Author: editor.udayarashmi@gmail.com

ಬಾಳೆಹೊನ್ನೂರು ರಂಭಾಪುರಿ ಪೀಠದ ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಮಾನವ ಕಲ್ಯಾಣ ಹಾಗೂ ಇಡೀ ಸಮಾಜ ಒಂದಾಗಿ ಬಾಳಬೇಕು ಎಂಬುವುದೇ ಪಂಚಪೀಠಗಳ ಆಶಯವಾಗಿದೆ. ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಭಗವತ್ಪಾದರು ಹೇಳಿದರು.ಪಟ್ಟಣದ ಜಡಿಮಠ ದ್ವಾರಬಾಗಿಲು ನಿರ್ಮಾಣಕ್ಕೆ ಗುರುವಾರ ಚಾಲನೆ ನೀಡುವುದರ ಮೂಲಕ ಆಶೀರ್ವಚನ ನೀಡಿ ಮಾತನಾಡಿದರು. ದೇವರಹಿಪ್ಪರಗಿ ಪಟ್ಟಣದಲ್ಲಿ ಐದು ಮಠಗಳಿದ್ದು ಅವುಗಳ ಪೀಠಾಧ್ಯಕ್ಷರ ನೇತೃತ್ವದಲ್ಲಿ ಇಲ್ಲಿ ವೀರಶೈವ ಧರ್ಮ, ಪರಂಪರೆ ಬೆಳವಣಿಗೆಯಲ್ಲಿ ನಿರತವಾಗಿವೆ. ಅವರ ಮಾರ್ಗದರ್ಶನದಲ್ಲಿ ಪಂಚಪೀಠಾಧಿಪತಿಗಳಿಗೆ ಸಂದರ್ಭನುಸಾರವಾಗಿ ಗೌರವ ನೀಡಲಾಗಿದೆ. ಇಂದಿನ ದಿನಮಾನಗಳಲ್ಲಿ ಬಹಳಷ್ಟು ಕಡೆ ಧರ್ಮ, ಪರಂಪರೆ, ಆದರ್ಶಗಳನ್ನು ದೂರತಳ್ಳಿ ಸ್ವಾರ್ಥಕ್ಕಾಗಿ ಸಮಾಜವನ್ನು ಒಡೆಯುವಂತ ಮತ್ತು ಜನರ ಭಾವನೆಗಳನ್ನು ಕೆಡಿಸುವಂತ ಕೆಲಸ ನಡೆಯುತ್ತಿದೆ. ಅದಕ್ಕೆ ಯಾರು ಅವಕಾಶ ಕೊಡದೇ ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎನ್ನುವಂತೆ ಬಾಳಬೇಕಾಗಿದೆ. ಮಾನವ, ಮಾನವೀಯ ಸಂಬಂಧಗಳನ್ನು ಬೆಸೆಯುವಂತ ಸಮಾಜ ಕಟ್ಟಬೇಕಾಗಿದೆ. ಎಲ್ಲರಿಗೂ ಶುಭವಾಗಲಿ ಎಂದರು.ಜಡಿಮಠ ಜಡಿಸಿದ್ಧೇಶ್ವರಶ್ರೀಗಳು ಮಾತನಾಡಿ,…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಮ ಸಮಾಜದ ಹರಿಕಾರ, ಎಲ್ಲರಿಗೂ ಸಮಬಾಳು ಎನ್ನುವ ತತ್ವದಲ್ಲಿ ಅಸ್ಪೃಶ್ಯತೆ ವಿರುದ್ಧ ಹೋರಾಟ ಮಾಡಿ ಜಗತ್ತಿನ ಶ್ರೇಷ್ಠ ಸಂವಿಧಾನ ನೀಡಿದ ಹೆಮ್ಮೆಯ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ಅಂಗವಾಗಿ ಇದೇ ದಿ. ೧೧ ರಿಂದ ೧೪ ರವರೆಗೆ ಅಂಬೇಡ್ಕರ್ ಹಬ್ಬ-೨೦೨೬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವೈದ್ಯ ಡಾ. ಬಾಬು ರಾಜೇಂದ್ರ ನಾಯಕ್ ಹೇಳಿದರು.ನಗರದ ಖಾಸಗಿ ಹೋಟೆಲನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಭಾರತದ ಸಂವಿಧಾನ ಜಗತ್ತಿನ ಶ್ರೇಷ್ಠ ಗ್ರಂಥ. ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಪ್ರತಿಯೊಬ್ಬರ ಮನೆ -ಮನಗಳಿಗೂ ತಲುಪಿಸಬೇಕು. ಅವರ ಜಯಂತಿ ಕೇವಲ ಕಾರ್ಯಕ್ರಮವಾಗದೆ ಅವರ ವಿಚಾರ ಧಾರೆಗಳನ್ನು, ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.ಬಾಬಾ ಸಾಹೇಬ್ ಅಂಬೇಡ್ಕರ್ ಕೇವಲ ಜಯಂತಿ ಆಚರಣೆಗೆ ಸಿಮಿತವಾಗಿಲ್ಲ ಅವರು ಸರ್ವ ವ್ಯಾಪಿ, ಆ ನಿಟ್ಟಿನಲ್ಲಿಯೇ ಅಂಬೇಡ್ಕರ್ ಜಯಂತಿ ಇದೊಂದು ಸಂಗಮವಾಗಿದೆ. ಬಸವ ಬುದ್ದ ಹಾಗೂ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಮೆಲಕು ಹಾಕುವ ವಿಶೇಷ ಕಾರ್ಯಕ್ರಮವೇ…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ತಾಲೂಕಿನ ಕುಬಕಡ್ಡಿ ಗ್ರಾಮದ ಹೊರವಲಯದ ಜಮೀನಿನಲ್ಲಿ ನೀರಿನ ಹೊಂಡದಲ್ಲಿ ಬಿದ್ದು ಯುವಕನೋರ್ವ ಮೃತಪಟ್ಟ ದಾರುಣ ಘಟನೆ ಗುರುವಾರ ನಡೆದಿದೆ.ಪಟ್ಟಣದ ಎರಡನೇ ವಾರ್ಡಿನ ನಿವಾಸಿಯಾದ ಈರಣ್ಣ ಸಂಗಪ್ಪ ಟಕ್ಕಳಕಿ (20) ಮೃತ ಯುವಕನಾಗಿದ್ದಾನೆ. ಕುಡಿಯುವ ನೀರು ತರಲು ತೆರಳಿದ್ದ ವೇಳೆ ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ ಪರಿಣಾಮ ಸಾವನ್ನಪ್ಪಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ.ಘಟನಾ ಸ್ಥಳಕ್ಕೆ ಕೊಲ್ಹಾರ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಎಸ್. ಎಸ್. ಪಿಯು ಕಾಲೇಜಿನ ಮೂರು ಜನ ವಿದ್ಯಾರ್ಥಿಗಳು ರಾಜ್ಯಕ್ಕೆ ದ್ವಿತೀಯ, ತೃತೀಯ ಮತ್ತು ನಾಲ್ಕನೇ ಸ್ಥಾನ ಪಡೆದಿದ್ದಾರೆ.ವಿದ್ಯಾರ್ಥಿನಿ ಸಾನಿಕಾ ಮೆಟಗಾರ ಕಲಾ ವಿಭಾಗದಲ್ಲಿ 595 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದರೆ, ಅಕ್ಷತಾ ಚವ್ಹಾಣ 594 ಅಂಕ ಪಡೆದು ರಾಜ್ಯಕ್ಕೆ ತೃತೀಯ ಹಾಗೂ ಯುವರಾಜ ಬಗಲಿ 593 ಅಂಕ‌ ಪಡೆದು ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದಿದ್ದಾರೆ.ವಿದ್ಯಾರ್ಥಿಗಳ ಈ ಸಾಧನೆಗೆ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಮತ್ತು ಸಚಿವ ಎಂ. ಬಿ. ಪಾಟೀಲ, ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ ಶಾಸಕ‌ ಸುನೀಲಗೌಡ ಪಾಟೀಲ, ಆಡಳಿತಾಧಿಕಾರಿ ಐ. ಎಸ್. ಕಾಳಪ್ಪನವರ, ಕಾಲೇಜಿನ ಪ್ರಾಚಾರ್ಯ ಜಿ. ಡಿ. ಅಕಮಂಚಿ ಮತ್ತು ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ. ಅಲ್ಲದೇ, ಅವರ ಮುಂದಿನ ಶಿಕ್ಷಣಕ್ಕೆ ಶುಭ ಹಾರೈಸಿದ್ದಾರೆ.

