Author: editor.udayarashmi@gmail.com

ವಿಜಯಪುರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಸ್ಥಾಪನೆಯ ೫೦ನೇ ವರ್ಷದ ಪರಿಪೂರ್ಣತೆಯ ಅಂಗವಾಗಿ ಈ ಕಾರ್ಯಕ್ರಮ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಪ್ರಸಿದ್ಧ ದಿವಟಗೇರಿ ಓಣಿಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಸ್ಥಾಪನೆಯ ೫೦ನೇ ವರ್ಷದ ಪರಿಪೂರ್ಣತೆಯ ಅಂಗವಾಗಿ ಸುವರ್ಣ ಮಹೋತ್ಸವ ಕಾರ್ಯಕ್ರಮ ಡಿ.೫ ರಿಂದ ಮೂರು ದಿನಗಳ ಕಾಲ ಶ್ರದ್ಧಾ-ಭಕ್ತಿಯಿಂದ ನಡೆಯಲಿದ್ದು, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಘಟಿಸಲಾಗುತ್ತಿದೆ ಎಂದು ಶ್ರೀ ರಾಘವೇಂದ್ರ ಮಠದ ಆಡಳಿತ ಮಂಡಳಿ ಅಧ್ಯಕ್ಷ, ವಿಡಿಎ ಮಾಜಿ ಅಧ್ಯಕ್ಷ ಶ್ರೀಹರಿ ಗೊಳಸಂಗಿ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರಣೆ ನೀಡಿದ ಅವರು, ಸುವರ್ಣ ಮಹೋತ್ಸವದಂಗವಾಗಿ ದರಬಾರ ಶಾಲೆಯ ಒಳಾಂಗಣ ಕ್ರೀಡಾಂಗಣದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಲಿವೆ ಎಂದರು.ಡಿ. ೫ ರಂದು ಸಂಜೆ ೬ ಕ್ಕೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಸಂಜೆ ೭ ಕ್ಕೆ ಮೈಸೂರಿನ ರಾಮಚಂದ್ರಾಚಾರ್ಯ ಅವರಿಂದ ದಾಸವಾಣಿ, ರಾತ್ರಿ ೮.೩೦ ಕ್ಕೆ ಪಂ. ಮಧ್ವಾಚಾರ್ಯ ಮೊಕಾಶಿ ಅವರಿಂದ ಆಶೀರ್ವಚನ ನಡೆಯಲಿದೆ. ಡಿ.೬ ರಂದು ಸಂಜೆ ೬…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಅಂಗವಿಕಲರು ಸಮಾಜದಲ್ಲಿ ಎಲ್ಲರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗಿ ಆತ್ಮವಿಶ್ವಾಸದಿಂದ ಜೀವನ ನಡೆಸುವಂತೆ ಅವಕಾಶ ಕಲ್ಪಿಸುವುದು ಸಮಾಜ ಹಾಗೂ ಸರ್ಕಾರದ ಜವಾಬ್ದಾರಿ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಗಮನಹರಿಸಬೇಕೆಂದು ಕ್ಷೇತ್ರ ಸಮನ್ವಯಾಧಿಕಾರಿ ಸುನೀಲ ನಾಯಕ ಹೇಳಿದರು.