Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಶರಣರ, ದಾರ್ಶನಿಕರ, ಚಿಂತಕರ ಜೀವನ ಚರಿತ್ರೆಗಳನ್ನು ಅರಿತುಕೊಂಡು ಅವರ ತತ್ವಾದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಗ್ರಾಮೀಣ ಪ್ರದೇಶಗಳನ್ನು ಇಂತಹ ಆದ್ಯಾತ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮುಖೇನ ಇಂದಿನ ಯುವ ಪೀಳಿಗೆಯಲ್ಲಿ ಧಾರ್ಮಿಕ ಚಿಂತನೆಯ ಮನೋಭಾವ ಬೆಳೆಸುವಲ್ಲಿ ಸಹಕಾರಿಯಾಗಿದೆ ಎಂದು ಜೇರಟಗಿ ವಿರಕ್ತಮಠದ ಖ್ಯಾತ ಪ್ರವಚನಕಾರ ಮಹಾಂತ ಮಹಾಸ್ವಾಮಿಗಳು ಹೇಳಿದರು.ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಮಹಾಶಿವಯೋಗಿಗಳ ೮೫ನೇ ಪುಣ್ಯ ಸ್ಮರಣೋತ್ಸವ ಹಾಗೂ ಜಾತ್ರಾ ಮಹೋತ್ಸವ ನಿಮಿತ್ಯವಾಗಿ ಹಮ್ಮಿಕೊಂಡ ಮಹಾಶಿವಯೋಗಿಗಳ ಪುರಾಣ-ಪ್ರವಚನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿವಶಕ್ತಿ ಸಂಗಮ ಸದ್ಗುರು ವೀರೇಶ್ವರ ಮಠವಾಗಿದೆ. ಆದ್ದರಿಂದ ಭಕ್ತರು ಶ್ರೀಮಠದ ಮೇಲೆ ಶ್ರದ್ಧೆ ಭಕ್ತಿಯಿಡುವ ಮೂಲಕ ಸತ್ಯದ ನೆಲಘಟ್ಟದ ಮೇಲೆ ಸುಂದರ ಬದುಕು ಕಟ್ಟಿಕೊಳ್ಳಬೇಕು ಎಂದರು.ವೇದಿಕೆಯ ಮೇಲೆ ಹಿರೇಮಠದ ಶಂಕ್ರಯ್ಯ ಹಿರೇಮಠ, ಶ್ರೀಮಠದ ಅರ್ಚಕ ಬಸಯ್ಯ ಮಠಪತಿ ಇದ್ದರು.ಗುರುನಾಥ ಮೈಂದರಗಿ ಬಸವಣ್ಣನಾಗಿದ್ದರು. ಅರ್ಚಕ ಶಾಂತಯ್ಯ ಮಠಪತಿ ಪುರಾಣ ಗ್ರಂಥಕ್ಕೆ ಪೂಜಾ ನೆರವೇರಿಸಿದರು. ಸಂಗೀತ ಸೇವೆಯನ್ನು ಕೆರುಟಗಿ ಹಿರೇಮಠದ ಗವಾಯಿ ರೇಣುಕಾಚಾರ್ಯ ಹಿರೇಮಠ,…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ತಾಲೂಕಿನ ಗುತ್ತರಗಿ ಗ್ರಾಮದ ನಿವಾಸಿ ನಿಂಗಯ್ಯ ಗುರುಪಾದಯ್ಯ ಮಠ ಅವರು ಮಂಡಿಸಿದ “ಸ್ಪೇಷಲ್ ಪ್ಯಾಟರ್ನ್ ಆಂಡ್ ಹ್ಯಾರ‍್ಕಿ ರೂರಲ್ ಸೆಟ್ಲಮೆಂಟ್ಸ್ ಇನ್ ವಿಜಯಪುರ ಡಿಸ್ಟ್ರಿಕ್ಟ್ ಎ ಸ್ಟ್ರ್ಯಾಟರ್ಜಿ ಫಾರ್ ಬ್ಯಾಲೆನ್ಸ್ಡ್ ಡೆವಲಪ್‌ಮೆಂಟ್” ಎಂಬ ಮಹಾಪ್ರಬಂಧಕ್ಕೆ ಭೂಗೋಳಶಾಸ್ತ್ರ ವಿಭಾಗ, ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ, ಇವರಿಗೆ ಪಿ.ಎಚ್‌ಡಿ ಪದವಿಯನ್ನು ಘೋಷಿಸಿದೆ. ಇವರಿಗೆ ಭೋಗೋಳಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ಎಲ್.