Author: editor.udayarashmi@gmail.com

ನಮ್ಮನ್ನು ಬಿಟ್ಟು ಹೋಗಬೇಡಿ’ ಎಂದು ಅಂಗಲಾಚಿ ಕಣ್ಣೀರಿಟ್ಟ ವಿದ್ಯಾರ್ಥಿಗಳು! ಉದಯರಶ್ಮಿ ದಿನಪತ್ರಿಕೆ ಸಂಬರಗಿ: ಶಿಕ್ಷಕ ಮತ್ತು ವಿದ್ಯಾರ್ಥಿಗಳ ನಡುವಿನ ಸಂಬಂಧ ಕೇವಲ ಪಾಠಕ್ಕೆ ಸೀಮಿತವಲ್ಲ, ಅದೊಂದು ಅವಿನಾಭಾವ ಸಂಬಂಧ ಎಂಬುದಕ್ಕೆ ತಾಲೂಕಿನ ಸಂಬರಗಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆ ಸಾಕ್ಷಿಯಾಗಿದೆ.ಕಳೆದ 10 ವರ್ಷಗಳಿಂದ ಇದೇ ಶಾಲೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ, ನಲಿ-ಕಲಿ ಮಾದರಿಯ ಮೂಲಕ ಮಕ್ಕಳಿಗೆ ಅಚ್ಚುಮೆಚ್ಚಿನ ಗುರುವಾಗಿದ್ದ ಶಶಿಕಲಾ ಬಜಂತ್ರಿ ಅವರ ವರ್ಗಾವಣೆಯ ಸಂದರ್ಭದಲ್ಲಿ ಶಾಲೆಯಲ್ಲಿ ಭಾವನಾತ್ಮಕ ದೃಶ್ಯಗಳು ಕಂಡುಬಂದವು. ಶಶಿಕಲಾ ಅವರು ಗಡಿಭಾಗದ ಈ ಹಳ್ಳಿಯ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಮಕ್ಕಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಿಕೊಟ್ಟಿದ್ದರು.ಕೌಟುಂಬಿಕ ಕಾರಣಗಳಿಗಾಗಿ ಶಿಕ್ಷಕಿಯ ವರ್ಗಾವಣೆ ಅನಿವಾರ್ಯವಾಗಿದ್ದರೂ, ನೆಚ್ಚಿನ ಶಿಕ್ಷಕಿ ಶಾಲೆಯನ್ನು ಬಿಟ್ಟು ಹೋಗುತ್ತಿದ್ದಾರೆ ಎಂಬ ವಿಷಯ ತಿಳಿಯುತ್ತಿದ್ದಂತೆಯೇ ಪುಟಾಣಿ ಮಕ್ಕಳು “ನಮ್ಮನ್ನು ಬಿಟ್ಟು ಹೋಗಬೇಡಿ” ಎಂದು ಶಿಕ್ಷಕಿಯನ್ನು ಅಪ್ಪಿಕೊಂಡು ಕಣ್ಣೀರಿಟ್ಟರು. ಮಕ್ಕಳ ಪ್ರೀತಿಯನ್ನು ಕಂಡು ಶಿಕ್ಷಕಿ ಶಶಿಕಲಾ ಅವರು ಕೂಡ ಭಾವುಕರಾಗಿ ಕಣ್ಣೀರು ಹಾಕಿದರು.ಕಪ್ಪು ಹಲಗೆಯ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆಯ ಕೌಮಾರಭೃತ್ಯ ವಿಭಾಗದ ವತಿಯಿಂದ ಮಕ್ಕಳಲ್ಲಿ ಕಂಡುಬರುವ ಚಂಚಲತೆ ಹಾಗೂ ಅತೀ ಚಟುವಟಿಕೆ (ADHD) ಕುರಿತು ಉಚಿತ ತಪಾಸಣೆ, ಪಂಚಕರ್ಮ ಚಿಕಿತ್ಸೆ ಮತ್ತು ಔಷಧ ವಿತರಣೆ ಸೌಲಭ್ಯ ಹಾಗೂ ಮಕ್ಕಳಲ್ಲಿ ಕಾಣಿಸುವ ಚರ್ಮರೋಗಗಳಿಗೆ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ ಏಪ್ರಿಲ್ 15 ರಿಂದ ಏಪ್ರಿಲ್ 18ರ ವರೆಗೆ ನಡೆಯಲಿದೆ.ಬುಧವಾರದಿಂದ ಶನಿವಾರದ ವರೆಗೆ 4 ದಿನ ಈ ಶಿಬಿರ ಆಯೋಜಿಸಲಾಗಿದೆ. ಮಕ್ಕಳಲ್ಲಿ ಕಂಡು ಬರುವ ಲಕ್ಷಣಗಳಾದ ಒಂದೇ ಜಾಗದಲ್ಲಿ ಶಾಂತವಾಗಿ ಕುಳಿತುಕೊಳ್ಳಲು ಆಗದಿರುವುದು, ಹೆಚ್ಚು ಓಡಾಡುವುದು ಅಥವಾ ಮಾತನಾಡುವುದು, ತನ್ನ ಸರದಿ ಕಾಯದೆ ಮಾತನಾಡುವುದು, ಚಂಚಲತೆ, ಗಮನ ಕೊರತೆ, ಪಾಠಗಳಲ್ಲಿ ಗಮನ ಕೊಡಲಾಗದಿರುವುದು, ಹೋಂವರ್ಕ್ ಪೂರ್ಣಗೊಳಿಸದಿರುವುದು, ದಿನನಿತ್ಯದ ಕೆಲಸಗಳಲ್ಲಿ ಏಕಾಗ್ರತೆ ಕೊರತೆ ಇತ್ಯಾದಿ ಸಮಸ್ಯೆಗಳನ್ನು ಎದುರಿಸುತ್ತಿರುವ ಮಕ್ಕಳ ಪೋಷಕರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಬಿ.ಎಲ್.ಡಿ.ಇ. ಸಂಸ್ಥೆಯ ಆಯುರ್ವೇದ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಂಜಯ ಕಡ್ಲಿಮಟ್ಟಿ ಅವರು…

