Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಸಾರಂಗಮಠದಲ್ಲಿ ಶ್ರೀಮಠದ ಪೀಠಾಧ್ಯಕ್ಷರಾದ ಪೂಜ್ಯಶ್ರೀ ಡಾ.ಪ್ರಭುಸಾರಂಗದೇವ ಶಿವಾಚಾರ್ಯರ ನೇತೃತ್ವದಲ್ಲಿ ತಾಲೂಕಿನಾದ್ಯಂತ ಉತ್ತಮ ಮಳೆಯಾಗಲಿ, ರೈತರಿಗೆ ಸಮೃದ್ಧ ಬೆಳೆ ದೊರೆಯಲಿ ಹಾಗೂ ನಾಡಿನ ಜನತೆ ಸುಖ, ಶಾಂತಿ ಮತ್ತು ಸಮೃದ್ಧಿಯಿಂದ ಬದುಕಲಿ ಎಂಬ ಸಂಕಲ್ಪದೊಂದಿಗೆ ೨೪ಗಂಟೆಗಳ ಕಾಲ ಶಿವ ಸಪ್ತಾಹ ಧಾರ್ಮಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಸಿಂದಗಿ ಸಾರಂಗಮಠದಲ್ಲಿ ಪೀಠಾಧಿಪತಿಗಳ ನೇತೃತ್ವದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಭಕ್ತರು ಹಾಗೂ ವಿವಿಧ ಗ್ರಾಮಗಳಿಂದ ಆಗಮಿಸಿರುವ ಶಿವಭಕ್ತರು ಭಾಗವಹಿಸಿ ನಿರಂತರವಾಗಿ ಶಿವನಾಮಸ್ಮರಣೆ, ಭಜನೆ, ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ.ಮಳೆ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ, ನಾಡಿನಲ್ಲಿ ಉತ್ತಮ ಮಳೆಯಾಗಿ ಜಲಾಶಯಗಳು, ಕೆರೆ-ಕಟ್ಟೆಗಳು ತುಂಬಿ, ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲಿ ಹಾಗೂ ರೈತರ ಬದುಕು ಹಸನಾಗಲಿ ಎಂಬ ಪ್ರಾರ್ಥನೆಯೊಂದಿಗೆ ಶಿವ ಸಪ್ತಾಹ ನಡೆಸಲಾಗುತ್ತಿದೆ ಎಂದು ಸಮ್ಮುಖ ವಹಿಸಿದ ಶ್ರೀಮಠದ ಉತ್ತರಾಧಿಕಾರಿಗಳಾದ ಪೂಜ್ಯಶ್ರೀ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು ಹೇಳಿದರು.೨೪ಗಂಟೆಗಳ ಕಾಲ ನಡೆಯುವ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಕ್ತರು ಶ್ರದ್ಧಾಭಕ್ತಿಯಿಂದ ಪಾಲ್ಗೊಂಡು ಮಳೆಯಿಗಾಗಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಕಾರ್ಯಕ್ರಮದ ಅಂಗವಾಗಿ ಶಿವನಾಮಸ್ಮರಣೆ,…

