Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇಂದಿನ ತಾಂತ್ರಿಕ ಯುಗದಲ್ಲಿ ವಿಜ್ಞಾನ ಪರಿಭಾಷೆಯು ಎಲ್ಲಡೆಯೂ ಸಿಗುತ್ತವೆ. ಆದರೆ ಮಕ್ಕಳಲ್ಲಿ ವೈಜ್ಞಾನಿಕ ಪ್ರಜ್ಞೆ ಮತ್ತು ಮನೋಭಾವ ಮೂಡಿಸುವುದು ಇಂದಿನ ಶಿಕ್ಷಣದ ಗುರಿಯಾಗಬೇಕು ಎಂದು ಬೆಂಗಳೂರಿನ ಸೃಜನಶೀಲ ಅಧ್ಯಾಪನ ಕೇಂದ್ರದ ಶಿಕ್ಷಣ ತಜ್ಞ ಡಾ.ಗುರುರಾಜ ಕರಜಗಿ ಹೇಳಿದರು.ಡಿ.೨೮.೨೯ರಂದು ನಗರದ ಆಕ್ಟ್-ಶಾರದಾ ಪಬ್ಲಿಕ್ ಶಾಲೆಯ ಕಲಾ ಸೌರಭ ೨೦೨೫-೨೬ನೇ ಸಾಲಿನ ಎರಡು ದಿನಗಳ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಕ್ಕಳ ಸರ್ವಾಂಗೀಣ ಶೈಕ್ಷಣಿಕ ಪ್ರಗತಿಯಲ್ಲಿ ವಿಜ್ಞಾನದ ಜೊತೆಜೊತೆಗೆ ಮೌಲ್ಯವರ್ಧನೆಗೆ ಒತ್ತು ನೀಡುವ ವಿವಿಧ ಸಾಂಸ್ಕöÈತಿಕ ಚಟುವಟಿಕೆಗಳಿಗೆ ಒತ್ತು ನೀಡಿದಾಗ ನಿಜವಾದ ಸೃಜನಶೀಲತೆ ಮಕ್ಕಳಲ್ಲಿ ಮೂಡಿಬರುತ್ತದೆ ಎಂದು ತಿಳಿಸಿದರು.ಪಠ್ಯ ವಿಷಯವನ್ನು ವಿಶೇಷ ಜ್ಞಾನವನ್ನಾಗಿಸಿದಾಗ ಅದೇ ವಿಜ್ಞಾನವಾಗುತ್ತದೆ. ಈ ವಿಜ್ಞಾನವನ್ನು ಜೀವನಕ್ಕೆ ರೂಢಿಸಿಕೊಂಡಾಗ ಅರಿವಿನ ಅಭಿಜ್ಞಾನವಾಗುತ್ತದೆ. ವಿಜ್ಞಾನವು ಬೆಂಕಿ ಇದ್ದ ಹಾಗೆ, ಇದರಿಂದ ದೀಪವನ್ನು ಬೆಳಗಿಸಬಹುದು, ಮನೆ ಸುಡುವದಕ್ಕೂ ಬಳಸಬಹುದು ಆದರೆ ವಿಜ್ಞಾನವನ್ನು ಹೇಗೆ ಬಳಸಬೇಕು ಎಂಬ ಪ್ರಜ್ಞೆ ಮತ್ತು ವಿವೇಕವನ್ನು ಬೆಳೆಸುವುವಲ್ಲಿ ಶಿಕ್ಷಕರು ಮತ್ತು ಪೋಷಕರು ವಿಶೇಷ ಪಾತ್ರ…

