Author: editor.udayarashmi@gmail.com

ಕಾರ್ಯನಿರತ ಪತ್ರಕರ್ತರ ಸಂಘ ವಿಜಯಪುರ ಜಿಲ್ಲಾ ಘಟಕದ ಚುನಾವಣೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಾರ್ಯನಿರತ ಪತ್ರಕರ್ತರ ಸಂಘ (ರಿ) ವಿಜಯಪುರ ಜಿಲ್ಲಾ ಘಟಕದ ಚುನಾವಣೆಯಲ್ಲಿ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸ್ಪರ್ಧಿಸಲು “ಉದಯರಶ್ಮಿ” ದಿನಪತ್ರಿಕೆ ಸಂಪಾದಕ ಇಂದುಶೇಖರ ಮಣೂರ ಅವರು ಶುಕ್ರವಾರ ಜಿಲ್ಲಾ ಚುನಾವಣಾಧಿಕಾರಿ ಟಿ.ಕೆ.ಮಲಗೊಂಡ ಅವರಿಗೆ ನಾಮಪತ್ರ ಸಲ್ಲಿಸಿದರು.ಈ ವೇಳೆ ಹಿರಿಯ ಪತ್ರಕರ್ತರಾದ ಅಶೋಕ ಯಡಳ್ಳಿ, ಮಹೇಶ ಶೆಟಗಾರ, ಶರಣು ಮಸಳಿ, ಪ್ರಕಾಶ ಬೆಣ್ಣೂರ, ಮೋಹನ ಕುಲಕರ್ಣಿ, ಕೆ.ಕೆ.ಕುಲಕರ್ಣಿ, ಸಂಗನಗೌಡ ಪಾಟೀಲ, ಗುರು ಗದ್ದನಕೇರಿ, ಶಶಿ ಮೆಂಡೆಗಾರ, ರಾಹುಲ್ ಆಪ್ಟೆ, ಡಿ.ಬಿ.ವಡವಡಗಿ, ಬಸವರಾಜ ಉಳ್ಳಾಗಡ್ಡಿ, ಗೋಪಾಲ ಕನಿಮಣಿ, ಚಿದಂಬರ (ಪುಟ್ಟು) ಕುಲಕರ್ಣಿ, ಶ್ರೀನಿವಾಸ ಸೂರಗೊಂಡ, ಸುನೀಲ ಭಾಸ್ಕರ, ಪವನ ಕುಲಕರ್ಣಿ, ರಾಜೇಂದ್ರಕುಮಾರ ಹಜೇರಿ, ಸುಧೀಂದ್ರ ಕುಲಕರ್ಣಿ ಸೇರಿದಂತೆ ಹಲವರಿದ್ದರು.

Read More

ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ (ಕುದರಿ ಸಾಲವಾಡಗಿ) ಅಭಿಮತ ಉದಯರಶ್ಮಿ ದಿನಪತ್ರಿಕೆ ದೇವರ ಹಿಪ್ಪರಗಿ: ಮಕ್ಕಳಿಗೆ ಒಳ್ಳೆ ಶಿಕ್ಷಣದ ಜೊತೆಗೆ ಒಳ್ಳೆ ಸಂಸ್ಕಾರವನ್ನು ನೀಡಿ ಅವರ ಭವಿಷ್ಯ ಉಜ್ವಲ ಆಗುವ ನಿಟ್ಟಿನಲ್ಲಿ ಸಿಬ್ಬಂದಿ ಕಾರ್ಯನಿರ್ವಹಿಸಲಿ ಎಂದು ಶಾಸಕ ರಾಜುಗೌಡ ಪಾಟೀಲ(ಕುದರಿ ಸಾಲವಾಡಗಿ) ಹೇಳಿದರು.ಪಟ್ಟಣದಲ್ಲಿ ಗುರುವಾರ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮ್ಯಾಟ್ರಿಕ್ ನಂತರದ ವಸತಿ ನಿಲಯದ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಹಿಂದುಳಿದ ವರ್ಗಗಳ ಮಕ್ಕಳ ಅಭಿವೃದ್ಧಿಗಾಗಿ ಸರಕಾರ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ವಸತಿ ನಿಲಯಗಳನ್ನು ಮಾಡಿದೆ. ಇದರ ಸದುಪಯೋಗ ಮಕ್ಕಳು ಪಡೆದುಕೊಳ್ಳಬೇಕು. ನನ್ನ ಕ್ಷೇತ್ರದ ಪ್ರತಿಯೊಂದು ವಸತಿ ನಿಲಯಗಳಲ್ಲಿ ಗ್ರಂಥಾಲಯ ಪ್ರಾರಂಭಿಸಬೇಕು ಆ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಿ, ನಿಮಗೆ ಬೇಕಾದ ಸಹಕಾರ ನಾನು ನೀಡುತ್ತೇನೆ. ಗ್ರಂಥಾಲಯದಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮಕ್ಕಳಿಗೆ ಅನುಕೂಲವಾಗುತ್ತದೆ. ನಿಕಟಪೂರ್ವ ಶಾಸಕ ಸೋಮನಗೌಡ ಪಾಟೀಲ(ಸಾಸನೂರ) ಅವಧಿಯಲ್ಲಿ ಮತಕ್ಷೇತ್ರದ ಕಾಮನಕೇರಿ ಗ್ರಾಮದಲ್ಲಿ ೭ ಕೋಟಿ ೭೫ ಲಕ್ಷದ ಕಟ್ಟಡ ಮಂಜೂರಾತಿಯಾಗಿದೆ. ಕೆಲವೇ ದಿನಗಳಲ್ಲಿ ಭೂಮಿಪೂಜೆ ಮಾಡಲಾಗುತ್ತಿದೆ. ಜೊತೆಗೆ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಬೆಳೆ ಸಮೀಕ್ಷೆದಾರರಿ(ಪಿಆರ್‌ಗಳಿ)ಗೆ ಸೇವಾಭದ್ರತೆ ಹಾಗೂ ಜೀವವಿಮೆ ಒದಗಿಸಿ ಮತ್ತು ದಿನಗೂಲಿ ಕಾರ್ಮಿಕರನ್ನಾಗಿ ನೇಮಕಗೊಳಿಸಲು ಆಗ್ರಹಿಸಿ ತಾಲ್ಲೂಕು ಬೆಳೆ ಸಮೀಕ್ಷೆದಾರರು ಶಾಸಕ ರಾಜುಗೌಡ ಪಾಟೀಲ (ಕುದರಿ ಸಾಲವಾಡಗಿ) ಅವರಿಗೆ ಮನವಿ ಸಲ್ಲಿಸಿದರು.ಪಟ್ಟಣದಲ್ಲಿ ಗುರುವಾರ ಬೆಳೆಸಮೀಕ್ಷೆದಾರರು ಶಾಸಕ ರಾಜುಗೌಡ ಪಾಟೀಲರನ್ನು ಕಂಡು ತಮ್ಮ ಮನವಿ ಕುರಿತು ಗಮನ ಸೆಳೆದರು.ಈ ಸಂದರ್ಭದಲ್ಲಿ ತಾಲ್ಲೂಕು ಬೆಳೆ ಸಮೀಕ್ಷೆದಾರರ ಸಂಘದ ಅಧ್ಯಕ್ಷ ಶಿವಾನಂದ ಹೊಸಮನಿ ಮಾತನಾಡಿ, ನಾವು ಸುಮಾರು ೭-೮ ವರ್ಷಗಳಿಂದ ಬೆಳೆ ಸಮೀಕ್ಷೆ ದಾರರೆಂದೂ ಸೇವೆ ಸಲ್ಲಿಸುತ್ತಿದ್ದೇವೆ. ನಾವು ಜಮೀನುಗಳಲ್ಲಿ ಸೇವೆ ಸಲ್ಲಿಸುವ ಸಂದರ್ಭದಲ್ಲಿ ವಿದ್ಯುತ್ ಅವಘಡಕ್ಕೆ ಒಳಗಾಗುವುದು ಹಾಗೂ ಹಾವು, ನಾಯಿ, ಕಾಡುಹಂದಿ, ತೋಳ, ನರಿಗಳ ದಾಳಿಗೆ ಒಳಗಾಗುವ ಸಾಧ್ಯತೆಗಳಿದ್ದು, ಈಗಾಗಲೇ ಕಲಬುರ್ಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಮಳಖೇಡ ಹಾಗೂ ಕೋಡ್ಲಾ ಗ್ರಾಮಗಳಲ್ಲಿ ಇಬ್ಬರು ಪಿಆರ್‌ಗಳಿಗೆ ಹಾವು ಕಚ್ಚಿದ ಘಟನೆಗಳು ಸಂಭವಿಸಿ, ಆ ಸಂದರ್ಭದಲ್ಲಿ ಯಾವುದೇ ಅಧಿಕಾರಿಗಳು ಸ್ಪಂದಿಸದೇ ಇರುವುದನ್ನು ಕಾಣಬಹುದಾಗಿದೆ. ವರ್ಷದ ೨-೩ ತಿಂಗಳುಗಳ ಕಾಲ ಅಧಿಕಾರಿಗಳ ಅಣತಿಯಂತೆ ಶ್ರದ್ಧೆಯಿಂದ…