Read More

ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿದ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಭರವಸೆ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಹಿಂದುಳಿದವರು, ಅಲ್ಪಸಂಖ್ಯಾತರು ಹಾಗೂ ದಲಿತ ಸಮುದಾಯದವರು ಮುಖ್ಯಮಂತ್ರಿಯಾಗುವುದು ಅಪರೂಪ. ಆದರೆ ಸಿದ್ದರಾಮಯ್ಯ ಅವರು ಎಲ್ಲ ಸಮುದಾಯಗಳ ಪ್ರೀತಿ, ವಿಶ್ವಾಸ ಗಳಿಸುವ ರೀತಿಯಲ್ಲಿ ಸಮ ಸಮಾಜದ ಆಶಯದೊಂದಿಗೆ ಕಾರ್ಯನಿರ್ವಹಿಸಿದ್ದರಿಂದ ಎರಡು ಬಾರಿ ಸಿಎಂ ಸ್ಥಾನವನ್ನು ಅಲಂಕರಿಸುವ ಅವಕಾಶ ದೊರೆತಿದೆ. ಅವರ ರೀತಿಯಲ್ಲಿ ಜನಪರವಾಗಿ ಕಾರ್ಯನಿರ್ವಹಿಸುವುದು ಸುಲಭವಲ್ಲ. ಆದರೂ ಎಲ್ಲ ಸಮುದಾಯಗಳ ಆಶಯಗಳಿಗೆ ಸ್ಪಂದಿಸುವ ಕಾರ್ಯಕ್ರಮಗಳನ್ನು ರೂಪಿಸಿಕೊಂಡು ಅವರ ಹಾದಿಯಲ್ಲಿ ನಡೆಯಲು ತಮ್ಮೆಲ್ಲರ ಸಹಕಾರ ಅಗತ್ಯ ಎಂದು ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.ಸಿಂದಗಿ ನಗರದ ಗುಂದಗಿ ಫಂಕ್ಷನ್ ಹಾಲ್‌ನಲ್ಲಿ ತಾಲೂಕು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನೌಕರರ ಸಂಘದ ವತಿಯಿಂದ ಆಯೋಜಿಸಿದ್ದ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಲುಮತ ಸಮುದಾಯಕ್ಕೆ ಎಸ್‌ಟಿ ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಕುಲಶಾಸ್ತ್ರೀಯ ಅಧ್ಯಯನ ನಡೆಸಿ,…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ವಿಜಯಪುರ ಜಿಲ್ಲಾ ಹಾಗೂ ದೇವರಹಿಪ್ಪರಗಿ ತಾಲ್ಲೂಕು ಆಡಳಿತದ ವೈಫಲ್ಯ ಖಂಡಿಸಿ ಹಾಗೂ ನ್ಯಾಯಯುತ ಬೇಡಿಕೆಗಳನ್ನು ಇಡೇರಿಸುವಂತೆ ಆಗ್ರಹಿಸಿ ನಡೆದ ೩ನೇ ದಿನದ ಧರಣಿ ಸತ್ಯಾಗ್ರಹದಲ್ಲಿ ಬಿಜೆಪಿ ಮಂಡಲ ಪದಾಧಿಕಾರಿಗಳು ಪಾಲ್ಗೊಂಡು ಬೆಂಬಲ ವ್ಯಕ್ತಪಡಿಸಿದರು.ಪಟ್ಟಣದ ಅಂಬೇಡ್ಕರ್ ವೃತ್ತದ ಧರಣಿ ಸ್ಥಳಕ್ಕೆ ಆಗಮಿಸಿದ ಬಿಜೆಪಿ ಮಂಡಲ ಪದಾಧಿಕಾರಿಗಳು ಪಾಲ್ಗೊಂಡು ಬೆಂಬಲಿಸಿದರು.