Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಮೇಲೆ ಷೂ ದಾಳಿ ಖಂಡನಾರ್ಹ, ಆದರೆ ಇದು ಮುಗಿದು ಹೋದ ಅಧ್ಯಾಯ, ಈ ವಿಷಯವಾಗಿ ಬಂದ್ ಕರೆ ನೀಡಿ ಜನಸಾಮಾನ್ಯರಿಗೆ ತೊಂದರೆ ನೀಡುವ ಅಗತ್ಯತೆ ಇರಲಿಲ್ಲ ಎಂದು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಹೇಳಿದರು.ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಮೇಲೆ ಷೂ ಎಸೆದ ಪ್ರಕರಣ ಮುಗಿದು ಹೋದ ಅಧ್ಯಾಯ, ಆದರೆ ಈ ವಿಷಯ ಮುಂದಿಟ್ಟುಕೊಂಡು ಬಂದ್ ಕರೆ ನೀಡಿ ಬಡವರನ್ನು ತೊಂದರೆ ನೀಡಿದ್ದು ಯಾವ ಪುರುಷಾರ್ಥಕ್ಕೆ ಎಂದು ಪ್ರಶ್ನಿಸಿದರು.ಒತ್ತಾಯಪೂರ್ವಕವಾಗಿ ಎಪಿಎಂಸಿಯಲ್ಲಿ ಅಂಗಡಿ ಬಂದ್ ಮಾಡಿ ಜನಸಾಮಾನ್ಯರನ್ನು ತೊಂದರೆಗೆ ದೂಕಿದ್ದು ಯಾಕೆ? ಎಂದು ಪ್ರಶ್ನಿಸಿದರು.ಲಿಂಬೆ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಚಂದ್ರಶೇಖರ ಕವಟಗಿ ಮಾತನಾಡಿ, ಸಂಘ ಪರಿವಾರ ಒಂದೇ ಒಂದು ದೇಶ ವಿರೋಧಿ ಕಾರ್ಯದಲ್ಲಿ ಭಾಗಿಯಾಗಿದ್ದು ತೋರಿಸಲಿ ಎಂದು ಬಿಜೆಪಿ ಮುಖಂಡ ಚಂದ್ರಶೇಖರ ಕವಟಗಿ ಸವಾಲು ಹಾಕಿದರು.ಸಂಘ ಪರಿವಾರವನ್ನು ನಿಷೇಧ ಮಾಡಿದ ನೆಹರೂ ಅವರೇ ಮುಂದೆ…
ವಿಜಯಪುರದಲ್ಲಿ ಬಿಜೆಪಿ ಮುಖಂಡ ಡಾ.ಸುರೇಶ ಬಿರಾದಾರ ಆಗ್ರಹ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕನೇರಿ ಶ್ರೀಗಳಿಗೆ ವಿಜಯಪುರ ಜಿಲ್ಲೆ ಪ್ರವೇಶ ನಿಷೇಧಿಸಿ ತಡೆಯಾಜ್ಞೆ ನೀಡಿರುವುದು ಖಂಡನೀಯ,ಇದರ ಹಿಂದೆ ಕಾಂಗ್ರೆಸ್ ನಾಯಕರ ಕೈವಾಡವಿದ್ದು, ಕೂಡಲೇ ಈ ನಿಷೇಧ ಆದೇಶವನ್ನು ಹಿಂಪಡೆದು, ಶ್ರೀಗಳ ಬಗ್ಗೆ ಅಗೌರವದಿಂದ ನಡೆದುಕೊಂಡಿರುವ ಕಾಂಗ್ರೆಸ್ ನಾಯಕರು ಕೂಡಲೇ ಶ್ರೀಗಳಿಗೆ ಕ್ಷಮೆ ಕೇಳಬೇಕು ಎಂದು ಬಿಜೆಪಿ ಮುಖಂಡ ಡಾ.ಸುರೇಶ ಬಿರಾದಾರ ಒತ್ತಾಯಿಸಿದರು.