Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅವರ ಸಹಯೋಗದಲ್ಲಿ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಆ.೨೮ ರಂದು ಬೆಳಗ್ಗೆ ೧೧ ಗಂಟೆಗೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗ ಮಂದಿರ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ ೧೦ ಗಂಟೆಗೆ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಕಂದಗಲ್ ಹನುಮಂತರಾಯ ರಂಗಮಂದಿರದವರೆಗೆ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ಬೆಳಿಗ್ಗೆ ೧೧ ಗಂಟೆಗೆ ರಂಗಮಂದಿರದಲ್ಲಿ ನಡೆಯುವ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ ಅವರು ಉದ್ಘಾಟಿಸುವರು. ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹಾಕಿ ಕ್ರೀಡಾ ದಿಗ್ಗಜ, ಮೇಜರ್ ಧ್ಯಾನಚಂದ್ ಅವರ ಜನ್ಮದಿನದ ಸ್ಮರಣಾರ್ಥ ಆಚರಿಸಲಾಗುವ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಇವರ ಸಹಯೋಗದಲ್ಲ್ಲಿ ೨೦೨೬-೨೭ನೇ ಸಾಲಿನ ಜಿಲ್ಲಾಮಟ್ಟದ ಕ್ರೀಡಾಕೂಟವನ್ನು ಆ. ೨೮ರಂದು ಆಯೋಜಿಸಲಾಗಿದೆ.ನಗರದ ಡಾ. ಬಿಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಆ.೨೮ರಂದು ಬೆಳಿಗ್ಗೆ ೯ ಗಂಟೆಗೆ ಕ್ರೀಡಾಕೂಟಕ್ಕೆ ಚಾಲನೆ ದೊರೆಯಲಿದ್ದು, ಜಿಲ್ಲೆಯ ಪುರುಷ ಮತ್ತು ಮಹಿಳಾ ಕ್ರೀಡಾಪಟುಗಳಿಗಾಗಿ ವಿವಿಧ ಅಥ್ಲೆಟಿಕ್ ಹಾಗೂ ಸೈಕ್ಲಿಂಗ್ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ಕ್ರೀಡಾಕೂಟದಲ್ಲಿ ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ೧೦೦ ಮೀಟರ್, ೨೦೦ ಮೀಟರ್, ೮೦೦ ಮೀಟರ್ ಹಾಗೂ ೧೫೦೦ ಮೀಟರ್ ಓಟದ ಸ್ಪರ್ಧೆಗಳು ನಡೆಯಲಿವೆ. ಇದರೊಂದಿಗೆ ಸೈಕ್ಲಿಂಗ್ ಸ್ಪರ್ಧೆಯನ್ನೂ ಆಯೋಜಿಸಲಾಗಿದೆ.ಜಿಲ್ಲೆಯ ಕ್ರೀಡಾಪಟುಗಳಿಗೆ ಮಾತ್ರ ಅವಕಾಶ:ಜಿಲ್ಲೆಯ ಆಸಕ್ತ ಕ್ರೀಡಾಪಟುಗಳು ಹಾಗೂ ತಂಡಗಳು ನಿಗದಿತ ಸಮಯಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಜರಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡು ಸ್ಪರ್ಧೆಯಲ್ಲಿ ಭಾಗವಹಿಸುವಂತೆಯೂ ಹಾಗೂ ಕಡ್ಡಾಯವಾಗಿ ತಮ್ಮ ಆಧಾರ್ ಕಾರ್ಡ್ನ ಝೆರಾಕ್ಸ್…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕನ್ನಡ ಮತ್ತು ಸಂಸ್ಕರತಿ ಇಲಾಖೆಯಿಂದ ನಡೆಯುವ ಕಾರ್ಯಕ್ರಮಗಳಲ್ಲಿ ಅನೇಕ ಕಲಾ ತಂಡಗಳಿಗೆ ಅವಕಾಶ ನೀಡಲಾಗುತ್ತಿದೆ. ಜಿಲ್ಲೆಯಲ್ಲಿರುವ ಕಲಾವಿದರ ಹಾಗೂ ಕಲಾ ತಂಡಗಳ ಸಮಗ್ರ ಪಟ್ಟಿಯನ್ನು ಸಿದ್ಧಪಡಿಸಿ ಅವರಿಗೆ ಸೂಕ್ತ ಕಾರ್ಯಕ್ರಮಗಳಲ್ಲಿ ಅವಕಾಶ ಕಲ್ಪಿಸಲು ಹಾಗೂ ಕಲಾವಿದರ ಪಟ್ಟಿ ಸಿದ್ಧಪಡಿಸಿ ಅವರಿಗೆ ಗುರುತಿನ ಚೀಟಿ ನೀಡುವ ಉದ್ದೇಶದಿಂದ ವಿವರಗಳನ್ನು ಆಹ್ವಾನಿಸಿದೆ.ಕಲಾವಿದರು ಸೆ.೧ ರಿಂದ ಸೆ.೩೦ರೊಳಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಿಗದಿಪಡಿಸಿದ ನಮೂನೆ ಪಡೆದುಕೊಂಡು ಆಧಾರ ಕಾರ್ಡ್, ಚುನಾವಣಾ ಗುರತಿನ ಚೀಟಿ, ಪಡಿತರ ಚೀಟಿ, ಸಂಘ ಸಂಸ್ಥೆಗಳಿಂದ ಪಡೆದ ಪ್ರಶಸ್ತಿ-ಪುರಸ್ಕಾರ ವಿವರ, ಪ್ರಮುಖ ಪ್ರದರ್ಶನ ಮತ್ತು ಕಲಾ ಚಟುವಟಿಕೆಗಳ ವಿವರಗಳೊಂದಿಗೆ ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ,ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರ,ಸ್ಟೇಶನ್ ರಸ್ತೆ ಈ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ೦೮೩೫೨೫೧೨೬೧ ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ೨೦೨೬-೨೭ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಾಲ ಹಾಗೂ ಸಹಾಯಧನ ಸೌಲಭ್ಯ ಪಡೆಯಲು ಅರ್ಹರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಮುಸ್ಲಿಂ, ಜೈನ, ಬೌದ್ಧ, ಸಿಖ್ ಹಾಗೂ ಪಾರ್ಸಿ ಸಮುದಾಯಕ್ಕೆ ಸೇರಿದವರು ನಿಗಮದ ಸ್ವಾವಲಂಬಿ ಸಾರಥಿ ಯೋಜನೆ, ವ್ಯಾಪಾರ ಉದ್ಯಮ ನೇರ ಸಾಲ ಯೋಜನೆ, ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆ (ಫ್ರೆಶ್), ಗಂಗಾ ಕಲ್ಯಾಣ ಯೋಜನೆ, ಆರ್ಥಿಕ ಸಬಲೀಕರಣಕ್ಕೆ ಪ್ರೋತ್ಸಾಹ ಯೋಜನೆ, ರೇಷ್ಮೆ ನೂಲು ಉದ್ಯಮಕ್ಕೆ ಪ್ರೋತ್ಸಾಹ ಯೋಜನೆ ಹಾಗೂ ಸಾಂತ್ವನ ಯೋಜನೆಗಳಡಿ ಸೌಲಭ್ಯಕ್ಕಾಗಿ ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ವಿದೇಶಿ ವಿದ್ಯಾಭ್ಯಾಸ ಸಾಲ ಹಾಗೂ ಗಂಗಾ ಕಲ್ಯಾಣ ಯೋಜನೆಗಳನ್ನು ಹೊರತುಪಡಿಸಿ ಉಳಿದ ಯೋಜನೆಗಳಿಗೆ ಅರ್ಜಿ ಸಲ್ಲಿಸುವ ವಯಸ್ಸು ೧೮ ರಿಂದ ೫೫ ವರ್ಷಗಳೊಳಗಿರಬೇಕು. ಅರ್ಜಿದಾರರು ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಬ್ಯಾಂಕ್ ಖಾತೆ ಪುಸ್ತಕ ಸೇರಿದಂತೆ ಅಗತ್ಯ ದಾಖಲೆಗಳನ್ನು ಹೊಂದಿರಬೇಕು.