ಈ ಸಂದರ್ಭದಲ್ಲಿ ಮಲ್ಕು ಬಾಗೇವಾಡಿ ಮಾತನಾಡಿ, ತಾಲ್ಲೂಕಿನ ಕೃಷಿ ಇಲಾಖೆಯಲ್ಲಿ ೨೦೨೧-೨೨ ರಿಂದ ೨೦೨೫-೨೬ ರವರೆಗೆ ಕೃಷಿ ಭಾಗ್ಯ ಯೋಜನೆಯ ಬದು ನಿರ್ಮಾಣ, ಕೃಷಿ ಹೊಂಡ ಹಾಗೂ ವಿಶೇಷ ಘಟಕ ಯೋಜನೆಯಲ್ಲಿ ಜಲಾನಯನ ಕೃಷಿ ಸಿಂಚನ ಸಹಿತ ಹಲವು ಯೋಜನೆಗಳಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದ್ದು ಇವುಗಳನ್ನು ಲೋಕಾಯುಕ್ತ ತನಿಖೆಗೆ ಒಳಪಡಿಸಿ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂಬ ಡಿಎಸ್‌ಎಸ್ ಬೇಡಿಕೆಗೆ ಧ್ವನಿಗೂಡಿಸಿದರು.ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಕಾಶ ದೊಡಮನಿ ಮಾತನಾಡಿ, ವಿಜಯಪುರ ಜಿಲ್ಲೆಯನ್ನು ಪ್ರಾದೇಶಿಕ ಮೀಸಲಾತಿ ಅಡಿ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಸಂಘಟನೆಗಳು ಸಾಮಾಜಿಕ ಜವಾಬ್ದಾರಿ, ವಿಶೇಷ ಕಳಕಳಿಯ ಮೂಲಕ ಕಾರ್ಯನಿರ್ವಹಿಸಿ ಗುರುತಿಸಿಕೊಳ್ಳಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಅಧ್ಯಕ್ಷ ರಹಿಮಾನ ಕಣಕಾಲ ಹೇಳಿದರು.ಪಟ್ಟಣದ ಪ್ರವಾಸಿಮಂದಿರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣಶೆಟ್ಟಿ ಬಣ) ವತಿಯಿಂದ ನೂತನ ಪದಾಧಿಕಾರಿಗಳಿಗೆ ಸದಸ್ಯತ್ವ ಅಭಿಯಾನ ಹಾಗೂ ಪದಗ್ರಹಣ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಘಟನೆಗಳು ನಿತ್ಯ ನಿರಂತರ ಕಾಯಕನಿಷ್ಠೆಯಲ್ಲಿರಬೇಕು. ಪಕ್ಷಬೇದ ಮರೆತು, ಜಾತ್ಯಾತೀತ ಮನೋಭಾವನೆಯಿಂದ ಸಂಘಟಿಸಿ ಸರ್ವ ಸಮುದಾಯಕ್ಕೂ ಸಹಕಾರಿಯಾಗಬೇಕು. ಹುದ್ದೆಗಳಿಗಾಗಿ ಸಂಘಟನೆಗೆ ಸೇರದೆ ಸಮಾಜಮುಖಿ ಚಿಂತನೆ ನಮ್ಮಲ್ಲಿರಬೇಕು ಎಂದರು.ಕಾರ್ಯಧ್ಯಕ್ಷ ಭೀಮನಗೌಡ ನಾಗರಾಳ ಮಾತನಾಡಿ, ಇಡೀ ರಾಜ್ಯದಲ್ಲಿ ಕ್ರೀಯಾಶೀಲವಾಗಿ ನಮ್ಮ ಪ್ರವೀಣಶೆಟ್ಟಿ ಬಣದ ಕರವೇ ಬಳಗ ಕಾರ್ಯ ನಿರ್ವಹಿಸುತ್ತಿದೆ. ಕರವೇ ಹೆಸರನ್ನು ಯಾರು ದುರ್ಬಳಕೆ ಮಾಡಿಕೊಳ್ಳಬಾರದು. ಸಾಮಾಜಿಕ ಕಾರ್ಯಕ್ಕೆ ಸದಾ ಬೆಂಬಲವಾಗಿ ನಿಲ್ಲಬೇಕು. ಸರ್ಕಾರಿ ಯೋಜನೆಗಳು, ಸೌಲಭ್ಯಗಳು ಸಾರ್ವಜನಿಕರಿಗೆ ತಲುಪುವಂತಾಗಲು ಸಂಘಟನೆಗಳು ಸೇತುವೆಯಾಗಬೇಕು ಈ ನಿಟ್ಟಿನಲ್ಲಿ ನಮ್ಮ ತಾಲೂಕಿನಲ್ಲಿ ಸಂಘಟನೆ ಗಟ್ಟಿಗೊಳಿಸೊಣ ಎಂದರು.ತಾಲ್ಲೂಕು ಉಪಾಧ್ಯಕ್ಷ ನಾಗೇಶ್ ಕಮತಗಿ, ಕಾರ್ಮಿಕ ಘಟಕ ಅಧ್ಯಕ್ಷ ಹಸನ್ ಭಗವಾನ್,…