ಲಿಂಗಾಯತ ಒಕ್ಕೂಟದ ಮಠಾಧೀಶರು ರಾಜ್ಯ ಸರ್ಕಾರದ ಮೂಲಕ ಕನೇರಿ ಶ್ರೀಗಳನ್ನು ಹತ್ತಿಕ್ಕುವ ಬದಲು ಬಹಿರಂಗ ಚರ್ಚೆಗೆ ಬರಬೇಕು, ವೇದಿಕೆಯಲ್ಲಿ ಕನೇರಿ ಶ್ರೀಗಳು ಭಾಗವಹಿಸುತ್ತಾರೆ, ಎಲ್ಲ ವಿಷಯಗಳು ಆ ವೇದಿಕೆಯಲ್ಲಿಯೇ ಸಮಗ್ರ ಚಿಂತನೆಯಾಗಲಿ ಎಂದು ಹೇಳಿದರು.ನಾವೆಲ್ಲರೂ ಹಿಂದೂಗಳಾಗಿ ಇರೋಣ, ಭಿನ್ನಾಭಿಪ್ರಾಯ ಬಿಡೋಣ, ಈ ಬಗ್ಗೆ ಬಹಿರಂಗ ಚರ್ಚೆ ಮೂಲಕ ಸಿದ್ಧಾಂತ ಪ್ರತಿಪಾದಿಸೋಣ, ಜನ ಯಾರನ್ನು ಒಪ್ಪಿಕೊಳ್ಳುತ್ತಾರೋ ಒಪ್ಪಿಕೊಳ್ಳಲಿ ಎಂದರು.ಬುದ್ದ, ಬಸವ, ಡಾ.ಅಂಬೇಡ್ಕರ್ ಅವರ ಚಿಂತನೆಗಳಿಂದ ವಿಮುಖರಾಗಿ ಹಿಂಸೆ ಪ್ರತಿಪಾದಿಸುವ ಕಾರ್ಲಮಾರ್ಕ್ಸ ಸಿದ್ಧಾಂತದತ್ತ ವಾಲಿದ್ದಾರೆ, ಭಾರತೀಯ ಸಂವಿಧಾನವನ್ನು ವಿರೋಧಿಸಿದ್ದೆ ಈ ಕಮ್ಯೂನಿಸ್ಟರು ಎಂದರು.ಎಂದು ರಾಜ್ಯದಲ್ಲಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಿ.ಎಲ್.ಡಿ.ಇ ಆಸ್ಪತ್ರೆ ನಗರ ಆರೋಗ್ಯ ಕೇಂದ್ರ ಸ್ಥಾಪಿಸುವ ಮೂಲಕ ನಗರದ ದಕ್ಷಿಣ ಭಾಗದ ಜನರಿಗೂ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸುತ್ತಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ ಹೊನ್ನುಟಗಿ ತಿಳಿಸಿದ್ದಾರೆ.ಶುಕ್ರವಾರ ನಗರದ ಸರಕಾರಿ ಪಾಲಿಟೆಕ್ನಿಕ್ ಹಿಂಭಾದಲ್ಲಿರುವ ಬಿ.ಎಲ್.ಡಿ.ಇ ಆಯುರ್ವೇದ ಕಾಲೇಜಿನಲ್ಲಿ ಇದೇ ಮೊದಲ ಬಾರಿಗೆ ಆಯೋಜಿಸಿದ್ದ ಅಲೋಪಥಿ ಮತ್ತು ಆಯುರ್ವೇದ ಉಚಿತ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದರು.ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಎಂ. ಬಿ. ಪಾಟೀಲ ಮತ್ತು ಪ್ರಧಾನ ಕಾರ್ಯದರ್ಶಿ ಸುನೀಲಗೌಡ ಪಾಟೀಲ ಅವರ ಆಶಯದಂತೆ ಆಯುರ್ವೇದ ಕಾಲೇಜಿನ ಆವರಣದಲ್ಲಿ ನಗರ ಆರೋಗ್ಯ ಕೇಂದ್ರ ಪ್ರಾರಂಭಿಸಿದೆ. ಮುಖ್ಯ ಆಸ್ಪತ್ರೆಯ ಮಾದರಿಯಲ್ಲಿಯೇ ಇಲ್ಲಿಯೂ ಅತ್ಯುತ್ತಮ ಆರೋಗ್ಯ ಸೇವೆಗಳ ಸೌಲಭ್ಯವಿದೆ. ಹೆಚ್ಚುವರಿ ಸೇವೆಗಳಿಗೆ ಮುಖ್ಯ ಆಸ್ಪತ್ರೆಗೂ ಶಿಫಾರಸು ಮಾಡಲಾಗುತ್ತದೆ. ಈ ಭಾಗದ ಜನರಿಗೆ ಇದರಿಂದ ಸಾಕಷ್ಟು ಅನುಕೂಲವಾಗಿದೆ ಎಂದು ಹೇಳಿದರು.