Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಕಾಂಗ್ರೆಸ್ ಗೆ ಅಹಿಂದ ಸಮುದಾಯಗಳ ಖಡಕ್ ಎಚ್ಚರಿಕೆ | ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಇತ್ತ ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಿದರೆ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಕಾಂಗ್ರೆಸ್ ಗೆ ಅಹಿಂದ ಸಮುದಾಯಗಳು ಖಡಕ್ ಎಚ್ಚರಿಕೆ ನೀಡಿದೆ.ಮುಂದಿನ ಮುಖ್ಯಮಂತ್ರಿಯಾಗಲು ಆಕಾಂಕ್ಷಿಯಾಗಿರುವ ಸಿದ್ದರಾಮಯ್ಯ ಮತ್ತು ಅವರ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನಡುವಿನ ಅಧಿಕಾರ ಸಂಘರ್ಷಕ್ಕೆ ರಾಜ್ಯ ಸಾಕ್ಷಿಯಾಗುತ್ತಿದೆ. ಇದರ ನಡುವೆ ರಾಜ್ಯದಲ್ಲಿ ಅಧಿಕಾರ ಸಂಘರ್ಷದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪದಚ್ಯುತಗೊಳಿಸುವ ಯಾವುದೇ ಪ್ರಯತ್ನವು ಪಕ್ಷದ ಮೇಲೆ ಪರಿಣಾಮ ಬೀರುತ್ತದೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗ ಸಮುದಾಯಗಳ ಒಕ್ಕೂಟ (ಕೆಎಸ್‌ಎಫ್‌ಬಿಸಿಸಿ) ಕಾಂಗ್ರೆಸ್‌ಗೆ ಎಚ್ಚರಿಕೆ ನೀಡಿದೆ.ಇಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಕೆಎಸ್‌ಎಫ್‌ಬಿಸಿಸಿ ಅಧ್ಯಕ್ಷ ಕೆ ಎಂ ರಾಮಚಂದ್ರಪ್ಪ, ಅಹಿಂದ (ಅಲ್ಪಸಂಖ್ಯಾತ ಹಿಂದುಳಿದ ವರ್ಗಗಳು ಮತ್ತು ದಲಿತ ಸಮುದಾಯಗಳ ಕನ್ನಡ ಸಂಕ್ಷಿಪ್ತ ರೂಪ) ನಡೆಯುತ್ತಿರುವ ಬೆಳವಣಿಗೆಗಳನ್ನು ನೋಡಿ ತೀವ್ರ ನೋವುಂಟಾಗಿದೆ ಎಂದು ಹೇಳಿದರು.ಉಪಮುಖ್ಯಮಂತ್ರಿ ಡಿ…
ಲೇಖನ- ಬಸವರಾಜ ಹೂಗಾರನಿಕಟ ಪೂರ್ವ ಜಿಲ್ಲಾಧ್ಯಕ್ಷರುಬಿಜೆಪಿ ಯುವ ಮೋರ್ಚಾಆಲಮೇಲವಿಜಯಪುರ ಜಿಲ್ಲೆಮೊ: 9740207097 ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಜ್ಯ ಸರ್ಕಾರ ಇತ್ತೀಚೆಗೆ ಬಡವರ ಪಡಿತರ ಚೀಟಿಗಳನ್ನು ರದ್ದುಪಡಿಸಲು ಆರಂಭಿಸಿರುವುದು ಸರ್ಕಾರದ ಸಂಪೂರ್ಣ ವಿಫಲತೆಯ ಜೀವಂತ ಸಾಕ್ಷಿ. ಈಗಾಗಲೇ ಬೊಕ್ಕಸ ಖಾಲಿಯಾಗಿರುವ ಪರಿಸ್ಥಿತಿಯಲ್ಲಿ, ಸುಳ್ಳು ಪಂಚ ಗ್ಯಾರಂಟಿಗಳ ಮೂಲಕ ರಾಜ್ಯವನ್ನು ದಿವಾಳಿ ಮಾಡಿದ ನಂತರ ಈ ಸರ್ಕಾರ ಈಗ ಬಡವರ ಹೊಟ್ಟೆಗೆ ಕೈ ಹಾಕುವ ಮಟ್ಟಕ್ಕೆ ಇಳಿದುಬಂದಿದೆ. ಇದು ಅತ್ಯಂತ ಖಂಡನೀಯ ಮತ್ತು ಸಂವೇದನಾಶೀಲತೆಯ ಕೊರತೆಯ ಆಡಳಿತ.