Author: editor.udayarashmi@gmail.com

೫ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸಚಿನ್ ಕೌಶಿಕ್ ಅಭಿಮತ ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ತಮ್ಮದಲ್ಲದ ಸಮಸ್ಯೆಗಳನ್ನು ತಮ್ಮದೇ ಎಂದು ಭಾವಿಸಿ ಪಕ್ಷಗಾರರಿಗೆ ನ್ಯಾಯ ಕೊಡಿಸುವ ಕಾರ್ಯ ಮಾಡುವ ಏಕೈಕ ವೃತ್ತಿ ವಕೀಲಿ ವೃತ್ತಿ ಮಾತ್ರ ಎಂದು ೫ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸಚಿನ್ ಕೌಶಿಕ್ ಅವರು ಹೇಳಿದರು.ಇಲ್ಲಿನ ನ್ಯಾಯವಾದಿಗಳ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಕೀಲರ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.ತಮ್ಮ ಪಕ್ಷಗಾರರಿಗೆ ನ್ಯಾಯ ಕೊಡಿಸಲು ಪ್ರತೀ ದಿನ ಅಭ್ಯಾಸದಲ್ಲಿ ನಿರತರಾಗಿ, ನಾಳೆ ದಿನದ ಪ್ರಕರಣದಲ್ಲಿ ನಾನೇನು ಮಾಡಬೇಕು, ಹೇಗೆ ನಾನು ಈ ಪ್ರಕರಣವನ್ನು ಗೆಲ್ಲಬೇಕು ಎಂಬ ಬಗ್ಗೆ ಪೂರ್ವ ತಯಾರಿ ಮಾಡಿಕೊಳ್ಳುವಲ್ಲಿ ಸಾಕಷ್ಟು ಒತ್ತಡಗಳನ್ನು ಅನುಭವಿಸುವ ಎಲ್ಲ ವಕೀಲರದ್ದು ನೈತಿಕತೆ, ಪ್ರಾಮಾಣಿಕತೆ, ಸತ್ಯ ನಿಷ್ಟೆ-ಈ ಮೌಲ್ಯಗಳನ್ನು ಕಾಪಾಡುವ ಬಹುದೊಡ್ಡ ಕರ್ತವ್ಯವೂ ಕೂಡ ಇದೆ. ಹಾಗಾಗಿ ಎಲ್ಲ ವಕೀಲರು ತಮ್ಮ ಆರೋಗ್ಯದ ಕಡೆಗೆ ಗಮನ ಕೊಡುವಂತೆ ಕಿವಿಮಾತು ಹೇಳಿದರು.ನ್ಯಾಯವಾದಿಗಳ ಸಂಘದ ಅಧ್ಯಕ್ಷ ಶಶಿಕಾಂತ ಮಾಲಗತ್ತಿ…

