Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ದಲಿತ ಸಮುದಾಯವನ್ನು ಮತ್ತು ಅಲ್ಪ ಸಂಖ್ಯಾತರನ್ನು ಕಾಂಗ್ರೆಸ್ ಪಕ್ಷ ವೋಟ್ ಬ್ಯಾಂಕ್‌ ಆಗಿ ಬಳಸಿಕೊಂಡಿರುವದನ್ನು ಬಿಟ್ಟರೆ ಆ ಸಮುದಾಯದ ಯಾರನ್ನೂ ರಾಜಕೀಯ ಕ್ಷೇತ್ರದಲ್ಲಿ ಉನ್ನತ ಸ್ಥಾನವನ್ನು ಕಲ್ಪಿಸಿಕೊಟ್ಟ ಉದಾಹರಣೆಗಳೇ ಇಲ್ಲ ಆದ್ದರಿಂದ ರಾಜ್ಯದಲ್ಲಿ ವಾಸಿಸುವ ಎರಡೂ ಸಮುದಾಯದ ನಾಗರಿಕರು ಎಚ್ಚೆತ್ತುಕೊಂಡು ರಾಷ್ಟ್ರದ ಹಿತದೃಷ್ಟಿಯಿಂದ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸಬೇಕು ಎಂದು ವಿಧಾನ ಪರಿಷತನ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ ಹೇಳಿದರು.ಪಟ್ಟಣದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಪ್ರ.ಶಿಕ್ಷಣ ಅಭಿಯಾಣ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದಾಗ ಅವಳಿ ಜಿಲ್ಲಾ ಕೆಎಂಎಫ್ ಮಾಜಿ ನಿರ್ದೇಶಕ ಕಾಂಗ್ರೆಸ್ ಪಕ್ಷದ ಪ್ರಭಾವಿ ಮುಖಂಡರಾಗಿದ್ದ ಗುರು ಚಲವಾದಿ ಅವರನ್ನು ಮತ್ತು ನೂರಾರು ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲು ಬಂದಾಗ ಸ್ವಾಗತಿಸಿ ಮಾತನಾಡಿದರು.ಬಿಜೆಪಿ ಪಕ್ಷವು ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಬದಲಾವಣೆ ಮಾಡುತ್ತಾರೆ ದಲಿತ ಮತ್ತು ಮುಸ್ಲೀಂ ಸಮುದಾಯವನ್ನು ರಾಜಕೀಯವಾಗಿ ಬಳಸುವದಿಲ್ಲ ಆರ್ಥಿಕವಾಗಿ ಸಬಲರನ್ನಾಗಿ ಮಾಡುವದಿಲ್ಲ ಹಲವಾರು ವಿಷಯಗಳ ಕುರಿತು ಕಪೋಲ ಕಲ್ಪಿತ…

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ನಗರದ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಕೃಷ್ಣಾ ತೀರ ಹೋರಾಟ ಸಮಿತಿ ವತಿಯಿಂದ 2025-26ನೇ ಸಾಲಿನ ಕಬ್ಬಿನ ಬಿಲ್ ಪಾವತಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭಿಸಲಾಗಿದೆ.ಪ್ರತಿಭಟನೆಯಲ್ಲಿ ರೈತ ಸಂಘದ ಮುಖಂಡ ಚೂನ್ನಪ್ಪ ಪೂಜಾರಿ ಮಾತನಾಡಿ, ಕಬ್ಬು ಬೆಳೆಗಾರರಿಗೆ ಕಾನೂನು ಪ್ರಕಾರ 14 ದಿನಗಳಲ್ಲಿ ಬಾಕಿ ಹಣ ಪಾವತಿಸಬೇಕಿದ್ದರೂ 3 ರಿಂದ 4 ತಿಂಗಳು ಕಳೆದರೂ ಹಣ ನೀಡದೇ ರೈತರನ್ನು ಸಂಕಷ್ಟಕ್ಕೆ ತಳ್ಳಲಾಗಿದೆ ಎಂದು ಆರೋಪಿಸಿದರು.