Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್. ಆಯುರ್ವೇದ ಮಹಾವಿದ್ಯಾಲಯದ ಶಲ್ಯ ತಂತ್ರ ವಿಭಾಗದ ವತಿಯಿಂದ ಅಗ್ನಿಕರ್ಮಚಿಕಿತ್ಸೆ ಕುರಿತು ಆರು ದಿನಗಳ ಉಚಿತ ಶಿಬಿರ ಆಗಷ್ಟ 24 ರಿಂದ ಆಗಷ್ಟ 29ರ ವರೆಗೆ ನಡೆಯಲಿದೆ.ಬಿ.ಎಲ್.ಡಿ.ಇ ಆಯುರ್ವೇದ ಹೈಟೆಕ್ ಆಸ್ಪತ್ರೆಯ ನಡೆಯಲಿರುವ ಈ ಶಿಬಿರದಲ್ಲಿ ಬೆನ್ನು ನೋವು, ಭುಜ ನೋವು, ಕತ್ತು ನೋವು , ಹಿಮ್ಮಡಿ ನೋವು, ಸಂಧಿ ನೋವು ಮುಂತಾದವುಗಳಿಗೆ ಉಚಿತ ತಪಾಸಣೆ ಹಾಗೂ ಉಚಿತ ಚಿಕಿತ್ಸೆ ನೀಡಲಾಗುವುದು.ಇಂಥ ಸಮಸ್ಯೆಗಳನ್ನು ಎದುರಿಸುತ್ತಿರುವ ಸಾರ್ವಜನಿಕರು ಈ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಬಿ.ಎಲ್.ಡಿ.ಇ ಹೈಟೆಕ್ ಆಯುರ್ವೇದ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಂಜಯ ಕಡ್ಲಿಮಟ್ಟಿ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ಆಸ್ಪತ್ರೆಯ ಮೊ. ನಂ. 9513397413 ಸಂಪರ್ಕಿಸಬಹುದಾಗಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಹೋಕ್ರಾಣಿ ಗ್ರಾಮದ ದಲಿತ ಸಮುದಾಯದ ಅಪ್ರಾಪ್ತ ಬಾಲಕಿ ಕುಮಾರಿ ಅಶ್ವಿನಿ, ತಂದೆ ತಿಪ್ಪಾರೆಡ್ಡಿ ಅವರ ಮೇಲೆ ನಡೆದಿರುವ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಅತ್ಯಂತ ಅಮಾನವೀಯ, ಹೃದಯವಿದ್ರಾವಕ ಮತ್ತು ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ಘಟನೆ ಎಂದು ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ ರಾಜ್ಯಾಧ್ಯಕ್ಷ ಅಪ್ಪುರಾಜ್ ನಿಮಾದಾರ ತೀವ್ರವಾಗಿ ಖಂಡಿಸಿದ್ದಾರೆ.ಬಯಲು ಶೌಚಾಲಯಕ್ಕೆ ತೆರಳಿದ್ದ ಅಪ್ರಾಪ್ತ ಬಾಲಕಿಯ ಮೇಲೆ ದುಷ್ಕರ್ಮಿಗಳು ಅತ್ಯಾಚಾರ ಎಸಗಿ, ಕೊಲೆ ಮಾಡಿ, ಬಳಿಕ ಮೃತದೇಹವನ್ನು ಬಾವಿಗೆ ಎಸೆದಿರುವುದು ಅತ್ಯಂತ ಕ್ರೂರ ಕೃತ್ಯವಾಗಿದೆ. ಇಂತಹ ಘಟನೆಗಳು ಸಮಾಜದಲ್ಲಿ ಮಹಿಳೆಯರು ಮತ್ತು ಅಪ್ರಾಪ್ತ ಬಾಲಕಿಯರ ಸುರಕ್ಷತೆ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿವೆ.ಈ ಪ್ರಕರಣವನ್ನು ಯಾವುದೇ ರೀತಿಯ ರಾಜಕೀಯ, ಸಾಮಾಜಿಕ ಅಥವಾ ಪ್ರಭಾವದ ಒತ್ತಡಕ್ಕೆ ಒಳಗಾಗದೆ ನಿಷ್ಪಕ್ಷಪಾತವಾಗಿ ಹಾಗೂ ತ್ವರಿತಗತಿಯಲ್ಲಿ ತನಿಖೆ ನಡೆಸಬೇಕು. ಪ್ರಕರಣದಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬ ಆರೋಪಿಯನ್ನು ಕೂಡಲೇ ಬಂಧಿಸಿ, ವೈಜ್ಞಾನಿಕ ಸಾಕ್ಷ್ಯಾಧಾರಗಳೊಂದಿಗೆ ತನಿಖೆ ಪೂರ್ಣಗೊಳಿಸಿ, ನ್ಯಾಯಾಲಯದಲ್ಲಿ ಶೀಘ್ರ ವಿಚಾರಣೆ ನಡೆಯುವಂತೆ…

Read More

ಉದಯರಶ್ಮಿ ದಿನಪತ್ರಿಕೆ ಬಾಗಲಕೋಟೆˌ (ಜಮಖಂಡಿ): “ಸರಿಯಾದ ಮಾರ್ಗವನ್ನು ತೋರಿಸುವವರೇ ನಮ್ಮ ನಿಜವಾದ ಸ್ನೇಹಿತರು. ನಮ್ಮನ್ನು ದುಶ್ಚಟಗಳ ದಾರಿಗೆ ಕೊಂಡೊಯ್ಯುವವರೇ ನಿಜವಾದ ಶತ್ರುಗಳು. ಯುವಕರು ದುಶ್ಚಟಗಳಿಂದ ದೂರ ಉಳಿದು ಸದ್ಗುಣಗಳನ್ನು ಮೈಗೂಡಿಸಿಕೊಂಡಾಗ ಮಾತ್ರ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ” ಎಂದು ಓಲೆಮಠದ ಆನಂದ ಶ್ರೀಗಳು ಹೇಳಿದರು.ತಾಲೂಕಿನ ಕಡಪಟ್ಟಿ–ಹಂಚಿನಾಳ ಗ್ರಾಮದಲ್ಲಿ ಓಲೆಮಠದ ಆಶ್ರಯದಲ್ಲಿ ವ್ಯಸನ ಮುಕ್ತ ಗ್ರಾಮಗಳ ನಿರ್ಮಾಣದ ಸಂಕಲ್ಪದೊಂದಿಗೆ ಹಮ್ಮಿಕೊಂಡಿರುವ ಒಂಬತ್ತು ದಿನಗಳ ‘ದುಶ್ಚಟಗಳ ಭಿಕ್ಷೆ, ಸದ್ಗುಣಗಳ ದೀಕ್ಷೆ’ ಜನಜಾಗೃತಿ ಯಾತ್ರೆಯ ಅಂಗವಾಗಿ ಗ್ರಾಮದಲ್ಲಿ ರುದ್ರಾಕ್ಷಿ ಧಾರಣ ಹಾಗೂ ಸದ್ಭಾವನ ಪಾದಯಾತ್ರೆ ಸಂದರ್ಭದಲ್ಲಿ ಅವರು ಮಾತನಾಡಿದರು.ಗ್ರಾಮದ ಮನೆ–ಮನೆಗೆ ತೆರಳಿ ಜನರಲ್ಲಿ ದುಶ್ಚಟಗಳ ವಿರುದ್ಧ ಜಾಗೃತಿ ಮೂಡಿಸಿದ ಶ್ರೀಗಳು, ಮದ್ಯಪಾನ, ಧೂಮಪಾನ ಹಾಗೂ ತಂಬಾಕು ಸೇವನೆಯಿಂದ ಆರೋಗ್ಯ ಹದಗೆಡುವುದರ ಜೊತೆಗೆ ಕುಟುಂಬದ ನೆಮ್ಮದಿಯೂ ಹಾಳಾಗುತ್ತದೆ ಎಂದು ಎಚ್ಚರಿಸಿದರು.ದುಶ್ಚಟ ಹೊಂದಿರುವವರು ಅವುಗಳನ್ನು ತ್ಯಜಿಸುವ ಸಂಕಲ್ಪದೊಂದಿಗೆ ಶ್ರೀಗಳ ಜೋಳಿಗೆಗೆ ತಮ್ಮ ಕೆಟ್ಟ ಚಟಗಳನ್ನು ‘ಭಿಕ್ಷೆ’ಯಾಗಿ ಹಾಕುವಂತೆ ಕರೆ ನೀಡಲಾಯಿತು. ಪಾದಯಾತ್ರೆಯಲ್ಲಿ ಪಾಲ್ಗೊಂಡ ಅನೇಕ ಯುವಕರಿಂದ ದುಶ್ಚಟ ತ್ಯಜಿಸುವ…