Read More

ರಾಜ್ಯದಲ್ಲೇ ದೊಡ್ಡ ಮಟ್ಟದ ಅಕ್ರಮ ಬಯಲು : ಉನ್ನತ ಮಟ್ಟದ ತನಿಖಾ ತಂಡ ರಚಿಸಿ ತಪ್ಪಿತಸ್ಥರ ಮೇಲೆ ತ್ವರಿತವಾಗಿ ಕ್ರಮಕೈಗೊಳ್ಳಲು ಸಂಸದ ರಮೇಶ ಜಿಗಜಿಣಗಿ ಆಗ್ರಹ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ‘ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಮಾನ್ಯತೆ ನವೀಕರಣ ಹಾಗೂ ಪ್ರಥಮ ಮಾನ್ಯತೆ ನೀಡುವಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದರೂ ಈವರೆಗೆ ಕಠಿಣ ಕ್ರಮ ಕೈಗೊಳ್ಳದಿರುವ ಕಾಂಗ್ರೆಸ್ ಸರ್ಕಾರದ ಜೀವಂತಿಕೆ ಬಗ್ಗೆ ಅನುಮಾನ ಮೂಡುತ್ತಿದೆ ಎಂದು ಸಂಸದ ರಮೇಶ ಜಿಗಜಿಣಗಿ ಆರೋಪಿಸಿದ್ದಾರೆ.ಈ ಕುರಿತು ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಿದ ಅವರು, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ನಡೆದಿರುವ ಅಕ್ರಮದ ಕುರಿತು ರಾಜ್ಯಮಟ್ಟದಲ್ಲಿ ಚರ್ಚೆಯಾಗುತ್ತಿದ್ದರೂ ಈವರೆಗೆ ಸಂಬಂಧಿಸಿದ ಅಧಿಕಾರಿ ಹಾಗೂ ಸಿಬ್ಬಂದಿ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗಿಲ್ಲ. ಕೇವಲ 14 ಸಿಬ್ಬಂದಿಯನ್ನು ಅನ್ಯ ಕಡೆ ನಿಯೋಜನೆಗೊಳಿಸಿದ್ದು ಬಿಟ್ಟರೆ ಪ್ರಕರಣದ ಸಂಪೂರ್ಣ ತನಿಖೆ ಆಧರಿಸಿ ಕಠಿಣ ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿರುವುದನ್ನು ಗಮನಿಸಿದರೆ ಅಕ್ರಮದಲ್ಲಿ ರಾಜ್ಯ ಸರ್ಕಾರದ ಕೈವಾಡ…

