Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಗ್ರಾಮದ‌ ಮಲ್ಲಿಕಾರ್ಜುನ ವಿಧ್ಯಾವರ್ಧಕ ಸಂಘದ ಅಡಿಯಲ್ಲಿ ನಡೆಯುತ್ತಿರುವ ಅನುಧಾನಿತ ಬಸವೇಶ್ವರ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಡಶಾಲೆ, ಪ್ರಾಥಮಿಕ ಶಾಲೆ, ಪದವಿ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 135 ನೇ ಜಯಂತ್ಯೋತ್ಸವವನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಶಾಂತಗೌಡ ಪಾಟೀಲ ಮಾತನಾಡಿ ಮಹಾನ್ ಮಾನವತಾವಾದಿ, ಭಾರತ ರತ್ನ, ಜ್ಞಾನ ಸೂರ್ಯ ಡಾ.ಬಿ ಆರ್ ಅಂಬೇಡ್ಕರ್ ಅವರ ತತ್ವ ಮತ್ತು ಆದರ್ಶಗಳನ್ನು ಪ್ರತಿಯೋಬ್ಬರು ಮೈಗೂಡಿಸಿಕೊಳ್ಳಬೇಕಿದೆ ಎಂದು ಹೆಳಿದರು.ಬಸವೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಬಿ ಜಿ ಚನಗೊಂಡ, ಪದವಿ ಕಾಲೇಜಿನ ಪ್ರಾಚಾರ್ಯ ಜಗದೀಶ ಕಾದಳ್ಳಿ, ಶಿವಾನಂದ ಹರಿಜನ್ ಮಾತನಾಡಿರು.ಕಾರ್ಯಕ್ರಮದಲ್ಲಿ ಎಸ್ ಬಿ ಪಾಟೀಲ, ನಿಂಗನಗೌಡ ಗುಂಡಕನಾಳ, ವಿಶ್ವನಾಥ ಸಿಂದಗಿ, ರವಿಕುಮಾರ ಗುಮಶೆಟ್ಟಿ, ಆರ್ ವ್ಹಿ ಕುಲಕರ್ಣಿ, ಐ ಎಂ‌ ಝಳಕಿ ಸೇರಿದಂತೆ ಕಾಲೇಜಿನ ವಿಧ್ಯಾರ್ಥಿಗಳು ಹಾಗೂ ಭೋದಕ,ಭೋದಕೇತರ ಸಿಬ್ಬಂದ್ದಿ ಹಾಜರಿದ್ದರು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇಂದು ಕೃತಕ ಬುದ್ಧಿಮತ್ತೆ (ಎ.