Read More

ಎಕ್ಸಲಂಟ್ ವಿಜ್ಞಾನ ಪ. ಪೂ ಕಾಲೇಜಿನಲ್ಲಿ ಗುರುನಮನ ಮಹೋತ್ಸವದೊಂದಿಗೆ ಹೊಸ ವರ್ಷಕ್ಕೆ ಚಾಲನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹುಟ್ಟಿದಾಗ ಯಾವ ವ್ಯಕ್ತಿಯೂ ಸಹ ದಡ್ಡನಾಗಿರುವುದಿಲ್ಲ. ಬದಲಿಗೆ ನಮ್ಮನ್ನು ಇನೊಬ್ಬರೊಂದಿಗೆ ಹೋಲಿಸಿಕೊಂಡು ದಡ್ಡ ಎಂದುಕೊಳ್ಳುತ್ತೇವೆ, ಅದರ ಬದಲಿಗೆ ಪ್ರತಿಯೊಬ್ಬ ವಿದ್ಯಾರ್ಥಿಯೂ ನಾನು ಬುದ್ದಿವಂತ ನನ್ನಿಂದ ಎಲ್ಲವೂ ಸಾಧ್ಯ ಎಂದುಕೊಂಡು ಪ್ರತಿದಿನವನ್ನು ಪ್ರಾರಂಭಿಸಿದರೆ ಯಶಸ್ಸು ಎನ್ನುವುದು ಹುಡುಕಿಕೊಂಡು ಬರುತ್ತದೆ ಎಂದು ಕಾಖಂಡಕಿಯ ಗುರುದೇವಾಶ್ರಮದ ಪ.ಪೂ ಶ್ರೀ ಶಿವಯೋಗೀಶ್ವರ ಸ್ವಾಮೀಜಿ ಹೇಳಿದರು.ನಗರದ ಎಕ್ಸಲಂಟ್ ಪ. ಪೂ ವಿಜ್ಞಾನ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿಯವರಿಗೆ ಗುರು ನಮನ ಮಹೋತ್ಸವದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು; ಮಕ್ಕಳಲ್ಲಿ ಧನಾತ್ಮಕ ಚಿಂತನೆಗಳು ಜಾಗೃತಗೊಳ್ಳಬೇಕಾದರೆ ಸಣ್ಣ ಸಣ್ಣ ಅಂಶಗಳಿಂದಲೂ ಜ್ಞಾನವನ್ನು ಪಡೆದುಕೊಳ್ಳುವುದಕ್ಕೆ ವಿದ್ಯಾರ್ಥಿಗಳು ಸದಾ ಯತ್ನಿಸುತ್ತಿರಬೇಕು. ತನ್ನನ್ನು ಯಾವತ್ತೂ ಯಾರ ಜೊತೆಗೂ ಹೋಲಿಸಿಕೊಳ್ಳಬಾರದು. ನಿಸರ್ಗ ನಮ್ಮನ್ನು ಸೃಷ್ಠಿಸುವಾಗ ವಿಶೇಷವಾಗಿ ಸೃಷ್ಠಿಸಿರುತ್ತಾನೆ. ಯಾರಿಗೆ ಯಾವ ಶಕ್ತಿ ನೀಡಬೇಕು. ಯಾರಿಗೆ ಯಾವ ಜ್ಞಾನ ನೀಡಬೇಕು ಅದನ್ನು ನೀಡಿರುತ್ತಾನೆ. ಒಬ್ಬರು…