Read More

ಚಡಚಣದಲ್ಲಿ ನಡೆದ ಕಾರ್ಯಾಗಾರದಲ್ಲಿ ಮುಕ್ತ ಕೋರ್ಸಗಳ ಮಹತ್ವ ತಿಳಿಸಿದ ಡಾ.ಮಂಜುಳಾ ಉದಯರಶ್ಮಿ ದಿನಪತ್ರಿಕೆ ಚಡಚಣ: ವಿಜಯಪುರ ಜಿಲ್ಲೆಯ ಚಡಚಣದಲ್ಲಿರುವ ಶ್ರೀ ಸಂಗಮೇಶ್ವರ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ “ತರಗತಿಯ ಆಚೆಗೆ ಮುಕ್ತ ಕೋರ್ಸಗಳು” ಕುರಿತು ಒಂದು ದಿನದ ಕಾರ್ಯಾಗಾರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.ಮುಕ್ತ ಮತ್ತು ಹೊಂದಿಕೊಳ್ಳುವ ಶೈಕ್ಷಣಿಕ ವೇದಿಕೆಗಳ ಮೂಲಕ ಸಾಂಪ್ರದಾಯಿಕ ತರಗತಿಯನ್ನು ಮೀರಿ ಕಲಿಕೆಯ ಮಹತ್ವದ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಕಾರ್ಯಾಗಾರದ ಮುಖ್ಯ ಉದ್ದೇಶವಾಗಿತ್ತು.ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಡಾ. ಮಂಜುಳಾ (ಸಹಾಯಕ ಪ್ರಾಧ್ಯಾಪಕರು ಹಾಗೂ ಹಿರಿಯ ಗ್ರಂಥಪಾಲಕರು, ಬಿಎಲ್‌ಡಿಇ ಡಿಮ್ಡ್ ವಿಶ್ವವಿದ್ಯಾಲಯ, ವಿಜಯಪುರ)ಅವರು ಜ್ಯೋತಿ ಬೇಳಗಿಸುವದರ ಮೂಲಕ ಕಾರ್ಯಕ್ರಮಕ್ಕೆ ಚಾಲನೇ ನೀಡಿ ಮಾತನಾಡಿದ ಅವರು ಎಮ್‌ಓಓಸಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಆನ್‌ಲೈನ್ ಪ್ರಮಾಣಪತ್ರ ಕೋರ್ಸಗಳು ಹಾಗೂ ಕೌಶಲ್ಯ ಆಧಾರಿತ ಕಾರ್ಯಕ್ರಮಗಳ ಮಹತ್ವವನ್ನು ವಿವರಿಸಿದರು. ಡಿಜಿಟಲ್ ಸಂಪನ್ಮೂಲಗಳನ್ನು ಬಳಸಿಕೊಂಡು ಸ್ವಯಂ-ಗತಿಯ ಕಲಿಕೆಯಲ್ಲಿ ತೊಡಗಿಸಿಕೊಳ್ಳುವಂತೆ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.ಡಾ. ಎಸ್.ಎಸ್. ಚೋರಗಿ ತಮ್ಮ ಮುಖ್ಯ ಭಾಷಣದಲ್ಲಿ ಮುಕ್ತ ಕೋರ್ಸಗಳ ಸುಲಭ ಲಭ್ಯತೆ ಹಾಗೂ ಜಾಗತಿಕ…

Read More

ಕರ್ನಾಟಕ ಉಪಚುನಾವಣೆ | ಶಾಂತಿಯುತ ಮತದಾನ | ಆಡಳಿತಾರೂಢ ಕಾಂಗ್ರೆಸ್ ಎರಡೂ ಸ್ಥಾನಗಳನ್ನು ಉಳಿಸಿಕೊಳ್ಳಲು ಹೆಣಗಾಟ ಬೆಂಗಳೂರು: ಕರ್ನಾಟಕದ ವಿಧಾನಸಭಾ ಕ್ಷೇತ್ರಗಳಾದ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದ್ದು ಸಂಜೆ 5 ಗಂಟೆಯವರೆಗೆ ಶೇ. 60ಕ್ಕೂ ಹೆಚ್ಚು ಮತದಾನ ದಾಖಲಾಗಿದೆ. ಬಾಗಲಕೋಟೆಯಲ್ಲಿ ಶೇ. 65.68ರಷ್ಟು ಮತದಾನವಾಗಿದ್ದರೆ, ದಾವಣಗೆರೆ ದಕ್ಷಿಣದಲ್ಲಿ ಶೇ.63.04ರಷ್ಟು ಮತದಾನವಾಗಿದೆ.