Read More

ಕುಂಟೋಜಿ ಸಂಸ್ಥಾನ ಹಿರೇಮಠದ ಡಾ.ಚನ್ನವೀರ ಶಿವಾಚಾರ್ಯರ ಅಭಿಮತ ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಬೆಳಕಿಗೆ ಬಾರದ ಗ್ರಾಮೀಣ ಕಲಾವಿದರೇ ನಮ್ಮ ಜನಪದ ಸಂಸ್ಕೃತಿಯ ನಿಜವಾದ ವಾರಸುದಾರರು. ಅವರ ಕಲೆ, ಬದುಕು ಮತ್ತು ಪರಂಪರೆಯಲ್ಲೇ ಭಾರತದ ಸಾಂಸ್ಕೃತಿಕ ಬೇರುಗಳು ಗಟ್ಟಿಯಾಗಿ ಬೇರೂರಿವೆ ಎಂದು ಕುಂಟೋಜಿ ಸಂಸ್ಥಾನ ಹಿರೇಮಠದ ಡಾ.ಚನ್ನವೀರ ಶಿವಾಚಾರ್ಯರು ನುಡಿದರು.ಪಟ್ಟಣದ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್ ನಲ್ಲಿ ನಡೆದ ಕರ್ನಾಟಕ ಜಾನಪದ ಪರಿಷತ್ ತಾಲೂಕು ಘಟಕದ ಪದಾಧಿಕಾರಿಗಳ ಪದಗ್ರಹಣ, ಜನಪದ ಚರಗ ಕೃತಿ ಲೋಕಾರ್ಪಣೆ ಹಾಗೂ ಜಾನಪದ ಕಲಾವಿದರ ಸನ್ಮಾನ ಸಮಾರಂಭದಲ್ಲಿ ದಿವ್ಯ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.ತಲೆತಲಾಂತರಗಳಿಂದ ಕಲೆ-ಪರಂಪರೆಯನ್ನು ಜೀವಂತವಾಗಿರಿಸಿರುವ ಜನಸಾಮಾನ್ಯರ ಕೊಡುಗೆಯಿಂದ ಜನಪದ ಸಂಸ್ಕೃತಿ ಉಳಿದಿದೆ. ಗ್ರಾಮೀಣ ಪ್ರದೇಶಗಳಲ್ಲಿ ಇನ್ನೂ ಅನೇಕ ಅಮೂಲ್ಯ ಪ್ರತಿಭೆಗಳು ಬೆಳಕಿಗೆ ಬಾರದ ಸ್ಥಿತಿಯಲ್ಲಿವೆ. ಅಂತಹ ಕಲಾವಿದರನ್ನು ಹುಡುಕಿ ಗುರುತಿಸಿ, ಅವರಿಗೆ ವೇದಿಕೆ ಹಾಗೂ ಪ್ರೋತ್ಸಾಹ ನೀಡುವ ಕೆಲಸವನ್ನು ಪರಿಷತ್ತು ಮಾಡಬೇಕು. ಜನಪದ ಕಲೆ ಕೇವಲ ಮನರಂಜನೆಯಲ್ಲ, ಅದು ನಮ್ಮ ಇತಿಹಾಸ, ಜೀವನಶೈಲಿ ಮತ್ತು…

Read More

ಜಿ.ಪಂ. ಸಿಇಒ ರಿಷಿ ಆನಂದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಗ್ರಾಮೀಣ ಬಡ ಕುಟುಂಬಗಳಿಗೆ ನಿರಂತರ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ವಿಬಿ–ಜಿ ರಾಮ್–ಜಿ ಯೋಜನೆಯಡಿ ಹೆಚ್ಚಿನ ಮಾನವ ದಿನಗಳನ್ನು ಸೃಜಿಸಿ, ಅರ್ಹ ಕೂಲಿಕಾರ್ಮಿಕರಿಗೆ ಉದ್ಯೋಗ ಒದಗಿಸುವಂತೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಬಬಲೇಶ್ವರ ತಾಲೂಕಿನ ಹಲಗಣಿ ಗ್ರಾಮ ಪಂಚಾಯಿತಿಗೆ ದಿಢೀರ್ ಭೇಟಿ ನೀಡಿದ ಅವರು, ವಿಬಿ–ಜಿ ರಾಮ್–ಜಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳು ಹಾಗೂ ಪ್ರಗತಿಯನ್ನು ಪರಿಶೀಲಿಸಿದರು.ವಿ.ಜಿ. ರಾಮ್ ಜಿ. ಯೋಜನೆಯಡಿ ಪ್ರಗತಿಯಲ್ಲಿರುವ ಕಾಮಗಾರಿಗಳು ಹಾಗೂ ಉದ್ಯೋಗ ಸೃಜನೆಯ ಕುರಿತು ಪ್ರಗತಿ ಪರಿಶೀಲನೆ ನಡೆಸಿದರು.ಈ ವೇಳೆ ಕೆಲವು ಗ್ರಾಮ ಪಂಚಾಯಿತಿಗಳಲ್ಲಿ ೧೦೦ ಕ್ಕಿಂತ ಕಡಿಮೆ ಸಂಖ್ಯೆಯ ಕೂಲಿಕಾರರು ಉದ್ಯೋಗದಲ್ಲಿ ತೊಡಗಿಸಿಕೊಂಡಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದರು.ಬಳಿಕ ಬೋಳಚಿಕ್ಕಲಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾತ್ರಾಳ ಕೆರೆಯ ಪುನಶ್ಚೇತನ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ ಸಿಇಒ ಅವರು,…