Read More

ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಆಣೆಕಟ್ಟು ಸುರಕ್ಷತಾ ಕಾಯ್ದೆ–೨೦೨೧ರ ಅನ್ವಯ ಪ್ರೊ.ಶರದ್ ಜೋಷಿ ನೇತೃತ್ವದ ೮ ಜನರ ನೀರಾವರಿ ತಜ್ಞರ ತಂಡವು ಬುಧವಾರ ಮತ್ತು ಗುರುವಾರ ಎರಡು ದಿನಗಳ ಕಾಲ ಆಲಮಟ್ಟಿ ಜಲಾಶಯದ ಸಮಗ್ರ ಸುರಕ್ಷತಾ ಪರಿಶೀಲನೆ ನಡೆಸಿದೆ.ತಜ್ಞರು ಜಲಾಶಯದ ಬಾಳಿಕೆ ಮತ್ತು ನೀರಿನ ಸೋರಿಕೆ, ಭೂಕಂಪ ನಿರೋಧಕ ಸಾಮರ್ಥ್ಯ, ಗೇಟ್‌ಗಳ ಕಾರ್ಯಕ್ಷಮತೆ, ಸಿವಿಲ್ ಕಾಮಗಾರಿಗಳು ಮತ್ತು ಕಾಫರ್ ಜಲಾಶಯಗಳ ಗುಣಮಟ್ಟ ಈ ಅಂಶಗಳನ್ನು ಪರಿಶೀಲಿಸಿದರು.ತಜ್ಞರ ಅಭಿಪ್ರಾಯತಂಡದ ನೇತೃತ್ವ ವಹಿಸಿದ್ದ ಪ್ರೊ. ಶರದ್ ಜೋಷಿ ಮಾತನಾಡಿ, “ಜಲಾಶಯದ ಗುಣಮಟ್ಟ ಉತ್ತಮವಾಗಿದೆ. ಸುರಕ್ಷತೆ ಮತ್ತು ಸಾಮರ್ಥ್ಯವನ್ನು ಇನ್ನಷ್ಟು ಹೆಚ್ಚಿಸಲು ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆಯೂ ಪರಿಶೀಲಿಸಿದ್ದೇವೆ” ಎಂದು ತಿಳಿಸಿದರು.ತಜ್ಞರು ಪ್ರತ್ಯೇಕ ವರದಿಗಳನ್ನು ಸಲ್ಲಿಸಿದ ಬಳಿಕ ಅವುಗಳನ್ನು ಕ್ರೋಢೀಕರಿಸಿ ಡಿಸೆಂಬರ್ ೨೦೨೬ರೊಳಗೆ ರಾಜ್ಯ ಸರ್ಕಾರಕ್ಕೆ ಸಮಗ್ರ ಮೌಲ್ಯಮಾಪನ ವರದಿ ಸಲ್ಲಿಸಲಾಗುವುದು. ಅಗತ್ಯವಿರುವ ತುರ್ತು ಕ್ರಮಗಳನ್ನೂ ಶಿಫಾರಸು ಮಾಡಲಾಗುವುದು ಎಂದು ಹೇಳಿದರು.ಸಮಿತಿ ಸದಸ್ಯರಾದ ಶಿವಪ್ರಸಾದ, ಎಸ್.ಎಲ್. ರಾಜಶೇಖರ, ಕೆ. ಸತ್ಯನಾರಾಯಣ, ಅಮರನಾಥ ಹೆಗಡೆ, ಕಮಲಶೇಖರನ್, ಪ್ರಾಣೇಶ ಮುರನಾಳ, ಎಸ್.…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ತಾಲೂಕಾ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನೌಕರರ ಸಂಘದ ವತಿಯಿಂದ ಆ.೨೩ರಂದು ನಗರದ ಗುಂದಗಿ ಫಂಕ್ಷನ್ ಹಾಲ್‌ನಲ್ಲಿ ಬೆಳಿಗ್ಗೆ ೧೧ಗಂಟೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಸಂಗೊಳ್ಳಿ ರಾಯಣ್ಣ ನೌಕರರ ಸಂಘದ ಅಧ್ಯಕ್ಷ ರಾಯಪ್ಪ ಇವಣಗಿ ತಿಳಿಸಿದರು.