Read More

ಜಿಲ್ಲೆಯ ೨೬ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ದೂರುಗಳು | ಸಿಎಐಆರ್ ಪೋರ್ಟ್ಲ್ ಬಲ ಮೂಲಕ ಮೊಬೈಲ್ಗಳ ಪತ್ತೆ | ಎಸ್ಪಿ ಲಕ್ಷ್ಮಣ ನಿಂಬರಗಿ ಸುದ್ದಿಗೋಷ್ಠಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಸಿಇಐಆರ್ ಪೋರ್ಟ್ಲ್ ಬಲದ ಮೂಲಕ ಕಳ್ಳತನವಾಗಿರುವ ಮೊಬೈಲ್ ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ವಿವಿಧ ಮೊಬೈಲ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಾಚರಣೆ ನಡೆಸಿ ೩೪೦ ಮೊಬೈಲ್ಗಳನ್ನು ಜಪ್ತು ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಜಿಲ್ಲೆಯ ೨೬ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ದೂರುಗಳನ್ನು ಆಧರಿಸಿ ಮೊಬೈಲ್ ಪತ್ತೆ ಹಚ್ಚಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ ಹೇಳಿದರು.ಈ ಕುರಿತು ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ವಿವರಣೆ ನೀಡಿದ ಅವರು, ಮೊಬೈಲ್ ಕಳ್ಳತನ ಪ್ರಕರಣಗಳು ಇತ್ತೀಚಿಗೆ ಹೆಚ್ಚುತ್ತಿದ್ದು, ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಸೆಂಟ್ರಲ್ ಇಕ್ಯೂಪಮೆಂಟ್ ಐಡೆಂಟಿಟಿ ರಜಿಸ್ಟ್ರರ್ ದೂರ ಸಂಪರ್ಕ ಇಲಾಖೆ ನಿರ್ಮಿಸಿದ ಡಿಜಿಟಲ್ ವ್ಯವಸ್ಥೆಯಾಗಿದ್ದು, ಮೊಬೈಲ್ ಕಳೆದು ಹೋದಾಗ ಟ್ರ್ಯಾಕ್, ಬ್ಲಾಕ್ ಹಾಗೂ ರಿಕವರಿ ಮಾಡಲು ಸಹಾಯಕವಾಗಿದೆ, ಈ ತಂತ್ರಾಶ ಆಧರಿಸಿ ೩೪೦ ಮೊಬೈಲ್ಗಳನ್ನು…

Read More

ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಸದ್ಯಕ್ಕೆ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿಲ್ಲ. ಇಂಡಿ ಹಾಗೂ ಚಡಚಣ ಭಾಗದಲ್ಲಿ ನೀರಿನ ಸಮಸ್ಯೆ ತಲೆದೋರಬಹುದು. ಗ್ರಾಪಂ ಮಟ್ಟದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಈ ವಿಷಯದಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬೃಹತ್ ಮತ್ತು ಮಧ್ಯಮ‌ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿನ ಕುಡಿಯುವ ನೀರಿನ ನಿರ್ವಹಣೆ ಕುರಿತ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಬೇಸಿಗೆ ಸಂದರ್ಭದಲ್ಲಿ ಅಧಿಕಾರಿಗಳು ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಬೇಕು. ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಸಮಸ್ಯೆಗಳಿದ್ದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ತಾಲೂಕು ಕೇಂದ್ರಗಳಿಗೆ ತಕ್ಷಣ ತೆರಳಿ ಸಭೆ…