ಆಡಳಿತಾರೂಢ ಕಾಂಗ್ರೆಸ್ ಎರಡೂ ಸ್ಥಾನಗಳನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರೇ ಬಿಜೆಪಿ ಅವುಗಳನ್ನು ವಶಪಡಿಸಿಕೊಳ್ಳುವ ಮತ್ತು ನಾಯಕತ್ವಕ್ಕಾಗಿ ಆಂತರಿಕ ಹೋರಾಟದಲ್ಲಿ ಮುಳುಗಿರುವ ತನ್ನ ಪ್ರತಿಸ್ಪರ್ಧಿಗೆ ಹಿನ್ನಡೆಯನ್ನುಂಟುಮಾಡುವ ಗುರಿಯನ್ನು ಹೊಂದಿದೆ. ಹಿರಿಯ ಕಾಂಗ್ರೆಸ್ ಶಾಸಕರಾದ ಎಚ್ ವೈ ಮೇಟಿ (ಬಾಗಲಕೋಟೆ) ಮತ್ತು ಶಾಮನೂರು ಶಿವಶಂಕರಪ್ಪ (ದಾವಣಗೆರೆ ದಕ್ಷಿಣ) ಅವರ ನಿಧನದಿಂದಾಗಿ ಉಪಚುನಾವಣೆ ಘೋಷಣೆಯಾಗಿತ್ತು.ಬಾಗಲಕೋಟೆಯ ಸುಮಾರು 319 ಮತಗಟ್ಟೆಗಳಲ್ಲಿ ಒಟ್ಟು 2.59 ಲಕ್ಷಕ್ಕೂ ಹೆಚ್ಚು ಅರ್ಹ ಮತದಾರರು ಮತ ಚಲಾಯಿಸುವ ನಿರೀಕ್ಷೆಯಿದ್ದು, ಒಂಬತ್ತು ಅಭ್ಯರ್ಥಿಗಳು ಕಣದಲ್ಲಿದ್ದಾರೆ. ದಾವಣಗೆರೆ ದಕ್ಷಿಣದಲ್ಲಿ 284 ಮತಗಟ್ಟೆಗಳಲ್ಲಿ 2.31 ಲಕ್ಷಕ್ಕೂ ಹೆಚ್ಚು ಅರ್ಹ ಮತದಾರರು ಮತ ಚಲಾಯಿಸುವ…

Read More

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಅಮೋಘ ಸಾಧನೆ ಮಾಡಿದ ವಿಜಯಪುರದ ಎಕ್ಸಲಂಟ್ ವಿಜ್ಞಾನ ಪ.ಪೂ ಕಾಲೇಜು ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರಸಕ್ತ ಸಾಲಿನ ಬಹು ನಿರೀಕ್ಷಿತ ಪಿಯುಸಿ ದ್ವಿತೀಯ ವರ್ಷದ ಫಲಿತಾಂಶ ಪ್ರಕಟಗೊಂಡಿದ್ದು ವಿಜಯಪುರ ನಗರದ ಪ್ರತಿಷ್ಠಿತ ಎಕ್ಸಲಂಟ್ ಪದವಿ ಪೂರ್ವ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಪಡೆದುಕೊಳ್ಳುವ ಮೂಲಕ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ. ಅದರಲ್ಲಿ ಅನುಷ್ಕಾ ಮಹಿಶಾಳೆ ೬೦೦ ಕ್ಕೆ ೫೮೮ ಅಂಕಗಳನ್ನು ಪಡೆಯುವುದರೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನಪಡೆದರೆ, ನಿಖಿಲ ಕಿತ್ತೂರ ೫೮೫ ಅಂಕಗಳೊಂದಿಗೆ ದ್ವಿತೀಯ ಸ್ಥಾನ, ಪ್ರತೀಕ ಚವ್ಹಾಣ ಹಾಗೂ ಅಂಜನಾ ಹೊನ್ನುಂಗುರ ೫೮೪ ಅಂಕಗಳನ್ನು ಪಡೆದುಕೊಳ್ಳುವ ಮೂಲಕ ತೃತೀಯ ಸ್ಥಾನವನ್ನು ಹಂಚಿಕೊಂಡಿದ್ದಾರೆ. ಉಳಿದಂತೆ ಮಲ್ಲಿಕಾರ್ಜುನ ಮುಚ್ಚಂಡಿ(೫೮೨), ಅಕ್ಷತಾ ದೊಡ್ಡಮನಿ (೫೮೨), ರಕ್ಷಿತಾ ಬಿರಾದಾರ (೫೮೨), ಅಮನ್ ಮದಬಾವಿ(೫೮೧), ಶ್ರೇಯಾ ಗಂಗರಗೊಂಡ(೫೮೧) ಶ್ರೇಯಾ ಮುರುಗುಂಡೆ (೫೮೦), ಸಹನಾ ಮಾವಿನಗಿಡದ(೫೭೯), ಅಮರ್ ಇರಕಲ್(೫೭೯), ಧರಣಿ ಜ್ಯೋಷಿ(೫೭೯), ಸಾವಿತ್ರಿ ಸುನೀಲ್ ಪಾಟೀಲ(೫೭೯), ಅನುಶ್ರಿ ಬಿರಾದಾರ (೫೭೮), ಸುದೀಪ ದೊರನಳ್ಳಿ (೫೭೮), ವೈಷ್ಣವಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೬ -೨೭ನೇ ಸಾಲಿನ ಜಿಲ್ಲಾ ಬಾಲಭವನದ ವತಿಯಿಂದ ೫ ರಿಂದ ೧೬ ವರ್ಷದೊಳಗಿನ ಮಕ್ಕಳಿಗಾಗಿ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿದೆ. ಈ ಶಿಬಿರವು ಏ.