ಸಿಂದಗಿ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾರ್ಯಕ್ರಮದ ಸಾನಿಧ್ಯವನ್ನು ಹಲವು ಪೂಜ್ಯರು ವಹಿಸಲಿದ್ದಾರೆ. ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ಶಾಸಕ ಅಶೋಕ ಮನಗೂಳಿ ಜ್ಯೋತಿ ಬೆಳಗಿಸಲಿದ್ದಾರೆ. ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹಾಗೂ ಮಾಜಿ ಸಚಿವ ಬಂಡೆಪ್ಪ ಖಾಶಂಪೂರ ಅವರು ಭಾವಚಿತ್ರಕ್ಕೆ ಪೂಜೆ ನೆರವೇರಿಸಲಿದ್ದಾರೆ. ಮಾಜಿ ಸಚಿವ ವರ್ತೂರ ಪ್ರಕಾಶ ಹಾಗೂ ಮಾಜಿ ಶಾಸಕರಾದ ಶರಣಪ್ಪ ಸುಣಗಾರ, ರಮೇಶ ಭೂಸನೂರ ಸೇರಿದಂತೆ ಅನೇಕರು ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದರು.ಈ ವೇಳೆ ಸಮಾಜದ ಮುಖಂಡ ಮಲ್ಲಿಕಾರ್ಜುನ ಸಾವಳಸಂಗ ಮಾತನಾಡಿ, ಕಾರ್ಯಕ್ರಮದಲ್ಲಿ ಜಿಲ್ಲೆಯ ಸಮಾಜ ಬಾಂಧವರು, ಸಂಗೊಳ್ಳಿ ರಾಯಣ್ಣನವರ ಅಭಿಮಾನಿಗಳು ಹಾಗೂ…

Read More

ಸಿಇಒ ಸರಳತೆ, ಜನಸ್ನೇಹಿ ನಡೆಗೆ ಜನರ ಮೆಚ್ಚುಗೆ | ಗ್ರಾಮಸ್ಥರಲ್ಲಿ ವಿಬಿ–ಜಿ ರಾಮ್–ಜಿ ಯೋಜನೆ ಕುರಿತು ಜಾಗೃತಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಶುಕ್ರವಾರ ತಾಲೂಕಿನ ಹಿಟ್ಟಿನಹಳ್ಳಿ ಹಾಗೂ ಬಬಲೇಶ್ವರ ತಾಲೂಕಿನ ಹೊನಗನಹಳ್ಳಿ, ಕಾರಜೊಳ ಮತ್ತು ಕಾಖಂಡಕಿ ಗ್ರಾಮ ಪಂಚಾಯಿತಿಗಳಿಗೆ ಕ್ಷೇತ್ರ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.ಈ ವೇಳೆ ಕಾಖಂಡಕಿ ಎಲ್.ಟಿ. ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಬಿಸಿಯೂಟ ಸವಿದು, ಗ್ರಾಮಸ್ಥರೊಂದಿಗೆ ನೇರವಾಗಿ ಸಂವಾದ ನಡೆಸಿ ವಿಬಿ–ಜಿ ರಾಮ್–ಜಿ ಯೋಜನೆಯ ಕುರಿತು ಜಾಗೃತಿ ಮೂಡಿಸಿದ್ದು ವಿಶೇಷ ಗಮನ ಸೆಳೆಯಿತು.ಕ್ಷೇತ್ರ ಭೇಟಿಯ ಸಂದರ್ಭದಲ್ಲಿ ಹಿಟ್ಟಿನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿಬಿ–ಜಿ ರಾಮ್–ಜಿ ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ಹಳ್ಳ ಮತ್ತು ಕೆರೆ ಪುನಶ್ಚೇತನ ಕಾಮಗಾರಿಗಳನ್ನು ವೀಕ್ಷಿಸಿದ ಸಿಇಒ ಅವರು, ಕಾಮಗಾರಿಯ ಪ್ರಗತಿ ಹಾಗೂ ಸ್ಥಳದಲ್ಲಿನ ವ್ಯವಸ್ಥೆಗಳ ಕುರಿತು ಪರಿಶೀಲನೆ ನಡೆಸಿದರು.