Read More

ವಿಜಯಪುರದಲ್ಲಿ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಮರ ಶಿಲ್ಪಿ ಜಕಣಚಾರಿ ಅವರ ಶ್ರದ್ಧೆ, ಪ್ರಾಮಾಣಿಕತೆ ಹಾಗೂ ಅವರು ಕಲೆಗೆ ನೀಡಿದ ಕೊಡುಗೆ ಅಪಾರ ಎಂದು ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಅವರು ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಗುರುವಾರ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಿದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಶಿಲ್ಪಕಲೆಯ ಇತಿಹಾಸದಲ್ಲಿ ಅಜರಾಮರಾಗಿರುವ ಅಮರಶಿಲ್ಪಿ ಜಕಣಾಚಾರಿ ಅವರು ಕಲ್ಲಿನಲ್ಲಿ ಜೀವ ತುಂಬಿದ ಮಹಾನ್ ಶಿಲ್ಪಿ, ಹೊಯ್ಸಳ ಯುಗದ ಶಿಲ್ಪಕಲೆಗೆ ಶಾಶ್ವತವಾದ ಕೀರ್ತಿ ತಂದ ಮಹಾನ್ ಕಲಾವಿದರು. ಶಿಲ್ಪಕಲೆ, ಸಂಸ್ಕೃತಿ ಹಾಗೂ ಇತಿಹಾಸದ ಕುರಿತು ಅಮರಶಿಲ್ಪಿ ಜಕಣಾಚಾರಿ ಭಾರತೀಯ ಶಿಲ್ಪಕಲೆಗೆ ವಿಶ್ವಮಟ್ಟದ ಹೆಗ್ಗುರುತನ್ನು ತಂದ ಮಹಾನ್ ಕಲಾವಿದ. ಅವರ ಕಲಾ ಪರಂಪರೆ ನಮ್ಮ ಸಾಂಸ್ಕೃತಿಕ ಅಸ್ತಿತ್ವದ ಹೆಮ್ಮೆಯಾಗಿದೆ. ಅದ್ಭುತ ಶಿಲ್ಪಕಲೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೃಷಿ ಇಲಾಖೆಯ ವತಿಯಿಂದ ಜನವರಿ ೦೩ರಂದು ಬೆಳಿಗ್ಗೆ ೭ರಿಂದ ೮:೩೦ರವರೆಗೆ ಸಿರಿಧಾನ್ಯ ನಡಿಗೆ ಕಾರ್ಯಕ್ರಮ ಆಯೋಜಿಸಲಾಗಿದೆ. ಸಿರಿ ಧಾನ್ಯ ನಡಿಗೆ ಕಾರ್ಯಕ್ರಮವು ಜ್ಞಾನಯೋಗಾಶ್ರಮದಿಂದ ಆರಂಭಗೊಂಡು, ಶ್ರೀ ಸಿದ್ದೇಶ್ವರ ದೇವಸ್ಥಾನ, ಗಾಂಧಿ ವೃತ್ತ,ಬಸವೇಶ್ವರ ವೃತ್ತದ ಮೂಲಕ ಗಗನಮಹಲವರೆಗೆ ನಡೆಯಲಿದೆ.ಸಿರಿ ಧಾನ್ಯ ನಡಿಗೆ ಕಾರ್ಯಕ್ರಮದಲ್ಲಿ ಸಾರ್ವಜನಿಕರು,ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಸುವಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಿವನಗೌಡ ಪಾಟೀಲ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಂಕ್ರಮಣದಲ್ಲಿ ನಡೆಯುವ ಶ್ರೀ ಸಿದ್ದೇಶ್ವರ ಜಾತ್ರಾ ಅಂಗವಾಗಿ ಪ್ರತಿ ವರ್ಷದಂತೆ ಈ ಬಾರಿಯು ವಿಜಯಪುರ ತಾಲೂಕಿನ ತೊರವಿಯಲ್ಲಿ ಜ.೧೦ ರಿಂದ ೧೭ರವರೆಗೆ ಶ್ರೀ ಸಿದ್ದೇಶ್ವರ ಜಾನುವಾರು ಜಾತ್ರೆ ನಡೆಯಲಿದೆ.ರೈತರು ಹಾಗೂ ಸಾರ್ವಜನಿಕರು ತಮ್ಮ ಜಾನುವಾರಗಳನ್ನು ಜನವರಿ ೯ರಿಂದ ತೊರವಿಯ ಜಾನುವಾರು ಜಾತ್ರಾ ಸ್ಥಳಕ್ಕೆ ತರುವಂತೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಜಂಟಿ ನಿರ್ದೇಶಕರು ಹಾಗೂ ಕಾರ್ಯದರ್ಶಿಗಳಾದ ಅಲ್ಲಾಭಕ್ಷ ಬಿಜಾಪುರ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