Read More

ಉದಯರಶ್ಮಿ ದಿನಪತ್ರಿಕೆ ​ವಿಜಯಪುರ: ಈದ್-ಮಿಲಾದ್ ಹಿನ್ನೆಲೆಯಲ್ಲಿ ನಗರದಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಆ. ೨೫ ಮತ್ತು ೨೬ರಂದು ವಿಜಯಪುರ ನಗರ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಆದೇಶ ಹೊರಡಿಸಿದ್ದಾರೆ. ಆಗಸ್ಟ್ ೨೫ರ ಬೆಳಿಗ್ಗೆ ೬ ಗಂಟೆಯಿಂದ ಆ. ೨೬ರ ಮಧ್ಯರಾತ್ರಿ ೧೨ ಗಂಟೆಯವರೆಗೆ ಮದ್ಯ ಮಾರಾಟವನ್ನು ವಿಜಯಪುರ ನಗರದಲ್ಲಿ ನಿಷೇಧಿಸಲಾಗಿದೆ.ಈದ್-ಮಿಲಾದ್ ಪ್ರಯುಕ್ತ ನಗರದ ಪ್ರಮುಖ ರಸ್ತೆಗಳಲ್ಲಿ ಬೃಹತ್ ಮೆರವಣಿಗೆಗಳು ಜರುಗಲಿವೆ. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಕರ್ನಾಟಕ ಅಬಕಾರಿ ಕಾಯ್ದೆ ೧೯೬೫ರ ಕಲಂ ೨೧ರ ಅನ್ವಯ ಸಾರಾಯಿ ಸೇರಿದಂತೆ ಎಲ್ಲಾ ಮಾದರಿಯ ಮದ್ಯ ಮಾರಾಟ, ಸಂಗ್ರಹಣೆ ಹಾಗೂ ಹಂಚಿಕೆಯನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ನಿಷೇಧಾಜ್ಞೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರದಲ್ಲಿ ರಾಜಕೀಯ ಪಕ್ಷ ಪ್ರತಿನಿಧಿಗಳ ಸಭೆ ನಡೆಸಿದ ಜಿಲ್ಲಾಧಿಕಾರಿ ಡಾ.ಆನಂದ್ ಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದಂತೆ ಮನೆ-ಮನೆ ಸಮೀಕ್ಷೆ ಹಾಗೂ ಪರಿಶೀಲನೆ ಕಾರ್ಯ ಕೈಗೊಂಡು ಸೋಮವಾರ ಅಂತಿಮ ಕರಡು ಪ್ರತಿ ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳಿದ್ದಲ್ಲಿ ರಾಜಕೀಯ ಪಕ್ಷಗಳವರು ಸೆ. ೨೩ರೊಳಗಾಗಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ತಿಳಿಸಿದರು.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಪೂರ್ಣಗೊಂಡಿದೆ. ಕರಡು ಮತದಾರರ ಪಟ್ಟಿಯನ್ನು ಜಿಲ್ಲೆಯ ಎಲ್ಲಾ ತಹಶೀಲ್ದಾರ್ ಕಚೇರಿಗಳು, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯತಿಯಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ ತಿಳಿಸಿದರು. ಮತದಾರರು ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಕರಡು ಪಟ್ಟಿಯನ್ನು ಪರಿಶೀಲಿಸಬಹುದಾಗಿದೆ. ಒಂದು ವೇಳೆ ಯಾವುದೇ…

