Author: editor.udayarashmi@gmail.com

ನಾವು – ನಮ್ಮ ಮಕ್ಕಳು(ಮಕ್ಕಳ ಬೆಳವಣಿಗೆಯಲ್ಲಿ ಪಾಲಕರ ಪಾತ್ರ ಕುರಿತ ಲೇಖನ ಮಾಲಿಕೆ) ಲೇಖನ- ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಇದೇನಿದು! ಮಕ್ಕಳಿಗೆ ಪಾಲಕರು ಹೆದರಬೇಕೇ ಎಂದು ಸೋಜಿಗ ಪಡದಿರಿ. ಸಾಮಾನ್ಯವಾಗಿ ಮಕ್ಕಳು ತಮ್ಮ ಪಾಲಕರಿಗೆ ಹೆದರಬೇಕು ಎಂಬುದು ಲೋಕಾರೂಢಿ, ಆದರೆ ಪಾಲಕರೇ ಮಕ್ಕಳಿಗೆ ಹೆದರಬೇಕು ಎಂಬುದು ಆಧುನಿಕ ಪರಿಭಾಷೆ.ಖಂಡಿತವಾಗಿಯೂ ಪಾಲಕರು ತಮ್ಮ ಮಕ್ಕಳಿಗೆ ಹೆದರಬೇಕು. ಯಾವ ಕಾರಣಕ್ಕಾಗಿ ಎಂಬುದನ್ನು ಹೇಳಿದರೆ ನೀವು ಕೂಡ ಈ ಮಾತುಗಳನ್ನು ಒಪ್ಪಿಕೊಳ್ಳುತ್ತೀರಿ.ಕೆಲವೇ ವರ್ಷಗಳ ಹಿಂದೆ ನಮ್ಮ ತಂದೆ, ಚಿಕ್ಕಪ್ಪ, ದೊಡ್ಡಪ್ಪ ಮಾವ ಹೀಗೆ ದ್ವಿಚಕ್ರ ವಾಹನಗಳನ್ನು ಹೊಂದಿರುವವರು ತಲೆಗೆ ಹೆಲ್ಮೆಟ್ ಧರಿಸಿ ಸಂಚಾರಿ ನಿಯಮಗಳನ್ನು ಪಾಲಿಸುತ್ತಾ ವಾಹನಗಳನ್ನು ಚಲಾಯಿಸುತ್ತಿದ್ದರು ಎಂಬುದು ನಮಗೆ ನೆನಪಿದೆ. ಅಷ್ಟೇನೂ ವಾಹನ ದಟ್ಟಣೆ ಇಲ್ಲದ ಕಾಲದಲ್ಲಿಯೂ ಕೂಡ ಅವರು ಎಲ್ಲ ನಿಯಮಗಳನ್ನು ಪಾಲಿಸುತ್ತಿದ್ದರು. ಆದರೆ ಇಂದಿನ ವಿಪರೀತ ಸಂಚಾರ ದಟ್ಟಣೆಯ ಸಮಯದಲ್ಲಿಯೂ ಕೂಡ ನಾವು ಸಂಚಾರಿ ನಿಯಮಗಳನ್ನು ಅತ್ಯಂತ ಸುಲಭವಾಗಿ ಉಲ್ಲಂಘಿಸಿ ಮುನ್ನಡೆಯುತ್ತೇವೆ. ಸಂಚಾರ ನಿಯಮಗಳನ್ನು…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಪಟ್ಟಣದಲ್ಲಿ ಭಾರತೀಯ ಜನತಾ ಪಾರ್ಟಿ ಬಸವನ ಬಾಗೇವಾಡಿ ಮಂಡಲ ವತಿಯಿಂದ ಈರುಳ್ಳಿ, ಹತ್ತಿ ಮತ್ತು ಮೆಕ್ಕೆಜೋಳ ಬೆಳೆಗಳಿಗೆ ಬೆಂಬಲ ಬೆಲೆ ಹಾಗೂ ಖರೀದಿ ಕೇಂದ್ರ ಪ್ರಾರಂಭ ಮಾಡಲು ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ನೇತೃತ್ವದಲ್ಲಿ ಸರ್ಕಾರಕ್ಕೆ ತಹಶೀಲ್ದಾರ ಮುಖಾಂತರ ಮನವಿಯನ್ನು ಶುಕ್ರವಾರ ಸಲ್ಲಿಸಿದರು.ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ನೇತೃತ್ವದಲ್ಲಿ ಭಾರತೀಯ ಜನತಾ ಪಾರ್ಟಿ ಬಸವನಬಾಗೇವಾಡಿ ಮಂಡಲದಿಂದ ಪಟ್ಟಣದ ದ್ಯಾವಮ್ಮದೇವಿ ದೇವಸ್ಥಾನದಿಂದ ತಹಶೀಲ್ದಾರ ಕಚೇರಿಯವರೆಗೆ ಪಾದಯಾತ್ರೆಯ ಮೂಲಕ ತೆರಳಿ ಮನವಿ ಸಲ್ಲಿಸಿ ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಮಾತನಾಡುತ್ತಾ ರಾಜ್ಯ ಕಾಂಗ್ರೆಸ್ ಸರ್ಕಾರ‌ ಅನ್ನದಾತರ ಹಿತವನ್ನು ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಹರಿಹಾಯ್ದರು.ರೈತರು ಶ್ರಮವಹಿಸಿ ಬೆಳೆದ ಬೆಳೆಗಳಿಗೆ ಬೆಲೆ ಸಿಗದೆ ಪರದಾಡುವಂತಾಗಿದೆ, ರೈತಾಪಿ ವರ್ಗದ ಅಳಲು ಆಲಿಸಬೇಕಾದ ಸರ್ಕಾರ ಕುಂಭಕರ್ಣ ನಿದ್ರೆಗೆ ಜಾರಿದೆ, ಮೆಕ್ಕೆಜೋಳ, ಹತ್ತಿ, ಈರುಳ್ಳಿ ಸಹಿತ ಇನ್ನಿತರ ಬೆಳೆಗಳನ್ನು ಬೆಳೆದಿರುವ ರೈತರಿಗೆ ಮಾರುಕಟ್ಟೆಯಲ್ಲಿ ಸೂಕ್ತ ಬೆಲೆ ಸಿಗದ ಕಾರಣ ರೈತರ ಸ್ಥಿತಿ ಹೇಳತೀರದಾಗಿದೆ ಕೂಡಲೆ ರಾಜ್ಯ…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಪಟ್ಟಣದ ಶ್ರೀ ವಿಶ್ವ ಭಾರತಿ ವಿದ್ಯಾವರ್ಧಕ ಸಂಸ್ಥೆಯ ಶ್ರೀ ಎಸ್.ಕೆ. ಬೆಳ್ಳುಬ್ಬಿ ಪದವಿ ಪೂರ್ವ ಕಾಲೇಜು ಹಾಗೂ ಶ್ರೀ ಯಲ್ಲಮ್ಮ ದೇವಿ ಸಿಬಿಎಸ್ಇ ಶಾಲೆಯ ಸಹಯೋಗದಲ್ಲಿ ವಾರ್ಷಿಕ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿತ್ತು.ಕ್ರೀಡಾಕೂಟದ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಜ್ಯೋತಿ ಬೆಳಗಿಸುವ ಮೂಲಕ ಕ್ರೀಡಾ ಕೂಟಕ್ಕೆ ಚಾಲನೆ ನೀಡಿದರು.ಕ್ರೀಡಾ ಧ್ವಜಾರೋಹಣವನ್ನು ಪಟ್ಟಣ ಪಂಚಾಯಿತಿ ಅಧ್ಯಕ್ಷ ಚನ್ನಮಲ್ಲಪ್ಪ ಗಿಡ್ಡಪ್ಪಗೋಳ ನೇರವೇರಿಸಿದರು.ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದ ಮಾಜಿ ಸಚಿವರು, ಇಂದಿನ ಮಕ್ಕಳನ್ನು ದೈಹಿಕವಾಗಿ ಮತ್ತು ಬೌದ್ಧಿಕವಾಗಿ ಬೆಳೆಸುವಲ್ಲಿ ಪಾಲಕರ ಮತ್ತು ಶಾಲೆಗಳ ಪಾತ್ರ ಬಹಳ ದೊಡ್ಡದು ಏಕೆಂದರೆ ಉತ್ತಮ ರಾಷ್ಟ್ರಕಟ್ಟಲು ಉತ್ತಮ ಆರೋಗ್ಯವಂತ ಪ್ರಜೆಗಳು ಅಷ್ಟೇ ಮುಖ್ಯ ಎಂದು ಆರೋಗ್ಯದ ಗುಟ್ಟು ಕ್ರೀಡೆಯಲ್ಲಿ ಅಡಗಿದೆ ಆದ್ದರಿಂದ ಕ್ರೀಡೆಯಲ್ಲಿ ಎಲ್ಲಾ ಮಕ್ಕಳು ಭಾಗವಹಿಸಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಲಹೆ ನೀಡಿದರು.ಸಾನಿಧ್ಯ ವಹಿಸಿದ ಶ್ರೀ ದಿಗಂಬರೇಶ್ವರ ಮಠದ ಶ್ರೀ ಕಲ್ಲಿನಾಥ ದೇವರು ಮಾತನಾಡಿ ಮಕ್ಕಳನ್ನು ಅಂಕಗಳಲ್ಲಿ ಅಳೆಯದೆ ಅವರು ಸಹಪಠ್ಯ ಚಟುವಟಿಕೆಗಳಾದ ಸಂಗೀತ,ಕಲೆ,…

