Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ನಗರದ ಹೊರವಲಯದಲ್ಲಿರುವ ಭೀಮಾ ಯುನಿವರ್ಸಲ್ ಸೆಂಟ್ರಲ್ ಸ್ಕೂಲ್‌ನ ಪ್ರಸಕ್ತ ಸಾಲಿನ ಸಿಬಿಎಸ್‌ಸಿ ೧೦ನೆಯ ತರಗತಿಯ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ೧೦ನೆಯ ತರಗತಿಯ ವಾಷೀಕ ಪರೀಕ್ಷೆಗೆ ಹಾಜರಾದ ಒಟ್ಟು ೫೭ ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ ೨೦ ವಿದ್ಯಾರ್ಥಿಗಳು, ೩೭ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, ಶಾಲೆಯ ಒಟ್ಟು ಪಲಿತಾಂಶ ೧೦೦ಕ್ಕೆ ೧೦೦ರಷ್ಟಾಗಿದೆ. ವೈಷ್ಣವಿ ಮಸಳಿ, ಮಾಹಿತಿ ತಂತ್ರಜ್ಞಾನ (ಐ.ಟಿ) ಮತ್ತು ಕನ್ನಡ ವಿಷಯದಲ್ಲಿ ೧೦೦ಕ್ಕೆ ೧೦೦ ಅಂಕ, ಸ್ನೇಹಾ ಪಾಟೀಲ ಕನ್ನಡ ವಿಷಯದಲ್ಲಿ ೧೦೦ಕ್ಕೆ ೧೦೦ ಅಂಕಗಳನ್ನು ಪಡೆದುಕೊಂಡಿದ್ದಾರೆ. ವೈಷ್ಣವಿ ಮಸಳಿ ಶೇ.೯೯ರಷ್ಟು ಪ್ರತಿಶತ ಅಂಕ ಪಡೆಯುವುದರ ಮೂಲಕ ಸಿಂದಗಿ ತಾಲೂಕು ಹಾಗೂ ವಿಜಯಪುರ ಜಿಲ್ಲೆಗೆ ಅತ್ಯುನ್ನತ ಶ್ರೇಣಿ ತೇರ್ಗೆಡೆ ಹೊಂದಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.ವಿದ್ಯಾರ್ಥಿನಿಯರ ಈ ಕಠಿಣ ಪರಿಶ್ರಮ, ಶಾಲೆಯ ಶಿಕ್ಷಕರ ಅತ್ಯುತ್ತಮ ಭೋಧನೆಯಿಂದ ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ಅತ್ಯುನ್ನತ ಅಂಕಗಳನ್ನು ಪಡೆಯುವದರೊಂದಿಗೆ ಶಾಲೆಯ ಪಲಿತಾಂಶ ಶೇ.೧೦೦ಕ್ಕೆ ೧೦೦ರಷ್ಟು ವಿದ್ಯಾರ್ಥಿಗಳು ಉತ್ತಮ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಜಗತ್ತಿನಲ್ಲಿ ಬಹಳಷ್ಟು ಜನ ಜನ್ಮ ತಾಳುತ್ತಾರೆ. ಅದರಲ್ಲಿ ಬೆರಳಣಿಕೆಯಷ್ಟು ಜನ ಮಾತ್ರ ಮಹಾನ ಸಾಧಕಕರಾಗಿ ಹೊರಹೊಮ್ಮುತ್ತಾರೆ. ಆ ಸಾಲಿನಲ್ಲಿ ಬಾಬಾಸಾಹೇಬ್ ಅವರು ಒಬ್ಬರು. ಇವರ ಜಯಂತಿಯನ್ನು ಆಚರಣೆ ಮಾಡುವುದರ ಜೊತೆಗೆ ತತ್ವದಾರ್ಶಗಳನ್ನು ಮೈಗೂಡಿಸಿಕೊಂಡು ಬದುಕು ಸಾಗಿಸಬೇಕು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ಬಸ್ ಡಿಪೋದಲ್ಲಿ ಎಸ್‌ಸಿ/ಎಸ್‌ಟಿ ನೌಕರರ ಸಂಘದ ವತಿಯಿಂದ ಹಮ್ಮಿಕೊಂಡ ಡಾ.ಬಿ.ಆರ್.