Read More

ವಿಜಯಪುರ ಜಿಲ್ಲಾ ಕ್ರೀಡಾಂಗಣ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಕ್ರೀಡಾಪಟುಗಳು ರಾಜ್ಯ-ರಾಷ್ಟ್ರ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈಯ್ಯಲು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾ ಕ್ರೀಡಾಂಗಣ ಹಾಗೂ ನಗರದ ಕನಕದಾಸ ಬಡಾವಣೆಯಲ್ಲಿರುವ ಒಳಾಂಗಣ ಕ್ರೀಡಾಂಗಣಗಳಲ್ಲಿ ಎಲ್ಲ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಗುರುವಾರ ನಗರದ ಜಿಲ್ಲಾ ಕ್ರೀಡಾಂಗಣದ ಕಚೇರಿಯಲ್ಲಿ ಜರುಗಿದ ಜಿಲ್ಲಾ ಕ್ರೀಡಾಂಗಣ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಜಿಲ್ಲೆಯ ಕ್ರೀಡಾಪಟುಗಳು ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆಗೈಯಲು ಅನುಕೂಲವಾಗುವ ನಿಟ್ಟಿನಲ್ಲಿ ನಿರ್ಮಿಸಲಾದ ಜಿಲ್ಲಾ ಕ್ರೀಡಾಂಗಣ ಹಾಗೂ ಒಳಾಂಗಣ ಕ್ರೀಡಾಂಗಣಗಳಲ್ಲಿ ಮೂಲಭೂತ ಸೌಲಭ್ಯ ಒದಗಿಸಿ ಕ್ರೀಡಾಪಟುಗಳಿಗೆ ಅಣಿಗೊಳಿಸಲಾಗಿದ್ದು, ಅದರಂತೆ ಕ್ರೀಡಾ ಪರಿಕರಗಳು, ಕ್ರೀಡಾಂಗಣವನ್ನು ಸ್ವಚ್ಛವಾಗಿಸಿಟ್ಟುಕೊಂಡು ಕ್ರೀಡಾಪಟುಗಳಿಗೆ ಸದ್ಬಳಕೆಯಾಗುವಂತೆ ನೋಡಿಕೊಳ್ಳಬೇಕು ಎಂದು ಅವರು ಹೇಳಿದರು.ಜಿಲ್ಲಾ ಕ್ರೀಡಾಂಗಣದ ಮುಂಭಾಗದ ಒಳಚರಂಡಿ ನೀರು ಹರಿದು ಹೋಗಿ ತೊಂದರೆಯಾಗದಂತೆ ನೋಡಿಕೊಂಡು ಕೂಡಲೇ ಮಹಾನಗರ ಪಾಲಿಕೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ರೈತರಿಗೆ ನೂರಾರು ರೀತಿಯಲ್ಲಿ ಶೋಷಣೆ, ಮೋಸ ವಂಚನೆ ಮಾಡಲಾಗುತ್ತಿದೆ, ಅಂತವರಿಗೆ ನ್ಯಾಯಯೂತವಾಗಿ ತನಿಖೆ ಮಾಡಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರೈತರೊಂದಿಗೆ ಜಿಲ್ಲಾಧಿಕಾರಿಗಳಾದ ಡಾ ಆನಂದ ಅವರಿಗೆ ಮನವಿ ಸಲ್ಲಿಸಿದರು.ಜಿಲ್ಲಾಧ್ಯಕ್ಷರಾದ ಸಂಗಮೇಶ ಸಗರ ಅವರು ಮನವಿ ಸಲ್ಲಿಸಿ ಮಾತನಾಡುತ್ತಾ ಜಿಲ್ಲೆಯಲ್ಲಿ ರೈತರಿಗೆ ಹಲವಾರು ರೀತಿಯಲ್ಲಿ ಮೋಸ ಆಗುತ್ತಿದೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಅದರಲ್ಲಿ ಮುಖ್ಯವಾಗಿ ಕಬ್ಬಿನ ತೂಕದಲ್ಲಿ ಮನ್ನಾಪುರ ಸಂಗಮನಾಥ ಸಕ್ಕರೆ ಕಾರ್ಖಾನೆಯಿಂದ ೫೬೦ ಕೆ.ಜಿ ಮೋಸವನ್ನು ಬಯಲೆಗೆಳೆಯಲಾಗಿದೆ, ಅವರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಹಾಗೂ ಈ ಹಿಂದೆ ಕಬ್ಬು ಕೊಟ್ಟು ಎಲ್ಲಾ ರೈತರಿಗೂ ಪರಿಹಾರ ನೀಡಬೇಕು ಮತ್ತು ಸಕ್ಕರೆ ಸಚಿವರ ಹೇಳಿಕೆಯಂತೆ ೫ ಲಕ್ಷ ಬಹುಮಾನ ಕೋಡಬೇಕು ಎಂದರು.ಅದೇರೀತಿ ದ್ರಾಕ್ಷಿ ವಿಮೆ ತುಂಬಿದ ೧೮೮೫ ಕ್ಕು ಅಧಿಕ ರೈತರಿಗೆ ವಿಮೆ ಬರಬೇಕು, ಮೆಕ್ಕಜೋಳ ಖರೀದಿ ಕೇಂದ್ರ ಆರಂಭಿಸಬೇಕು,…