ತಾಲೂಕಿನ ಇವಣಗಿ ಗ್ರಾಮದ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕ್ಷೇತ್ರಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರಸಮನ್ವಯಾಧಿಕಾರಿಗಳ ಕಾರ್ಯಾಲಯದ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ವಿಶ್ವ ವಿಕಲಚೇತನ ಮಕ್ಕಳ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿಕಲಚೇತನರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಒದಗಿಸಿಕೊಡುವ ಮೂಲಕ ಅವರು ಎಲ್ಲರಂತೆ ಸ್ವಾವಲಂಬಿ ಜೀವನ ಸಾಗಿಸಲು ನೆರವಾಗಬೇಕು. ವಿಕಲಚೇತನ ಮಕ್ಕಳಿಗೆ ವಿಶೇಷವಾಗಿ ಗಮನ ಹರಿಸಿ ಅವರಿಗೆ ಶಿಕ್ಷಣ ನೀಡಿದರೆ ಖಂಡಿತ ಅವರು ಎಲ್ಲ ಮಕ್ಕಳಂತೆ ಸಾಧನೆ ಮಾಡುವುದರಲ್ಲಿ ಸಂದೇಹವಿಲ್ಲ ಎಂದರು.ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಎಮ್. ವ್ಹಿ. ಗಬ್ಬೂರ ಮಾತನಾಡಿ, ಅಂಗವಿಕಲ ಮಕ್ಕಳ ಸಬಲೀಕರಣಕ್ಕಾಗಿ ಅನೇಕ ಶಾಲಾ- ಕಾಲೇಜು ಹಾಗೂ ಸಂಘ-ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಪ್ರಸ್ತುತ ಕಾಲದಲ್ಲಿ ವಿಕಲಚೇತನರಿಗೆ ವಿದ್ಯಾಭ್ಯಾಸದ ಅವಕಾಶಗಳ ಜೊತೆಗೆ ಕೌಶಲಾಭಿವೃದ್ಧಿಗಳ ಕಲಿಕೆಯು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಶಿಕ್ಷಣ, ಆರೋಗ್ಯ, ಸಮಾಜ ಸೇವೆಯ ಮೂಲಕ ಮನೆಮಾತಾಗಿರುವ ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆ ಇದೀಗ ಮಾಧ್ಯಮ ಕ್ಷೇತ್ರಕ್ಕೂ ಮುಂದಡಿ ಇಟ್ಟಿದೆ. ಜಿಲ್ಲೆಯ ಜನರಿಗೆ ಎಫ್. ಎಂ. ರೇಡಿಯೂ ಮೂಲಕ ಮತ್ತಷ್ಟು ಹತ್ತಿರವಾಗಲು ಸಂಸ್ಥೆ ಈಗ ಬಿ.ಎಲ್.ಡಿ.ಇ ಧ್ವನಿ 98.6 ಎಫ್‌.ಎಂ ಸಮುದಾಯ ರೇಡಿಯೋ ಕೇಂದ್ರ ಪ್ರಾರಂಭಿಸಿದೆ.