Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: 2025-26ನೇ ಸಾಲಿನಡಿವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿ ಅನುಷ್ಠಾನಗೊಳ್ಳುವ ಸಾಧನೆ ಯೋಜನೆಗೆ ಸೇವಾಸಿಂಧು ಆನ್ಲೈನ್ ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅರ್ಹರು ಜ.31 ರ ವರೆಗೆ ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸಿ, ಅಗತ್ಯ ದಾಖಲಾತಿಗಳೊಂದಿಗೆ ಸಲ್ಲಿಸಿದ ಅರ್ಜಿಯ ಹಾರ್ಡ್ ಪ್ರತಿಯನ್ನು ಜಿಲ್ಲಾ ಕಚೇರಿ ಅಥವಾ ಸಂಬಂಧಿಸಿದ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರಿಗೆ ನೀಡಬೇಕು.ಹೆಚ್ಚಿನ ಮಾಹಿತಿಗಾಗಿ ವಿಜಯಪುರ ಜಿಲ್ಲಾ ಸಂಯೋಜಕರಾಪ್ರತಿಭಾ ಮೊ: 9606151149 ವಿಜಯಪುರ ತಾಲ್ಲೂಕು ಪಂಚಾಯತ ರವಿ ರಾಥೋಡ್ ಮೊ;9035553337 ಇಂಡಿ ತಾಲೂಕು ಪಂಚಾಯತ್ ಪರಶುರಾಮ ಭೋಸಲೆ ಮೊ: 9972441464 ಸಿಂದಗಿ ತಾಲ್ಲೂಕು ಪಂಚಾಯತ್ ಮುತ್ತುರಾಜ ಸಾತಿಹಾಳ ಮೊ: 9980019635 ಮುದ್ದೇಬಿಹಾಳ ತಾಲ್ಲೂಕು ಪಂಚಾಯತ್ ಎಸ್. ಕೆ. ಘಾಟಿ ಮೊ:9740682979ಬಸವನಬಾಗೇವಾಡಿ ಪಂಚಾಯತ್ ತಾಲೂಕು |ಶಿವಲೀಲಾ ಬಿರಾದಾರ ಮೊ:8722135660 ಮಾಹಿತಿ ಕೇಂದ್ರಗಳಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರಹಾ ಹಾಗೂ ಹಿರಿಯ ನಾಗರಿಕರಕ ಸಬಲೀಕರಣ ಇಲಾಖೆಯ ಪ್ರಕಟಣೆ ತಿಳಿಸಿದೆ
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದಲ್ಲಿ ವಜ್ರ ಹನುಮಾನ ನಗರದಲ್ಲಿ ಅಂಡರ ಪಾಸ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಅಸ್ತು ಎಂದಿದ್ದು, ಇದಕ್ಕೆ ಪೂರಕವಾಗಿ ರಾಜ್ಯ ಸರ್ಕಾರ ಆ ಭಾಗದಲ್ಲಿರುವ ಕುಡಿಯುವ ನೀರಿನ ಪೈಪಲೈನ್, ಟೆಲಿಫೋನ್ ತಂತಿ ಮೊದಲಾದ ಪೂರಕ ಕಾಮಗಾರಿ ಕೈಗೊಳ್ಳಲು ಆರು ಕೋಟಿ ರೂ. ಪ್ರಸ್ತಾವನೆ ರಾಜ್ಯ ಸರ್ಕಾರಕ್ಕೆ ಸಲ್ಲಿಸುವಂತೆ ಪಾಲಿಕೆ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿರುವೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ.ಈ ಕುರಿತು ಸೋಮವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಂಚಾರ ದಟ್ಟಣೆ ನಿಯಂತ್ರಣ ಮಾಡಲು ವಜ್ರ ಹನುಮಾನ ರೈಲ್ವೇ ಕ್ರಾಸಿಂಗ್ ಬಳಿ ಅಂಡರ ಪಾಸ್ ನಿರ್ಮಾಣ ಕಾರ್ಯ ಕೈಗೊಳ್ಳಲು ಅನೇಕ ವರ್ಷಗಳಿಂದ ಸಾರ್ವಜನಿಕರ ಬೇಡಿಕೆ ಇದೆ, ಹೀಗಾಗಿ ಆ ವಿಷಯವಾಗಿ ಪಾಲಿಕೆ, ರೈಲ್ವೇ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿರುವೆ, ರೈಲ್ವೇ ಅಂಡರ ಪಾಸ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ನೆಲದ ಆಳದಲ್ಲಿರುವ ನೀರಿನ ಪೈಪ್ ಲೈನ್ ಜಾಲ, ಟೆಲಿಫೋನ್ ಜಾಲ ಮೊದಲಾದವುಗಳನ್ನು ಸ್ಥಳಾಂತರ ಮಾಡುವುದು ಸೇರಿದಂತೆ ವಿವಿಧ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಪ್ರಯಾಣಿಕರ ಅನುಕೂಲಕ್ಕಾಗಿ ವಿಜಯಪುರ-ಬೆಂಗಳೂರಿಗೆ ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ವಿಶೇಷ ರೈಲು ಸೇವೆ ಒದಗಿಸಲಾಗುತ್ತಿದ್ದು, ಶೀಘ್ರದಲ್ಲಿಯೇ ಈ ರೈಲು ಸಂಚಾರ ಆರಂಭಿಸಲಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ವಿಜಯಪುರದಿಂದ ಬೆಂಗಳೂರು ಪ್ರಯಾಣ ಬೆಳೆಸುವವರ ಸಂಖ್ಯೆ ಅಧಿಕ, ಸಂಕ್ರಾಂತಿ ಸೇರಿದಂತೆ ಬರುವ ಹಬ್ಬಗಳಿಗೆ ಅನೇಕರು ಪ್ರಯಾಣ ಮಾಡಬೇಕಾಗುತ್ತದೆ, ಹೀಗಾಗಿ ಈ ಜನತೆಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ವಿಶೇಷ ರೈಲು ಸೇವೆ ಆರಂಭಿಸಲು ಕೇಂದ್ರ ರೈಲ್ವೇ ಇಲಾಖೆ ಅಸ್ತು ಎಂದಿದ್ದು, ಸಂಕ್ರಾಂತಿ ಹಬ್ಬದ ವೇಳೆಯಲ್ಲಿ ಈ ವಿಶೇಷ ರೈಲು ಸಂಚಾರ ಆರಂಭವಾಗಲಿದ್ದು, ಗದಗ ಹಾಗೂ ಹುಬ್ಬಳ್ಳಿ ಎರಡು ಬೈಪಾಸ್ ಮಾರ್ಗದ ಮೇಲೆ ಈ ರೈಲು ಸಂಚರಿಸಲಿದೆ, ಮುಂಬರುವ ದಿನಗಳಲ್ಲಿ ಈ ರೈಲ್ವೇ ಸೇವೆಯನ್ನು ಖಾಯಂಆಗಿಸುವ ನಿಟ್ಟಿನಲ್ಲಿಯೂ ಅಗತ್ಯ ಕ್ರಮ ಕೈಗೊಂಡು ಕೇಂದ್ರ ರೈಲ್ವೇ ಇಲಾಖೆಗೆ ಮನವಿ ಮಾಡಿಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ಶ್ರೀ ಸಿದ್ದೇಶ್ವರ ಶಿಕ್ಷಣ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಾರ್ವಜನಿಕ ಕ್ಷೇತ್ರದಲ್ಲಿ ಬದ್ಧತೆ, ಕಾಳಜಿಯಿಂದ ಕೆಲಸ ಮಾಡಿದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.ವಿಜಯಪುರದ ಲೋಣಿಯಲ್ಲಿ ಶ್ರೀ ಸಿದ್ದೇಶ್ವರ ಶಿಕ್ಷಣ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ವಿಜ್ಞಾನ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡುತ್ತಿದ್ದರು.ಶಿಕ್ಷಣ, ಕುಡಿಯುವ ನೀರು, ಆಸ್ಪತ್ರೆಯಂತಹ ವಿಷಯದಲ್ಲಿ ರಾಜಕಾರಣ ಮಾಡದಿದ್ದರೆ ಸುಸಜ್ಜಿತ ಸಮಾಜ ಸಾಧ್ಯ. ಹಿಂದಿನವರು ನಿಸ್ವಾರ್ಥ ಮನೋಭಾವದಿಂದ ಸಂಸ್ಥೆಗಳನ್ನು ಕಟ್ಟಿದ್ದಾರೆ ಎಂದು ಸಚಿವರು ಪ್ರಶಂಸಿಸಿದರು.ಶಿಕ್ಷಣಕ್ಕೆ ನಮ್ಮ ಜೀವನದಲ್ಲಿ ಎಲ್ಲಿಲ್ಲದ ಮಹತ್ವವಿದೆ.ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕೆನ್ನುವ ಕನಸು ಬಡವ, ಶ್ರೀಮಂತ ಭೇದವಿಲ್ಲದೆ ಎಲ್ಲರಲ್ಲೂ ಇರುತ್ತದೆ. ವಿದ್ಯೆ ಇದ್ದಲ್ಲಿ ಕೀರ್ತಿ ಮತ್ತು ಸಂಪತ್ತು ಇರುತ್ತದೆ. ರಾಜ್ಯದ ಭವಿಷ್ಯ, ಮಕ್ಕಳ ಭವಿಷ್ಯ, ದೇಶದ ಭವಿಷ್ಯಕ್ಕಾಗಿ ಶಿಕ್ಷಣ ಕಟ್ಟಿದ ಮಹನೀಯರ ಕಾರ್ಯ ಶ್ಲಾಘನೀಯ ಎಂದು ಲಕ್ಷ್ಮೀ ಹೆಬ್ಬಾಳಕರ್…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೃಷಿಯಲ್ಲಿ ನವೋದ್ಯಮವನ್ನು ಎಂಬ ಘೋಷವಾಕ್ಯದೊಂದಿಗೆ ರೈತರನ್ನು ಪ್ರೋತ್ಸಾಹಿಸಲು ಈ ಭಾಗದ ಹೆಚ್ಚಿನ ರೈತ ಫಲಾನುಭವಿಗಳು ತಮ್ಮ ಚಿಂತನೆಗಳನ್ನು ಆವಿಷ್ಕಾರವಾಗಿ ಪರಿವರ್ತಿನೆ ಕಂಡುಕೊಳ್ಳಲು ಆಧುನಿಕ ಕೃಷಿ ತಂತ್ರಜ್ಞಾನಗಳ ಮಾಹಿತಿ ರೈತರಿಗೆ ಈ ಕೃಷಿ ಮೇಳದಲ್ಲಿ ಪರಿಚಯಿಸಲಾಗುತ್ತಿದೆ ರೈತರು ಈ ಕೃಷಿ ಮೇಳದ ಸದುಪಯೋಗ ಪಡೆದುಕೊಂಡು ತಮ್ಮ ಕೃಷಿಯೊಂದಿಗೆ ಸಾವಯವ ಪದ್ಧತಿ ಅಳವಡಿಸಿಕೊಳ್ಳಬೇಕೆಂದು ಎಂದು ನಾಗಠಾಣ ಶಾಸಕರಾದ ವಿಠ್ಠಲ ದೋಂಡಿಬಾ ಕಟಕದೋಂಡ ಹೇಳೀದರು.