ಬಿ.ಎಲ್.ಡಿ.ಇ ಹೈಟೆಕ್ ಆಯುರ್ವೇದ ಆಸ್ಪತ್ರೆ ಮತ್ತು ನಗರ ಆರೋಗ್ಯ ಕೇಂದ್ರದ ಆಡಳಿತಾಧಿಕಾರಿ ಡಾ. ಸಂಜಯ ಕಡ್ಲಿಮಟ್ಟಿ ಮಾತನಾಡಿ,…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನೂತನವಾಗಿ ಆಯ್ಕೆಯಾಗಿರುವ ನಿರ್ದೇಶಕರೆಲ್ಲರೂ ಯಾವುದೇ ಭಿನ್ನಾಭಿಪ್ರಾಯ ಇಲ್ಲದಂತೆ ಎಲ್ಲರೂ ಸಾಮರಸ್ಯದಿಂದ ಶ್ರೀಸಿದ್ದೇಶ್ವರ ಸಹಕಾರಿ ಬ್ಯಾಂಕ್ ನ್ನು ಅಭಿವೃದ್ಧಿ ಮಾಡಿ ಉನ್ನತಿಗೆ ಕೊಂಡೊಯ್ಯಬೇಕು ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಕಿವಿ ಮಾತು ಹೇಳಿದರು.ಶುಕ್ರವಾರ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಧಾನ ಕಛೇರಿಯಲ್ಲಿ ಶ್ರೀಸಿದ್ದೇಶ್ವರ ಸಹಕಾರಿ ಬ್ಯಾಂಕ್ ಆಡಳಿತ ಮಂಡಳಿಗೆ ನೂತನವಾಗಿ ಆಯ್ಕೆಯಾಗಿರುವ ನಿರ್ದೇಶಕರನ್ನು ಸನ್ಮಾನಿಸಿ ಮಾತನಾಡಿದ ಸಚಿವರು, ಡಾ.ಫ.ಗು.ಹಳಕಟ್ಟಿ ಅವರಂಥ ಮಹಾತ್ಮರು ಜಿಲ್ಲೆಯ ಅಭ್ಯುದಯದ ದೂರದೃಷ್ಟಿಯಿಂದ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ಕಟ್ಟಿದ್ದಾರೆ. ವಿಜಯಪುರ ಜಿಲ್ಲೆಯ ಮಟ್ಟಿಗೆ ಅತ್ಯಂತ ಪ್ರತಿಷ್ಠಿತ ಬ್ಯಾಂಕ್ ಎಂಬ ಹಿರಿಮೆ ಹೊಂದಿದೆ. ಇದು ನಮ್ಮ ಹಿರಿಯರು ಕಟ್ಟಿ ಬೆಳೆಸಿರುವ ಮಹತ್ವಕಾಂಕ್ಷೆಯ ಸಹಕಾರಿ ಬ್ಯಾಂಕ್. ಹೀಗಾಗಿ ಭವಿಷ್ಯದಲ್ಲಿ ಉಜ್ವಲವಾಗಿ ಬೆಳೆಸುವ ಜವಾಬ್ದಾರಿ ನಿಮ್ಮ ಮೇಲಿದ್ದು, ಸಮರ್ಥವಾಗಿ ನಿಭಾಯಿಸಬೇಕು ಎಂದರು.ಶ್ರೀ ಸಿದ್ಧೇಶ್ವರ ಸಹಕಾರಿ ಬ್ಯಾಂಕ್ ಶೇರುದಾರ ಮತದಾರರು ನಿಮ್ಮ ಮೇಲೆ ಇರಿಸಿರುವ ವಿಶ್ವಾಸ, ನಂಬಿಕೆಗೆ ಚ್ಯುತಿ…
ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು | ಜಿಲ್ಲಾ ಉಸ್ತುವಾರಿ ಮಂತ್ರಿಗಳೂ ಸಹ ಸಹಮತ ವ್ಯಕ್ತ | ಸಚಿವ ಶಿವಾನಂದ ಪಾಟೀಲ ಸ್ಪಷ್ಟನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಖಾಸಗಿ ಸಹಭಾಗಿತ್ವದ ಬದಲಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಕುರಿತು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಹೇಳಿದರು.ಶುಕ್ರವಾರ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಧಾನ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳು ಮೊನ್ನೆ ಕರೆದಿದ್ದ ಸಚಿವರ ಸಭೆಯಲ್ಲಿ ನಮ್ಮ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಕುರಿತು ಮಾತನಾಡಿದ್ದೇನೆ. ಸಿದ್ಧರಾಮಯ್ಯ ಅವರು ಈ ಹಿಂದೆ ಮುಖ್ಯಮತ್ರಿಗಳಾಗಿದ್ದಾಗ ನಾನೇ ಮೂರು ಬಾರಿ ಸದನದಲ್ಲಿ ಪ್ರಶ್ನೆ ಮಾಡಿದ್ದೇನೆ ಎಂಬುದನ್ನು ಮುಖ್ಯಮಂತ್ರಿಗಳಿಗೆ ವಿವರಿಸಿದ್ದೇನೆ ಎಂದರು.400 ಕೋಟಿ ರೂ. ಖರ್ಚಾಗುತ್ತದೆ ಎಂದು ಮುಖ್ಯಮಂತ್ರಿಗಳು ಹೇಳಿದಾಗ ಬೇರೆಯವರು 500 ಕೋಟಿ ರೂ. ಖರ್ಚು ಮಾಡಿದರೂ, ನಮ್ಮ ಜಿಲ್ಲೆಯಲ್ಲಿ ಅದರ ಅರ್ಧಕ್ಕಿಂತ ಕಡಿಮೆ ಖರ್ಚಿನಲ್ಲಿ…
ಲೇಖನ- ವೀಣಾ ಹೇಮಂತ್ ಗೌಡ ಪಾಟೀಲಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಮಕ್ಕಳು ತಮ್ಮ ದೈನಂದಿನ ಚಟುವಟಿಕೆಗಳನ್ನು ತಾವೆ ಮಾಡಿಕೊಳ್ಳಲು ಕಲಿಸಿ. ಇದು ತಾಯಂದಿರಿಗೆ ಅನುಕೂಲವಾಗುತ್ತದೆ ಮತ್ತು ಮಗು ತನ್ನ ಮುಂದಿನ ಭವಿಷ್ಯವನ್ನು ಉತ್ತಮವಾಗಿ ಕಟ್ಟಿಕೊಳ್ಳಲು ದಾರಿಯಾಗುತ್ತದೆ ಎಂದು ಕಾರ್ಯಕ್ರಮವೊಂದರಲ್ಲಿ ಪಾಲಕರನ್ನು ಉದ್ದೇಶಿಸಿ ನಾನು ಹೇಳಿದಾಗ ವೇದಿಕೆಯ ಮೇಲೆ ಇದ್ದ ಓರ್ವ ಮಹಿಳೆ ಬೇಡ! ನನ್ನ ಸೊಸೆ ವೈದ್ಯಳಾಗಿದ್ದಾಳೆ ಆದರೂ ಕೂಡ ಪ್ರತಿದಿನ ಮಕ್ಕಳ ಎಲ್ಲ ಕೆಲಸಗಳನ್ನು ಆಕೆ ಅತ್ಯಂತ ಸಂತಸದಿಂದ ನಿರ್ವಹಿಸುತ್ತಾಳೆ.. ಆದ್ದರಿಂದ ಮಕ್ಕಳ ಎಲ್ಲಾ ಕೆಲಸಗಳನ್ನು ತಾಯಂದಿರೇ ಮಾಡಲಿ ಎಂದು ಹೇಳಿದರು.