Read More

ಲೇಖನ- ಬಸವರಾಜ ಹೂಗಾರಹವ್ಯಾಸಿ ಬರಹಗಾರರುಆಲಮೇಲಮೊ: 9740207097 ಉದಯರಶ್ಮಿ ದಿನಪತ್ರಿಕೆ ಭಾರತದ ರಾಜಕೀಯ ಇತಿಹಾಸವು ಕೆಲವರನ್ನು ನಾಯಕರೆಂದು ಗುರುತಿಸುತ್ತದೆ, ಕೆಲವರನ್ನು ಐಕಾನ್‌ಗಳೆಂದು ನೋಡುತ್ತದೆ. ಆದರೆ ಅಟಲ್ ಬಿಹಾರಿ ವಾಜಪೇಯಿ ಅವರು ನಾಯಕನಷ್ಟೇ ಅಲ್ಲ, ಅವರು ಒಂದು ಮೌಲ್ಯಗಳ ಯುಗ. ಅವರ ಹೆಸರನ್ನು ಉಚ್ಚರಿಸಿದಾಗಲೂ ದೇಶದ ನಾಗರಿಕರಿಗೆ ಒಂದು ವಿಶಿಷ್ಟವಾದ ಮೌನ-ಭಾವನೆ ಮೂಡುವುದು. ಅದು ಭಯದಿಂದ ಹುಟ್ಟಿದ ಮೌನವಲ್ಲ, ಗೌರವದಿಂದ ತುಂಬಿದ ಮೌನ.ಅವರನ್ನು “ಅಜಾತಶತ್ರು” ಎಂದು ಕರೆಯುವುದು ಭಾವೋದ್ರೇಕದ ಪದವಲ್ಲ, ಅದು ವಾಜಪೇಯಿಯವರ ವ್ಯಕ್ತಿತ್ವದ ನಿಖರ ವಾಸ್ತವ್ಯ.ನೆಹರು-ಅಟಲ್: ರಾಜಕೀಯ ಮೀರಿದ ಬಂಧಅಟಲ್‌ಜಿಯವರ ರಾಜಕೀಯದ ದೃವತಾರೆಯಂತೆ ಇಂದು ನೆನಪಾಗುವುದು ಅವರ ನೆಹರುರವರೊಂದಿಗೆ ಹೊಂದಿದ್ದ ಒಡನಾಟ.1957ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಮೊದಲಬಾರಿ ಲೋಕಸಭೆಗೆ ಆಯ್ಕೆಯಾದಾಗ ಅವರು ವಿರೋಧ ಪಕ್ಷದ ಯುವ ನಾಯಕ. ಆದರೆ ಅವರ ವಾಗ್ಮಿಯತೆ, ಅವರ ಸ್ವಚ್ಛ ರಾಜಕೀಯ ಧಾಟಿ, ಮತ್ತು ದೇಶದ ಬಗ್ಗೆ ಅವರ ಪ್ರೀತಿ ಇವು ನೆಹರುರವರ ಗಮನ ಸೆಳೆದಿದ್ದವು.ಒಂದು ಬಾರಿ ಲೋಕಸಭೆಯಲ್ಲಿ ಅಟಲ್ ಜೀ ಉತ್ಸಾಹಪೂರ್ಣವಾಗಿ ಮಾತನಾಡಿದ ನಂತರಜವಾಹರಲಾಲ್ ನೆಹರುರವರು ತಮ್ಮ…

Read More

ಅವ್ಯವಹಾರ & ಭ್ರಷ್ಟಾಚಾರದ ಆರೋಪ ಹಿನ್ನೆಲೆ ಡಿಡಿಪಿಐ ಕಚೇರಿ ಹಾಗೂ ವಿಜಯಪುರ ನಗರ ಹಾಗೂ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳ ಮೇಲೆ ದಾಳಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ವ್ಯಾಪಕ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಡಿಡಿಪಿಐ ಕಚೇರಿ ಹಾಗೂ ವಿಜಯಪುರ ನಗರ ಹಾಗೂ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳ ಮೇಲೆ ಗುರುವಾರ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸಿದರು.ಶಿಕ್ಷಣ ಇಲಾಖೆಯಲ್ಲಿನ ಅವ್ಯವಹಾರ, ಭ್ರಷ್ಟಾಚಾರದ ದೂರುಗಳ ಆಧಾರದ ಮೇಲೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್‌.ಪಾಟೀಲ ಸ್ವಯಂ ಪೇರಿತ ಪ್ರಕರಣ ದಾಖಲಿಸಿಕೊಂಡು, ಕಚೇರಿಗಳಲ್ಲಿ ಶೋಧ ಕಾರ್ಯ ನಡೆಸಲು ವಾರೆಂಟ್ ಹೊರಡಿಸಿದ್ದರು. ಅದರಂತೆ ಗುರುವಾರ ಲೋಕಾಯುಕ್ತ ಎಸ್‌ಪಿ ಟಿ.ಮಲ್ಲೇಶ ಮಾರ್ಗದರ್ಶನದಲ್ಲಿ ಪೊಲೀಸ್ ಉಪಾಧೀಕ್ಷಕರು ಹಾಗೂ ನಾಲ್ವರು ಇನ್‌ಸ್ಪೆಕ್ಟರ್‌ಗಳ ತಂಡವು ಮೂರು ಕಚೇರಿಗಳ ಮೇಲೆ ಬೆಳಗ್ಗೆ 11 ಗಂಟೆಗೇ ದಾಳಿ ನಡೆಸಿತು.ನಗರದ ಜಿಲ್ಲಾಧಿಕಾರಿಗಳ ಕಚೇರಿ ರಸ್ತೆಯಲ್ಲಿರುವ ಡಿಡಿಪಿಐ ಕಚೇರಿ ಹಾಗೂ ನಗರ ಹಾಗೂ ಗ್ರಾಮೀಣ…