ಐ) ಇಡೀ ಜಗತ್ತಿನ ಎಲ್ಲ ಕ್ಷೇತ್ರಗಳನ್ನು ಆವರಿಸಿದ್ದು, ತಾಂತ್ರಿಕ ಜಗತ್ತು ಬಹಳಷ್ಟು ಬದಲಾವಣೆಗೆ ಒಡ್ಡಿಕೊಳ್ಳುತ್ತಿದೆ. ಆರೋಗ್ಯ ಸೇವೆಯಿಂದ ಹಿಡಿದು ಹಣಕಾಸು ವಲಯದವರೆಗೆ ತನ್ನ ಪ್ರಭಾವವನ್ನು ಬೀರುತ್ತಿದ್ದು, ಉದ್ಯೋಗಾಕಾಂಕ್ಷಿಗಳು ವಿನೂತನವಾದ ಕೌಶಲ್ಯಗಳನ್ನು ಹೊಂದಬೇಕಾಗಿರುವದು ಇಂದಿನ ಅಗತ್ಯತೆಯಾಗಿದೆ. ಸ್ಪರ್ಧಾತ್ಮಕತೆಯೊಂದಿಗೆ ಹೊಂದಿಕೊಳ್ಳಲು ತಾಂತ್ರಿಕ ವೃತ್ತಪರರು ವಿಶೇಷವಾಗಿ ಮಷಿನ್ ಲರ್ನಿಂಗ್, ಎ.ಐ.ಕಾನ್ಸೆಪ್ಟ್, ಕ್ಲೌಡ್ ಕಂಪ್ಯೂಟಿಂಗ್, ಸೈಬರ್ ಸೆಕ್ಯುರಿಟಿನಂತಹ ಮಲ್ಟಿಸ್ಕಿಲ್ಕಗಳನ್ನು ಪಡೆದುಕೊಳ್ಳಬೇಕಾಗಿದೆ. ಇತ್ತೀಚಿನ ವರದಿ ಪ್ರಕಾರ, ಕೃತಕ ಬುದ್ಧಿಮತ್ತೆ ತಂತ್ರಜ್ಞಾನದಲ್ಲಿ ಭಾರತ ವಿಶ್ವದ ಮೂರನೇಯ ಶ್ರೇಯಾಂಕ ಪಡೆದಿದೆ ಎಂದು ವಿಜಯಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರೊ. ಎಂ.ಎಸ್.ಖೊದ್ನಾಪೂರ ಅವರು ಅಭಿಪ್ರಾಯಪಟ್ಟರು.ಅವರು ಮಹಾರಾಷ್ಟ್ರದ ಪುಣೆ ಜಿಲ್ಲೆಯ ಬಾರಾಮತಿಯ ಸಂಗಮೇಶ್ವರನಗರದ ಎಂ.ಕೆ.ಎಸ್. ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ವಿಚಾರಸಂಕೀರಣದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಮಾತನಾಡುತ್ತಿದ್ದರು.ಅವರು ಮಾತನಾಡುತ್ತಾ, ಕಾರ್ಪೋರೇಟ್ ಜಗತ್ತಿನಲ್ಲಿ ಉದ್ಯೋಗಿಗಳು ತಮ್ಮ ಸ್ವಂತ ಭಾವನೆಗಳನ್ನು ಅರ್ಥೈಸಿಕೊಂಡು ಇತರ ಸಹದ್ಯೋಗಿಗಳ ಶಕ್ತಿ-ಸಾಮರ್ಥ್ಯ ಗುರುತಿಸಿ, ಒತ್ತಡ ನಿವಾರಣೆ, ಪರಿಣಾಮಕಾರಿ ಸಂವಹನ, ಸಹಾನುಭೂತಿ ಮತ್ತು ಸವಾಲುಗಳನ್ನು ನಿಭಾಯಿಸಲು ಭಾವನಾತ್ಮಕ…