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: “ಕನ್ನಡ ರಂಗಭೂಮಿಗೆ ವಿಶಿಷ್ಟವಾದ ಪರಂಪರೆಯಿದೆ. ಇಂದಿನ ರಂಗಭೂಮಿ ದೃಶ್ಯಮಾಧ್ಯಮಗಳ ಪ್ರಭಾವದಿಂದ ಹಲವಾರು ಸಾಂಪ್ರದಾಯಿಕ ನಾಟಕಗಳು ನಶಿಸುತ್ತಿದ್ದರೂ, ಪ್ರೇಮಿಗಳ ಹೃದಯದಲ್ಲಿ ತನ್ನ ಸ್ಥಾನವನ್ನು ಉಳಿಸಿಕೊಂಡಿದೆ,” ಎಂದು ಶ್ರೀ ಬಿ.ಆರ್. ಬನಸೋಡೆ ಹೇಳಿದರು.ಬಿ.ಎಲ್.ಡಿ.ಇ ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯ (ಬಿ.ಇಡಿ), ಜಮಖಂಡಿಯಲ್ಲಿ ನಾಟಕ ಮತ್ತು ರಂಗಭೂಮಿ ಕಲೆ ವಿಭಾಗದ ವತಿಯಿಂದ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ “ಮಧುರಚೆನ್ನ” ಕುರಿತ ಏಕವ್ಯಕ್ತಿ ನಾಟಕವನ್ನು ಮೈಸೂರಿನ ಕವಿತಾ ಕಲಾ ತಂಡವು ಮನೋಜ್ಞವಾಗಿ ಪ್ರದರ್ಶಿಸಿತು.ಮಧುರಚೆನ್ನರ ಜೀವನ, ಸಾಹಿತ್ಯ ಸಾಧನೆ ಹಾಗೂ ಅವರ ಚಿಂತನೆಗಳನ್ನು ಪ್ರತಿಬಿಂಬಿಸುವಂತೆ ನಾಟಕ ರೂಪುಗೊಂಡಿದ್ದು, ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು. ನಾಟಕದ ಪ್ರಸ್ತುತಿಯನ್ನು ಮಧುರಚೆನ್ನರ ಮೊಮ್ಮಗ ಶ್ರೀ ಜಗದೇವ ಗಲಗಲಿ ಅವರು ಭಾವಪೂರ್ಣವಾಗಿ ನಿರ್ವಹಿಸಿದರು. ನಾಟಕದ ರಚನೆ ಮತ್ತು ನಿರ್ದೇಶನವನ್ನು ಶ್ರೀ ಗಣೇಶ ಅಮಿನಗಡ ಮಾಡಿದ್ದಾರೆ.ಕಾರ್ಯಕ್ರಮದಲ್ಲಿ ಮಾತನಾಡಿದ ಗಣೇಶ ಅಮಿನಗಡ ಅವರು, “ಮಧುರಚೆನ್ನರ ಬದುಕು–ಬರಹ ಇಂದಿನ ಪೀಳಿಗೆಗೆ ಮಾರ್ಗದರ್ಶನವಾಗುತ್ತದೆ. ಕನ್ನಡ ಭಾಷೆಯ ಅಭಿವೃದ್ಧಿಗೆ ಅವರ ಕೊಡುಗೆ ಅಪಾರವಾಗಿದೆ,” ಎಂದು ಹೇಳಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು…

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯ (ಬಿ.ಇಡಿ), ಜಮಖಂಡಿಯಲ್ಲಿ ನಾಟಕ ಮತ್ತು ರಂಗಭೂಮಿ ಕಲೆ ವಿಭಾಗದ ಅಡಿಯಲ್ಲಿ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮವಾಗಿ “ಮಧುರಚೆನ್ನ” ಕುರಿತ ಏಕವ್ಯಕ್ತಿ ನಾಟಕ ಪ್ರದರ್ಶನ ಭರ್ಜರಿಯಾಗಿ ನಡೆಯಿತು.ಮೈಸೂರಿನ ಕವಿತಾ ಕಲಾ ತಂಡವು 20ನೇ ಶತಮಾನದ ಪ್ರಸಿದ್ಧ ಕವಿ ಮಧುರಚೆನ್ನ ಅವರ ಜೀವನ ಮತ್ತು ಸಾಹಿತ್ಯ ಸಾಧನೆಯನ್ನು ಆಧರಿಸಿದ ಈ ನಾಟಕವನ್ನು ಅತ್ಯಂತ ಮನೋಜ್ಞವಾಗಿ ಪ್ರದರ್ಶಿಸಿತು. ನಾಟಕದ ಪ್ರಸ್ತುತಿಯನ್ನು ಮಧುರಚೆನ್ನ ಅವರ ಮೊಮ್ಮಗನಾದ ಜಗದೇವ ಗಲಗಲಿ ಅವರು ಭಾವಪೂರ್ಣವಾಗಿ ನಿರ್ವಹಿಸಿ ಪ್ರೇಕ್ಷಕರ ಮನತನಿಸಿತು.ಈ ನಾಟಕದ ರಚನೆ ಮತ್ತು ನಿರ್ದೇಶನವನ್ನು ಗಣೇಶ ಅಮಿನಗಡ ಅವರು ಸಮರ್ಥವಾಗಿ ಮಾಡಿದ್ದು, ಸಂಗೀತ ಸೇವೆಯನ್ನು ಬಿ.ಆರ್. ಬನಸೋಡೆ ಅವರು ನೀಡಿದರು. ನಾಟಕದ ಪ್ರತಿಯೊಂದು ಅಂಗವೂ ಪ್ರೇಕ್ಷಕರಿಗೆ ಆಕರ್ಷಕ ಅನುಭವವನ್ನು ನೀಡಿತು.

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ಬೇಸಿಗೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಹೆಚ್ಚಿನ ಒತ್ತು ನೀಡಬೇಕು. ಯಾವುದೇ ಅಡೆತಡೆ ಇಲ್ಲದೆ ನೀರು ಪೂರೈಸಲು ಗಮನ ಹರಿಸಬೇಕು. ಬೇಸಿಗೆ ಮುಗಿಯುವವರೆಗೆ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳು ತಮ್ಮ ತಮ್ಮ ಕೇಂದ್ರ ಸ್ಥಾನದಲ್ಲಿದ್ದು ಕುಡಿಯುವ ನೀರಿನ ಸಮಸ್ಯೆ ಬಾರದಂತೆ ನೋಡಿಕೊಳ್ಳಬೇಕು. ಸಾರ್ವಜನಿಕರ ದೂರುಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಕಾರ್ಯನಿರ್ವಾಹಕ ಅಧಿಕಾರಿಗಳಾದ ಅಶೋಕಕುಮಾರ ರಾಠೋಡ ರವರು ಹೇಳಿದರು.ಗುರುವಾರದಂದು ರೇವತಗಾಂವ ಗ್ರಾಮದ ಗ್ರಾಮ ಪಂಚಾಯತ ಕಾರ್ಯಾಲಯಕ್ಕೆ ಧಿಡೀರ ಭೇಡಿ ನೀಡಿ ಮಾತನಾಡಿದ ಅವರು. ಲಕ್ಷಾಂತರ ರೂ.ಗಳ ವೆಚ್ಚಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ಇದ್ದರೂ ಸಹ ರೇವತಗಾಂವ, ಹಾಲಳ್ಳಿ ಹಾಗೂ ಶಿರಾಡೋಣ ಗ್ರಾಮಗಳಲ್ಲಿ ಜನರ ಬಳಕೆಗೆ ಉಪಯೋಗವಿಲ್ಲದಂತಾಗಿದೆ. ಸಂಬಂಧಪಟ್ಟ ಗುತ್ತಿಗೆದಾರರು ಶುದ್ಧ ಕುಡಿಯುವ ನೀರಿನ ಘಟಕಗಳು ಹಸ್ತಾಂತರವನ್ನು ಮಾಡಿದ್ದರೂ ಅವುಗಳನ್ನು ಸಮಪರ್ಕವಾಗಿ ನಿರ್ವಹಣೆ ಮಾಡುವಲ್ಲಿ ವಿಫಲರಾಗಿದ್ದೀರಿ? ತಕ್ಷಣವೇ ದುರಸ್ಥಿಗೊಳಿಸಿ ಶುದ್ಧ ಕುಡಿಯುವ ನೀರನ್ನು ಸಾರ್ವಜನಿಕರ ಬಳಕೆಗೆ ಅನುಕೂಲ ಮಾಡಿಕೊಡಿ ಎಂದು ಸೂಚಿಸಿದರು.ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಲಭ್ಯವಿರುವ ಕುಡಿಯುವ ನೀರಿನ ಮೂಲಗಳನ್ನು ಪರಿಶೀಲಿಸಿ.…

