Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಲಕ್ಷ್ಮಣ ಸವದಿ ಘೋಷಣೆ ಉದಯರಶ್ಮಿ ದಿನಪತ್ರಿಕೆ ಅಥಣಿ: “ಬಾಬಾಸಾಹೇಬ್ ಅಂಬೇಡ್ಕರ್ ಅವರು ಜೀವನದುದ್ದಕ್ಕೂ ತುಳಿತಕ್ಕೊಳಗಾದವರ ಸಮಾನತೆಗಾಗಿ ಹೋರಾಡಿದವರು. ಅವರ ವಿಚಾರಧಾರೆಗಳು ಕೇವಲ ಒಂದು ಸಮಾಜಕ್ಕೆ ಸೀಮಿತವಾಗದೆ, ಎಲ್ಲರೂ ಒಗ್ಗೂಡಿ ಆಚರಿಸಿದಾಗ ಮಾತ್ರ ಜಯಂತಿಗಳಿಗೆ ನಿಜವಾದ ಅರ್ಥ ಸಿಗುತ್ತದೆ,” ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.ಅವರು ತಾಲೂಕು ಆಡಳಿತ, ತಾಲೂಕು ಪಂಚಾಯತ ಪುರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ತೋಟಗಾರಿಕಾ ಇಲಾಖೆ ಆವರಣದಲ್ಲಿ ಆಯೋಜಿಸಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿಪಟ್ಟಣದ ಉದ್ಯಾನವನ ಪಕ್ಕದಲ್ಲಿ 1.50 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಡಿಜಿಟಲ್ ಗ್ರಂಥಾಲಯ ನಿರ್ಮಿಸಲಾಗುವುದು. ಇದರ ಟೆಂಡರ್ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, 15 ದಿನಗಳಲ್ಲಿ ಭೂಮಿ ಪೂಜೆ ನೆರವೇಸಲಿದ್ದೆವೆ. ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಬಡ ವಿದ್ಯಾರ್ಥಿಗಳಿಗೆ ಇದು ಅನುಕೂಲವಾಗಲಿದೆತಾಲೂಕಿನಲ್ಲಿ ಈಗಾಗಲೇ ಪಶು ವೈದ್ಯಕೀಯ ಕಾಲೇಜು ಆರಂಭವಾಗಿದೆ. 508 ಕೋಟಿ ರೂ. ವೆಚ್ಚದ ಕೃಷಿ ಕಾಲೇಜು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನೋಡಲು ತನ್ನಂತಿಲ್ಲ ಎಂಬ ಕಾರಣಕ್ಕೆ ತಂದೆಯೋರ್ವ ಪುತ್ರನನ್ನೇ ಕೊಲೆ ಮಾಡಿದ ವಿಲಕ್ಷಣ ಘಟನೆಯೊಂದು ಬೆಳಕಿಗೆ ಬಂದಿದೆ.ವಿಜಯಪುರ ತಾಲೂಕಿನ ನಾಗಠಾಣ ಗ್ರಾಮದಲ್ಲಿ ಕಳೆದ ಮಾರ್ಚ್‌ನಲ್ಲಿಯೇ ಈ ಘಟನೆ ನಡೆದಿದ್ದು, ಇದೀಗ ಅಸಲಿಯತ್ತು ಬಯಲಾಗಿದೆ.ಈ ಮೊದಲು ಮಗು ಕಾಣೆಯಾಗಿದೆ ಎಂದು ದೂರು ಕೊಟ್ಟಿದ್ದ ಕುಟುಂಬಸ್ಥರೇ ಇದೀಗ ತಂದೆಯೇ ಪುತ್ರನನ್ನು ಕೊಂದಿದ್ದಾನೆಂದು ದೂರು ದಾಖಲಿಸಿದ್ದು, ಇಡೀ ಪ್ರಕರಣ ರೋಚಕ ತಿರುವು ಪಡೆದಿದೆ.