ರಾಜ್ಯದಲ್ಲಿ ಸುಮಾರು 3,500 ಕೋಟಿ ಕಬ್ಬಿನ ಬಿಲ್ಲು ಬಾಕಿ ಉಳಿದಿದ್ದು ಬಾಗಲಕೋಟೆ, ವಿಜಯಪುರ, ಬೆಳಗಾವಿ ಜಿಲ್ಲೆಗಳ ರೈತರು ಹೆಚ್ಚಿನ ತೊಂದರೆ ಅನುಭವಿಸುತ್ತಿದ್ದಾರೆ ಎಂದರು. ಸರ್ಕಾರ ಹಾಗೂ ಅಧಿಕಾರಿಗಳು ರೈತರ ಸಮಸ್ಯೆ ಕಡೆ ನಿರ್ಲಕ್ಷ್ಯ ವಹಿಸಿರುವುದನ್ನು ಟೀಕಿಸಿದ ಅವರು, ಚುನಾವಣೆ ಸಮಯದಲ್ಲಿ ಮಾತ್ರ ರಾಜಕೀಯ ನಾಯಕರು ರೈತರ ಬಳಿ ಬರುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಾಕಿ ಹಣವನ್ನು ತಕ್ಷಣ ಪಾವತಿಸದಿದ್ದರೆ ರಾಜ್ಯಾದ್ಯಂತ ಹೋರಾಟ ತೀವ್ರಗೊಳಿಸಲಾಗುವುದು ಎಂದು…

Read More

ಉದಯರಶ್ಮಿ ದಿನಪತ್ರಿಕೆ ಆಲಮೇಲ: ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಖಾಸಗಿ ಕಂಪನಿಗಳು ಪೀಠೋಪಕರಣಗಳಂತ ದೇಣಿಗೆ ನೀಡಿದರೆ ಶಾಲೆಗಳು ಪ್ರಗತಿ ಹೊಂದುತ್ತವೆ ಎಂದು ಶಾಸಕ ಅಶೋಕ್ ಮನಗೂಳಿ ಹೇಳಿದರು.ಅವರು ಕೋರಮಂಡಲ್ ಇಂಟರ್ನ್ಯಾಷನಲ್ ಲಿಮಿಟೆಡ್ ಕಂಪನಿಯು ಸಿ ಎಸ್ ಆರ್ ಯೋಜನೆಯಡಿಯಲ್ಲಿ ತಾಲೂಕಿನ ಹೂವಿನಹಳ್ಳಿ ಗ್ರಾಮದ ಸರ್ಕಾರಿ ಶಾಲೆಗೆ ಸುಮಾರು 10 ಲಕ್ಷ ವೆಚ್ಚದ ಪೀಠೋಪಕರಣಗಳ ವಿತರಣೆ ಹಾಗೂ ಕಬ್ಬು ಬೆಳೆಗಾರರ ವಿಚಾರ ಸಂಕಿರಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತ ಹೇಳಿದರು.ಖಾಸಗಿ ಕಂಪನಿಗಳು ಗ್ರಾಮೀಣ ಭಾಗದ ಶಾಲೆಗಳ ಅಭಿವೃದ್ಧಿ ಜೊತೆಗೆ ರೈತರ ಬೆಳೆಗಳ ಮಾಹಿತಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿರುವುದು ಅತ್ಯಂತ ಉಪಯುಕ್ತವಾಗಿದೆ ಎಂದರು.ಯಾವುದೇ ಖಾಸಗಿ ಕಂಪನಿಗಳು ರೈತರಿಗೋಸ್ಕರ ಹಮ್ಮಿಕೊಂಡ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಪಾಲ್ಗೊಂಡು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.ಕಾರ್ಯಕ್ರಮದಲ್ಲಿ ತಾರಾಪುರ ಹಿರೇಮಠದ ಗುರುಲಿಂಗ ಶಿವಾಚಾರ್ಯರು, ಸಂಗಯ್ಯ ಸ್ವಾಮಿ ಹಿರೇಮಠ, ಮಾಜಿ ಜಿಲ್ಲಾ ಪಂಚಾಯತಿ ಉಪಾಧ್ಯಕ್ಷ ಸಿದ್ದರಾಮ ಪಾಟೀಲ, ಕೋರಮಂಡಲ್ ಕಂಪನಿಯ ರಾಜ್ಯ ಮುಖ್ಯ ವ್ಯವಸ್ಥಾಪಕ ಶಿವನಗೌಡ ಪಾಟೀಲ್, ಬೆಂಗಳೂರು ಹಿರಿಯ ವಲಯ…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಕೂಡಗಿ ಉಷ್ಣ ವಿದ್ಯುತ್ ಸ್ಥಾವರ (ಎನ್ಟಿಪಿಸಿ) ವ್ಯಾಪ್ತಿಯ ಕೃತಕ ಹಾರು ಬೂದಿ ಕೆರೆಗಳಿಂದ ಉಂಟಾಗುತ್ತಿರುವ ಸಮಸ್ಯೆಗಳ ವಿರುದ್ಧ ರೈತ ಸಂಘ ಹಾಗೂ ಸ್ಥಳೀಯ ರೈತರು ಬಹುದಿನಗಳಿಂದ ಆಕ್ರೋಶ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ವೇಳೆ ರೈತ ಸಂಘದ ಮುಖಂಡರಾದ ಸೋಮು ಬಿರಾದಾರ ಹಾಗೂ ರಮೇಶ ಬೀಳಗಿ ಮಾತನಾಡಿ, ಹಾರು ಬೂದಿ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಲಾಗುತ್ತಿದೆ ಎಂದು ಆರೋಪಿಸಿದರು. ಮೊದಲು ಕೆರೆಯಲ್ಲಿ ನೀರು ತುಂಬಿಸಿ ಬೋಟ್‌ಗಳ ಮೂಲಕ ಬೂದಿಯನ್ನು ಟ್ಯಾಂಕರ್‌ಗಳಲ್ಲಿ ಸಾಗಿಸಲಾಗುತ್ತಿತ್ತು. ಆದರೆ ಇದೀಗ ನೀರು ಹರಿಸದೇ ಒಣ ಬೂದಿಯನ್ನು ಜೆಸಿಬಿ, ಹಿಟಾಚಿ ಯಂತ್ರಗಳ ಮೂಲಕ ತೆರೆದ ಟಿಪ್ಪರ್ ಹಾಗೂ ಲಾರಿಗಳಲ್ಲಿ ಸಾಗಿಸಲಾಗುತ್ತಿದೆ ಎಂದು ದೂರಿದರು.ಇದರಿಂದ ರಾಸಾಯನಿಕ ಮಿಶ್ರಿತ ಬೂದಿ ಧೂಳು ಗಾಳಿಯಲ್ಲಿ ಹರಡಿ ಸುತ್ತಮುತ್ತಲಿನ ಗ್ರಾಮಗಳಿಗೆ ವ್ಯಾಪಿಸುತ್ತಿದ್ದು, ಕುಡಿಯುವ ನೀರು ಮತ್ತು ಆಹಾರ ಮಾಲಿನ್ಯಗೊಂಡು ಜನಜಾನುವಾರುಗಳಿಗೆ ತೀವ್ರ ಆರೋಗ್ಯ ಸಮಸ್ಯೆಗಳು ಎದುರಾಗುತ್ತಿವೆ ಎಂದು ಹೇಳಿದರು.ರೈತರ…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ದ ಯುನೈಟೆಡ್ ರಾಷ್ಟ್ರ ಸೇವಾ ಫೌಂಡೇಶನ್ ಕರ್ನಾಟಕ ಹಾಗೂ ಶ್ರೀ ಕ್ಷೇತ್ರ ಧರ್ಮದ್ವಜ ಪ್ರತಿಷ್ಠಾನ, ಬೆಂಗಳೂರು ವತಿಯಿಂದ 2025-26ನೇ ಸಾಲಿನ “ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿ” ಪಟ್ಟಣದ ಶೀಲವಂತ ಹಿರೇಮಠದ ಡಾ. ಕೈಲಾಸನಾಥ ಮಹಾಸ್ವಾಮಿಗಳಿಗೆ ಲಭಿಸಿದೆ.ಪ್ರಶಸ್ತಿಯು ರೂ.25 ಸಾವಿರ ನಗದು ಸಹಿತ ಗೌರವಪೂರಿತ ಪುರಸ್ಕಾರವನ್ನು ಒಳಗೊಂಡಿದ್ದು, ಏಪ್ರಿಲ್ 5ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರದಾನವಾಗಲಿದೆ. ಪೂಜ್ಯರ ಆಧ್ಯಾತ್ಮಿಕ, ಧಾರ್ಮಿಕ ಹಾಗೂ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಪ್ರಶಸ್ತಿ ನೀಡಲಾಗಿದೆ.ಈ ಹಿನ್ನೆಲೆಯಲ್ಲಿ ಗುರುಹಿರಿಯರು, ಭಕ್ತರು ಹಾಗೂ ಶಿಷ್ಯರು ಹರ್ಷ ವ್ಯಕ್ತಪಡಿಸಿದ್ದಾರೆ.