ರೈತರು, ಮಹಿಳೆಯರು, ಯುವಕರು ಹಾಗೂ ಸಮಾಜದ ನಾನಾ ಸ್ತರದ ಜನರನ್ನು ಕೇಂದ್ರೀಕರಿಸಿ ಅನೇಕ ಕಾರ್ಯಕ್ರಮಗಳನ್ನೂ ಈ ಬಾನುಲಿ ಕೇಂದ್ರ ಸಿದ್ಧಪಡಿಸಿದ್ದು, ಇದೇ ಡಿಸೆಂಬರ್ 7 ರಂದು ಲೋಕಾರ್ಪಣೆಯಾಗಲು ಸಿದ್ಧವಾಗಿದ್ದು, ಡಿಸೆಂಬರ್‌ 7 ರಂದು ರವಿವಾರ ಬೆಳಿಗ್ಗೆ 10.30ಕ್ಕೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಮತ್ತು ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಎಂ. ಬಿ. ಪಾಟೀಲ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡೂರಾವ, ಅರಣ್ಯ ಮತ್ತು ಪರಿಸರ ವಿಜ್ಞಾನ ಸಚಿವ ಈಶ್ವರ ಖಂಡ್ರೆ ಸಮುದಾಯ ಬಾನುಲಿ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ.ಸಮುದಾಯಗಳ ಸಮಸ್ಯೆಗಳು ಮತ್ತು ಮತ್ತು ಆ ಸಮಸ್ಯೆಗಳಿಗೆ ಪರಿಹಾರ ಒದಗಿಸಲು…

Read More

ಸಿಂದಗಿ ವಿರಕ್ತ ಮಠದ ಆಸ್ತಿಯ ದಾಖಲೆಗಳಿಂದ ವಕ್ಫ ಬೋರ್ಡ ಹೆಸರು ಕಡಿತ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಸತತ ೫೧ ವರ್ಷಗಳ ಹೋರಾಟಕ್ಕೆ ನ್ಯಾಯ ದೊರಕಿದೆ. ಪರಿಣಾಮ ನಮ್ಮ ಸಿಂದಗಿಯ ಗುರುಬಸವ ವಿರಕ್ತಮಠದ ಆಸ್ತಿಯು ಮರಳಿ ಮಠದ ಹೆಸರಿಗಾಗಿದೆ ಎಂದು ಸಂತೋಷವನ್ನು ಪತ್ರಕರ್ತರೊಂದಿಗೆ ಗುರುಬಸವ ವಿರಕ್ತಮಠದ ಸೇವಾ ಸಮಿತಿಯ ಕಾರ್ಯದರ್ಶಿ ನಿಂಗಪ್ಪ ಗುರುಬಸಪ್ಪ ಪಟ್ಟಣಶೆಟ್ಟಿ ಇವರು ಹಂಚಿಕೊಂಡರು.ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಸಿಂದಗಿಯ ಗುರುಬಸವ ವಿರಕ್ತಮಠದ ಆಸ್ತಿಯನ್ನು ೧೯೭೪ರಲ್ಲಿ ಅನಧಿಕೃತವಾಗಿ ವಕ್ಫ ಬೋರ್ಡ ತನ್ನ ಹೆಸರಿಗೆ ಮಾಡಿಕೊಂಡಿತ್ತು. ಇದರ ಬಗ್ಗೆ ಸಾಕಷ್ಟು ಹೋರಾಟ ಮಾಡಲಾಗಿ ಕಳೆದ ೨೦೨೪ರಲ್ಲಿ ರಾಜ್ಯಾದ್ಯಾಂತ ವಕ್ಫ್ಬೋರ್ಡ ವಿರುದ್ಧ ಸಾಕಷ್ಟು ಹೋರಾಟಗಳು ನಡೆದವು. ಆ ಸಂದರ್ಭದಲ್ಲಿ ನಮ್ಮ ಮಠದ ೬೦೦ವರ್ಷಗಳ ಇತಿಹಾಸದ ದಾಖಲೆಗಳನ್ನು ಸರ್ಕಾರದ ಮುಂದಿಟ್ಟಾಗ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಜಿಲ್ಲಾಧಿಕಾರಿಗಳು, ಇಂಡಿ ಉಪವಿಭಾಗಾಧಿಕಾರಿಗಳ ಅವರ ನ್ಯಾಯಾಲಯದಲ್ಲಿ ಪ್ರಕರಣದ ಕುರಿತು ವ್ಯಾಜ್ಯ ನಡೆಸಲಾಯಿತು.