Read More

ವೃಕ್ಷಥಾನ್ ಹೆರಿಟೇಜ್ ರನ್ | ವೃಕ್ಷ ಕಿಡ್ಸ್ ರನ್, ವಾಕ್ ಮತ್ತು ಶ್ರವಣದೋಷ ಮಕ್ಕಳ ಓಟ & ಮಾಧ್ಯಮ ಪ್ರತಿನಿಧಿಗಳ ಓಟ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವೃಕ್ಷಥಾನ್ ಹೆರಿಟೇಜ್ ರನ್-2025 ಅಂಗವಾಗಿ ಇಂದು ಶುಕ್ರವಾರ ನಗರದ ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಆಯೋಜಿಸಲಾದ ವೃಕ್ಷ ಕಿಡ್ಸ್ ರನ್, ವಾಕ್ ಮತ್ತು ಶ್ರವಣದೋಷ ಮಕ್ಕಳ ಓಟ ಹಾಗೂ ಮಾಧ್ಯಮ ಪ್ರತಿನಿಧಿಗಳ ಓಟಕ್ಕೆ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಓಟಗಾರರು ಉತ್ಸಾಹದಿಂದ ಪಾಲ್ಗೋಂಡಿದ್ದಾರೆ.ಬೆಳಿಗ್ಗೆ ಎಂಟು ಗಂಟೆಗೆ ಪ್ರಾರಂಭವಾದ ನಾನಾ ವಿಭಾಗಗಳ ಓಟಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ ವೃಕ್ಷಥಾನ್ ಧ್ವಜ ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಬೆಳಿಗ್ಗೆ ಏಳು ಗಂಟೆಯಿಂದಲೇ ಜಿಲ್ಲಾ ಕ್ರೀಡಾಂಗಣದಲ್ಲಿ ಸೇರಿದ ಎಲ್. ಕೆ. ಜಿ, ಯು.ಕೆ.ಜಿ, ಮತ್ತು ಒಂದರಿಂದ 5ನೇ ತರಗತಿ ವರೆಗಿನ ಮಕ್ಕಳು, ವಾಕ್ ಮತ್ತು ಶ್ರವಣ ದೋಷ ಮಕ್ಕಳು ಅತ್ಯುತ್ಸಾಹದಿಂದ ಓಟದಲ್ಲಿ ಪಾಲ್ಗೋಂಡರು. ಅಷ್ಟೇ ಅಲ್ಲ, ಓಡುತ್ತಿದ್ದ ಮಕ್ಕಳಿಗೆ ಚಪ್ಪಾಳೆ ತಟ್ಟುವ ಮೂಲಕ, ಘೋಷಣೆ…