Read More

ವಿಜಯಪುರ ಜಿಲ್ಲಾಡಳಿತದಿಂದ ವಿಜೃಂಭಣೆಯ ಅಂಬೇಡ್ಕರ ಜಯಂತ್ಯುತ್ಸವ | ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ. ಎಂ.ಬಿ.ಪಾಟೀಲ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬುದ್ದ ಬಸವ, ಅಂಬೇಡ್ಕರ್ ಅವರ ವಿಚಾರಧಾರೆಗಳು ಎಂದೆಂದಿಗೂ ಪ್ರಸ್ತುತವಾಗಿದ್ದು, ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲ ಸೌಲಭ್ಯ ಅಭಿವೃದ್ಧಿ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ. ಪಾಟೀಲ ಹೇಳಿದರು.ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೫ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಪ್ರತಿಯೊಬ್ಬ ಮಹಾಪುರುಷರು ಮೂಢನಂಬಿಕೆಯಂತಹ ಅನಿಷ್ಠ ಪದ್ಧತಿಗಳ ವಿರುದ್ಧ ತಮ್ಮ ಚಿಂತನೆಗಳನ್ನು ಅರುಹಿದವರು. ಘನತೆಯಿಂದ ಬದುಕುವ ಚಿಂತನೆಗಳನ್ನು ಜಗತ್ತಿಗೆ ಸಾರಿದ್ದಾರೆ. ಹಾಗಾಗಿ ಮಹಾನ್ ಪುರುಷರ ಚಿಂತನೆಗಳು ಎಲ್ಲ ಕಾಲಕ್ಕೂ ಪ್ರಸ್ತುತ ಎಂದರು. ಸಮಾನತೆ,ಸ್ವಾತಂತ್ರ‍್ಯ, ಅಭಿವ್ಯಕ್ತಿ, ಗೌರವಯುತ ಹಾಗೂ ಘನತೆ ಜೀವನ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಭಾರತರತ್ನ ಡಾ.ಅಂಬೇಡ್ಕರ್ ಯಾವುದೇ ಜಾತಿ, ಧರ್ಮ, ಮತ, ಪಂಥಗಳಿಗೆ ಸೀಮಿತವಾಗದೇ ಮಹಾಮಾನವತಾವಾದಿಯಾಗಿ ವಿಶ್ವಮಾನವರೆನಿಸಿದ್ದಾರೆ ಎಂದು ತಹಶೀಲ್ದಾರ ನಿಂಗಪ್ಪ ಬಿರಾದಾರ ಹೇಳಿದರು.ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪಟ್ಟಣ ಪಂಚಾಯಿತಿಯಿಂದ ಮಂಗಳವಾರ ಜರುಗಿದ ಡಾ. ಅಂಬೇಡ್ಕರವರ ೧೩೫ ನೇ ಜಯಂತಿಯಲ್ಲಿ ಪಾಲ್ಗೊಂಡು, ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪಂಚಾಯಿತಿ ಸಭಾಭವನದ ಕಾರ್ಯಕ್ರಮದಲ್ಲಿ ಮಾತನಾಡಿದರು.ಕರ್ನಾಟಕ ಬ್ಯಾಂಕ್ ಬಬಲೇಶ್ವರ ಶಾಖೆಯ ವ್ಯವಸ್ಥಾಪಕ ನಟರಾಜ ಮಿಶಿ ಉಪನ್ಯಾಸ ನೀಡಿ, ಅಂಬೇಡ್ಕರ್ ಅವರ ಸಮಗ್ರ ಜೀವನವೇ ಆದರ್ಶ. ಸಂವಿಧಾನದ ಪಿತಾಮಹರಾದ ಇವರು ಮಾನವೀಯ ಮೌಲ್ಯಗಳು, ಶಿಕ್ಷಣ ಹಾಗೂ ಸಮಾನತೆಯ ಪ್ರತಿಪಾದನೆಯ ಪ್ರಮುಖ ಹರಿಕಾರರೆನಿಸಿದ್ದಾರೆ ಎಂದರು.ದಲಿತ ಸಮಾಜ ಸುಧಾರಣಾ ಸಮೀತಿ ಅಧ್ಯಕ್ಷ ಕಾಶೀನಾಥ ತಳಕೇರಿ, ಪ್ರಕಾಶ ಗುಡಿಮನಿ, ಮಾತನಾಡಿದರು. ಇದೇ ಸಂದರ್ಭದಲ್ಲಿ ಮೊಹರೆ ಹಣಮಂತ್ರಾಯ ವೃತ್ತದಿಂದ ಪಟ್ಟಣ ಪಂಚಾಯಿತಿವರೆಗೆ ಅಂಬೇಡ್ಕರ್ ಭಾವಚಿತ್ರದ ಮೆರವಣಿಗೆ ಜರುಗಿತು.ತಾಲ್ಲೂಕು ಪಂಚಾಯಿತಿ ಇಓ ಭಾರತಿ ಚೆಲುವಯ್ಯ, ಸಿಂದಗಿ ಕ್ಷೇತ್ರ ಶಿಕ್ಷಣಾಧಿಕಾರಿ ಎಮ್.ಜಿ. ಯಡ್ರಾಮಿ,…