Read More

ವಿಜಯಪುರದಲ್ಲಿ ನಡೆದ ಜನಗಣತಿ ಕುರಿತ ಪೂರ್ವಭಾವಿ ಸಿದ್ಧತೆ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಆನಂದ.ಕೆ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜನಗಣತಿಯು ದೇಶದ ಜನಸಂಖ್ಯೆಯ ಗಣತಿಯ ಜೊತೆಗೆ, ದೇಶದ ಸಾಮಾಜಿಕ-ಆರ್ಥಿಕ ಸ್ಥಿತಿಗಳು ಮತ್ತು ಸಾಂಸ್ಕೃತಿಕ ವೈವಿಧ್ಯತೆಯನ್ನು ದಾಖಲಿಸುವ ವೈಜ್ಞಾನಿಕ ಪ್ರಕ್ರಿಯೆಯಾಗಿದ್ದು ಭಾರತದ ಮೊದಲ ಡಿಜಿಟಲ್ ಜನಗಣತಿ ಮತ್ತು ೧೬ ನೇಜನಗಣತಿಯು ಏಪ್ರಿಲ್ ನಿಂದ ೨ ಹಂತದಲ್ಲಿ ಆರಂಭಗೊಳ್ಳಲಿದೆ.ಸ್ವಯಂ ಗಣತಿಗೆ ಹೀಗೆ ಮಾಡಿಜನಗಣತಿಯ ಸುರಕ್ಷಿತ ವೆಬ್ ಪೋರ್ಟಲ್: https://se.census.gov.inಗೆ ಮೊಬೈಲ್ ಸಂಖ್ಯೆ ಮತ್ತು ಒಟಿಪಿ ಬಳಸಿ ಲಾಗಿನ್ ಆಗಿ. ಬಳಿಕ ನಿಮ್ಮ ಸ್ಥಳ ಆಯ್ಕೆ ಮಾಡಿ. ನಕ್ಷೆಯಲ್ಲಿ ನಿಮ್ಮ ಮನೆ ಗುರುತಿಸಿ. ಬಳಿಕ ಮನೆಯ ಇಲ್ಲವೇ ಕುಟುಂಬದ ವಿವರ ಭರ್ತಿ ಮಾಡಿ, ನಿಮ್ಮ Sಇ ಖeಜಿeಡಿeಟಿಛಿe Iಆ ಪಡೆಯಿರಿ.ಈಗ ಬಂದಿರುವ ನಿಮ್ಮ Sಇ Iಆ ಅನ್ನು ಸುರಕ್ಷಿತವಾಗಿ ಇಟ್ಟು, ಇಟಿumeಡಿಚಿಣoಡಿ ಮನೆಗೆ ಬಂದಾಗ ಅದನ್ನು ಅವರೊಂದಿಗೆ ಹಂಚಿಕೊಳ್ಳಬೇಕು.ಕ್ಷೇತ್ರ ಪರಿಶೀಲನೆಏ.೧೬ ರಿಂದ ಮೇ.೧೫ ರವರೆಗಿನ ಅವಧಿಯಲ್ಲಿ ಗಣತಿದಾರರು ಮನೆಗೆ ಭೇಟಿ ನೀಡಿ ವಿವರಗಳನ್ನು ಪರಿಶೀಲಿಸುತ್ತಾರೆ.ಒಂದು ವೇಳೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಪೊಲೀಸ್ ಕಲ್ಯಾಣ ಹಾಗೂ ಧ್ವಜ ದಿನಾಚರಣೆ ಕಾರ್ಯಕ್ರಮವನ್ನು ಏಪ್ರಿಲ್ ೨ರ ಗುರುವಾರ ಬೆಳಿಗ್ಗೆ ೮ ಗಂಟೆಗೆ ಜಿಲ್ಲಾ ಪೊಲೀಸ್ ಕವಾಯತ್ ಮೈದಾನದಲ್ಲಿ ಆಯೋಜಿಲಾಗಿದೆ.ನಿವೃತ್ತ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಎಸ್.ಕೆ. ಮಾರಿಹಾಳ ಅವರು ವಂದನೆ ಸ್ವೀಕರಿಸಲಿದ್ದಾರೆ.ಜಿಲ್ಲಾಧಿಕಾರಿಗಳಾದ ಡಾ.ಆನಂದ ಕೆ. ಹಾಗೂ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ರಾಮನಗೌಡ ಹಟ್ಟಿ ಮತ್ತು ಜಿಲ್ಲೆಯ ಪೊಲೀಸ್ ಅಧಿಕಾರಿ, ಸಿಬ್ಬಂದಿ ವರ್ಗದವರು ಭಾಗವಹಿಸಲಿದ್ದಾರೆ ಎಂದು ಪೊಲೀಸ್ ಇಲಾಖೆಯ ಪ್ರಕಟಣೆ ತಿಳಿಸಿದೆ.