Read More

ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ಅಜ್ಞಾನದಿಂದ ಸುಜ್ಞಾನದೆಡೆಗೆ ಕೊಂಡೊಯ್ಯುವ ಮಹಾ ಶಕ್ತಿಯೇ ಗುರು ಅಂತಹ ಸದ್ಗುರುವಿನ ಸನ್ನಿಧಿಯಲ್ಲಿ ಜರುಗುವ ಹುಣ್ಣಿಮೆಯ ಸತ್ಸಂಗ ಮಹಾ ಬೆಳಕು ಎಂದು ಶಿವಬಸಯ್ಯ ಸ್ವಾಮಿ ಕುಕೂನೂರು ಹೇಳಿದರು.ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಶ್ರೀ ಗುರು ಕಾಂತೇಶ್ವರ ಜನ ಕಲ್ಯಾಣ ಸೇವಾ ಪ್ರತಿಷ್ಠಾನದ ವತಿಯಿಂದ ಗುರುವಾರ ಸಂಜೆ ಹಮ್ಮಿಕೊಂಡಿದ್ದ ಮಾಸಿಕ ಹುಣ್ಣಿಮೆಯ ಶಿವಾನುಭವ ಗೋಷ್ಠಿ ಉದ್ಘಾಟಿಸಿ ಉಪನ್ಯಾಸ ನೀಡಿದ ಅವರು ಗುರು ಎಂದರೆ ಅಭಿಮಾನ, ಗುರು ಎಂದರೆ ಆಶಿರ್ವಾದ, ಗುರು ಎಂದರೆ ಚೈತನ್ಯ ಸ್ವರೂಪ, ಎನ್ನುತ್ತಾ, ಜಗದ ಜನರು ಜಂಜಾಟಗಳಿಂದ ಜರ್ಜರಿತವಾದಗ ಜನಜೀವನಕ್ಕೆ ಜೀವಾಮೃತ ತುಂಬಿ ಜಾಗೃತಿಗೊಳಿಸುವ ಜಂಗಮ ಸ್ವರೂಪವೇ ಗುರು ಎಂದವರು, ಸಾಧು, ಸಂತರು, ಸತ್ಪುರುಷರು, ಚಿಂತಕರು, ಶ್ರೇಷ್ಠ ದಾರ್ಶನಿಕರು ತೋರಿದ ಮಾರ್ಗವನ್ನು ಅನುಸರಿಸುತ್ತಾ, ಭಗವಂತನ ಸಾಕ್ಷಾತ್ಕಾರಕ್ಕೆ ಸಾಕ್ಷಿಯಾಗುವ ಮೂಲಕ ಸದ್ಭಕ್ತರ ಬಾಳು ಬೆಳಗಲಿ ಎಂಬ ಸದುದ್ದೇಶದಿಂದ ಮಾಸಿಕ ಶಿವಾನುಭವ ಗೋಷ್ಠಿಯನ್ನು ಆಯೋಜಿಸಿ ಅನುಭವದ ಅಮೃತಧಾರೆ ಎರೆಯುವ ಷ ಬ್ರ ಚನ್ನಬಸವ ಶಿವಾಚಾರ್ಯರ ಘನ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದರು.ಸದ್ಭಕ್ತರಾದ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸೇವಾ ಬದ್ಧತೆ ಮೂಡಿಸುವುದಕ್ಕೆ, ಪರಿಪೂರ್ಣ ವ್ಯಕ್ತಿತ್ವ ವಿಕಸನಕ್ಕಾಗಿ ಎನ್‌ಎಸ್‌ಎಸ್‌ ಶಿಬಿರ ನಡೆಯುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿ ಇದರ ಅನುಭವ ಪಡೆದುಕೊಳ್ಳಬೇಕೆಂದು ವಿಶ್ರಾಂತ ಉಪನ್ಯಾಸಕ ಬಿ. ಎಸ್. ಬಿರಾದಾರ ಹೇಳಿದರು.ಅವರು ಪಟ್ಟಣದ ತಾಲೂಕ ಶಿಕ್ಷಣ ಪ್ರಸಾರಕ ಮಂಡಳಿಯ ಎಚ್‌ಜಿ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡ 2025-26 ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.ಶಿಕ್ಷ ಣ ಹೇರಿಕೆ ಆಗಬಾರದು, ಪಠ್ಯ ಶಿಕ್ಷ ಣ ಜತೆ ಸಮುದಾಯದ ಪರಿಚಯ, ಸೇವೆ ಮೂಲಕ ಸ್ವಚ್ಛತೆ ಅರಿವು, ನಮ್ಮಲ್ಲಿನ ಸಂಸ್ಕೃತಿ ಪ್ರದರ್ಶನಕ್ಕೆ ಸಾಂಸ್ಕೃತಿಕ ಕಾರ‍್ಯಕ್ರಮ, ಸಹ ಭೋಜನ, ಕ್ರೀಡೆ ಮೂಲಕ ಸಮಗ್ರತೆ ಪರಿಕಲ್ಪನೆ ಹೀಗೆ ಹಲವು ಚಿಂತನೆ ಸಾಕಾರಕ್ಕಾಗಿ ಶಿಬಿರ ನಡೆಯುತ್ತದೆ. ಅದನ್ನು ಅರ್ಥ ಮಾಡಿಕೊಂಡು ಎಲ್ಲ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕೆಂದರು.ಸಮಾರಂಭದ ಅಧ್ಯಕ್ಷತೆ ವಹಿಸಿದ ಮಹಾವಿದ್ಯಾಲಯದ ಪ್ರಾಚಾರ್ಯ ಎ. ಆರ್. ಹೆಗ್ಗನದೊಡ್ಡಿ ಮಾತನಾಡಿ,ಕಲಿಕೆ ವಿದ್ಯಾರ್ಥಿ, ಶಿಕ್ಷ ಕರ ನಡುವಿನ ಕೊಂಡಿ ಆಗಿರದೆ ಸಮುದಾಯದ ನಡುವೆಯೂ ರಚನಾತ್ಮಕ ಸಂಬಂಧ ಏರ್ಪಡಬೇಕು…