ಅವರು ಹೇಳುವ ಮಾತಿನಲ್ಲಿಯೂ ತಥ್ಯವಿದೆ.. ಆದರೆ ಅದು ಅರ್ಧ ಸತ್ಯ. ಮಗು ತೀರಾ ಚಿಕ್ಕದಿದ್ದಾಗ ಖಂಡಿತವಾಗಿಯೂ ನಾವು ಮಕ್ಕಳ ಎಲ್ಲಾ ಅವಶ್ಯಕತೆಗಳನ್ನು ಪೂರೈಸಲೇಬೇಕು ನಿಜ, ಆದರೆ ಎರಡೂವರೆ ಮೂರು ವರ್ಷದ ಹೊತ್ತಿಗೆ ಮಗು ಕೊಂಚ ಕೊಂಚವಾಗಿ ವಿಷಯಗಳನ್ನು ಅರಿಯುವ ಸಮಯಕ್ಕೆ ಖಂಡಿತವಾಗಿಯೂ ತನ್ನ ಕೆಲಸವನ್ನು ತಾನೇ ಹಂತ ಹಂತವಾಗಿ ನಿರ್ವಹಿಸಿಕೊಳ್ಳಲು ಪ್ರೋತ್ಸಾಹಿಸಲೇಬೇಕು. ಆರ್ಥಿಕವಾಗಿ ಅತ್ಯುತ್ತಮ ಸ್ಥಿತಿಯಲ್ಲಿದ್ದು ಔದ್ಯೋಗಿಕವಾಗಿಯೂ ದೊಡ್ಡ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರಸ್ತುತ ಶಿಕ್ಷಣ ವ್ಯವಸ್ಥೆಯಲ್ಲಿ ಮಹಿಳೆಯರಿಗೆ ಕೌಶಲ್ಯಗಳ ಅರಿವು ಮಾಡಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ಮಹಿಳಾ ವಿವಿಯ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಜೈವಿಕ ಮಾಹಿತಿ ಅಧ್ಯಯನ ವಿಭಾಗ ಪ್ರಧಾನ ಮಂತ್ರಿ ಉಚ್ಚತಾರ ಶಿಕ್ಷಾ ಅಭಿಯಾನ (Pಒ-UShಚಿ) ಉನ್ನತ ಶಿಕ್ಷಣ ಸಚಿವಾಲಯ ಭಾರತ ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಅವರ ಅನುದಾನ ಅಡಿಯಲ್ಲಿ ಬುಧವಾರ ಆಯೋಜಿಸಿದ್ದ ‘ಜೀವ ವಿಜ್ಞಾನ ಹಾಗೂ ವೈದ್ಯಕೀಯ ವಿಜ್ಞಾನದಲ್ಲಿ ಜೈವಿಕ ಮಾಹಿತಿ ವಿಜ್ಞಾನ ಉಪಯೋಗತೆ’ ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಕೌಶಲ್ಯಾಭಿವೃದ್ಧಿಯು ವಿದ್ಯಾರ್ಥಿನಿಯರ ವ್ಯಕ್ತಿತ್ವ ವಿಕಸನ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲಿ ತಮ್ಮ ಸಾಮರ್ಥ್ಯವನ್ನು ತೋರಿಸಲು ಈ ಕೌಶಲ್ಯಗಳು ನೆರವಾಗುತ್ತವೆ. ಇದರಿಂದ ದೇಶದ ಅಭಿವೃದ್ಧಿ ಮತ್ತು ಮಹಿಳಾ ಸಬಲೀಕರಣ ಸಾಧ್ಯವಾಗುತ್ತದೆ. ಜೊತೆಗೆ ನಿರುದ್ಯೋಗ ಸಮಸ್ಯೆಯು ಕೂಡ ಕಡಿಮೆಯಾಗುತ್ತದೆ ಎಂದರು.ಇದೇ ಸಂದರ್ಭದಲ್ಲಿ ಡಾ. ಮಹಾಂತೇಶ…