ಸದರಿ ಪ್ರಕರಣದಲ್ಲಿ ಪಕ್ಷಗಾರರಾಗಿ ಸಿಂದಗಿ ವಿರಕ್ತಮಠ ಸೇವಾ ಸಮಿತಿ ವಿರಕ್ತಮಠ ಸಿಂದಗಿ (ಬಿಳೂರ)…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ೩೦೩ ಪಲಾನುಭವಿಗಳಿಗೆ ಡಿಬಿಟಿ ಮೂಲಕ ಈಗಾಗಲೇ ಹಸುಗಳಿಗಾಗಿ ಅನುದಾನವನ್ನು ರೈತರಿಗೆ ಬಿಡುಗಡೆ ಮಾಡಿಸಲಾಗಿದೆ.ಇದರಿಂದ ತಾಲೂಕಿನಲ್ಲಿ ಹಾಲು ಉತ್ಪಾದಕರ ಸಂಘಗಳ ಹೆಚ್ಚೆಚ್ಚು ನಿರ್ಮಾಣವಾಗಬೇಕು. ಮತ್ತು ರೈತರು ಜೋಡಿ ಕೃಷಿಯೆಡೆಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಸಿಂದಗಿ ಪಟ್ಟಣದ ಕೃಷಿ ಇಲಾಖೆಯ ಆವರಣದಲ್ಲಿ ವಿಜಯಪುರ ಜಿಲ್ಲಾ ಪಂಚಾಯತ್, ಸಿಂದಗಿ ಕೃಷಿ ಇಲಾಖೆ ವತಿಯಿಂದ ೨೦೨೫-೨೬ನೆಯ ಸಾಲಿನ ಜಲಾನಯನ ಅಭಿವೃದ್ಧಿ ಇಲಾಖೆಯ ಆರ್.ಎ.ಡಿ-ಆರ್.ಕೆ.ವಿ.ವಾಯ್-ಆರ್.ಎ.ಎಫ್.ಟಿ.ಎ.ಎ.ಆರ್ ಯೋಜನೆಯಡಿ ಹೈನುಗಾರಿಕೆ ಹಾಗೂ ಸಮಗ್ರ ಕೃಷಿ ಉತ್ತೇಜಸಲು ಹಸುಗಳ ವಿತರಣಾ ಕಾರ್ಯಕ್ರಮದಲ್ಲಿ ೩೩ಪಲಾನುಭವಿಗಳಿಗೆ ಹಸು ಮತ್ತು ಸ್ಪಿಂಕಲರ್‌ಗಳನ್ನು ವಿತರಿಸಿ ಮಾತನಾಡಿದ ಅವರು, ರಾಜ್ಯ ಸರಕಾರ ರೈತರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಹಸುಗಳ ಖರೀದಿಗಾಗಿ ಈಗಾಗಲೇ ತಾಲೂಕಿನಲ್ಲಿ ೩೦೩ಪಲಾನುಭವಿಗಳಿಗೆ ಡಿಬಿಟಿ ಮೂಲಕ ಹಣ ಬಿಡುಗಡೆಗೊಳಿಸಲಾಗಿದೆ. ಅದರಲ್ಲಿ ಸೋಮಜಾಳ ಗ್ರಾಮಕ್ಕೆ ೩೦, ಮೋರಟಗಿಗೆ ೫೩, ಬಳಗಾನೂರ ಗ್ರಾಮಕ್ಕೆ ೫೦, ನಾಗರಹಳ್ಳಿ ಗ್ರಾಮಕ್ಕೆ ೧೨, ತೋಂಟಾಪುರ ಗ್ರಾಮಕ್ಕೆ ೦೭, ಗುಡ್ಡಳ್ಳಿ ಗ್ರಾಮಕ್ಕೆ ೦೯, ವಿಭೂತಿಹಳ್ಳಿ ಗ್ರಾಮಕ್ಕೆ ೧೨,…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಸಮಸ್ಯೆಗೆ ಒಳಗಾದ ವ್ಯಕ್ತಿಗಳಿಗೆ ಉಚಿತ ಕಾನೂನು ವ್ಯವಸ್ಥೆ ಕಲ್ಪಿಸುವ ಅವಕಾಶ ನ್ಯಾಯಾಲಯದಲ್ಲಿದೆ. ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ನಾಗೇಶ ಮೊಗೇರ ಹೇಳಿದರು.