Read More

ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದ ಸಹಸ್ರಾರು ಭಕ್ತ ಸಮೂಹ | ವಿವಿಧೆಡೆ ಅನ್ನ ಸಂತರ್ಪಣೆ ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಉತ್ತರಕರ್ನಾಟಕದ ದೊಡ್ಡ ಜಾತ್ರೆಗಳಲ್ಲಿ ಒಂದಾದ ತಾಳಿಕೋಟಿ ತಾಲೂಕಿನ ಕಲಕೇರಿ ಗ್ರಾಮದ ಆರಾಧ್ಯ ಧೈವವಾದ ಶ್ರೀಗುರು ವೀರಘಂಟೈ ಮಡಿವಾಳೇಶ್ವರರ ಜಾತ್ರಾ ಮಹೋತ್ಸವದ ಅಂಗವಾಗಿ ರವಿವಾರ ನಸುಕಿನ ಜಾವ ೫ ಗಂಟೆಗೆ ಅಗ್ಗಿ ಉತ್ಸವ ಹಾಗೂ ಸಂಜೆ ೫ ಘಂಟೆಗೆ ಮೃಘಶಿರ ನಕ್ಷತ್ರದಲ್ಲಿ ಭಾರಿ ಜನಸ್ತೋಮದ ಜಯಘೋಷಗಳೊಂದಿಗೆ ವಿಜೃಂಭಣೆಯಿಂದ ಅದ್ದೂರಿಯಾಗಿ ಶ್ರೀಗುರು ವೀರಘಂಟೈ ಮಡಿವಾಳೇಶ್ವರರ ಜೋಡು ರಥೋತ್ಸವವು ನಡೆಯಿತು.ರವಿವಾರ ನಸುಕಿನ ಜಾವ ವೇ.ಮೂ.ಮಲ್ಲಯ್ಯಮುತ್ಯಾ ಗದ್ದಿಗೆಮಠ ಅವರ ನೇತೃತ್ವದಲ್ಲಿ ದೇವಸ್ಥಾನದ ಸಂಪ್ರದಾಯದಂತೆ ಅಗ್ನಿಕುಂಡಕ್ಕೆ ವಿವಿಧ ವಾಧ್ಯಮೇಳ ಕಳಸಾರತಿಯೊಂದಿಗೆ ಐದು ಸುತ್ತು ಪೂಜಾ ಕೈಂಕರ್ಯವನ್ನು ನಡೆಸಿ ನಂತರ ಅಗ್ಗಿಯನ್ನು ಹಾಯಲಾಯಿತು. ನಂತರ ಉಚ್ಚಾಯಿ ಉತ್ಸವ, ವೀರಂಘಂಟೈ ಮಡಿವಾಳೇಶ್ವರರ ಕರ್ತೃ ಗದ್ದಿಗೆಗೆ ಮಹಾರುದ್ರಾಭಿಷೇಕ, ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು, ಬೆಳ್ಳಿಗ್ಗೆ ೯ ಗಂಟೆಯಿಂದ ಗ್ರಾಮದ ಸಾವಿರಾರು ಯುವಪಡೆಯ ಭಕ್ತ ಸಮೂಹ ಹಿರಿಯರ ಮಾರ್ಗದರ್ಶನದಲ್ಲಿ ಪದ್ದತಿಯಂತೆ ರಥಕ್ಕೆ ಎಣ್ಣೆಯನ್ನು…