ಟಿ.ನಾಯಕ ಅವರು ಮಾರ್ಗದರ್ಶನ ಮಾಡಿದ್ದಾರೆ.ಕರ್ನಾಟಕ ವಿಶ್ವವಿದ್ಯಾಲಯವು ಪಿ.ಎಚ್‌ಡಿ ಪದವಿ ಪ್ರಧಾನ ಮಾಡಿದಕ್ಕೆ ವಿಭಾಗದ ಮುಖ್ಯಸ್ಥರು, ಪ್ರಾಧ್ಯಾಪಕರು, ಸ್ನೇಹಿತರು, ಹಕ್ಕಿಗೂಡು ಬಳಗ, ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.
ಪ್ರವಾಹ ಪೀಡಿತ ಪ್ರದೇಶಗಳಿಗೆ ತುರ್ತು ಪರಿಹಾರ ಘೋಷಣೆಗೆ ಆಗ್ರಹ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳಿಗೆ ತುರ್ತು ಪರಿಹಾರಕ್ಕಾಗಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಬುಧವಾರ ಪತ್ರ ಬರೆದು ಮನವಿ ಮಾಡಿದ್ದಾರೆ.ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಉಂಟಾಗಿರುವ ಪ್ರವಾಹದಿಂದ ದೊಡ್ಡ ಪ್ರಮಾಣದಲ್ಲಿ ಹಾನಿ ಮತ್ತು ಸ್ಥಳಾಂತರಕ್ಕೆ ಕಾರಣವಾಗಿದೆ. ಭೀಮಾ ನದಿಯ ದಡದಲ್ಲಿ ಉಂಟಾದ ಭಾರಿ ಪ್ರವಾಹವು 10 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಬೆಳೆ ನಷ್ಟಕ್ಕೆ ಕಾರಣವಾಗಿದ್ದು, ರೈತರು ತಾವು ಬೆಳೆದ ಬೆಳೆಗಳು ಮತ್ತು ಜೀವನೋಪಾಯವನ್ನು ಕಳೆದುಕೊಂಡಿದ್ದಾರೆ.ಮಹಾರಾಷ್ಟ್ರದ ಮೇಲ್ಭಾಗದ ಜಲಾಶಯಗಳು ಮತ್ತು ಬ್ಯಾರೇಜ್‌ಗಳಿಂದ ಹೆಚ್ಚಿನ ಪ್ರಮಾಣದ ನೀರನ್ನು ಬಿಡುಗಡೆ ಮಾಡಿದ್ದರಿಂದ ಕಲಬುರಗಿ, ಯಾದಗಿರಿ, ವಿಜಯಪುರ ಮತ್ತು ಬೀದರ್ ಜಿಲ್ಲೆಗಳಲ್ಲಿ ಅಪಾರ ಪ್ರಮಾಣದ ಭೂಮಿ ಮುಳುಗಿದೆ. ಭೀಮಾ ಮತ್ತು ಮಂಜ್ರಾ ನದಿಗಳ ಉಬ್ಬರವು ಪರಿಸ್ಥಿತಿಯನ್ನು ಮತ್ತಷ್ಟು ಹದಗೆಡಿಸಿದೆ.ಪ್ರಾಥಮಿಕ ವರದಿಗಳ ಪ್ರಕಾರ 117 ಗ್ರಾಮಗಳ 10,576 ಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡು, ವಿವಿಧ ಪರಿಹಾರ ಶಿಬಿರಗಳಲ್ಲಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ವಿಜಯಪುರ ವಿಭಾಗ ಜಿಲ್ಲಾಡಳಿತ ಹಾಗೂ ವಿಜಯಪುರ ರೋಟರಿ ಕ್ಲಬ್‌ನ ಇವರ ಸಹಯೋಗದಲ್ಲಿ ಪ್ರಯಾಣಿಕರಲ್ಲಿ ಸ್ವಚ್ಛತೆಯ ಅರಿವು ಮೂಡಿಸುವ ಉದ್ದೇಶದಿಂದ ಇತ್ತೀಚೆಗೆ ಒಂದು ದಿನದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮದಲ್ಲಿ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರಬರ ಅವರು ಮಾತನಾಡಿ, ವಿಭಾಗದ ಬಸ್ ನಿಲ್ದಾಣಗಳ ಸ್ವಚ್ಛತೆ ಹಾಗೂ ನಿಲ್ದಾಣದಲ್ಲಿ ಕುಡಿಯುವ ನೀರು, ಶೌಚಾಲಯಗಳ ಸಮರ್ಪಕ ನಿರ್ವಹಣೆಗೆ ಕ್ರಮ ತೆಗೆದುಕೊಳ್ಳಲಾಗಿದೆ. ಜಿಲ್ಲೆಯ ಎಲ್ಲ ಬಸ್‌ನಿಲ್ದಾಣಗಳ ಸ್ವಚ್ಛತೆ ಹಾಗೂ ಪ್ರಯಾಣಿಕ ಸ್ನೇಹಿ ಶೌಚಾಲಯ ನಿರ್ವಹಣೆಗಾಗಿ ಕಾರ್ಮಿಕ ಇಲಾಖೆಯಡಿ ನೋಂದಾಯಿತ ಗುತ್ತಿಗೆದಾರರಿಗೆ ಇ-ಟೆಂಡರ್ ಮೂಲಕ ಆಯ್ಕೆ ಮಾಡಿ ಪರವಾನಗಿ ನೀಡಲಾಗಿದೆ. ಪರವಾನಿಗೆದಾರರು ಪ್ರತಿನಿತ್ಯ ಬಸ್ ನಿಲ್ದಾಣ ಸ್ವಚ್ಛಗೊಳಿಸಿರುವುದನ್ನು ಪರಿಶೀಲಿಸಲು ಬಸ್ ನಿಲ್ದಾಣಗಳ ಸ್ವಚ್ಛತೆ ವಿಜಯಪುರ ವಿಭಾಗ ಎಂಬ ವಾಟ್ಸ್-ಅಪ್ ಗ್ರೂಪ್ ರಚಿಸಿಕೊಂಡು ಅಲ್ಲಿ ಪ್ರತಿ ದಿನ ಮೂರು ಬಾರಿ ಬಸ್ ನಿಲ್ದಾಣ ಸ್ವಚ್ಛಗೊಳಿಸಿರುವ ಕುರಿತಾಗಿ ಜಿಪಿಎಸ್ ಫೋಟೊ ಅಪ್‌ಲೋಡ್ ಮಾಡಲು ಸಿಬ್ಬಂದಿಗೆ ಸೂಚಿಸಲಾಗಿದೆ. ಸಂಸ್ಥೆಯ ಸಿಬ್ಬಂದಿಗಳು ಹಾಗೂ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ೨೦೨೫-೨೬ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರವರ್ಗ-೧, ೨ಎ, ೨ಬಿ, ೩ಎ, ೩ಬಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಅಕ್ಟೋಬರ್ ೧೪ರವರೆಗೆ ಇಲಾಖೆ ವೆಬ್‌ಸೈಟ್ https://bcwd.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: ೮೦೫೦೭೭೦೦೦೪ ಹಾಗೂ ೮೦೫೦೭೭೦೦೦೫ ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ವಿಜಯಪುರ ತಾಲೂಕಿನ ಹಡಗಲಿ ಗ್ರಾಮದಲ್ಲಿ ಪ್ರಸ್ತಾವಿತ ೧*೧೦ ಎಂವ್ಹಿಎ, ೧೧೦/೧೧ಕೆವ್ಹಿ ವಿದ್ಯುತ್ ಉಪ ಕೇಂದ್ರ ಮತ್ತು ೧೧೦ ಕೆವಿ ದ್ವಿ-ಮಾರ್ಗ ಗೋಪುರದ ಮೇಲೆ ಒಂಟಿ ವಿದ್ಯುತ್ ಮಾರ್ಗವನ್ನು ಹಾಲಿ ಇರುವ ೧೧೦ ಕೆವ್ಹಿ ಉಕ್ಕಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಒಂದು ಟರ್ಮಿನಲ್ ಬೇ ನಿರ್ಮಿಸುವ ಮೂಲಕ ೧೫.೫೮೯ ಕಿ.ಮೀ. ವಿದ್ಯುತ್ ಮಾರ್ಗವನ್ನು ನಿರ್ಮಿಸುವ ಕಾಮಗಾರಿ ಕೈಗೆತ್ತಿಕೊಳ್ಳುವುದರಿಂದ ಅ.