ಸಿಂದಗಿ ಪಟ್ಟಣದ ತಾಲೂಕು ಆಸ್ಪತ್ರೆಯಲ್ಲಿ ಸಿಂದಗಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ತಾಲೂಕು ಸಾರ್ವಜನಿಕ ಆಸ್ಪತ್ರೆ, ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯ ಇವುಗಳ ಸಹಯೋಗದಲ್ಲಿ ವಿಶ್ವ ಏಡ್ಸ್ ದಿನಾಚರಣೆ ನಿಮಿತ್ತ ಹಮ್ಮಿಕೊಂಡ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಕಾನೂನಿನ ಕಾಯ್ದೆಗಳ ಬಗ್ಗೆ ಮತ್ತು ಎಚ್‌ಐವಿ ಮತ್ತು ಏಡ್ಸ್ ಬಗ್ಗೆ ಯುವ ಜನತೆ ಜಾಗೃತರಾಗಬೇಕು. ಈ ರೋಗದ ಬಗ್ಗೆ ಇರುವ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಿ, ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಪ್ರಮುಖ ಪಾತ್ರ ವಹಿಸುತ್ತಿದೆ ಎಂದರು.ಈ ವೇಳೆ ವಕೀಲರಾದ ಎಸ್.ಎಸ್.ಹಂಗರಗಿ, ಡಾ.ಎಂ.ಬಿ.ಬಿರಾದಾರ, ಎಸ್.ಬಿ.ಪಾಟೀಲ ಗುಂದಗಿ ಮಾತನಾಡಿ, ಮಾನವನ ಜನನದಿಂದ ಮರಣದವರೆಗೆ ಕಾನೂನು ಬಹಳ ಅತ್ಯವಶ್ಯಕ. ಎಲ್ಲರೂ ಕಾನೂನು ಮತ್ತು…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಶ್ರೀ ಶಾಂತೇಶ್ವರ ಜಾತ್ರೆ ನಿಮಿತ್ಯ ಇಂದು ಬೆಳಗಿನ ಜಾವ ೫ ಗಂಟೆಗೆ ಕಳ್ಳಿಮಠದಿಂದ ನಂದಿಕೋಲುಗಳ ಭವ್ಯ ಮೆರವಣೆಗೆ ನಡೆಯಿತು.ಮೆರವಣೆಗೆಯಲ್ಲಿ ಬಾಜಾ ಬೆಂಜೋ. ಕರಡಿ ಕುಣಿತ, ನವೀಲು ಕುಣಿತ, ಪುರವಂತರ ಕುಣಿತ ಸೇರಿದಂತೆ ಆಕರ್ಷಕ ಮೆರವಣೆಗೆ ನಡೆಯಿತು.ಮೆರವಣೆಗೆ ಕಳ್ಳಿಮಠದಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಹಾಯ್ದು ಗುಡಿಗೆ ತಲುಪಿತು.ಬಾರಾ ಬಲೂತಿ ಚಾಜದವರು, ಪಟ್ಟಣದ ಗೌಡರು,ನಾಡಗೌಡರು, ದೇಶಪಾಂಡೆಯವರು, ಬಗಲಿಯವರು, ದೇವಾಲಯದ ಅರ್ಚಕರು, ಪುರವಂತರು, ಕಂಬಾರರು, ಅಕ್ಕಸಾಲಿಗರು, ಬಡಿಗರು, ಕಂಬಾರರು, ಅಗಸರು, ಮೇತ್ರಿಯವರು ಹೀಗೆ ಹನ್ನೆರಡು ಚಾಜದವರು ಕೂಡಿಕೊಂಡು ಅಪಾರ ಭಕ್ತ ಸಮೂಹದೊಂದಿಗೆ ಮೆರವಣೆಗೆಯಲ್ಲಿ ಪಾಲ್ಗೊಂಡಿದ್ದರು.ಪುರವಂತರಾದ ವಿಠ್ಠಲ ಅಹಿರಸಂಗ, ಬಸವರಾಜ ಬಳೂರಗಿ, ವೀರಣ್ಣಾ ಬಡಿಗೇರ, ಮಲ್ಲಿಕಾರ್ಜುನ ಬಡಿಗೇರ, ಸಂಗಣ್ಣ ಶಾಬಾದಿ, ಸಿದ್ರಾಮ ಪತ್ತಾರ, ಶರಣಪ್ಪ ಮಲಘಾಣ, ನಿಂಗಣ್ಣ ಬಡಿಗೇರ, ಚೆನ್ನವೀರಯ್ಯ ಹಿರೇಮಠ ಪುರವಂತರ ಕುಣಿತದಲ್ಲಿ ಶಸ್ತç ಪವಾಡ ಮಾಡಿದರು. ಗಲ್ಲಕ್ಕೆ ಒಂದು ತುದಿಯಿಂದ ಶಸ್ತç ಹಚ್ಚಿ ಇನ್ನೊಂದು ತುದಿಗೆ ಶಸ್ತç ತೆಗೆಯುವದು ದೃಶ್ಯ ಜನಸಾಮಾನ್ಯರನ್ನು ಆಕರ್ಷಿಸಿತು.