Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದಿಂದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಎಸ್. ಲೋಣಿ, ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ರಮೇಶ ಗುಬ್ಬೇವಾಡ ರವರ ನೇತೃತ್ವದಲ್ಲಿ ಓಟ ಚೋರಿ ವಿರುದ್ಧ ಸಹಿ ಸಂಗ್ರಹಣೆ ಹಾಗೂ ಮತದಾರರ ಹಕ್ಕುಗಳ ರಕ್ಷಣೆ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಲಾಯಿತು.ಇದೇ ವೇಳೆ ಸುಪ್ರೀಂ ಕೋರ್ಟ ಮುಖ್ಯ ನ್ಯಾಯಾಧೀಶರ ಮೇಲೆ ಶೂ ಎಸೆದ ವಕೀಲನ ವಿರುದ್ಧ ಮತ್ತು ಕೇಂದ್ರ ಸರ್ಕಾರದ ಆಡಳಿತ ವೈಫಲ್ಯದ ವಿರುದ್ಧ ಬೃಹತ್ ಪ್ರತಿಭಟನೆಯನ್ನು ನಗರದ ಡಿ.ದೇವರಾಜ ಅರಸು ವೃತ್ತದಲ್ಲಿ ನಡೆಸಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಎಸ್. ಲೋಣಿ ಮಾತನಾಡಿ, ಇವತ್ತು ಮತಗಳ್ಳತನ ಮಾಡುವುದರ ಮೂಲಕ ಕೇಂದ್ರದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದಿದೆ ಹಾಗೂ ನಮ್ಮ ವಿಜಯಪುರ ನಗರದಲ್ಲಿಯೂ ಕೂಡ ಮತಗಳ್ಳತನ ಮಾಡಲಾಗಿದೆ ಎಂದು ಹೇಳಿದರು.ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ರಮೇಶ ಗುಬ್ಬೇವಾಡ ಮಾತನಾಡಿ, ಸುಪ್ರೀಂ ಕೋರ್ಟ ಮುಖ್ಯ ನ್ಯಾಯಾಧೀಶರ ಮೇಲೆ ಶೂ…

Read More

ವಿಜಯಪುರದ ಶ್ರೀ ಸಿದ್ದೇಶ್ವರ ಬ್ಯಾಂಕ್ ಚುನಾವಣೆ | ಹಳೆಯ ಪೆನಲ್‌ಗೆ ಸದಸ್ಯರ ಒಲವು | ಫಲ ಕೊಟ್ಟ ಸಚಿವ ಶಿವಾನಂದ ಪಾಟೀಲ & ಮಾಜಿ ಸಚಿವ ಪಟ್ಟಣಶೆಟ್ಟಿ ಜಂಟಿ ಕಾರ್ಯತಂತ್ರ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಚನ ಪಿತಾಮಹ ಡಾ.ಫ.ಗು. ಹಳಕಟ್ಟಿ ಅವರು ಸ್ಥಾಪಿಸಿದ ಪ್ರತಿಷ್ಠಿತ ಸಿದ್ದೇಶ್ವರ ಬ್ಯಾಂಕ್ ಚುನಾವಣೆಯಲ್ಲಿ ಸಹಕಾರ ಕ್ಷೇತ್ರದ ಚಾಣಾಕ್ಷ ಎಂದೇ ಖ್ಯಾತಿಯಾಗಿರುವ ಸಚಿವ ಶಿವಾನಂದ ಪಾಟೀಲ ಹಾಗೂ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಅವರ ಜಂಟಿ ರಣತಂತ್ರ ಫಲ ಕೊಟ್ಟಿದ್ದು ಹಳೆಯ ಪೆನಲ್’ ಸದಸ್ಯರೇ ಪುನರಾಯ್ಕೆಯಾಗಿದ್ದಾರೆ.ಅವಿರೋಧ ಆಯ್ಕೆ ನಡೆಯುವ ನಿಟ್ಟಿನಲ್ಲಿ ಸಚಿವ ಶಿವಾನಂದ ಪಾಟೀಲ ಪ್ರಯತ್ನಿಸಿದರಾದರೂ ಸಹ ಚುನಾವಣೆ ನಡೆಯಿತು. ಆದರೂ ಸಹ ಹಳೆಯ ಪೆನಲ್ ಪರ ಬ್ಯಾಂಟಿಂಗ್ ನಡೆಸಿದ್ದ ಸಚಿವ ಶಿವಾನಂದ ಪಾಟೀಲ, ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಜಂಟಿ ಕಾರ್ಯತಂತ್ರ ನಡೆಸಿ ತಮ್ಮ ಬೆಂಬಲಿತ ಎಲ್ಲ ಪೆನಲ್ ಸದಸ್ಯರನ್ನು ಆಯ್ಕೆಯಾಗಿಸುವ ನಿಟ್ಟಿನಲ್ಲಿ ಯಶಸ್ವಿಯಾಗಿದ್ದಾರೆ.೧೯ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಹಳೆಯ ಪೆನಲ್ ಸದಸ್ಯರೇ ಆಯ್ಕೆಯಾಗಿದ್ದಾರೆ.ಬ್ಯಾಂಕನ್ನು ಲಾಭಾಂಶದತ್ತ…