೯ರಂದು ಮಧ್ಯಾಹ್ನ ೧೨ ರಿಂದ ೩ ಗಂಟೆಯವರೆಗೆ ಶಿವಣಗಿ ಐಪಿ, ಬಹು ಗ್ರಾಮ ನೀರು ಸರಬರಾಜು, ಯಂಭತ್ನಾಳ ಐಪಿ, ಹಡಗಲಿ ಐಪಿ, ರಾಮತೀರ್ಥ ಐಪಿ ಹಾಗೂ ಶಿವಣಗಿ ಎನ್.ಜೆ.ವಾಯ್. ಫೀಡರ್‌ಗಳಿಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ವಿಜಯಪುರ ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಸೈನಿಕ ವಿಶ್ರಾಂತಿ ಗೃಹದಲ್ಲಿ ಮಾಜಿ ಸೈನಿಕರು ಹಾಗೂ ಅವರ ಅವಲಂಬಿತರಿಗೆ ತಂಗಲು ಕೊಠಡಿಗಳು ಲಭ್ಯವಿದ್ದು, ಕೊಠಡಿಗಳನ್ನು ಮುಂಗಡವಾಗಿ ಕಾಯ್ದಿರಿಸಲು ಹಾಗೂ ಮುಂಗಡ ಪಾವತಿಗಾಗಿ ಇಲಾಖೆಯ ಸಿಬ್ಬಂದಿ ರಾವಸಾಹೇಬ ಮೇಣಸಂಗಿ ಅವರ ಮೊಬೈಲ್ ಸಂಖ್ಯೆ: ೯೫೯೧೬೭೫೬೨೩ ಸಂಪರ್ಕಿಸಬಹುದಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರ ಕಚೇರಿ ಅಥವಾ ದೂರವಾಣಿ ಸಂಖ್ಯೆ: ೦೮೩೫೨- ೨೫೦೯೧೩ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮುದ್ದೇಬಿಹಾಳ ತಾಲೂಕಿನ ನಾಗಬೇನಾಳ ಗ್ರಾಮದ ರಿ.ಸನಂ: ೮೪ರ ಜಮೀನನ್ನು ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತದಿಂದ ಬೂದಿಹಾಳ ಪೀರಾಪೂರ ಏತ ನೀರಾವರಿ ಯೋಜನೆಯ ವಿದ್ಯುತ್ ಪ್ರಸರಣ ಸ್ವಿಟ್ಚಿಂಗ್ ಸ್ಟೇಷನ್‌ಗಾಗಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತಕ್ಕೆ ಮಂಜೂರಾದ ಜಮೀನನ್ನು ಕಾಲುದಾರಿಯ ಮಾರ್ಗ ಬದಲಾವಣೆ ಮಾಡಲು ಉದ್ದೇಶಿಸಲಾಗಿದ್ದು, ಈ ಕುರಿತಾದ ಆಕ್ಷೇಪಣೆಗಳಿದ್ದಲ್ಲಿ ಈ ಅಧಿಸೂಚನೆಯ ೩೦ ದಿನಗಳೊಳಗಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಆಕ್ಷೇಪಣೆ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಹೊರ್ತಿ ಕೆರೆ ಹಾಗೂ ತಡವಲಗಾ ಕ್ಯಾನಲ್‌ಗೆ ಬುಧವಾರ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.ಹೊರ್ತಿ ಕೆರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಕೆರೆ ಭರ್ತಿಯಾಗಿ ಏರಿ ಕುಸಿತ ಕಂಡ ಹಿನ್ನಲೆಯಲ್ಲಿ ರೈತರ ಹೊಲಗಳಿಗೆ ನೀರು ಹರಿದು ಬೆಳೆ ಹಾನಿ ಸೇರಿದಂತೆ ಹಾನಿಗೊಳಗಾದ ಪ್ರದೇಶವನ್ನು ಸಮೀಕ್ಷೆ ನಡೆಸಿ ವಿಪತ್ತು ಪರಿಹಾರ ನಿಧಿಯಡಿ ಪರಿಹಾರ ಒದಗಿಸಲು ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.