Read More

ಸರ್ಕಾರಿ ವೈದ್ಯಕೀಯ ಕಾಲೇಜ್ ಹೋರಾಟ ಸಮಿತಿಯ ಮುಖಂಡ ಅನೀಲ್ ಹೊಸಮನಿ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸರ್ಕಾರಿ ವೈದ್ಯಕೀಯ ಕಾಲೇಜ್ ಹೋರಾಟ ಮತ್ತಷ್ಟು ಚುರುಕು ನೀಡಲಾಗುತ್ತಿದ್ದು, ಡಿ.೧ ರಂದು ೨೫ ಸಾವಿರಕ್ಕೂ ಹೆಚ್ಚು ಜನರ ಸಮ್ಮುಖದಲ್ಲಿ ಬೃಹತ್ ಹೋರಾಟಕ್ಕೆ ಕರೆ ನೀಡಲಾಗಿದೆ ಎಂದು ಸರ್ಕಾರಿ ವೈದ್ಯಕೀಯ ಕಾಲೇಜ್ ಹೋರಾಟ ಸಮಿತಿಯ ಅನೀಲ್ ಹೊಸಮನಿ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಾಸಗಿ ಸಹಭಾಗಿತ್ವದಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜ್ ಸ್ಥಾಪನೆಯಾದರೆ ಬಡವರಿಗೆ ಆರೋಗ್ಯ ಹಾಗೂ ಬಡ ಮಕ್ಕಳಿಗೆ ವೈದ್ಯಕೀಯ ಶಿಕ್ಷಣ ಎರಡೂ ಗಗನಕುಸುಮ, ಹೀಗಾಗಿ ಪೂರ್ಣ ಪ್ರಮಾಣದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜ್‌ಗಾಗಿ ನಮ್ಮ ಹೋರಾಟ ನಡೆದಿದೆ, ಇದು ಜನರ ಹೋರಾಟ, ಜನಪರವಾದ ಹೋರಾಟ, ಕಳೆದ ಸೆಪ್ಟೆಂಬರ್ ೧೮ ರಿಂದ ಹೋರಾಟ ಆರಂಭವಾಗಿದೆ, ಕಳೆದ ೭೨ ದಿನಗಳಿಂದ ನಿರಂತರವಾಗಿ ಹೋರಾಟ ನಡೆಯುತ್ತಿದೆ, ಎಲ್ಲ ಸಂಘಟನೆಗಳು ಹೋರಾಟಕ್ಕೆ ಬೆಂಬಲ ಸೂಚಿಸಿವೆ ಎಂದರು.ಡಿ.೧ ರ ಹೋರಾಟ ಬೃಹತ್ ಪ್ರಮಾಣದಲ್ಲಿ ನಡೆಯುತ್ತಿದ್ದು, ವಿವಿಧ ಕಾರ್ಮಿಕ, ಮಹಿಳಾ, ವಿದ್ಯಾರ್ಥಿಗಳು, ದಲಿತ, ಕನ್ನಡ ಪರ…

Read More

ಸಂಗಮೇಶ್ವರ ಪಿಯು ಕಾಲೇಜಿನಲ್ಲಿ ಅಂತರ ಪೀಳಿಗೆ ಜಾಗೃತಿ ಕಾರ್ಯಕ್ರಮ ಉದಯರಶ್ಮಿ ದಿನಪತ್ರಿಕೆ ಚಡಚಣ: “ಮನೆಯಲ್ಲಿ ಇರುವ ಹಿರಿಯರನ್ನು ಪ್ರೀತಿಸಿ, ಅವರ ಅಗತ್ಯಗಳಿಗೆ ಸ್ಪಂದಿಸುವುದು ಕುಟುಂಬದ ಕಿರಿಯರ ಮತ್ತು ಹಿರಿಯರ ಇಬ್ಬರ ಜವಾಬ್ದಾರಿ. ಯುವ ಪೀಳಿಗೆ ಹಿರಿಯರ ಅನುಭವಗಳನ್ನು ಗೌರವಿಸಿ, ಅವರ ಜೀವನ ಮೌಲ್ಯಗಳಿಂದ ಕಲಿಯಬೇಕು,” ಎಂದು ವಿಜಯಪುರ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಉಪನ್ಯಾಸಕ ಹಾಗೂ ಅಂತರ ಪೀಳಿಗೆ ಜಾಗೃತಿ ಕಾರ್ಯಕ್ರಮದ ನೋಡಲ್ ಅಧಿಕಾರಿ ಪ್ರೊ. ಆರ್.ಸಿ. ಹಿರೇಮಠ ಹೇಳಿದರು.ಚಡಚಣದ ಸಂಗಮೇಶ್ವರ ಪದವಿಪೂರ್ವ ಮಹಾವಿದ್ಯಾಲಯದಲ್ಲಿ, ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕರ್ನಾಟಕ ಸರ್ಕಾರಿ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ಹಿರಿಯ ನಾಗರಿಕರ ಸ್ವಯಂಸೇವಾ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಅಂತರ ಪೀಳಿಗೆ ಜಾಗೃತಿ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.“ಪಾಶ್ಚಾತ್ಯ ಸಂಸ್ಕೃತಿಯ ಪ್ರಭಾವದಿಂದ ಇಂದಿನ ಯುವಕರು ಹಿರಿಯರ ಬಗ್ಗೆ ನಿರ್ಲಕ್ಷ್ಯ ಮತ್ತು ತಾತ್ಸಾರಭಾವವನ್ನು ಹೊಂದುತ್ತಿರುವುದು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕದಂಬ ಸೈನ್ಯ ವಿಜಯಪುರ ಘಟಕದಿಂದ ದ್ವಿಭಾಷಾ ನೀತಿ ಕಡ್ಡಾಯವಾಗಿ ಜಾರಿಗೆ ಹಾಗೂ ಕನ್ನಡ ಕನ್ನಡಿಗರನ್ನು ನಿಂದಿಸುವವರ, ದೌರ್ಜನ್ಯ ಪುಂಡಾಟಿಕೆ ನಡೆಸುವವರ ವಿರುದ್ಧ ನಾಡದ್ರೋಹ ಕಾಯ್ದೆ ಜಾರಿಗೆ, ಕನ್ನಡಿಗರ‌ ಉದ್ಯೋಗ ದಾತೆ ೨೦೧೭ ಡಾ ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಕಾಯ್ದೆ ಜಾರಿಗೆ ಆಗ್ರಹಿಸಿ ಪ್ರತಿಭಟನೆ ಮೂಲಕ ಶುಕ್ರವಾರ ಅಪರ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ ನೇತ್ರತ್ವದಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರುನಂತರ ಕದಂಬ ಸೈನ್ಯ ಸಂಘಟನೆಯ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ದ್ವಿಭಾಷಾ ನೀತಿ ಜಾರಿಗೆ ತಂದಿದೆ. ಆದರೆ ಕನ್ನಡ ಕಡ್ಡಾಯ ಇಲ್ಲ, ಕನ್ನಡ ಮತ್ತು ಇಂಗ್ಲಿಷ್ ಜೊತೆಗೆ ವಿದ್ಯಾರ್ಥಿಗಳು ತಮ್ಮ ತಮ್ಮಮಾತೃ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಆಯ್ಕೆ ಮಾಡಿಕೊಳ್ಳಲು ನೂತನ ನೀತಿಯಲ್ಲಿ ಅವಕಾಶ ಕಲ್ಪಿಸಲಾಗಿದೆ, ಇದರಿಂದ ಹಾಲಿ ಇರುವ ತ್ರಿಭಾಷಾ ಸೂತ್ರಕ್ಕೆ ರಾಜ್ಯ ಶಿಕ್ಷಣ ನೀತಿ ಅವಕಾಶ ಕಲ್ಪಿಸಿರುವದನ್ನು ರದ್ದುಮಾಡಿ ತಮಿಳುನಾಡಿನಲ್ಲಿ ದ್ವಿಭಾಷಾ ನೀತಿ ಜಾರಿಗೆ ತಂದಿರುವಂತೆ ನಮ್ಮ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಪ್ರತಿಭಾವಂತ ಯುವತಿಯೊಬ್ಬಳು ಜರ್ಮನಿಯ ಆಸ್ಪತ್ರೆಯೊಂದರಲ್ಲಿ ಹಿರಿಯ ಶುಶ್ರೂಷಕಿಯಾಗಿ ಸೇವೆ ಸಲ್ಲಿಸಲು ಆಯ್ಕೆಯಾಗಿ ಗ್ರಾಮೀಣ ಪ್ರತಿಭೆಗಳಲ್ಲಿ ಹೊಸ ಭರವಸೆ ಮೂಡಿಸಿದ್ದಾರೆ.ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಮಣೂರು ಗ್ರಾಮದ ಪ್ರೀತಿ ಸುಭಾಸ್ ಆನೆಗುಂದಿ ಈ ಸಾಧನೆ ಮೆರೆದ ಯುವತಿಯಾಗಿದ್ದಾರೆ. ಉತ್ತಮ ಸೇವೆಯಿಂದಲೇ ಗುರುತಿಸಿಕೊಂಡ ಪ್ರೀತಿ, ಬೆಂಗಳೂರಿನಿಂದ ಗುರುವಾರವೇ ಜರ್ಮನಿಗೆ ತೆರಳುತ್ತಿದ್ದು, ಕೆಲವೇ ದಿನಗಳಲ್ಲಿ ಅಲ್ಲಿನ ನಾರ್ವೆ ರಾಜ್ಯದ ಹಾಕ್ಸ್ಸ್ಟರ್‌ನ ಅಸ್ಕಲೆಪಿಯೋಸ್ ಎಂಬ ಆಸ್ಪತ್ರೆಯಲ್ಲಿ ಹಿರಿಯ ಶುಶ್ರೂಷಕಿಯಾಗಿ ಕಾರ್ಯ ನಿರ್ವಹಿಸಲಿದ್ದಾರೆ.ಗ್ರಾಮೀಣ ಪ್ರತಿಭೆಯಾದ ಪ್ರೀತಿ ಆರೋಗ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಬೇಕೆಂದು ಕನಸು ಕಂಡಿದ್ದರು. ದೈಹಿಕ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಇವರ ತಂದೆ ಸುಭಾಸ್ ಹಾಗೂ ಕುಟುಂಬದವರು ಪ್ರೀತಿ ಅವರ ಅಧ್ಯಯನಕ್ಕೆ ಸಾಕಷ್ಟು ಪ್ರೋತ್ಸಾಹ ನೀಡುತ್ತಿದ್ದರು.ಸದ್ಯ ವಿಜಯಪುರ ಜಿಲ್ಲೆಯಿಂದ ಆಯ್ಕೆಯಾದ ಇಬ್ಬರ ಪೈಕಿ ಪ್ರೀತಿ ಕೂಡ ಒಬ್ಬರಾಗಿದ್ದಾರೆ ಎಂಬುದು ಮಣೂರು ಗ್ರಾಮಸ್ಥರಿಗೆ ಅಭಿಮಾನದ ಸಂಗತಿಯಾಗಿದೆ. ಭಾಷೆ ಮತ್ತಿತರ ಸಮಸ್ಯೆಗಳಿಂದ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಹಿಂಜರಿಯುವ ಗ್ರಾಮೀಣ ಯುವ ಜನತೆಗೆ ವಿದೇಶದಲ್ಲಿ ಸೇವೆ ಸಲ್ಲಿಸಲು ಹೊರಟಿರುವ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕಡು ಬಡತನ ಕುಟುಂಬದಲ್ಲಿ ಜನಿಸಿ, ಏಕಾಗ್ರತೆ, ಶಿಸ್ತು, ಶ್ರದ್ಧೆ, ಸಹನೆಯಿಂದ ಓದಿ ೨೦೦೬ನೇ ಸಾಲಿನಲ್ಲಿ ಕೆಎಎಸ್ ಅಧಿಕಾರಿಯಾಗಿ ಸೇವೆ ಆರಂಭಿಸಿ, ೨೦೧೨ರಲ್ಲಿ ಐಎಎಸ್‌ಗೆ ಮುಂಬಡ್ತಿ ಹೊಂದಿ ಸಮಾಜ ಹಾಗೂ ಯುವ ಜನಾಂಗಕ್ಕೆ ಮಾದರಿ ವ್ಯಕ್ತಿಯಾಗಿದ್ದರು. ಬಸವ ಅನುಯಾಯಿಯಾಗಿದ್ದ ಇವರು ಕರ್ತವ್ಯದಲ್ಲಿ ಪ್ರಾಮಾಣಿಕತೆ ಮತ್ತು ದಕ್ಷತೆಗೆ ಹೆಸರಾಗಿದ್ದರು. ಭಗವಂತ ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ ಎಂದು ಆರಕ್ಷಕ ಮೌಲಾಲಿ ಆಲಗೂರ ಹೇಳಿದರು.ಸಿಂದಗಿ ತಾಲೂಕಿನ ಬೋರಗಿ ಗ್ರಾಮದ ನಬಿರೋಶನ್ ಪ್ರಕಾಶನ ವತಿಯಿಂದ ಹಮ್ಮಿಕೊಂಡ ಮಹಾಂತೇಶ ಬೀಳಗಿ ಅವರ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ನುಡಿ ನಮನ ಸಲ್ಲಿಸಿ ಮಾತನಾಡಿ ಅವರು, ಸ್ಪೂರ್ತಿದಾಯಕ ಮಾತುಗಳಿಂದ ಲಕ್ಷಾಂತರ ಸ್ಪರ್ಧಾತ್ಮಕ ಓದುಗರ ಕೀರ್ತಿ ಹೆಚ್ಚಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ, ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಅವರ ಸಾವು ಅತ್ಯಂತ ನೋವಿನ ಸಂಗತಿ ಎಂದರು.ಈ ವೇಳೆ ಆರಕ್ಷಕರಾದ ತುಕಾರಾಮ, ಸಂಜು, ಜಲಾಲುದ್ದೀನ್, ಜಾವೀದ್ ಮಹಾಂತೇಶ ಬೀಳಗಿ ಇವರ ಪೋಟೋಗೆ ಪುಷ್ಪಾರ್ಚನೆ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ನಗರದಲ್ಲಿ ಪ್ರಪ್ರಥಮ ಬಾರಿಗೆ ಯುವಾ ಬ್ರಿಗೇಡ್ ವತಿಯಿಂದ ನ.೨೯ರಂದು ಪಟ್ಟಣದ ಮಾಂಗಲ್ಯ ಭವನದಲ್ಲಿ ಸಾಯಂಕಾಲ ೫ಗಂಟೆಗೆ ಡಾ.ಬಾಬಾಸಾಹೇಬ್ ಅವರ ವಿಚಾರಗಳ ಅನಾವರಣ, ಹೊಸ ಬೆಳಕು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಯುವಾ ಬ್ರಿಗೇಡ್ ವಿಭಾಗೀಯ ಸಂಚಾಲಕ ರಾಜು ಪಾಟೀಲ ಹೇಳಿದರು.ಸಿಂದಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಯುವಾ ಬ್ರಿಗೇಡ್ ವತಿಯಿಂದ ಹಮ್ಮಿಕೊಂಡ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಮಾಜಿ ಸಚಿವ ಎನ್.ಮಹೇಶ, ಯುವಾ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಆಗಮಿಸಲಿದ್ದಾರೆ. ಸಾನಿಧ್ಯವನ್ನು ಯಂಕAಚಿ ಶ್ರೀಮಠದ ಅಭಿನವ ರುದ್ರಮುನಿ ಶಿವಾಚಾರ್ಯರು, ಆಲಮೇಲ ಶ್ರೀಮಠದ ಚಂದ್ರಶೇಖರ ಶಿವಾಚಾರ್ಯರು ವಹಿಸಿಕೊಳ್ಳುವರು. ಹಾಗಾಗಿ ಕಾರ್ಯಕ್ರಮಕ್ಕೆ ಎಲ್ಲರೂ ಆಗಮಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.