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ನಗರದ ಎ ಜಿ ದೇಸಾಯಿ ವೃತ್ತದಲ್ಲಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ. ಆರ್. ಗವಾಯಿ ಅವರ ಮೇಲೆ ಶೂ ಎಸೆದಿರುವ ಕೃತ್ಯ ಖಂಡಿಸಿ ಜಮಖಂಡಿಯಲ್ಲಿ ಕಾನೂನು ವಿದ್ಯಾರ್ಥಿಗಳು ಖಂಡಿಸಿ ಪ್ರತಿಭಟನೆ ಮಾಡಿದರು.ಪ್ರತಿಭಟನೆಯ ಉದ್ದೇಶಿಸಿ ಮಾತನಾಡಿದ ಕಾನೂನು ವಿದ್ಯಾರ್ಥಿಗಳ ಒಕ್ಕೂಟದ ಮುಖಂಡ ಹಣಮಂತ ಯಮಗಾರ, ಸಿಜೆಐ ಬಿ. ಆರ್. ಗವಾಯಿ ಅವರಿಗೆ ಮಾತ್ರ ಆದ ಅವಮಾನ ಅಲ್ಲ ಇದು ನಮ್ಮ ಭಾರತ ಮಾತೆಗೆ ಆದ ಅವಮಾನ ಈ ಕೃತ್ಯ ಎಸಗಿದ ಆರೋಪಿಯನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಕಾನೂನು ವಿದ್ಯಾರ್ಥಿನಿಯಾದ ವಚನಾ ಶೃಂಗೇರಿ ಮಾತನಾಡಿ, ಈ ನಮ್ಮ ದೇಶದಲ್ಲಿ ಸುಪ್ರೀಂ ಕೋರ್ಟ್ ಸಿಜೆಐ ಅವರಿಗೆ ರಕ್ಷಣೆ ಇಲ್ಲ,ಇನ್ನೂ ಸಾಮಾನ್ಯ ಜನರ ಜೀವನ ಅಧೋಗತಿಯಾಗಿದೆ ಮತ್ತು ಆರೋಪಿಯ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡು ಆತನನ್ನು ಗಡಿಪಾರು ಮಾಡಬೇಕು ಎಂದು ಒತ್ತಾಯ ಮಾಡಿದರು.ಉದಯ ಒಡೆಯರ ಮಾತನಾಡಿ, ದೇಶದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಸರ್ಕಾರ ಕೂಡಲೇ ಇದನ್ನು ಸರಿ ಪಡಿಸಬೇಕು ಎಂದು…