ಕೃಷಿ ವಿಶ್ವವಿದ್ಯಾಲಯ ಧಾರವಾಡ, ಕೃಷಿ ಇಲಾಖೆ, ಜಿಲ್ಲಾ ಪಂಚಾಯತ್, ಆತ್ಮಾಯೋಜನೆ ಇವುಗಳ ಸಂಯುಕ್ತ ಆಶ್ರಯದಲ್ಲಿ, ನಗರದ(ಹಿಟ್ನಳ್ಳಿ ಫಾರ್ಮ)ಪ್ರಾದೇಶಿಕ ಸಂಶೋಧನಾ ಕೇಂದ್ರದಲ್ಲಿ ದಿನಾಂಕ ೪ರಿಂದ ೬ ರವರೆಗೆ ೩ ದಿನಗಳ ಕಾಲ ನಡೆಯುವ ಕೃಷಿ ಮೇಳ೨೦೨೫-೨೬ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ರಾಜ್ಯದ ವಿವಿಧ ಭಾಗಗಳಿಂದ ಆಗಮಿಸುವ ರೈತರು ವಿವಿಧ ಬೆಳೆಗಳು ಮತ್ತು ಅಭಿವೃದ್ಧಿಪಡಿಸಿದ ತಂತ್ರಜ್ಞಾನಗಳುಳ್ಳ ಪ್ರಾಯೋಗಿಕ ತಾಕುಗಳ ವೀಕ್ಷಣೆ, ವಿಚಾರ ಗೋಷ್ಠಿ, ಪೌಷ್ಟಿಕತೆ ಮತ್ತು ಆರ್ಥಿಕ ಭದ್ರತೆಗಾಗಿ ಸಾವಯವ ಮತ್ತು ನೈಸರ್ಗಿಕ ಕೃಷಿ, ಕೃಷಿ ಉದ್ದಿಮೆ ಅಭಿವೃದ್ಧಿ…
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಹಿಂದಿನ ಕಾಲದ ಸಮಾಜದಲ್ಲಿ ನಾಲ್ಕು ಗೋಡೆಗಳಿಗೆ ಮಾತ್ರ ಸೀಮಿತವಾದ ಸ್ತ್ರೀಯರು ಇಂದು ಹೊರಗಡೆ ಬಂದು ಶಿಕ್ಷಣ ಪಡೆಯುವಂತೆ ಮಾಡಿದವರು ಸ್ತ್ರೀಯರಿಗೆ ಮೊದಲ ಗುರುವಾದ ಸಾವಿತ್ರಿಬಾಯಿ ಫುಲೆಯವರು ಎಂದು ಜಮಖಂಡಿಯ ಆಂಗ್ಲ ಮಾಧ್ಯಮ ಸ.ಪ.ಪೂ ಕಾಲೇಜಿನ ಉಪನ್ಯಾಸಕಿ ಶ್ರೀಮತಿ ಬಿ. ಎಸ್. ಬಾಗೋಜಿ ಹೇಳಿದರು.ಸಮೀಪದ ಕಡಪಟ್ಟಿ ಗ್ರಾಮದ ಮಾಳಿ ಸಮಾಜ ಹಾಗೂ ಶ್ರೀ ಜ್ಯೋತಿಭಾ ಪುಲೆ ಯುವಕ ಮಂಡಳ ಇವರ ಸಹಯೋಗದಲ್ಲಿ ನಡೆದ ಭಾರತದ ಪ್ರಥಮ ಮಹಿಳಾ ಶಿಕ್ಷಕಿ ಅಕ್ಷರದ ಸಾವಿತ್ರಿಬಾಯಿ ಫುಲೆ ಅವರ 195 ನೆ ಜಯಂತೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮಾಜದಲ್ಲಿರುವ ಕನಿಷ್ಠ ಪದ್ಧತಿಯಾದ ಬಾಲ್ಯ ವಿವಾಹ, ಅಸ್ಪೃಶ್ಯತೆ, ಸತಿ ಸಹಗಮನ ಪದ್ಧತಿ ವಿರುದ್ಧ ಹೋರಾಟ ಮಾಡಿದವರು, ಇಂದಿನ ವೈಜ್ಞಾನಿಕ ಯುಗದಲ್ಲಿ ಎಲ್ಲ ರಂಗದಲ್ಲಿಯೂ ಸ್ತ್ರೀಯು ಮುಂದೆ ಬಂದಿದ್ದಾಳೆ,ಅವಳು ಮುಂದೆ ಬರುವುದಕ್ಕೆ ಪುರುಷರು ಬೆನ್ನೆಲುಬಾಗಿ ನಿಲ್ಲಬೇಕು, ಶಿಕ್ಷಣದಿಂದ ಜೀವನ ಬೆಳಕು ಆಗುತ್ತದೆ, ಇದರಿಂದ ಸ್ತ್ರೀಯರು ಸ್ವಾವಲಂಬಿಗಳಾಗುತ್ತಾರೆ. ಜ್ಞಾನವೇ ನಮ್ಮ ಶಕ್ತಿ ಅದು ನಮ್ಮನ್ನು ಶಕ್ತರನ್ನಾಗಿ ಮಾಡುತ್ತದೆ,…
ಉದಯರಶ್ಮಿ ದಿನಪತ್ರಿಕೆ ಇಂಡಿ: ವಿದ್ಯಾರ್ಥಿಗಳು ಶಿಸ್ತು, ಸಮಯಪ್ರಜ್ಞೆ, ನಿರಂತರ ಅಧ್ಯಯನ, ಶೃದ್ಧೆ, ಕಠಿಣ ಪರಿಶ್ರಮ ರೂಢಿಸಿಕೊಂಡಾಗ ತಮ್ಮ ಬದುಕಿನ ಗುರಿ ತಲುಪಲು ಸಾಧ್ಯ. ಪಾಲಕರು ತಮ್ಮ ಮಕ್ಕಳ ಶೈಕ್ಷಣಿಕ ಪ್ರಗತಿಯ ಬಗ್ಗೆ ಸದಾ ಮುತುವರ್ಜಿ ವಹಿಸಬೇಕು ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ಸೋಮವಾರದಂದು ನಗರದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಹಮ್ಮಿಕೊಂಡ ‘ಪಾಲಕರ ವಿಶೇಷ ಸಭೆ’ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ಪಾಲಕರ ಸಭೆಯು ಪಾಲಕ-ಶಿಕ್ಷಕರ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿದ್ದು, ವಿದ್ಯಾರ್ಥಿಯ ಶೈಕ್ಷಣಿಕ, ವೃತ್ತಿಯ, ಜ್ಞಾನಾತ್ಮಕ, ಕೌಶಲ್ಯಯುತ ಪ್ರಗತಿ ಮನಗಾಣಲು ಪೂರಕವಾಗಿದೆ. ವಿದ್ಯಾರ್ಥಿಗಳ ವರ್ತನೆ, ನಡತೆಯನ್ನು ಸರಿ ಮಾಡಿ ಉತ್ತಮ ವ್ಯಕ್ತಿತ್ವ ರೂಪಿಸುವಲ್ಲಿ ಪಾಲಕರ ಜವಾಬ್ದಾರಿ ಮುಖ್ಯವಾಗಿದೆ ಎಂದು ಹೇಳಿದರು.ಅತಿಯಾದ ಮೊಬೈಲ್ ಬಳಕೆಯಲ್ಲಿ ಇಂದಿನ ವಿದ್ಯಾರ್ಥಿಗಳು ಬದುಕಿನ ಭವಿಷ್ಯದ ಗುರಿ ಮರೆಯಬಾರದು. ತಂದೆ-ತಾಯಿಗಳ ಪರಿಶ್ರಮದ ದುಡಿಮೆ ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಬೇಕು. ಶಿಕ್ಷಕರ ಸಕಾಲಿಕ ಮಾರ್ಗದರ್ಶನ ಪಡೆದು, ವೃತ್ತಿ ಜೀವನದಲ್ಲಿ ಯಶಸ್ಸು ಪಡೆಯಬೇಕು ಎಂದು ಕಿವಿಮಾತು ಹೇಳಿದರು.ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಪ್ರಾಚಾರ್ಯ ಪರಶುರಾಮ ರಜನಿಕರ ಮಾತನಾಡಿ,…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಶತಮಾನದ ಸಂತ ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಶ್ರೀಗಳ ಪುಣ್ಯತಿಥಿ ನಿಮಿತ್ಯ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ಗುರವಂದನೆ ಸಲ್ಲಿಸಲಾಯಿತು.ವಿಡಿಸಿಸಿ ಬ್ಯಾಂಕ್ ಪ್ರಧಾನ ಕಛೇರಿಯಲ್ಲಿ ಸಿದ್ಧೇಶ್ವರ ಶ್ರೀಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ವಿಡಿಸಿಸಿ ಬ್ಯಾಂಕಿನಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಎಸ್.ಎ.ಢವಳಗಿ, ಸಾಮಾಜಿಕ ಆರೋಗ್ಯದ ಹಿತರಕ್ಷಣೆಗಾಗಿ ಹಾಗೂ ಸಭ್ಯ ಸಮಾಜ ನಿರ್ಮಾಣಕ್ಕೆ ಸಿದ್ಧೇಶ್ವರ ಶ್ರೀಗಳ ಕೊಡುಗೆ ಅನುಕರಣೀಯ ಹಾಗೂ ಸಾರ್ವಕಾಲಿಕ ಎಂದು ಬಣ್ಣಿಸಿದರು.ಬ್ಯಾಂಕಿನ ಡಿಜಿಎಂಗಳಾದ ಸತೀಶ ಪಾಟೀಲ, ಸುರೇಶ ಪಾಟೀಲ, ಜೆ.ಬಿ.ಪಾಟೀಲ, ಆರ್.ಎಂ.ಪಾಟೀಲ, ಪಿ.ವೈ.ಡೆಂಗಿ ಸೇರಿದಂತೆ ವಿವಿಧ ಅಧಿಕಾರಿಗಳಾದ ಆರ್.ಎಂ.ಬಣಗಾರ, ಐ.ಎಸ್.ಸಂಖ ಸೇರಿದಂತೆ ಬ್ಯಾಂಕಿನ ಇತರೆ ಅಧಿಕಾರಿಗಳು, ಸಿಬ್ಬಂದಿ ಪಾಲ್ಗೊಂಡಿದ್ದರು.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದೇಶಕ್ಕೆ ಪ್ರಸ್ತುತ ಸಂದರ್ಭದಲ್ಲಿ ಬಾಯಿ ಮಾತಿನ ಘೋಷಣೆಗೆ ಸೀಮಿತಕ್ಕಿಂತ ರೈತರ ಸಂಕಷ್ಟಗಳಿಗೆ ಸ್ಪಂದಿಸಿ, ನೊಂದ ರೈತರ ಕಣ್ಣೀರು ಒರೆಸುವ ಪ್ರಧಾನಿ ಬೇಕಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಅಭಿಪ್ರಾಯಪಟ್ಟರು.ಶನಿವಾರ ರಾತ್ರಿ ಜಿಲ್ಲೆಯ ಬಬಲೇಶ್ವರ ತಾಲೂಕಿನ ಜೈನಾಪುರ ಗ್ರಾಮದಲ್ಲಿ ವೀರಭದ್ರೇಶ್ವರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ದೇಶದ ರೈತರು ಕೆಲವೇ ವರ್ಷಗಳ ಹಿಂದೆ 370 ದಿನಕ್ಕೂ ಹೆಚ್ಚು ದಿನ ಹೋರಾಟ ಮಾಡಿದರೂ ಕೇಂದ್ರ ಸರ್ಕಾರ ಸ್ಪಂದಿಸಲಿಲ್ಲ. ಆದರೆ ಸಿದ್ಧರಾಮಯ್ಯ ನೇತೃತ್ವದ ನಮ್ಮ ಸರ್ಕಾರ ಗುರ್ಲಾಪುರ ಕ್ರಾಸ್ ನಲ್ಲಿ ಕಬ್ಬು ಬೆಳೆಗಾರರು ಹೋರಾಟಕ್ಕಿಳಿದ ವಾರದಲ್ಲೇ ಸಮಸ್ಯೆಗೆ ಪರಿಹಾರ ಕಂಡುಕೊಡಲಾಯಿತು. ಇದರಿಂದ ದೇಶದ ಇತಿಹಾಸದಲ್ಲೇ ನಮ್ಮ ಸರ್ಕಾರ ರಾಜ್ಯದ ಕಬ್ಬು ಬೆಳೆಗಾರರಿಗೆ 200-350 ರೂ. ಹೆಚ್ಚಿನ ದರ ಕೊಡಿಸಿದೆ ಎಂದು ತಮ್ಮ ಸರ್ಕಾರದ ಸ್ಪಂದನೆಯನ್ನು ಬಣ್ಣಿಸಿದರು.ಕೇಂದ್ರ ಸರ್ಕಾರ ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸುತ್ತದೆ ಹೊರತು, ಖರೀದಿಗೆ ಮುಂದಾಗುವುದಿಲ್ಲ. ಮೆಕ್ಕೆಜೋಳಕ್ಕೆ 2400…
ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ‘ಆಸೆ’ ಎಂದರೆ ಬಯಕೆ, ಮೋಹ, ಹಂಬಲ, ಆಕಾಂಕ್ಷೆ, ಇಚ್ಛೆ, ಅಪೇಕ್ಷೆ , ಮನಸ್ಸಿನಲ್ಲಿ ಉಂಟಾಗುವ ತೀವ್ರವಾದ ಹಾತೊರೆಯುವಿಕೆ ಆಸೆ ಎಂದು ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಐನಾಪುರದ ಮಲ್ಲಿಕಾರ್ಜುನ ಶಾಸ್ತ್ರೀ ಹೇಳಿದರು.ಪಟ್ಟಣದ ಶ್ರೀ ಗುರು ಕಾಂತೇಶ್ವರ ಜನ ಕಲ್ಯಾಣ ಸೇವಾ ಪ್ರತಿಷ್ಠಾನದ ವತಿಯಿಂದ ಶನಿವಾರ ಸಂಜೆ ಹಮ್ಮಿಕೊಂಡಿದ್ದ ಮಾಸಿಕ ಹುಣ್ಣಿಮೆಯ ಶಿವಾನುಭವ ಗೋಷ್ಠಿ ಉದ್ಘಾಟಿಸಿ ಉಪನ್ಯಾಸ ನೀಡಿದ ಅವರು, ಒಬ್ಬ ವ್ಯಕ್ತಿ, ವಸ್ತುವಿಗಾಗಿ, ಐಹಿಕ ಸುಖಕ್ಕಾಗಿ ಅಥವಾ ಗುರಿಗಾಗಿ ಮನಸ್ಸಿನಲ್ಲಿ ಉಂಟಾಗುವ ಚಂಚಲ ಭಾವನೆಯನ್ನು ಸೂಚಿಸುತ್ತದೆ. ಅತಿಯಾದ ಆಸೆ ಗತಿಗೇಡು ಎಂದವರು. ಮನದ ಮುಂದಿನ ಆಸೆಯೇ ಮಾಯೆ, ಆಸೆಗೆ ಕೊನೆಯಿಲ್ಲ, ಸದ್ಗುಣಕ್ಕೆ ಸಾವಿಲ್ಲ, ಅಂತಹ ಸದ್ಗುಣ, ಸದ್ಬುದ್ಧಿ, ಸದಾಚಾರ, ಧಾರಾಳವಾಗಿ ಧಾರೆ ಎರೆಯುವ, ಷ ಬ್ರ ಚನ್ನಬಸವ ಶಿವಾಚಾರ್ಯರು ಮುನ್ನೆಡೆಸುವ ಮಾಸಿಕ ಹುಣ್ಣಿಮೆಯ ಸತ್ಸಂಗ ಸುತ್ಯಾರ್ಹವಾದುದ. ಸದ್ಭಕ್ತರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಚನ್ನಬಸವ ಶಿವಾಚಾರ್ಯರು ಕಾಯಕ ದಾಸೋಹ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಡು,…