ವಾದ್ಯ ವೈಭವಗಳೊಂದಿಗೆ ಪ್ರಮುಖ ಬೀದಿಗಳಲ್ಲಿ ಮೆರವಣೆಗೆ ಮುಖಾಂತರ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಅತೀ ಹೆಚ್ಚು ಮೆಕ್ಕೆಜೋಳ ಬೆಳೆದಿದ್ದಾರೆ, ಮಾರುಕಟ್ಟೆಯಲ್ಲಿ ಮೆಕ್ಕೆಜೋಳ ಬಂದು 2 ತಿಂಗಳ ಗತಿಸಿದರೂ ಇಲ್ಲಿಯವರೆಗೆ ಖರೀದಿ ಕೇಂದ್ರವನ್ನು ಆರಂಭ ಮಾಡಿಲ್ಲ. ಕೂಡಲೇ ಜಿಲ್ಲೆ ಹಾಗೂ ತಾಲೂಕು ಕೇಂದ್ರಗಳಲ್ಲಿ ಖರೀದಿ ಕೇಂದ್ರ ಆರಂಭಿಸಬೇಕು ಎಂದು ರೈತ ಮುಖಂಡರು ಆಗ್ರಹಿಸಿದ್ದಾರೆ.ಈ ವೇಳೆ ಮಾತನಾಡಿದ ಮುಖಂಡರು, ಯಾವುದೇ ಶರತ್ತುಗಳನ್ನು ನೀಡದೆ ರೈತರು ಬೆಳೆದಿರುವಂತಹ ಎಲ್ಲಾ ಮೆಕ್ಕೆಜೋಳವನ್ನು ಖರೀದಿ ಮಾಡಬೇಕು ಹಾಗೂ ಇಲ್ಲಿ ಇರುವಂತಹ ಗೊಂದಲಗಳನ್ನ ನಿವಾರಿಸಿ ಧಾರವಾಡಕ್ಕೆ ಸಾಂಪಲ್ ಕಳಿಸೊದ್ದು ಆಗಂಗಿಲ್ಲ ಕೂಡಲೇ ಇಲ್ಲೇ ವಿಜಯಪುರ ಜಿಲ್ಲೆಯಲ್ಲಿ ಹಾಗೂ ಎಲ್ಲ ತಾಲೂಕು ಕೇಂದ್ರಗಳಲ್ಲಿ ಖರೀದಿ ಕೇಂದ್ರ ಪ್ರಾರಂಭ ಮಾಡುವಂತೆ ಆಗ್ರಹಿಸಿ ಮನವಿ ಸಲ್ಲಿಸಲಾಯಿತು.ಒಬ್ಬ ರೈತರ ಖಾತೆಗೆ 2000 ಕೆ. ಜೀ ಅಂತಾ ನಿಗದಿ ಮಾಡಿದರೆ, ಉಳಿದ ಮೆಕ್ಕೆಜೋಳ ಏನು ಮಾಡಬೇಕು, ಸರಕಾರ ಕೇವಲ ನೆಪ ಮಾತ್ರಕ್ಕೆ ರೈತ ಪರ ಮುಖವಾಡ ಹಾಕಿದರೆ ಏನು ಪ್ರಯೋಜನವಾಗುವುದಿಲ್ಲ, ಎಲ್ಲಾ ಬೆಳೆಗಾರರನ್ನು ಗಮನದಲ್ಲಿಟ್ಟುಕೊಂಡು ಯೋಜನೆ ರೂಪಿಸಬೇಕು, ಕೇವಲ ಗೊಂದಲ ಸೃಷ್ಟಿಸಿದರೆ ಹೇಗೆ ಎಂಬುದು ತಿಳಿಯದಾಗಿದೆ…

Read More

ವಿಜಯಪುರದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ | ಜಿಲ್ಲಾಧಿಕಾರಿ ಡಾ. ಆನಂದ.