ಅಕ್ಟೋಬರ ೨ ರಂದು ಹೆಚ್ಚಿನ ಪ್ರಮಾಣದ ಏರಿಯ ಕುಸಿತ ಕಂಡ ಕಾರಣ ಹೆಚ್ಚಿನ ಪ್ರಮಾಣದಲ್ಲಿ ಸಾರ್ವಜನಿಕ ಆಸ್ತಿ ಹಾನಿ ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮವಾಗಿ ಕೆರೆಯ ಕೋಡಿಯಿಂದ ಸುಮಾರು ೩೦ ಮೀಟರ ದೂರದಲ್ಲಿ ಹಾಗೂ ಕುಸಿತ ಕಂಡುಬಂದ ಸ್ಥಳದಿಂದ ೫೦ ಮೀಟರ ಅಂತರದಲ್ಲಿ ಕ್ರಮೇಣವಾಗಿ ನೀರನ್ನು ಹೊರಗೆ ಹಾಕಲು ಕೃತಕವಾಗಿ ಕೆರೆಯ ಏರಿಯಲ್ಲಿ ಚಾನಲ್ ನಿರ್ಮಾಣ ಮಾಡಿ ಈಗಾಗಲೇ ಹಂತ ಹಂತವಾಗಿ ನೀರನ್ನು ಹೊರಹಾಕಲಾಗಿದ್ದು, ಕುಸಿತ…
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಇಲ್ಲಿನ ದೇಸಾಯಿ ವೃತ್ತದಲ್ಲಿ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ. ಆರ್ ಗವಾಯಿ ಮೇಲೆ ಶೂ ಎಸೆದ ಕೃತ್ಯ ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಸಾಗರ ಬಣ) ನೇತೃತ್ವದಲ್ಲಿ ಬುಧವಾರ ಪ್ರತಿಭಟನೆ ಮೂಲಕ ರಸ್ತೆ ತಡೆ ಮಾಡಿ ತಹಶೀಲ್ದಾರ ಅನೀಲ ಬಡಿಗೇರಗೆ ಮನವಿ ಸಲ್ಲಿಸಿದರು.ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ. ಆರ್ ಗವಾಯಿ ಅವರ ಮೇಲೆ ಶೂ ಎಸೆದ ಕೃತ್ಯದ ಹಿಂದೆ ಯಾರು ಇದ್ದಾರೆ ಎಂಬುದನ್ನು ಗುರುತಿಸಿ ಅವರ ಮೇಲೆ ಕ್ರಮ ಕೈಗೊಳ್ಳಬೇಕು, ಪ್ರಧಾನಮಂತ್ರಿಗಳು ಘಟನೆಯನ್ನು ಖಂಡಿಸಿ ಬಿಟ್ಟರೆ ಸಾಲದು, ನಿಮ್ಮ ಮೇಲೆ ಜನರಿಗೆ ಸಂಶಯ ಮೂಡದಂತೆ ಸಂವಿಧಾನ ಬದ್ದವಾಗಿ ನಡೆದುಕೊಳ್ಳಬೇಕು ಈ ಹೇಯ ಕೃತ್ಯವನ್ನು ಖಂಡಿಸುತ್ತೆನೆ ಎಂದು ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು.ಇಲ್ಲಿನ ದೇಸಾಯಿ ವೃತ್ತದಲ್ಲಿ ಬುಧವಾರ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ. ಆರ್ ಗವಾಯಿ ಮೇಲೆ ಶೂ ಎಸೆದ ಕೃತ್ಯ ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಸಾಗರ ಬಣ) ನೇತೃತ್ವದಲ್ಲಿ ಪ್ರತಿಭಟನೆ ಮೂಲಕ ರಸ್ತೆ ತಡೆ ಮಾಡಿ…