ಪಡಿತರ ಚೀಟಿ ಬಡ ಕುಟುಂಬಗಳಿಗೆ ಕೇವಲ ಒಂದು ದಾಖಲೆ ಅಲ್ಲ, ಅದು ಜೀವನ, ಅನ್ನ, ಬಾಳಿನ ಭರವಸೆ.ಇದನ್ನು ರದ್ದುಪಡಿಸುವ ಮೂಲಕ ಸರ್ಕಾರ ಬಡತನವನ್ನು ಮತ್ತಷ್ಟು ತೀವ್ರಗೊಳಿಸಲು ಕಾರಣವಾಗುತ್ತಿದೆ.ಸರಕಾರ ನಿಭಾಯಿಸಲು ಆಗದೆ ಹೋದರೆ ರಾಜೀನಾಮೆ ಕೊಡಲಿ, ಮನೆಗೆ ಹೋಗಲಿ.ಬಡವರ ಜೀವನದೊಂದಿಗೆ ಆಟ ಆಡುವ ಹಕ್ಕು ಯಾರಿಗೂ ಇಲ್ಲ.ಇನ್ನೂ ದುಃಖಕರ ಸಂಗತಿ ಏನೆಂದರೆ, ಶ್ರೀಮಂತರ ಕಾರ್ಡುಗಳನ್ನು ಅಚ್ಚುಕಟ್ಟಾಗಿ ಇಟ್ಟು, ಬಹುತೇಕ ಬಡವರ ಕಾರ್ಡುಗಳನ್ನು ಮಾತ್ರ ರದ್ದುಪಡಿಸುತ್ತಿರುವುದು ಸರ್ಕಾರದ ದ್ವಂದ್ವ ನಿಲುವಿನ…
ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ನಡೆದ ಸಂವಿಧಾನ ದಿನಾಚರಣೆಯಲ್ಲಿ ಡಾ.ತರನ್ನುಮ್ ಜಬೀನ್ ಖಾನ್ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್ ಬಿ ಕಲಾ ಮತ್ತು ಕೆ ಸಿ ಪಿ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ, ರಾಜ್ಯಶಾಸ್ತ್ರ ವಿಭಾಗದ ಸಹಯೋಗದಲ್ಲಿ ನ.೨೬ ರಂದು ರಾಷ್ಟ್ರೀಯ ಸಂವಿಧಾನ ದಿನಾಚರಣೆಯ ಆಚರಿಸಲಾಯಿತು.ಈ ವೇಳೆಯಲ್ಲಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ತರನ್ನುಮ್ ಜಬೀನ್ ಖಾನ್ ಪ್ರಾಸ್ತಾವಿಕ ಮಾತನಾಡಿ, ನಮ್ಮ ಸಂವಿಧಾನವು ಪ್ರಜಾಸತ್ತಾತ್ಮಕ ಮೌಲ್ಯಗಳಾದ ಸಮಾನತೆ, ಸ್ವಾತಂತ್ರ, ನ್ಯಾಯ ಹಾಗೂ ಕರ್ತವ್ಯಗಳು ಎಂಬ ಜವಾಬ್ದಾರಿಗಳನ್ನು ನೀಡಿದೆ ಎಂದರು.ಸಂವಿಧಾನದ ಹುಟ್ಟು, ಬೆಳವಣಿಗೆ, ಸಂವಿದಾನದ ಈ ದಿನದ ಮಹತ್ವ, ನಮ್ಮ ಭಾರತದ ಸಂವಿಧಾನದ ಮುಲಭೂತ ಹಕ್ಕು ಮತ್ತು ಕರ್ತವ್ಯಗಳು ಹಾಗೂ ಸಂವಿಧಾನದ ಮಹತ್ವ ತಿಳಿಸಿದರು.ಈ ವೇಳೆಯಲ್ಲಿ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯೆ ಡಾ. ಆರ್.ಎಮ್.ಮಿರ್ಧೆ, ಐಕ್ಯೂಎಸಿ ಸಂಯೋಜಕ ಡಾ. ಪಿ.