Read More

ವಿಜಯಪುರದಲ್ಲಿ ಮಾಜಿ ಶಾಸಕ ಹಾಗೂ ಬಿಜೆಪಿ ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಆಗ್ರಹ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅತಿವೃಷ್ಟಿಯಿಂದ ಹಾನಿಗೀಡಾಗಿರುವ ಬೆಳೆ ಸಮೀಕ್ಷೆ ಅತ್ಯಂತ ನಿರ್ಲಕ್ಷ್ಯತನದಿಂದ ನಡೆಯುತ್ತಿದೆ, ಪರಿಹಾರ ಹಣವೂ ಸಹ ಅತ್ಯಲ್ಪ. ಹೀಗಾಗಿ ಕೂಡಲೇ ಮಹಾರಾಷ್ಟ್ರ ಮಾದರಿಯಲ್ಲಿ ರೈತರಿಗೆ ವಿಶೇಷ ಪ್ಯಾಕೇಜ್ ನೀಡಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ಮಾಜಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಹೇಳಿದರು.ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅತಿವೃಷ್ಟಿಯಿಂದ ಬೆಳೆಹಾನಿಗೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ನೀಡುತ್ತಿರುವ ಪರಿಹಾರ ಅತ್ಯಂತ ಅತ್ಯಲ್ಪ, ರೈತರಿಗೆ ಯಾವ ಪ್ರಯೋಜನಕ್ಕೂ ಬಾರದಾಗಿದೆ, ರಾಜ್ಯ ಸರ್ಕಾರ ಕೇವಲ ೨೫೦೦ ಕೋಟಿ ರೂ. ಮಾತ್ರ ಪರಿಹಾರ ಬಿಡುಗಡೆ ಮಾಡಿದೆ, ಆದರೆ ನೆರೆಯ ಮಹಾರಾಷ್ಟ್ರ ಸರ್ಕಾರ ೩೧ ಸಾವಿರ ಕೋಟಿ ರೂ. ಮಹಾರಾಷ್ಟ್ರ ಪರಿಹಾರದ ಪ್ಯಾಕೇಜ್ ನೀಡಿದೆ. ಅಲ್ಲದೇ, ಪ್ರತಿ ಹೆಕ್ಟೇರ್ ಗೆ ೩೭ ಸಾವಿರ ಬೆಳೆ ಪರಿಹಾರ ಘೋಷಿಸಿದೆ, ಇದೇ ಮಾದರಿಯಲ್ಲಿ ನಮ್ಮ ಸರ್ಕಾರ ಸಹ ಈ…

Read More

ನೀರಾವರಿ ಮತ್ತು ಕೋಟಿ ವೃಕ್ಷ ಅಭಿಯಾನದ ಫಲ | ಬ್ರೆಜಿಲ್ ವಿಜ್ಞಾನಿ ಬೆನೆಡಿಟೊ ಎಚ್. ಮಚಾಡೊ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನೀರಾವರಿ ಮತ್ತು ಕೋಟಿ ವೃಕ್ಷ ಅಭಿಯಾನದ ಫಲವಾಗಿ ಜಿಲ್ಲೆಯ ಪರಿಸರದಲ್ಲಿ ಗಣನೀಯ ಬದಲಾವಣೆಯಾಗಿದೆ ಎಂದು ಬ್ರೆಜಿಲ್ ಸಾ ಪಾಲೊ ವಿಶ್ವವಿದ್ಯಾಲಯದ ಶರೀರ ಕ್ರಿಯಾ ಶಾಸ್ತ್ರ ವಿಭಾಗದ ಸಲಹೆಗಾರ ಮತ್ತು ವಿಜ್ಞಾನಿ ಬೆನೆಡಿಟೊ ಎಚ್. ಮಚಾಡೊ ಹೇಳಿದ್ದಾರೆ.ಅಕ್ಟೋಬರ್ 6 ರಿಂದ ಅಕ್ಟೋಬರ್ 9ರ ವರೆಗೆ ನಗರಕ್ಕೆ ಭೇಟಿ ನೀಡಿದ ಅವರು, ತಮ್ಮ ಪತ್ನಿ ಮತ್ತು ಸಾ ಪಾಲೊ ವಿವಿಯ ಔಷಧ ರಸಾಯನಶಾಸ್ತ್ರ ವಿಭಾಗದ ನಿಕಟಪೂರ್ವ ಪ್ರಾಧ್ಯಾಪಕಿ ಪ್ರೊ.ಲೂಸಿಯಾನ್ ಎಂ. ಬೆನಧ್ಯಾಕ್ ಅವರೊಂದಿಗೆ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ನಾನಾ ವಿಭಾಗಗಳಲ್ಲಿ ನಡೆದ ವಿಚಾರ ವಿನಿಮಯ, ಸಂವಾದ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು.ಶರೀರ ಕ್ರಿಯಾ ಶಾಸ್ತ್ರ ವಿಭಾಗಕ್ಕೆ ಭೇಟಿ ನೀಡಿದ ಅವರು, ಅಲ್ಲಿ ಪ್ರೊ. ಕುಸಾಲ ದಾಸ ಅವರು ಅವರ ಮಾರ್ಗದರ್ಶನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತ್ಯಾಧುನಿಕ ಪ್ರಯೋಗಾಲಯದ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಅಲ್ಲದೇ, ಮೆದುಳಿನ…