Read More

ಯತೀಂದ್ರ ಸಿದ್ದರಾಮಯ್ಯಗೆ ಡಿಸಿಎಂ ಡಿ.ಕೆ ಶಿವಕುಮಾರ್ ತಿರುಗೇಟು ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು, ಈ ಬಗ್ಗೆ ಮಾತನಾಡಬೇಕಾದ ವ್ಯಕ್ತಿಯೊಂದಿಗೆ ಮಾತನಾಡುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಶುಕ್ರವಾರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.ರಾಜ್ಯ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ತಮ್ಮ ತಂದೆಯಂತೆಯೇ ಪ್ರಗತಿಪರ ಸೈದ್ಧಾಂತಿಕ ಚಿಂತನೆಯನ್ನು ಹೊಂದಿರುವ ನಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಹೇಳಿದ್ದಾರೆ.ಯತೀಂದ್ರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ, “ನಾನು ಈಗ ಮಾತನಾಡುವುದಿಲ್ಲ, ಆದರೆ ಯಾರತ್ರ ಮಾತನಾಡಬೇಕೋ ಅಲ್ಲಿ ಮಾತನಾಡುತ್ತೇನೆ” ಎಂದು ಸುದ್ದಿಗಾರರಿಗೆ ತಿಳಿಸಿದರು.ನಾಯಕತ್ವ ಬದಲಾವಣೆಯ ಬಗ್ಗೆ ಮಾತನಾಡುತ್ತಿದ್ದ ಯತೀಂದ್ರ ಅವರಿಗೆ ನೋಟಿಸ್ ಏಕೆ ನೀಡುತ್ತಿಲ್ಲ ಎಂದು ಕೇಳಿದ ವರದಿಗಾರರ ಪ್ರಶ್ನೆಗೆ ಅವರು ಈ ರೀತಿ ಉತ್ತರಿಸಿದರು.ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಬುಧವಾರ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಎಂಎಲ್‌ಸಿ ಯತೀಂದ್ರ ಅವರು, “ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಜೀವನದ ಕೊನೆಯ ಹಂತದಲ್ಲಿದ್ದಾರೆ. ಇಂತಹ ಸಮಯದಲ್ಲಿ,…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ಭಾರತ ಸರಕಾರವು ಗ್ರಾಮೀಣ ಪ್ರದೇಶದ ಜನರಿಗಾಗಿ ರೂಪಿಸಿರುವ ಅಂಚೆ ಜೀವವಿಮೆ ಯೋಜನೆಯಲ್ಲಿ ಗಣನೀಯ ಸೇವೆಯನ್ನು ಗುರುತಿಸಿ ನೀಡಲಾಗುವ ‘ಸಾಮ್ರಾಟ ಚೆನ್ನ’ ಜಿಲ್ಲಾ ಮಟ್ಟದ ಪ್ರಶಸ್ತಿಗೆ ರೇವತಗಾಂವ ಗ್ರಾಮದ ಅಂಚೆ ಅಧೀಕ್ಷಕ ಜಯರಾಮ ವಾಲಿಕಾರರವರು ಆಯ್ಕೆಯಾಗಿದ್ದಾರೆ.