಾದ್ ಇಂಡಸ್ಟ್ರಿಯಲ್ ಪ್ರದೇಶದಲ್ಲಿ ನಡೆದ ಭೀಕರ ಹತ್ಯೆ ಪ್ರಕರಣವನ್ನು ವಿಜಯಪುರ ಗ್ರಾಮೀಣ ಪೊಲೀಸರು ಅತಿ ಕಡಿಮೆ ಅವಧಿಯಲ್ಲಿ ಭೇದಿಸಿ 6 ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಜಿಲ್ಲಾ ಪೋಲಿಸ್ ಅಧಿಕ್ಷಕರಾದ ಲಕ್ಷ್ಮಣ ನಿಂಬರಗಿ ತಿಳಿಸಿದರುಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿದ ಮಾತನಾಡಿದ ಅವರು, ದಿನಾಂಕ 14.04.2026 ರಂದು ಮಧ್ಯಾಹ್ನ ಸುಮಾರು 3 ಗಂಟೆಗೆ, ಗೊಡಂದೊಡ್ಡಿ ನಿವಾಸಿ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ರಾಜು ತಂ. ಬಾಪು ಖರೆ (42) ಅವರು ತಮ್ಮ ಥಾರ್ ಕಾರಿನಲ್ಲಿ ವಿಜಯಪುರದತ್ತ ಬರುತ್ತಿದ್ದ ವೇಳೆ, ಅಲಿಯಾಬಾದ್ ಇಂಡಸ್ಟ್ರಿಯಲ್ ಏರಿಯಾದ ಧರಿದೇವರ ಪೇಟೆ ಸಮೀಪ ಟಿಪ್ಪರ್ ವಾಹನ ಡಿಕ್ಕಿ ಹೊಡೆದಿತ್ತು. ಅದೇ ಸಮಯದಲ್ಲಿ ಎರಡು ಬೈಕ್‌ಗಳಲ್ಲಿ ಬಂದ ಆರೋಪಿತರು ಕಾರನ್ನು ಅಡ್ಡಗಟ್ಟಿ, ಕಲ್ಲಿನಿಂದ ಹಲ್ಲೆ ನಡೆಸಿ ಬಳಿಕ ಪಿಸ್ತೂಲ್‌ನಿಂದ ಗುಂಡು ಹಾರಿಸಿ ರಾಜು ಖರೆ ಅವರನ್ನು ಕಾರಿನಲ್ಲಿಯೇ ಹತ್ಯೆ ಮಾಡಿದ್ದರು.…
ವಿಜಯಪುರದಲ್ಲಿ ಎಸ್.ಎಸ್.ಎಲ್.ಸಿಯಲ್ಲಿ ವಿಜಯಪುರ ಗ್ರಾಮೀಣ ವಲಯಕ್ಕೆ ಪ್ರಥಮ ಮತ್ತು ರಾಜ್ಯಕ್ಕೆ 7ನೇ ಸ್ಥಾನ ಪಡೆದ ಮೂರು ವಿದ್ಯಾರ್ಥಿಗಳನ್ನು ಸನ್ಮಾನಿಸಿದ ಎಂಎಲ್ಸಿ ಸುನೀಲಗೌಡ ಪಾಟೀಲ ಕರೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: 10ನೇ ತರಗತಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿರುವ ವಿದ್ಯಾರ್ಥಿಗಳು ದೊಡ್ಡ ಗುರಿಯೊಂದಿಗೆ ಪಿಯುಸಿ ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಬೇಕು ಎಂದು ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಕರೆ ನೀಡಿದ್ದಾರೆ.ಶುಕ್ರವಾರ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ವಿಜಯಪುರ ಗ್ರಾಮೀಣ ವಲಯಕ್ಕೆ ಪ್ರಥಮ ಮತ್ತು ರಾಜ್ಯಕ್ಕೆ 7ನೇ ಸ್ಥಾನ ಪಡೆದ ಮೂರು ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು.ಎಸ್.ಎಲ್.ಎಲ್.ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಸಾಧನೆಯ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದೀರಿ. ಮುಂಬರುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡಬೇಕು. ಈ ಮೂಲಕ ಉತ್ತರೋತ್ತರವಾಗಿ ಸಾಧನೆಯ ಶಿಖರ ತಲುಪಬೇಕು ಎಂದು ಶಾಸಕರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.ಈ ವೇಳೆ 626ಕ್ಕೆ ತಲಾ 619 ಅಂಕ ಗಳಿಸಿ ರಾಜ್ಯಕ್ಕೆ 7ನೇ…
ಉದಯರಶ್ಮಿ ದಿನಪತ್ರಿಕೆ ಅಥಣಿ: ಪ್ರಕಟವಾದ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶದಲ್ಲಿ ಅಥಣಿ ತಾಲ್ಲೂಕಿನ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಅಸಾಧಾರಣ ಸಾಧನೆ ಮಾಡುವ ಮೂಲಕ ತಾಲ್ಲೂಕಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಸಾಧಕ ವಿದ್ಯಾರ್ಥಿಗಳನ್ನು ಶಾಸಕ ಲಕ್ಷ್ಮಣ ಸವದಿ ಹಾಗೂ ಯುವ ನಾಯಕ ಚಿದಾನಂದ ಸವದಿ ಅವರು ತಮ್ಮ ಗೃಹ ಕಚೇರಿಯಲ್ಲಿ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು.ಕುಮಾರಿ ಪ್ರಾರ್ಥನಾ ನಾಗಪ್ಪ ಬಿರಾದರ ಪಾಟೀಲ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಕಟಗೇರಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯಾದ ಈಕೆ 625ಕ್ಕೆ 625 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಅಲಂಕರಿಸಿದ್ದಾಳೆ.ಕುಮಾರ ದಶರಥ ಶಿವಾಜಿ ಭೋಸಲೆ: ಐಗಳಿ ಗ್ರಾಮದ ಆದರ್ಶ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಯಾದ ಈತ 625ಕ್ಕೆ 624 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆಯುವ ಮೂಲಕ ಈ ಇಬ್ಬರು ಮಕ್ಕಳು ರಾಜ್ಯ ಮಟ್ಟದಲ್ಲಿ ಗಮನ ಸೆಳೆದಿದ್ದಾರೆ.ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದ ಶಾಸಕ ಲಕ್ಷ್ಮಣ ಸವದಿ, “ನಮ್ಮ ಅಥಣಿ ತಾಲ್ಲೂಕಿನ ಗ್ರಾಮೀಣ ಭಾಗದ ಪ್ರತಿಭೆಗಳು ಇಂದು ಇಡೀ ರಾಜ್ಯವೇ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವ ಸೌಜನ್ಯ ಬಸವರಾಜ ಕಂದಕೂರ ಅವಳ ಸಾಧನೆ ಎಲ್ಲ ಮಕ್ಕಳಿಗೂ ಪ್ರೇರಣೆಯಾಗಲಿ, ಶ್ರೇಷ್ಠ ವೈದ್ಯಳಾಗಬೇಕೆನ್ನುವ ಅವಳ ಕನಸಿನ ಜೊತೆಗೆ ಸಿವಿಲ್ ಸರ್ವಿಸ್ ಪರೀಕ್ಷೆಯಲ್ಲಿ ಯಶಸ್ಸನ್ನು ಪಡೆದು, ಐಏಎಸ್ ಅಧಿಕಾರಿಯಾಗಬೇಕೆನ್ನುವ ಅವಳ ಕನಸು ನನಸಾಗಲೆಂದು ಕರ್ನಾಟಕ ಬಾಲವಿಕಾಸ ಅಕಾಡೆಮಿಯ ನಿಕಟ ಪೂರ್ವ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಹಾರೈಸಿದರು.ಶುಕ್ರವಾರ ತಮ್ಮ ನಿವಾಸಕ್ಕೆ ಆಗಮಿಸಿದ್ದ ಸಾಧಕ ವಿದ್ಯಾರ್ಥಿನಿಯನ್ನು ಹಾಗೂ ಪಾಲಕರನ್ನು ಸನ್ಮಾನಿಸಿ ಅವರು ಶುಭ ಹಾರೈಸಿದರು.ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಮ್ ಬಿ ಪಾಟೀಲರ ಮಾರ್ಗದರ್ಶನದಲ್ಲಿ, ಜಿಲ್ಲಾಧಿಕಾರಿಗಳು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು,ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಮತ್ತು ಅವರ ತಂಡ ಹಾಗೂ ಜಿಲ್ಲೆಯ ಎಲ್ಲ ಶಿಕ್ಷಕ ಬಂಧುಗಳ ಸಹಕಾರದಿಂದ ಫಲಿತಾಂಶದಲ್ಲಿ ಸುಧಾರಣೆ ಕಂಡಿರುವುದು ಸಂತೋಷದ ಸಂಗತಿಯಾಗಿದೆಯಾದರೂ ಬರುವ ಮುಂದಿನ ಶೈಕ್ಷಣಿಕ ವರ್ಷಕ್ಕೆ ವಿಜಯಪುರ ಜಿಲ್ಲೆಯ ಫಲಿತಾಂಶ ರಾಜ್ಯಕ್ಕೆ ಮೊದಲ ಜಿಲ್ಲೆಯಾಗಿ ನಿಲ್ಲುವಂತೆ ಎಲ್ಲರೂ ಸಾಂಘಿಕ ಪ್ರಯತ್ನ ಮಾಡಬೇಕು…
ಉದಯರಶ್ಮಿ ದಿನಪತ್ರಿಕೆ ಅಥಣಿ: ತಾಲೂಕಿನ ಕಟಗೇರಿ ಗ್ರಾಮದ ಸರ್ಕಾರಿ ಕನ್ನಡ ಶಾಲೆಯ ವಿದ್ಯಾರ್ಥಿನಿ ಕುಮಾರಿ ಪ್ರಾರ್ಥನಾ ನಾಗಪ್ಪ ಬಿರಾದಾರ್ ಪಾಟೀಲ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳನ್ನು ಪಡೆಯುವ ಮೂಲಕ ಇಡೀ ರಾಜ್ಯಕ್ಕೆ ಮಾದರಿಯ ಸಾಧನೆ ಮಾಡಿದ್ದಾಳೆ. ಗ್ರಾಮೀಣ ಭಾಗದ ಸರ್ಕಾರಿ ಶಾಲೆಯಲ್ಲಿ ಓದಿ ಈ ಮಟ್ಟದ ಸಾಧನೆ ಮಾಡಿರುವ ಪ್ರಾರ್ಥನಾಳಿಗೆ ಈಗ ಎಲ್ಲೆಡೆಯಿಂದ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ.ವಿದ್ಯಾರ್ಥಿನಿಯ ಈ ಅಮೋಘ ಸಾಧನೆಯ ವಿಷಯ ತಿಳಿಯುತ್ತಿದ್ದಂತೆಯೇ ಬೆಂಗಳೂರಿನಲ್ಲಿದ್ದ ಅಥಣಿ ಶಾಸಕ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಪ್ರಾರ್ಥನಾಳಿಗೆ ದೂರವಾಣಿ ಕರೆ ಮಾಡಿ ಹಾರೈಸಿದರು.”ಗ್ರಾಮೀಣ ಭಾಗದ ಪ್ರತಿಭೆಗಳು ಈ ಮಟ್ಟಕ್ಕೆ ಬೆಳೆಯುತ್ತಿರುವುದು ಅಥಣಿ ತಾಲೂಕಿಗೆ ಹೆಮ್ಮೆಯ ವಿಷಯ. ಪ್ರಾರ್ಥನಾ ಅವರ ಈ ಸಾಧನೆ ಉಳಿದ ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಲಿ,” ಎಂದು ಶಾಸಕರು ಮೆಚ್ಚುಗೆ ವ್ಯಕ್ತಪಡಿಸಿದರು.ಇದೇ ಸಂದರ್ಭದಲ್ಲಿ ಅಥಣಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಆರ್. ಮುಂಜಿ ಅವರು ವಿದ್ಯಾರ್ಥಿನಿಯ ಮನೆಗೆ ಭೇಟಿ ನೀಡಿ, ಸಿಹಿ ತಿನ್ನಿಸಿ ಸತ್ಕರಿಸಿದರು.”ಸರ್ಕಾರಿ ಶಾಲೆಯ ವಿದ್ಯಾರ್ಥಿನಿ…
ಲೇಖನ- ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸುವುದು ಇಂದು ನಿನ್ನೆಯ ಮಕ್ಕಳ ಹವ್ಯಾಸವಲ್ಲ. ದುಬಾರಿ ಬೆಲೆಯ ಗ್ರಾಮ ಫೋನ್ ಗಳು ಮೊಟ್ಟ ಮೊದಲಿಗೆ ಚಾಲ್ತಿಯಲ್ಲಿ ಬಂದವು. ಕಹಳೆಯಾಕಾರದ ಗ್ರಾಮಫೋನ್ ನ ಮೇಲೆ ತಟ್ಟೆಯ ಆಕಾರದ ಹಾಡಿನ ಪ್ಲೇಟುಗಳನ್ನು ಇರಿಸಿ ಅದರ ಮೇಲೆ ವಿದ್ಯುತ್ತಿನ ಕನೆಕ್ಷನ್ ಹೊಂದಿರುವ ಕಡ್ಡಿಯನ್ನು ಇಟ್ಟೊಡನೆ ಸುಮಧುರವಾದ ಗೀತೆಗಳು ಮೊಳಗುತ್ತಿದ್ದವು. ಈ ಮೊದಲೇ ರೆಕಾರ್ಡಿಂಗ್ ಸ್ಟುಡಿಯೋಗಳಲ್ಲಿ ಧ್ವನಿ ಮುದ್ರಿಸಲ್ಪಟ್ಟ ಗೀತೆಗಳು ಗ್ರಾಮಫೋನ್ ತಟ್ಟೆಗಳ ಮೂಲಕ ನಮ್ಮ ಶ್ರವಣೇಂದ್ರಿಯಗಳಿಗೆ ಅಮೃತ ಸುಧೆಯನ್ನು ಉಣಿಸುತ್ತಿದ್ದವು. ಸುಮಾರು ಶತಮಾನಗಳ ಇತಿಹಾಸ ಇವಕ್ಕಿದೆ.ನಂತರ ಬಂದದ್ದು ರೇಡಿಯೋ.ಈ ಹಿಂದೆ ರೇಡಿಯೋ ತರಂಗಗಳ ಮೂಲಕ ಆಕಾಶವಾಣಿಯಲ್ಲಿ ನಮ್ಮ ಹಿರಿಯರು ಹಾಡು, ವಾರ್ತೆಗಳು, ಪ್ರದೇಶ ಸಮಾಚಾರ, ಹವಾಮಾನ ಮುನ್ಸೂಚನೆ, ಕೃಷಿ ಸಂಬಂಧಿತ ಸಲಹೆ ಸೂಚನೆಗಳು, ನಾಟಕ ಮಕ್ಕಳ ಕಾರ್ಯಕ್ರಮಗಳು, ಮನರಂಜನೆ ಮುಂತಾದ ಕಾರ್ಯಕ್ರಮಗಳನ್ನು ಕೇಳುತ್ತಿದ್ದರು. ಮತ್ತೆ ಕೆಲವು ಹಣ ಸಂದಾಯ ಮಾಡಿ ಕೇಳುವಂತಹ ರೇಡಿಯೋ ಕಾರ್ಯಕ್ರಮಗಳು ಕೂಡ ಇದ್ದವು.ಆಮೇಲೆ ಬಂದದ್ದು ಫೋನ್…