ಬಳಿಕ ಹೊನಗನಹಳ್ಳಿ, ಕಾರಜೊಳ ಹಾಗೂ ಕಾಖಂಡಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ…

Read More

ಉದಯರಶ್ಮಿ ದಿನಪತ್ರಿಕೆ ಅಥಣಿ: ಡಿ.ದೇವರಾಜ ಅರಸ ಅವರು ದಲಿತ ಹಿಂದುಳಿದವ ಹಾಗೂ ಶೋಷಿತ ವರ್ಗಗಳ ಆಶಾಕಿರಣವಾಗಿದ್ದು ಭೂ ಸುಧಾರಣಾ ಕಾಯ್ದೆ ಹಾಗೂ ‘ಉಳುವವನೇ ಭೂಮಿಯ ಒಡೆಯ’ ಕಾಯ್ದೆ ಜಾರಿಗೆ ತರುವ ಮೂಲಕ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಗೆ ಮುನ್ನುಡಿ ಬರೆದ ಮಹಾನ ನಾಯಕರು ಎಂದು ಪುರಸಭೆ ಉಪಾಧ್ಯಕ್ಷೆ ಭುವನೇಶ್ವರಿ ಯಕ್ಕಂಚಿ ಹೇಳಿದರು.ಅವರು ಪಟ್ಟಣದ ಎಸ್.ಎಸ್.ಎಂ.ಎಸ್. ಕಾಲೇಜಿನ ಖೋತ ಸಭಾಭವನದಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ಸಾಮಾಜಿಕ ಪರಿವರ್ತನೆಯ ಹರಿಕಾರ ಡಿ. ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.ಜೀತ ಪದ್ಧತಿ ನಿರ್ಮೂಲನೆ, ವೃದ್ಧಾಪ್ಯ ವೇತನ ಸೇರಿದಂತೆ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದು ಬಡವರು ಮತ್ತು ದುರ್ಬಲ ವರ್ಗಗಳ ಬದುಕಿನಲ್ಲಿ ಮಹತ್ವದ ಬದಲಾವಣೆ ತಂದರು. ಸರ್ಕಾರ ವಿದ್ಯಾರ್ಥಿಗಳಿಗಾಗಿ ಹಲವು ಸೌಲಭ್ಯ ಹಾಗೂ ಯೋಜನೆಗಳನ್ನು ಒದಗಿಸುತ್ತಿದೆ. ವಿದ್ಯಾರ್ಥಿಗಳು ಅವುಗಳ ಸದುಪಯೋಗ ಪಡೆದುಕೊಂಡು ಶ್ರದ್ಧೆ ಹಾಗೂ ಪರಿಶ್ರಮದಿಂದ ವಿದ್ಯಾಭ್ಯಾಸ ಮಾಡಿ ಉತ್ತಮ ನಾಗರಿಕರಾಗಬೇಕು. ಆಗ ಮಾತ್ರ ಅರಸು…

Read More

ವಿಬಿ-ಜಿ ರಾಮ್ ಜಿ ಕಾಮಗಾರಿ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಜಿಪಂ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಗ್ರಾಮೀಣ ಭಾಗದ ಕೂಲಿಕಾರರಿಗೆ ನಿರಂತರ ಉದ್ಯೋಗ ಒದಗಿಸುವುದು ಹಾಗೂ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಪ್ರಕಾಶ ವಡ್ಡರ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಣಮುಚನಾಳ ಹಾಗೂ ಜುಮನಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಖತಿಜಾಪೂರ ಗ್ರಾಮಗಳಲ್ಲಿ ನಡೆಯುತ್ತಿರುವ ಕಾಲುವೆ ಹಾಗೂ ನಾಲಾ ಪುನಶ್ಚೇತನ ಕಾಮಗಾರಿ ಸ್ಥಳಗಳಿಗೆ ಅವರು ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಕೆಲಸದ ಸ್ಥಳದಲ್ಲಿ ಕೂಲಿಕಾರ್ಮಿಕರಿಗೆ ನೆರಳಿನ ವ್ಯವಸ್ಥೆ, ಕುಡಿಯುವ ನೀರು ಹಾಗೂ ಪ್ರಥಮ ಚಿಕಿತ್ಸಾ ವ್ಯವಸ್ಥೆ ಕಡ್ಡಾಯವಾಗಿ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.ಪರಿಶೀಲನೆ ವೇಳೆ ತಾಲೂಕು ಪಂಚಾಯಿತಿ ಇಒ ಜೆ.ಎಸ್. ಪಠಾಣ್, ಸಹಾಯಕ ನಿರ್ದೇಶಕ ವಿ.ಎಸ್. ಹಿರೇಮಠ, ಪಿಡಿಒ ಪವಿತ್ರಾ ನೀಲಕೇಣಿ, ತಾಂತ್ರಿಕ ಸಂಯೋಜಕ ಮಹೇಶ್ ಇಂಗಳೇಶ್ವರ, ಐಇಸಿ ಸಂಯೋಜಕರಾದ ಶಾಂತಪ್ಪ ಇಂಡಿ, ಮುತ್ತುರಾಜ್…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ (ಕೆ ಏಸ್‌ಆರ್‌ಏಲ್‌ಪಿಎಸ್) ಹಾಗೂ ಭಾರತೀಯ ಅಂಚೆ ಇಲಾಖೆಯ ಸಹಯೋಗದಲ್ಲಿ ಗ್ರಾಮೀಣ ಮಹಿಳೆಯರ ಆರ್ಥಿಕ ಸ್ವಾವಲಂಬನೆಗಾಗಿ ಸ್ವಸಹಾಯ ಗುಂಪುಗಳ ಸಕ್ರಿಯ ಸದಸ್ಯರಿಂದ ‘ಪೋಸ್ಟಲ್ ಸಖಿ’ (ಪಿಎಲ್ ಐ, ಆರ್ ಪಿಎಲ್ ಐ ನೇರ ಏಜೆಂಟರು) ಹುದ್ದೆಗಳ ಆಯ್ಕೆಗೆ ನೇರ ಸಂದರ್ಶನ ಆ.೨೪ ರಂದು ಬೆಳಗ್ಗೆ ೧೧ ಗಂಟೆಗೆ ಸ್ಟೇಶನ್ ರಸ್ತೆಯಲ್ಲಿರುವ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ನಡೆಯಲಿದೆ.ಆಯ್ಕೆಯಾದ ಅಭ್ಯರ್ಥಿಗಳು ಅಂಚೆ ಇಲಾಖೆಯ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಏಲ್‌ಐ) ಮತ್ತು ಗ್ರಾಮೀಣ ಅಂಚೆ ಜೀವವಿಮೆ (ಆರ್‌ಪಿಏಲ್‌ಐ)) ಸೇವೆಗಳನ್ನು ಗ್ರಾಮೀಣ ಭಾಗದ ಮನೆ-ಮನೆಗೆ ತಲುಪಿಸುವ ಮೂಲಕ ಆದಾಯ ಗಳಿಸಲು ಉತ್ತಮ ಅವಕಾಶ ಕಲ್ಪಿಸಲಾಗಿದೆ.