Read More

ಉದಯರಶ್ಮಿ ದಿನಪತ್ರಿಕೆ ಬಬಲೇಶ್ವರ: ಮಕ್ಕಳಿಗೆ ಉತ್ತಮವಾದ ಶಿಕ್ಷಣವನ್ನು ನೀಡಿ ಪ್ರಭುದ್ದ ನಾಗರಿಕರಾಗಿ ನಿರ್ಮಾಣ ಮಾಡಬೇಕು ಎಂದು ವಿಜಯಪುರ ಗ್ರಾಮೀಣವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ತಳವಾರ ಹೇಳಿದರು.ತಾಲ್ಲೂಕಿನ ಕಾಖಂಡಕಿ ಗ್ರಾಮದ ನಂದಗೋಕುಲ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ಜಿಲ್ಲಾ ಪಂಚಾಯತ ಶಾಲಾ ಶಿಕ್ಷಣ ಇಲಾಖೆ ವಿಜಯಪುರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗ್ರಾಮೀಣವಲಯ ವಿಜಯಪುರ ಸಹಯೋಗದಲ್ಲಿ ಶುಕ್ರವಾರ ನಡೆದ 2025-26 ನೇ ಸಾಲಿನ ತಾಲ್ಲೂಕ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಮಕ್ಕಳಲ್ಲಿ‌ ಅಡಗಿರುವ ಕಲೆಯನ್ನು ಅನಾವರಣ ಮಾಡಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದೆ. ಮಕ್ಕಳಲ್ಲಿರುವ ವ್ಯಕ್ತಿತ್ವವನ್ನು ಹಲವು ವಿಧಗಳ ಮೂಲಕ ಮಕ್ಕಳು ವ್ಯಕ್ತಪಡಿಸುತ್ತಾರೆ. ನವರಸಗಳು ಕೂಡಿದಾಗ ಒಂದು ಕಲೆಯಾಗುತ್ತದೆ. ಶಿಕ್ಷಕರು ಹಗಲಿರುಳು ಶ್ರಮಿಸಿ ಮಕ್ಕಳನ್ನು ಪ್ರತಿಭಾ ಕಾರಂಜಿಗೆ ತಯಾರು ಮಾಡಿದ್ದಾರೆ. ಮಕ್ಕಳ ಸುರಕ್ಷತೆ ಕಡೆಗೆ ಕೂಡಾ ಗಮನವಿರಲಿ ಎಂದರು.ಗುರುಸ್ಪಂದನ ಕಾರ್ಯಕ್ರಮ ಮಾಡಲು ಚಿಂತನೆ ಮಾಡಿರುವ ಬಿಇಓ ತಳವಾರ 1763 ಶಿಕ್ಷಕರ ಸೇವಾ ಪುಸ್ತಕ ಅಪಡೇಟ್ ಮಾಡಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇತ್ತೀಚೆಗೆ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಲ್ಲಿ ಜರುಗಿದ ಅಥ್ಲೇಟಿಕ್ಸ್ ಕ್ರೀಡಾಕೂಟದಲ್ಲಿ ನಗರದ ನವಭಾಗದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿ.ಎ-೧ ನೇಯ ಸೆಮೆಸ್ಟರ್ ವ್ಯಾಸಂಗ ಮಾಡುತ್ತಿರುವ ಅಮೀರ ತಾಂಬೋಳಿ ಇವರು ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ಕಾಲೇಜಿನ ಕೀರ್ತಿ ಹೆಚ್ಚಿಸಿದ್ದಾನೆ.ಅದೇ ರೀತಿ ಮಲ್ಲಮ್ಮ ತೋಳಮಟ್ಟಿ ಇವಳು ೧೫೦೦ ಮೀಟರ್ ಹಾಗೂ ೫೦೦೦ ಮೀಟರ್ ಓಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದು ಕಾಲೇಜಿನ ಮೆಚ್ಚುಗೆ ಪಾತ್ರರಾಗಿದ್ದಾಳೆ.ಈ ಇಬ್ಬರು ಕ್ರೀಡಾಪಟುಗಳ ಸಾಧನೆಗೆ ಕಾಲೇಜು ಅಭಿವೃದ್ಧಿ ಸಮೀತಿ ಅಧ್ಯಕ್ಷರೂ ಹಾಗೂ ವಿಜಯಪುರ ನಗರದ ಶಾಸಕರೂ ಆದ ಬಸನಗೌಡ. ಆರ್. ಪಾಟೀಲ, ಪ್ರಾಂಶುಪಾಲರಾದ ಡಾ. ಎ.ಐ.ಹಂಜಗಿ, ಕ್ರೀಡಾ ನಿರ್ದೇಶಕ ಪ್ರೊ ಸಂಗಮೇಶ ಗುರವ, ಕ್ರೀಡಾ ಸಮೀತಿಯ ಸದಸ್ಯರಾದ ಡಾ. ಚಿದಾನಂದ ಆನೂರ, ಪ್ರೊ. ಎಂ.ಎಸ್, ಖೊದ್ನಾಪೂರ, ಡಾ. ದೇವೇಂದ್ರಗೌಡ ಪಾಟೀಲ ಹಾಗೂ ಎಲ್ಲ ಬೋಧಕ-ಬೋಧಕೇತರ ಸಿಬ್ಬಂದಿವರ್ಗ ಅಭಿನಂದಿಸಿದ್ದಾರೆ. “ಪ್ರಾಂಶುಪಾಲರ ಮತ್ತು ದೈಹಿಕ ಶಿಕ್ಷಣ ನಿರ್ದೇಶಕರ ಹಾಗೂ ಎಲ್ಲ ಬೋಧಕ-ಬೋಧಕೇತರ ಸಿಬ್ಬಂದಿವರ್ಗ ಪ್ರೇರಣೆ…