ಎಸ್. ಪಾಟೀಲ ಸೇರಿದಂತೆ ಇನ್ನಿತರ ಮಹಾವಿದ್ಯಾಲಯದ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿಜಯಪುರದಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬೆಳೆ ಖರೀದಿ ಕೇಂದ್ರ ಆರಂಭಿಸಬೇಕಾದ ರಾಜ್ಯ ಕಾಂಗ್ರೆಸ್ ಸರ್ಕಾರ ಶಾಸಕರಿಗಾಗಿ ಖರೀದಿ ಕೇಂದ್ರ ಆರಂಭಿಸಿದೆ, ಡಿ.ಕೆ. ಶಿವಕುಮಾರ ಪರ ಬರುವ ಶಾಸಕರ ಖರೀದಿ ಕೇಂದ್ರ, ಸಿದ್ಧರಾಮಯ್ಯ ಅವರ ಪರವಾಗಿ ಬರುವ ಶಾಸಕರ ಖರೀದಿ ಕೇಂದ್ರ ಆರಂಭಿಸಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅಕ್ರೋಶ ವ್ಯಕ್ತಪಡಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂರು ವರ್ಷಗಳಲ್ಲಿ ೨,೪೧೬ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಈ ವಿಷಯವನ್ನು ಗಂಭೀರವಾಗಿ ಸರ್ಕಾರ ಪರಿಗಣಿಸಿಲ್ಲ, ಹೆಸರು, ಉದ್ದು, ಸೋಯಾಬೀನ್ ಮೊದಲಾದವುಗಳ ಖರೀದಿಗೆ ಖರೀದಿ ಕೇಂದ್ರ ಸಹ ಆರಂಭಿಸದಷ್ಟು ರಾಜ್ಯ ಸರ್ಕಾರ ಬೇಜವಾಬ್ದಾರಿಯಲ್ಲಿ ತೊಡಗಿದೆ, ರೈತರು ಬೀದಿಗಿಳಿದು ಖರೀದಿ ಕೇಂದ್ರ ಆರಂಭಿಸುವ ಕೆಲಸ ಮಾಡಿಲ್ಲ, ಆದರೆ ಶಾಸಕರ ಖರೀದಿ ಕೇಂದ್ರವನ್ನು ಈ ಕಾಂಗ್ರೆಸ್ ಪಕ್ಷ ಮಾಡಿದೆ ಎಂದರು.ದಲಿತ ಸಮುದಾಯದ ಶ್ರೇಯೋಭಿವೃದ್ಧಿಗಾಗಿ ಅನುದಾನ ದುರ್ಬಳಕೆಯನ್ನು ಕಾಂಗ್ರೆಸ್ ಸರ್ಕಾರ ಮಾಡಿದೆ, ಈ ಬಗ್ಗೆ ಧ್ವನಿ ಎತ್ತಬೇಕಾದ ದಲಿತ ಶಾಸಕರು…
ವಿಜಯಪುರದಲ್ಲಿ ಕರ್ನಾಟಕ ದ್ರಾಕ್ಷಿ ಬೆಳೆಗಾರರ ಸಂಘದ ಅಧ್ಯಕ್ಷ ಡಾ.ಕೆ.ಎಚ್. ಮುಂಬಾರೆಡ್ಡಿ ಎಚ್ಚರಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದ್ರಾಕ್ಷಿ ಬೆಳೆಗಾರರು ಮೊದಲೇ ಸಾಕಷ್ಟು ತೊಂದರೆಗಳಲ್ಲಿ ಜೀವನ ಸಾಗಿಸುತ್ತಿದ್ದಾರೆ, ತಮಗೆ ಕಷ್ಟಕಾಲಕ್ಕೆ ಅನುಕೂಲವಾಗುವ ವಿಮಾ ಹಣ ಸಹ ಅವರಿಗೆ ಪಾವತಿಯಾಗುತ್ತಿಲ್ಲ, ನಕಲಿ ಕ್ಷೇತ್ರ ನೆಪವೊಡ್ಡಿ ಇನ್ಸೂರೆನ್ಸ್ ಹಣ ನೀಡದೇ ಸತಾಯಿಸುತ್ತಿವೆ, ಕೂಡಲೇ ಈ ಸಮಸ್ಯೆಯನ್ನು ಪರಿಹರಿಸಿ, ಇಲ್ಲವಾದರೆ ಬೃಹತ್ ಹೋರಾಟ ಅನಿವಾರ್ಯ ಎಂದು ಕರ್ನಾಟಕ ದ್ರಾಕ್ಷಿ ಬೆಳೆಗಾರರ ಸಂಘದ ಅಧ್ಯಕ್ಷ ಡಾ.ಕೆ.