ಘಟನೆ ವಿವರ:ನಾಗಠಾಣ ಗ್ರಾಮದ ಮಲ್ಲಿಕಾರ್ಜುನ ಅರಕೇರಿ ಎಂಬಾತ ಮಾ.15 ರಂದು ತನ್ನ ಆರು ವರ್ಷದ ಪುತ್ರ ಸಿದ್ಧಾರ್ಥನನ್ನು ಶಾಲೆಗೆ ಸೇರಿಸುವುದಾಗಿ ಮನೆಯಿಂದ ಕರೆದೊಯ್ದಿದ್ದಾನೆ. ಬಳಿಕ ಮನೆಗೆ ಬಂದು ಮಗನನ್ನು ಶಾಲೆಗೆ ಸೇರಿಸಿದ್ದಾಗಿ ತಿಳಿಸಿದ್ದಾನೆ. ಏಪ್ರೀಲ್ 1 ರಂದು ಸಿದ್ಧಾರ್ಥನ ಜನ್ಮ ದಿನವಿದ್ದು, ಆಚರಣೆಗಾಗಿ ಕರೆತರಲು ಮಲ್ಲಿಕಾರ್ಜುನನ ಪತ್ನಿ ಭಾಗ್ಯಶ್ರೀ ದುಂಬಾಲು ಬಿದ್ದಿದ್ದಾಳೆ. ಕಡೇ ಪಕ್ಷ ಫೋನ್ ಮಾಡಿಯಾದರೂ ಮಗನೊಂದಿಗೆ ಮಾತನಾಡಿಸು ಎಂದು ಒತ್ತಾಯಿಸಲಾಗಿ ಯಾರ ಜೊತೆಗೋ ಮಾತನಾಡಿಸಿದ್ದು, ಮಗನ ಕೈಗೆ ಮೊಬೈಲ್ ಕೊಡುವಂತೆ ಹೇಳಿದಾಗ, ಆತ ಮಾತನಾಡಲು ನಿರಾಕರಿಸುತ್ತಿರುವುದಾಗಿ ಅಪರಿಚಿತರು…
ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ ಅವರ ತತ್ವ, ಸಿದ್ಧಾಂತಗಳು ಸದಾ ಪ್ರಸ್ತುತವಾಗಿದ್ದು, ಅವುಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಮಂಗಳವಾರ ತೊರವಿಯಲ್ಲಿ ಡಾ. ಅಂಬೇಡ್ಕರ ಅವರವ135ನೇ ಜಯಂತಿಗೆ ಚಾಲನೆ ನೀಡಿದ ಅವರು, ನಂತರ ವಿಜಯಪುರ ನಗರದಲ್ಲಿ ಡಾ. ಅಂಬೇಡ್ಕರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.ಬಳಿಕ ದಲಿತ ಸಂಘಟನೆಗಳ ಮಹಾ ಒಕ್ಕೂಟ ಮತ್ತು ಡಾ. ಬಿ. ಆರ್. ಅಂಬೇಡ್ಕರ ಶಕ್ತಿ ಸಂಘದ ವತಿಯಿಂದ ಆಯೋಜಿಸಲಾದ ಜಯಂತಿ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ವಿಶ್ವಶ್ರೇಷ್ಠ ಸಂವಿಧಾನ ನೀಡಿದ ಬಾಬಾಸಾಹೇಬ ಅಂಬೇಡ್ಕರ ಅವರು ದೀರ್ಘಾಯುಷಿಯಾಗಿ ಬಾಳುವುದು ಮುಖ್ಯವಲ್ಲ. ಜೀವನದಲ್ಲಿ ಹೇಗೆ ಬದುಕುತ್ತೀರಿ ಎಂಬುದು ಮುಖ್ಯ ಎಂದು ಪ್ರತಿಪಾದಿಸಿದ್ದರು. ಅವರ ಆಶಯಗಳಿಗೆ ಅನುಗುಣವಾಗಿ ರಕ್ತದಾನ ಶಿಬಿರ ಆಯೋಜಿಸಿರುವುದು ಶ್ಲಾಘನೀಯವಾಗಿದೆ. ಈ ರೀತಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ ಅವರ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು.ವಿವಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಅವರು ಡಾ. ಅಂಬೇಡ್ಕರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಜಯಂತಿ ಕಾರ್ಯಕ್ರಮಕ್ಜೆ ಚಾಲನೆ ನೀಡಿದರು.ಬಳಿಕ ಮಾತನಾಡಿದ ಅವರು, ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಭಾರತೀಯ ಸಂವಿಧಾನದ ಕರಡು ಸಮಿತಿಯ ಅಧ್ಯಕ್ಷರಾಗಿ ದೇಶದ ಸಂವಿಧಾನ ರಚನೆಯಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಅವರ ಆಳವಾದ ಕಾನೂನು ಪಾಂಡಿತ್ಯ, ಸಮಾಜದ ನಾನಾ ವರ್ಗಗಳ ಸಮಸ್ಯೆಗಳ ಕುರಿತು ಹೋಂದಿದ್ದ ಸೂಕ್ಷ್ಮ ಅರಿವು ಹಾಗೂ ಸಮಾನತೆಯ ಬದ್ಧತೆಯು ಭಾರತದ ಸಂವಿಧಾನವನ್ನು ವಿಶ್ವದಲ್ಲಿ ಶ್ರೇಷ್ಠ ಸಂವಿಧಾನವಾಗಲು ಕಾರಣವಾಗಿದೆ ಎಂದು ಹೇಳಿದರು.