ಅರ್ಹತೆಗಳು: ಸ್ವಸಾಹಾಯ ಸಂಘದ ಸಕ್ರಿಯ ಸದಸ್ಯೆಯಾಗಿರಬೇಕು. ಕನಿಷ್ಠ ೧೦ನೇ ತರಗತಿ ಉತ್ತೀರ್ಣರಾಗಿರಬೇಕು. ಸ್ಮಾರ್ಟ್ಫೋನ್ ಬಳಕೆ ಹಾಗೂ ಸ್ಥಳೀಯ ಭಾಷಾ ಜ್ಞಾನ ಕಡ್ಡಾಯ ಎಂದು ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ೩ ಪಾಸ್‌ಪೋರ್ಟ್ ಅಳತೆಯ ಫೋಟೋಗಳು, ಆಧಾರ್ ಕಾರ್ಡ್, ಪಾನ್ ಕಾರ್ಡ್, ಎಸ್‌ಎಸ್‌ಎಲ್‌ಸಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಾದ್ಯಂತ ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟವನ್ನು ಪುರುಷ ಹಾಗೂ ಮಹಿಳೆಯರಿಗಾಗಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಹಮ್ಮಿಕೊಳ್ಳಲಾಗಿದೆ.ತಾಲೂಕು ಮಟ್ಟದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಫುಟ್ಬಾಲ್, ಖೋ-ಖೋ, ಕಬಡ್ಡಿ, ಥ್ರೋಬಾಲ್ ಹಾಗೂ ಯೋಗಾಸನ ಸ್ಪರ್ಧೆಗಳು ನಡೆಯಲಿವೆ.ಸೆ.೧ರಂದು ತಿಕೋಟ ತಾಲೂಕಿನ ಸೋಮದೇವರ ಹಟ್ಟಿ ದುರ್ಗಾದೇವಿ ಶಾಲೆಯಲ್ಲಿ, ಸೆ. ೨ ರಂದು ವಿಜಯಪುರ ತಾಲೂಕಿನ ಡಾ. ಬಿ.ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ,ಸೆ.೬ ರಂದು ನಿಡಗುಂದಿ ತಾಲೂಕಿನ ಕಮದಾಳ ಸರ್ಕಾರಿ ಪ್ರೌಢ ಶಾಲೆಯಲ್ಲಿ ಕ್ರೀಡಾಕೂಟ ನಡೆಯಲಿದೆ. ಸೆ.೭ರಂದು ಇಂಡಿ ತಾಲೂಕಾ ಕ್ರೀಡಾಂಗಣದಲ್ಲಿ, ಸೆ.೮ರಂದು ಬಬಲೇಶ್ವರದ ಶಾಂತವೀರ ಕಾಲೇಜಿನಲ್ಲಿ ಹಾಗೂ ಚಡಚಣ ತಾಲೂಕಿನ ಕ್ರೀಡಾಕೂಟವನ್ನು ಸಂಗಮೇಶ್ವರ ಶಿಕ್ಷಣ ಸಂಸ್ಥೆ ಚಡಚಣದಲ್ಲಿ ಆಯೋಜಿಸಲಾಗಿದೆ.ಸೆ.೯ರಂದು ದೇವರ ಹಿಪ್ಪರಗಿ ತಾಲೂಕಿನ ಕ್ರೀಡಾಕೂಟವನ್ನು ಬಿಎಲ್ಡಿಇ ಸಂಸ್ಥೆ ಆವರಣ ದೇವರ ಹಿಪ್ಪರಗಿಯಲ್ಲಿ, ಸೆ.೧೦ ರಂದು ಮುದ್ದೇಬಿಹಾಳ ತಾಲೂಕಿನ ಕ್ರೀಡಾಕೂಟವನ್ನು ಮುದ್ದೇಬಿಹಾಳದ ಎಂಜಿವಿಸಿ ಕಾಲೇಜ್ ಮುದ್ದೇಬಿಹಾಳದಲ್ಲಿ, ಸೆ.೧೧ ರಂದು ಸಿಂದಗಿ ತಾಲೂಕಿಗೆ ಸಂಬಂಧಿಸಿದಂತೆ ತಾಲೂಕಾ ಕ್ರೀಡಾಂಗಣ ಸಿಂದಗಿಯಲ್ಲಿ, ಸೆ.೧೩ ರಂದು ಕೊಲ್ಹಾರ ತಾಲೂಕಿನ್ ಕ್ರೀಡಾಕೂಟವನ್ನು ಸಂಗಮೇಶ್ವರ ಪದವಿಪೂರ್ವ…

Read More