Read More

ಉದಯರಶ್ಮಿ ದಿನಪತ್ರಿಕೆ ಆಲಮೇಲ: ತಾಲೂಕಿನ ಕಡಣಿ ಗ್ರಾಮದಲ್ಲಿ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಈರಮ್ಮ ಬಸವರಾಜ್ ಪಡಶೆಟ್ಟಿ ಹಾಗೂ ಬಸವರಾಜ ಪಡಶೆಟ್ಟಿ ಅವರ ಸುಪುತ್ರಿ ಕುಮಾರಿ ಐಶ್ವರ್ಯ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ.90 ಪ್ರತಿಶತ ಫಲಿತಾಂಶ ಪಡೆಯುವ ಮೂಲಕ ಉತ್ತಮ ಸಾಧನೆ ಮಾಡಿದ್ದಾಳೆ.ಕಡುಬಡತನದಲ್ಲಿ ಜನಿಸಿದ ಐಶ್ವರ್ಯ ಅವರ ತಂದೆ ಬಸವರಾಜ ಕೂಲಿ ಕಾರ್ಮಿಕರಾಗಿ ಕೆಲಸ ನಿರ್ವಹಿಸುತ್ತಾರೆ. ಇವರಿಗೆ ಸ್ವಂತ ಜಮೀನು ಕೂಡ ಇರುವುದಿಲ್ಲ. ಇಂಥ ಕಷ್ಟದ ಕುಟುಂಬದಲ್ಲಿ ಜನಿಸಿರುವ ಐಶ್ವರ್ಯ ಕಷ್ಟಪಟ್ಟು ಸಾಧನೆ ಮಾಡಿ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರರಾಗಿದ್ದಾಳೆಈ ವಿದ್ಯಾರ್ಥಿನಿಯು 1 ನೇ ತರಗತಿಯಿಂದ 7ನೇ ತರಗತಿವರೆಗೆ ಬಡ ರೇಖೆ ಗಳಿಗಿಂತ ಕಡಿಮೆ ಇರುವ ವಿದ್ಯಾರ್ಥಿಗಳ ಆಯ್ಕೆಯಲ್ಲಿ ಆರ್ ಟಿ ಇ ಆಯ್ಕೆಯಾಗಿ ಆಲಮೇಲ ಆಯ್. ಕೆ .ರಾಯಲ್ ಶಾಲೆಯಲ್ಲಿ ವಿದ್ಯಾಭ್ಯಾಸ ಪಡೆದು 8 ತರಗತಿಯಿಂದ 10ನೇ ತರಗತಿಯವರೆಗೆ ಸಿಂದಗಿ ತಾಲೂಕಿನ ಗುಬ್ಬೆ ವಾಡ ಗ್ರಾಮದ ಮುರಾರ್ಜಿ ವಸತಿ ಶಾಲೆಯಲ್ಲಿ ವಿದ್ಯಾಭ್ಯಾಸ ಪಡೆದು ಪಿ ಯು ಸಿ ಅಭ್ಯಾಸವನ್ನು…