ಅಂಬೇಡ್ಕರ ಅವರ ೧೩೫ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಂವಿದಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ ಜಯಂತಿಯನ್ನು ಪಕ್ಷಾತೀತವಾಗಿ ಎಲ್ಲರೂ ಆಚರಣೆ ಮಾಡಿದ್ದು ಸ್ವಾಗತಾರ್ಹ. ಅವರ ಚಿಂತನೆಗಳು ಮುಂದಿನ ಯುವ ಪಿಳಿಗೆಗೆ ರವಾನೆ ಆಗಬೇಕಾದರೆ ಹೆಚ್ಚೆಚ್ಚು ಗ್ರಂಥಾಲಯಗಳು ತೆರೆಯುವ ಮೂಲಕ ಅವರ ತತ್ವಗಳನ್ನು ಬಿತ್ತಬೇಕಾಗಿದೆ ಎಂದರು.ಈ ವೇಳೆ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ವೈ.ಸಿ.ಮಯೂರ ಮಾತನಾಡಿ, ಶೋಷಿತ ಸಮುದಾಯದಲ್ಲಿ ಜನಿಸಿ, ಸಮಾಜದಲ್ಲಿ ಆಳವಾಗಿ ಬೇರೂರಿದ್ದ ಅಸ್ಪೃಶ್ಯತೆಯ ವಿರುದ್ದ ಬಹುದೊಡ್ಡ ಕ್ರಾಂತಿಕಾರಿ ಚಳುವಳಿ ಆರಂಭಿಸಿದ್ದಲ್ಲದೇ ಸಮಾಜದಲ್ಲಿನ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಒದಗಿಸಲು ಹಗಲು…
ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ನಿಡಗುಂದಿ ತಾಲ್ಲೂಕಿನಲ್ಲಿ ಭಾರತೀಯ ಜನಗಣತಿ-೨೦೨೭ರ ಮೊದಲ ಹಂತದ ಸಮೀಕ್ಷೆಗೆ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶ ಸೇರಿ ಒಟ್ಟು ೧೮೨ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ತಹಶೀಲ್ದಾರ್ ಎ.ಡಿ. ಅಮರಾವದಗಿ ತಿಳಿಸಿದರು.ಆಲಮಟ್ಟಿ ಗ್ರಾಮದಲ್ಲಿ ಗುರುವಾರ ಗ್ರಾಮೀಣ ಭಾಗದ ಗಣತಿಗೆ ಚಾಲನೆ ನೀಡಿ ಮಾತನಾಡಿದ ಅವರು, “ಗ್ರಾಮೀಣ ಭಾಗದಲ್ಲಿ ೧೧೬ ಬ್ಲಾಕ್ ಹಾಗೂ ಪಟ್ಟಣ ಭಾಗದಲ್ಲಿ ೨೬ ಬ್ಲಾಕ್‌ಗಳನ್ನು ರಚಿಸಲಾಗಿದೆ. ಪ್ರತಿ ಬ್ಲಾಕ್‌ಗೆ ಒಬ್ಬರಂತೆ ಗಣತಿದಾರರನ್ನು ಹಾಗೂ ಪ್ರತಿ ಆರು ಗಣತಿದಾರರಿಗೆ ಒಬ್ಬ ಸೂಪರ್‌ವೈಸರ್‌ರನ್ನು ನೇಮಿಸಲಾಗಿದೆ” ಎಂದರು.“ಮೊದಲ ಮೂರು ದಿನ ಆಯಾ ಬ್ಲಾಕ್‌ನ ಮನೆಗಳ ಗುರುತಿಸುವಿಕೆ ಕಾರ್ಯ ನಡೆಯಲಿದೆ. ನಂತರ ಗಣತಿ ಕಾರ್ಯ ಆರಂಭಗೊಂಡು ಮುಂದಿನ ಒಂದು ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಪ್ರತಿ ಗಣತಿದಾರರಿಗೂ ಐದು ದಿನಗಳ ತರಬೇತಿ ನೀಡಲಾಗಿದೆ” ಎಂದು ಮಾಹಿತಿ ನೀಡಿದರು.“ಜನಗಣತಿ ಎರಡು ಹಂತದಲ್ಲಿ ನಡೆಯುತ್ತಿದ್ದು, ಈಗ ನಡೆಯುತ್ತಿರುವುದು ಮೊದಲ ಹಂತದ ಗಣತಿ. ಈ ಹಂತದಲ್ಲಿ ಮನೆಗಳ ಗುರುತಿಸುವಿಕೆ, ಕಟ್ಟಡಗಳಿಗೆ ಸಂಕೇತ ನೀಡುವುದು ಹಾಗೂ ಸ್ವತ್ತು ದಾಖಲಿಸುವ ಕಾರ್ಯ ನಡೆಯಲಿದೆ”…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಬಸವ ಜಯಂತಿ ಆಚರಣೆಯನ್ನು ಏ.