ಎಚ್. ಮುಂಬಾರೆಡ್ಡಿ ಒತ್ತಾಯಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅತಿವೃಷ್ಟಿ, ಅನಾವೃಷ್ಟಿ, ರೋಗಬಾಧೆ ಹೀಗೆ ಅನೇಕ ಸಮಸ್ಯೆಗಳು ದ್ರಾಕ್ಷಿ ಬೆಳೆಗಾರರನ್ನು ಕಾಡುತ್ತಲೇ ಇವೆ, ಈಗ ಇನ್ಯೂರೆನ್ಸ್ ಕಂಪನಿಗಳು ಸಹ ರೈತರನ್ನು ಕಾಡುವಂತಾಗಿದೆ, ವಿನಾಕಾರಣ ನಕಲಿ ಕ್ಷೇತ್ರ ಎನ್ನುವ ಹೆಸರಿನಲ್ಲಿ ವಿಮಾ ಹಣ ಪಾವತಿಗೆ ಕಂಪನಿಗಳು ಹಿಂದೇಟು ಹಾಕುತ್ತಿವೆ, ಈ ರೀತಿಯ ಸಮಸ್ಯೆ ಹೇಳಿಕೊಂಡು ಕಾಲಹರಣ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.ವಿಜಯಪುರ ಜಿಲ್ಲೆಗೆ ಸಂಬಂಧಿಸಿದಂತೆ ಎಐಸಿ (ಅಗ್ರಿಕಲ್ಚರ್ ಇನ್ಶೂರೆನ್ಸ್ ಕಂಪನಿ) ರೈತರಿಗೆ ವಿಮಾ ಹಣ ಒದಗಿಸಬೇಕಿದೆ,…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕಾನೂನು ಶಾಲೆಯಲ್ಲಿ ಸಂವಿಧಾನ ದಿನ ಮತ್ತು ರಾಷ್ಟ್ರೀಯ ಕಾನೂನು ಸೇವಾ ದಿನವನ್ನು ಆಚರಿಸಲಾಯಿತು.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಹಾಗರಗಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.ಸಂವಿಧಾನದ ರಚನೆ, ಇತಿಹಾಸ ಮತ್ತು ಸಂವಿಧಾನದ ರಚನಾ ಸಭೆಯ ಕುರಿತು ಅವರು ಮಾತನಾಡಿದರು.ಸುಜ್ಲಾನ್ ರಿನಿವೆಬಲ್ ಎನರ್ಜಿ ಡೆವಲಪ್ಮೆಂಟ್ ಲಿಮಿಟೆಡ್ ನ ಸೀನಿಯರ್ ಜನರಲ್ ಮ್ಯಾನೇಜರ್ ಸಚಿನ ಪಾಟೀಲ ಮಾತನಾಡಿ, ಸಂವಿಧಾನ ರಚನಾ ಸಭೆ ಬೆಳೆದು ಬಂದ ದಾರಿ ಹಾಗೂ ಭಾರತದ ಸಂವಿಧಾನದ ರಚನೆಯ ಪೂರ್ವದಲ್ಲಿ ಅಳವಡಿಸಿಕೊಂಡಿರುವ ಕಾಯಿದೆಗಳ ಕುರಿತು ವಿವರಿಸಿದರು.ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯ ಡಾ. ರಘುವೀರ ಜಿ. ಕುಲಕರ್ಣಿ, ಸಹಾಯಕ ಪ್ರಾಧ್ಯಾಪಕಿ ಡಾ. ಜೈ ಸಂತೋಷಿಮಾ, ಬೋಧಕ ಮತ್ತು ಬೋಧಕರ ಹೊರತಾದ ಸಿಬ್ಬಂದಿ, ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಉಪಸ್ಥಿತರಿದ್ದರು.ಶಿವಾನಂದ ಬಸರಗಿ ಸ್ವಾಗತಿಸಿದರು. ಎಲ್.ಎಲ್.ಬಿ ದ್ವಿತೀಯ ವರ್ವದ ವಿದ್ಯಾರ್ಥಿ ಗುರುರಾಜ ಇಟಗಿ ನಿರೂಪಿಸಿದರು. ದಾನಮ್ಮ ತೇಲಿ…
