Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಇಂಡಿ: ಕಳೆದ ಐದು ತಿಂಗಳಿಂದ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಪ್ರತಿ ಹಳ್ಳಿಯಲ್ಲಿ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ಎಲ್ಲ ಬೆಳೆಗಳು ಸಂಪೂರ್ಣ ನೀರಲ್ಲಿ ನಿಂತು ಹಾಳಾಗಿವೆ. ಜಂಟಿ ಸಮೀಕ್ಷೆ ನೆಪದಲ್ಲಿ ಯಾವುದೇ ಸಮಯವನ್ನು ಹಾಳು ಮಾಡದೆ ತಾಲೂಕಿನ ಪ್ರತಿಯೊಂದು ಗ್ರಾಮದ ಪ್ರತಿಯೊಬ್ಬ ರೈತರಿಗೂ ಒಣ ಬೇಸಾಯಕ್ಕೆ 50,000 ಹಾಗೂ ನೀರಾವರಿ ಭೂಮಿಗೆ ಒಂದು ಲಕ್ಷ ರೂಪಾಯಿ ಹಾಗೆ ಬಹು ವಾರ್ಷಿಕ ಬೆಳೆಗಳಿಗೆ 2ಲಕ್ಷ ಪರಿಹಾರವನ್ನು ಕೊಡಬೇಕೆಂದು ಈ ಮೂಲಕ ಜಿಲ್ಲಾಡಳಿತಕ್ಕೆ ಹಾಗೂ ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡುತ್ತಿದ್ದೇವೆ ಎಂದು ಜಿಲ್ಲಾಧ್ಯಕ್ಷರಾದ ಸಂಗಮೇಶ ಸಗರ ಅಗ್ರಹ ಮಾಡಿದರು.ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಇಂಡಿ ತಾಲೂಕು ದಂಡಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ ಅವರು ಮಾತನಾಡಿದರು.ವಿಪರೀತ ಮಳೆಯಿಂದಾಗಿ ತಾಲೂಕಿನ ಕೃಷಿ ಬೆಳೆಗಳಾದ ತೊಗರಿ ಹತ್ತಿ ಮೆಕ್ಕೆಜೋಳ ಸಜ್ಜಿ ಸೇರಿದಂತೆ ಸಮಸ್ತ ಬೆಳೆಗಳು ಹಾಳಾಗಿವೆ ದ್ರಾಕ್ಷಿ ದಾಳಿಂಬ್ರಿ ಲಿಂಬೆ, ಬಾಳೆ ಸೇರಿದಂತೆ ಎಲ್ಲ ಬೆಳೆಗಳಲ್ಲಿ ನೀರು…
ಉದಯರಶ್ಮಿ ದಿನಪತ್ರಿಕೆ ಇಂಡಿ: ರಾಷ್ಟ್ರೀಯ ಮಾನವ ಹಕ್ಕುಗಳ ತನಿಖಾ ಸಮಿತಿಯ ವಿವಿಧ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.ಮಾನವ ಹಕ್ಕುಗಳ ತನಿಖಾ ಸಮಿತಿಯ ಇಂಡಿ ತಾಲೂಕ ಅಧ್ಯಕ್ಷರಾಗಿ ಶಿವಾನಂದ ಕಾಮಗೊಂಡ, ಗೌರವಾಧ್ಯಕ್ಷರಾಗಿ ಉಮೇಶ ಬಳಬಟ್ಟಿ, ಉಪಾಧ್ಯಕ್ಷರಾಗಿ ಪ್ರಕಾಶ ಬಿರಾದಾರ, ಜಂಟಿ ಕಾರ್ಯದರ್ಶಿಯಾಗಿ ಶ್ರೀಶೈಲ ಬೀಳಗಿ, ಪ್ರಧಾನ ಕಾರ್ಯದರ್ಶಿಯಾಗಿ ಸನ್ಮತಿ ಹಳ್ಳಿ, ಕಾನೂನು ಸಲಹೆಗಾರರನ್ನಾಗಿ ಪ್ರಸನ್ನಕುಮಾರ ನಾಡಗೌಡ, ಸದಸ್ಯರನ್ನಾಗಿ ಶ್ರೀಮಂತ ಬಿರಾದಾರ್ ಅವರನ್ನು ನೇಮಕ ಮಾಡಲಾಗಿದೆ. ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ತನಿಖಾ ಸಮಿತಿಯ ಸಂಸ್ಥಾಪಕ ಸಂತೋಷ್.ಕೆ ಹಾಗೂ ವಿಜಯಪುರ ಜಿಲ್ಲಾ ಅಧ್ಯಕ್ಷ ಪೂರ್ಣಾನಂದ ಎಸ್.