Read More

ವಿಜಯಪುರದ ಟಕ್ಕೆಯಲ್ಲಿ ಸರ್ಕಾರಿ ದತ್ತು ಸಂಸ್ಥೆ ಉದ್ಘಾಟಿಸಿದ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸಲಹೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವರ್ಷದೊಳಗಿನ ಅನಾಥ ಪ್ರತಿ ಮಗುವನ್ನು ಕೌಟುಂಬಿಕ ಪರಿಸರದಲ್ಲಿ ಬೆಳೆಸಿ ಉತ್ತಮ ಪ್ರಜೆಯಾಗಿಸುವ ನಿಟ್ಟಿನಲ್ಲಿ ದತ್ತು ಪೋಷಕರು, ಏಕಪಾಲಕರು ವಿಶೇಷ ದತ್ತು ಕೇಂದ್ರದ ಮೂಲಕ ಮಗುವನ್ನು ದತ್ತು ಪಡೆದುಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ.ಆನಂದ ಕೆ. ಅವರು ಹೇಳಿದರು.ನಗರದ ಟಕ್ಕೆಯಲ್ಲಿರುವ ಸರ್ಕಾರಿ ಬಾಲಕರ ಬಾಲಮಂದಿರದಲ್ಲಿ ಹೊಸ ಸರ್ಕಾರಿ ದತ್ತು ಸಂಸ್ಥೆಯನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜದಲ್ಲಿಯ ಅನಾಥ ಹಾಗೂ ಒಪ್ಪಿಸಿದ ಮಕ್ಕಳನ್ನು ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ-೨೦೧೫ ಹಾಗೂ ದತ್ತು ಮಾರ್ಗಸೂಚಿ-೨೦೧೭ರನ್ವಯ ಕಾನೂನಾತ್ಮಕವಾಗಿ ದತ್ತು ಪಡೆಯಲು ಅವಕಾಶವಿದ್ದು, ಮಕ್ಕಳಿಲ್ಲದವರು, ಇಲ್ಲಿನ ಮಕ್ಕಳನ್ನು ದತ್ತು ಸ್ವೀಕರಿಸಬಹುದಾಗಿದೆ ಎಂದರು.ಇನ್ನೊಂದೆಡೆ ಪೋಷಣೆ ಮತ್ತು ರಕ್ಷಣೆ ಅಗತ್ಯವಿರುವ ಮಕ್ಕಳನ್ನು ಸರ್ಕಾರಿ ದತ್ತು ಸಂಸ್ಥೆಯಲ್ಲಿ ದಾಖಲಿಸಬಹುದು. ಮಕ್ಕಳಿಲ್ಲದ ಅಥವಾ ಮಕ್ಕಳನ್ನು ಹೊಂದಿದವರು, ಆಸ್ಪತ್ರೆಯಲ್ಲಿ, ಯಾವುದೇ ಪ್ರದೇಶದಲ್ಲಿ ಬಿಟ್ಟು ಹೋದ ಮಕ್ಕಳನ್ನು ಅಥವಾ ಯಾವುದೇ ಕಾರಣದಿಂದ ಯಾವುದೇ ಪೋಷಕರಿಂದ ಮಗುವನ್ನು ನೇರವಾಗಿ…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಕಬ್ಬಿನ ಗದ್ದೆಗೆ ತಗುಲಿದ್ದ ಬೆಂಕಿಯನ್ನು ನಂದಿಸಲು ಹೋಗಿದ್ದ ರೈತನೊಬ್ಬ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸಾವನ್ನಪ್ಪಿದ ದಾರುಣ ಘಟನೆ ಪಟ್ಟಣದ ಸಮೀಪದ ಮಹಾದೇವಪ್ಪನ ತೆವೆರ ಬಳಿ ನಡೆದಿದೆ.