Read More

ಲೇಖನ- ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿಗದಗ್ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಪ್ರತಿ ಸಮಸ್ಯೆಗೂ ಒಂದು ಪರಿಹಾರವಿದೆ ಎಂಬ ವಿಶ್ವಾಸ ಮನುಷ್ಯನಲ್ಲಿ ಮೂಡಲು ಕಾರಣ ಆತನ ಜ್ಞಾನದ ಬುನಾದಿ ಮತ್ತು ಆತ ತನ್ನ ಕೆಲಸದಲ್ಲಿ ಇಟ್ಟಿರುವ ನಂಬಿಕೆ.ಮನುಷ್ಯನಿಗೆ ಆತ್ಮವಿಶ್ವಾಸ ಬರುವುದು ಆತ ಸಮಸ್ಯೆ ಗಳನ್ನು ನೋಡುವ ಮತ್ತು ಅವುಗಳನ್ನು ಎದುರಿಸುವ ರೀತಿಯಲ್ಲಿ. ಸಮಸ್ಯೆಯನ್ನು ಕಂಟಕ ಎಂದು ನೋಡಿದಾಗ ಮನುಷ್ಯ ಬೇಸರಕ್ಕೊಳ್ಳಗಾಗುತ್ತಾನೆ ಬದಲಾಗಿ ಸಮಸ್ಯೆಯನ್ನು ಸವಾಲಾಗಿ ಭಾವಿಸಿ ಅದರ ಪರಿಹಾರಗಳನ್ನು ಯೋಚಿಸಿದಾಗ ಸಮಸ್ಯೆಗಳು ಸುಲಭವಾಗಿ ಪರಿಹರಿಸಲ್ಪಡುತ್ತವೆ. ಮತ್ತೆ ಕೆಲ ಜನರು ಪರಿಹಾರದಲ್ಲೂ ಸಮಸ್ಯೆಗಳನ್ನು ಹುಡುಕುವರು.ನಮ್ಮಲ್ಲಿರುವ ಜ್ಞಾನ ಮತ್ತು ನಾವು ವಸ್ತು ವಿಷಯಗಳಲ್ಲಿ ಹೊಂದಿರುವ ವಿಶ್ವಾಸ ಮತ್ತು ಅವುಗಳನ್ನು ಈಡೇರಿಸುವ ನಿಟ್ಟಿನಲ್ಲಿ ನಾವು ಕೈಗೊಳ್ಳುವ ಚಟುವಟಿಕೆಗಳು ನಮಗೆ ಸವಾಲನ್ನು ಪರಿಹರಿಸಲು ಶಕ್ತಿಯನ್ನು ನೀಡುತ್ತವೆ.ಆದರೆ ಸಂತೋಷದ ವಿಷಯವೆಂದರೆ ಇತ್ತೀಚಿನ ದಿನಗಳಲ್ಲಿ ಎಲ್ಲರೂ ಸಮಸ್ಯೆಗಳಿಗೆ ಪರಿಹಾರವನ್ನು ಹುಡುಕುವ ಮತ್ತು ಅವುಗಳನ್ನು ಪರಿಹರಿಸಿಕೊಳ್ಳುವ ನಿಟ್ಟಿನಲ್ಲಿ ಯಶಸ್ವಿಯಾಗುತ್ತಿದ್ದಾರೆ. ಪ್ರತಿಯೊಂದು ಸಮಸ್ಯೆಗೂ ಪರಿಹಾರ ಇದ್ದೇ ಇದೆ ಎಂಬ ನಂಬಿಕೆ ಜನರಲ್ಲಿ ಕ್ರಮೇಣ ಹೆಚ್ಚಾಗುತ್ತಿದೆ.…

Read More