ಎನ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಎಲ್ಲ ಪದಾಧಿಕಾರಿಗಳು ತಮಗೆ ನೀಡಿದ ಹುದ್ದೆಗಳನ್ನು ಸಮರ್ಥವಾಗಿ ನಿಭಾಯಿಸಿ, ಮಾನವ ಹಕ್ಕುಗಳ ಉಲ್ಲಂಘನೆಯಲ್ಲಿ ಹೋರಾಟ ಹಮ್ಮಿಕೊಂಡು ಮಾನವ ಹಕ್ಕುಗಳ ಬಗ್ಗೆ ಪ್ರತಿಯೊಬ್ಬರಿಗೂ ತಿಳುವಳಿಕೆ ನೀಡುವಂತೆ ಆದೇಶದಲ್ಲಿ ತಿಳಿಸಲಾಗಿದೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಸಮೀಕ್ಷೆಯಿಂದ ಕುಟುಂಬಗಳು ಉಳಿದು ಹೋಗಿದ್ದರೆ ಅಥವಾ ಕುಟುಂಬದ ಸದಸ್ಯರು ಬಿಟ್ಟು ಹೋಗಿದ್ದರೆ ಸಾರ್ವಜನಿPರು ಗಾಂಧಿ ಚೌಕ ಹತ್ತಿರದ ಮಹಾನಗರ ಪಾಲಿಕೆಯ ಹಳೇ ಕಟ್ಟಡದ ವಲಯ ಕಚೇರಿ-೦೧ ರಲ್ಲಿ ಸ್ಥಾಪಿಸಲಾದ ಸಹಾಯವಾಣಿ ಸಂಖ್ಯೆ ೦೮೩೫೨-೨೨೨೪೭೪ ಸಂಪರ್ಕಿಸಬಹುದಾಗಿದೆ. ಈ ಸಹಾಯವಾಣಿ ಕೇಂದ್ರ ಬೆಳಿಗ್ಗೆ ೮ ರಿಂದ ರಾತ್ರಿ ೮ ಗಂಟೆಯವರೆಗೆ ಕಾರ್ಯನಿರ್ವಹಿಸಲಿದೆ ಎಂದು ಮಹಾನಗರ ಪಾಲಿಕೆ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ತಾಲೂಕಿನ ಸರ್ವೇ ನಂಬರ್ 708 ರ 708/13 ಮತ್ತು 708/14 ರಲ್ಲಿ ಈಗಾಗಲೇ ತಗ್ಗು ತೋಡಿ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದೂ ಅದನ್ನು ಬಂದ್ ಮಾಡುವಂತೆ ಕಳೆದ್ ವರ್ಷ ಜಿಲ್ಲಾಧಿಕಾರಿಗಳು ಹಾಗೂ ಸಂಭಂದಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಿರುವ ಹಿನ್ನಲೆಯಲ್ಲಿ ಅಧಿಕೃತವಾಗಿ ಬಂದ್ ಮಾಡಿದ್ದರು.ಆದರೆ ಈಗ ಮತ್ತೆ ಇದೆ ಭೂಮಿಗಳನ್ನು ಅಭಿವೃದ್ಧಿ ಮಾಡಲು ಅಧಿಕಾರಿಗಳು ಅನುಮತಿ ನೀಡುತ್ತಿದ್ದಾರೆ ಎಂಬ ಮಾಹಿತಿ ಬಂದಿರುವ ಹಿನ್ನಲೆಯಲ್ಲೇ ತಹಸೀಲ್ದಾರ್ ಅವರಿಗೆ ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲೂಕಾ ಅಧ್ಯಕ್ಷ ಸೋಮು ಬಿರಾದಾರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.ಈ ವೇಳೆ ಮಾತನಾಡಿದ ಮುಖಂಡರು, ಕಲ್ಲಿನ ಕ್ವಾರಿ ಪ್ರಾರಂಭ ಮಾಡಲು ಅನುಮತಿ ಕೊಡಬಾರದು ಇದರ ಅಕ್ಕಪಕ್ಕದಲ್ಲಿ ನೀರಾವರಿ ಜಮೀನುಗಳಿದ್ದು, ಸಮೀಪದಲ್ಲಿ ಅನೇಕ ಕುಟುಂಬಗಳು ಪುನರ್ ವಸ್ತಿಯಿಂದಾಗಿ ಗುಡಿಸಲಿನಲ್ಲಿ ಕಳೆದ ಹಲವಾರು ವರ್ಷಗಳಿಂದ ವಾಸ ಮಾಡುತ್ತಿದ್ದು ಮಕ್ಕಳು ವೃದ್ಧರು ಸೇರಿದಂತೆ ಎಲ್ಲರೂ ಅಲ್ಲಿರುವುದರಿಂದ ಕಳ್ಳು ಬ್ಲಾಸ್ಟ್ ಮಾಡುವುದರಿಂದ ಅವರ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸೌಲಭ್ಯಗಳನ್ನು ಸರಿಯಾಗಿ ಬಳಸಿಕೊಂಡು ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು. ನಮ್ಮ ಮುಂದೆ ಅನೇಕ ಸೌಲಭ್ಯಗಳಿದ್ದು, ಅವನ್ನು ಹೇಗೆ ಉಪಯೋಗಿಸಬೇಕೆಂಬ ಜಾಣ್ಮೆ ನಮ್ಮಲ್ಲಿರಬೇಕು ಎಂದು ಐಕ್ಯೂಎಸಿ ನಿರ್ದೇಶಕ ಪ್ರೊ.ಪಿ.