Read More

ಕುರ್ಚಿ ಕದನಕ್ಕೆ ಬಿಗ್ ಟ್ವಿಸ್ಟ್‌ | ಆಯವ್ಯಯ ಮಂಡನೆಗೆ ಸಿದ್ಧತೆ ಆರಂಭ | ಸಿಎಂ ಸಿದ್ದರಾಮಯ್ಯ ಭರವಸೆ ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಗೊಂದಲ ಇತ್ಯರ್ಥವಾಗದೆ ಮುಂದುವರೆದಿರುವುದರ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಸ ವರ್ಷದ ಮೊದಲ ದಿನವೇ ಕುರ್ಚಿ ಕದನಕ್ಕೆ ಬಿಗ್ ಟ್ವಿಸ್ಟ್ ನೀಡಿದ್ದಾರೆ.ಈಗಾಗಲೇ 16 ಬಜೆಟ್‌ ಗಳನ್ನು ಮಂಡಿಸಿರುವ ಸಿಎಂ ಸಿದ್ದರಾಮಯ್ಯ ಅವರು, 17ನೇ ಬಜೆಟ್‌ ಅನ್ನು ನಾನೇ ಮಂಡಿಸುತ್ತೇನೆ. ಈ ತಿಂಗಳಿನಿಂದ ಬಜೆಟ್ ಗೆ ಸಿದ್ಧತೆ ನಡೆಸುವುದಾಗಿ ಗುರುವಾರ ಹೇಳಿದ್ದಾರೆ. ಈ ಮೂಲಕ ಹೊಸ ದಾಖಲೆ ಬರೆಯಲು ಸಿದ್ದರಾಮಯ್ಯ ಮುಂದಾಗಿದ್ದಾರೆ.ಗುರುವಾರ ವಿಧಾನಸೌಧಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರನ್ನು ಅಧಿಕಾರಿಗಳು ಸಮ್ಮೇಳನ ಸಭಾಂಗಣದಲ್ಲಿ ಭೇಟಿಯಾಗಿ ಹೊಸ ವರ್ಷದ ಶುಭಾಶಯ ಕೋರಿದರು.ಸರ್ಕಾರದ ಅಪರ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಬೆಂಗಳೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಐಜಿಪಿಸಿಸಿಎಫ್ ಹಾಗೂ ಪೊಲೀಸ್ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಸಿಎಂ ಭೇಟಿಯಾಗಿ ಶುಭಾಶಯ ತಿಳಿಸಿದರು.ಹೊಸ ವರ್ಷದ ಮೊದಲ ದಿನವಾದ ಇಂದು ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುವುದು ನಮ್ಮ ಪದ್ಧತಿ. ಹಿಂದೂ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಯ ವ್ಯಾಪ್ತಿಯ ಕೇಂದ್ರ ಬಸ್ ನಿಲ್ದಾಣಕ್ಕೆ ವೀರ ರಾಣಿ ಕಿತ್ತೂರು ಚನ್ನಮ್ಮ ಬಸ್ ನಿಲ್ದಾಣ ಎಂದು ನಾಮಕರಣ ಮಾಡಲು ಸಾಮಾನ್ಯ ಸಭೆಯಲ್ಲಿ ಠರಾವು ಪಾಸ್ ಮಾಡಲಾಗಿದೆ.ಈ ಕುರಿತು ಸಾರ್ವಜನಿಕರಿಂದ ಸಲಹೆ ಹಾಗೂ ಆಕ್ಷೇಪಣೆಗಳಿದ್ದಲ್ಲಿ,ಈ ಪ್ರಕಟಣೆಯ 03 ದಿನಗಳೊಳಗೆ ಮಹಾನಗರ ಪಾಲಿಕೆಗೆ ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ಕೋರಿದ್ದಾರೆ.