ಕೆ ಭರವಸೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸರ್ಕಾರಿ ಕಚೇರಿಗಳು ಸಾರ್ವಜನಿಕ ಕಟ್ಟಡಗಳಲ್ಲಿ ವಿಶೇಷಚೇತನರಿಗೆ ಪ್ರಥಮಾದ್ಯತೆ ಮೇರೆಗೆ ಮೂಲಭೂತ ಸೌಕರ್ಯಗಳು ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಬುಧವಾರ ಕಂದಗಲ್ ಶ್ರೀ ಹನುಮಂತರಾಯ ರಂಗ ಮಂದಿರದಲ್ಲಿ ಆಯೋಜಿಸಿದ ವಿಶ್ವ ವಿಕಲಚೇತನರ ದಿನಾಚರಣೆಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ವಿಕಲಚೇತನರ ಅಭಿವೃದ್ಧಿಗಾಗಿ ವಿಕಲಚೇತನರ ಹಕ್ಕುಗಳ ಕಾಯ್ದೆ ೨೦೧೬ ರನ್ವಯ ವಿಕಲಚೇತನರಿಗೆ ಅನುಕಂಪದ ತೊರದೇ ಅವರಿಗೆ ಅವಕಾಶಗಳನ್ನು ನೀಡಿ ಮುಖ್ಯವಾಹಿನಿಗೆ ತರುವ ಮೂಲಕ ಕಾಯ್ದೆ ಸಮರ್ಪಕ ಅನುಷ್ಠಾನಗೊಳಿಸಲು ಜಿಲ್ಲಾ…

Read More

ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ರಾಜುಗೌಡ ಪಾಟೀಲ ಕೃಷಿ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಮತಕ್ಷೇತ್ರದ ಗ್ರಾಮಗಳಲ್ಲಿ ಕೆಲವು ರೈತರಿಗೆ ವಾರಸಾ ವಿಷಯದಲ್ಲಿ ಬೆಳೆ ಪರಿಹಾರ ಜಮೆ ಆಗದೇ ಇದ್ದು, ಕೂಡಲೇ ಕೃಷಿ ಇಲಾಖೆಯ ಅಧಿಕಾರಿಗಳು ಈ ಕುರಿತು ಕ್ರಮವಹಿಸಬೇಕು ಎಂದು ಶಾಸಕ ರಾಜುಗೌಡ ಪಾಟೀಲ(ಕುದರಿ ಸಾಲವಾಡಗಿ) ಹೇಳಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ಜರುಗಿದ ೨೦೨೫-೨೬ನೇ ಸಾಲಿನ ಒಂದನೇ ತ್ರೈಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಶು ಸಂಗೋಪನಾ ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆ, ಶಾಲೆಯ ಕೋಣೆಗಳ ಲಭ್ಯತೆ, ಕಟ್ಟಡಗಳ ಸ್ಥಿತಿಗತಿಗಳ ಕುರಿತು ಮಾಹಿತಿ ನೀಡಬೇಕು ಇದನ್ನು ಸರ್ಕಾರದ ಗಮನಕ್ಕೆ ತರಲಾಗುವುದು. ಮತಕ್ಷೇತ್ರದ ಎಲ್ಲ ಶಾಲೆಗಳ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗೆ ಕೈಗೊಳ್ಳಬೇಕಾದ ಕ್ರಮಗಳು, ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ಉದ್ಘಾಟನೆಗೆ ಕ್ರಮವಹಿಸುವುದು ಹಾಗೂ ಜಾಲವಾದ ಗ್ರಾಮದ ಹೆಸ್ಕಾಂ ವಿತರಣಾ ಕೇಂದ್ರಕ್ಕಾಗಿ ಭೂಮಿ ನೀಡಿದ ರೈತರಿಗೆ ಪರಿಹಾರ ನೀಡುವ ಬಗ್ಗೆ ಅಧಿಕಾರಿಗಳಿಗೆ ಸೂಚಿಸಿದರು.ಸಭೆಯಲ್ಲಿ ಅಧಿಕಾರಿಗಳು ಬೀದಿನಾಯಿಗಳ…

Read More