ಡೀಮ್ಡ್ ವಿವಿ ಕುಲಪತಿ ಡಾ. ಅರುಣ ಚಂ. ಇನಾಮದಾರ ಮಾತನಾಡಿದರು.ಈ ಸಂದರ್ಭದಲ್ಲಿ ಡೀಮ್ಡ್ ವಿವಿ ರಜಿಸ್ಟ್ರಾರ್ ಡಾ. ಆರ್. ವಿ. ಕುಲಕರ್ಣಿ, ಪರೀಕ್ಷೆ ನಿಯಂತ್ರಣಾಧಿಕಾರಿ ಡಾ. ಎಸ್. ಎಸ್. ದೇವರಮನಿ, ವೈದ್ಯಕೀಯ…
ಬಿ ಎಲ್ ಡಿ ಇ ಸಂಸ್ಥೆಯ ಎಸ್ ಬಿ ಕಲಾ ಮತ್ತು ಕೆ ಸಿ ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ನಡೆದ ಡಾ.ಅಂಬೇಡ್ಕರ್ ಜಯಂತಿಯಲ್ಲಿ ಡಾ.ಅನೀಲ ನಾಯಕ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಡಾ.ಅಂಬೇಡ್ಕರ್ ಅವರು ಶ್ರೇಷ್ಠ ನ್ಯಾಯಶಾಸ್ತ್ರಜ್ಞ, ಅರ್ಥಶಾಸ್ತ್ರಜ್ಞ, ರಾಜಕೀಯ ಚಿಂತಕ ವಿಶ್ವ ಮಾನವತೆಯ ಹರಿಕಾರರಾಗಿ ಸಾಮಾಜಿಕ ನ್ಯಾಯದ ಪರ ಹಾಗೂ ಜಾತಿ ವ್ಯವಸ್ಥೆ ವಿರುದ್ಧ ಹೋರಾಟ ಮಾಡಿದ ಧೀಮಂತ ನಾಯಕ ಎಂದು ಎಸ್ ಬಿ ಕಲಾ ಮತ್ತು ಕೆಸಿಪಿ ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಅನೀಲ ಬಿ ನಾಯಕ ಹೇಳಿದರು.ನಗರದ ಬಿ ಎಲ್ ಡಿ ಇ ಸಂಸ್ಥೆಯ ಎಸ್ ಬಿ ಕಲಾ ಮತ್ತು ಕೆಸಿಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಎನ್‌ಎಸ್‌ಎಸ್ ಯುನಿಟ್-1 ಮತ್ತು ಯುನಿಟ್-II, ವೈಆರ್‌ಸಿ ಹಾಗೂ ಎಸ್ಸಿ ಎಸ್ಟಿ ಸೆಲ್ ಸಹಯೋಗದಲ್ಲಿ ಡಾ. ಬಿ ಆರ್. ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಮನೆ ಮನೆಗೆ, ಮನ ಮನಕೆ ಬಾಬಾಸಾಹೇಬರು ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಏಪ್ರಿಲ್ ೧೪ ರಿಂದ…
ವಿಜಯಪುರದಲ್ಲಿ ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರದಿಂದ ೨೦ ಜನ ಸಾಧಕರಿಗೆ ಪ್ರಶಸ್ತಿ ಪ್ರಕಟ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರ, ಪುಣೆಯ. ವಿಜಯಪುರ ಜಿಲ್ಲಾ ಘಟಕದ ವತಿಯಿಂದ ಏ.೨೫ ರಂದು ನಗರದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಮಂಗಲ ಕಾರ್ಯಾಲಯದಲ್ಲಿ ಬೆಳಿಗ್ಗೆ 10:೦೦ ಘಂಟೆಗೆ ಪ್ರಥಮ ಬಸವ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ವಿಜಯಪುರದ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಗಂಗಾಧರ್ ಸಂಬಣ್ಣಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಡಾ.ಅಜಿತ್ ರಾಂಪುರೆ ಮುಖ್ಯ ಕಾರ್ಯನಿರ್ವಾಹಕರು ಮತ್ತು ಡೀನ್ ಅರೆಯುಸ್ ವಿಶ್ವವಿದ್ಯಾಲಯ ಅರೋಬಾ ಇವರು ಮುಖ್ಯ ಅತಿಥಿ ಸ್ಥಾನವನ್ನು ಅಲಂಕರಿಸಲಿದ್ದಾರೆ.ಇದೆ ಸಂಧರ್ಭದಲ್ಲಿ ಡಾ.ಅಶೋಕ ಆಲೂರ , ಕುಲಪತಿಗಳು, ಕೊಡಗು ವಿಶ್ವವಿದ್ಯಾಲಯ ಇವರು ‘ಬಸವ ತತ್ವ ಜಗದ ತತ್ವ ‘ ಎಂಬ ವಿಷಯ ಕುರಿತು ಅನುಭಾವ ನೀಡಲಿದ್ದಾರೆ.ಡಾ.ಶಶಿಕಾಂತ ಪಟ್ಟಣ, ಅಧ್ಯಕ್ಷರು, ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರ, ಪುಣೆ ಇವರು ಅಧ್ಯಕ್ಷ ಸ್ಥಾನ ವಹಿಸಲಿದ್ದು, ಗೌರವ ಉಪಸ್ಥಿತರಾಗಿ ಡಾ.ಮಹಾಂತೇಶ ಬಿರಾದಾರ, ಬಿಎಲ್ಡಿಇ ಸಂಸ್ಥೆ ಆಡಳಿತ ಅಧಿಕಾರಿಗಳು, ಸುರೇಶ…
ವಿಜಯಪುರದಲ್ಲಿ ಬಸವ ಜಯಂತಿ ಉತ್ಸವ ಸಮಿತಿ ಪ್ರಮುಖರಿಂದ ಸುದ್ದಿಗೋಷ್ಟಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಇದೇ ೧೯ ರಿಂದ ಎರಡು ದಿನಗಳ ಕಾಲ ಜಿಲ್ಲಾಡಳಿತ ಹಾಗೂ ಬಸವ ಜಯಂತಿ ಉತ್ಸವ ಸಮಿತಿ ವತಿಯಿಂದ ಬಸವ ಜಯಂತಿ ಉತ್ಸವ-೨೦೨೬ ಅರ್ಥಪೂರ್ಣ ಆಚರಣೆಗೆ ನಿರ್ಧರಿಸಲಾಗಿದೆ ಎಂದು ಬಸವ ಜಯಂತಿ ಉತ್ಸವ ಸಮಿತಿ ಪ್ರಮುಖ ವಿ.ಸಿ. ನಾಗಠಾಣ ತಿಳಿಸಿದರು.ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರಣೆ ನೀಡಿದ ಅವರು, ದಿ.೧೯ ರಂದು ಬೆಳಿಗ್ಗೆ ಮಕ್ಕಳಿಂದ ವಚನ ಕಂಠಪಾಠ, ಬಸವಾದಿ ಶರಣರ ಕುರಿತಾದ ಮಕ್ಕಳ ಕವನಗೋಷ್ಠಿ ನಡೆಯಲಿದೆ, ನಂತರ ಯುವ ಕವಿಗೋಷ್ಠಿ ನಡೆಯಲಿದೆ. ಮಧ್ಯಾಹ್ನ ಪ್ರಧಾನ ಕಾರ್ಯಕ್ರಮ ನಡೆಯಲಿದ್ದು, ಅದೇ ದಿನ ಸಂಜೆ ೬ ರಿಂದ ೯.೩೦ ರವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ಭಗವಂತನ ಮರಣ ಎಂಬ ಸಾಮಾಜಿಕ ಸಂದೇಶವುಳ್ಳ ನಾಟಕ ಪ್ರದರ್ಶನ ನಡೆಯಲಿದೆ. ಚಿಕ್ಕಮಕ್ಕಳಾದಿಯಾಗಿ ಪ್ರತಿಯೊಬ್ಬರನ್ನು ಒಳಗೊಂಡು ಅದರಲ್ಲೂ ಮಕ್ಕಳಲ್ಲಿ ಬಾಲ್ಯದಲ್ಲಿಯೇ ಬಸವ ಪ್ರಜ್ಞೆ ಮೂಡಿಸುವುದಕ್ಕಾಗಿ ಹೆಚ್ಚಿನ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದರು.ದಿ.೨೦…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದುಷ್ಕರ್ಮಿಗಳ ಗುಂಡಿನ ದಾಳಿಗೆ ಗ್ರಾಪಂ ಸದಸ್ಯ ಭೀಕರವಾಗಿ ಸಾವಿಗೀಡಾದ ಘಟನೆ ಗುಮ್ಮಟ ನಗರದ ಹೊರ ವಲಯ ಅಲಿಯಾಬಾದ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಮಂಗಳವಾರ ಸಂಜೆ ನಡೆದಿದೆ.