ಅಕ್ಕಮಹಾದೇವಿ ಮಹಿಳಾ ವಿವಿಯ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವೃತ್ತಿ ಮತ್ತು ವೈಯಕ್ತಿಕ ಜೀವನದ ಸಮತೋಲನ ಅಗತ್ಯ ಎಂದು ಮಹಿಳಾ ವಿವಿಯ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಸಮಾಜ ಕಾರ್ಯ ವಿಭಾಗ ಹಾಗೂ ಪ್ರಧಾನಮಂತ್ರಿ ಉಚ್ಛತರ ಶಿಕ್ಷಣ ಅಭಿಯಾನ (ಪಿಎಮ್ -ಉಷಾ) ಕೇಂದ್ರ ಸರ್ಕಾರದ ಉನ್ನತ ಶಿಕ್ಷಣ ಸಚಿವಾಲಯ ಹಾಗೂ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಬೆಂಗಳೂರು ಇವರ ಹಣಕಾಸು ನೆರವಿನೊಂದಿಗೆ ಬುಧವಾರ ಆಯೋಜಿಸಿದ್ದ ‘ಉದ್ಯೋಗನಿರತ ಮಹಿಳೆಯರ ಕೆಲಸ-ಜೀವನ ಸಮತೋಲನ’ ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಇಂದಿನ ವೇಗದ ಜಗತ್ತಿನಲ್ಲಿ ಕೆಲಸ ಮತ್ತು ಜೀವನದ ಸಮತೋಲನ ಅತ್ಯಂತ ಮುಖ್ಯವಾಗಿದೆ. ವಿಶೇಷವಾಗಿ ವೃತ್ತಿನಿರತ ಮಹಿಳೆಯರು ತಮ್ಮ ವೃತ್ತಿಜೀವನ ಹಾಗೂ ವೈಯಕ್ತಿಕ ಜೀವನದ ಬೇಡಿಕೆಗಳು ಮತ್ತು ಸವಾಲುಗಳನ್ನು ಸಮರ್ಥವಾಗಿ ನಿರ್ವಹಿಸುವ ಕಲೆ ಅರಿತುಕೊಳ್ಳಬೇಕಾಗಿದೆ. ಇಂದಿನ ಬಹುತೇಕ ಕ್ಷೇತ್ರಗಳಲ್ಲಿ ಕೆಲಸದ ಒತ್ತಡ ಸಾಮಾನ್ಯವಾಗಿದ್ದು, ಅದನ್ನು ಕಡಿಮೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಆರೋಗ್ಯ ಕೇಂದ್ರ ಹಾಗೂ ವಸತಿ ನಿಲಯಗಳಲ್ಲಿ ಕಾರ್ಯನಿರ್ವಹಿಸಲು ಗೌರವಧನ ಆಧಾರದ ಮೇಲೆ ‘ಮಹಿಳಾ ವೈದ್ಯಾಧಿಕಾರಿಗಳು’, ‘ಮಹಿಳಾ ವಸತಿ ನಿಲಯಪಾಲಕರು’, ‘ಮಹಿಳಾ ಸ್ಟಾಫ್ ನರ್ಸ್’ ಹಾಗೂ ‘ಮಹಿಳಾ ಜ್ಯೂನಿಯರ್ ಇಂಜಿನಿಯರ್ (ಸಿವಿಲ್)’ ಹುದ್ದೆಗಳಿಗೆ ತಾತ್ಕಾಲಿಕ ನೇಮಕಾತಿ ಮಾಡಿಕೊಳ್ಳಬೇಕಾಗಿದ್ದು, ಆಸಕ್ತಿ ಹೊಂದಿದ ಅಭ್ಯರ್ಥಿಗಳು ಇದೇ ದಿ. ೨೪ ರಂದು ಬೆಳಿಗ್ಗೆ ೧೧:೦೦ ಗಂಟೆಗೆ ವಿವಿಯ ಆಡಳಿತ ಭವನದ ಸಿಂಡಿಕೇಟ್ ಸಭಾ ಭವನದಲ್ಲಿ ನೇರ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ಮೂಲ ದಾಖಲಾತಿಗಳೊಂದಿಗೆ ಹಾಜರಿರಬೇಕು. ಹೆಚ್ಚಿನ ಮಾಹಿತಿಗಾಗಿ ತಿತಿತಿ.