Read More

ಉದಯರಶ್ಮಿ ದಿನಪತ್ರಿಕೆ ಕಲಕೇರಿ: ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಕಲಕೇರಿ ಗ್ರಾಮದ ಬಸ್‌ನಿಲ್ದಾಣದಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಕಲಕೇರಿ ಗ್ರಾಮ ಪಂಚಾಯತ ಅಧ್ಯಕ್ಷರು ಮತ್ತು ಸದಸ್ಯರು ಸೇರಿ ಕೆಪಿಸಿಸಿ ರಾಜ್ಯ ಕಾರ್ಯದರ್ಶಿಗಳಾದ ಪ್ರಭುಗೌಡ ಪಾಟೀಲ ಲಿಂಗದಳ್ಳಿ ಅವರ ನೇತೃತ್ವದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಬೆಂಗಳೂರಿನಲ್ಲಿ ಮನವಿ ಸಲ್ಲಿಸಲಾಯಿತು.ಈ ವೇಳೆ ಮಾತನಾಡಿದ ಕಲಕೇರಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜಅಹ್ಮದ ಸಿರಸಗಿ ಅವರು, ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಕಲಕೇರಿ ಗ್ರಾಮವು ಸುಮಾರು ೨೦ ಸಾವಿರ ಜನಸಂಖ್ಯೆಯನ್ನು ಹೊಂದಿದ್ದು, ಸುತ್ತಮುತ್ತಲಿನ ೪೦ ಹಳ್ಳಿಗಳಿಗೆ ಶಿಕ್ಷಣ, ವಾಣಿಜ್ಯ, ವ್ಯಾಪರಿ ಕೇಂದ್ರವಾಗಿದೆ. ಪ್ರತಿದಿನ ಸಾವಿರಾರು ಜನರು ವಿವಿಧ ಕೆಲಸ ಕಾರ್ಯಗಳ ಮೇಲೆ ಬಸ್‌ಗಳ ಮೂಲಕ ಕಲಕೇರಿ ಗ್ರಾಮಕ್ಕೆ ಆಗಮಿಸುತ್ತಾರೆ, ಕಲಕೇರಿ ಗ್ರಾಮದಲ್ಲಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಹಾಗೂ ಮಹಿಳೆಯರಿಗೆ ಸರಿಯಾದ ಶೌಚಾಲಯ ವ್ಯವಸ್ಥೆ ಇರುವುದಿಲ್ಲ, ಇರುವ ಒಂದು ಶೌಚಾಲಯವೂ ಕೂಡಾ ಸುಮಾರು ತಿಂಗಳುಗಳಿಂದ ಬಾಗಿಲು ಮುಚ್ಚಿರುತ್ತದೆ.ಅದೇ ರೀತಿ ಬಸ್ ನಿಲ್ದಾಣದ ಆವರಣ ತಗ್ಗು…