Read More

ಸಿಂದಗಿ ಪಟ್ಟಣದ ವಿವಿಧೆಡೆ ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರು ನೀಡಿದ ಅದ್ಭುತ ಸಂದೇಶಗಳು, ಇಂದಿಗೂ ಸಹ ಜನಜನಿತವಾಗಿದ್ದು, ಸಂದೇಶಗಳನ್ನು ಪಾಲಿಸುವ ಪ್ರತಿ ಪ್ರಜೆಯೂ ಜೀವನದಲ್ಲಿ ಎಂದೂ ಕುಗ್ಗಲಾರ ಎಂದು ಸಂಸ್ಥೆಯ ಅಧ್ಯಕ್ಷ ಆರ್.ಡಿ.ಕುಲಕರ್ಣಿ ಹೇಳಿದರು.ಸಿಂದಗಿ ಪಟ್ಟಣದ ರಾಂಪೂರ ರಸ್ತೆಯಲ್ಲಿರುವ ಪ್ರೇರಣಾ ಪಬ್ಲಿಕ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಆರ್.ಡಿ.ಕುಲಕರ್ಣಿ ಅವರ ನೇತೃತ್ವದಲ್ಲಿ ಆಯೋಜಿಸಿದ್ದ ಡಾ.ಬಿ.ಆರ್ ಅಂಬೇಡ್ಕರ್ ರವರ ೧೩೫ನೇ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಭಾರತಕ್ಕೆ ಬಾಬಾಸಾಹೇಬರು ನೀಡಿದ ಕೊಡುಗೆ ಅನನ್ಯ. ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಬದುಕು ಸಾಗಿಸಬೇಕು. ಅವರ ತತ್ವ ಸಿದ್ಧಾಂತದ ಮೇಲೆ ನಾವೆಲ್ಲರೂ ನಡೆಯಬೇಕು ಎಂದರು.ಈ ಸಮಾರಂಭದಲ್ಲಿ ಸಂಸ್ಥೆಯ ನಿರ್ದೇಶಕ ಪಿ.ಡಿ.ಕುಲಕರ್ಣಿ, ಶಾಲೆಯ ಮುಖ್ಯ ಗುರುಮಾತೆ ಎಸ್.ಆಯ್.ಅಸ್ಕಿ, ಎಮ್.ಪಿ.ಬುಕ್ಕಾ, ಶಿಕ್ಷಕರಾದ ಸತೀಶ ಕುಲಕರ್ಣಿ, ಅಲ್ತಾಫ್ ತಾಂಬೋಳಿ, ಕಿರಣ ಕುಲಕರ್ಣಿ, ಸಂತೋಷ ಕುಂಟೋಜಿ, ಅಕ್ಷಯ ಯಲಗಟ್ಟಿ, ಶ್ರೀಕಾಂತ ಹೂನಳ್ಳಿ ಮತ್ತು ಬಿ.ಎಸ್.ಪಾಟೀಲ, ಎಸ್.ವಿ.ಕಡಣಿ, ಎಮ್.ಎಮ್.ಜುಮನಾಳ, ಎಮ್.ಜಿ.…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ನಗರದ ಸರ್ಕಾರಿ ಆದರ್ಶ ವಿದ್ಯಾಲಯದ ಶಿಕ್ಷಕ ರಮೇಶ ಚಟ್ಟರಕಿ ಅವರನ್ನು ಶಾಲಾ ಶಿಕ್ಷಣ ಇಲಾಖೆ ಉಪ-ನಿರ್ದೇಶಕರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ತಮಗೆ ಬೇಕಾಗಿರುವ ಪರೀಕ್ಷಾ ಕೇಂದ್ರ ಹಾಕಿಸಿ ಕೊಡುವ ವಿಚಾರವಾಗಿ ವಿದ್ಯಾರ್ಥಿಗಳಿಂದ ಹಣ ಪಡೆದ ವಿಚಾರವಾಗಿ ವಿದ್ಯಾರ್ಥಿಗಳೊಂದಿಗೆ ಮಾತನಾಡಿರುವ ಆಡಿಯೊ ಸಾಮಾಜಿಕ ಜಾಲತಾಣ ಹಾಗೂ ಸುದ್ಧಿವಾಹಿನಿಗಳಲ್ಲಿ ಹರಿದಾಡಿದ್ದು ಗಮನಿಸಲಾಗಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಸಮಯದಲ್ಲಿ ವಿನಾಕಾರಣ ವಿದ್ಯಾರ್ಥಿಗಳಲ್ಲಿ ಗೊಂದಲ ಸೃಷ್ಟಿ ಮಾಡುವ ಮೂಲಕ ಶಿಕ್ಷಕರಿಗೆ ಸರಿಯಲ್ಲದ ರೀತಿಯಲ್ಲಿ ವರ್ತನೆ ಮಾಡಿರುವುದು ಮೇಲ್ನೊಟಕ್ಕೆ ಕಂಡ ಬಂದ ದಿಸೆಯಲ್ಲಿ ಈ ವಿಷಯ ಇಲಾಖೆಗೆ ಮುಜಗರ ಉಂಟು ಮಾಡಿದೆ. ಇದನ್ನು ಗಂಭೀರವಾಗಿ ಪರಿಗಣಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ.ಯಡ್ರಾಮಿ ಅವರು ಸ್ಪಷ್ಟ ಅಭಿಪ್ರಾಯವನ್ನು ಕಾರ್ಯಾಲಯಕ್ಕೆ ಸಲ್ಲಿಸಿದ್ದಾರೆ. ಆರೋಪಗಳ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ತತ್‌ಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತ್ತುಗೊಳಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪ-ನಿರ್ದೇಶಕರು ಆದೇಶಿಸಿದ್ದಾರೆ.