ಜಿಲ್ಲಾ ಮಟ್ಟದ ‘ಸಾಮ್ರಾಟ ಚೆನ್ನ’ ಪ್ರಶಸ್ತಿಗೆ ಆಯ್ಕೆಯಾದ ಜಯರಾಮ ವಾಲಿಕಾರರವರಿಗೆ ಗ್ರಾಮಸ್ಥರು ಹರ್ಷವ್ಯಕ್ತಪಡಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಎಲ್ಲ ಮಹನೀಯರ ಜಯಂತಿಗಳಂದು ಎಲ್ಲ ಸಮುದಾಯದವರು ಭಾಗವಹಿಸುವಂತಾಗಬೇಕು ಎಂದು ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಸಿ.ಕೆ.ಕುದರಿ ಹೇಳಿದರು.ಪಟ್ಟಣದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ಗುರುವಾರ ಜರುಗಿದ ರಾಣಿ ಚನ್ನಮ್ಮಳ ೨೪೭ನೇ ಜಯಂತ್ಯುತ್ಸವದಲ್ಲಿ ಪಾಲ್ಗೊಂಡು ಮಾತನಾಡಿದರು. ಇಂದು ಎಲ್ಲ ಸ್ವಾತಂತ್ರ್ಯ ಹೋರಾಟಗಾರರು, ಶರಣರು, ಮಹನೀಯರನ್ನು ಒಂದೊಂದು ಸಮುದಾಯಕ್ಕೆ ಸಿಮೀತಗೊಳಿಸುತ್ತಿರುವುದು ಖೇದಕರ. ಇಂಥ ರೂಢಿ ಬದಲಾಗಿ ಎಲ್ಲರೂ ಭಾಗವಹಿಸುವಂತಾಗಬೇಕು ಎಂದರು.ತಾಲ್ಲೂಕು ಆಡಳಿತದಿಂದ ತಹಶೀಲ್ದಾರ ಕಾರ್ಯಾಲಯದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ನಿಕಟಪೂರ್ವ ಅಧ್ಯಕ್ಷ ಜಿ.ಪಿ.ಬಿರಾದಾರ ಹಾಗೂ ತಾಲ್ಲೂಕು ಪಂಚಮಸಾಲಿ ಸಮಾಜದ ಅಧ್ಯಕ್ಷ ಗುರುರಾಜ್ ಆಕಳವಾಡಿ ಮಾತನಾಡಿದರು. ನಂತರ ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಚನ್ನಮ್ಮಳಿಗೆ ಪೂಜೆ ಸಲ್ಲಿಸಿ ಜಯಂತಿ ಆಚರಿಸಲಾಯಿತು. ಆರಂಭದಲ್ಲಿ ಚನ್ನಮ್ಮಳ ವೃತ್ತನ್ನು ಸಿಂಗರಿಸಿ ಧ್ವಜಾರೋಹಣ ನೆರವೇರಿಸಲಾಯಿತು. ನಂತರ ಭಾವಚಿತ್ರಕ್ಕೆ ವಿದ್ಯುಕ್ತವಾಗಿ ಪೂಜೆ ಸಲ್ಲಿಸಲಾಯಿತು.ತಹಶೀಲ್ದಾರ ಪ್ರಕಾಶ ಸಿಂದಗಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಅಪ್ರೋಜ್ ಅಹ್ಮದ್ ಪಟೇಲ, ಉಪಾಧ್ಯಕ್ಷ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಚನ್ನಬಸವಣ್ಣನವರು ಸಾಮಾಜಿಕ ಬದಲಾವಣೆಯ ಹರಿಕಾರರಾಗಿ “ಚಿನ್ಮಯಜ್ಞಾನಿ’ ಎನಿಸಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ನಿಕಟಪೂರ್ವ ಅಧ್ಯಕ್ಷ ಜಿ.