ಜಿ. ತಡಸದ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಮಂಗಳವಾರ ಆಯೋಜಿಸಿದ್ದ ಒರಿಯೆಂಟೇಷನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಪತ್ರಿಕೋದ್ಯಮ ವಿಭಾಗವು ವಿಶಾಲವಾದ ಸಾಗರದಂತಿದೆ. ಈ ಕ್ಷೇತ್ರದಲ್ಲಿ ವಿದ್ಯಾರ್ಥಿನಿಯರಿಗೆ ತಮ್ಮ ಪ್ರತಿಭೆಯನ್ನು ಅರಿತುಕೊಳ್ಳಲು, ಕೌಶಲ್ಯಗಳನ್ನು ಬೆಳೆಸಿಕೊಳ್ಳಲು ಮತ್ತು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಅನೇಕ ಅವಕಾಶಗಳು ಲಭ್ಯವಿವೆ. ಇಂದಿನ ಯುಗದಲ್ಲಿ ಮಾಹಿತಿ, ತಂತ್ರಜ್ಞಾನ ಮತ್ತು ಸಂವಹನದ ಜ್ಞಾನವು ಅತ್ಯಗತ್ಯವಾಗಿರುವುದರಿಂದ, ವಿದ್ಯಾರ್ಥಿನಿಯರು ತಮ್ಮೊಳಗಿನ ಸಾಮರ್ಥ್ಯವನ್ನು ಗುರುತಿಸಿ, ವಿವಿಧ ಕೌಶಲ್ಯಗಳನ್ನು ಅಳವಡಿಸಿಕೊಂಡು, ಬದಲಾಗುತ್ತಿರುವ ಮಾಧ್ಯಮ ಲೋಕಕ್ಕೆ ತಕ್ಕ ರೀತಿಯಲ್ಲಿ ಸಜ್ಜಾಗಬೇಕು. ಅಷ್ಟೇ ಅಲ್ಲದೇ ಸ್ಪಷ್ಟವಾಗಿ ಕನ್ನಡ ಭಾಷೆಯನ್ನು ಉಚ್ಚರಿಸಲು ಕಲಿಯಬೇಕು ಎಂದು ಸಲಹೆ ನೀಡಿದರು.ಇದೇ ಸಂದರ್ಭದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಓಂಕಾರ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಯಲ್ಲಿ ಉಪ ಮುಖ್ಯ ಕಾನೂನು ನೆರವು ಅಭಿರಕ್ಷಕರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ವಕೀಲರು ಅರ್ಜಿ ಸಲ್ಲಿಸಬಹುದಾಗಿದ್ದು, ವಿದ್ಯಾರ್ಹತೆ, ಅನುಭವ ಮತ್ತು ಇತರೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವೆಬ್ಸೈಟ್https://vijayapura.dcourts.gov.in/dlsa/ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹಿರಿಯ ಸಿವ್ಹಿಲ್ ನ್ಯಾಯಾಧೀಶ ಅರವಿಂದ ಹಾಗರಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಿತ್ತೂರು ಚನ್ನಮ್ಮನವರ ವಿಜಯ ಜ್ಯೋತಿಯಾತ್ರೆಯು ಜಿಲ್ಲೆಗೆ ಕೊಲ್ಹಾರ ಮೂಲಕ ಅ.೧೫ ರಂದು ಸಂಜೆ ೬-೩೦ಕ್ಕೆ ವಿಜಯಪುರ ನಗರಕ್ಕೆ ಆಗಮಿಸಲಿದ್ದು, ಜ್ಯೋತಿಯಾತ್ರೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸ್ವಾಗತ ಹಾಗೂ ಪೂಜಾ ಕಾರ್ಯಕ್ರಮ ಆಯೋಜಿಸಲಾಗಿದೆ.ವಿಜಯಪುರದಲ್ಲಿ ಸ್ವಾಗತ ಹಾಗೂ ಪೂಜೆ ನಂತರ ಯಾತ್ರೆಯು ತಿಕೋಟಾ ಮಾರ್ಗವಾಗಿ ಅಥಣಿಗೆ ಬೀಳ್ಕೊಡಲಾಗುತ್ತದೆ. ಆದ್ದರಿಂದ ಸಾರ್ವಜನಿಕರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳೂ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ ಭೋವಿ ಪ್ರಕಟಣೆಯಲ್ಲಿ ಕೋರಿದ್ದಾರೆ.