ವಿಶಿಷ್ಟವಾಗಿ ಕಬ್ಬು ಬೆಳೆದ ಮಾದರಿ ರೈತನಿಗೆ ಸಚಿವರಿಂದ ಸನ್ಮಾನ | 120 ಟನ್ ಕಬ್ಬು ಬೆಳೆದ ರೈತನ ತಾಂತ್ರಿಕ ಅಧ್ಯಯನಕ್ಕೆ ಬಂದ ಕಬ್ಬು ಸಂಸ್ಥೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ತಮ್ಮ ಕ್ಷೇತ್ರದಲ್ಲಿ ಹನಿ ನೀರಾವರಿ ಪದ್ಧತಿಯಲ್ಲಿ ಸಂಶೋಧನಾ ಹಂತದಲ್ಲಿರುವ ಕಬ್ಬು ಬೆಳೆದು, ಅಧಿಕ ಇಳುವರಿಯ ಸಾಧನೆ ಮಾಡಿರುವ ಮಾಜಿ ಸೈನಿಕ-ರೈತನನ್ನು ಸ್ವಯಂ ಕಬ್ಬು ಅಭಿವೃದ್ಧಿ, ಸಕ್ಕರೆ ಸಚಿವರೇ ಸನ್ಮಾನಿಸಿ, ಗೌರವಿಸಿ, ಪ್ರೋತ್ಸಾಹ ನೀಡಿದ್ದಾರೆ.ಬಸವನಬಾಗೇವಾಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದಲ್ಲಿ ಮಾಜಿ ಸೈನಿಕ ನಾರಾಯಣ ಸಾಳುಂಕೆ ಎಂಬವರು ಕೇವಲ ಮೂರು ವರ್ಷದಲ್ಲಿ ಕಬ್ಬು ಬೆಳೆಯಲ್ಲಿ ಅನುಕರಣೀಯ ಸಾಧನೆ ಮಾಡಿದ್ದಾರೆ. ಇದನ್ನರಿತ ಕ್ಷೇತ್ರದ ಶಾಸಕರೂ ಆಗಿರುವ ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಅವರು ಸಾಧನ ರೈತನನ್ನು ಸನ್ಮಾನಿಸುವ ಮೂಲಕ ರೈತಸೇನಾನಿಯ ಸಾಧನೆಗೆ ಬೆನ್ನು ತಟ್ಟಿ ಪ್ರೋತ್ಸಾಹಿಸಿದ್ದಾರೆ.ತಮ್ಮದೇ ಕ್ಷೇತ್ರ ವ್ಯಾಪ್ತಿಯ ಮಾಜಿ ಸೈನಿಕ ನಾರಾಯಣ ಸಾಳುಂಕೆ ಅವರು ಸಾಮಾನ್ಯ ಕಬ್ಬು ಬೆಳೆಗಾರರಿಗಿಂತ ಕಡಿಮೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನೂತನವಾಗಿ ನೋಂದಣಿಯಾಗಿರುವ ವಿಜಯಪುರ ಸೌಹಾರ್ದ ಸಹಕಾರಿಗಳ ಒಕ್ಕೂಟದ (ಯುನಿಯನ್) ಕಚೇರಿ ನಗರದ ಸೋಲಾಪುರ ರಸ್ತೆ ಚಾಲುಕ್ಯ ನಗರದಲ್ಲಿ ಮಹಾಲಕ್ಷ್ಮಿ ಪೂಜೆಯನ್ನು ನೆರವೇರಿಸಿ ಪ್ರಾರಂಭ ಮಾಡಲಾಯಿತು.ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ ಸಂಜಯ ಪಾಟೀಲ ಕನಮಡಿ , ಉಪಾಧ್ಯಕ್ಷರಾದ ಚಂದ್ರಶೇಖರ ಕವಟಗಿ, ನೂತನ ಆಡಳಿತ ಮಂಡಳಿ ಸದಸ್ಯರಾದ ಅರುಣ ವಾರದ , ಸುರೇಶ ಬಿರಾದಾರ್, ಸಿದ್ದು ಮಲ್ಲಿಕಾರ್ಜುನ ಮಠ, ಅರುಣ ಮಠ, ಮೌನೇಶ ಪತ್ತಾರ, ಸತೀಶ ಶಿಂತ್ರೆ , ವಿವೇಕಾನಂದ ಶಿರೋಳ್ಕರ್ , ಯಮನಪ್ಪ ಸಾತಿಹಾಳ (ವಿಜಯಪುರ ಗ್ರಾಮಾಂತರ) ಭಾಲಚಂದ್ರ ಮುಂಜಾನೆ (ಬಸವನಬಾಗೇವಾಡಿ), ರಾಜು ಹಂಚಾಟೆ (ತಾಳಿಕೋಟ್ / ಮುದ್ದೇಬಿಹಾಳ), ಚಂದ್ರಶೇಖರ ಪಾಟೀಲ ( ಚಡಚಣ ತಾ. ಇಂಡಿ ) ಮಲಕಪ್ಪ ರೊಟ್ಟಿ (ತಾಂಬಾ, ತಾ ಇಂಡಿ), ಹಾಗೂ ಸಹಕಾರ ಭಾರತಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ದೀಪಕ ಶಿಂತ್ರೆ , ಪ್ರಧಾನ ಕಾರ್ಯದರ್ಶಿ ಪರಶ್ರಾಮ ಚಿಂಚಲಿ ಮತ್ತಿತರರು ಉಪಸ್ಥಿತರಿದ್ದರು.