ಪಿ.ಬಿರಾದಾರ ಹೇಳಿದರು.ಪಟ್ಟಣದ ರಾವುತರಾಯ ದೇವಸ್ಥಾನದ ಆವರಣದಲ್ಲಿ ಬುಧವಾರ ಚನ್ನಬಸವಣ್ಣನವರ ಜಯಂತಿ ಅಂಗವಾಗಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.ಅನುಭವ ಮಂಟಪದ ಎರಡನೆಯ ಶೂನ್ಯ ಪೀಠಾಧೀಶರಾಗಿದ್ದ ಚನ್ನಬಸವಣ್ಣ ಪ್ರತಿಯೊಂದು ವಚನಗಳಿಗೆ ಅಂತಿಮವಾಗಿ ಒಪ್ಪಿಗೆಯನ್ನು ಕೊಡುವ ಜವಾಬ್ದಾರಿ ನಿರ್ವಹಿಸುತ್ತಿದ್ದರು. ಅಂತೆಯೇ ತಮ್ಮ ೨೧ನೇ ವರ್ಷದಲ್ಲಿ ಖಡ್ಗ ಹಿಡಿದು ಕನ್ನಡ ಶರಣರ ವಚನ ಸಾಹಿತ್ಯವನ್ನು ರಕ್ಷಣೆ ಮಾಡುವುದರ ಮೂಲಕ ಷಟಸ್ಥಲಜ್ಞಾನಿ ಎನಿಸಿದ್ದರು. ಇವರ ಜೀವಿತ ಕಾಲಾವಧಿ ತೀರಾ ಕಡಿಮೆ. ಬದುಕಿದ್ದು ಕೇವಲ ಇಪ್ಪತ್ತನಾಲ್ಕು ವರ್ಷಗಳು ಮಾತ್ರ. ಕೊನೆಗೆ ಉಳವಿಯಲ್ಲಿಯೇ ಲಿಂಗೈಕ್ಯರಾದರು ಎಂದು ೧೨ನೇ ಶತಮಾನದ ಅಸಂಖ್ಯಾತ ಶರಣರಲ್ಲಿ ಪ್ರಮುಖರಾದ ಚನ್ನಬಸವಣ್ಣನವರ ಹಿರಿಮೆಯ ಕುರಿತು ಮಾಹಿತಿ ನೀಡಿದರು.ಶರಣಸಂಗಮ ಸೇವಾಸಮೀತಿ ತಾಲ್ಲೂಕು ಘಟಕದ ಅಧ್ಯಕ್ಷ ಸಂಗಪ್ಪ ತಡವಲ್, ಜೆ.ಆರ್.ಬಿರಾದಾರ, ಮಲ್ಲು ಭಂಡಾರಿ, ಗೊಲ್ಲಾಳ ಬಿರಾದಾರ(ಹಿಟ್ನಳ್ಳಿ), ಬಸವರಾಜ ಕುಂಬಾರ, ಅನುಮೇಶ ನಂದ್ಯಾಳ, ಆರ್.ಜಿ.ಕೋಟೀನ್ ಕೆ.ಎಮ್.ನಂದಿ, ನಿಂಗು…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ವಿಜಯಪುರ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜಿನ ಉದ್ದೇಶಿತ ಪಿಪಿಪಿ ಮಾದರಿ ಕೈಬಿಟ್ಟು, ಸಂಪೂರ್ಣ ಸರ್ಕಾರಿ ಕಾಲೇಜಾಗಿ ಆರಂಭಿಸಲು ಹಾಗೂ ಜಿಲ್ಲಾ ಸರ್ಕಾರಿ ಆಸ್ಪತ್ರೆಯನ್ನು ಉಳಿಸುವಂತೆ ಆಗ್ರಹಿಸಿ ದೇವರಹಿಪ್ಪರಗಿ ತಾಲ್ಲೂಕಿನ ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳು ಪ್ರತಿಭಟನಾ ಮೆರವಣಿಗೆ ಕೈಗೊಂಡು ನಂತರ ತಹಶೀಲ್ದಾರ ಕಾರ್ಯಾಲಯದ ಮುಂದೆ ಧರಣಿ ಕುಳಿತು ಪ್ರತಿಭಟಿಸಿ, ತಹಶೀಲ್ದಾರ ಪ್ರಕಾಶ ಸಿಂದಗಿ ಅವರಿಗೆ ಮನವಿ ಸಲ್ಲಿಸಿದರು.