ಅಲಿಯಾಬಾದ ಗ್ರಾಪಂ ಸದಸ್ಯ, ಪಾಂಗರುನ ದೊಡ್ಡಿ ನಿವಾಸಿ ರಾಜು ಕರೆ (48) ಮೃತಪಟ್ಟ ವ್ಯಕ್ತಿ.ರಾಜು ಕರೆ ತಮ್ಮ ಥಾರ್ ವಾಹನದಲ್ಲಿ ತೆರಳುತ್ತಿದ್ದಾಗ, ದುಷ್ಕರ್ಮಿಗಳು ಟಿಪ್ಪರ್ ಮೂಲಕ ಡಿಕ್ಕಿ ಹೊಡೆಸಿದ್ದು, ಬಳಿಕ ಜೀಪಿನ ಮೇಲೆ ಮನಬಂದಂತೆ 6 ಸುತ್ತಿನ ಗುಂಡಿನ ದಾಳಿ ನಡೆಸಿದ್ದು, ಜೀಪ್ ಡೋರ್ ಓಪನ್ ಆಗದಕ್ಕೆ ನಂತರ ಜೀಪಿನ ಮೇಲೆ ಕಲ್ಲು ಎತ್ತಿ ಹಾಕಿದ್ದಾರೆ. ದುಷ್ಕರ್ಮಿಗಳ ಭೀಕರ ದಾಳಿಯಿಂದ ರಾಜು ಕರೆ ಥಾರ್ ಜೀಪಿನಲ್ಲಿಯೇ ಗಂಭೀರ ಗಾಯಗೊಂಡು ಸ್ಥಳದಲ್ಲಿಯೇ ಅಸುನೀಗಿದ್ದಾನೆ. ಈ ಹತ್ಯೆಗೆ ಹಳೇ ವೈಷಮ್ಯವೇ ಕಾರಣ ಇರಬಹುದು ಎಂದು ಶಂಕಿಸಲಾಗಿದೆ.ಘಟನೆ ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸೇರಿದಂತೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಜಯಪುರದ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಆಚರಣೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಮಂಗಳವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ವಿಧಿವತ್ತಾಗಿ ಪೂಜೆ ಸಲ್ಲಿಸಿ, ಪುಷ್ಪವೃಷ್ಠಿಗೈದು, ಡಾ.ಅಂಬೇಡ್ಕರ ಅವರ ಸಮಾಜ ಪರಿವರ್ತನೆಯ ಚಿಂತನೆಗಳು, ಶ್ರಮ ಮತ್ತು ಸಮಾನತೆಯ ಮಹತ್ವವನ್ನು ಸ್ಮರಿಸಲಾಯಿತು.ಸಂಘದ ಅಧ್ಯಕ್ಷ ಅಶೋಕ ಯಡಳ್ಳಿ ಮಾತನಾಡಿ,ಅಂಬೇಡ್ಕರ್ ಅವರು ಕೇವಲ ಸಂವಿಧಾನ ಶಿಲ್ಪಿಯಾಗಿರದೆ, ಒಬ್ಬ ಚಿಂತಕ ಪತ್ರಕರ್ತರೂ ಆಗಿದ್ದರು. ‘ಮೂಕನಾಯಕ’ ಮತ್ತು ‘ಬಹಿಷ್ಕೃತ ಭಾರತ’ ಪತ್ರಿಕೆಗಳ ಮೂಲಕ ಹಿಂದುಳಿದ ವರ್ಗಗಳ ಧ್ವನಿಯಾಗಿ ಕಾರ್ಯನಿರ್ವಹಿಸಿ, ಸಮಾಜದಲ್ಲಿ ಜಾಗೃತಿ ಮೂಡಿಸಿದರು ಎಂದರು.ಅಂಬೇಡ್ಕರ್ ರಚಿಸಿದ ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕುಗಳನ್ನು ನೀಡುತ್ತದೆ. ಪತ್ರಕರ್ತರಾಗಿ ನಾವು ಈ ಮೌಲ್ಯಗಳನ್ನು ಕಾಪಾಡುವುದು ನಮ್ಮ ಪ್ರಮುಖ ಜವಾಬ್ದಾರಿ,” ಎಂದು ಹೇಳಿದರು.ಜಿಲ್ಲಾ ಪ್ರದಾನ ಕಾರ್ಯದರ್ಶಿ ಇಂದುಶೇಖರ ಮಣೂರ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ ಅವರ ಜಯಂತ್ಯತ್ಸವ ಆಚರಿಸಿದರೆ ಸಾಲದು. ಅವರ…