ಮೃತರನ್ನು ಸಂಗಪ್ಪ ಈರಪ್ಪ ಕುಂಬಾರ (80) ಎಂದು ಗುರುತಿಸಲಾಗಿದೆ. ರವಿವಾರ ತಮ್ಮ ಸ್ವಂತ ಜಮೀನಿನಲ್ಲಿದ್ದ ಗೋಧಿ ಹುಲ್ಲು ಸುಡಲು ಬೆಂಕಿ ಹಚ್ಚಿದ ವೇಳೆ, ಆ ಬೆಂಕಿ ಪಕ್ಕದ ಜಮೀನಿನ ಕಬ್ಬಿನ ಗದ್ದೆಗೆ ಹಬ್ಬಿದೆ. ಅದನ್ನು ನಂದಿಸಲು ತೆರಳಿದ ಸಂಗಪ್ಪ ಅವರು ಅಕಸ್ಮಿಕವಾಗಿ ಬೆಂಕಿಗೆ ಸಿಲುಕಿದ್ದು, ಮಧ್ಯಾಹ್ನ ಸಮಯದಲ್ಲಿ ಸಜೀವ ದಹನಗೊಂಡಿದ್ದಾರೆ.ಘಟನೆ ನಡೆದ ವೇಳೆ ಸುತ್ತಮುತ್ತ ಯಾರೂ ಇರಲಿಲ್ಲ. ಸಂಜೆ ವೇಳೆಗೆ ಮನೆಗೆ ಮರಳದ ಹಿನ್ನೆಲೆ ಕುಟುಂಬಸ್ಥರು ಹುಡುಕಾಟ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ.ಮಾಹಿತಿ ತಿಳಿದ ಕೊಲ್ಹಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು, ಪಟ್ಟಣ ಪಂಚಾಯಿತಿಗಳ ಸಹಯೋಗದಲ್ಲಿ ಅಂಬೇಡ್ಕರ್ ಜಯಂತಿಯಂದು ವಿವಿಧ ಕಾರ್ಯಕ್ರಮ ಕೈಗೊಳ್ಳಲಾಗುತ್ತಿದೆ. ಎಲ್ಲರ ಸಹಕಾರ ಅಗತ್ಯ ಎಂದು ತಹಶೀಲ್ದಾರ ನಿಂಗಪ್ಪ ಬಿರಾದಾರ ಹೇಳಿದರು.ಪಟ್ಟಣದ ಪ್ರವಾಸಿಮಂದಿರದಲ್ಲಿ ಮಂಗಳವಾರ ಡಾ.ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನರಾಮ್ ಜಯಂತಿಗಳ ಅಂಗವಾಗಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.ಜಯಂತಿ ಅಂಗವಾಗಿ ಹೂಗಳಿಂದ ಅಂಬೇಡ್ಕರ್ ವೃತ್ತದ ಅಲಂಕಾರ, ಸ್ತಬ್ಧಚಿತ್ರ, ಭಾವಚಿತ್ರ ಮೆರವಣಿಗೆ, ವಿಶೇಷ ಉಪನ್ಯಾಸ ಜೊತೆಗೆ ಉಪಹಾರ ವ್ಯವಸ್ಥೆ ಕಲ್ಪಿಸಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನೆರವೇರಿಸಲಾಗುತ್ತಿದೆ ಎಂದರು.ದಲಿತ ಸಂಘರ್ಷ ಸಮಿತಿಯ ರಾವುತ ತಳಕೇರಿ, ಜಾನು ಗುಡಿಮನಿ, ರಾಜಕುಮಾರ ಸಿಂದಗೇರಿ ಜಯಂತಿ ರೂಪರೇಷೆಗಳ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.ತಾಲ್ಲೂಕು ಪಂಚಾಯಿತಿ ಇಓ ಭಾರತಿ ಚೆಲುವಯ್ಯ, ಸಮಾಜ ಕಲ್ಯಾಣ ಅಧಿಕಾರಿ ಭವಾನಿ ಪಾಟೀಲ, ಬಿಇಓ ಎಂ.ಬಿ.ಯಡ್ರಾಮಿ, ಕೃಷಿ ಇಲಾಖೆಯ ಶರಣಗೌಡ ಬಿರಾದಾರ, ಶಿರಸ್ತೇದಾರ ಸುರೇಶ ಮ್ಯಾಗೇರಿ, ಹೆಸ್ಕಾಂನ ಯು.ಎಲ್.ಪಟ್ಟಣ, ಪಶು ಅಸ್ಪತ್ರೆಯ ರಾಮು ರಾಠೋಡ, ತೋಟಗಾರಿಕೆ ಇಲಾಖೆಯ ಸಚೀನ ಉಟಗಿ, ಸಿ.ಕೆ.ಕುದರಿ, ಎಸ್.ಎನ್.ಬಸವರೆಡ್ಡಿ, ಮುತ್ತುರಾಜ ಹಿರೇಮಠ,…

Read More