Read More

ನವದೆಹಲಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿಕೆ ನವದೆಹಲಿ: ಭಾರತ ಮತ್ತು ರಷ್ಯಾ ‘ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಒಟ್ಟಾಗಿ ನಡೆಯುತ್ತವೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಮಧ್ಯಾಹ್ನ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.ದ್ವಿಪಕ್ಷೀಯ ಸಭೆ ನಂತರ ಶುಕ್ರವಾರ ಮಧ್ಯಾಹ್ನ ಹೈದರಾಬಾದ್‌ ಹೌಸ್​​ನಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ನಾಯಕರು, ಭಯೋತ್ಪಾದನೆಯನ್ನು ಎದುರಿಸಲು ಭಾರತದ ಪ್ರಯತ್ನಗಳಿಗೆ ಮಾಸ್ಕೋ ಬಲವಾದ ಬೆಂಬಲ ನೀಡುತ್ತಿದೆ ಮತ್ತು ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ದಾಳಿಯಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್‌ನ ನಂಟಿದೆ ಎಂಬ ಆರೋಪದ ನಂತರ ಅದು ಬಲವಾಗಿ ಪ್ರತಿಕ್ರಿಯಿಸಿದೆ. ಭಯೋತ್ಪಾದಕ ದಾಳಿಯನ್ನು ಖಂಡಿಸಿದ ಮಾಸ್ಕೋ, “ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡಲು ಭಾರತದೊಂದಿಗೆ ಕೈಜೋಡಿಸುವುದಾಗಿ” ಹೇಳಿದರು.ಪಾಕಿಸ್ತಾನದಲ್ಲಿನ ಭಯೋತ್ಪಾದಕ ಮೂಲಸೌಕರ್ಯ ಮತ್ತು ಆ ದೇಶವು ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಕಾಶ್ಮೀರದ ಕೆಲವು ಭಾಗಗಳನ್ನು ಗುರಿಯಾಗಿಸಿಕೊಂಡು ಭಾರತ ನಡೆಸಿದ…

Read More