ನಿಗಮದ ಅಧಿಕೃತ ಜಾಲತಾಣದ ಮೂಲಕವೇ ಆನ್‌ಲೈನ್‌ನಲ್ಲಿ ಅರ್ಜಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ೨೦೨೬-೨೭ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಾಲ ಹಾಗೂ ಸಹಾಯಧನ ಸೌಲಭ್ಯ ಪಡೆಯಲು ಅರ್ಹರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.ನಿಗಮದ ವತಿಯಿಂದ ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆ, ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸಹಾಯಧನ ಯೋಜನೆ ಹಾಗೂ ಫಾಸ್ಟ್ಫುಡ್ ಟ್ರಕ್, ಟ್ರೇಲರ್, ಮೊಬೈಲ್ ಅಡುಗೆಮನೆ- ಆಹಾರ ಮಳಿಗೆ ಯೋಜನೆಗಳಡಿ ಅರ್ಹ ಫಲಾನುಭವಿಗಳಿಗೆ ಸಾಲ ಹಾಗೂ ಸಹಾಯಧನ ಸೌಲಭ್ಯ ಪಡೆಯಲು ಅರ್ಜಿದಾರರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದವರಾಗಿದ್ದು, ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಅರ್ಜಿದಾರರು ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಬ್ಯಾಂಕ್ ಖಾತೆ ಪುಸ್ತಕ ಸೇರಿದಂತೆ ಅಗತ್ಯ ದಾಖಲೆಗಳನ್ನು ಹೊಂದಿರಬೇಕು.ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಆನ್‌ಲೈನ್‌ನಲ್ಲಿ ಸಲ್ಲಿಸಿದ ಅರ್ಜಿಯ ಮುದ್ರಿತ ಪ್ರತಿಯನ್ನು ಜಿಲ್ಲಾ ಕಚೇರಿಗೆ ಸಲ್ಲಿಸುವ ಅಗತ್ಯವಿಲ್ಲ. ಆಸಕ್ತರು ನಿಗಮದ ಅಧಿಕೃತ ವೆಬ್‌ಸೈಟ್ hಣಣಠಿs://ಞಛಿಛಿಜಛಿಟoಟಿಟiಟಿe.ಏಚಿಡಿಟಿಚಿಣಚಿಞಚಿ.gov.iಟಿ/Poಡಿಣಚಿಟ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ ೩೦ ಕೊನೆಯ ದಿನವಾಗಿದೆ.ಅರ್ಜಿ ಸಲ್ಲಿಕೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ವಿಜಯಪುರ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ವೇಳೆ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಗಾಂಧಿಚೌಕ್ ಠಾಣೆಯ ರೌಡಿ ನಿಗ್ರಹ ದಳದ ಪೊಲೀಸರು ಸುಮಾರು 12 ವರ್ಷಗಳ ಬಳಿಕ ಬಂಧಿಸಿದ್ದಾರೆ.2009ರ ಜೂನ್ 23ರಂದು ಬಾಗಲಕೋಟೆ ಜಿಲ್ಲೆಯ ಹುನಗುಂದ ಪೊಲೀಸ್ ಠಾಣೆಯಲ್ಲಿ ಕೃಷಿ ಅಧಿಕಾರಿ ಶಿವಪ್ಪ ತಂ. ಸಂಗಪ್ಪ ಗುಳಪ್ಪನವರ ಕೊಲೆ ಪ್ರಕರಣ ದಾಖಲಾಗಿತ್ತು. ಆರೋಪಿತರು ಮಹಿಳೆಯೊಬ್ಬರ ಸ್ನೇಹ ಬೆಳೆಸಿ, ಆಕೆಯ ಮೂಲಕ ಶಿವಪ್ಪ ಅವರನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಹಣ ಪಡೆದು, ಖಾಲಿ ಚೆಕ್ ಮೇಲೆ ಸಹಿ ಮಾಡಿಸಿಕೊಂಡ ಬಳಿಕ ಕೊಲೆ ಮಾಡಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿತ್ತು.ಪ್ರಕರಣದ ತನಿಖೆ ನಡೆಸಿದ ಪೊಲೀಸರು ಹನಮಂತ ತಂ. ಪಾಂಡುರಂಗ ಭಜಂತ್ರಿ ಹಾಗೂ ಬಸವರಾಜ್ ತಂ. ಮಹಾಲಿಂಗಪ್ಪ ಪಾಟೀಲ ಅವರನ್ನು ಬಂಧಿಸಿ, ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ, ಬಾಗಲಕೋಟೆಗೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ವಿಚಾರಣೆ ಬಳಿಕ ನ್ಯಾಯಾಲಯವು ಇಬ್ಬರೂ ಆರೋಪಿಗಳಿಗೆ ಜೀವಾವಧಿ…

Read More

ಲೇಖನ- ಸಂತೋಷ್ ರಾವ್ ಪೆರ್ಮುಡ.ಪೆರ್ಮುಡ ಮನೆ, ಪಟ್ರಮೆ ಗ್ರಾಮ ಮತ್ತು ಅಂಚೆಬೆಳ್ತಂಗಡಿ ತಾಲೂಕುದ.ಕ ಜಿಲ್ಲೆ-೫೭೪೧೯೮ದೂ:೯೭೪೨೮೮೪೧೬೦ ಉದಯರಶ್ಮಿ ದಿನಪತ್ರಿಕೆ ದಯಾನಗರವೆಂಬ ಒಂದು ಹಳ್ಳಿಯಲ್ಲಿ ತಿಮ್ಮೇಶ ಎಂಬ ಬಡ ರೈತನೊಬ್ಬ ತನ್ನ ಸಣ್ಣ ಜಮೀನಿನಲ್ಲಿ ಸಣಪುಟ್ಟ ಕೃಷಿಯನ್ನು ಮಾಡಿಕೊಂಡು ಜೀವನವನ್ನು ಸಾಗಿಸುತ್ತಾ ಇದ್ದನು. ಹೀಗಿರುವಾಗ ತಿಮ್ಮೇಶನನ್ನು ಪ್ರತಿದಿನವೂ ಒಂದು ರೀತಿ ವಿಚಿತ್ರವಾದ ಸಮಸ್ಯೆಯು ಕಾಡುತ್ತಿತ್ತು. ಆ ಸಮಸ್ಯೆಯಿಂದ ಆತ ಹೊರ ಬರಲಾರದೆ ಬಹಳಷ್ಟು ಚಡಪಡಿಸುತ್ತಿದ್ದನು. ತನ್ನ ವಿಚಿತ್ರ ಸಮಸ್ಯೆಯನ್ನು ಪಟ್ಟಣದ ಖ್ಯಾತ ಮನೋವೈದ್ಯರ ಬಳಿ ತೋರಿಸಲು ನಿರ್ಧರಿಸುತ್ತಾನೆ. ಮಾರನೇ ದಿನ ಬೆಳಗಾಗುತ್ತಿದ್ದಂತೆಯೇ ಪಟ್ಟಣದಲ್ಲಿದ್ದ ಮನೋವೈದ್ಯರನ್ನು ಭೇಟಿ ಮಾಡಿ, ಸ್ವಾಮಿ ನನಗೆ ಪ್ರತಿ ದಿನವೂ ಒಂದು ವಿಚಿತ್ರವಾದ ಕನಸು ಬೀಳುತ್ತಿದೆ, ಆ ಕನಸಿನಲ್ಲಿ ಒಂದು ವಿಚಿತ್ರ ರೂಪದ ಮತ್ತು ದೊಡ್ಡ ಗಾತ್ರದ ಅತ್ಯಂತ ಕ್ರೂರಿ ದೆವ್ವವೊಂದು ನನ್ನನ್ನು ಕೊಲ್ಲಲು ಬರುತ್ತದೆ. ಇದರಿಂದಾಗಿ ನನಗೆ ಭಯವು ಪ್ರಾರಂಭವಾಗಿ ಸರಿಯಾಗಿ ನಿದ್ದೆ ಮಾಡಲು ಆಗುತ್ತಿಲ್ಲ ಮತ್ತು ಮನಸ್ಸಿಗೆ ನೆಮ್ಮದಿಯೂ ಇಲ್ಲ. ನನ್ನ ಈ ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳಲು ಸಾಧ್ಯವಾಗದೇ…

Read More