Read More

ಅಕ್ಕಮಹಾದೇವಿ ಮಹಿಳಾ ವಿವಿಯ ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್.ಲಕ್ಕಣ್ಣವರ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿವಿಧ ಭಾಷೆಗಳ ಜ್ಞಾನ ಹಾಗೂ ಸಂವಹನ ಕೌಶಲಗಳನ್ನು ಸಂಪಾದಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ಮಹಿಳಾ ವಿವಿಯ ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್.ಲಕ್ಕಣ್ಣವರ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಕಲಾ ನಿಕಾಯದ ವತಿಯಿಂದ ಇತ್ತೀಚೆಗೆ ಆಯೋಜಿಸಿದ್ದ ‘ಸಂವಹನ ಕೌಶಲ್ಯ ಹಾಗೂ ವ್ಯಕ್ತಿತ್ವ ವಿಕಸನ: ಭಾಷಾ ಅಧ್ಯಯನದ ಮಹತ್ವ’ ಎಂಬ ವಿಷಯದ ಕುರಿತ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಕೌಶಲಗಳು ವ್ಯಕ್ತಿತ್ವ ವಿಕಸನಕ್ಕೆ ದಾರಿಯಾಗುತ್ತವೆ. ವಿದ್ಯಾರ್ಥಿನಿಯರು ತಮ್ಮ ಸಾಮರ್ಥ್ಯವನ್ನು ಅರಿತುಕೊಂಡು, ಕೌಶಲಗಳನ್ನು ಬೆಳೆಸಿಕೊಂಡು, ಹೊಸ ಜಗತ್ತಿನ ಸವಾಲುಗಳು ಮತ್ತು ಅವಕಾಶಗಳನ್ನು ಆತ್ಮವಿಶ್ವಾಸದಿಂದ ಎದುರಿಸಲು ಸಜ್ಜಾಗಬೇಕು ಎಂದರು.ಇದೇ ಸಂದರ್ಭದಲ್ಲಿ ನಿವೃತ್ತ ಪ್ರಾಚಾರ್ಯ ಡಾ.ಆರ್.ಜಿ.ಹೆಗಡೆ ಮಾತನಾಡಿ, ವಿದ್ಯಾರ್ಥಿಗಳು ವೃತ್ತಿಪರ ಕೌಶಲದ ಜೊತೆಗೆ ವ್ಯಕ್ತಿತ್ವದ ಕೌಶಲವನ್ನೂ ಮೈಗೂಡಿಸಿಕೊಳ್ಳಬೇಕು. ಉತ್ತಮ ಕೌಶಲಗಳು ಜೀವನದಲ್ಲಿ ಯಶಸ್ಸು ಮತ್ತು ಸಮೃದ್ಧಿಯನ್ನು ತರಲು ನೆರವಾಗುತ್ತವೆ. ಕೌಶಲಗಳ ಅಭಿವೃದ್ದಿಯ ಮೂಲಕ ವ್ಯಕ್ತಿ ತನ್ನ ಭವಿಷ್ಯವನ್ನು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸರ್ವೋಚ್ಛ ನ್ಯಾಯಾಲಯದ ತೀರ್ಪಿನಂತೆ ಬೀದಿ ನಾಯಿಗಳಿಗೆ ಆಶ್ರಯ ಒದಗಿಸಲು ಬುರಾನಪುರನಲ್ಲಿ ಕಾಯ್ದಿರಿಸಿದ ಎರಡು ಎಕರೆ ಜಾಗದಲ್ಲಿ ಡಾಗ್ ಶೆಲ್ಟರ್ ನಿರ್ಮಾಣಕ್ಕಾಗಿ ನೀಲ ನಕ್ಷೆ ತಯಾರಿಸಿ ಸಲ್ಲಿಸುವಂತೆ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವೆಗಳ ಇಲಾಖೆ ಉಪನಿರ್ದೇಶಕರಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚನೆ ನೀಡಿದ್ದಾರೆ.ಸೋಮವಾರ ನಗರದ ಬುರಾನಪುರದಲ್ಲಿರುವ ಗೋಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ, ಡಾಗ್ ಶೆಲ್ಟರ್ ನಿರ್ಮಾಣಕ್ಕೆ ಸೂಚನೆ ನೀಡಿ, ಗೋಶಾಲೆಗಳಲ್ಲಿರುವ ಜಾನುವಾರುಗಳನ್ನು ಕಾಳಜಿಯಿಂದ ನೋಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.