ಪಟ್ಟಣದ ಮೊಹರೆ ಹಣಮಂತ್ರಾಯ ವೃತ್ತದಲ್ಲಿ ಗುರುವಾರ ಸಭೆ ಸೇರಿದ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನಾ ಹೋರಾಟ ಸಮಿತಿ, ಸ್ಪಂದನಾ ತಾಲ್ಲೂಕು ಮಹಿಳಾ ಸ್ವಸಹಾಯ ಸಂಘಗಳ ಒಕ್ಕೂಟ, ಜನವೇದಿಕೆ, ಮಾನವ ಬಂಧುತ್ವ ವೇದಿಕೆಯ ಪದಾಧಿಕಾರಿಗಳು ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜಿನ ಉದ್ದೇಶಿತ ಪಿಪಿಪಿ ಮಾದರಿ ಕೈಬಿಡಲು ಒತ್ತಾಯಿಸಿ ಮೆರವಣಿಗೆ ಹೊರಟು ರಾಷ್ಟ್ರೀಯ ಹೆದ್ದಾರಿಯಲ್ಲಿನ ಅಂಬೇಡ್ಕರ್ ವೃತ್ತದ ಮೂಲಕ ಇಂಡಿ ರಸ್ತೆಯಲ್ಲಿನ ತಹಶೀಲ್ದಾರ ಕಾರ್ಯಾಲಯ ತಲುಪಿ ಧರಣಿ ಕುಳಿತರು.ಈ ಸಂದರ್ಭದಲ್ಲಿ ಹೋರಾಟ ಸಮಿತಿಯ ಪ್ರಕಾಶ ಗುಡಿಮನಿ ಮಾತನಾಡಿ, ಸರ್ಕಾರ ಪಿಪಿಪಿ ಮಾದರಿಯ ವೈದ್ಯಕೀಯ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಧೈರ್ಯ, ಸಾಹಸ, ಮಾನವೀಯತೆಗೆ ಪರ್ಯಾಯ ಹೆಸರೇ ಚೆನ್ನಮ್ಮ. ಇಂತಹ ಮಹಾಮಾತೆಯ ವೃತ್ತವು ಮುಗಿಯುವ ಹಂತದಲ್ಲಿದ್ದು, ಆದಷ್ಟು ಬೇಗನೆ ರಾಜ್ಯದ ಮುಖ್ಯಮಂತ್ರಿಗಳನ್ನು ಕರೆಯಿಸಿ ಅನಾವರಣಗೊಳಿಸಲಿದ್ದೇವೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಸಿಂದಗಿ ಪಟ್ಟಣದ ಚೆನ್ನಮ್ಮ ವೃತ್ತದಲ್ಲಿ ಹಮ್ಮಿಕೊಂಡ ಕಿತ್ತೂರರಾಣಿ ಚೆನ್ನಮ್ಮಳ ೨೪೭ನೆಯ ಜಯಂತೋತ್ಸವ ಹಾಗೂ ೨೦೧ನೆಯ ವಿಜಯೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಹಾಪುರುಷರು ಸರ್ವ ಜನಾಂಗಕ್ಕೆ ಒಳಿತನ್ನೇ ಬಯಸಿದವರು. ಅವರ ತತ್ವಾದರ್ಶಗಳನ್ನು ಯುವ ಪೀಳಿಗೆ ಅಳವಡಿಕೊಳ್ಳುವ ಮೂಲಕ ಜಯಂತಿಯ ಆಚರಣೆ ಸಾರ್ಥಕಗೊಳಿಸಬೇಕು. ಹಾಗೆಯೇ ಸಮಾಜದ ವಿದ್ಯಾರ್ಥಿ ವಸತಿ ನಿಲಯಕ್ಕೆ ರೂ.