Read More

ವಿಜಯಪುರದಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದ್ರಿ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗಟ್ಟುವ ನಿಟ್ಟಿನಲ್ಲಿ ಜಾರಿಯಲ್ಲಿರುವ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧಿಸುವಿಕೆ ಮತ್ತು ನಿವಾರಿಸುವಿಕೆ) ಕಾಯ್ದೆ–೨೦೧೩ರ ಕುರಿತು ಪ್ರತಿಯೊಬ್ಬರೂ ಸಮಗ್ರ ಅರಿವು ಹೊಂದಿರಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌದ್ರಿ ಹೇಳಿದರು. ಜಿಲ್ಲಾಡಳಿತ,ಜಿಲ್ಲಾ ಪಂಚಾಯಿತಿ,ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ,ಕರ್ನಾಟಕ ರಾಜ್ಯ ಮಹಿಳಾ ಆಯೋಗ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಸ್ಥಳೀಯ ಮತ್ತು ಆಂತರಿಕ ದೂರು ನಿವಾರಣಾ ಸಮಿತಿ ಅಧ್ಯಕ್ಷರಿಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಮಹಿಳೆಯರು ಕೆಲಸದ ಸ್ಥಳದಲ್ಲಿ ಯಾವುದೇ ರೀತಿಯ ದೌರ್ಜನ್ಯ, ಕಿರುಕುಳ ಅಥವಾ ಅನ್ಯಾಯವನ್ನು ಸಹಿಸಿಕೊಂಡು ಮೌನವಾಗಿರಬಾರದು. ಸಮಸ್ಯೆ ಎದುರಾದ ಸಂದರ್ಭದಲ್ಲಿ ಕಾಯ್ದೆಯಡಿ ರಚಿಸಲಾಗಿರುವ ಆಂತರಿಕ…

Read More

ಯುವ ಭಾರತ ಸಂಸ್ಥಾಪಕ ಅಧ್ಯಕ್ಷ ಹಾಗೂ ವುಶು ಸಂಸ್ಥೆ ಅಧ್ಯಕ್ಷ ಉಮೇಶ ಕಾರಜೋಳ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಆತ್ಮರಕ್ಷಣೆ, ಶಿಸ್ತು, ಏಕಾಗ್ರತೆ ಮೂಡಿಸುವಲ್ಲಿ ವುಶು ಬಹುಮುಖ್ಯವಾದ ಕ್ರೀಡೆಯಾಗಿದೆ ಎಂದು ಯುವ ಭಾರತ ಸಂಸ್ಥಾಪಕ ಅಧ್ಯಕ್ಷ ಹಾಗೂ ವುಶು ಸಂಸ್ಥೆ ಅಧ್ಯಕ್ಷ ಉಮೇಶ ಕಾರಜೋಳ ಹೇಳಿದರು.ವಿಜಯಪುರದ ಡಾ.ಬಿ.ಆರ್. ಅಂಬೇಡ್ಕರ ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾ ವುಶು ಸಂಸ್ಥೆ, ಶ್ರೀಮತಿ ಮೀನಾಕ್ಷಿ ಕಲ್ಲೂರ ಮಹಿಳಾ ಮಹಾವಿದ್ಯಾಲಯದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಖೇಲೋ ಇಂಡಿಯಾ ಅಸ್ಮಿತಾ ಮಹಿಳಾ ವುಶು ಕ್ರೀಡಾಕೂಟಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿ ಮಾತನಾಡಿದ ಅವರು, ವುಶು ಇಂದು ಪ್ರಪಂಚದಾದ್ಯಂತ ಜನಪ್ರಿಯತೆ ಪಡೆದುಕೊಂಡಿದೆ, ವಿಜಯಪುರ ಭಾಗದಲ್ಲಿಯೂ ಈ ಕ್ರೀಡೆಯಲ್ಲಿ ಅನೇಕರು ಪರಿಣಿತರಾಗಿದ್ದಾರೆ, ಹೀಗಾಗಿ ಅವರಿಗೆ ಪ್ರೋತ್ಸಾಹದ ವೇದಿಕೆ ಕಲ್ಪಿಸಬೇಕಿದೆ, ಈ ಪ್ರೋತ್ಸಾಹದ ವೇದಿಕೆ ಕಲ್ಪಿಸುವುದರಿಂದ ಅವರು ಈ ಕ್ರೀಡೆಯಲ್ಲಿ ಪಾರಂಗತವಾಗಲು ಸಾಧ್ಯವಾಗುತ್ತದೆ, ನಮ್ಮ ಕ್ರೀಡಾ ಪ್ರತಿಭೆಗಳು ರಾಷ್ಟç, ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಬೇಕು ಎಂದು ಕರೆ ನೀಡಿದರು.ಭಾರತದಲ್ಲಿ ವುಶು ಕ್ರೀಡೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಹಲವಾರು ಕಡೆಗಳಲ್ಲಿ ಈ…

Read More