Read More

ಚಿಮ್ಮಡದಲ್ಲಿ ನಡೆದ ಕಲಿಕಾ ಹಬ್ಬ ಕಾರ್ಯಕ್ರಮದಲ್ಲಿ ಬಿ.ಎಂ. ಹಳಮನಿ ಅಭಿಮತ ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿ ಸಮೂಹ ಶಿಕ್ಷಣ ಕಲಿಕೆಯ ಆಸಕ್ತಿ ಬೆಳೆಯಬೇಕು, ಮಗುವಿನ ಕಲಿಕಾ ಸಾಮರ್ಥ್ಯ ವೃದ್ದಿಸುವಲ್ಲಿ ಎಫ್.ಎಲ್.ಎನ್. ಆದಾರಿತ ಕಲಿಕಾ ಹಬ್ಬ ಸಹಕಾರಿಯಾಗಿದೆ ಎಂದು ಶಿಕ್ಷಣ ಸಂಯೋಜಕ ಬಿ.ಎಂ. ಹಳಮನಿ ಹೇಳಿದರು.ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಇಲಾಖೆ ಬಾಗಲಕೋಟ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಸಮನ್ವಯಾಧಿಕಾರಿಗಳ ಕಾರ್ಯಾಲಯ ಜಮಖಂಡಿ, ಸಮೂಹ ಸಂಪನ್ಮೂಲ ಕೇಂದ್ರ ಚಿಮ್ಮಡ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಕ್ಲಷ್ಟರ್ ಮಟ್ಟದ ಎಫ್.ಎಲ್.ಎನ್. ಆಧರಿತ “ಕಲಿಕಾ ಹಬ್ಬ” ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಆಗಮಿಸಿ ಮಾತನಾಡಿದ ಅವರು ಎಫ್.ಎಲ್.ಎನ್. ಎಂದರೆ ಮೂಲಭೂತ ಸಾಕ್ಷರತೆ ಮತ್ತು ಸಂಖ್ಯಾಶಾಸ್ತç, ಮಗುವಿನ ಕನಿಷ್ಠ ಕಲಿಕೆಯ ಮಾನದಂಡಗಳಾದ ಸ್ಪಷ್ಠ ಓದು ಶುಧ್ಧ ಬರಹ ಸರಳ ಲೆಕ್ಕಾಚಾರ ಸಾಮಥ್ಯವಾಗಿದೆ. ಯಾವ ಮಕ್ಕಳು ಸಾಮಾನ್ಯ ಕಲಿಕೆಯಲ್ಲಿ ಈ ಸಾಮರ್ಥ್ಯಗಳನ್ನು ಸಾಧಿಸಿಲ್ಲವೋ ಅಂಥಹ ಮಕ್ಕಳನ್ನು ಗುರುತಿಸಿ ಅವರಿಗೆ ಚಟುವಟಿಕೆ ಆಧಾರಿತ ವಿಶೇಷಭೋಧನೆಯ ಮೂಲಕ ಕಲಿಸುವ ಪ್ರಕ್ರಿಯೇಯಾಗಿದೆ…

Read More