ನಗರದಲ್ಲಿರುವ ಪಶುಪಾಲನಾ ಇಲಾಖೆ ಕಚೇರಿಗೆ ಭೇಟಿ ನೀಡಿದ ಅವರು, ಬೀದಿ ನಾಯಿಗಳ ಸಂತಾನ ಹರಣಶಸ್ತ್ರ ಚಿಕಿತ್ಸಾ ಕಾರ್ಯಕ್ರಮದ ಕಟ್ಟಡವನ್ನು ನವೀಕರಿಸಲು ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚಿಸಿದ ಅವರು, ಪಾಲಿಕ್ಲಿನಿಕ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಜಾನುವಾರು ಚಿಕಿತ್ಸೆ, ನಾಯಿ ಮತ್ತು ಬೆಕ್ಕುಗಳ ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸಾ ಕೊಠಡಿ, ರಕ್ತದ ಮಾದರಿಗಳನ್ನು ಪರೀಕ್ಷೆ ಮಾಡುವುದನ್ನು ಸಂಬಂಧಿಸಿದ ಪಶುವೈದ್ಯರು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು.ಈ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತದ ವತಿಯಿಂದ ಅ.೨೩ ರಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ವಿವಿಧ ಇಲಾಖೆಗಳಿಗೆ ವಹಿಸಿದ ಜವಾಬ್ದಾರಿಯನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗುರುವಾರ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆಯ ಕುರಿತು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಎಂಟು ದಿನಗಳ ಕಾಲ ನಡೆದ ವಿಶ್ವ ಯುವ ಶೃಂಗ ಸಭೆಯಲ್ಲಿ ಭಾರತ ದೇಶದಿಂದ ಏಕೈಕ ಯುವ ಪ್ರತಿನಿಧಿಯಾಗಿ ಭಾಗವಹಿಸಿ `ವಿಶ್ವಶಾಂತಿ ಅಗತ್ಯತೆ ಹಾಗೂ ವಿಶ್ವಶಾಂತಿಯಲ್ಲಿ ಭಾರತದ ಪಾತ್ರ’ ಕುರಿತು ಮಹತ್ವಪೂರ್ಣ ಸಂದೇಶ ಸಾರಿ ವಿಜಯಪುರದ ಕೀರ್ತಿಯನ್ನು ಹೆಚ್ಚಿಸಿದ ಕುಮಾರಿ ಶಿಫಾ ಜಮಾದಾರ ಅವರನ್ನು ಕೃಷಿ ಉತ್ಪನ್ನ ಮಾರುಕಟ್ಟೆ, ಜವಳಿ, ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ ತಮ್ಮ ಗೃಹ ಕಚೇರಿಯಲ್ಲಿ ಸನ್ಮಾನಿಸಿ ಗೌರವಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಶಿವಾನಂದ ಪಾಟೀಲ, ಅಂತರಾಷ್ಟ್ರೀಯ ಮಟ್ಟದಲ್ಲಿ ಅದರಲ್ಲೂ ರಷ್ಯಾ, ಮಯನ್ಮಾರ್, ಅರ್ಮೇನಿಯಾ ಸೇರಿದಂತೆ ವಿವಿಧ ರಾಷ್ಟçಗಳ ರಾಷ್ಟಾçಧ್ಯಕ್ಷರ ಸಮ್ಮುಖದಲ್ಲಿ ವಿಜಯಪುರ ಯುವತಿ ಕು.ಶಿಫಾ ಜಮಾದಾರ ಅವರು ಸಮರ್ಥವಾಗಿ ಶಾಂತಿಯ ಮಂತ್ರ ಸಾರಿದ್ದು ಪ್ರತಿಯೊಬ್ಬ ವಿಜಯಪುರ ನಿವಾಸಿಗಳು ಅಷ್ಟೇ ಅಲ್ಲ ಇಡೀ ಕನ್ನಡ ನಾಡಿನ ಜನತೆ ಹೆಮ್ಮೆಪಡುವಂತಹ ವಿಷಯವಾಗಿದೆ, ವಿಜಯಪುರ ಪ್ರತಿಭಾವಂತರ ನೆಲ, ಜ್ಞಾನದ ಸಂಗಮ, ಈ ನಾಡಿನ ಹೆಮ್ಮೆಯ ಪ್ರತಿಭೆ ಶಿಫಾ ಜಮಾದಾರ ಸರ್ಕಾರಿ ಶಾಲೆಗಳಲ್ಲಿ…

Read More