೨೦ರಂದು ಸಂಜೆ ೫ ಗಂಟೆಗೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಲಾಗಿದೆ.ನಗರದ ಬಸವೇಶ್ವರ ವೃತ್ತದಲ್ಲಿರುವ ವಿಶ್ವಗುರು ಬಸವಣ್ಣನವರ ಪುತ್ಥಳಿಗೆ ಮಾಲಾರ್ಪಣೆ ಹಾಗೂಅಂದು ಸಂಜೆ ೪ಗಂಟೆಗೆ ಭಾವಚಿತ್ರದ ಮೆರವಣಿಗೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಿಂದ ಪ್ರಮುಖ ವೃತ್ತಗಳ ಮೂಲಕ ಸಾಗಿ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರವರೆಗೆ ಜರುಗಲಿದೆ.ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ ಅವರು ಉದ್ಘಾಟಿಸುವರು. ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ರವಿಕುಮಾರ ಎನ್, ನವದೆಹಲಿಯಲ್ಲಿನ ಕರ್ನಾಟಕ ಸರ್ಕಾರದ ವಿಶೇಷ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಡಾ.ರಾಜ್‌ಕುಮಾರ್ ಅವರ ಜನ್ಮದಿನಾಚರಣೆಯನ್ನು ಇದೇ ಏಪ್ರಿಲ್ ೨೪ರಂದು ಜಿಲ್ಲಾಡಳಿತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಹಯೋಗದಲ್ಲಿ ಆಚರಿಸುವ ಹಿನ್ನೆಲೆಯಲ್ಲಿ ಪೂರ್ವಭಾವಿ ಸಿದ್ದತಾ ಸಭೆಯನ್ನು ಅಪರ ಜಿಲ್ಲಾಧಿಕಾರಿಗಳು, ವಿಜಯಪುರ ಇವರ ಅಧ್ಯಕ್ಷತೆಯಲ್ಲಿ ದಿನಾಂಕ:೧೮.೦೪.೨೦೨೬ ರಂದು ಬೆಳಿಗ್ಗೆ ೧೧:೦೦ ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಒಂದನೇ ಮಹಡಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.ಈ ಸಭೆಗೆ ಅಧಿಕಾರಿಗಳು, ಮುಖಂಡರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಆಗಮಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಕಟಣೆ ತಿಳಿಸಿದೆ.
ವಿಜಯಪುರ ಸೈಕ್ಲಿಂಗ್ ಗ್ರುಪ್ ಸಹಯೋಗ | ರವಿವಾರ ಸಂಜೆ 7ಗಂ. ಆರಂಭ | ಬಸವಜ್ಯೋತಿ ಪಾದಯಾತ್ರೆ ಆಯೋಜಕ ಬಿ.ಬಿ.ಪಾಟೀಲ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಮಾನತೆಯ ಹರಿಕಾರ, ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸಣ್ಣನವರ ಜಯಂತಿ ನಿಮಿತ್ತ ಜನ್ಮಸ್ಥಳ ಬಾಗೇವಾಡಿಯಿಂದ ವಿಜಯಪುರದವರೆಗೆ ವಿಜಯಪುರ ಸೈಕ್ಲಿಂಗ್ ಗ್ರುಪ್ ಸಹಯೋಗದಲ್ಲಿ ಬಸವಜ್ಯೋತಿ ಪಾದಯಾತ್ರೆ ದಿ.19 ರವಿವಾರ ರಾ.7ಗಂ. ಆರಂಭಿಸಲಾಗುವುದು ಎಂದು ಆಯೋಜಕ ಬಿ.