೧೦ ರಿಂದ ೨೪ ರವರೆಗೆ ಬೆಳಿಗ್ಗೆ ೮ ರಿಂದ ಮಧ್ಯಾಹ್ನ ೧:೩೦ ಗಂಟೆಯವರೆಗೆ ನಡೆಯಲಿದೆ. ಮಕ್ಕಳ ಸೃಜನಾತ್ಮಕತೆ, ಕೌಶಲ್ಯಾಭಿವೃದ್ಧಿ ಮತ್ತು ಮನರಂಜನೆಗಾಗಿ ಚಿತ್ರಕಲೆ, ನೃತ್ಯ, ಕರಾಟೆ ಹಾಗೂ ಕರಕುಶಲ ಕಲೆ ಚಟುವಟಿಕೆಗಳು ಶಿಬಿರದಲ್ಲಿ ಏರ್ಪಡಿಸಿದೆ. ಕಚೇರಿ ವೇಳೆಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಂಯೋಜಕರು, ಜಿಲ್ಲಾ ಬಾಲಭವನ, ಮನಗೂಳಿ ರಸ್ತೆ, ವಿಜಯಪುರ ಅವರನ್ನು ಮೊ.೭೭೬೦೪೦೨೨೩೯ ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಮೌಲಾನಾ ಆಜಾದ್ ಪಬ್ಲಿಕ್ ಶಾಲೆಗಳಲ್ಲಿ ೨೦೨೬-೨೭ನೇ ಶೈಕ್ಷಣಿಕ ಸಾಲಿಗಾಗಿ ಎಲ್.ಕೆ.ಜಿ ಮತ್ತು ಯು.ಕೆ.ಜಿ ತರಗತಿಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.೨೦೨೬-೨೭ನೇ ಶೈಕ್ಷಣಿಕ ಸಾಲಿಗೆ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಮೇ೮ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತ ವಿದ್ಯಾರ್ಥಿಗಳ ಪಾಲಕರು-ಪೋಷಕರು ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ವೆಬ್‌ಸೈಟ್ hಣಣಠಿs://eಡಿಠಿ.ಜom.ಞಚಿಡಿಟಿಚಿಣಚಿಞಚಿ.gov.iಟಿ/ಟಞg ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಕಚೇರಿ, ಮೌಲಾನಾ ಆಜಾದ್ ಭವನ, ಜಿಲ್ಲಾ ಪಂಚಾಯತ್ ರಸ್ತೆ, ಕನಕದಾಸ ಬಡಾವಣೆ, ವಿಜಯಪುರ ದೂರವಾಣಿ ಸಂಖ್ಯೆ:೦೮೩೫೨-೨೯೫೫೨೩, ವಿಜಯಪುರ ತಾಲೂಕು ವಿಸ್ತರಣಾಧಿಕಾರಿಗಳು ಉಪವಿಭಾಗ ಮೊ. ಸಂಖ್ಯೆ: ೮೯೭೦೭೦೪೯೮೬, ತಾಲೂಕು ವಿಸ್ತರಣಾಧಿಕಾರಿಗಳು ಉಪಯುವಾಗ ಇಂಡಿ ಮೊ. ಸಂಖ್ಯೆ ೯೯೦೦೨೨೯೭೭೮೦, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ವಿಜಯಪುರ ಮೊ. ಸಂಖ್ಯೆ ೮೧೨೩೭೧೧೦೭೬೬, ಬಸವನ ಬಾಗೇವಾಡಿ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮೊ. ಸಂಖ್ಯೆ ೯೯೭೨೩೪೦೭೨೧, ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ…

Read More