ಲೇಖನ- ರಶ್ಮಿ ಕೆ. ವಿಶ್ವನಾಥ್.ಮೈಸೂರು ಉದಯರಶ್ಮಿ ದಿನಪತ್ರಿಕೆ “ಲೋಕೋ ಭಿನ್ನ ರುಚಿಃ” – ಲೋಕದಲ್ಲಿ ನಾಲಗೆಗಳೆಷ್ಟೋ ರುಚಿಗಳಷ್ಟು.ಅವರಿಗೆ ರುಚಿಸಿದ್ದು ನಮಗೆ ರುಚಿಸಬೇಕೆಂದೇನು ಇಲ್ಲಾ. ಆದರೂ ಒಪ್ಪಿಕೊಳ್ಳಲೇಬೇಕು.ನಮಗೆ ರುಚಿಸಿದ್ದು ಮತ್ತೊಬ್ಬರಿಗೆ ರುಚಿಸಬೇಕೆಂದೇನು ಇಲ್ಲಾ. ಹಾಗಾಗಿ ಅವರು ಒಪ್ಪಿಕೊಳ್ಳುವುದಿಲ್ಲ. ಆದರೆ ಅವರು ಒಪ್ಪದಿದ್ದರೂ ಸಹ ನಾವು ಒಪ್ಪಿಕೊಳ್ಳಲೇಬೇಕು. ನಮ್ಮ ಮನಸು ನಮ್ಮ ಸುತ್ತ ಮುತ್ತಲಿನವರೊಂದಿಗಿನ ಬಾಂಧವ್ಯವನ್ನು ಬೇಡುತ್ತದೆ. ಮತ್ತೆ ಕೆಲವು ಸಂದರ್ಭಗಳಲ್ಲಿ ಅದು ಅನಿವಾರ್ಯತೆಯಾಗಿರುತ್ತದೆ.ಹಾಗಾಗಿ ಯಾರು ಎಷ್ಟೇ ನೋಯಿಸಿದರು, ಅವರಮೇಲಿನ ಬೇಸರ, ಕೋಪ, ಮುನಿಸು, ತಾತ್ಸಾರ ಎಲ್ಲವನ್ನು ಹಾಗೆ ಒಳಗಿನ ಮನಸ್ಸಿನಲ್ಲಿಯೇ ಬಿಟ್ಟು, ಮೇಲೊಂದು ತಣ್ಣನೆಯ ಮುಖವಾಡ ತೊಟ್ಟು.. ಸುಳ್ಳು ಸುಳ್ಳೇ ಆದರೂ ಸರಿಯೆ.. ಮೆಲ್ಲಗೆ ನಕ್ಕುಬಿಡಬೇಕು.”ಏ ಇಲ್ಲಪ್ಪ ನಾನೇ ತಿಂದುನೋಡಿದ್ದೀನಿ ಹಾಗಲಕಾಯಿ ಸಿಹಿ ಇತ್ತು” ಎಂದು ದೊಡ್ಡ ಸ್ಥಾನದಲ್ಲಿರುವವರು ಅಥವಾ ಹೆಸರು ಮಾಡಿರುವವರು ಹೇಳಿದರೆ, “ಊಹುಂ” ಎಂದವೋ ಅಲ್ಲಿಗೆ ಮುಗಿಯಿತು. ‘ಶನಿಮಹಾತ್ಮ ಹೆಗಲೇರಿದಂತೆಯೇ’. ಇಲ್ಲ-ಸಲ್ಲದ ಆಪಾದನೆಗಳು ನಮ್ಮ ಮೇಲೆಯೇ ಎರಗಿಬೀಳುತ್ತವೆ. “ಗೆದ್ದೆತ್ತಿನ ಬಾಲ ಹಿಡಿಯುವ” ಜನರ ಬೆಂಬಲ ಅಂಥವರಿಗೆ ಇದ್ದೇ ಇರುತ್ತದೆ.”ಒಗ್ಗಟ್ಟಿನಲ್ಲಿ ಬಲವಿದೆ”…

Read More

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕರಡು ಮತದಾರರ ಪಟ್ಟಿ ಪ್ರಕಟ | ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ | ಅಂಕಿ-ಅಂಶ ಬಿಡುಗಡೆಗೊಳಿಸಿದ ಡಿಸಿ ಡಾ.ಆನಂದ ಕೆ. ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕರಡು ಮತದಾರರ ಪಟ್ಟಿಯನ್ನು ಸೋಮವಾರ ಅಧಿಕೃತವಾಗಿ ಪ್ರಕಟಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ತಿಳಿಸಿದರು. ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲಾ ತಹಶೀಲ್ದಾರ್ ಕಚೇರಿಗಳು, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಈ ಪಟ್ಟಿಯನ್ನು ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ ತಿಳಿಸಿದರು. ಸೆ. ೨೩ ಆಕ್ಷೇಪಣೆಗೆ ಕೊನೆ ದಿನ: ಮತದಾರರು ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಕರಡು ಪಟ್ಟಿಯನ್ನು ಪರಿಶೀಲಿಸಿ, ಯಾವುದೇ ಹಕ್ಕು ಮತ್ತು ಆಕ್ಷೇಪಣೆಗಳಿದ್ದಲ್ಲಿ ಆಗಸ್ಟ್ ೨೪ ರಿಂದ ಸೆಪ್ಟೆಂಬರ್ ೨೩ರವರೆಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ…

Read More