ಬಿ.ಪಾಟೀಲ ತಿಳಿಸಿದರು.ವಿಜಯಪುರದಲ್ಲಿ ಬಸವಜ್ಯೋತಿ ಪಾದಯಾತ್ರೆ ನಿಮಿತ್ತ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಈ ಬಾರಿ ವಿಶಿಷ್ಟ ರೀತಿಯಲ್ಲಿ ಬಸವ ಜಯಂತಿ ಆಚರಿಸಲಾಗುವುದು. ಬಸವಣ್ಣನವರ ಜನ್ಮಸ್ಥಳ ಬಸವನ ಬಾಗೇವಾಡಿಯಲ್ಲಿ ಪಾದಯಾತ್ರಿಗಳು ಸಂ.6ಗಂ. ಹಾಜರಿರುವುದು. ಸಂ.6.30ಗಂ. ಪೂಜೆ ಸಲ್ಲಿಸಿದ ನಂತರ ರಾ.7ಗಂ. ಬಸವಜ್ಯೋತಿ ಪಾದಯಾತ್ರೆಗೆ ಬಸವನ ಬಾಗೇವಾಡಿ ವಿರಕ್ತಮಠದ ಪ.ಪೂ ಸಿದ್ದಲಿಂಗ ಸ್ವಾಮೀಜಿ ಚಾಲನೆ ನೀಡಲಿದ್ದಾರೆ. ಈ ಯಾತ್ರೆ ಮಸಬಿನಾಳ, ಉಕ್ಕಲಿ, ಉಕುಮನಾಳ ಮಾರ್ಗವಾಗಿ ಶಿವಗಿರಿ ತಲುಪಲಿದೆ. ನಂತರ ನಗರದ ಬಸವೇಶ್ವರ ವೃತ್ತದಲ್ಲಿ ಮುಕ್ತಾಯಗೊಳ್ಳಲಿದೆ. 50ಕಿ.ಮೀ ಮಾರ್ಗದೂದ್ದಕ್ಕೂ ಪಾದಯಾತ್ರಿಗಳಿಗೆ ಅಲ್ಪೋಪಹಾರ ಮತ್ತು ಲಘುಪಾನಿಯ ವ್ಯವಸ್ಥೆ ಕಲ್ಪಿಸಲಾಗುವುದು…
ಜತ್ತ ನಗರ ಸಂಪೂರ್ಣ ಬಂದ್ ಮಾಡಿ ಲಿಂಗಾಯತ ಸಮುದಾಯ ಪ್ರತಿಭಟನೆ ಉದಯರಶ್ಮಿ ದಿನಪತ್ರಿಕೆ ಸಾಂಗ್ಲಿ: ಜಿಲ್ಲೆಯ, ಜತ್ತ ತಾಲೂಕ ಕೇಂದ್ರದ ಗುರುಬಸವೇಶ್ವರ ವೃತ್ತದಲ್ಲಿ ಮಾಡ್ಗ್ಯಾಳದ ಸಾಗರ ಕೋರೆ ಅವರ ನೇತೃತ್ವದಲ್ಲಿ ಲಿಂಗಾಯತ ಸ್ವತಂತ್ರ ಧರ್ಮದ ಸಾಂವಿಧಾನಿಕ ಮಾನ್ಯತೆಯ ಬೇಡಿಕೆಗಾಗಿ ಅಮರಣಾಂತ ಉಪವಾಸ ಸತ್ಯಾಗ್ರಹ ಆರಂಭಗೊಂಡು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.ಜತ್ತ ನಗರವನ್ನು ಸಂಪೂರ್ಣ ಬಂದ್ ಮಾಡಿ ಲಿಂಗಾಯತ ಸಮುದಾಯ ಪ್ರತಿಭಟಿಸುತ್ತಿದೆ. ನಾಲ್ಕು ದಿನಗಳಿಂದ ಉಪವಾಸ ಸತ್ಯಾಗ್ರಹ , ಪ್ರತಿಭಟನಾ ಮೆರವಣಿಗೆ ನಡೆದಿದೆ. ಮಾನ್ಯತೆ ಸೇರಿದಂತೆ ಲಿಂಗಾಯತ ಸಮುದಾಯದ ಅಭಿವೃದ್ಧಿಯ ಬೇಡಿಕೆಗಳಿಗಾಗಿ ಪ್ರತಿಭಟಿಸಲಾಗುತ್ತಿದೆ.ನಾಲ್ಕು ದಿನಗಳಿಂದ ಪ್ರತಿಭಟನೆ ನಡೆಯುತ್ತಿದ್ದರೂ ಯಾವೊಬ್ಬ ಅಧಿಕಾರಿಯೂ ಸ್ಥಳಕ್ಕೆ ಬಂದು ವಿಚಾರಿಸಿಲ್ಲ ಎಂದು ಹೋರಾಟ ನಿರತ ಲಿಂಗಾಯತ ಧರ್ಮಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಲಕ್ಷ ಸಂಖ್ಯೆಯಲ್ಲಿ ಲಿಂಗಾಯತರಿದ್ದರೂ ಸರಕಾರ ಅಲಕ್ಷ್ಯ ತೋರಿಸುತ್ತಿದೆ ಎಂದು ಪ್ರತಿಭಟನೆಕಾರರು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳೀಯ ಲಿಂಗಾಯತ ಧರ್ಮಿಯರು, ಡಾ. ಅರಳಿ ನಾಗರಾಜ, ಶಿವಾನುಭವ ಮಂಟಪ ಸಂಸ್ಥೆ, ಜತ್ತ ಅರ್ಬನ್ ಬ್ಯಾಂಕ್, ಗಣೇಶ ಪತ್ತಿನ ಸಹಕಾರ ಸಂಘ, ಸರ್ವೋದಯ ಪತ್ತಿನ ಸಂಸ್ಥೆ…