೫೦ಲಕ್ಷ ಮಂಜೂರಾಗಿದ್ದು, ಆ ಕಾಮಗಾರಿಯನ್ನು ಸಹ ಶೀಘ್ರವಾಗಿ ಪೂರ್ಣಗೊಳಿಸಿ ವಿದ್ಯಾರ್ಥಿಗಳ ವಸತಿಗೆ ಅನುಕೂಲ ಮಾಡಿಕೊಡುವದಲ್ಲದೇ ಸಮಾಜದ ಅಭಿವೃದ್ಧಿಗೆ ಸದಾ ಕೈಜೋಡಿಸುವುದಾಗಿ ಭರವಸೆ ನೀಡಿದರು.ಈ ವೇಳೆ ಕಸಾಪ ಅಧ್ಯಕ್ಷ ವಾಯ್.ಸಿ.ಮಯೂರ, ಪಂಚಮಸಾಲಿ ಸಮಾಜದ ತಾಲೂಕಾಧ್ಯಕ್ಷ ಎಂ.ಎಂ.ಹಂಗರಗಿ ಮಾತನಾಡಿ, ಜಯಂತಿಗಳು ಆಯಾ ಸಮುದಾಯದ ಜನರಿಗಷ್ಟೆ ಸೀಮಿತವಾಗಿರದೆ ಸರ್ವ ಸಮಾಜದ ಜನರು ಜಯಂತಿಗಳಲ್ಲಿ ಪಾಲ್ಗೊಂಡು ಅವರ ಆದರ್ಶಗಳನ್ನು ಅಳವಡಿಸಿಕೊಳ್ಳುವುದರ ಜೊತೆಗೆ ಅವರನ್ನು ಗೌರವಿಸುವ…

Read More

ಪದವಿ ಪೂರ್ವ ಮಹಾವಿದ್ಯಾಲಯಗಳ ರಾಜ್ಯ ಮಟ್ಟದ ಬಾಲಕ-ಬಾಲಕಿಯರ ಕುಸ್ತಿ ಪಂದ್ಯಾವಳಿಗೆ ಚಾಲನೆ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕುಸ್ತಿಗೆ ವಿಶೇಷ ಸ್ಥಾನಮಾನವಿದ್ದು, ಶತಮಾನಗಳ ಇತಿಹಾಸವಿದೆ. ಸಿಂದಗಿ ನಗರದಲ್ಲಿ ಕುಸ್ತಿ ಪಂದ್ಯಾವಳಿ ಆಯೋಜನೆ ಮಾಡಿದ್ದು ಸಂತಸ ತಂದಿದೆ. ಮುಂದಿನ ಯುವ ಪೀಳಿಗೆಗೆ ಇಂತಹ ಕ್ರೀಡೆಗಳ ಬಗ್ಗೆ ತಿಳಿಯಬೇಕಾದರೆ ಮೇಲಿಂದ ಮೇಲೆ ಕ್ರೀಡೆಗಳು ಜರುಗಬೇಕು. ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಸಿಂದಗಿ ಪಟ್ಟಣದ ಎಚ್.ಜಿ.ಕಾಲೇಜಿನ ಆವರಣದಲ್ಲಿ ಬೆಂಗಳೂರು ನಿರ್ದೇಶಕರ ಶಾಲಾ ಶಿಕ್ಷಣ ಇಲಾಖೆ, ವಿಜಯಪುರ ಉಪನಿರ್ದೇಶಕರ ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆ ಎಚ್.ಜಿ.ಪಪೂ ಕಾಲೇಜಿನ ಸಹಯೋಗದಲ್ಲಿ ಹಮ್ಮಿಕೊಂಡ ಪದವಿ ಪೂರ್ವ ಮಹಾವಿದ್ಯಾಲಯಗಳ ರಾಜ್ಯ ಮಟ್ಟದ ಬಾಲಕ-ಬಾಲಕಿಯರ ಕುಸ್ತಿ ಪಂದ್ಯಾವಳಿಯನ್ನು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಸಿಂದಗಿ ತಾಲೂಕೆಂದರೆ ಕುಸತಿಪಟುಗಳ ತವರು ಮನೆ. ಏಕೆಂದರೆ ಸಿಂದಗಿ ನಗರದಲ್ಲಿ ಕಳೆದ ೪೦ವರ್ಷಗಳ ಹಿಂದೆ ಗರಡಿ ಮನೆಯನ್ನು ಸ್ಥಾಪಿಸಿದ ಕೀರ್ತಿ ದಿ.ಆರ.ಬಿ.ಬೂದಿಹಾಳ ಗುರುಗಳಿಗೆ ಸಲ್ಲುತ್ತದೆ. ಅವರ ಇಡೀ ಜೀವನವನ್ನು ಕುಸ್ತಿಗಾಗಿ ಮೀಸಲಿಟ್ಟಿದ್ದರು. ಕುಸ್ತಿ ಪಂದ್ಯಾವಳಿಯಲ್ಲಿ…

Read More