ವಿಶ್ವ ರೇಬಿಸ್ ದಿನಾಚರಣೆಯಲ್ಲಿ ಜಿಲ್ಲಾಧಿಕಾರಿ ಡಾ.ಆನಂದ ಕೆ. ಕರೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಾಯಿ ಕಡಿತಕ್ಕೊಳಗಾದಲ್ಲಿ ಸಾರ್ವಜನಿಕರು ನಿರ್ಲಕ್ಷ್ಯ ವಹಿಸದೇ ಎಚ್ಚರಿಕೆ ವಹಿಸಿ, ತಕ್ಷಣ ಲಸಿಕೆ ಪಡೆದುಕೊಳ್ಳುವ ಮೂಲಕ ರೇಬಿಸ್ ಬಾರದಂತೆ ತಡೆಗಟ್ಟಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪಶು ಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಕರ್ನಾಟಕ ಪಶುವೈದ್ಯಕೀಯ ಸಂಘ ಬೆಂಗಳೂರು ಹಾಗೂ ಜಿಲ್ಲಾ ಘಟಕ ಇವರ ಸಹಯೋಗದಲ್ಲಿ ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ರೇಬಿಸ್ ತಡೆಗಟ್ಟಲು ಮುಂದಾಗೋಣ ನೀವು-ನಾವು ನಮ್ಮ ಸಮಾಜ ಎಂಬ ಘೋಷವಾಕ್ಯದಡಿ ೨೦೨೫-ರ ವಿಶ್ವ ರೇಬಿಸ್ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಜನವರಿಯಿಂದ ಈವರೆಗೆ ಬೀದಿ ನಾಯಿ ಕಡಿತದ ಹಲವು ಪ್ರಕರಣಗಳು ವರದಿಯಾಗಿವೆ. ನಾಯಿ ಕಡಿತಕ್ಕೊಳಗಾಗದಲ್ಲಿ ಸೂಕ್ತ ಸಮಯದಲ್ಲಿ ಚಿಕಿತ್ಸೆ ಪಡೆಯಬೇಕು. ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ರೇಬಿಸ್ ನಿರೋಧಕ ಲಸಿಕೆ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಸಾರ್ವಜನಿಕರು ತಮ್ಮ ಸಾಕು…
ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಉತ್ತರ ಕರ್ನಾಟಕ ಪ್ರಸಿದ್ಧ ಪ್ರವಾಸಿ ತಾಣ ಆಲಮಟ್ಟಿಯಲ್ಲಿ ಯಾತ್ರಿ ನಿವಾಸ, ಡಾರ್ಮೆಟರಿ, ಸಮುದಾಯ ಭವನ ನಿರ್ಮಿಸಬೇಕೆಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಕರ್ನಾಟಕ ರಾಜ್ಯ ಕೈಗಾರಿಕೆ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಿಗೆ ಮಂಗಳವಾರ ಬೆಂಗಳೂರಿನಲ್ಲಿ ಮನವಿ ಸಲ್ಲಿಸಲಾಯಿತು.ಸಂಘದ ರಾಜ್ಯ ಘಟಕದ ಅಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತೃತ್ವದಲ್ಲಿ, ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ಜಿ.