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಪ್ರಸಕ್ತ 2026ನೇ ಸಾಲಿನ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯ (ಸಿಬಿಎಸ್‌ಇ) 10ನೇ ತರಗತಿ ಪರೀಕ್ಷೆಯ ಫಲಿತಾಂಶ ಏಪ್ರಿಲ್ 15ರಂದು ಪ್ರಕಟಗೊಂಡಿದ್ದು, ಬಸವೇಶ್ವರ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನ ಪ್ರತಿಭಾವಂತ ವಿದ್ಯಾರ್ಥಿನಿ ನೇಹಾ ಕಂಕಣವಾಡಿ ಅವರು ಶೇ.98.40 ಅಂಕಗಳನ್ನು ಗಳಿಸುವ ಮೂಲಕ ಬಾಗಲಕೋಟೆ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.ನೇಹಾ ಅವರು ಒಟ್ಟು 500 ಅಂಕಗಳಲ್ಲಿ 492 ಅಂಕಗಳನ್ನು ಗಳಿಸಿದ್ದು, ಅವರ ವಿಷಯವಾರು ಸಾಧನೆ ಗಮನಾರ್ಹವಾಗಿದೆ. ಇಂಗ್ಲೀಷ್ ವಿಷಯದಲ್ಲಿ 96, ಕನ್ನಡದಲ್ಲಿ 99, ಗಣಿತದಲ್ಲಿ 97, ವಿಜ್ಞಾನದಲ್ಲಿ 99 ಹಾಗೂ ಸಮಾಜ ವಿಜ್ಞಾನದಲ್ಲಿ 97 ಅಂಕಗಳನ್ನು ಪಡೆದು ಸಮಗ್ರವಾಗಿ ಶೇ.98.40 ಸಾಧನೆ ಮಾಡಿದ್ದಾರೆ. ಈ ಮೂಲಕ ಅವರು ಶಾಲೆಯಷ್ಟೇ ಅಲ್ಲದೆ ಜಿಲ್ಲೆಯ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.ಈ ಸಾಧನೆಯ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಸಂಗಪ್ಪ, ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎ.ಸಿ. ಮನ್ನಿಕೇರಿ ಸೇರಿದಂತೆ ಹಲವು ಅಧಿಕಾರಿಗಳು ಹಾಗೂ ಶಿಕ್ಷಣ ವಲಯದ ಗಣ್ಯರು ಅಭಿನಂದನೆ…
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ತಾಲೂಕಿನ ಚಿಕ್ಕಪಡಸಲಗಿ ಗ್ರಾಮದಲ್ಲಿ ಶುಕ್ರವಾರ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಭಕ್ತಿಭಾವದಿಂದ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮವು ಅಂಬೇಡ್ಕರ್ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಆರಂಭಗೊಂಡಿತು.ಕಾರ್ಯಕ್ರಮದಲ್ಲಿ ವಿಶೇಷ ಭಾಷಣಕಾರರಾಗಿ ಭಾಗವಹಿಸಿದ ಎಮ್.ಬಿ. ಸಿದಗೋಣಿ (ಬಹುಜನ ಸಮಾಜ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ), ಕರಣಕುಮಾರ ಮೌರ್ಯ (ಅಂಬೇಡ್ಕರ್ ಚಿಂತಕರು ಹಾಗೂ ವಕೀಲರು) ಹಾಗೂ ಈರಪ್ಪ ಸುತಾರ ಅವರು ಮಾತನಾಡಿ, ಡಾ. ಅಂಬೇಡ್ಕರ್ ಅವರ ತತ್ವಗಳು, ಸಂವಿಧಾನಿಕ ಮೌಲ್ಯಗಳು ಹಾಗೂ ಸಾಮಾಜಿಕ ಸಮಾನತೆಯ ಸಂದೇಶವನ್ನು ಹಂಚಿಕೊಂಡರು. ಇಂದಿನ ಸಮಾಜದಲ್ಲಿ ಶಿಕ್ಷಣ, ಸಮಾನತೆ ಹಾಗೂ ಹಕ್ಕುಗಳ ಅರಿವು ಅತ್ಯಂತ ಮುಖ್ಯವೆಂದು ಅವರು ಅಭಿಪ್ರಾಯಪಟ್ಟರು.ಈ ಸಂದರ್ಭದಲ್ಲಿ ಅಂಬೇಡ್ಕರ್ ಯುವಕ ಸಂಘದ ಅಧ್ಯಕ್ಷರಾದ ಹಣಮಂತ ಗುಗ್ಗರಿ, ಉಪಾಧ್ಯಕ್ಷರಾದ ಶಿವಾನಂದ ಯಣಗಾಯಿ ಹಾಗೂ ಪದಾಧಿಕಾರಿಗಳಾದ ಕಿರಣ ಗುಗ್ಗರಿ, ಶಿವಾನಂದ ಬೋದ್ಲಿ, ಶಟ್ಟು ಬೋದ್ಲಿ ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದರು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಾಜು ಗಸ್ತಿ, ಸೂರಜ್ ಕುಡ್ರಾಣಿ, ಈಶ್ವರ ನ್ಯಾಮಗೌಡ, ಸುರೇಶ ಕಲ್ಯಾಣಿ, ರಮೇಶ ಅಂಬಿ,…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಿವೃತ್ತ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ.ಟಿ.ಚವ್ಹಾಣ (74) ಗುರುವಾರ ರಾತ್ರಿ ನಿಧನರಾಗಿದ್ದಾರೆ.ವಿಜಯಪುರ ನಗರದ ಚಾಲುಕ್ಯ ನಗರದ ನಿವಾಸಿಯಾಗಿದ್ದ ಅವರು, ಪಿ.ಎಸ್.ಐ, ಸಿಪಿಐ, ಡಿವೈಎಸ್ಪಿ ಸೇರಿದಂತೆ ಹೆಚ್ಚುವರಿ ಎಸ್ಪಿಯಾಗಿ ಸೇವೆ ಸಲ್ಲಿಸಿದ್ದರು. ಬೆಂಗಳೂರು, ಹುಬ್ಬಳ್ಳಿ, ರೋಣ, ಅಥಣಿ, ಹೊಸಪೇಟೆ, ಬಾದಾಮಿ, ವಿಜಯಪುರ ನಗರ, ಗದಗ, ಮೈಸೂರು, ಹಾಸನ ಹಾಗೂ ದಾವಣಗೆರೆಯಲ್ಲಿ ಸೇವೆ ಸಲ್ಲಿಸಿದ್ದ ಅವರು, ಗುರುವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು- ಬಳಗವನ್ನು ಅಗಲಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿ ಡಿಜಿಪಿ ಅಲೋಕಕುಮಾರ ಸೇರಿದಂತೆ ನಾನಾ ಗಣ್ಯರು ಮೃತರ ಅಂತಿಮ ದರ್ಶನ ಪಡೆದು ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.ಮೃತರ ಅಂತ್ಯಕ್ರಿಯೆ ಶುಕ್ರವಾರ ಸಂಜೆ ಚಡಚಣ ತಾಲೂಕಿನ ಬರಡೋಲ ಗ್ರಾಮದ ಅವರ ತೋಟದಲ್ಲಿ ನಡೆಯಿತು.