Read More

ಕೊಲ್ಹಾರದಲ್ಲಿ ಆಯೋಜಿಸಿದ್ದ ಡಾ. ಬಿ.ಆರ್.ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನರಾಮ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ತಹಶೀಲ್ದಾರ ಎಸ್.ಎಸ್.ಮ್ಯಾಗೇರಿ ಅಭಿಮತ ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ನವ ಭಾರತದ ನಿರ್ಮಾಣಕ್ಕೆ ಸುಭದ್ರ ಅಡಿಪಾಯ ಹಾಕಿದ ಶ್ರೇಷ್ಠ ದಾರ್ಶನಿಕ ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನ ರಚನೆ ಮೂಲಕ ಪ್ರಜಾಪ್ರಭುತ್ವದ ಮಹತ್ವವನ್ನು ಸಾರುತ್ತಾ ಸಮಾನತೆಯ ಸಂದೇಶವನ್ನು ದೇಶಕ್ಕೆ ನೀಡಿದ ಮಹಾನ್ ಚೇತನ ಎಂದು ತಹಶೀಲ್ದಾರ ಎಸ್.ಎಸ್. ಮ್ಯಾಗೇರಿ ಹೇಳಿದರು.ತಾಲೂಕು ಆಡಳಿತ, ತಾಲೂಕು ಪಂಚಾಯತ್, ಪಟ್ಟಣ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಪಟ್ಟಣದ 12ನೇ ವಾರ್ಡಿನ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಹಾಗೂ ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನರಾಮ ಅವರ 119ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷ ಸಂತೋಷ ಗಣಾಚಾರಿ ಮಾತನಾಡಿದರು.ಶಿಕ್ಷಕರಾದ ಜಗದೀಶ ಕಾಂಬಳೆ ಮತ್ತು ಸಂಗಮೇಶ ದಶವಂತ ಉಪನ್ಯಾಸ ನೀಡಿದರು.ಕಬಡ್ಡಿ ಪಟು ಪ್ರಜ್ವಲ ಚಂದ್ರಶೇಖರ ಈಟಿ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.ಪಟ್ಟಣದಲ್ಲಿ ಅಂಬೇಡ್ಕರ್ ಹಾಗೂ…

Read More

ಸಮಗ್ರ ತನಿಖೆ ನಡೆಸಲು ವಿಶೇಷ ತನಿಖಾ ತಂಡ‌ ರಚನೆ ಮಾಡಬೇಕು ಎಂದು ಸಂಸದ ರಮೇಶ ಜಿಗಜಿಣಗಿ ಹಕ್ಕೊತ್ತಾಯ ಉದಯರಶ್ಮಿ ದಿನಪತ್ರಿಕೆ ವಿಜಯಪುರ: 2025-26 ನೇ ಸಾಲಿನ ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಮಾನ್ಯತೆ ನವೀಕರಣ, ಪ್ರಥಮ ಮಾನ್ಯತೆ ನೀಡುವಲ್ಲಿ ಕೋಟ್ಯಂತರ ರೂ. ಹಗರಣ ನಡೆದಿದ್ದು, ಕೂಡಲೇ ಇದನ್ನು ಸಮಗ್ರ ತನಿಖೆ ನಡೆಸಲು ವಿಶೇಷ ತನಿಖಾ ತಂಡ‌ ರಚನೆ ಮಾಡಬೇಕು ಸಂಸದ ರಮೇಶ ಜಿಗಜಿಣಗಿ ಹಕ್ಕೊತ್ತಾಯ ಮಂಡಿಸಿದರು.ಮಂಗಳವಾರ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಕೇವಲ ಹಗರಣವಲ್ಲ, ಮಕ್ಕಳ ಭವಿಷ್ಯದ ದೃಷ್ಟಿಕೋನದ ಪ್ರಶ್ನೆ, ಮುಂದೆ ನಿಯಮಾವಳಿ ಮೀರಿವೆ ಎಂದು ಶಾಲೆಗಳನ್ನು ಬಂದ್ ಮಾಡಿದರೆ ಆ ಮಕ್ಕಳು ಎಲ್ಲಿಗೆ ಹೋಗಬೇಕು? ಎಂದು ಪ್ರಶ್ನಿಸಿದರು.ಈ ವಿಷಯವಾಗಿ ತಪ್ಪಾಗಿದೆ ಎಂದು ಶಿಕ್ಷಣ ಸಚಿವರು ಹೇಳಿದ್ದಾರೆ, ಆದರೆ ತಪ್ಪಾಗಿದೆ ಎಂದು ಹೇಳಿ ಸುಮ್ಮನೆ ಕುಳಿತರೇ ಸಾಕೇ? ಎಂದು ಪ್ರಶ್ನಿಸಿದರು.ಈ ಹಗರಣದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ರಾಜ್ಯಪಾಲರಿಗೆ, ಮುಖ್ಯಮಂತ್ರಿ,8 ಶಿಕ್ಷಣ…

Read More

ಹಸಿವು ನೀಗಿಸುವ ‘ಇಂದಿರಾ ಕ್ಯಾಂಟೀನ್’ ಉದ್ಘಾಟಿಸಿದ ಶಾಸಕ ಲಕ್ಷ್ಮಣ ಸವದಿ | ಜನಸಾಮಾನ್ಯರೊಂದಿಗೆ ಕುಳಿತು ಉಪಾಹಾರ ಸೇವನೆ ಉದಯರಶ್ಮಿ ದಿನಪತ್ರಿಕೆ ಅಥಣಿ: ಬಡವರು, ಕಾರ್ಮಿಕರು ಹಾಗೂ ಸಾರ್ವಜನಿಕರ ಹಸಿವು ನೀಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ರೂಪಿಸಿರುವ ಮಹತ್ವಾಕಾಂಕ್ಷಿ ಯೋಜನೆಯಾದ ’ಇಂದಿರಾ ಕ್ಯಾಂಟೀನ್’ಅನ್ನು ಶಾಸಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಅಧಿಕೃತವಾಗಿ ಉದ್ಘಾಟಿಸಿದರು.ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾದ ಇಂದಿರಾ ಕ್ಯಾಂಟೀನ್ ಕಟ್ಟಡದ ರಿಬ್ಬನ್ ಕತ್ತರಿಸುವ ಮೂಲಕ ಚಾಲನೆ ನೀಡಿದ ಶಾಸಕರು, ಬಳಿಕ ಸಾರ್ವಜನಿಕರೊಂದಿಗೆ ಸಾಲಿನಲ್ಲಿ ನಿಂತು ತಾವೇ ತಟ್ಟೆ ಹಿಡಿದು ಆಹಾರ ಪಡೆದು, ಉಪಹಾರ ಸೇವಿಸುವ ಮೂಲಕ ಆಹಾರದ ಗುಣಮಟ್ಟ ಪರೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.ನಂತರ ಮಾತನಾಡಿದ ಶಾಸಕ ಲಕ್ಷ್ಮಣ ಸವದಿ ಅವರು, “ಗ್ರಾಮೀಣ ಭಾಗದಿಂದ ಪಟ್ಟಣಕ್ಕೆ ಬರುವ ರೈತರು, ಕೂಲಿ ಕಾರ್ಮಿಕರು ಹಾಗೂ ಬಡ ವಿದ್ಯಾರ್ಥಿಗಳಿಗೆ ಹೊಟ್ಟೆತುಂಬ ಊಟ ಸಿಗಬೇಕು ಎನ್ನುವುದು ಈ ಯೋಜನೆಯ ಮುಖ್ಯ ಆಶಯವಾಗಿದೆ ಎಂದರು.ಪಟ್ಟಣದ ಆಯಕಟ್ಟಿನ ಜಾಗದಲ್ಲಿ ಈ ಕ್ಯಾಂಟೀನ್ ಆರಂಭವಾಗಿರುವುದರಿಂದ ನಿತ್ಯ ನೂರಾರು ಜನರಿಗೆ ಅನುಕೂಲವಾಗಲಿದೆ.ಈ…

Read More