ಈ ವೇಳೆ ಅಮೃತ ಬಿಂದು ರಾಜ್ಯ ಸಂಚಾಲಕ ಚಂದ್ರಶೇಖರ ನಂಜನಗೂಡು ಮಾತನಾಡಿ, ದೇಶಕ್ಕೆ ಕೊಡುಗೆ ನೀಡಿದ ಮಹಾಪುರುಷರ ವಿಚಾರಗಳನ್ನು ಸಂಪೂರ್ಣವಾಗಿ ಸಮಾಜಕ್ಕೆ ಉಪನ್ಯಾಸ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶವಾಗಿದೆ. ಬಾಬಾಸಾಹೇಬರ್ ವಿಚಾರಗಳನ್ನು ಕುರಿತಾಗಿ ಸಾರ್ವಜನಿಕರಿಗೆ ತಿಳಿಸುವ ದಿಸೆಯಲ್ಲಿ…

Read More

ಪ್ರೌಢಶಾಲೆ ನಿರ್ಮಾಣಕ್ಕೆ ನಿವೇಶನ ಖರೀದಿಗೆ ರೂ.೧೦ ಲಕ್ಷದ ಚೆಕ್ ವಿತರಿಸಿದ ಶಾಸಕ ಅಶೋಕ ಮನಗೂಳಿ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಮನಗೂಳಿ ಮನೆತನ ಶಿಕ್ಷಣ ಕ್ಷೇತ್ರಕ್ಕೆ ಅಗಾದವಾದ ಕೊಡುಗೆ ನೀಡಿದೆ. ಈ ಹಿಂದೆ ಬಮ್ಮನಳ್ಳಿ ಗ್ರಾಮದಲ್ಲಿ ಪ್ರೌಢಶಾಲೆ ನಿರ್ಮಾಣವಾಗಲು ಜಾಗೆಯ ಖರೀದಿಗೆ ೫ಲಕ್ಷ ನೀಡುವುದಾಗಿ ವಾಗ್ದಾನ ಮಾಡಿದ್ದೆ ಕೊಟ್ಟ ಮಾತಿನಂತೆ ಜಾಗೆಯ ಖರೀದಿಗೆ ರೂ.೧೦ಲಕ್ಷದ ಚೆಕ್ಕನ್ನು ಗ್ರಾಮಸ್ಥರ ಪರವಾಗಿ ಶ್ರೀಮಠದ ನರಸಿಂಹ ಮಹಾರಾಜರಿಗೆ ನಿಡುತ್ತಿದ್ದೇನೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಸಿಂದಗಿ ಮತಕ್ಷೇತ್ರದ ಬಮ್ಮನಳ್ಳಿ ಗ್ರಾಮದ ಸದ್ಗುರು ಭೀಮಾಶಂಕರ ಮಹಾರಾಜರ ೭೧ನೇ ಜಾತ್ರಾ ಮಹೋತ್ಸವದ ಪುರಾಣ ಮಹಾಮಂಗಲ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮನಗೂಳಿ ಮನೆತನ ಕೇವಲ ಭರವಸೆ ನೀಡಿ ಹೊಗುವ ಮನೆತನವಲ್ಲ. ದಿ.ಎಂ.ಸಿ.ಮನಗೂಳಿ ಅವರು ೨ಬಾರಿ ಶಾಸಕರಾಗಿ ಸಚಿವರಾಗಿದ್ದವರು. ಅವರು ಈ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿಸಲು ಸದಾ ದುಡಿದವರು. ಅವರ ಹಾದಿಯಲ್ಲಿಯೇ ನಾನು ದುಡಿಯುತ್ತಿದ್ದೇನೆ. ಈ ಹಿಂದೆ ಬಮ್ಮನಳ್ಳಿ ಗ್ರಾಮದಲ್ಲಿ ಪ್ರೌಢಶಾಲೆಯನ್ನು ನಿರ್ಮಾಣ ಮಾಡುತ್ತೇನೆ ಎಂದು ಭರವಸೆ ನೀಡಿದ್ದೆ, ಆದರೆ…

Read More