ನಂಜಯ್ಯನಮಠ ಅವರನ್ನು ಬೆಂಗಳೂರಿನ ಅವರ ಕಚೇರಿಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸಲಾಯಿತು.ಆಲಮಟ್ಟಿಗೆ ಪ್ರತಿವರ್ಷ ೫ ಲಕ್ಷಕ್ಕೂ ಅಧಿಕ ಪ್ರವಾಸಿಗರು ಭೇಟಿ ನೀಡುತ್ತಾರೆ. ನವ್ಹಂಬರ್ , ಡಿಸೆಂಬರ್ ನಲ್ಲಿ ರಾಜ್ಯದ ಬಹುತೇಕ ಕಡೆಗಳಿಂದ ಸಹಸ್ರಾರು ಮಕ್ಕಳು ಶೈಕ್ಷಣಿಕ ಪ್ರವಾಸಕ್ಕೆ ಆಗಮಿಸುತ್ತಾರೆ, ಅವರ ವಾಸ್ತವ್ಯಕ್ಕೆ ಸೂಕ್ತ ವ್ಯವಸ್ಥೆಯಿಲ್ಲದೆ, ಗುಡಿ ಗುಂಡಾರ, ರಸ್ತೆ ಬದಿ ಮಲಗುವ ಸ್ಥಿತಿ ಇದೆ. ಸಂಗೀತ ಕಾರಂಜಿ ಮತ್ತೀತರ ವೀಕ್ಷಣೆ ಮುಗಿಯುವುದು ರಾತ್ರಿ ೮ ಕ್ಕೆ, ಆಗ ಯಾವುದೇ ಬಸ್ ಸೌಕರ್ಯಗಳು ಇಲ್ಲ, ಜತೆಗೆ ವಾಸ್ತವ್ಯಕ್ಕೆ ಯಾತ್ರಿನಿವಾಸವೂ ಇಲ್ಲ. ಹೀಗಾಗಿ…
ಉದಯರಶ್ಮಿ ದಿನಪತ್ರಿಕೆ ಇಂಡಿ: ತಾಲೂಕು ಮಟ್ಟದ ಖೋ-ಖೋ ಪಂದ್ಯಾಟದಲ್ಲಿ ಪ್ರಾಥಮಿಕ ವಿಭಾಗದಲ್ಲಿ ತಾಲ್ಲೂಕಿನ ತಡವಲಗಾ ಗ್ರಾಮದ ವಿನಾಯಕ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.ಮಂಗಳವಾರ ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ ಹಾಗೂ ಶಿಕ್ಷಣ ಇಲಾಖೆಯ ಇವರ ಆಶ್ರಯದಲ್ಲಿ ತಾಲ್ಲೂಕು ಮಟ್ಟದ ಕ್ರೀಡಾಕೂಟ ನಡೆಯಿತು.ಈ ಸಂದರ್ಭದಲ್ಲಿ ಸಂಸ್ಥೆ ಅಧ್ಯಕ್ಷ ಸಿದ್ದಪ್ಪ ಅಗರಖೇಡ ಮಾತನಾಡಿದ ಅವರು, ವಿದ್ಯಾರ್ಥಿಗಳು ಬಾಲಕಿಯರ ಖೋ ಖೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದು ಹೆಮ್ಮೆಯ ವಿಷಯ. ಪಠ್ಯದ ಜೊತೆ ಆಟದಲ್ಲಿ ಸಕ್ರೀಯವಾಗಿರಬೇಕು. ಆಟದಿಂದ ರೋಗ ಬರುವುದಿಲ್ಲ ಎಂದು ಹೇಳಿದರು. ಇದೇ ರೀತಿ ವಿದ್ಯಾರ್ಥಿಗಳು ಮುಂಬರುವ ದಿನಮಾನಗಳಲ್ಲಿ ಇನ್ನು ಉನ್ನತ ಮಟ್ಟಕ್ಕೆ ಬೆಳೆಯಲಿ ಎಂದು ಶುಭಹಾರೈಸಿದರು.ಈ ಸಂದರ್ಭದಲ್ಲಿ ಕಾರ್ಯದರ್ಶಿ ಶ್ರೀಮಂತ ದುದಗಿ, ಖಜಾಂಚಿ ವಿನೋದ ಖೇಡ, ಮುಖ್ಯ ಗುರು ಬಿ ಜಿ ಬಾಗೇವಾಡಿ, ಪ್ರೌಢಶಾಲೆಯ ಮುಖ್ಯ ಗುರು…