ಞsತಿu.ಚಿಛಿ.iಟಿನ್ನು ಸಂಪರ್ಕಿಸಬಹುದು ಎಂದು ಕುಲಸಚಿವ ಶಂಕರಗೌಡ ಸೋಮನಾಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೫-೨೬ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕ ಸಂಖ್ಯೆ: ೨೨೨ ರಲ್ಲಿ ಘೋಷಿಸಿರುವಂತೆ ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತರ ಸಮುದಾಯದವರ ಸರಳ ವಿವಾಹಗಳ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ ೫೦ ಸಾವಿರ ರೂ.ಗಳ ಸಹಾಯಧನ ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ.ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಗಳ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ ೫೦ ಸಾವಿರ ರೂಪಾಯಿಗಳು ನೀಡುವ ಕಾರ್ಯಕ್ರಮವನ್ನು ಷರತ್ತಿಗೊಳಪಟ್ಟು ಅನುಷ್ಠಾನಗೊಳಿಸಲಾಗುವುದು. ಅರ್ಜಿ ಸಲ್ಲಿಸುವ ವಧು-ವರರು ಕರ್ನಾಟಕ ರಾಜ್ಯಕ್ಕೆ ಸೇರಿದ ಅಲ್ಪಸಂಖ್ಯಾತರ ಸಮುದಾಯಗಳಿಗೆ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ) ಸೇರಿದವರಾಗಿರಬೇಕು. ಸಾಮೂಹಿಕ ವಿವಾಹಗಳಲ್ಲಿ ಕನಿಷ್ಠ ೧೦ ಜೋಡಿಗಳು ಭಾಗವಹಿಸಿರತಕ್ಕದ್ದು. ಈ ಸೌಲಭ್ಯ ಪಡೆಯುವ ವಧುವಿಗೆ ಕನಿಷ್ಠ ೧೮ ವರ್ಷದಿಂದ ಗರಿಷ್ಠ ೪೨ ವರ್ಷಗಳು, ವರನಿಗೆ ಕನಿಷ್ಠ ೨೧ ವರ್ಷದಿಂದ ಗರಿಷ್ಠ ೪೫ ವರ್ಷ ವಯಸ್ಸು ಆಗಿರತಕ್ಕದ್ದು. ಈ ಯೋಜನೆಯಡಿ ಸಹಾಯಧನ ಪಡೆಯಲು ವಧು-ವರರ ವಾರ್ಷಿಕ ಆದಾಯವು ೨.೫೦ ಲಕ್ಷ ರೂ.ಗಳು ಮತ್ತು ಒಟ್ಟಾರೆಯಾಗಿ ೫ ರೂ. ಲಕ್ಷಗಳನ್ನು…