ಸಂವಿಧಾನ ದಿನಾಚರಣೆ | ಸಂವಿಧಾನ ಜಾಗೃತಿ ಜಾಥಾಕ್ಕೆ ಚಾಲನೆ | ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ್ವರ ಬಬಲೇಶ್ಚರ ಕರೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಮಾಜದಲ್ಲಿ ನಾವೆಲ್ಲರೂ ಸಮಾನರು, ತಾರತಮ್ಯ ಬೇಧ-ಭಾವ ತೊರೆದು ಎಲ್ಲರೂ ಸಮಾನರೆಂಬುದು ಸಂವಿಧಾನ ತಿಳಿಸುತ್ತದೆ. ನಮ್ಮ ಸಂವಿಧಾನದ ಆಶಯಗಳಿಗನುಗುಣವಾಗಿ ನಡೆಯೋಣ ಎಂದು ಧಾರವಾಡದ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ್ವರ ಬಬಲೇಶ್ಚರ ಅವರು ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಮಂಗಳವಾರ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಹಾಗೂ ಭಾರತದ ಸಂವಿಧಾನ ಪ್ರಸ್ತಾವನೆಗೆ ಪುಷ್ಪಾರ್ಚನೆ ಮಾಡಿ, ಅವರು ಮಾತನಾಡಿದರು.ನಮ್ಮ ಸಂವಿಧಾನದ ಆಶಯಗಳ ಕುರಿತು ಶಾಲಾ ಹಂತದಲ್ಲಿಯೇ ವಿದ್ಯಾರ್ಥಿಗಳಿಗೆ ತಿಳಿಸಿಕೊಡಬೇಕು ಎಂದು ಸಂಗಮೇಶ ಬಬಲೇಶ್ವರ ಅವರು ಹೇಳಿದರು.ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಮಾತನಾಡಿ, ಸಂವಿಧಾನದ ಪ್ರಸ್ತಾವನೆಯಲ್ಲಿ ಪ್ರತಿಯೊಂದು ಅಂಶಗಳು ಒಳಗೊಂಡಿದ್ದು, ಅನೇಕ ಸಮಸ್ಯೆಗಳಿಗೆ ಪರಿಹಾರಾತ್ಮಕವಾಗಿ ಸಲಹೆಗಳನ್ನು ಸಂವಿಧಾನ ನೀಡುತ್ತದೆ ಮೂಲಭೂತ ಹಕ್ಕುಗಳನ್ನು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಮೂಲಕ ಪ್ರಯಾಣಿಕರ ಅನುಕೂಲಕ್ಕಾಗಿ ಅಹವಾಲು ಮತ್ತು ಕುಂದು-ಕೊರತೆಗಳನ್ನು ಆಲಿಸಲು ದಿನಾಂಕ:೦೧-೧೨-೨೦೨೫ರ ಸೋಮವಾರ ಮಧ್ಯಾಹ್ನ ೩.೩೦ ರಿಂದ ೪.೩೦ರವರೆಗೆ ಫೋನ್-ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ದೂರವಾಣಿ ೬೩೬೬೪೨೩೮೮೭ ಸಂಖ್ಯೆಗೆ ಸಾರ್ವಜನಿಕರು ಕರೆ ಮಾಡಿ, ತಮ್ಮ ಕುಂದು-ಕೊರತೆಗಳನ್ನು ಪರಿಹರಿಸಿಕೊಳ್ಳಬಹುದಾಗಿದ್ದು, ಸಾರ್ವಜನಿಕರು ಫೋನ್-ಇನ್ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸದುಪಯೋಗ ಪಡೆದುಕೊಳ್ಳಬೇಕೆಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
